ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯತ್ನ ಮುಂದಿನ ಅವಧಿಗೆ ಉಪಾಧ್ಯಕ್ಷರ ಸ್ಥಾನವನ್ನು (ಮೀಸಲಾತಿ-ಸಾಮಾನ್ಯ ಮಹಿಳೆ) ಆಯ್ಕೆ ಮಾಡುವ ಸಲುವಾಗಿ ಕುಂದಾಪುರ ತಾಲೂಕು ಯುವಜನಾ ಸೇವಾ ಮತ್ತು ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ ಅವರನ್ನು ಗೊತ್ತುಪಡಿಸಿದ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಸದ್ರಿರವರು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 45 ಹಾಗೂ (ಗ್ರಾಮ ಪಂಚಾಯತ್ ಅಧ್ಯಕ್ಷ ಚುನಾವಣೆ) ನಿಯಮಗಳು 1995 ರ ನಿಯಮ 4 ರಿಂದ 11 ರವರೆಗಿನ ನಿಯಮದಂತೆ ಚುನಾವಣೆ ನಡೆಸಿ, ಉಪಾಧ್ಯಕ್ಷರನ್ನು ಆಯ್ಕೆ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬೈಕ್ ಡಿಕ್ಕಿ ಹೊಡೆದು ಪಾದಚಾರಿಯೋರ್ವ ಮೃತಪಟ್ಟ ಘಟನೆ ರಾ.ಹೆ 66ರ ಕೋಟ ಪೆಟ್ರೋಲ್ ಬಂಕ್ ಸಮೀಪದ ಬೊಬ್ಬರ್ಯ ಕಟ್ಟೆ ಬಳಿ ಗುರುವಾರ ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕೋಟ ಕಾರ್ತಟ್ಟು ಚಂದ್ರಶೇಖರ ಶೆಟ್ಟಿ (62) ಎಂದು ಗುರುತಿಸಲಾಗಿದೆ. ಸಾಲಿಗ್ರಾಮದಿಂದ ತೆಕ್ಕಟ್ಟೆ ಕಡೆಗೆ ಹೋಗುತ್ತಿದ್ದ ಬೈಕೊಂದು ಸವಾರ ನಿಯಂತ್ರಣ ತಪ್ಪಿ ಕೋಟ ಪೆಟ್ರೋಲ್ ಬಂಕ್ ಸಮೀಪ ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಚಂದ್ರಶೇಖರ್ ಶೆಟ್ಟಿಗೆ ನೇರ ಡಿಕ್ಕಿ ಹೊಡೆದಿದೆ. ಬೈಕ್ ಡಿಕ್ಕಿ ಹೊಡೆದ ಪರಿಣಾಮ ಚಂದ್ರಶೇಖರ ಶೆಟ್ಟಿ ಗಂಭೀರ ಗಾಯಗೊಂಡಿರುತ್ತಾರೆ. ಅಲ್ಲದೆ ಬೈಕ್ ಸವಾರರಾದ ಸಾಲಿಗ್ರಾಮದ ಪೃಥ್ವಿಶ್ ದೇವಾಡಿಗ, ಶಶಾಂಕ್ ದೇವಾಡಿಗ ಅವರು ಕೂಡ ಅಪಘಾತದಲ್ಲಿ ಗಾಯ ಗೊಂಡಿರುತ್ತಾರೆ. ಗಾಯಗೊಂಡವರನ್ನು ತಕ್ಷಣ ಜೀವನ್ ಮಿತ್ರ ನಾಗರಾಜ್ ಪುತ್ರನ್ ಹಾಗೂ ಆಂಬುಲೆನ್ಸ್ ಚಾಲಕ ಕಿಶೋರ್ ಶೆಟ್ಟಿ ಸೇರಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿರುತ್ತಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಸ್ಪಂದಿಸದೆ ಚಂದ್ರಶೇಖರ ಶೆಟ್ಟಿ ಮೃತಪಟ್ಟಿರುತ್ತಾರೆ. ಕೋಟ ಪೊಲೀಸರು ತಕ್ಷಣ ಸ್ಥಳಕ್ಕಾಗಮಿಸಿ ಪರಿಶೀಲಿಸಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 2025 ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯು ಏಪ್ರಿಲ್ 16 ಮತ್ತು 17 ರಂದು ಜಿಲ್ಲೆಯ ಒಟ್ಟು 23 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸದರಿ ಪರೀಕ್ಷೆಗಳು ಸುಸೂತ್ರವಾಗಿ ಮತ್ತು ಪರೀಕ್ಷೆ ಸಂದರ್ಭದಲ್ಲಿ ದೋಷರಹಿತವಾಗಿ ನಡೆಸಲು, ಪರೀಕ್ಷೆ ಸಂದರ್ಭದಲ್ಲಿ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ಮತ್ತು ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರ ಕಲಂ 163 ರನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ. ಈ ಸಂದರ್ಭದಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಹಾಗೂ ಅನಧೀಕೃತ ವ್ಯಕ್ತಿಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ-ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಘಟಕಗಳ ವಿವರ: ಪಚ್ಚಿಲೆ ಕೃಷಿ (ಮಸ್ಸೆಲ್ಸ್, ಕಲ್ಲ, ಕ್ಲಾಮ್ಸ್, ಮುತ್ತು ಇತ್ಯಾದಿ), ಸಾಂಪ್ರದಾಯಿಕ ಮೀನುಗಾರರಿಗೆ (ಬದಲಿ) ದೋಣಿ ಮತ್ತು ಬಲೆ ಒದಗಿಸುವುದು ಹಾಗೂ ಐಸ್ ಪ್ಲಾಂಯಂಟ್/ ಕೋಲ್ಡ್ ಸ್ಟೋರೇಜ್ ಆಧುನೀಕರಣಕ್ಕೆ ಸಹಾಯಧನ. ಆಸಕ್ತರು ಅರ್ಜಿ ಸಲ್ಲಿಸಲು ಏಪ್ರಿಲ್ 28 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಒಂದು ಕಡೆಯಲ್ಲಿ ಬೆಳೆದ ಕೃಷಿಗೆ ಬೆಲೆಯಿಲ್ಲಾ, ಸೂಕ್ತ ಮಾರುಕಟ್ಟೆಯಿಲ್ಲಾ, ಮಧ್ಯವರ್ತಿಗಳ ಹಾವಳಿ, ಕಾಡುಪ್ರಾಣಿಗಳ ಹಾವಳಿ, ಆಗಾಗ ಕೈಕೊಡುವ ಮಳೆಗಾಲ, ವಿಪರೀತ ಬೇಸಗೆ, ಕೃಷಿ ಕೂಲಿ ಕಾರ್ಮಿಕರ ಕೊರತೆ, ಕೃಷಿ ಯಂತ್ರೋಪಕರಣಗಳ ಗಗನಕ್ಕೆರಿದ ಬಾಡಿಗೆ ಇತ್ಯಾದಿಗಳಿಂದ ಕಂಗೆಟ್ಟು ಹೋಗಿರುವ ರೈತರಿಗೆ ಇದೆಲ್ಲವುದರ ಜೊತೆ ಅತೀವ ತೊಂದರೆ ಕೊಡುತ್ತಿರುವ ಇನ್ನೊಂದು ಅಂದರೆ ಮಂಗಗಳ ಹಾವಳಿ. ಇವತ್ತು ಮಂಗಗಳು ಕಾಡಿನಲ್ಲಿ ವಾಸಿಸುವುದನ್ನೇ ಮರೆತು ಮನುಷ್ಯನ ಜೊತೆ ಅವುಗಳ ಚೇಷ್ಟೆಯೊಂದಿಗೆ ವಾಸ ಮಾಡುತ್ತಿರುವುದು ರೈತರ ನಿದ್ದೆಯನ್ನು ಕೆಡಿಸಿಬಿಟ್ಟಿದೆ ಎಂದು ಕುಂದಾಪುರದ ರೈತ ಮುಖಂಡ ಕೆ. ವಿಕಾಸ್ ಹೆಗ್ಡೆ ಹೇಳಿದರು. ಆಳುವ ಸರ್ಕಾರಗಳು ಮಂಕಿ ಪಾರ್ಕ್ ಮಾಡುತ್ತೇವೆ, ಮಂಗಗಳ ತೊಂದರೆ ಹತೋಟಿಗೆ ತರಲು ಈಶಾನ್ಯ ರಾಜ್ಯಗಳ ಕೈಗೊಂಡಿರುವ ಕ್ರಮಕೈಗೊಳ್ಳುತ್ತೇವೆ ಅನ್ನುತ್ತಿವೆ ಬಿಟ್ಟರೆ ತೆಗೆದುಕೊಂಡ ಕ್ರಮಗಳು ಮಾತ್ರ ಶೂನ್ಯ. ಅದರ ಜೊತೆ ಮಾನವರು ತಮ್ಮ ಸ್ವಾರ್ಥಕ್ಕೆ ಕಾಡನ್ನು ನಾಶ ಮಾಡಿ ಕಾಡುಪ್ರಾಣಿಗಳ ಆಹಾರ ನೀಡುತ್ತಿದ್ದ ಮರಗಳನ್ನು ನಾಶ ಮಾಡಿರುವುದು ಈ ಸಮಸ್ಯೆಗಳಿಗೆ ದೊಡ್ಡ ಕಾರಣ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಲೈಟಿಂಗ್ ಕೆಲಸ ಮಾಡಿಕೊಂಡಿದ್ದ ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನ ನಿವಾಸಿ ಧನರಾಜ (20) ಎಂಬ ಯುವಕನು ಮಾರ್ಚ್ 27 ರಂದು ಮನೆಯಿಂದ ಕೆಲಸಕ್ಕೆಂದು ಹೋದವರು ಸಂಬಂಧಿಕರ ಮನೆಗೂ ಹೋಗದೇ ಈವರೆಗೂ ಮನೆಗೆ ಬಾರದೇ ನಾಪತ್ತೆಯಾಗಿರುತ್ತಾರೆ. 6 ಅಡಿ ಎತ್ತರ, ಸಾಧಾರಣ ಶರೀರ, ಎಣ್ಣೆಕಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕರು ಮೊ.ನಂ: 9480805468, ಕುಂದಾಪುರ ವೃತ್ತ ಪೊಲೀಸ್ ನಿರೀಕ್ಷಕರು ಮೊ.ನಂ: 9480805433 ಅಥವಾ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿಗೆ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರ ಸ್ಥಾಪನೆಗೆ ಅನುಮತಿ ದೊರೆತಿದೆ. ಇದು ಕರ್ನಾಟಕದ ಮೂರು ಪ್ರಮುಖ ಕಾಲೇಜುಗಳಲ್ಲಿ ಪ್ರಾರಂಭಗೊಂಡಿದೆ. ಭಂಡಾರಕಾರ್ಸ್ ಕಾಲೇಜು ಇದರಲ್ಲಿ ಒಂದಾಗಿದೆ. ಮಾನ್ಯತಾ ಪರೀಕ್ಷಕರಿಂದ 5ರಲ್ಲಿ 4.2 ಅಂಕಗಳೊಂದಿಗೆ ಮಾನ್ಯತೆಯನ್ನು ಪಡೆದಿರುತ್ತದೆ.. ಕಾಲೇಜಿನಲ್ಲಿ ಸ್ಥಾಪಿತವಾದ ಈ ಕೇಂದ್ರವು ಭಾರತ ಸರಕಾರದ “ಸ್ಕಿಲ್ ಇಂಡಿಯಾ” ಯೋಜನೆಯಡಿ, ದೇಶಾದ್ಯಾಂತ ಯುವ ಜನತೆಗಾಗಿ ಉಚಿತವಾಗಿ ಕೌಶಲ್ಯ ತರಬೇತಿಯನ್ನು ನೀಡಲಿದೆ. ಪ್ರಧಾನ ಮಂತ್ರಿ ಕೌಶಲ ವಿಕಾಸ್ ಯೋಜನೆ 3.0 ಅನುಷ್ಠಾನದಡಿ ಈ ಕೌಶಲ ಕೇಂದ್ರವು, ಭಾರತ ಸರ್ಕಾರದ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸಲಿದೆ. ಈ ಯೋಜನೆಯು ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಗಿದ್ದು 300 ಕ್ಕೂ ಹೆಚ್ಚು ಕೌಶಲ್ಯ ಕೋರ್ಸ್ ಗಳನ್ನು ಯುವಕರಿಗೆ ಲಭ್ಯವಾಗುವಂತೆ ಮಾಡುವ ಮೂಲಕ, ಅವರಿಗೆ ಉದ್ಯೋಗಕ್ಕೆ ಯೋಗ್ಯ ಕೌಶಲ್ಯಗಳನ್ನು ತರಬೇತುಗೊಳಿಸಲಿದೆ. ಕೌಶಲ್ಯ ಅಭಿವೃದ್ಧಿಗೆ ಪ್ರಮುಖ ಹೆಜ್ಜೆ:ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸ್ಥಾಪಿತವಾದ ಈ ಕೌಶಲ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪ್ರತಿಷ್ಟಿತ ಶಾಲೆ ಯೋಜನೆಯಡಿ ಜಿಲ್ಲಾ ವ್ಯಾಪ್ತಿಯಲ್ಲಿನ ಪ್ರತಿಷ್ಠಿತ ಶಾಲೆಗಳಿಗೆ ಅರ್ಹ ಪರೀಕ್ಷೆಯ ಮೂಲಕ ಪ್ರವೇಶಾವಕಾಶ ಕಲ್ಪಿಸಲು ಪ.ಜಾತಿಯ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್ಸೈಟ್ www.sw.kar.nic.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 3 ಕೊನೆಯ ದಿನ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಒಂದು ವಾರದೊಳಗೆ ಅರ್ಜಿಯನ್ನು ಹಾಗೂ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಉಪ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ. ರಜತಾದ್ರಿ, ಮಣಿಪಾಲ ಇಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿ ಹಾಗೂ ವಿವರಗಳಿಗಾಗಿ ದೂರವಾಣಿ ಸಂಖ್ಯೆ: 0820-2574892 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ತಂತ್ರಜ್ಞಾನಾಧಾರಿತ ಬೋಧನೆಯನ್ನು ಆರಂಭಿಸಿದ್ದು, ಲೀಡ್ ಸಂಸ್ಥೆಯಿಂದ ಓರಿಯೆಂಟೇಶನ್ ಕಾರ್ಯಕ್ರಮವನ್ನು ಇತ್ತೀಚಿಗೆ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ವಿಭಾಗದ ಪಾಲಕ-ಪೋಷಕರಿಗಾಗಿ ನಡೆಸಲಾಯಿತು. ಲೀಡ್ ಸಂಸ್ಥೆಯ ಶಾಲಾ ಸಲಹೆಗಾರರಾದ ಸತೀಶ್ ಅವರು ತಮ್ಮ ಮಾತುಗಳಲ್ಲಿ, ನಗರ ಪ್ರದೇಶಗಳಲ್ಲಿ ತಂತ್ರಜ್ಞಾನವನ್ನು ಈಗಾಗಲೇ ಶಿಕ್ಷಣದಲ್ಲಿ ಯಶಸ್ವಿಯಾಗಿ ಬಳಸಲಾಗುತ್ತಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇಂತಹ ಸೌಲಭ್ಯಗಳಿಂದ ವಂಚಿತರಾಗಬಾರದು ಎಂಬ ಸದುದ್ದೇಶದಿಂದ ಶಾಲೆಯು ಮುಂದಿನ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಮಾಡಿದ ನಿರ್ಧಾರ ಹಾಗೂ ಅದರಿಂದಾಗಿ ವಿದ್ಯಾರ್ಥಿಗಳಿಗೆ ಆಗುವ ಪ್ರಯೋಜನಗಳ ಮೇಲೆ ಬೆಳಕು ಚೆಲ್ಲಿದರು. ಲೀಡ್ ಸಂಸ್ಥೆಯ ದಕ್ಷಿಣ ವಲಯದ ಸಿಇಒಆಗಿರುವ ಶಶಿಕಾಂತ ಅವರು ಪೋಷಕರೊಡನೆ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಂವಹನ ಕೌಶಲ್ಯ ಎಷ್ಟು ಮುಖ್ಯವಾದದ್ದು ಹಾಗೂ ವಿದ್ಯಾರ್ಥಿಗಳು ಭವಿಷ್ಯದಲ್ಲಿ ವಿವಿಧ ಪರೀಕ್ಷೆಗಳನ್ನು ಬರೆಯಲು ಮತ್ತು ಸಂದರ್ಶನಗಳಲ್ಲಿ ಆತ್ಮವಿಶ್ವಾಸದಿಂದ ಉತ್ತರಿಸಲು ತಂತ್ರಜ್ಞಾನಾಧಾರಿತ ಶಿಕ್ಷಣವು ಎಷ್ಟು ಮಹತ್ವದ ಪಾತ್ರ ವಹಿಸುತ್ತದೆ ಎಂಬುದನ್ನು ಹೇಳಿದರು. ಈ ಸಂದರ್ಭ ಶಾಲೆಯ ಪ್ರಾಂಶುಪಾಲರಾದ ಶರಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದಿಂದ ಸಿಎ/ಸಿಎಸ್/ಸಿಎಮ್ಎ ವಿದ್ಯಾರ್ಥಿಗಳಿಗೆ ಪರೀಕ್ಷಾ ಒತ್ತಡ ನಿರ್ವಹಣೆ ಕುರಿತಾಗಿ ವಿಭಿನ್ನ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು. ಉಡುಪಿಯ ಆರ್ಟ್ ಆಫ್ ಲಿವಿಂಗ್ನ ಯೋಗ ಮತ್ತು ಪ್ರಾಣಾಯಾಮ ತರಬೇತುದಾರರಾದ ಶೈಲಜಾ ಕೃಷ್ಣಾನಂದ ಅವರು ಒತ್ತಡ ನಿರ್ವಹಣೆ ಹಾಗೂ ಏಕಾಗೃತೆಯ ಸಾಧನೆಯನ್ನು ಆಸನ ಹಾಗೂ ಪ್ರಾಣಾಯಾಮದ ಮೂಲಕ ಹೇಗೆ ಸಿದ್ಧಿಸಿಕೊಳ್ಳುವುದು ಎನ್ನುವುದರ ಕುರಿತು ಅರಿವು ಮೂಡಿಸಿದರು. ಇದೇ ಸಂದರ್ಭದಲ್ಲಿ ಪ್ರಾತ್ಯಕ್ಷಿಕೆ ಮೂಲಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ಕಾಲೇಜಿನ ಪ್ರಾಚಾರ್ಯರಾದ ಕೊತ್ತಾಡಿ ಉಮೇಶ್ ಶೆಟ್ಟಿ ಅವರು ಪ್ರೊಫೆಷನಲ್ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾದ ಜೀವನ ಪದ್ಧತಿ ಇರಬೇಕು ಅದರಲ್ಲಿ ಅಗ್ರಸ್ಥಾನದಲ್ಲಿ ಈ ಪ್ರಾಣಾಯಾಮ, ಆಸನ, ಮುದ್ರೆಗಳ ಬಳಕೆ ಬಹಳ ಪರಿಣಾಮಕಾರಿ ಎಂದು ಶುಭಾಶಂಸನೆ ಮಾತುಗಳನ್ನಾಡಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೀಣಾ ವಿ. ಭಟ್ ಹಾಗೂ ಕಾರ್ಯಕ್ರಮ ಸಂಯೋಜಕರಾದ ಸುಹಾಸ್ ಜಟ್ಟಿಮನೆ ಮತ್ತು ಶ್ವೇತ ಭಂಡಾರಿ ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು. ಕಾಲೇಜಿನ…
