Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ, ಬ್ರಹ್ಮಾವರ ಮತ್ತು ಕಾಪು ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ  ಹಾಗೂ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಸಂಬಂಧಪಟ್ಟ ಶಾಲಾ ಮುಖ್ಯೋಪಾಧ್ಯಾಯರುಗಳು ವಿದ್ಯಾರ್ಥಿಗಳ ದಾಖಲೆಗಳೊಂದಿಗೆ ನೇರವಾಗಿ ಇಲಾಖೆಯ ವೆಬ್‌ಸೈಟ್ http://ssp.postmatric.karnataka.gov.in ಅಥವಾ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ಪ್ರತಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ವಿದ್ಯಾರ್ಥಿಯ ಆಧಾರ್ ಸಂಖ್ಯೆ ಎನ್.ಪಿ.ಸಿ.ಐ ಸೀಡಿಂಗ್ ಮಾಡುವುದು ಕಡ್ಡಾಯವಾಗಿರುತ್ತದೆ. ಪರಿಶಿಷ್ಟ ಪಂಗಡದ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳು ಎನ್.ಎಸ್.ಪಿ ಓ.ಟಿ.ಆರ್ ರಿಜಿಸ್ಟ್ರೇಷನ್ ಮಾಡುವುದು ಕಡ್ಡಾಯವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2528884, ಮೊ.ನಂ: 9480843209 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಅತ್ಯುನ್ನತ ಸೌಕರ್ಯ ಒದಗಿಸಲಾಗುತ್ತಿದೆ ಹಾಗೂ ಉತ್ತಮ ಕಲಿಕಾ ವಾತಾವರಣ ನಿರ್ಮಿಸಲಾಗಿದೆ. ಇದರ ಹೊರತಾಗಿಯೂ ಕೆಲವು ವಿದ್ಯಾರ್ಥಿಗಳು ಅಶಿಸ್ತಿನಿಂದ ವರ್ತಿಸಿರುವ ಘಟನೆಗಳು ನಡೆದಿವೆ. ಇದರಿಂದ ಇತರ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಹಾಗೂ ಕಲಿಕಾ ವಾತಾವರಣದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ. ಹಾಗಾಗಿ ಇಂತಹ ಯಾವುದೇ ರೀತಿಯ ಅಶಿಸ್ತಿನ ನಡವಳಿಕೆಗೆ ವಾರ್ಡನ್ ಗಳು ಅವಕಾಶ ನೀಡಬಾರದು. ಅಶಿಸ್ತಿನ ವರ್ತನೆಯ ಘಟನೆಗಳು ಘಟಿಸಿದಾಗ ಅಥವಾ ಅಂತಹ ಸನ್ನಿವೇಶ ಘಟಿಸುವ ಸೂಚನೆ ಸಿಕ್ಕಿದ್ದಲ್ಲಿ ಕೂಡಲೇ ಸಮಿತಿಯ ಗಮನಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಶಾಸಕ ಗುರುರಾಜ್ ಗಂಟಿಹೊಳೆ ಸೂಚನೆ‌ ನೀಡಿದರು. ಅವರು ಬೈಂದೂರು ಹಾಗೂ ಕುಂದಾಪುರ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 2025-26 ನೇ ಸಾಲಿನಲ್ಲಿ ಹೊಸ ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಹಾಸ್ಟೆಲ್ ನಿರ್ವಹಣೆ ಮತ್ತು ಕುಂದು ಕೊರತೆಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದದರು. ಕಳೆದ ಎರಡು ವರ್ಷಗಳಿಂದ ಪೋಸ್ಟ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿಜಯ ಕರ್ನಾಟಕ ಚಿತ್ರಕಲಾ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಾರ್ಥನಾ ಜಿ. 10 A,  ಋತ್ವಿಕ್  ವಿ. ಪೂಜಾರಿ 10B ಹಾಗೂ ಶ್ರಾವಣಿ ಎಮ್. ನಾಯಕ್ (9A) ಜಿಲ್ಲಾ ಮಟ್ಟಕ್ಕೆ  ಆಯ್ಕೆಯಾಗಿದ್ದಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು 2025ರ ಮೇ ತಿಂಗಳಲ್ಲಿ ಏರ್ಪಡಿಸಿದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ, ಮಂಗಳೂರಿನ ’ಕಾಮತ್ ಎಂಡ್ ರಾವ್ ಚಾರ್ಟರ್ಡ್ ಅಕೌಂಟೆಂಟ್ಸ್’ ಸಂಸ್ಥೆಯಲ್ಲಿ ಆರ್ಟಿಕಲ್‌ಶಿಫ್ ನಡೆಸಿದ ಅರವಿಂದ ಶೆಣೈ ತೇರ್ಗಡೆ ಹೊಂದಿರುತ್ತಾರೆ. ಅವರು ಕೆನರಾ ಬ್ಯಾಂಕ್ ಉದ್ಯೋಗಿ ಅಶೋಕ ಶೆಣೈ ಮತ್ತು ದಿ| ಅನಿತಾ ಶೆಣೈ ದಂಪತಿಯ ಪುತ್ರರಾಗಿದ್ದು, ಈಗ ಮಂಗಳೂರಲ್ಲಿ ನೆಲೆಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಒಂದು ಅಂತಾರಾಷ್ಟ್ರೀಯ ಸೇವಾ ಸಂಸ್ಥೆಯಾಗಿದ್ದು, ವಿಶ್ವದಾದ್ಯಂತ ಸೇವೆ ಸಲ್ಲಿಸುತ್ತಿವೆ ಮತ್ತು ಸಮಾಜಕ್ಕೆ ಅಮೂಲ್ಯವಾದ ಕೊಡುಗೆಗಳನ್ನು ನೀಡುತ್ತಿವೆ. ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರುವುದು ಹಾಗೂ ಸ್ಥಳೀಯ ಅಗತ್ಯಗಳನ್ನು ಪೂರೈಸಲು ಸಹಾಯ ಮಾಡುವುದು ಮತ್ತು ಜೀವನವನ್ನು ಸುಧಾರಿಸುವುದು ರೋಟರಿ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದು ರೋಟರಿ ಜಿಲ್ಲೆ 3182 ವಲಯ-9ರ ಮಾಜಿ ಅಸಿಸ್ಟೆಂಟ್ ಗವರ್ನರ್ ನವೀನ್ ಅಮೀನ್ ಶಂಕರಪುರ ಹೇಳಿದರು. ಅವರು ಬಸ್ರೂರು ಆನಗಳ್ಳಿಯ ಆದಿತ್ಯ ಶೋರ್ ರೆಸಾರ್ಟ್‌ನಲ್ಲಿ ರೋಟರಿ ಕ್ಲಬ್ ಗಂಗೊಳ್ಳಿಯ 2025-26ನೇ ಸಾಲಿನ ಪದಾಧಿಕಾರಿಗಳ ಪದ ಪ್ರದಾನ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು. ರೋಟರಿ ಜಿಲ್ಲೆ 3182 ವಲಯ-1ರ ಅಸಿಸ್ಟೆಂಟ್ ಗವರ್ನರ್ ಐ. ನಾರಾಯಣ ಶುಭ ಹಾರೈಸಿದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ತಾಂಡೇಲ ಅವರು ನೂತನ ಅಧ್ಯಕ್ಷ ಕೃಷ್ಣ ಪೂಜಾರಿ ಅವರಿಗೆ ಹಾಗೂ ಕಾರ್ಯದರ್ಶಿ ಮಾಲಾಶ್ರೀ ಖಾರ್ವಿ ಅವರು ನೂತನ ಕಾರ್ಯದರ್ಶಿ ರಾಮನಾಥ ಚಿತ್ತಾಲ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ನೂತನ ಅಧ್ಯಕ್ಷ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸುವ ಸಿಎ ಫೌಂಡೇಶನ್ ಹಾಗೂ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು  ಉತ್ಕೃಷ್ಟ್ಟ ಸಾಧನೆಗೈದಿದ್ದಾರೆ. ಪ್ರೇಕ್ಷಿತ ಶೆಟ್ಟಿ, ಪನ್ನಗ, ಯಶಸ್ ಅವರು ಸಿಎ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದರೆ, ಶಾಂತಿ, ಸಹನಾ ಹಾಗೂ ಸುವಿಧ ಆಚಾರ್ಯ ಅವರು ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಡಾ| ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ-ರೀಚ್ ಸಂಸ್ಥೆಯ ಪಠ್ಯ ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆ ಹಾಗೂ ನುರಿತ ತರಬೇತುದಾರರಿಂದ ತರಬೇತಿ, ಸಲಹೆ ಮತ್ತು ಮಾರ್ಗದರ್ಶನ  ಪಡೆದು ವಿದ್ಯಾರ್ಥಿಗಳು ಈ  ಸಾಧನೆಗೈದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆಯು 2025 ಮೇ ತಿಂಗಳಲ್ಲಿ ನಡೆಸಿದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಕುಂದಾಪುರದ ಕುಂದೇಶ್ವರ ರಸ್ತೆಯಲ್ಲಿರುವ ಸಿ.ಎ ಎನ್‌. ಶಾಂತಾರಾಮ ನಾಯಕ್ & ಕೋ, ಲೆಕ್ಕ ಪರಿಶೋಧಕರ ಸಂಸ್ಥೆ ಇದರ ವಿದ್ಯಾರ್ಥಿನಿ ಅಮೃತಾ ಅವರು ಉತ್ತೀರ್ಣರಾಗಿರುತ್ತಾರೆ. ಅವರು ಕೋಟೇಶ್ವರದ ಹಳೆಅಳಿವೆ ಕುಂಬ್ರಿ ನಿವಾಸಿ ಬೇಬಿ ಮತ್ತು ಚಂದ್ರ ದೇವಾಡಿಗರ ಪುತ್ರಿ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಜ್ಯ ಸರ್ಕಾರದ ವತಿಯಿಂದ ಕಾರ್ಯಾಚರಿಸುತ್ತಿರುವ ಮೈಸೂರಿನ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ಅಂಧ ಮಕ್ಕಳಿಗೆ ಮತ್ತು ಶ್ರವಣದೋಷವುಳ್ಳ ಮಕ್ಕಳಿಗೆ ಶಿಕ್ಷಕರಾಗಲು 2 ವರ್ಷಗಳ ವಿಶೇಷ ಡಿ.ಎಡ್ ತರಬೇತಿಗೆ, ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ. 50 (ಎಸ್.ಸಿ, ಎಸ್.ಟಿ ಮತ್ತು ವಿಕಲಚೇತನ ವಿದ್ಯಾರ್ಥಿಗಳಿಗೆ ಶೇ.45) ಅಂಕಗಳೊಂದಿಗೆ ತೇರ್ಗಡೆಯಾಗಿರುವ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://nber-rehabcouncil.gov.in/ ನಲ್ಲಿ ಅರ್ಜಿ ಅಹ್ವಾನಿಸಲಾಗಿದೆ. ತರಬೇತಿ ಕಾರ್ಯಕ್ರಮಗಳು:D.Ed.Spl.Ed(VI)- Helen Keller Govt. Teachers Training Centre for Visually Handicapped – KK016.. D.Ed.Spl.Ed(HI)–Govt. Teachers Training Centre for Hearing Handicapped -KK015 ತರಬೇತಿ ಕಾರ್ಯಕ್ರಮಗಳು ರೆಗ್ಯೂಲರ್ ಆಗಿದ್ದು, ವಿಕಲಚೇತನರು ಸೇರಿದಂತೆ ಸಾಮಾನ್ಯ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿಗಳು ಸಂಪೂರ್ಣವಾಗಿ ಉಚಿತವಾಗಿದ್ದು, ಯಾವುದೇ ಬೋಧನ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಜುಲೈ 12 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು (ತರಬೇತಿ) ರವರ ಕಛೇರಿ, ಅಂಧ ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಳ್ಳಿಹೊಳೆ ಗ್ರಾಮದ ಸುಳ್ಳೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ  ಕುಬೇರಪ್ಪ (49) ಸೋಮವಾರ ಬೆಳಿಗ್ಗೆ ಶಾಲೆಗೆ ಹೋಗುವಾಗ ಕಮಲಶಿಲೆ ಎಂಬಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ಅವರು ಚಿತ್ರದುರ್ಗದ ನಿವಾಸಿಯಾಗಿದ್ದು, ಹೊಸಂಗಡಿ ಕೆಪಿಸಿ ಕಾಲನಿಯ ಸರಕಾರಿ ಕ್ವಾರ್ಟಸ್‌ನಲ್ಲಿ ವಾಸವಾಗಿದ್ದರು. ಸೋಮವಾರ ತಮ್ಮ ಬೈಕ್‌ನಲ್ಲಿ ಸುಳ್ಳೋಡು ಶಾಲೆಗೆ ಹೊರಟಿದ್ದ ಅವರು ಕಮಲಶಿಲೆಯ ಪಾರೆ ಬಳಿ ಬೈಕನ್ನು ರಸ್ತೆಯ ಬದಿಯಲ್ಲಿಟ್ಟು ರೈನ್ ಕೋಟ್ ಸಮೇತ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 22 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಕಳೆದ 4 ವರ್ಷಗಳಿಂದ ಮುಖ್ಯ ಶಿಕ್ಷಕರಾಗಿ ಮುಂಭಡ್ತಿ ಹೊಂದಿ ಸುಳ್ಳೋಡು ಶಾಲೆಗೆ ವರ್ಗಾವಣೆಗೊಂಡಿದ್ದರು. ಕುಬೇರಪ್ಪ ಅವರು ಹೊಸಂಗಡಿಯ ಕೆಪಿಸಿ ಕಾಲನಿಯಲ್ಲಿ ಹಿಟ್ಟಿನ ಗಿರಣಿ ಮಾಡಿಕೊಂಡಿದ್ದರು. ಅವರು ಸಂಬಂಧಿಕರ ಮದುವೆಗೆ ಮತ್ತು ಇನ್ನಿತರ ಸಾಕಷ್ಟು ಸಾಲ ಮಾಡಿಕೊಂಡಿದ್ದು, ಹಲವು ಸಾಲಗಾರರಿಗೆ ಜಾಮೀನು ಹಾಕಿದ್ದರು. ಸಾಂಸಾರಿಕ ಜೀವನಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಹೊಸಬೆಂಗ್ರೆ ಅಂಗನವಾಡಿ ಕೇಂದ್ರದಲ್ಲಿ ಕೇಂದ್ರ ಸರ್ಕಾರದ ಪೋಷಣ್ ಅಭಿಯಾನದಡಿ ಆರೋಗ್ಯ ತಪಾಸಣೆ ಕಾರ್ಯಕ್ರಮ ಜರಗಿತು. ಇದೇ ವೇಳೆ ಅಂಗನವಾಡಿ ಪುಟಾಣಿಗಳಿಗೆ ಶಿಶುಅಭಿವೃದ್ಧಿ ಯೋಜನೆ ಬ್ರಹ್ಮಾವರ ಇಲಾಖೆಯಿಂದ ನೀಡಿರುವ ಪುಸ್ತಕ, ಕ್ರೇಯನ್ಸ್, ಸ್ತ್ರಿಶಕ್ತಿ ಸಂಘದವರು ನೀಡಿರುವ ಬ್ಯಾಗ್, ಸ್ಥಳೀಯರು ದೀಪಾ ಆರ್. ಖಾರ್ವಿ ಹಾಗೂ ವಸಂತಿ ಅಂಗನವಾಡಿ ಕೇಂದ್ರಕ್ಕೆ ಶಾಲಾಪೂರ್ವ ಶಿಕ್ಷಣಕ್ಕೆ ಬೇಕಾಗುವ ಸಾಮಗ್ರಿ, ಗಡಿಯಾರವನ್ನು ಕೋಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾಖಾರ್ವಿ ಅಧ್ಯಕ್ಷತೆಯಲ್ಲಿ ಹಸ್ತಾಂತರಿಸಿಕೊಂಡಿತು. ಗ್ರಾಮ ಪಂಚಾಯತ್ ಸದಸ್ಯರಾದ ಕೃಷ್ಣ ಪೂಜಾರಿ ಪಿ., ಹಾಗೂ ಸತೀಶ್ ಜಿ. ಕುಂದರ್, ಬಾಲಾವಿಕಾಸ ಸಮಿತಿಯ ಅಧ್ಯಕ್ಷೆ ಸುಲೋಚನಾ, ಸದಸ್ಯರಾದ ನಿರ್ಮಲ, ಆಶಾ ಕಾರ್ಯಕರ್ತೆ ಜ್ಯೋತಿ, ಆರೋಗ್ಯ ಕೇಂದ್ರದ ಪರಸಪ್ಪ, ಸಂಜೀವಿನಿ ಅಧ್ಯಕ್ಷೆ ಪೂರ್ಣಿಮ, ಅಂಗನವಾಡಿ ಕಾರ್ಯಕರ್ತೆ ಯಮುನಾ ಎಲ್ ಕುಂದರ್,ಸ್ತ್ರೀ ಶಕ್ತಿ ಸಂಘದವರು, ತಾಯಂದಿರು, ಪೋಷಕರು ಉಪಸ್ಥಿತರಿದ್ದರು. ಇದೇ ವೇಳೆ ಆರೋಗ್ಯ ತಪಾಸಣೆಯಲ್ಲಿ ಮಹಿಳೆಯರ ಬಿ.ಪಿ ಶುಗರ್ ತಪಾಸಣೆ ಮಾಡಲಾಯಿತು.

Read More