Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರು ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮರವಂತೆ, ಬೈಂದೂರು ಹಾಗೂ ಕೊಲ್ಲೂರಿಗೆ ಗುರುವಾರ ಸಂಜೆ ಭೇಟಿ ನೀಡಿದರು. ಈ ವೇಳೆ ಅವರು ಮಾತನಾಡಿ, ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮರವಂತೆ ಸಮುದ್ರ ದಡದಲ್ಲಿ ಒಂದೆಡೆ ಸಮುದ್ರ ಮತ್ತೊಂದೆಡೆ ನದಿ ನಡುವೆ ರಸ್ತೆ ಹಾದು ಹೋಗಿದ್ದು ಇದೊಂದು ಅದ್ಭುತ ಪ್ರದೇಶವಾಗಿದೆ. ಸೋಮೇಶ್ವರವೂ ಸುಂದರ ಪ್ರದೇಶವಾಗಿದೆ. ಇಲ್ಲಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರಕಾರ ಯೋಜನೆ‌ ಸಿದ್ಧಪಡಿಸಿ ನೀಡಿದಲ್ಲಿ ಅಗತ್ಯ ಕ್ರಮ ವಹಿಸಲಾಗುವುದು. ಸಂಸದ ರಾಘವೇಂದ್ರ ಅವರ ಕ್ಷೇತ್ರದ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಯ ದೂರದೃಷ್ಟಿಯ ವಿಶೇಷ ಕಾಳಜಿಯ ಮೇರೆಗೆ ಮಾಡಿಕೊಂಡಿದ್ದ ಮನವಿಯ ಹಿನ್ನೆಲೆಯಲ್ಲಿ ಭೇಟಿ ನೀಡಿರುವುದಾಗಿ ತಿಳಿಸಿದರು. ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ಬೈಂದೂರು ಕ್ಷೇತ್ರದ ಕೊಲ್ಲೂರು ಕ್ಷೇತ್ರದ ಅಭಿವೃದ್ಧಿಯ ಕುರಿತು ಕಳೆದ ಅಧಿವೇಶನದ ಸಮಯದಲ್ಲಿ ಸ್ಥಳೀಯ ಶಾಸಕರು ಹಾಗೂ ಮುಖಂಡರ ಜೊತೆಗೆ ಕೇಂದ್ರ ಪ್ರವಾಸೋಧ್ಯಮ ಸಚಿವರನ್ನು ಭೇಟಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉಡುಪಿ ಮತ್ತು  ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ವತಿಯಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಯುವನಿಧಿಯ ಕುರಿತು ಪ್ರಚಾರ ಮತ್ತು ನೋಂದಣಿ ಅಭಿಯಾನ ನಡೆಯಿತು. ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷರಾದ ಮೋಹನ್‌ ಪೂಜಾರಿ ಉಪ್ಪುಂದ ಅವರು ಸರ್ಕಾರದ ಈ ಯೋಜನೆ ನಿರುದ್ಯೋಗಿ ಯುವ ಪೀಳಿಗೆಗೆ ತುಂಬಾ ಅನುಕೂಲಕರವಾಗಿದೆ. ಪದವಿ ಮುಗಿದು ಉದ್ಯೋಗ ಸಿಗದ ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.   ಉದ್ಯೋಗ ವಿನಿಮಯ ಕಛೇರಿಯ ಸಿಬ್ಬಂದಿ ಲತಾ ಅವರು ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆ ಪಡೆದುಕೊಳ್ಳುವ ಬಗ್ಗೆ ಮತ್ತು ಮಾನದಂಡಗಳ ಕುರಿತು ಪೂರ್ಣ ಮಾಹಿತಿ ನೀಡಿದರು. ಪ್ರಾಶುಪಾಲರಾದ ನಾಗರಾಜ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ  ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಸದಸ್ಯರಾದ ಬಾಬು ದೇವಾಡಿಗ, ಅನಿಶ್ ಕುಮಾರ್, ಸೂರ್ಯಕಾಂತಿ, ಮಾಲತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಉಡುಪಿ ಕೊಳಲಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ) ದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ತಾಂತ್ರಿಕ ಡಿಪ್ಲೋಮಾ ಕೋರ್ಸ್‌ಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಿ.ಟಿ.ಟಿ.ಸಿ ಕೇಂದ್ರದಲ್ಲಿ 3+1 ವರ್ಷದ ಡಿಪ್ಲೋಮಾ ಇನ್ ಟೂಲ್ ಡೈ ಮೇಕಿಂಗ್, ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ ಮತ್ತು ಡಿಪ್ಲೋಮಾ ಇನ್ ಪ್ರಿಸಿಶನ್ ಮ್ಯಾನುಪ್ಯಾಕ್ಚರಿಂಗ್ ಕೋರ್ಸ್ಗಳು ಲಭ್ಯವಿದ್ದು, ಐ.ಟಿ.ಐ ಮತ್ತು ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ನೇರವಾಗಿ ಎರಡನೇ ವರ್ಷದ ಡಿಪ್ಲೋಮಾ ಕೋರ್ಸ್‌ಗೆ ಪ್ರವೇಶ ಪಡೆಯಬಹುದಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಕೊಳಲಗಿರಿ, ಉಡುಪಿ ಮೊಬೈಲ್ ಸಂಖ್ಯೆ 9880510585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವದ ಪ್ರಯುಕ್ತ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಕಾಲೇಜಿನ ಬಿ.ಎಮ್.ಎಸ್. ಕ್ರೀಡಾಂಗಣದ ಬಯಲು ಸಭಾಂಗಣದಲ್ಲಿ ನಡೆಯಿತು. ಕಾಲೇಜಿನಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಹಮ್ಮಿಕೊಂಡ ವಿವಿಧ ಶೈಕ್ಷಣಿಕ, ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಿಗೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಈ ಸಂದರ್ಭ ಯಕ್ಷಗಾನ ಕಲಾರಂಗ ಉಡುಪಿಯ ಕಾರ್ಯದರ್ಶಿ ಮುರಳಿ ಕಡೇಕಾರ್ ಮಾತನಾಡಿ, ಪಠ್ಯದೊಂದಿಗಿನ ಪಠ್ಯಪೂರಕ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿ ಎಂದರು. ಇನ್ನೋರ್ವ ಮುಖ್ಯ ಅತಿಥಿಗಳಾದ ಮಂಗಳೂರಿನ ಕೆನರಾ ಕಾಲೇಜಿನ ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥೆ ಸೀಮಾ ಎಸ್. ಪ್ರಭು ಮಾತನಾಡಿ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳನ್ನು ಕ್ರಿಯಾಶೀಲವಾಗಿಡುವುದಲ್ಲದೆ ಶಿಸ್ತು ಬದ್ಧವಾದ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸುತ್ತದೆ ಎಂದರು. ಮೋಹನೇಶ್ ಚಂಗಪ್ಪ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಅಭಿನಂದಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನಲ್ಲಿ ಎನ್‌ಸಿಆರ್‌ಟಿಇ ಪಠ್ಯಕ್ರಮದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಯೋಜಿತ  ವ್ಯವಸ್ಥೆಯಲ್ಲಿ ಪರಿಣಾಮಕಾರಿ ತರಬೇತಿ ನೀಡಲಾಗುತ್ತದೆ. ಪದವಿಪೂರ್ವ ಕಾಲೇಜಿಗೆ ಪ್ರಾಂಶುಪಾಲರ ನೇತೃತ್ವವಿದ್ದು 15 ಶೈಕ್ಷಣಿಕ ವಿಭಾಗಗಳಾಗಿ ವಿಂಗಡಿಸಲಾಗಿದೆ. ಪ್ರತೀ ವಿಭಾಗಕ್ಕೂ ಒಬ್ಬ ಮುಖ್ಯ ವ್ಯವಸ್ಥಾಪಕರಿದ್ದು ಅವರ ಮೇಲುಸ್ತುವಾರಿಯಲ್ಲಿ 20ಕ್ಕೂ ಅಧಿಕ ಉಪನ್ಯಾಸಕರ ತಂಡ ಮತ್ತು ಪ್ರತ್ಯೇಕ ಶಿಕ್ಷಕೇತರ ತಂಡಗಳು ಕಾರ್ಯನಿರ್ವಹಿಸುತ್ತವೆ. ಪ್ರತೀ ದಿನ 1.30 ಗಂಟೆಗಳ ಡೌಟ್ ಕ್ಲಿಯರಿಂಗ್ ಸೆಶನ್‌ಗಳು ನಡೆಯುತ್ತವೆ. ಬೆಳಿಗ್ಗೆ ಹಾಗೂ ಸಂಜೆ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕಲಿಕಾ ಅವಧಿಯನ್ನು ಮೀಸಲಿಡಲಾಗಿದೆ. ಪದವಿಪೂರ್ವ ತರಗತಿಗಳ ಸರಿಸುಮಾರು 6 ರಿಂದ 7 ಸಾವಿರ ವಿದ್ಯಾರ್ಥಿಗಳು ಈ ಕಲಿಕಾ ಅವಧಿಗಳಲ್ಲಿ ಅಭ್ಯಾಸ ನಿರತರಾಗುತ್ತಾರೆ. ವಿದ್ಯಾರ್ಥಿಗಳ ಯೋಗಕ್ಷೇಮವನ್ನು ನೋಡಿಕೊಳ್ಳಲು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳ ತಂಡವು ಅವಿರತವಾಗಿ ಕಾರ್ಯನಿರ್ವಹಿಸುತ್ತದೆ. ಈ ವಿದ್ಯಾರ್ಥಿಕೇಂದ್ರಿತ ಶೈಕ್ಷಣಿಕ ವ್ಯವಸ್ಥೆ ವಿದ್ಯಾರ್ಥಿಗಳ ಉನ್ನತಿಗೆ ಸದಾ ಸಹಕರಿಯಾಗಿದೆ. ಇಂದು ಜನಮಾನಸದಲ್ಲಿ ಮನೆಮಾತಾಗಿರುವ ಇಂತಹ ವಿನೂತನ ಹಾಗೂ ಪರಿಣಾಮಕಾರಿ ಶೈಕ್ಷಣಿಕ ವ್ಯವಸ್ಥೆಯನ್ನು ಕರ್ನಾಟಕಕ್ಕೆ ಪರಿಚಯಿಸಿದ ಕೀರ್ತಿ ಆಳ್ವಾಸ್‌ಗೆ ಸಲ್ಲುತ್ತದೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರತವು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ “ಆಪರೇಷನ್ ಸಿಂದೂರ್”  ಹೆಸರಿನಲ್ಲಿ ನಡೆಸಿದ  ಸೇವಾ ಕಾರ್ಯಾಚರಣೆಯನ್ನು ಯಶಸ್ವಿಯಾದ ಹಿನ್ನೆಲೆಯಲ್ಲಿ ರಾಜ್ಯ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರ ಸೂಚನೆಯಂತೆ ದೇವಸ್ಥಾನಗಳಲ್ಲಿ ವಿಶೇಷ ಪ್ರಾರ್ಥನೆ, ಪೂಜೆ ಸಲ್ಲಿಸಲಾಯಿತು. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಪೂಜೆ:ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಬುಧವಾರ ಸಂಜೆ ವಿಶೇಷ ಪ್ರಾರ್ಥನೆ ಸಲ್ಲಿಸಿ, ತುಪ್ಪದ ದೀಪ ಬೆಳಗಿಸಲಾಯಿತು. ಅರ್ಚಕ ವಿಘ್ನೇಶ್ ಅಡಿಗ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಧಾರ್ಮಿಕ ವಿಧಿ ನಡೆಸಲಾಯಿತು. ದೇಗುಲದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ಸೈನಿಕರ ಶ್ರೇಯಸ್ಸಿಗಾಗಿ ಶ್ರೀದೇವಿಗೆ ತುಪ್ಪದ ಆರತಿ ಬೆಳಗಿದರು. ಗುರುವಾರ ಬೆಳಗ್ಗೆಯೂ ಸೈನಿಕರಿಗಾಗಿ ಶ್ರೀ ಮೂಕಾಂಬಿಕಾ ದೇವಿಗೆ ಶತರುದ್ರಾ ಭಿಷೇಕ ನಡೆಸುವುದಾಗಿ ದೇವಸ್ಥಾನದ ಮೂಲಗಳು ತಿಳಿಸಿವೆ. ಕೋಟ ಹಲವು ಮಕ್ಕಳು ತಾಯಿ ದೇವಳದಲ್ಲಿ ಪೂಜೆ:ಕೋಟ ಹಲವು ಮಕ್ಕಳು ತಾಯಿ ದೇವಳದಲ್ಲಿ “ಆಪರೇಷನ್ ಸಿಂದೂರ್ ” ಯಶಸ್ವಿ ಕಾರ್ಯಾಚಣೆಯ ಪ್ರಯುಕ್ತ ವಿಶೇಷ ಪೂಜೆ ಮಾಡಲಾಯಿತು. ಈ ಸಂದರ್ಭದಲ್ಲಿ ಭಕ್ತಾದಿಗಳು ಹೆಚ್ಚಿನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಉಡುಪಿ ನಗರಸಭೆಯ 2022-23 ನೇ ಸಾಲಿನ ಎಸ್.ಎಫ್.ಸಿ. ಮುಕ್ತನಿಧಿಯ ಶೇ. 5 ರ ವಿಕಲಚೇತನರ ಕಲ್ಯಾಣ ಕಾರ್ಯಕ್ರಮದ ಅನುದಾನದಡಿ ಸಾಧನ ಸಲಕರಣೆಗಳನ್ನು ಪಡೆಯಲು ಅರ್ಹ ವಿಕಲಚೇತನ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ದೈಹಿಕ ವಿಕಲತೆಯ ಬಗ್ಗೆ ಜಿಲ್ಲಾ ಸರ್ಜನ್‌ರಿಂದ ಪಡೆದ ಪ್ರಮಾಣ ಪತ್ರ, ಆದಾಯ ದೃಢಪತ್ರ, ಪ್ರಸಕ್ತ ಸಾಲಿನ ಆಸ್ತಿತೆರಿಗೆ ಪಾವತಿ ರಶೀದಿ, ಪಡಿತರ ಚೀಟಿ ಪ್ರತಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಮೇ 19 ರ ಒಳಗಾಗಿ ಉಡುಪಿ ನಗರಸಭಾ ಕಛೇರಿಗೆ ಸಲ್ಲಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸ್ನೇಹ ಕೂಟದ ಸಾಮಾಜಿಕ ಕಾರ್ಯಗಳು ಜನಮನ್ನಣೆ ಗಳಿಸಿವೆ ಅದರಲ್ಲೂ ಪ್ರಸ್ತುತ ದಶಮಾನೋತ್ಸವ ಆಚರಿಸಿಕೊಳ್ಳುತ್ತಿರುವುದು ಸಂತಸಕರ, ಇವರ ಸಾಮಾಜಿಕ ಕಾರ್ಯಗಳು ದಶ ದಿಕ್ಕಿನಲ್ಲೂ ಪಸರಿಸಲಿ ಎಂದು ಮಣೂರು ಶ್ರೀ ಮಹಾಲಿಂಗೇಶ್ವರ ದೇಗುಲದ ಆಡಳಿತ ಮಂಡಳಿ ಅಧ್ಯಕ್ಷ ಸತೀಶ್ ಹೆಚ್. ಕುಂದರ್ ಹೇಳಿದರು. ಅವರು ಮಣೂರು ಮಹಾಲಿಂಗೇಶ್ವರ ದೇಗುಲದಲ್ಲಿ ಸ್ನೇಹಕೂಟ ಮಣೂರು ಇದರ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದರು. ನಿವೃತ್ತ ಮುಖ್ಯ ಶಿಕ್ಷಕ ಎಂ. ಎನ್ ಮಧ್ಯಸ್ಥ ಮಾತನಾಡಿ, ಸ್ನೇಹಕೂಟ ವಿಭಿನ್ನವಾಗಿ ಈ ಸಮಾಜದಲ್ಲಿ ಗುರುತಿಸಿಕೊಂಡಿದೆ,ಇದೀಗ ದಶಮ ಸಂಭ್ರದಲ್ಲಿದೆ ಈ ಹತ್ತು ವರ್ಷಗಳಲ್ಲಿ ಅವರ ಕೈಗೊಂಡ ಕಾರ್ಯಗಳು ಅರ್ಥಪೂರ್ಣವಾಗಿದೆ ಇನ್ಬಷ್ಟು ವಿಶಿಷ್ಟ ರೀತಿಯ ಕಾರ್ಯಕ್ರಮಗಳೊಂದಿಗೆ ಸಮಾಜ ಜನಮಾನಸದಲ್ಲಿ ಈ ಸಂಸ್ಥೆ ನೆಲೆಯಾಗಲಿ ಎಂದು ಶುಭ ಹಾರೈಸಿದರು. ಸಭೆಯ ಅಧ್ಯಕ್ಷತೆಯನ್ನು ಸ್ನೇಹಕೂಟ ಮಣೂರು ಸಂಚಾಲಕಿ ಭಾರತಿ ವಿ. ಮಯ್ಯ ವಹಿಸಿ ದಶಮಾನೋತ್ಸವ ಲಾಂಛನದ ರೂಪುರೇಷೆಗಳ ಬಗ್ಗೆ ತಿಳಿಸಿದರು ಮುಖ್ಯ ಅತಿಥಿಗಳಾಗಿ ನಿವೃತ್ತ ಉಪನ್ಯಾಸಕ ಅರುಣಾಚಲ ಮಯ್ಯ, ಸ್ನೇಹಕೂಟದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಜ್ಯದಲ್ಲಿರುವ ಅಲೆಮಾರಿ ಜನಾಂಗದವರಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಹಾಗೂ ರಾಜ್ಯ ಮಾನವ ಹಕ್ಕುಗಳ ಆಯೋಗದ ಶಿಫಾರಸ್ಸಿನನ್ವಯ ರಾಜ್ಯದ ಅಲೆಮಾರಿ ಜನಾಂಗದವರಿಗೆ ಮೀಸಲಾತಿ ಸೌಲಭ್ಯ ಹಾಗೂ ಕೇಂದ್ರ ಸರ್ಕಾರದ ಅರ್ಥಿಕ ನೆರವಿನೊಂದಿಗೆ ಅಲೆಮಾರಿ ಜನಾಂಗದ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸುವಲ್ಲಿ ಅಲೆಮಾರಿ ಜನಾಂಗದವರ ಸಲಹಾ ಸಮಿತಿಯನ್ನು ರಚಿಸಿ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ಸೇರಿ ಪ್ರಗತಿ ಪರಿಶೀಲನೆ ಮಾಡಿ ಸರ್ಕಾರಕ್ಕೆ ಸೂಕ್ತ ಸಲಹೆ ನೀಡಲು ಸಲಹಾ ಸಮಿತಿಯನ್ನು ಪುನರ್ ರಚಿಸಿ ಜಿಲ್ಲಾ ಮಟ್ಟದ ಮತ್ತು ತಾಲೂಕು ಅಲೆಮಾರಿ ಜನಾಂಗದ ಅಭಿವೃದ್ಧಿ ಸಂಸ್ಥೆಯ ಪ್ರತಿನಿಧಿಯನ್ನು ಆಯ್ಕೆ ಮಾಡಬೇಕಿದೆ. ಅದರಂತೆ ಜಿಲ್ಲೆಯ ಅಲೆಮಾರಿ/ ಅರೆಅಲೆಮಾರಿ ಜನಾಂಗದ ಆಸಕ್ತ ಅಭ್ಯರ್ಥಿಗಳು ತಮ್ಮ ಜಾತಿ ಪ್ರಮಾಣ ಪತ್ರದೊಂದಿಗೆ ಮನವಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ 304, ಎರಡನೇ ಮಹಡಿ, ಬಿ ಬ್ಲಾಕ್, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿಗೆ ಮೇ 10 ರ ಒಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಾಂತಾರ ಚಾಪ್ಟರ್‌ – 1 ಸಿನಿಮಾದಲ್ಲಿ ಜ್ಯೂನಿಯರ್‌ ಆರ್ಟಿಸ್ಟ್‌ ಆಗಿದ್ದ ಕೇರಳ ಮೂಲಕ ಯುವಕ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಕೊಲ್ಲೂರು ಸೌಪರ್ಣಿಕಾ ನದಿಯಲ್ಲಿ ಮುಳುಗಿ ಎಂ.ಎಫ್‌. ಕಪಿಲ್‌ ಮೃತಪಟ್ಟಿದ್ದಾರೆ. ಶೂಟಿಂಗ್ ಮುಗಿಸಿ ಮಧ್ಯಾಹ್ನದ ಊಟದ ಬಳಿಕ ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ಕಪಿಲ್ ಅವರು ತಮ್ಮ ತಂಡದವರ ಜೊತೆ ಈಜಲು ತೆರಳಿದ್ದರು. ನೀರಿನ ಆಳ ತಿಳಿಯದೇ ಅವರು ನದಿಗೆ ಇಳಿದರು. ಈ ವೇಳೆ ಅವರು ಮುಳುಗಿ ಸಾವಿಗೀಡಾಗಿದ್ದಾರೆ. ಸಂಜೆ ಅವರ ಮೃತದೇಹವನ್ನು ಅಗ್ನಿಶಾಮಕ ದಳದ ಸಹಾಯದಿಂದ ಮೇಲಕ್ಕೆತ್ತಲಾಯಿತು. ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More