Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಜ್ಯದಲ್ಲಿ ವಿವಿಧ ಪದವಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯು ಇದೇ ಎಪ್ರಿಲ್ 16 ಮತ್ತು 17 ರಂದು ನಡೆಯಲಿದ್ದು, ಪರೀಕ್ಷಾ ಕಾರ್ಯಗಳಲ್ಲಿ ಯಾವುದೇ ಲೋಪವಾಗದಂತೆ ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡುವುದರೊಂದಿಗೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.    ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕಿರಣದ ಕೇಸ್ವಾನ್ ವಿಡಿಯೋ ಸಭಾಂಗಣದಲ್ಲಿ ನಡೆದ 2025ನೇ ನಾಲಿನ ಸಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗಳು ಏಪ್ರಿಲ್ -16 ಮತ್ತು17 ರಂದು ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 8089 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದಕ್ಕಾಗಿ ಉಡುಪಿಯಲ್ಲಿ 12, ಕಾರ್ಕಳ 5 ಹಾಗೂ ಕುಂದಾಪುರದಲ್ಲಿ ತಲಾ  6 ಸೇರಿದಂತೆ ಒಟ್ಟು 23 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಗೊಂದಲವಾಗದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದರು. ಸಿಇಟಿ ಪರೀಕ್ಷೆ ಕುರಿತು ಪ್ರಶ್ನೆಪತ್ರಿಕೆಯನ್ನು ಜಿಲ್ಲಾ ಖಜಾನೆಯಲ್ಲಿ ಸೂಕ್ತ ಪೊಲೀಸ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಂದಿನ ಆಧುನಿಕ ವೇಗದ ಬದುಕಿನ ಭರಾಟೆಯಲ್ಲಿ ತಲ-ತಲಾಂತರಗಳಿಂದ ಮನುಷ್ಯನ ಬದುಕಿನೊಂದಿಗೆ ಅವಿನಾಭಾವ ಸಂಬಂಧಗಳನ್ನು ಹೊಂದಿ ಜೀವನವನ್ನು ಶ್ರೀಮಂತಗೊಳಿಸಿದ ಮೌಖಿಕ ಪರಂಪರೆಯಾದ ಅಮೂಲ್ಯ ಜಾನಪದ ಸಂಸ್ಕೃತಿಯನ್ನು ಇಂದಿನ ಯುವ ಪೀಳಿಗೆ ರಕ್ಷಿಸಬೇಕಾದ ತುರ್ತು ಅಗತ್ಯವಿದೆ ಎಂದು ಕಲಾ ಚಿಗುರು ಕಲಾ ತಂಡದ ಚೇತನ್ ನೈಲಾಡಿ ಹೇಳಿದರು. ಅವರು ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಅಂಚೆ ಕೋಟೇಶ್ವರ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ಸಾಂಸ್ಕೃತಿಕ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ಜಾನಪದ ಉತ್ಸವ 2025, ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಾನಪದ ಎಂಬುದು ಒಂದು ಸಂಪ್ರದಾಯ, ಪರಂಪರೆಗಳ ವಿಜ್ಞಾನ ಎಂದು ಪರಿಭಾವಿಸಬೇಕಾದ ಅವಶ್ಯಕತೆಯಿದೆ. ವಿದ್ಯಾರ್ಥಿಗಳು ವಿದ್ಯೆ ಕಲಿಕೆಯೊಂದಿಗೆ ಸನಾತನ ಸಂಸ್ಕೃತಿಯ ಜೀವನದ ಶೈಲಿಯನ್ನು ರೂಢಿಸಿಕೊಂಡು ಮುಂದಿನ ತಲೆಮಾರಿಗೆ ಅದನ್ನು ವರ್ಗಾಯಿಸುವ ಗುರುತರ ಹೊಣೆಗಾರಿಕೆಯನ್ನು ಹೊಂದಬೇಕಾಗಿದೆ ಎಂದರು. ಪ್ರಾಂಶುಪಾಲರಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಏಪ್ರಿಲ್ 8 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್‌ನೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 8105774936, 9901472710 ಹಾಗೂ 9945856670 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯಲ್ಲಿ ರಾಮನವಮಿಯ ಪರ್ವಕಾಲವಾದ ಭಾನುವಾರದಂದು ಶಾಲಾ ಸಂಸ್ಥಾಪಕರಾದ ದಿ. ವೇದಮೂರ್ತಿ ರಾಮಚಂದ್ರ ಭಟ್ಟರ ಧರ್ಮಪತ್ನಿಯವರಾದ ರಮಾದೇವಿ ಆರ್ ಭಟ್‌ ಅವರು ತಮ್ಮ ಅಮೃತಹಸ್ತದಿಂದ ನೂತನ ವಸತಿನಿಲಯದ ನಿರ್ಮಾಣಕ್ಕಾಗಿ ಭೂಮಿಪೂಜೆಯನ್ನು ನಡೆಸಿದರು. ಶ್ರೀ ಸಿದ್ಧಿಶೈಕ್ಷಣಿಕ ಪ್ರತಿಷ್ಠಾನದ ಆಡಳಿತಕ್ಕೆ ಒಳಪಟ್ಟ ಈ ಶಾಲೆಯಲ್ಲಿ ಕಳೆದೆರಡು ಮೂರು ವರ್ಷಗಳಿಂದ ದಾಖಲಾತಿಗೆ ಬಯಸುವ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಶಾಲೆಯ ವಸತಿನಿಲಯದಲ್ಲಿ ಅವಕಾಶ ಕಡಿಮೆ ಇರುವುದರಿಂದ ದಾಖಲಾತಿ ಬಯಸುವ ವಿದ್ಯಾರ್ಥಿಗಳು ನಿರಾಸೆಯಿಂದ ಹಿಂತಿರುಗುತ್ತಿರುವುದನ್ನು ಮನಗಂಡು ಆಡಳಿತಮಂಡಳಿ ನೂತನವಾಗಿ ವಸತಿನಿಲಯದ ಸಂರಚನೆಗೆ ಭೂಮಿಪೂಜೆಯ ಮೂಲಕ ಅಡಿಯನ್ನಿರಿಸಿದೆ. ಈ ಶುಭಾವಸರದಲ್ಲಿ ಶಾಲಾ ಪ್ರಾಂಶುಪಾಲರು ಹಾಗೂ ಶ್ರೀ ಸಿದ್ಧಿಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳಾದ ಶರಣಕುಮಾರ, ಶಾಲಾ ಆಡಳಿತಾಧಿಕಾರಿ ವೀಣಾ ರಶ್ಮಿ ಎಮ್, ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಟ್ರಸ್ಟಿಗಳಾದ ಡಾ. ಎನ್. ಪಿ. ನಾರಾಯಣ ಶೆಟ್ಟಿ, ಶಾಲಾ ಉಪ ಪ್ರಾಂಶುಪಾಲರಾದ ರಾಮ ದೇವಾಡಿಗ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಸುಜಾತಾ ಸದಾರಾಮ್ ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಮತ್ತು ಹಳೆ ವಿದ್ಯಾರ್ಥಿ ಸಂಘ ಆಶ್ರಯದಲ್ಲಿ ಭಾರತೀಯ ಜ್ಞಾನ ವಿಜ್ಞಾನ ಸಮಿತಿ ಉಡುಪಿ ಮತ್ತು ಬೈಂದೂರು ಸಹಯೋಗದೊಂದಿಗೆ ಖಗೋಳ ವೀಕ್ಷಣೆ ಕಾರ್ಯಕ್ರಮವು ಶಾಲೆಯ ವಠಾರದಲ್ಲಿ ನಡೆಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮನಾಥ ಚಿತ್ತಾಲ್ ಕಾರ್ಯಕ್ರಮ ಉದ್ಘಾಟಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ನಾರಾಯಣ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಚಿತ್ತೂರು ಪ್ರೌಢಶಾಲೆಯ ಅಧ್ಯಾಪಕ ನಾರಾಯಣ ಮರಾಠಿ, ಶಾಲೆಯ ಮುಖ್ಯ ಶಿಕ್ಷಕ ಗಂಗಾಧರ ಬಂಟ್, ಎಸ್.ಡಿ.ಎಂ.ಸಿ.ಉಪಾಧ್ಯಕ್ಷೆ ಗಾಯತ್ರಿ ಕೊಡಂಚ, ಗುಜ್ಜಾಡಿ ಗ್ರಾಪಂ. ಸದಸ್ಯರಾದ ಹರೀಶ್ ಮೇಸ್ತ ಮತ್ತು ತುಂಗ ಪೂಜಾರಿ, ಪತ್ರಕರ್ತ ಬಿ.ರಾಘವೇಂದ್ರ ಪೈ, ಸಂಪನ್ಮೂಲ ವ್ಯಕ್ತಿಗಳಾಗಿ ಉಪನ್ಯಾಸಕಿ ಸಂಧ್ಯಾ ಗಾಂವ್ಕರ್, ರವೀಂದ್ರ ಕೋಡಿ, ರವಿ ಕಟಗೇರಿ, ಸಂದೇಶ ಕುಂದಾಪುರ, ಶಾಲೆಯ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಖಗೋಳದ ವಿಸ್ಮಯದ ಬಗ್ಗೆ ಸಂಪನ್ಮೂಲ ವ್ಯಕ್ತಿ, ಪ್ರೌಢಶಾಲಾ ಅಧ್ಯಾಪಕ ಉದಯ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಸೇನಾಪುರ ಗ್ರಾಮದ ಪುರಾಣ ಪ್ರಸಿದ್ಧ ನಾಗಕ್ಷೇತ್ರವಾದ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪುನರ್ ಅಷ್ಟಬಂಧ ಮತ್ತು ಬ್ರಹ್ಮಕಲಶೋತ್ಸವ ಶುಕ್ರವಾರದಿಂದ ಆದಿತ್ಯವಾರದ ತನಕ ವಿಜೃಂಭಣೆಯಿಂದ ನಡೆಯಿತು. ಶುಕ್ರವಾರ ಸಂಜೆಯಿಂದಲೇ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿತ್ತು. ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ, ಸ್ಥಾನಶುದ್ಧಿ, ಪ್ರಾಸಾದಶುದ್ಧಿ, ರಾಕೋಘ್ನ ಹೋಮ, ವಾಸ್ತು ಪೂಜೆ, ವಾಸ್ತು ಹೋಮ, ಬಲಿಪೂಜೆ ನಡೆಯಿತು. ಶನಿವಾರ ಬೆಳಿಗ್ಗೆ ಪುಣ್ಯಾಹ, ಗಣಯಾಗ, ಶಾಂತಿಹೋಮ, ಕಲಾಭಿವೃದ್ಧಿ, ತತ್ವಹೋಮ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಮಂಡಲ ರಚನೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಅದೇ ದಿನ ಸಂಜೆ ಪುಣ್ಯಾಹ, ಮಂಟಪ ಸಂಸ್ಕಾರ, ಬ್ರಹ್ಮಕಲಶ ಸ್ಥಾಪನೆ, ಮಹಾಪೂಜೆ ನಡೆಯಿತು. ಸಂಜೆ 5 ಗಂಟೆಯಿಂದ ಸಂಜೆ 7 ಗಂಟೆಯ ತನಕ ಆಹ್ವಾನಿತ ತಂಡಗಳಿಂದ ಕುಣಿತ ಭಜನಾ ಕಾರ್ಯಕ್ರಮ ನಡೆಯಿತು. ಆದಿತ್ಯವಾರ ಪುಣ್ಯಾಹ, ಜೀರ್ಣಅಷ್ಟಬಂಧ ಲೇಪನ ಪ್ರಧಾನ ಹೋಮ, ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ಸಂದರ್ಶನ ಸೇವೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ಶ್ರೀ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಟ್ಟಿಯಂಗಡಿ ಮೇಳದ ಮದ್ದಳೆಗಾರರೊಬ್ಬರು ಅರಾಟೆ ಸೇತುವೆ ಬಳಿ ಸೇತುವೆ ದುರಸ್ಥಿ ಕಾಮಗಾರಿಗೆ ಹಾಕಲಾಗಿದ್ದ ಮಣ್ಣಿನ ರಾಶಿಗೆ ಬೈಕ್ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ. ಮೃತರನ್ನು ಹಟ್ಟಿಯಂಗಡಿ ಮೇಳದ ಮದ್ದಳೆಗಾರ ನಾರಾಯಣ ಪೂಜಾರಿ (40) ಎಂದು ಗುರುತಿಸಲಾಗಿದೆ. ಶಿರೂರಿನ ತೂದಳ್ಳಿಯಲ್ಲಿ ನಡೆಯಬೇಕಿದ್ದ ಹಟ್ಟಿಯಂಗಡಿ ಮೇಳದ ಆಟ ಮಳೆ ಬಂದ ಕಾರಣದಿಂದ ಅನಿವಾರ್ಯವಾಗಿ ರದ್ದಾಗಿತ್ತು. ಆ ಕಾರಣದಿಂದ ಮೇಳದ ಪ್ರಧಾನ ಮದ್ದಳೆಗಾರ ಅವರು ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದರು. ಈ ಸಂದರ್ಭ ಅರಾಟೆ ಸೇತುವೆ ಬಳಿ ದುರಸ್ತಿಗಾಗಿ ಏಕಮುಖ ಸಂಚಾರ ವ್ಯವಸ್ಥೆ ಮಾಡಿದ್ದು ಗೊಂದಲಕ್ಕೆ ಒಳಗಾದ ನಾರಾಯಣ ಪೂಜಾರಿ ಅವರು ದ್ವಿಮುಖ ಸಂಚಾರ ರಸ್ತೆಯಲ್ಲಿ ಬರುತ್ತಿದ್ದಾಗ ಅಡ್ಡ ಹಾಕಿದ ಮಣ್ಣಿನ ರಾಶಿಗೆ ಗುದ್ದಿ ಬೈಕ್ ನಿಯಂತ್ರಣ ಕಳೆದುಕೊಂಡು ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರು ವಿವಿ ಅಂತರ ಕಾಲೇಜು ಥ್ರೋಬಾಲ್ ಪಂದ್ಯಾಟದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು 20ನೇ ಬಾರಿಗೆ ಚಾಂಪಿಯನ್ಸ್ ಆಗಿ ಹೊರಹೊಮ್ಮಿತು. ಉಡುಪಿ ವಲಯ ಮಟ್ಟದಲ್ಲಿ ಅಜ್ಜರಕಾಡು ಪ್ರಥಮ ದರ್ಜೆ ಕಾಲೇಜಿನ ವಿರುದ್ಧ ನೇರ ಸೆಟ್‌ಗಳಿಂದ ಗೆದ್ದು ಅಂತರ ವಲಯ ಮಟ್ಟಕ್ಕೆ ಆಯ್ಕೆಯಾಗಿತ್ತು. ಐಕಳದ ಪೋಂಪೈ ಕಾಲೇಜಿನಲ್ಲಿ ನಡೆದ ಅಂತಿಮ ಹಂತದ ಹಣಾಹಣಿಯಲ್ಲಿ ಮಂಗಳೂರಿನ ಸಂತ ಅಲೋಷಿಯಸ್ ಡೀಮ್ಡ್ ಟುಬಿ ವಿವಿ ವಿರುದ್ಧ 25-13, 25-19 ಸೆಟ್‌ಗಳ ಅಂತರದಲ್ಲಿ ಸೋಲಿಸಿ ವಿಜೇತ ತಂಡವಾಗಿ ಹೊರಹೊಮ್ಮಿತು. ವಿಜೇತ ತಂಡವನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಮಣೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಮಹಾಲಿಂಗೇಶ್ವರ ಹೇರಂಬ ಮಹಾಗಣಪತಿ ದೇಗುಲದ ವಾರ್ಷಿಕ ಜಾತ್ರೋತ್ಸವ ಎ.12 ರಂದು ಜರಗಲಿದ್ದು, ಈ ಹಿನ್ನಲ್ಲೆಯಲ್ಲಿ ದೇಗುಲದ ಒಳ ಹಾಗೂ ಹೊರ ಪ್ರಾಂಗಣ ಸ್ವಚ್ಛತಾ ಕಾರ್ಯಕ್ರಮವು ಭಾನುವಾರ ಜರಗಿತು. ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಅಪ್ಪು ಎಟಾಕಸ್೯ ಮಣೂರು ಇವರ ಸಹಯೋಗದೊಂದಿಗೆ 249ನೇ ವಾರದ ಸ್ವಚ್ಛತಾ ಕಾರ್ಯಕ್ರಮ ಸಂಯೋಜಿಸಿಕೊಂಡಿತು. ದೇಗುಲದ ಅಧ್ಯಕ್ಷ ಸತೀಶ್ ಕುಂದರ್ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು. ದೇಗುಲದ ಆಡಳಿತ ಟ್ರಸ್ಟಿ ಕೃಷ್ಣ ದೇವಾಡಿಗ, ಚಂದ್ರ ಹರ್ತಟ್ಟು, ದಿನೇಶ್ ಆಚಾರ್, ಸ್ಥಳೀಯರಾದ ಭಾರತೀ ವಿಷ್ಣುಮೂರ್ತಿ ಮಯ್ಯ, ರಾಜೇಂದ್ರ ಉರಾಳ, ಶಿವರಾಮ ಶೆಟ್ಟಿ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಜೆಸಿಐ ಸಿನಿಯರ್ ಲಿಜನ್ ಅಧ್ಯಕ್ಷ ಕೇಶವ ಆಚಾರ್ ಮತ್ತಿತರರು ಉಪಸ್ಥಿತರಿದ್ದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪ್ರಥಮ ಮಳೆಗೆ ಕುಂದಾಪುರದ ಶಾಸ್ತ್ರೀ ವೃತ್ತದಿಂದ ಕೋಟೇಶ್ವರದ ತನಕ ಸರ್ವಿಸ್ ರಸ್ತೆಗಳು ಅಲ್ಲಲ್ಲಿ ಹೊಳೆಯಂತೆ ಆಗಿವೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು. ಇದು ಇಂದು ನಿನ್ನೆಯ ಸಮಸ್ಯೆಯಲ್ಲಾ ಅದೆಷ್ಟೋ ವರ್ಷಗಳಿಂದ ಕುಂದಾಪುರದ ಜನತೆ ಹಾಗೂ ವಾಹನ ಸವಾರರು, ಪಾದಚಾರಿಗಳು, ಸರ್ವಿಸ್ ರಸ್ತೆಯ ಇಕ್ಕೆಲಗಳಲ್ಲಿನ ವ್ಯಾಪಾರಸ್ಥರು, ನಿವಾಸಿಗಳು ಹೇಳತೀರದ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ ಆದರೆ ಈ ಸಮಸ್ಯೆಯನ್ನು ಪರಿಹರಿಸುವ ಜವಾಬ್ದಾರಿಯನ್ನು ಹೊತ್ತಿರುವ ಸಂಸದರು ಹಾಗೂ ಶಾಸಕರು ಮಾತ್ರ ಗಾಡ ನಿದ್ರೆಗೆ ಜಾರಿದಂತೆ ಇದೆ. ಮಳೆಗಾಲ ಪ್ರಾರಂಭವಾದ ಮೇಲೆ ಕಾಟಾಚಾರಕ್ಕೆ ಅಲ್ಲಲ್ಲಿ ತೇಪೆ ಹಾಕುವ ಕೆಲಸ ಮಾಡುವುದಕ್ಕಿಂತ ಈಗಾಗಲೇ ಏಲ್ಲಿ ಸಮಸ್ಯೆಗಳಿದೆ ಆ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡುವುದು ಉತ್ತಮ. ಅಧಿವೇಶನದಲ್ಲಿ ಜನರ ಇಂತಹ ಸಮಸ್ಯೆಗಳನ್ನು ಪರಿಹಾರ ಮಾಡುವ ಬಗ್ಗೆ ಸರ್ಕಾರದ ಗಮನ ಸೆಳೆಯುವುದನ್ನು ಬಿಟ್ಟು ಕೋಳಿ ಅಂಕಕ್ಕೆ ಅನುಮತಿ ಕೊಡಿ ಎನ್ನುವ ಶಾಸಕರಗಳನ್ನು ಆಯ್ಕೆ ಮಾಡಿದರೆ, ಸುಳ್ಳಿನಲ್ಲೇ ಗೋಪುರವನ್ನು ಕಟ್ಟುವ ಸಂಸದರನ್ನು ಆಯ್ಕೆ…

Read More