ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಹಾಗೂ ಮಲೇಶಿಯಾದ ಮಿಲಾ ವಿಶ್ವವಿದ್ಯಾಲಯದ ನಡುವೆ ಅಂತಾರಾಷ್ಟ್ರೀಯ ಸಹಕಾರಕ್ಕಾಗಿ ಶೈಕ್ಷಣಿಕ ಒಡಂಬಡಿಕೆಗೆ ಸಹಿ ಹಾಕಲಾಯಿತು. ಮಿಲಾ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ ಡಾ. ದೀಪಕ್ ತಿರುಮಿಶಿ ಜಡಾ ಮತ್ತು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ಫನಾಂಡೀಸ್ ಪರಸ್ಪರ ಒಪ್ಪಂದಕ್ಕೆ ಸಹಿ ಹಾಕಿದರು. ಇತ್ತೀಚೆಗೆ ಎಂಎಸ್ ಟೀಮ್ಸ್ ಮೂಲಕ ಏರ್ಪಡಿಸಿದ್ದ ವರ್ಚುವಲ್ ಸಭೆಯಲ್ಲಿ ಎರಡು ಸಂಸ್ಥೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಮಿಲಾ ವಿಶ್ವವಿದ್ಯಾಲಯದ ಕುಲಪತಿ ಡಾ. ಜೇಸನ್ ಫಿಟ್ಸಿಮನ್ಸ್, ಸಂಶೋಧನೆ ಮತ್ತು ಉದ್ಯಮಶೀಲತೆ ವಿಭಾಗದ ಉಪಕುಲಪತಿ ಗ್ರಾಹಮ್ ಕೆಂಡಲ್, ಅಕಾಡೆಮಿಕ್ ವ್ಯವಹಾರಗಳ ಉಪಕುಲಪತಿ ಲೀ ಚ್ಯೂ ಗಿಂಗ್ ಹಾಗೂ ಸಂಶೋಧನೆ ವಿಭಾಗದ ಸಹಾಯಕ ಉಪಕುಲಪತಿ ವಾಂಗ್ ಸಿಯೋ ಫಾಂಗ್ ಭಾಗವಹಿಸಿದ್ದರು. ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕೃಷಿ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಕೆ.ವಿ. ಸುರೇಶ್, ಪರೀಕ್ಷಾ ಕುಲಸಚಿವ ಡಾ. ಶಶಿಕಾಂತ ಕರಿಂಕಾ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಇದ್ದರು. ಡಾ. ಜೇಸನ್ ಫಿಟ್ಸಿಮನ್ಸ್…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪೋಕ್ಸೋ ಕಾಯಿದೆಯಡಿ ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗಾಗಿ ಸೇವೆ ಸಲ್ಲಿಸಲು ಮಕ್ಕಳೊಂದಿಗೆ ಕೆಲಸ ಮಾಡುವ ಮೂಲಕ ಮಕ್ಕಳ ಶಿಕ್ಷಣ, ಅಭಿವೃದ್ಧಿ ಅಥವಾ ರಕ್ಷಣಾ ವಿಷಯದಲ್ಲಿ ಕನಿಷ್ಟ 3 ವರ್ಷಗಳ ಅನುಭವದೊಂದಿಗೆ ಪದವಿ ಅಥವಾ ಸಮಾಜ ಕಾರ್ಯ/ಸೋಷಿಯೋಲಾಜಿ/ಸೈಕೋಲಾಜಿ/ಚೈಲ್ಡ್ ಡೆವಲಪ್ಮೆಂಟ್ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರುವ ಅಥವಾ ಮಕ್ಕಳ ಆರೈಕೆ ಕೇಂದ್ರದಲ್ಲಿ ಮಕ್ಕಳೊಂದಿಗೆ ಕೆಲಸ ಮಾಡುವ ಅಧಿಕಾರಿಗಳು ಮತ್ತು ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಕೆಲಸ ಮಾಡುವ ಯಾವುದೇ ಸಂಸ್ಥೆ ಕೂಡ ಅರ್ಜಿ ಸಲ್ಲಿಸಬಹುದಾಗಿದೆ ಪ್ರತಿ ಪ್ರಕರಣಕ್ಕೆ 3000 ರೂ. ಸಂಭಾವನೆ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಕ್ಷೇತ್ರ ಕಾರ್ಯವನ್ನು ಮಾಡಲು ಮತ್ತು ಅಪರಾಧ ನ್ಯಾಯ ವ್ಯವಸ್ಥೆಯ ಮೂಲಕ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಸಹಾಯ ಮಾಡಲು ತರಬೇತಿ ನೀಡಲಾಗುವುದು. ಅರ್ಜಿ ಸಲ್ಲಿಸಲು ಜುಲೈ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಿ ಬ್ಲಾಕ್, ಒಂದನೇ…
ಆಧಾರ್ ಕಾರ್ಡ್ಗೆ ಮೊಬೈಲ್ ಸಂಖ್ಯೆ ಜೋಡಿಸುವುದು ಕಡ್ಡಾಯ. ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರೂ ತಮ್ಮ ಮೊಬೈಲ್ ಸಂಖ್ಯೆಯನ್ನು ಆಧಾರ್ಗೆ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ತಪ್ಪದೇ ಆಧಾರ್ ಲಿಂಕ್ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಎಂದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾರ್ನ್ಪರೆನ್ಸ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಆಧಾರ್ ಮಾನಿಟರಿಂಗ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಈವರೆಗೆ 14,11,209 ಜನರು ಆಧಾರ್ ಕಾರ್ಡ್ ಅನ್ನು ಹೊಂದಿದ್ದು, ಅವರಲ್ಲಿ 13,42,275 ಜನರು ತಮ್ಮ ಮೊಬೈಲ್ ಸಂಖ್ಯೆಯನ್ನು ನೋಂದಾಯಿಸಿಕೊಂಡು ಶೇ. 68.93 ರಷ್ಟು ಆಗಿದೆ. ಬಾಕಿ ಉಳಿದ ಪ್ರತಿಯೊಬ್ಬರೂ ತಮ್ಮ ಆಧಾರ್ ಕಾರ್ಡ್ಗೆ ಮೊಬೈಲ್ ಸಂಖ್ಯೆಯನ್ನು ಶೀಘ್ರದಲ್ಲಿಯೇ ಅಪ್ಡೇಟ್ ಮಾಡಿಸಿಕೊಳ್ಳಬೇಕು ಎಂದರು. ಜಿಲ್ಲೆಯಲ್ಲಿರುವ 15 ವರ್ಷ ಮೇಲ್ಪಟ್ಟ ಆಧಾರ್ ಕಾರ್ಡ್ ಹೊಂದಿರುವ ವಿದ್ಯಾರ್ಥಿಗಳು ಆಧಾರ್ ಸೆಂಟರ್ಗಳಿಗೆ ತೆರಳಿ ತಮ್ಮ ಬೆರಳಚ್ಚು ನೀಡಿ, ಆಧಾರ್ ಕಾರ್ಡ್ಗಳನ್ನು ಸಕ್ರೀಯಗೊಳಿಸಿಕೊಳ್ಳಬೇಕು. ಇಲ್ಲವಾದಲ್ಲಿ ಆಧಾರ್ ನಿಷ್ಕಿೃಯಗೊಳ್ಳಲಿದ್ದು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ ರಾಮಚಂದ್ರ ಶೇರುಗಾರ್ ಅವರು ಗುರುವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಮಚಂದ್ರ ಅವರು ಕಳೆದ ಒಂದು ವಾರದ ಹಿಂದೆ ಅನಾರೋಗ್ಯದ ಸಮಸ್ಯೆ ಇದ್ದ ಕಾರಣ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ರಾಮಚಂದ್ರ ಶೇರುಗಾರ್ ಕಳೆದ 28 ವರ್ಷಗಳಿಂದ ಪೊಲೀಸ್ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದು, ಇನ್ನು ಒಂದು ವಾರದಲ್ಲಿ ಪ್ರಮೋಷನ್ ಆಗಿ ಎಎಸ್ ಐ ಆಗುವ ಅರ್ಹತೆ ಹೊಂದಿದ್ದರು. ರಾಮಚಂದ್ರ ಶೇರುಗಾರ್ ಅಕಾಲಿಕ ಸಾವಿನಿಂದ ಗಂಗೊಳ್ಳಿ ಪೊಲೀಸ್ ಠಾಣೆಯ ಠಾಣಾಧಿಕಾರಿ ಪವನ ನಾಯಕ್, ಬಸವರಾಜ್ ಕನ್ ಶೆಟ್ಟಿ ಹಾಗೂ ಪೊಲೀಸ್ ಸಿಬ್ಬಂದಿಗಳು ಸಂತಾಪ ಸೂಚಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ರೋಟರಿ ಕ್ಲಬ್ ಸನ್ರೈಸ್ ಇದರ 2025-26ನೇ ಸಾಲಿನ ಅಧ್ಯಕ್ಷರಾಗಿ ಕೆ. ಗುರುರಾಜ್ ಕೊತ್ವಾಲ್ ಹಾಗೂ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಬಿ. ನೇಮಕಗೊಂಡಿರುತ್ತಾರೆ. ಜುಲೈ 20ರಂದು ಪದ ಪ್ರದಾನ ಸಮಾರಂಭವು ಕುಂದಾಪುರ ಭಂಡಾರ್ಕರ್ಸ್ ಕಾಲೇಜಿನ ಕುಂಭಾಸಿ ರಾಧಾಬಾಯಿ ವೆಂಕಟ್ರಮಣ ಪ್ರಭು ರಂಗಮಂದಿರದಲ್ಲಿ ನಡೆಯಲಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ನ್ಯಾಷನಲ್ ಕ್ಯಾಡೆಟ್ ಕಾರ್ಪ್ಸ್ನ (ಎನ್ಸಿಸಿ) 21 ಕರ್ನಾಟಕ ಬೆಟಾಲಿಯಾನ್ನಿಂದ ಆಳ್ವಾಸ್ನ ವಿದ್ಯಾಗಿರಿಯ ಆವರಣದಲ್ಲಿ 10 ದಿನಗಳ ಸಂಯೋಜಿತ ವಾರ್ಷಿಕ ತರಬೇತಿ ಶಿಬಿರ ನಡೆಯಿತು. ಮಂಗಳೂರಿನ ಎನ್ಸಿಸಿ ಸಮೂಹದ ಮುಖ್ಯ ಕಛೇರಿಯ ವ್ಯಾಪ್ತಿಗೊಳಪಟ್ಟ ವಿವಿಧ ಬ್ಯಾಟಾಲಿಯನ್ಗಳಿಂದ 598 ಎನ್ಸಿಸಿ ಕೆಡೆಟ್ಗಳು ಭಾಗವಹಿಸಿದ್ದರು. ಈ ಶಿಬಿರವು ಮೈಸೂರಿನಲ್ಲಿ ನಡೆಯಲಿರುವ ಥಲ್ ಸೇನಾ ಸ್ಪರ್ಧೆಗೆ ಎನ್ಸಿಸಿ ಕೆಡೆಟ್ಗಳನ್ನು ತರಬೇತಿಗೊಳಿಸುವ ಉದ್ದೇಶವನ್ನು ಹೊಂದಿತ್ತು. ಸುಮಾರು 133 ಕೆಡೆಟ್ಗಳಿಗೆ ಫೈರಿಂಗ್, ಬ್ಯಾಟಲ್ ಕ್ರಾಫ್ಟ್, ಡ್ರಿಲ್, ನಕ್ಷೆ ಓದುವಿಕೆ, ರೈಫಲ್ನ ನಿರ್ವಹಣೆ, ಫೀಲ್ಡ್ ಕ್ರಾಫ್ಟ್, ಮತ್ತು ಮಿಲಿಟರಿ ವಿಷಯಗಳಲ್ಲಿ ತರಬೇತಿ ನೀಡಲಾಯಿತು, ಮಂಗಳೂರಿನ ಎನ್ಸಿಸಿ ಸಮೂಹದ ಮುಖ್ಯ ಕಛೇರಿಯಿಂದ ಒಟ್ಟು 83 ಕೆಡೆಟ್ಗಳು ಮೈಸೂರಿನಲ್ಲಿ ನಡೆಯುವ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಮಂಗಳೂರಿನ ಎನ್ಸಿಸಿ ಸಮೂಹದ ಗ್ರೂಪ್ ಕಮಾಂಡರ್ ಕರ್ನಲ್ ವಿರಾಜ್ ಕಾಮತ್ ಮಾತನಾಡಿ, ಶಿಬಿರಗಳಲ್ಲಿ ಕಲಿಯುವ ಶಿಸ್ತು, ದೇಶಭಕ್ತಿ, ತಾಳ್ಮೆ ಮತ್ತು ಒಗ್ಗಟ್ಟು ಉತ್ತಮ ವ್ಯಕ್ತಿತ್ವವಿಕಾಸಕ್ಕೆ ನೆರವಾಗುತ್ತದೆ ಎಂದರು. ಶಿಸ್ತು ಮತ್ತು ಸ್ವಚ್ಛತೆ ಕೇವಲ ಶಿಬಿರದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟತಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯ ಪಡುಕರೆಯ ಮಹೇಶ್ ಹೋಟೆಲ್ ಮುಂಭಾಗ ಪರಿಶಿಷ್ಟ ಜಾತಿ ಪಂಗಡ ಮನೆಗಳ ಕಡಲ ಕಿನಾರಗೆ ಸಂಪರ್ಕಿಸುವ ಸುಮಾರು 300 ಮೀಟರ್ ರಸ್ತೆಯನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರುಬುಧವಾರ ಪರಿಶೀಲಿಸಿದರು. ಹಿಂದಿನ ಬಿಜೆಪಿ ಸರಕಾರದ ಅವಧಿಯ ಸಮಾಜಕಲ್ಯಾಣ ಇಲಾಖೆಯಿಂದ ಸುಮಾರು 60ಲಕ್ಷ ರೂ ಅನುದಾನದಡಿ ನಿರ್ಮಾಣಗೊಂಡ ಸಾಕಷ್ಟು ಪರಿಶಿಷ್ಟ ಜಾತಿ ಪಂಗಡದ ಮನೆಗಳಿರುವ ಹಾಗೂ ಪ್ರವಾಸಿ ಕಡಲ ಕಿನಾರ ಕೇಂದ್ರವಾಗಿರುವ ಈ ವ್ಯಾಪ್ತಿಯ ಬಹುವರ್ಷದ ಬೇಡಿಕೆ ಸಾಕಾರಗೊಳಿಸಿದ ಹಿನ್ನಲ್ಲೆಯಲ್ಲಿ ಗ್ರಾಮಸ್ಥರು ಆಗಿನ ಸಮಾಜಕಲ್ಯಾಣ ಸಚಿವ ಪ್ರಸ್ತುತ ಸಂಸದರಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದರು. ಇದೇ ವೇಳೆ ಕಾಮಗಾರಿಯು ನಿರ್ಮಿತಿಕೇಂದ್ರದ ಮೂಲಕ ಅನುಷ್ಠಾನಗೊಳಿಸಿದ್ದು ರಸ್ತೆ ಗುಣಮಟ್ಟವನ್ನು ಸಂಸದರು ಪರಿಶೀಲಿಸಿ ಅನುದಾನಕ್ಕಾಗಿ ಹಗಲಿರುಳು ಶ್ರಮಿಸಿದ ವಾರ್ಡ್ ಸದಸ್ಯೆ ವಿದ್ಯಾ ಸಾಲಿಯಾನ್ ಅವರ ಕಾರ್ಯವೈಕರಿಯನ್ನು ಸಂಸದರು ಪ್ರಶಂಸಿದರು. ಇದೇ ವೇಳೆ ಗ್ರಾಮಸ್ಥರು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನ 1994-96ನೇ ಸಾಲಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಕೊಡುತ್ತಿರುವ ಪ್ರೋತ್ಸಾಹ ಧನದ ವಿತರಣೆ ಕಾರ್ಯಕ್ರಮ ನಡೆಯಿತು. ಇದು ಹತ್ತನೇ ವರ್ಷದ ಕಾರ್ಯಕ್ರಮವಾಗಿದ್ದು ಈ ವರ್ಷ ದ್ವಿತೀಯ ಪಿ. ಯು.ಸಿ.ವಾರ್ಷಿಕ ಪರೀಕ್ಷೆಯಲ್ಲಿ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಅತ್ಯಧಿಕ ಅಂಕಗಳಿಸಿದ ದೀಪಕ್ ಶೆಟ್ಟಿ ಅವರಿಗೆ 15 ಸಾವಿರ ರೂಪಾಯಿ ಪ್ರೋತ್ಸಾಹ ಧನವನ್ನು ನೀಡಲಾಯಿತು. 1994-96 ನೇ ಸಾಲಿನ ಹಳೆ ವಿದ್ಯಾರ್ಥಿಗಳ ಪ್ರತಿನಿಧಿಯಾಗಿ ಯು .ಎಸ್. ಎ. ನ ಬೋಸ್ಟನ್ನ ಟಾಕೆಡ ಫಾರ್ಮಸಿಟಿಕಲ್ಸ್ ನಲ್ಲಿ ಎಸೋಸಿಯೇಟ್ ಡೈರೆಕ್ಟರ್ ಆಗಿರುವ ದೀಪಕ್ ಕಂಬದಕೋಣೆ ಅವರು ಆಗಮಿಸಿ ಮಾತನಾಡಿ, ಯಾವುದೇ ಸಂಸ್ಥೆಯಲ್ಲಿ ಕಲಿತರೂ ಮಕ್ಕಳ ಸ್ವ ಪ್ರಯತ್ನವೇ ಮುಖ್ಯ ಹಾಗೂ ಸಂವಹನ ಕಲೆಯನ್ನು ಈಗಿನಿಂದಲೇ ಉತ್ತಮಪಡಿಸಿಕೊಳ್ಳಬೇಕು. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪಿಯುಸಿ ಮುಗಿದ ತಕ್ಷಣ ಇರುವಂತಹ ವಿಫುಲ ಅವಕಾಶಗಳ ಬಗ್ಗೆ ಕೂಡ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಎಂ. ಅವರು ಮಾತನಾಡಿ, ವಿದ್ಯಾರ್ಥಿಗಳು ಕೇವಲ ಅಂಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಆರೋಗ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ udupi.nic.in ಅನ್ನು ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜುಲೈ 24 ಕೊನೆಯ ದಿನ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ. ವಿವಿಧ ಹುದ್ದೆಗಳ ಮಾಹಿತಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜು.17: ತಾಲೂಕಿನ ಗಂಗೊಳ್ಳಿ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ಮೃತದೇಹಗಳು ಪ್ರತ್ಯೇಕವಾಗಿ ಕೋಡಿ ಸಮೀಪ ಸಮುದ್ರ ಕಿನಾರೆಯಲ್ಲಿ ಪತ್ತೆಯಾಗಿದೆ. ಬುಧವಾರ ಬೆಳಿಗ್ಗೆ ಕೋಡಿ ಲೈಟ್ ಹೌಸ್ ಸಮೀಪ ಲೋಹಿತ್ ಖಾರ್ವಿ ಮೃತದೇಹ, ಸಂಜೆ ಹಳೆ ಅಳಿವೆ ಸಮೀಪ ಜಗನ್ನಾಥ ಖಾರ್ವಿ ಮೃತದೇಹ ಪತ್ತೆಯಾಗಿತ್ತು. ಗುರುವಾರ ಬೆಳಿಗ್ಗೆ ಕೋಡಿ ಸೀವಾಕ್ ಸಮೀಪ ಸುರೇಶ್ ಖಾರ್ವಿ ಅವರ ಮೃತದೇಹ ಪತ್ತೆಯಾಗಿದೆ. ಗಂಗೊಳ್ಳಿ ಬಂದರಿನಿಂದ ಜು.15ರಂದು ಬೆಳಗ್ಗೆ ಶ್ರೀ ಹಕ್ರೇಮಠ ಯಕ್ಷೇಶ್ವರ ಎಂಬ ಹೆಸರಿನ ಗಿಲ್ನೆಟ್ ನಾಡ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿದ್ದ ಸಂದರ್ಭ ಗಂಗೊಳ್ಳಿ ಅಳಿವೆ ಬಾಗಿಲಿನಲ್ಲಿ ಅಲೆಗಳ ರಭಸಕ್ಕೆ ಸಿಲುಕಿ ದೋಣಿ ಮಗುಚಿತ್ತು. ದೋಣಿಯಲ್ಲಿದ್ದ ನಾಲ್ವರು ಮೀನುಗಾರರ ಪೈಕಿ ಓರ್ವ ಮೀನುಗಾರ ಈಜಿ ದಡ ಸೇರಿದ್ದರು. ಜಗನ್ನಾಥ ಖಾರ್ವಿ, ಲೋಹಿತ್ ಖಾರ್ವಿ ಹಾಗೂ ಸುರೇಶ್ ಖಾರ್ವಿ ನಪತ್ತೆಯಾಗಿ ಅವರಿಗಾಗಿ ತೀವ್ರ ಶೋಧ ನಡೆಸಲಾಗಿತ್ತು. ಕಾಣೆಯಾದವರನ್ನು ಪತ್ತೆಹಚ್ಚಲು ಡೋನ್ ಮೂಲಕ ಶೋಧ ಕಾರ್ಯ ನಡೆಸಲಾಯಿತು.
