ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟತಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯ ಪಡುಕರೆಯ ಮಹೇಶ್ ಹೋಟೆಲ್ ಮುಂಭಾಗ ಪರಿಶಿಷ್ಟ ಜಾತಿ ಪಂಗಡ ಮನೆಗಳ ಕಡಲ ಕಿನಾರಗೆ ಸಂಪರ್ಕಿಸುವ ಸುಮಾರು 300 ಮೀಟರ್ ರಸ್ತೆಯನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರುಬುಧವಾರ ಪರಿಶೀಲಿಸಿದರು. ಹಿಂದಿನ ಬಿಜೆಪಿ ಸರಕಾರದ ಅವಧಿಯ ಸಮಾಜಕಲ್ಯಾಣ ಇಲಾಖೆಯಿಂದ ಸುಮಾರು 60ಲಕ್ಷ ರೂ ಅನುದಾನದಡಿ ನಿರ್ಮಾಣಗೊಂಡ ಸಾಕಷ್ಟು ಪರಿಶಿಷ್ಟ ಜಾತಿ ಪಂಗಡದ ಮನೆಗಳಿರುವ ಹಾಗೂ ಪ್ರವಾಸಿ ಕಡಲ ಕಿನಾರ ಕೇಂದ್ರವಾಗಿರುವ ಈ ವ್ಯಾಪ್ತಿಯ ಬಹುವರ್ಷದ ಬೇಡಿಕೆ ಸಾಕಾರಗೊಳಿಸಿದ ಹಿನ್ನಲ್ಲೆಯಲ್ಲಿ ಗ್ರಾಮಸ್ಥರು ಆಗಿನ ಸಮಾಜಕಲ್ಯಾಣ ಸಚಿವ ಪ್ರಸ್ತುತ ಸಂಸದರಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದರು. ಇದೇ ವೇಳೆ ಕಾಮಗಾರಿಯು ನಿರ್ಮಿತಿಕೇಂದ್ರದ ಮೂಲಕ ಅನುಷ್ಠಾನಗೊಳಿಸಿದ್ದು ರಸ್ತೆ ಗುಣಮಟ್ಟವನ್ನು ಸಂಸದರು ಪರಿಶೀಲಿಸಿ ಅನುದಾನಕ್ಕಾಗಿ ಹಗಲಿರುಳು ಶ್ರಮಿಸಿದ ವಾರ್ಡ್ ಸದಸ್ಯೆ ವಿದ್ಯಾ ಸಾಲಿಯಾನ್ ಅವರ ಕಾರ್ಯವೈಕರಿಯನ್ನು ಸಂಸದರು ಪ್ರಶಂಸಿದರು. ಇದೇ ವೇಳೆ ಗ್ರಾಮಸ್ಥರು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನ 1994-96ನೇ ಸಾಲಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಕೊಡುತ್ತಿರುವ ಪ್ರೋತ್ಸಾಹ ಧನದ ವಿತರಣೆ ಕಾರ್ಯಕ್ರಮ ನಡೆಯಿತು. ಇದು ಹತ್ತನೇ ವರ್ಷದ ಕಾರ್ಯಕ್ರಮವಾಗಿದ್ದು ಈ ವರ್ಷ ದ್ವಿತೀಯ ಪಿ. ಯು.ಸಿ.ವಾರ್ಷಿಕ ಪರೀಕ್ಷೆಯಲ್ಲಿ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಅತ್ಯಧಿಕ ಅಂಕಗಳಿಸಿದ ದೀಪಕ್ ಶೆಟ್ಟಿ ಅವರಿಗೆ 15 ಸಾವಿರ ರೂಪಾಯಿ ಪ್ರೋತ್ಸಾಹ ಧನವನ್ನು ನೀಡಲಾಯಿತು. 1994-96 ನೇ ಸಾಲಿನ ಹಳೆ ವಿದ್ಯಾರ್ಥಿಗಳ ಪ್ರತಿನಿಧಿಯಾಗಿ ಯು .ಎಸ್. ಎ. ನ ಬೋಸ್ಟನ್ನ ಟಾಕೆಡ ಫಾರ್ಮಸಿಟಿಕಲ್ಸ್ ನಲ್ಲಿ ಎಸೋಸಿಯೇಟ್ ಡೈರೆಕ್ಟರ್ ಆಗಿರುವ ದೀಪಕ್ ಕಂಬದಕೋಣೆ ಅವರು ಆಗಮಿಸಿ ಮಾತನಾಡಿ, ಯಾವುದೇ ಸಂಸ್ಥೆಯಲ್ಲಿ ಕಲಿತರೂ ಮಕ್ಕಳ ಸ್ವ ಪ್ರಯತ್ನವೇ ಮುಖ್ಯ ಹಾಗೂ ಸಂವಹನ ಕಲೆಯನ್ನು ಈಗಿನಿಂದಲೇ ಉತ್ತಮಪಡಿಸಿಕೊಳ್ಳಬೇಕು. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪಿಯುಸಿ ಮುಗಿದ ತಕ್ಷಣ ಇರುವಂತಹ ವಿಫುಲ ಅವಕಾಶಗಳ ಬಗ್ಗೆ ಕೂಡ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಎಂ. ಅವರು ಮಾತನಾಡಿ, ವಿದ್ಯಾರ್ಥಿಗಳು ಕೇವಲ ಅಂಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಆರೋಗ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ udupi.nic.in ಅನ್ನು ಸಂಪರ್ಕಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜುಲೈ 24 ಕೊನೆಯ ದಿನ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ. ವಿವಿಧ ಹುದ್ದೆಗಳ ಮಾಹಿತಿ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜು.17: ತಾಲೂಕಿನ ಗಂಗೊಳ್ಳಿ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ಮೃತದೇಹಗಳು ಪ್ರತ್ಯೇಕವಾಗಿ ಕೋಡಿ ಸಮೀಪ ಸಮುದ್ರ ಕಿನಾರೆಯಲ್ಲಿ ಪತ್ತೆಯಾಗಿದೆ. ಬುಧವಾರ ಬೆಳಿಗ್ಗೆ ಕೋಡಿ ಲೈಟ್ ಹೌಸ್ ಸಮೀಪ ಲೋಹಿತ್ ಖಾರ್ವಿ ಮೃತದೇಹ, ಸಂಜೆ ಹಳೆ ಅಳಿವೆ ಸಮೀಪ ಜಗನ್ನಾಥ ಖಾರ್ವಿ ಮೃತದೇಹ ಪತ್ತೆಯಾಗಿತ್ತು. ಗುರುವಾರ ಬೆಳಿಗ್ಗೆ ಕೋಡಿ ಸೀವಾಕ್ ಸಮೀಪ ಸುರೇಶ್ ಖಾರ್ವಿ ಅವರ ಮೃತದೇಹ ಪತ್ತೆಯಾಗಿದೆ. ಗಂಗೊಳ್ಳಿ ಬಂದರಿನಿಂದ ಜು.15ರಂದು ಬೆಳಗ್ಗೆ ಶ್ರೀ ಹಕ್ರೇಮಠ ಯಕ್ಷೇಶ್ವರ ಎಂಬ ಹೆಸರಿನ ಗಿಲ್ನೆಟ್ ನಾಡ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿದ್ದ ಸಂದರ್ಭ ಗಂಗೊಳ್ಳಿ ಅಳಿವೆ ಬಾಗಿಲಿನಲ್ಲಿ ಅಲೆಗಳ ರಭಸಕ್ಕೆ ಸಿಲುಕಿ ದೋಣಿ ಮಗುಚಿತ್ತು. ದೋಣಿಯಲ್ಲಿದ್ದ ನಾಲ್ವರು ಮೀನುಗಾರರ ಪೈಕಿ ಓರ್ವ ಮೀನುಗಾರ ಈಜಿ ದಡ ಸೇರಿದ್ದರು. ಜಗನ್ನಾಥ ಖಾರ್ವಿ, ಲೋಹಿತ್ ಖಾರ್ವಿ ಹಾಗೂ ಸುರೇಶ್ ಖಾರ್ವಿ ನಪತ್ತೆಯಾಗಿ ಅವರಿಗಾಗಿ ತೀವ್ರ ಶೋಧ ನಡೆಸಲಾಗಿತ್ತು. ಕಾಣೆಯಾದವರನ್ನು ಪತ್ತೆಹಚ್ಚಲು ಡೋನ್ ಮೂಲಕ ಶೋಧ ಕಾರ್ಯ ನಡೆಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ನೇತೃತ್ವದಲ್ಲಿ, ಕುಂದಾಪ್ರ ಕನ್ನಡ ದಿನದ ಅಂಗವಾಗಿ 2ನೇ ವರ್ಷದ ‘ಲಗೋರಿ’ ಗ್ರಾಮೀಣ ಕ್ರೀಡಾಕೂಟ ಜು.20 ರಂದು ಕುಂದಾಪುರ ಬೋರ್ಡ್ ಹೈಸ್ಕೂಲು ಮೈದಾನದಲ್ಲಿ ಆಯೋಜಿಸಲಾಗಿದೆ ತೆರೆಯ ಮರೆಗೆ ಸರಿಯುತ್ತಿರುವ ಗ್ರಾಮೀಣ ಆಟಗಳನ್ನು ಮತ್ತೆ ಮುನ್ನೆಲೆಗೆ ತರುವುದು ಈ ಕೂಟದ ಉದ್ದೇಶವಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದರು ಅವರು ಬುಧವಾರ ಇಲ್ಲಿನ ಕಲಾಕ್ಷೇತ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಕರ್ಕಾಟಕ ಅಮವಾಸ್ಯೆ ದಿನದಂದು ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಆಚರಿಸಬೇಕೆಂಬ ಇಂಗಿತವನ್ನು ಕುಂದಾಪ್ರ ಕನ್ನಡದ ಭಾಷಾಭಿಮಾನಿಗಳು ವ್ಯಕ್ತಪಡಿಸಿದ್ದರು. ಅಂದಿನಿಂದ ಜಗತ್ತಿನಾದ್ಯಂತ ಕುಂದಾಪುರ ಭಾಷಿಕರು ಆ ದಿನವನ್ನು ಆಚರಣೆ ಮಾಡಲಾರಂಭಿಸಿ ಕುಂದಾಪುರ ಕನ್ನಡದ ಭಾಷಾಭಿಮಾನ ಗಮನಾರ್ಹವಾಗಿ ಹೆಚ್ಚಾಗಿದೆ. ಕಲಾಕ್ಷೇತ್ರ ಈ ಹಿನ್ನೆಲೆಯಲ್ಲಿ ಇಂದಿನ ಜನಾಂಗ ನೋಡದ ಮತ್ತು ಆಡದ ಆಟಗಳನ್ನು ಭಾಷಾ ಪ್ರೇಮಿಗಳನ್ನು ಒಗ್ಗೂಡಿಸಿ ಆಡಿಸುತ್ತಿದ್ದೇವೆ. ತೆರೆಯ ಮರೆಗೆ ಸರಿದ ಕ್ರೀಡೆಯನ್ನು ಮತ್ತೆ ಮುನ್ನೆಲೆಗೆ ತರುವ ಪ್ರಯತ್ನ ಮಾಡುತ್ತಿದೆ ಎಂದರು. ಕಳೆದ ವರ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “ಸಂಖ್ಯಾಶಾಸ್ತ್ರವು ಬಹುತೇಕ ಉದ್ಯೋಗಗಳಲ್ಲಿ ಅಗತ್ಯವಿದೆ. ವ್ಯವಹಾರ, ಆರೋಗ್ಯ, ತಂತ್ರಜ್ಞಾನ, ಸರ್ಕಾರ, ಶಿಕ್ಷಣ,ದತ್ತಾಂಶ ವಿಶ್ಲೇಷಣೆ, ಮಾರುಕಟ್ಟೆ ವಿಶ್ಲೇಷಣೆ, ಹಣಕಾಸು ಊಹೆ ಮುಂತಾದ ಕ್ಷೇತ್ರಗಳಲ್ಲಿ ಇದು ಉಪಯೋಗಿಯಾಗುತ್ತದೆ. ದಿನನಿತ್ಯದ ಸಮೀಕ್ಷೆಗಳು, ಸುದ್ದಿಗಳಲ್ಲಿನ ಅಂಕಿಅಂಶಗಳು ಮತ್ತು ವಿಜ್ಞಾನ ವರದಿಗಳನ್ನು ಸರಿಯಾಗಿ ಅರ್ಥಮಾಡಿಕೊಳ್ಳಲು ಸಂಖ್ಯಾಶಾಸ್ತ್ರ ಸಹಾಯವಾಗುತ್ತದೆ. ಆದರೆ ಇಂದು ಇಂತಹ ಅಮೂಲ್ಯ ವಿಷಯವನ್ನು ವಿದ್ಯಾರ್ಥಿಗಳು ಆಸೆ ಪಟ್ಟು ಓದದೇ, ಇರುವುದರಿಂದ ಮತ್ತು ಸಮಾಜದಲ್ಲಿ ಒಲವು ಕೂಡ ಕಡಿಮೆಯಾಗುತ್ತಿರುವುದು ಸಂಖ್ಯಾಶಾಸ್ತ್ರ ಮೈನರ್ ವಿಷಯ ಆಗುತ್ತಿರುವುದು ಅತ್ಯಂತ ವಿಷಾದನೀಯ” ಎಂದು ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಾರುತಿ ಕಳವಳ ವ್ಯಕ್ತಪಡಿಸಿದರು. ಉಡುಪಿ ಜಿಲ್ಲಾ ಸಂಖ್ಯಾಶಾಸ್ತ್ರ ಉಪನ್ಯಾಸಕರ ಸಂಘ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇದರ ಜಂಟಿ ಆಶ್ರಯದಲ್ಲಿ ಬುಧವಾರ ಜನತಾ ಪಿಯು ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲೆಯ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪದವಿಪೂರ್ವ ಕಾಲೇಜುಗಳಲ್ಲಿ ಸಂಖ್ಯಾಶಾಸ್ತ್ರ ವಿಷಯ ಬೋಧಿಸುತ್ತಿರುವ ಉಪನ್ಯಾಸಕರುಗಳಿಗೆ ನವೀನ ಬೋಧನಾ ತಂತ್ರಗಳ ಮಾಹಿತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಣೂರು ಪಡುಕರೆಯ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ) ವಿಭಾಗದಲ್ಲಿ ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ಇವರ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲಿಕಾ ತರಬೇತಿ ಶಿಬಿರವು ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಗೀತಾನಂದ ಟ್ರಸ್ಟ್ನ ಪ್ರವರ್ತಕ ಆನಂದ ಸಿ. ಕುಂದರ್ ಉದ್ಘಾಟಿಸಿ ಮಾತಾನಾಡಿ, ಉಡುಪಿ ಜಿಲ್ಲೆಯ 90 ಶಾಲೆಗಳಲ್ಲಿ ಯಕ್ಷ ಶಿಕ್ಷಣ ತರಬೇತಿ ನಡೆಯುತ್ತಿದ್ದು, ಪಾರಂಪರಿಕ ಕಲೆಯಾದ ಯಕ್ಷಗಾನವು ಹೊಸ ತಲೆಮಾರಿಗೆ ಪರಿಚಯವಾಗಿ ಕಲಾವಿದ ಅಥವಾ ಪ್ರೇಕ್ಷಕನಾಗಿಸುವ ಕಾರ್ಯವು ಆಗಬೇಕಿದೆ. ಇಂತಹ ತರಬೇತಿ ಶಿಬಿರದ ಮೂಲಕ ಯಕ್ಷಕಲೆಯ ವ್ಯಾಪ್ತಿಯನ್ನು ವಿಸ್ತರಿಸಬೇಕಿದೆ. ಶಿಸ್ತುಬದ್ಧ ಜೀವನ ಹಾಗೂ ನಮ್ಮ ಸಂಸ್ಕೃತಿಗಳ ಅನುಕೂಲವಾಗುವ ಯಕ್ಷಕಲೆ ಬೆಳೆಸಬೇಕಿರುವುದು ನಮ್ಮ ನಿಮ್ಮಲ್ಲರ ಹೊಣೆ ಎಂದರು. ಸಮಾರಂಭದ ಕುರಿತು ಪ್ರಾಸ್ತಾವಿಕವಾಗಿ ಶಿಕ್ಷಕ ರಾಘವೇಂದ್ರ ಗಿಳಿಯಾರು ಯಕ್ಷಗುರುಗಳು ವಾಕ್ ಶುದ್ಧಿ ಸಭಾ ಕಂಪನ ಹೋಗಲಾಡಿಸ ಬಹುದಾದ ಯಕ್ಷಕಲೆಯನ್ನು ಶಾಸ್ತ್ರಿಯವಾಗಿ ಕಲಿತು ಮುಂದೆ ಶಿಕ್ಷಣ ಮತ್ತು ಉದ್ಯೋಗ ಹಾಗೂ ಸಮಾದಲ್ಲಿ ಉತ್ತಮ ಸ್ಥಾನಮಾನ ಕೊಡಬಲ್ಲ ಕಲೆಯಾಗಿದೆ ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಅತಿವೃಷ್ಠಿ, ನೈಸರ್ಗಿಕ ವಿಕೋಪಗಳು ಉಂಟಾದಾಗ ಕೂಡಲೇ ಸ್ಪಂದಿಸಿ, ಪರಿಹಾರ ಕಾರ್ಯಗಳನ್ನು ಕೈಗೊಂಡು ಹಾನಿಗೊಳಗಾದವರಿಗೆ ನಷ್ಟ ಪರಿಹಾರವನ್ನು ಆದಷ್ಟು ತ್ವರಿತವಾಗಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕೆಸ್ವಾನ್ ವೀಡಿಯೋ ಕಾನ್ಫ್ರೆನ್ಸ್ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರಸ್ತುತ ವರ್ಷದಲ್ಲಿ ಈವರೆಗೆ ವಾಡಿಕೆಗೆ 1959 ಮಿ.ಮೀ. ಮಳೆಯಾಗಬೇಕಿತ್ತು. ಆದರೆ 2803 ಮಿ.ಮೀ ನಷ್ಟು ಮಳೆಯಾಗಿ ಶೇ. 43 ರಷ್ಟು ಹೆಚ್ಚು ಆಗಿದೆ. ಮುಂಬರುವ ದಿನಗಳಲ್ಲಿಯೂ ಸಹ ಹೆಚ್ಚು ಮಳೆಯಾಗಬಹುದೆಂಬ ಮುನ್ಸೂಚನೆಯನ್ನು ಈಗಾಗಲೇ ಹವಾಮಾನ ಇಲಾಖೆಯವರು ನೀಡಿದ್ದಾರೆ. ಹವಾಮಾನ ಇಲಾಖೆ ಪ್ರತಿದಿನವೂ ನೀಡುವ ಮುನ್ಸೂಚನೆಗಳನ್ನು ಸಾರ್ವಜನಿಕರಿಗೆ ಹಾಗೂ ಮೀನುಗಾರರಿಗೆ ಮಾಹಿತಿ ನೀಡಬೇಕು. ಇದರಿಂದಾಗಿ ಆಗುವ ಮಾನವ ಜೀವಹಾನಿ ಹಾಗೂ ಪ್ರಾಣಿಗಳ ಜೀವಹಾನಿಯನ್ನು ತಪ್ಪಿಸಲು ಸಾಧ್ಯ ಎಂದರು. ಹೆಚ್ಚಿನ ಮಳೆಯಿಂದಾಗಿ ಮೂಲಸೌಕರ್ಯಗಳಾದ ರಾಜ್ಯಹೆದ್ದಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.16: ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 17ರಂದು ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ರಜೆ ಘೋಷಿಸಿ ಆದೇಶಿಸಿದ್ದಾರೆ. ಉಳಿದಂತೆ ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಆದರೆ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ ಮತ್ತು ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಅಧಿಕ ಮಳೆ ಸಾಧ್ಯತೆಯಿದ್ದು ಹವಮಾನ ಇಲಾಖೆಯಿಂದ ಎಲ್ಲಾ ಅಲರ್ಟ್ ಘೋಷಿಸಿದೆ. ಮಳೆಗಾಲದಲ್ಲಿ ಸಾರ್ವಜನಿರು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆಯೂ ಸೂಚಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಉಪ್ಪುಂದ ಶಾಖೆ ವತಿಯಿಂದ ಕೇಂದ್ರ ಸರಕಾರದ ಯೋಜನೆ ಜನಸುರಕ್ಷಾ ಅಭಿಯಾನವು ಮಂಗಳವಾರ ಕೆರ್ಗಾಲ್ ಗ್ರಾಮ ಪ್ರಂಚಾಯತ್ ವಠಾರದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಕೆರ್ಗಾಲ್ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇವತಿ ಅವರು ಮಾತನಾಡಿ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗ್ರಾಮೀಣ ಪ್ರದೇಶದಲ್ಲಿ ನವೋದಯ ಸ್ವಸಹಾಯ ಗಂಪುಗಳಿಗೆ ಆರ್ಥಿಕ ಸೌಲಭ್ಯವನ್ನು ಒದಗಿಸುವುದರ ಮೂಲಕ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ಜನಸುರಕ್ಷಾ ಯೋಜನೆಯನ್ನು ಮನೆ ಮನೆಗೆ ತಲುಪಿಸುವುದರಲ್ಲಿ ಹೆಚ್ಚು ಮುತುವರ್ಜಿ ವಹಿಸಿರುವುದು ಶ್ಲಾಘನಾರ್ಹ ಎಂದರು. ಎಸ್ಸಿಡಿಸಿಸಿ. ಬ್ಯಾಂಕ್ ಉಪ್ಪುಂದ ಶಾಖಾ ವ್ಯವಸ್ಥಾಪಕರಾದ ಜಿ. ಶಂಕರ ಶೆಟ್ಟಿಯವರು ಪ್ರಸ್ತಾವನೆಯಲ್ಲಿ ಕೇಂದ್ರ ಸರಕಾರದ ಜನ ಸುರಕ್ಷಾ ಯೋಜನೆಯನ್ನು ಕೆರ್ಗಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರತಿಯೊಬ್ಬ ನಾಗರಿಕರು ಆಳವಡಿಸಿಕೊಳ್ಳಬೇಕೆಂದು ಮನವಿ ಮಾಡಿದರು. ಕೆರ್ಗಾಲ್ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯ ಖಾರ್ವಿ ಗ್ರಾಮ ಪಂಚಾಯತ್, ಸದಸ್ಯ ವಿನೋದ ದೇವಾಡಿಗ, ಗ್ರಾಮ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ಕೆರ್ಗಾಲ್…
