Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು, ಜೂ.14: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ರಾಜ್ಯ ಗೃಹ ಸಚಿವರಾದ ಡಾ. ಜಿ.ಪರಮೇಶ್ವ‌ರ್‌ ಅವರು ಶನಿವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಗೃಹ ಸಚಿವರನ್ನು ದೇವರದ ವತಿಯಿಂದ ಶಾಲುವದಿಸಿ ದೇವಿಯ ಪ್ರಸಾದ ನೀಡಿ ಗೌರವಿಸಿದರು. ಈ ವೇಳೆ ಮೀನುಗಾರಿಕೆ ಸಚಿವ ಮಂಕಾಳ ಎಸ್. ವೈದ್ಯ , ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಕಾಂಗ್ರೆಸ್ ಮುಖಂಡರಾದ ಮುನಿಯಾಲು ಉದಯಕುಮಾರ್ ಶೆಟ್ಟಿ,‌ ಎಸ್. ರಾಜು ಪೂಜಾರಿ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಎಂ.ಎ.ಗಪೂರ್, ದೇವಳದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಬಾಬು ಹೆಗ್ಡೆ ತಗ್ಗರ್ಸೆ, ಸಮಿತಿಯ ಸದಸ್ಯರಾದ ಅಭಿಲಾಷ್ ಪಿ.ವಿ, ಮಹಾಲಿಂಗ ನಾಯ್ಕ್, ಸುರೇಂದ್ರ ಶೆಟ್ಟಿ, ರಘುರಾಮ ದೇವಾಡಿಗ, ಸುಧಾ ಕೆ, ಧನಾಕ್ಷಿ ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ ಹಾಗೂ ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಇತ್ತೀಚೆಗೆ ವಿಯೆಟ್ನಾಂನಲ್ಲಿ ಜರುಗಿದ ಎರಡನೇ ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್‌ಶಿಫ್‌ನಲ್ಲಿ ಆಳ್ವಾಸ್ ವಿದ್ಯಾಸಂಸ್ಥೆಯ 8 ಯೋಗಪಟುಗಳು ಭಾರತ ದೇಶವನ್ನು ಪ್ರತಿನಿಧಿಸಿ 8 ಚಿನ್ನದ ಪದಕವನ್ನು ಜಯಿಸುವುದರ  ಜೊತೆಗೆ ವೈಯಕ್ತಿಕ ವಿಭಾಗದಲ್ಲಿ 8 ಅಂತರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿಯನ್ನು ಪಡೆದು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡರು. ಸಬ್‌ಜ್ಯೂನಿಯರ್ ವಿಭಾಗದಲ್ಲಿ ಯಶಿಕ ಹಾಗೂ ಚಂದನ – ತಾಳಬದ್ದ ಯೋಗಾಸನದಲ್ಲಿ ಚಿನ್ನ, ಕೋಮಲ – ಕಲಾತ್ಮಕ ಯೋಗಾಸನದಲ್ಲಿ ಚಿನ್ನದ ಪದಕ ಪಡೆದರು. ಜ್ಯೂನಿಯರ್ ಹುಡುಗರ ವಿಭಾಗದಲ್ಲಿ ಪ್ರಜ್ವಲ್ – ಕಲಾತ್ಮಕ ಯೋಗಾಸನ ಹಾಗೂ ಪೃಥ್ವಿಚಾರ್ – ಸಂಪ್ರದಾಯಿಕ ಯೋಗಾಸನದಲ್ಲಿ ಚಿನ್ನದ ಪದಕ ಪಡೆದರು. ಜ್ಯೂನಿಯರ್ ಹುಡುಗಿಯರ ವಿಭಾಗದಲ್ಲಿ ಹಿಮಜ – ಸಂಪ್ರದಾಯಿಕ ಯೋಗಾಸನ ಹಾಗೂ ಅನನ್ಯ ಗುರವ್ – ಕಲಾತ್ಮಕ ಯೋಗಾಸನದಲ್ಲಿ ಚಿನ್ನ, ಸೀನಿಯರ್ ಹುಡುಗಿಯರ ವಿಭಾಗದಲ್ಲಿ ನಿರ್ಮಲ ಸುಭಾ? ಕೊಡ್ಲಿಕರ್ – ಸಂಪ್ರದಾಯಿಕ ಯೋಗಾಸನದಲ್ಲಿ ಚಿನ್ನದ ಪದಕ ಪಡೆಯುವುದರ ಮೂಲಕ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದರು. ಪದಕ ವಿಜೇತ ವಿದ್ಯಾರ್ಥಿಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಉಡುಪಿ: ಪ್ರಸಕ್ತ ಸಾಲಿನಲ್ಲಿ ಸಮಗ್ರ ಶಿಕ್ಷಣ ಯೋಜನೆಯಡಿ ಸಮನ್ವಯ ಶಿಕ್ಷಣ ಮಧ್ಯವರ್ತನ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ತಾತ್ಕಾಲಿಕವಾಗಿ ನೇರ ಗುತ್ತಿಗೆ ಅಡಿಯಲ್ಲಿ ವಿಶೇಷ ಶಿಕ್ಷಕರ ಸೇವೆಯನ್ನು ಪಡೆಯುವ ಸಲುವಾಗಿ ಜಿಲ್ಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದ ಖಾಲಿ ಇರುವ ಬಿ.ಐ.ಇ.ಆರ್.ಟಿ (ವಿಶೇಷ ಶಿಕ್ಷಕರ) ಹುದ್ದೆಗಳನ್ನು ನೇರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ನಿಗಧಿತ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 18 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಇವರ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಫಿಲಿಯೇಟೆಡ್ ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳನ್ನು ಪ್ರಾರಂಭಿಸಲು ಆಸಕ್ತಿ ಹೊಂದಿರುವ ಹಾಗೂ ಕರ್ನಾಟಕದ ಸೊಸೈಟಿ ನೊಂದಣಿ ಕಾಯ್ದೆಯಡಿಯಲ್ಲಿ ನೊಂದಾಯಿಸಲಾದ ಮಂಡಳಿಗಳು, ಸೊಸೈಟಿಗಳು ಹಾಗೂ ಟ್ರಸ್ಟ್ಗಳಿಂದ ಅರ್ಜಿ ಅಹ್ವಾನಿಸಿದೆ. ಆಸಕ್ತ ಸಂಸ್ಥೆಗಳು ಬಿ.ಎಸ್ಸಿ. (ಹಾನರ್ಸ್) ಕೃಷಿ, ಬಿ.ಟೆಕ್ ಕೃಷಿ ಇಂಜಿನಿಯರಿಂಗ್, ಬಿ.ಟೆಕ್. ಕೃಷಿ ಬಯೋಟೆಕ್ನಾಲಜಿ, ಬಿ.ಟೆಕ್. ಫುಡ್ ಟೆಕ್ನಾಲಜಿ, ಬಿ.ಎಸ್ಸಿ. (ಹಾನರ್ಸ್) ಅರಣ್ಯ, ಬಿ.ಎಸ್ಸಿ. (ಹಾನರ್ಸ್) ಕಮ್ಯೂನಿಟಿ ವಿಜ್ಞಾನ, ಬಿ.ಎಸ್ಸಿ. (ಹಾನರ್ಸ್) ಫುಡ್ ನ್ಯೂಟ್ರೀಶನ್ ಮತ್ತು ಡೈಯಟಿಕ್ಸ್, ಬಿ.ಎಸ್ಸಿ. (ಹಾನರ್ಸ್) ತೋಟಗಾರಿಕೆ ಮತ್ತು ಬಿ.ಎಸ್ಸಿ. (ಹಾನರ್ಸ್) ರೇಷ್ಮೆ ಕೃಷಿ ಪದವಿ ಪ್ರಾರಂಭಿಸಲು ಅರ್ಜಿ ಸಲ್ಲಿಸಬಹುದಾಗಿದೆ. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಅಫಿಲಿಯೇಶನ್‌ಗಾಗಿ ಕನಿಷ್ಟ ಮಾನದಂಡಗಳನ್ನು, ಹೆಚ್ಚಿನ ವಿವರ, ನಿಬಂಧನೆಗಳು ಮತ್ತು ಅರ್ಜಿಗಾಗಿ ವೆಬ್‌ಸೈಟ್ www.uahs.edu.in ಅನ್ನು ಸಂಪರ್ಕಿಸಬಹುದಾಗಿದೆ. ಅಫಿಲಿಯೇಶನ್‌ಗಾಗಿ ಅರ್ಜಿ ಸಲ್ಲಿಸಲು ಜುಲೈ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಗ್ರಾಮೀಣ ಭಾಗದ ಜನರಿಗೆ ನಿರಂತರ ಶುದ್ಧ ಕುಡಿಯುವ ನೀರು ಒದಗಿಸುವ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿಗಧಿತ ಕಾಲಾವಧಿಯ ಒಳಗೆ ಅದ್ಯತೆಯ ಮೇಲೆ ಕೈಗೊಂಡು ಶುದ್ಧ ನೀರನ್ನು ಒದಗಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಕೇಂದ್ರ ಜಲ ಜೀವನ್ ಮಿಷನ್ ಯೋಜನೆಯ ನೋಡೆಲ್ ಅಧಿಕಾರಿ ಆಶೀಶ್ ಕುಂದಾಲ್ ಅವರು ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಗ್ರಾಮೀಣ ಭಾಗದ ಜನರಿಗೆ ನಿರಂತರ ಶುದ್ಧ ಕುಡಿಯುವ ನೀರು ಒದಗಿಸುವ ಜಲ್ ಜೀವನ್ ನಳ ನೀರನ್ನು ಒದಗಿಸುವ ಕಾಮಗಾರಿ ಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ವಾರಾಹಿ ನದಿ ನೀರಿನ ಮೂಲದಿಂದ ಕಾರ್ಕಳ, ಹೆಬ್ರಿ ಹಾಗೂ ಕಾಪು ತಾಲೂಕಿನ 69 ಗ್ರಾಮಗಳ 1904 ವಾಸಸ್ಥಾನಗಳಿಗೆ ಕುಡಿಯುವ ನೀರನ್ನು ಒದಗಿಸುವ ಯೋಜನೆಯ ಕಾಮಗಾರಿಗಳನ್ನು ಮುಂಬರುವ ಡಿಸೆಂಬರ್ ಒಳಗೆ ಪೂರ್ಣಗೊಳಿಸಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ,ಜೂ.13: ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಜೂನ್ 15 ರಿಂದ ಸೆಪ್ಟಂಬರ್ 30ರ ವರೆಗೆ ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಓಡಾಟದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವ ಇರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಠಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ) (2) ಮತ್ತು (5) ರನ್ವಯ, ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯ ಮೂಲಕ ಜೂನ್ 15 ರಿಂದ ಸೆಪ್ಟಂಬರ್ 30 ರ ವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಭಾರಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಉಡುಪಿಯಿಂದ ತೀರ್ಥಹಳ್ಳಿಗೆ ಸಂಚರಿಸುವ ಭಾರಿ ವಾಹನಗಳು ಬದಲಿ ಮಾರ್ಗವಾಗಿ ಉಡುಪಿ – ಕುಂದಾಪುರ – ಸಿದ್ಧಾಪುರ – ಮಾಸ್ತಿಕಟ್ಟೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ರಿ. ಅಭಿಯೋಗ ಇಲಾಖೆ, ತಾಲೂಕು ಆಡಳಿತ ಹಾಗೂ ಕಾರ್ಮಿಕ ಇಲಾಖೆ ಕುಂದಾಪುರ, ಇವರ  ಸಂಯುಕ್ತ ಆಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿತು. ಕುಂದಾಪುರದ ಹೆಚ್ಚುವರಿ ಸಿವಿಲ್ ನ್ಯಾಯಧೀಶರು ಮತ್ತು ನ್ಯಾಯಿಕ ದಂಡಾಧಿಕಾರಿಗಳಾದ ಶ್ರುತಿ ಶ್ರೀ. ಎಸ್.   ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ನೀವು ವಾಸಿಸುಸುತ್ತಿರುವ ಸುತ್ತ ಮುತ್ತಲಿನ  ಪ್ರದೇಶದಲ್ಲಿ  ಯಾವುದೇ ಬಾಲ ಕಾರ್ಮಿಕರು ಕಂಡು ಬಂದಲ್ಲಿ ಪೋಷಕರಿಗೆ  ಮತ್ತು ಮಾಲೀಕರಿಗೆ ತಿಳಿವಳಿಕೆಯನ್ನು ನೀಡಿ ವಿದ್ಯಾರ್ಥಿಗಳನ್ನು ಶಾಲೆಗೆ ಸೇರಿಸುವಂತೆ ಪ್ರೇರೇಪಿಸಿ ಹಾಗೂ ಬಾಲ ಕಾರ್ಮಿಕ ಪದ್ಧತಿಯ ನಿರ್ಮೂಲನೆ ಕುರಿತು ಸಂಪೂರ್ಣ ವಾಗಿ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್‌ನ ಕಾರ್ಯದರ್ಶಿಗಳಾದ ಕೆ. ರಾಧಾಕೃಷ್ಣ ಶೆಣೈ ವಹಿಸಿದ್ದರು.   ವೇದಿಕೆಯಲ್ಲಿ ಕುಂದಾಪುರದ ಉಪ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಪುರಸಭಾ ವ್ಯಾಪ್ತಿಯ ಭಗತ್ ಸಿಂಗ್ ರಸ್ತೆಯಲ್ಲಿನ ಮಠದ ಬೆಟ್ಟುವಿನಲ್ಲಿ ಶುಕ್ರವಾರ ನಸುಕಿನ ಜಾವ ಸುರಿದ ಭಾರೀ ಗಾಳಿ-ಮಳೆಗೆ ಬೃಹತ್ ಅರಳಿ ಮರ ಮನೆಯೊಂದರ ಮೇಲೆ ಬಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಇಲ್ಲಿನ ನಿವಾಸಿ ವಸಂತಿ ದೇವಾಡಿಗ ಮನೆ ಮೇಲೆ ಮರ ಬಿದ್ದಿದ್ದು, ಮನೆಯ ಸ್ಲ್ಯಾಬ್ ಗೆ ಹಾನಿಯಾಗಿದೆ. ಪಕ್ಕದಲ್ಲೇ ಯಕ್ಷೇಶ್ವರಿ ದೇವಸ್ಥಾನವಿದ್ದು, ದೇವಸ್ಥಾನಕ್ಕೆ ತಾಗಿಕೊಂಡೆ ಮರ ಬಿದ್ದಿದೆ. ಟೇರಿಸ್ ಮನೆಯಾಗಿದ್ದರಿಂದ ಮಲಗಿದ್ದವರಿಗೆ ಯಾವುದೇ ಅಪಾಯ ಆಗಿಲ್ಲ. ಆದರೆ ಮನೆ ಎದುರು ಅಳವಡಿಸಲಾಗಿದ್ದ ಶೀಟ್ ನ ಮೇಲ್ಛಾವಣಿ ಸಂಪೂರ್ಣ ಹಾನಿಯಾಗಿದ್ದು, ಅದರ ಅಡಿ ನಿಲ್ಲಿಸಿದ್ದ ಎರಡು ಬೈಕ್‌ಗಳು ಹಾಗೂ ಕಾರಿಗೆ ಹಾನಿಯಾಗಿದೆ. ಮರ ವಿದ್ಯುತ್ ತಂತಿಯ ಮೇಲೆ ಬಿದ್ದಿದ್ದರಿಂದ ಮೂರ್ನಾಲ್ಕು ವಿದ್ಯುತ್ ಕಂಬಗಳು ತುಂಡಾಗಿ ಧರೆಗುರುಳಿವೆ. ಮನೆ ಹಾನಿಯಿಂದಾಗಿ ಅಂದಾಜು 2,00,000 ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಕುಂದಾಪುರ ಪುರಸಭೆಯ ಅಧಿಕಾರಿಗಳು, ಸಿಬ್ಬಂದಿಗಳು ಭೇಟಿ ನೀಡಿ ಮರ ತೆರವುಗೊಳಿಸಲು ಸಹಕರಿಸಿದ್ದಾರೆ. ವಿವಿದಡೆ ಹಾನಿ:ಕೋಟೇಶ್ವರ ಗ್ರಾಮದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಯಣ: ಸಿದ್ದಾಪುರ ಗ್ರಾಮದಲ್ಲಿ  ಹಣವನ್ನು ಪಣವಾಗಿರಿಸಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ಆಟ ಅಡುತ್ತಿದ್ದ ಜನರನ್ನು ಶಂಕರನಾರಾಯಣ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಶಂಭುಲಿಂಗಯ್ಯ ಎಮ್.ಇ ಅವರು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಬಂಧಿಸಿದ್ದಾರೆ. ಸಿದ್ದಾಪುರದ ಮಂಜುನಾಥ ಕಾಂಪ್ಲೆಕ್ಸ್‌ ಕಟ್ಟಡದ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ಆಟ ಅಡುತ್ತಿದ್ದ ಬಗ್ಗೆ ಮಾಹಿತಿ ಮೇರೆಗೆ ಶಂಕರನಾರಾಯಣ ಪೊಲೀಸರು ಆರೋಪಿಗಳಾದ ಸುಬ್ರಹ್ಮಣ್, ಅಶ್ರಫ್, ಸುನೀಲ್, ಧೀರಜ್, ಶಂಕರ, ಸುಧೀರ್ ಕುಮಾರ, ಮಧುಕರ, ಮನೋಹರ, ಗಣೇಶ ಹಾಗೂ ರಾಮ ಎಂಬುವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಅಂದರ್ – ಬಾಹರ್ ಜುಗಾರಿ ಆಟಕ್ಕೆ ಬಳಸಿದ ನಗದು ಹಣ 8,810/-ರೂಪಾಯಿ, 10 ಮೊಬೈಲ್ ಪೋನ್ ಗಳು, ಇಸ್ಪೀಟ್ ಜೂಜಾಟ ಆಡಲು ಬಂದಿದ್ದ ಬೈಕ್‌ಗಳು, ಇಸ್ಪೀಟ್ ಎಲೆಗಳು, ಪ್ಲಾಸ್ಟೀಕ್ ಕುರ್ಚಿಗಳು, ಒಂದು ಪ್ಲಾಸ್ಟೀಕ್ ಟೇಬಲ್, ಕಪ್ಪು ಮತ್ತು ಕೇಸರಿ ಬಣ್ಣ ಮಿಶ್ರಿತ ಬಟ್ಟೆ ಹಾಗೂ ಒಂದು ಮೇಣದ ಬತ್ತಿಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸೇವೆ ಉತ್ತಮ ಆಡಳಿತ ಮತ್ತು ಬಡವರ ಕಲ್ಯಾಣದ ಮೋದಿ ಸರ್ಕಾರದ 11ನೇ ವರ್ಷ ಆಚರಣೆಯ ಅಂಗವಾಗಿ ಕುಂದಾಪುರದ ಬಿಜೆಪಿ ಕಾರ್ಯಾಲಯದಲ್ಲಿ ಕುಂದಾಪುರ ಕ್ಷೇತ್ರ ಮಟ್ಟದ ಕಾರ್ಯಗಾರ ನಡೆಯಿತು. ಕಾರ್ಯಗಾರ ಆರಂಭಕ್ಕೂ ಮುನ್ನ ಗುಜರಾತ್ ಅಹಮದಾಬಾದ್ ನಲ್ಲಿ ನಡೆದ ವಿಮಾನ ದುರಂತದಲ್ಲಿ ಮೃತಪಟ್ಟವರನ್ನು ಒಂದು ನಿಮಿಷಗಳ ಕಾಲ ಮೌನ ಆಚರಣೆ ನಡೆಸಿದರು. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ  ಶ್ರೀನಿವಾಸ್ ಪೂಜಾರಿ ಅವರು ಮಾತನಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ತನ್ನ 11 ವರ್ಷ ಆಡಳಿತವನ್ನು ಪೂರ್ಣಗೊಳಿಸಿದ್ದು, ದೇಶಾದ್ಯಂತ ವಿಶೇಷ ಕಾರ್ಯಕ್ರಮಗಳು ಕೂಡ ನಡೆಯುತ್ತಿದ್ದು ಈ ಯೋಜನೆ ಕೇಂದ್ರ ಸರ್ಕಾರದ ಸಾಧನೆಗಳು ಮತ್ತು ಯೋಜನೆಗಳ ಬಗ್ಗೆ ಜನರಿಗೆ ತಿಳಿಸುವ ಉದ್ದೇಶ ಈ ಕಾರ್ಯಗಾರ ಎಂದು ಕೇಂದ್ರ ಸರಕಾರದ ಜನಪರ ಯೋಜನೆಗಳ ಬಗ್ಗೆ ಮನೆ ಮನೆಗಳಿಗೆ ಮಾಹಿತಿ ನೀಡಿ, ಸಮರ್ಪಕವಾಗಿ ಯೋಜನೆ ತಲುಪುವಂತಾಗಬೇಕು ಎಂದು ಕಾರ್ಯಕರ್ತರಿಗೆ ತಿಳಿಸಿದ್ದರು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ…

Read More