ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗೋಡಾನ್ನಲ್ಲಿ ಇರಿಸಲಾದ ಸಾವಿರಾರು ರೂ. ಮೌಲ್ಯದ ಅಡಿಕೆ ತುಂಬಿದ ಚೀಲಗಳನ್ನು ಕಳ್ಳರುಕಳವು ಮಾಡಿರುವ ಘಟನೆ ಇಲ್ಲಿನ ಯಡ್ತರೆ ಗ್ರಾಮದ ಹಡಿನಗದ್ದೆ ಎಂಬಲ್ಲಿ ನಡೆದಿದೆ. ಮಸೂದ್ ಪಟೇಲ್ ಎಂಬವರು ಸುಮಾರು 200 ಚೀಲ ಒಣಗಿಸಿದ ಸಿಪ್ಪೆಅಡಿಕೆಯನ್ನು ಪ್ಯಾಸ್ಟಿಕ್ ಚೀಲದಲ್ಲಿ ಹಾಕಿ ಚೀಲ ಮಾಡಿ ಗೋಡೌನ್ನಲ್ಲಿ ಇಟ್ಟಿದ್ದು, ಮೇ. 15ರಿಂದ ಮೇ. 22ರ ಮಧ್ಯಾವದಿಯಲ್ಲಿ ಗೋಡೌನ್ ಬೀಗ ಮುರಿದು ಒಳನುಗ್ಗಿದ ಕಳ್ಳರು, 200 ಚೀಲ ಒಣಗಿಸಿದ ಸಿಪ್ಪೆಅಡಿಕೆಯನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮರಳುಗಾರಿಕೆಗೆ ಬಳ್ಕೂರು ಉಪ್ಪು ನೀರು ಸಂಗ್ರಹ ಆಣೆಕಟ್ಟು ಮತ್ತು ಕಂಡ್ಲೂರು ಸೇತುವೆ ನಡುವೆ ಅವಕಾಶ ನೀಡಬಾರದು ಎಂದು ಬಸ್ರೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ತಾಲ್ಲೂಕು ರೈತ ಮುಖಂಡ ಕೆ. ವಿಕಾಸ್ ಹೆಗ್ಡೆ ಆಗೃಹಿಸಿದ್ದಾರೆ. ಬಳ್ಕೂರು ಬಳಿ ವರಾಹಿ ನೀರಾವರಿ ನಿಗಮದಿಂದ ನಿರ್ಮಾಣಗೊಂಡಿರುವ ಉಪ್ಪು ನೀರು ತಡೆ ಆಣೆಕಟ್ಟುವಿನಿಂದ ಕುಂದಾಪುರ ಪುರಸಭೆ ಮಾತ್ರವಲ್ಲದೆ ಸುಮಾರು ಹತ್ತಕ್ಕೂ ಹೆಚ್ಚು ಗ್ರಾಮ ಪಂಚಾಯತ್ ಗಳಿಗೆ ಶುದ್ಧ ಕುಡಿಯುವ ಸಿಹಿ ನೀರು ದೊರಕುತ್ತಿದ್ದು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಈ ಭಾಗದಲ್ಲಿ ಮರಳುಗಾರಿಕೆಗೆ ಅವಕಾಶ ನೀಡಿದಲ್ಲಿ ಈ ಉಪ್ಪು ನೀರು ತಡೆ ಆಣೆಕಟ್ಟುವಿನ ಸ್ವಯಂ ಚಾಲಿತ ಗೇಟ್ ಹಾಗೂ ಪಿಲ್ಲರ್ ಗಳಿಗೆ ಹಾನಿಯಾಗಲಿದೆ. ಹಾಗೂ ಈ ಆಣೆಕಟ್ಟುವಿನ ಮೇಲ್ಬಾಗದಲ್ಲಿ ಕಂಡ್ಲೂರು ಸೇತುವೆಯಿದ್ದು ಅದು ಈಗಾಗಲೇ ಶಿಥಿಲಗೊಂಡಿದ್ದು ಇಲ್ಲಿ ಮರಳುಗಾರಿಕೆಗೆ ಅವಕಾಶ ನೀಡಿದರೆ ಈ ಸೇತುವೆ ಕೂಡ ಕುಸಿಯುವ ಭೀತಿಯಿದೆ. ಮಾನ್ಯ ಸರ್ವೋಚ್ಚ ನ್ಯಾಯಾಲಯದ ಹಸಿರು ಪೀಠ ಆಣೆಕಟ್ಟು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಒಟ್ಟಾರೇ ಶೇ. 35ರಷ್ಟು ಅಂಕಗಳನ್ನು ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಉಡುಪಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶ ಬಯಸುವ ಅಭ್ಯರ್ಥಿಗಳು ಸಂಸ್ಥೆಯಲ್ಲಿ ಭರ್ತಿಯಾಗದೇ ಉಳಿದಿರುವ ಸೀಟುಗಳಿಗೆ, ಮೂಲ ದಾಖಲೆಯೊಂದಿಗೆ ಸಂಸ್ಥೆಗೆ ಭೇಟಿ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ದೂರವಾಣಿ ಸಂಖ್ಯೆ: 0820-2570244 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶದ ಪ್ರತಿಷ್ಠಿತ ಆರ್ಕಿಟೆಕ್ಚರ್ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ.(ಬಿ. ಆರ್ಕ್ )2025 ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಮೋಹಿತ್-99.40 ಪರ್ಸೆಂಟೈಲ್ ನೊಂದಿಗೆ ಬಿ. ಆರ್ಕ್ ಮತ್ತು ಬಿ. ಪ್ಲಾನಿಂಗ್ ಎರಡರಲ್ಲೂ ರಾಷ್ಟ್ರಕ್ಕೆ ಕೆಟಗರಿ ವಿಭಾಗದಲ್ಲಿ ಆರನೇ ರ್ಯಾಂಕ್ ಗಳಿಸಿ ವಿಶಿಷ್ಟಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ತೇಜಸ್ ವಿ. ನಾಯಕ್ (ಎಐಆರ್ 101), ಟಿ. ಪ್ರದೀಪ್ (ಎಐಆರ್ 117), ಮೋನಿಕಾ ಕೆ. ಎ (ಎಐಆರ್ 140), ಸುಧಾಂಶು ಪಾಲೇಕರ್ (ಎಐಆರ್ 268), ಪ್ರತಿಕ್ ಎನ್. ಶೆಟ್ಟಿ (ಎಐಆರ್ 362), ತ್ರಿಶ್ಲಾ ಗಾಂಧಿ (ಎಐಆರ್ 423), ರೋಹಿತ್ ಜಿ. ಬಿ. (ಎಐಆರ್ 461), ಸಾಚಿ ಶಿವಕುಮಾರ್ (ಎಐಆರ್ 484), ಚಿನ್ಮಯಿ ಆರ್ (ಎಐಆರ್ 519), ಮನೋಜ್ ಎಂ. ಆರ್ (ಎಐಆರ್ 846), ಚೇತನ್ ಗೌಡ (ಎಐಆರ್ 867), ಆಕಾಶ್ ದೇವಾಡಿಗ (ಎಐಆರ್ 980) ಕೆಟಗರಿ ವಿಭಾಗದಲ್ಲಿ ರ್ಯಾಂಕ್ ಗಳಿಸಿದ್ದಾರೆ. 500…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ, ಹಾಗೂ ಎನ್.ಸಿ.ಸಿ. ಘಟಕಗಳ ಸಂಯುಕ್ತ ಆಶ್ರಯದಲ್ಲಿ ಇಂಡಿಯನ್ ರೆಡ್ಕ್ರಾಸ್ ಸೊಸೈಟಿ, ಕುಂದಾಪುರ, ಹಾಗೂ ಲಯನ್ಸ್ ಕ್ಲಬ್ ಕುಂದಾಪುರ ಇವರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಶುಕ್ರವಾರದಂದು ಜರಗಿತು. ಇಂಡಿಯನ್ ರೆಡ್ ಕ್ರಾಸ್ ಕುಂದಾಪುರ ಘಟಕದ ಸಭಾಪತಿ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ, ರಕ್ತದಾನದ ಮಹತ್ವ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ರಕ್ತನಿಧಿ ಕೇಂದ್ರದ ಕಾರ್ಯವೈಖರಿಯ ಕುರಿತು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್ ಕ್ಲಬ್ನ ಅಧ್ಯಕ್ಷ ಪ್ರಜ್ಞೇಶ ಪ್ರಭು, ಕಾರ್ಯದರ್ಶಿ ಡಾ. ರವೀಂದ್ರ, ಸದಸ್ಯರಾದ ನವೀನ್ ಶೆಟ್ಟಿ, ರಾಧಾಕೃಷ್ಣ ಶೆಟ್ಟಿ, ಡಾ. ಜಯರಾಮ್ ನಂಬಿಯಾರ್, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಘಟಕದ ಕಾರ್ಯದರ್ಶಿ ಸತ್ಯನಾರಾಯಣ್ ಪುರಾಣಿಕ್, ಖಜಾಂಚಿ ಶಿವರಾಮ್ ಶೆಟ್ಟಿ, ಸದಸ್ಯರಾದ ಸೀತರಾಮ್ ಶೆಟ್ಟಿ, ಎ. ಮುತ್ತಯ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ಥಳೀಯ ವೆಸ್ಟ್ ಬ್ಲಾಕ್ ರಸ್ತೆ ನಿವಾಸಿ ಸಯ್ಯದ್ ಮೊಹಮ್ಮದ್ ಹಾರೀಸ್ (78) ಅವರು ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ನಿಧನ ಹೊಂದಿದ್ದಾರೆ. ಅನಿವಾಸಿ ಭಾರತೀಯರಾಗಿದ್ದ ಅವರು 5ದಶಕ ಗಳಿಂದ ವಿದೇಶದಲ್ಲಿ ಉದ್ಯಮ ನಡೆಸುತ್ತಿದ್ದರು. ಆ ಕಾಲದಲ್ಲಿ ಹಲವಾರು ಯುವಕರನ್ನು ವಿದೇಶಕ್ಕೆ ಕರೆದೊಯ್ದು ಅವರ ಭವಿಷ್ಯವನ್ನು ರೂಪಿಸಿದ ಇವರು ಸಮಾಜಮುಖಿಯಾಗಿಯೂ ಕೊಡುಗೈ ದಾನಿಯಾಗಿದ್ದರು. ಮೃತರು ಮೂವರು ಪುತ್ರರು ಹಾಗೂ ಪತ್ನಿಯನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗ್ರಾಮೀಣ ಭಾಗದ ಜನರಿಗೆ ಆಸ್ಪತ್ರೆಗೆ ಹೋಗಲು ಕಷ್ಟ ಆಗುತ್ತದೆ ಹಾಗಾಗಿ ಸಾರ್ವಜನಿಕರಿಗೆ ಅನುಕೂಲವಾಗಲು ಸರ್ಕಾರವು ಉಚಿತ ಕ್ಯಾಂಪ್ ಗಳನ್ನು ನಡೆಸುತ್ತವೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು. ಇಂದು ತಪ್ಪಾದ ಜೀವನ ಶೈಲಿ ಹಾಗೂ ಆಹಾರ ಪದ್ಧತಿಯಿಂದ ಅನೇಕ ಕಾಯಿಲೆಗಳು ಬರುತ್ತವೆ ಅದಕ್ಕಾಗಿ ನಮ್ಮ ಸುತ್ತಮುತ್ತಲ ಬೆಳೆದ ತರಕಾರಿ, ಹಣ್ಣು, ಹಂಪಲುಗಳನ್ನು ಉಪಯೋಗಿಸಬೇಕು. ಅಲ್ಲದೆ ದೀರ್ಘಕಾಲಿನ ಕೆಲವು ಕಾಯಿಲೆಗಳಿಗೆ ಆಯುರ್ವೇದದಲ್ಲಿ ಉತ್ತಮ ಪರಿಹಾರಗಳವೆ ಈ ನಿಟ್ಟಿನಲ್ಲಿ ಉತ್ತಮ ಕಾರ್ಯನಿರ್ವಹಿಸುತ್ತಿರುವ ಕಾಲ್ತೋಡು ಆಯುರ್ವೇದ ಆಸ್ಪತ್ರೆಯ ಪ್ರಯೋಜನ ಪಡೆದುಕೊಳ್ಳಿ ಎಂದು ಕುಂದಾಪುರ ತಾಲೂಕಿನ ಆರೋಗ್ಯ ಅಧಿಕಾರಿಗಳಾದ ಡಾ. ಪ್ರೇಮಾನಂದ್ ಹೇಳಿದರು. ಅವರು ಉಡುಪಿಯ ಆಯುಷ್ ಇಲಾಖೆ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕಾಲ್ತೋಡು ಗ್ರಾಮ ಪಂಚಾಯತ್ , ಕಾಲ್ತೋಡು ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ, ಕಾಲ್ತೋಡು ಆಯುಷ್ಮಾನ್ ಆರೋಗ್ಯ ಮಂದಿರ (ಆಯುಷ್), ಪ್ರಾಥಮಿಕ ಆರೋಗ್ಯ ಕೇಂದ್ರ ಕಿರಿಮಂಜೇಶ್ವರ, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದುಮನೆ ಇವರ ಸಂಯುಕ್ತ ಆಶ್ರಯದಲ್ಲಿ ಕಾಲ್ತೋಡು ಸರಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೌದ್ಧಿಕ ಚಟುವಟಿಕೆಗಿಂತ ಹೆಚ್ಚಾಗಿ ಪ್ರಾಪಂಚಿಕ ಜ್ಞಾನಕ್ಕೆ ಹೆಚ್ಚು ಒತ್ತು ಕೊಟ್ಟು ದೇಶಭಕ್ತಿ, ತಾಯಿ-ತಂದೆ, ಗುರು ಹಿರಿಯರಿಗೆ ಗೌರವಕೊಡುವ ಸಂಸ್ಕೃತಿಯನ್ನು ಇಂದಿನ ಯುವಜನತೆ ಪಾಲಿಸಬೇಕಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಕಾರ್ಕಳ ಘಟಕದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಹೇಳಿದರು. ಅವರು ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಅಂಚೆ ಕೋಟೇಶ್ವರ ಇಲ್ಲಿನ 18ನೇ ವಾರ್ಷಿಕೋತ್ಸವದಲ್ಲಿ ಮಾತನಾಡಿದರು. ಪದವಿಯಿಂದ ಪುರುಷಾರ್ಥವಲ್ಲ, ಬದಲಿಗೆ ನಮ್ಮ ವ್ಯಕ್ತಿತ್ವದಿಂದಲೇ ನಾವು ಪಡೆದ ಜ್ಞಾನದ ಬೆಳಕು ನಮ್ಮ ಬದುಕನ್ನು ಬೆಳಗುತ್ತದೆ. ಪ್ರತಿಕೂಲ ಪರಿಸ್ಥಿತಿಯಲ್ಲಿಯೂ ಧೈರ್ಯ ಗುಂದದೆ ಆತ್ಮವಿಶ್ವಾಸದಿಂದ ಮುನ್ನುಗ್ಗಿ ಕಷ್ಟದ ದಾರಿಯನ್ನು ತಾಳ್ಮೆಯಿಂದ ಕ್ರಮಿಸಬೇಕು. ಸೂಕ್ತ ನಿರ್ಧಾರ ತೆಗೆದುಕೊಂಡು ಜೀವನೋತ್ಸಾಹದಿಂದ ಆತ್ಮ ಗೌರವವನ್ನು ವೃದ್ಧಿಸಿಕೊಳ್ಳಬೇಕು. ನಮ್ಮ ಬದುಕನ್ನು ಬದಲಾಯಿಸಿಕೊಳ್ಳುವ ಬಲ ನಮ್ಮೊಳಗೇ ಇದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಮಾತನಾಡಿ, ಶಿಕ್ಷಣವೆಂದರೆ ಮಾನವರಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಳೆಗಾಲದ ಬಳಿಕ ನಿರ್ಮಾಣ ಚಟುವಟಿಕೆಗೆ ಪೂರಕವಾಗಿ ಕಡಿಮೆ ದರದಲ್ಲಿ ಗುಣಮಟ್ಟದ ಮರಳು ಜನರ ಬೇಡಿಕೆಗೆ ತಕ್ಕಂತೆ ಪೂರೈಕೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಅವರು ಅಂದು ಜಿಲ್ಲಾ ವ್ಯಾಪ್ತಿಯ ಮರಳು ಸಮಸ್ಯೆಯ ಬಗ್ಗೆ ಮಣಿಪಾಲ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿಯ ಕೋರ್ಟ್ ಹಾಲ್ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮರಳುಗಾರಿಕೆಗೆ ಅರ್ಜಿ ಸಲ್ಲಿಸಿದ 48 ಗಂಟೆಯೊಳಗೆ ಪರಿಶೀಲಿಸಬೇಕು ಎಂದರು. ಗಣಿ ಮತ್ತು ಭೂ ವಿಜ್ಙಾನ ಇಲಾಖೆಯ ಹಿರಿಯ ಭೂ ವಿಜ್ಙಾನಿ ಸಂದೀಪ್ ಮಾತನಾಡಿ, 118 ಗ್ರಾಪಂಗಳಲ್ಲಿ ಮರಳು ತೆರವಿಗೆ ಅವಕಾಶವಿದ್ದರೂ 37 ಗ್ರಾಪಂಗಳಿಗೆ ಆಶಯ ಪತ್ರ ನೀಡಿದ್ದು, 28 ಬ್ಲಾಕ್ ಗಳಲ್ಲಿ ಸ್ಥಳೀಯವಾಗಿ ಸಮಸ್ಯೆಯಿದೆ. ಇನ್ನೂ 20 ಗ್ರಾಪಂ. ಗಳಿಗೆ ರಾಯಧನ ಶೇ.25 ಪಾಲು ಆದಾಯ ದೊರತೆರೂ ಪಿಡಿಒಗಳು ಸ್ಥಳೀಯ ರಾಜಕೀಯ, ಲೋಕಾಯುಕ್ತಕ್ಕೆ ವಿನಾಕೃಣ ದೂರಿನ ಹಿನ್ನಲೆಯಲ್ಲಿ ಬ್ಯಾಕ್ ಮರಳುಗಾರಿಕೆ ಅವಕಾಶಕ್ಕಾಗಿ ಹಿಂದೇಟು ಹಾಕುತ್ತಿದ್ದಾರೆ ಎಂದರು. ಸರಕಾರಿ ಕಾಮಗಾರಿಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ತಾಲೂಕಿನ ಸಿದ್ದಾಪುರ ಗ್ರಾಮದ ಕೊಡ್ಸನಬೇರು ಎಂಬಲ್ಲಿ ಪಿಕ್ಅಪ್ ವಾಹನವೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಮೃತರನ್ನು ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಸುರೇಶ್ ಕುಮಾರ್(61) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇವರ ಅಣ್ಣ ಡಾ. ಸುನೀತ್ ಕುಮಾರ್, ತಂಗಿ ಸುಜಾತ ಹಾಗೂ ತಂಗಿ ಮಗಳು ಶ್ರೀಲಕ್ಷ್ಮೀ ಎಂಬವರು ಗಾಯಗೊಂಡಿದ್ದು, ಇವರಲ್ಲಿ ಸುಜಾತ ಹಾಗೂ ಶ್ರೀಲಕ್ಷ್ಮೀ ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರೆಲ್ಲ ಡಾ. ಸುನೀತ್ ಕುಮಾರ್ ಮಗನ ಮದುವೆಯ ಬೀಗರ ಊಟ ಕಾರ್ಯಕ್ರಮಕ್ಕೆ ಸಾಗರದ ಸಿಂಗಧೂರು ಎಂಬಲ್ಲಿಗೆ ಹೊರಟಿದ್ದು ಕಾರನ್ನು ಪರೀಕ್ಷಿತ್ ಚಲಾಯಿಸುತ್ತಿದ್ದರು. ಸಿದ್ದಾಪುರದಲ್ಲಿ ಉಳಿದ ಎರಡು ಕಾರುಗಳನ್ನು ಕೂಡಿಕೊಂಡು ಸಾಗರದ ಕಡೆಗೆ ಹೋಗುತ್ತಿದ್ದಾಗ ಹೊಸಂಗಡಿ ಕಡೆಯಿಂದ ಬಂದ ಪಿಕ್ಅಪ್ ವಾಹನ ಕಾರಿಗೆ ಢಿಕ್ಕಿ ಹೊಡೆಯಿತು. ಇದರ ಪರಿಣಾಮ ಕಾರಿನಲ್ಲಿದ್ದವರು ಗಾಯಗೊಂಡಿದ್ದು, ಇದರಲ್ಲಿ ಗಂಭೀರವಾಗಿ ಗಾಯಗೊಂಡ ಸುರೇಶ್ ಕುಮಾರ್ ಕುಂದಾಪುರ ಸರಕಾರಿ…
