ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯ ಬ್ರಹ್ಮಾವರದ ಡಿಪ್ಲೊಮಾ ಕೃಷಿ ಮಹಾವಿದ್ಯಾಲಯದಲ್ಲಿ ಎರಡು ವರ್ಷಗಳ ಕೃಷಿ ಡಿಪ್ಲೊಮಾ ಕೋರ್ಸ್ಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನಿಷ್ಠ ಶೇ.45 ಅಂಕಗಳೊಂದಿಗೆ ಉತ್ತೀರ್ಣರಾಗಿರುವ, 19 ವರ್ಷ ವಯಸ್ಸು ಮೀರದ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ www.uahs.edu.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 6 ಕೊನೆಯ ದಿನ. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50 ರಷ್ಟು ಮೀಸಲಾತಿ ಇರುತ್ತದೆ. ಎರಡು ವರ್ಷದ ಡಿಪ್ಲೋಮಾ ಕೋರ್ಸ್ನಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಹೈನುವಿಜ್ಞಾನ, ರೇಷ್ಮೆಕೃಷಿ, ಜೇನು ಕೃಷಿ ಹೀಗೆ ಕೃಷಿಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ನುರಿತ ವಿಜ್ಞಾನಿಗಳಿಂದ ಭೋದನೆ ಮಾಡಲಾಗುವುದು ಹಾಗೂ ಕೃಷಿ ರಂಗದ ಪ್ರಾಯೋಗಿಕ ಪರಿಚಯ / ಅನುಭವ ಆಧಾರಿತ ಕಲಿಕೆಗೆ ಹೆಚ್ಚಿನ ಮಹತ್ವ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗ ಅಥವಾ ಪ್ರಾಂಶುಪಾಲರು,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ (ರಾಜ್ಯ ಪಠ್ಯಕ್ರಮ) ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮೇ 19 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://dom.karnataka.gov.in ಅಥವಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ : 8277799990 ಗೆ ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಂಬದಕೋಣೆಯ ಹಳಗೇರಿ ಗ್ರಾಮದ ಶ್ರೀ ಬೊಬ್ಬರ್ಯ ಮತ್ತು ಉಮ್ಮಲ್ತಿ ಹಾಗೂ ಸಪರಿವಾರ ದೈವಸ್ಥಾನದ 4ನೇ ವರ್ಷದ ವರ್ಧಂತ್ಯೋತ್ಸವ ಮೇ.14 ಬುಧವಾರದಂದು ನಡೆಯಲಿದೆ. ಅಂದು ಬೆಳಿಗ್ಗೆ ಗಂಟೆ 8.00ರಿಂದ ನಾಗದೇವರಿಗೆ ಶುದ್ಧಕಲಶಾಭಿಷೇಕ, ಸಂಜೆ ಗಂಟೆ 4.00ರಿಂದ ಶ್ರೀ ಬೊಬ್ಬರ್ಯ ಮತ್ತು ಉಮ್ಮಲ್ತಿ ಹಾಗೂ ಸಪರಿವಾರ ದೈವಗಳ ಕಲಾಭಿವೃದ್ಧಿಹೋಮ ನಡೆಯಲಿರುವುದು ಹಾಗೂ ರಾತ್ರಿ ಗಂಟೆ 8.00 ರಿಂದ ಅನ್ನಸಂತರ್ಪಣೆ ಜರುಗಲಿರುವುದು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ರಾತ್ರಿ ಗಂಟೆ 8.00 ರಿಂದ 9.30 ರವರೆಗೆ ಮನು ಹಂದಾಡಿ ಮತ್ತು ಬಳಗದವರಿಂದ ಹಾಸ್ಯ ನಗೆಸಂಜೆ ಕಾರ್ಯಕ್ರಮ ಜರುಗಲಿರುವುದು. ಬಳಿಕ 9.30ರಿಂದ 10.30ರವರೆಗೆ ಸಂಗೀತ ರಸಮಂಜರಿ ಕಾರ್ಯಕ್ರಮ ಜರುಗಲಿರುವುದು. ರಾತ್ರಿ ಗಂಟೆ 10.30ರಿಂದ 12.00ರ ವರೆಗೆ ಸ್ಥಳೀಯ ನೃತ್ಯ ವೈಭವ ಕಾರ್ಯಕ್ರಮ ಜರುಗಲಿರುವುದು ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶದ ಯೋಧರ ಯಶಸ್ವಿಯ ಕಾರ್ಯಾಚರಣೆಗಾಗಿ ಹಾಗೂ ಸೇನೆಯ ಶಕ್ತಿ ಇನ್ನಷ್ಟು ಹೆಚ್ಚಲಿ ಎಂದು ಸಮಸ್ತ ವೀರ ಯೋಧರಿಗಾಗಿ ವಿಶೇಷ ಪೂಜಾ ಕಾರ್ಯಕ್ರಮ ಇಂದು ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲದ ನೇತೃತ್ವದಲ್ಲಿ ಪೆಹೆಲ್ಗಾಂ ಅಮಾಯಕರ ಹತ್ಯೆಮಾಡಿದ ಪಾಕಿಸ್ಥಾನದ ಪಾಪಿಗಳ ಮೇಲೆ ಪ್ರತಿಕಾರ ಮಾಡಿದ ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರದ ಕಾರ್ಯದ ಅಂಗವಾಗಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಆನೆಗುಡ್ಡೆ ಕುಂಬಾಶಿಯಲ್ಲಿ ಭಾರತೀಯ ಯೋಧರ ಯಶಸ್ವಿಗಾಗಿ ಪೂಜಾಕಾರ್ಯ ನೆರವೇರಿತು. ಕಾರ್ಯಕ್ರಮದಲ್ಲಿ ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲದ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ,, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಧೀರ್.ಕೆ.ಎಸ್., ಮಂಡಲ ಉಪಾಧ್ಯಕ್ಷರಾದ ಪ್ರಕಾಶ್ ಜಿ. ಪೂಜಾರಿ, ಸುನಿಲ್ ಶೆಟ್ಟಿ ಹೇರಿಕುದ್ರು, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರ್, ಅನಿತಾ ಶ್ರೀಧರ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರಸಾದ್ ಬಿಲ್ಲವ, ಮಂಡಲ ಕಾರ್ಯದರ್ಶಿ ರಾಜೇಶ್ ಶೆಟ್ಟಿ, ನೇತ್ರಾವತಿ ಮಡಿವಾಳ,, ಮನೀಶ್ ಬೀಜಾಡಿ,, ಓಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಕಾಂಚನ್ ಸಂಗಮ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರಸ್ತುತ ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳು ಗುರು ಮುಖೇನ ಸರಿಯಾದ ಜ್ಞಾನಾರ್ಜನೆಯೊಂದಿಗೆ ಲಭ್ಯ ಅವಕಾಶಗಳ ಸದ್ಬಳಕೆಯಿಂದ ತಮ್ಮ ಕೌಶಲ್ಯ, ಪ್ರತಿಭೆಯನ್ನು ಪರಿಶ್ರಮ, ನಿಷ್ಠೆಯಿಂದ ಉದ್ದೀಪನಗೊಳಿಸಿಕೊಂಡರೆ ತಾವುಗಳಿಸಿದ ವಿದ್ಯೆಯ ವರ್ಚಸ್ಸು ಅಧಿಕವಾಗುತ್ತದೆ ಎಂದು ಉಡುಪಿ ಆಕಾಶ್ ಇನ್‌ಸ್ಟಿಟ್ಯೂಟ್ ಹಿರಿಯ ಉಪನ್ಯಾಸಕ ಹಾಗೂ ಖ್ಯಾತ ಯಕ್ಷಗಾನ ಕಲಾವಿದರಾದ ಡಾ. ಪ್ರದೀಪ ವಿ. ಸಾಮಗ ನುಡಿದರು ಅವರು ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ, ಅಂಚೆ ಕೋಟೇಶ್ವರ ಇಲ್ಲಿ ಪ್ರತಿಭಾ ದಿನಾಚರಣೆ ಸಿಂಚನ ಅಂತರ್ ತರಗತಿ ಪ್ರತಿಭಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಶಿಸ್ತು ಬದ್ಧರಾಗಿ ಉತ್ಸಾಹದಿಂದ ಆಲಿಸುವ ಮನೋಭಾವ ಹಾಗೂ ಸುಸಂಸ್ಕೃತ ನಡವಳಿಕೆ ಹೊಂದುವ ಮೂಲಕ ಭಾರತೀಯ ಸಂಸ್ಕೃತಿಯನ್ನು ಎತ್ತಿಹಿಡಿಯಬೇಕು. ಪಠ್ಯದೊಂದಿಗೆ ಪಠ್ಯ ಪೂರಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಉತ್ಕೃಷ್ಠ ಜೀವನ ಮೌಲ್ಯಗಳನ್ನು ರೂಢಿಸಿಕೊಂಡರೆ ಉಜ್ವಲ ಭವಿಷ್ಯ ಸಾಧ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿಗಾಗಿ, ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಒಟ್ಟಾರೆ ಶೇ. 35 ರಷ್ಟು ಅಂಕ ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಉಡುಪಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶ ಬಯಸುವ ಅಭ್ಯರ್ಥಿಗಳು ಸಂಸ್ಥೆಯಲ್ಲಿ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ಸಂಸ್ಥೆ ದೂ.ಸಂಖ್ಯೆ: 0820-2570244 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಶಿಕ್ಷಕರಾಗಿ ಸ್ಕೌಟ್ಸ್ ಮತ್ತು ಗೈಡ್ಸ್ ನಂತಹ ಸಂಸ್ಥೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವುದರಿಂದ ನಿಮ್ಮ ವ್ಯಕ್ತಿತ್ವ ವಿಕಸನಗೊಂಡು ವಿದ್ಯಾರ್ಥಿಗಳಿಗೂ ನೀವು ಮಾದರಿಯಾಗಬಲ್ಲಿರಿ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟೀ ವಿವೇಕ್ ಆಳ್ವ ಹೇಳಿದರು. ಅವರು ಕುವೆಂಪು ಸಭಾಂಗಣದಲ್ಲಿ ನಡೆದ ರಾಜ್ಯದ ಮೊದಲ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ರೇಂಜರ್ಸ್ ಘಟಕದ ಉದ್ಘಾಟನಾ ಸಮಾರಂಭದ ಉದ್ಘಾಟಕರಾಗಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಶಿಕ್ಷಕರನ್ನು ಅನುಕರಿಸುವುದು ಸರ್ವೇ ಸಾಮಾನ್ಯ. ಹಾಗಾಗಿ ರೇಂಜರ್ಸ್ ಘಟಕದಲ್ಲಿ ಸೇವಾ ಮನೋಭಾವವದಿಂದ ತೊಡಗಿಸಿಕೊಂಡು, ಮುಂದಿನ ಪೀಳಿಗೆಗೂ ಕೂಡಾ ಪ್ರೇರಣೆಯಾಗಿ ಎಂದರು. ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಸಿಗುವ ಹತ್ತು ಹಲವು ಚಟುವಟಿಕೆಗಳು ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ. ಪ್ರತಿ ಶಾಲಾ ಕಾಲೇಜುಗಳಲ್ಲಿ ಕೂಡಾ ಸ್ಕೌಟ್ಸ್ ಮತ್ತು ಗೈಡ್ಸ್, ರೇಂಜರ್ಸ್ ರೋವರ್ಸ್, ಕಬ್ಸ್- ಬುಲ್‌ಬುಲ್ಸ್ ಘಟಕಗಳನ್ನು ಪ್ರಾರಂಭಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಗ್ರಾಮ ಪಂಚಾಯತ್ ಉಪ ಚುನಾವಣೆ -2025 ಕ್ಕೆ ಸಂಬಂಧಿಸಿದಂತೆ, 1993 ರ ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮದ ಉಪಬಂಧಗಳ ಮೇರೆಗೆ ವಿವಿಧ ಕಾರಣಗಳಿಂದ ಆಕಸ್ಮಿಕವಾಗಿ ತೆರವಾಗಿರುವ ಜಿಲ್ಲೆಯಲ್ಲಿನ ಉಡುಪಿ ತಾಲೂಕಿನ ಉದ್ಯಾವರ ಗ್ರಾಮ ಪಂಚಾಯತಿಯ -1 (ಮೀಸಲಾತಿ-ಸಾಮಾನ್ಯ), ಕಾಪು ತಾಲೂಕಿನ ಬೆಳ್ಳೆ ಗ್ರಾಮ ಪಂಚಾಯತಿಯ ಕಟ್ಟಿಂಗೇರಿ -1 (ಮೀಸಲಾತಿ-ಹಿಂದುಳಿದ ವರ್ಗ ಅ (ಮಹಿಳೆ) ಹಾಗೂ ಪಡುಬಿದ್ರೆ ಗ್ರಾಮ ಪಂಚಾಯತಿಯ ಪಾದಬೆಟ್ಟು-1 (ಮೀಸಲಾತಿ-ಅನುಸೂಚಿತ ಜಾತಿ) ಸದಸ್ಯ ಸ್ಥಾನಗಳು ಸೇರಿದಂತೆ ಒಟ್ಟು 3 ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ. ಚುನಾವಣೆಯ ವೇಳಾಪಟ್ಟಿಯನ್ನು ನಿಗಧಿಪಡಿಸಿ, ರಾಜ್ಯ ಚುನಾವಣಾ ಆಯೋಗವು ಅಧಿಸೂಚಿಸಿದ್ದು, ಕರ್ನಾಟಕ ಪಂಚಾಯತ್ ರಾಜ್ (ಚುನಾವಣೆಗಳನ್ನು ನಡೆಸುವ) ನಿಯಮಗಳು 1993 ರ ನಿಯಮ 12 ರ ಅನ್ವಯ ಉಪ ಚುನಾವಣೆಯ ವೇಳಾಪಟ್ಟಿಯನ್ನು ಈ ಕೆಳಗಿನಂತೆ ನಿಗಧಿಪಡಿಸಲಾಗಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ತಿಳಿಸಿರುತ್ತಾರೆ. ಮೇ 8 ರಿಂದ ನಾಮಪತ್ರಗಳನ್ನು ಸ್ವೀಕರಿಸುವ ಪ್ರಾರಂಭದ ದಿನವಾಗಿದ್ದು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರು ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮರವಂತೆ, ಬೈಂದೂರು ಹಾಗೂ ಕೊಲ್ಲೂರಿಗೆ ಗುರುವಾರ ಸಂಜೆ ಭೇಟಿ ನೀಡಿದರು. ಈ ವೇಳೆ ಅವರು ಮಾತನಾಡಿ, ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮರವಂತೆ ಸಮುದ್ರ ದಡದಲ್ಲಿ ಒಂದೆಡೆ ಸಮುದ್ರ ಮತ್ತೊಂದೆಡೆ ನದಿ ನಡುವೆ ರಸ್ತೆ ಹಾದು ಹೋಗಿದ್ದು ಇದೊಂದು ಅದ್ಭುತ ಪ್ರದೇಶವಾಗಿದೆ. ಸೋಮೇಶ್ವರವೂ ಸುಂದರ ಪ್ರದೇಶವಾಗಿದೆ. ಇಲ್ಲಿನ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರಕಾರ ಯೋಜನೆ ಸಿದ್ಧಪಡಿಸಿ ನೀಡಿದಲ್ಲಿ ಅಗತ್ಯ ಕ್ರಮ ವಹಿಸಲಾಗುವುದು. ಸಂಸದ ರಾಘವೇಂದ್ರ ಅವರ ಕ್ಷೇತ್ರದ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಯ ದೂರದೃಷ್ಟಿಯ ವಿಶೇಷ ಕಾಳಜಿಯ ಮೇರೆಗೆ ಮಾಡಿಕೊಂಡಿದ್ದ ಮನವಿಯ ಹಿನ್ನೆಲೆಯಲ್ಲಿ ಭೇಟಿ ನೀಡಿರುವುದಾಗಿ ತಿಳಿಸಿದರು. ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ಬೈಂದೂರು ಕ್ಷೇತ್ರದ ಕೊಲ್ಲೂರು ಕ್ಷೇತ್ರದ ಅಭಿವೃದ್ಧಿಯ ಕುರಿತು ಕಳೆದ ಅಧಿವೇಶನದ ಸಮಯದಲ್ಲಿ ಸ್ಥಳೀಯ ಶಾಸಕರು ಹಾಗೂ ಮುಖಂಡರ ಜೊತೆಗೆ ಕೇಂದ್ರ ಪ್ರವಾಸೋಧ್ಯಮ ಸಚಿವರನ್ನು ಭೇಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉಡುಪಿ ಮತ್ತು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ವತಿಯಿಂದ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಯುವನಿಧಿಯ ಕುರಿತು ಪ್ರಚಾರ ಮತ್ತು ನೋಂದಣಿ ಅಭಿಯಾನ ನಡೆಯಿತು. ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷರಾದ ಮೋಹನ್ ಪೂಜಾರಿ ಉಪ್ಪುಂದ ಅವರು ಸರ್ಕಾರದ ಈ ಯೋಜನೆ ನಿರುದ್ಯೋಗಿ ಯುವ ಪೀಳಿಗೆಗೆ ತುಂಬಾ ಅನುಕೂಲಕರವಾಗಿದೆ. ಪದವಿ ಮುಗಿದು ಉದ್ಯೋಗ ಸಿಗದ ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು. ಉದ್ಯೋಗ ವಿನಿಮಯ ಕಛೇರಿಯ ಸಿಬ್ಬಂದಿ ಲತಾ ಅವರು ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆ ಪಡೆದುಕೊಳ್ಳುವ ಬಗ್ಗೆ ಮತ್ತು ಮಾನದಂಡಗಳ ಕುರಿತು ಪೂರ್ಣ ಮಾಹಿತಿ ನೀಡಿದರು. ಪ್ರಾಶುಪಾಲರಾದ ನಾಗರಾಜ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಸದಸ್ಯರಾದ ಬಾಬು ದೇವಾಡಿಗ, ಅನಿಶ್ ಕುಮಾರ್, ಸೂರ್ಯಕಾಂತಿ, ಮಾಲತಿ…
