Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮರು ಮೌಲ್ಯ ಮಾಪನದ ನಂತರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ವೈಷ್ಣವಿ ಅರಸ್ 595 ಅಂಕದೊಂದಿಗೆ ರಾಜ್ಯ ಮಟ್ಟದಲ್ಲಿ 5 ನೇ ರ್ಯಾಕ್‌ ಪಡೆದುಕೊಂಡು, ಉಡುಪಿ ಜಿಲ್ಲೆಗೆ ದ್ವಿತೀಯ, ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾಳೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸನಾತನ ಫೌಂಡೇಶನ್ ಬೆಂಗಳೂರು ಸಾರಥ್ಯದಲ್ಲಿ ಉಡುಪಿ ಮಠದ ಸ್ವಾಮೀಜಿ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥರು ಹಾಗೂ ಅವರ ಪ್ರಿಯ ಶಿಷ್ಯರಾದ ಶ್ರೀ ಸುಶ್ರೀಂದ್ರತೀರ್ಥ ಸ್ವಾಮೀಜಿ ಅವರಿಂದ ಕೊಡಮಾಡುವ ಅತ್ಯುನ್ನತ ಪ್ರಶಸ್ತಿ ವಿಕ್ರಮ ಪ್ರಶಸ್ತಿಯನ್ನು ಹೆಮ್ಮಾಡಿ ಹಾಗೂ ಕಿರಿಮಂಜೇಶ್ವರದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಗಣೇಶ ಮೊಗವೀರ ಅವರಿಗೆ ಶುಕ್ರವಾರದಂದು ಉಡುಪಿ ರಾಜಾಂಗಣದಲ್ಲಿ ನಡೆದ ವೈಭವದ ಸಮಾರಂಭದಲ್ಲಿ ಶ್ರೀಗಳು ಪ್ರಶಸ್ತಿ ಪ್ರದಾನ ಮಾಡಿದರು. ಶ್ರೀ ಗಣೇಶ ಮೊಗವೀರ ಅವರು ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು ಹಾಗೂ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಎರಡು ಶಿಕ್ಷಣ ಸಂಸ್ಥೆಗಳನ್ನು ಮುನ್ನಡೆಸುತ್ತಿದ್ದು ಸಾವಿರಾರು ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯುತ್ತಿದ್ದಾರೆ. ಇವರ ಶಿಕ್ಷಣ ಕ್ಷೇತ್ರದ ಸಾಧನೆ ಹಾಗೂ ಸೇವೆಯನ್ನು ಪರಿಗಣಿಸಿ ಶ್ರೀ ಗಣೇಶ ಮೊಗವೀರ ಅರವಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪರಿಶಿಷ್ಟ ಜಾತಿ ಒಳಮೀಸಲಾತಿಗಾಗಿ ಸಮೀಕ್ಷೆ ನಡೆಸುವ ಬಗ್ಗೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ಸಮೀಕ್ಷೆ ನಡೆಸಲು ಈಗಾಗಲೇ ರಚಿಸಿರುವ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯು ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ  ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೇಸ್ವಾನ್ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತಂತೆ ನ್ಯಾಯಮೂರ್ತಿ ಹೆಚ್.ಎನ್, ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಮೀಕ್ಷೆ ನಡೆಸುವ ಸಂಬಂಧ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಮೇ 5 ರಿಂದ ಮೂರು ಹಂತಗಳಲ್ಲಿ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಿ ಸಮೀಕ್ಷೆ ನಡೆಸುವ ಕಾರ್ಯವು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಕ್ಕಳು ಶಾಲೆಯಲ್ಲಿ ಪಠ್ಯದ ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿಯನ್ನು ಬೆಳೆಸಿಕೊಂಡರೆ ಉತ್ತಮ ಪ್ರಗತಿ ಕಾಣಲು ಸಾಧ್ಯವಾಗುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ಉಡುಪಿ ಜಿಲ್ಲಾ ಮುಖ್ಯ ಆಯುಕ್ತಾಗಿರುವ ಬಿ. ಜಯಕರ್‌ ಶೆಟ್ಟಿ ಹೇಳಿದರು. ಅವರು ಇಲ್ಲಿನ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ವತಿಯಿಂದ ಯಡಾಡಿ- ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ್ ಪಿ.ಯು.ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆಯುತ್ತಿರುವ ಮಂಥನ ಬೇಸಿಗೆ ಶಿಬಿರದ ಆರನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು. ಮಕ್ಕಳಲ್ಲಿರುವ ಪ್ರತಿಭೆಯ ಅನಾವರಣಕ್ಕಾಗಿ ಸರಕಾರವು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮವನ್ನು ಆರಂಭಿಸಿದೆ. ಪ್ರತಿಯೊಂದು ಮಗುವಿನಲ್ಲಿಯೂ ಒಂದೊಂದು ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ಗುರುತಿಸಿ ಅನಾವರಣಗೊಳಿಸುವ ಪ್ರಯತ್ನ ಆಗಬೇಕು. ಪಠ್ಯೇತರ ಚಟುವಟಿಕೆಗಳು ಮಕ್ಕಳ ಸುಪ್ತ ಪ್ರತಿಭೆಗಳ ಅನಾವರಣಕ್ಕೆ ಸಹಕಾರಿಯಾಗುತ್ತದೆ. ಬೇಸಿಗೆ ಶಿಬಿರಗಳು ಕೂಡ ಮಕ್ಕಳಿಗೆ ಉತ್ತಮ ವೇದಿಕೆಯಾಗಿದ್ದು ಅಲ್ಲಿ ಕಲಿಸಿಕೊಡುವ ಕೌಶಲಗಳು, ಸಂಸ್ಕಾರವನ್ನು ಮಕ್ಕಳು ತಮ್ಮ ಜೀವನದುದ್ದಕ್ಕೂ ಅಳವಡಿಸಿಕೊಂಡು ಭವಿಷ್ಯದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ವಿದ್ಯಾರ್ಥಿಗಳ ಭೌತಿಕ ಬೆಳವಣಿಗೆಗೆ ಬೇಸಿಗೆ ಶಿಬಿರಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪತ್ರಕರ್ತ ರವೀಂದ್ರ ಕೋಟ ಹೇಳಿದರು. ಅವರು ಶುಕ್ರವಾರ ಕೋಟದ ಕಾರಂತ ಥೀಮ್ ಪಾಕ್೯ನಲ್ಲಿ ಗೀತಾನಂದ ಫೌಂಡೇಶನ್ ಮಣೂರು-ಪಡುಕರೆ, ಡಾ| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಉಸಿರು, ಕೋಟ ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಕೋಟತಟ್ಟು ಇವರ ಸಂಯುಕ್ತ ಆಶ್ರಯದಲ್ಲಿ ಕರಾವಳಿ ಕಣ್ಮಣಿ ದಿ| ಕೆ.ಸಿ. ಕುಂದರ್ ಸ್ಮರಣಾರ್ಥ ಬೆಳ್ಳಿ ವರ್ಷಾಚರಣೆಯ ಹಿನ್ನಲ್ಲೆಯಲ್ಲಿ ವಿದ್ಯಾರ್ಥಿಗಳ ಬೇಸಿಗೆ ಶಿಬಿರ ವಿಕಸನ 2025 ಪ್ರತಿಭೆಗಳ ದಿಬ್ಬಣ ಶೀರ್ಷಿಕೆಯಡಿ ಕಾರ್ಯವನ್ನು ಉದ್ಘಾಟಿಸಿ ಮಾತನಾಡಿದರು. ಇಪ್ಪತೈದು ಸಂವತ್ಸರಗಳನ್ನು ಸಮಾಜಕ್ಕೆ ಶಿಬಿರದ ಮೂಲಕ ಒಂದಿಷ್ಟು ಪ್ರತಿಭೆಗಳನ್ನು ಸಮಾಜಕ್ಕೆ ಧಾರೆ ಎರೆಯುವ ಕಾರ್ಯ ನಿಜಕ್ಕೂ ಪ್ರಶಂಸನೀಯ ಕಾರ್ಯ, ಶಿಬಿರದಲ್ಲಿ ಅರ್ಥಪೂರ್ಣ ಸಂಪನ್ಮೂಲ ವ್ಯಕ್ತಿಗಳ ಮೂಲಕ ಪ್ರತಿಭೆಗಳು ಹೊರಹೊಮ್ಮಲಿದೆ ಎಂದರು. ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳ ನಾಲ್ಕು ತಂಡಗಳನ್ನು ವಿಗಂಡಿಸಿ ಅವರ ತಂಡದ ನಾಯಕರುಗಳಿಗೆ ದಾಖಲೆಗಳನ್ನು ಗಣ್ಯರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಬಾರಕೂರು ಗ್ರಾಮಪಂಚಾಯತ್ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ನಾಗರಮಠ ಹಾಗೂ ಹೊಸಾಳ ಗ್ರಾಮದ ವಾಂಟೇಡ್ ಡ್ಯಾಮ್ ಬಳಿ ಮರಳುಗಾರಿಕೆ ನಡೆಸುವ ಸಂಬಂಧಿಸಿದಂತೆ ಸಾಕಷ್ಟು ಸಮಯಗಳಿಂದ ಸ್ಥಳೀಯರು ಆಕ್ಷೇಪಿಸಿ ಪ್ರತಿಭಟಿಸಿ ಶಾಸಕರಿಗೆ ಮನವಿ ಸಲ್ಲಿಸಿದ ಹಿನ್ನಲ್ಲೆಯಲ್ಲಿ ಸ್ಥಳಕ್ಕೆ ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಗಣಿ ಇಲಾಖೆ ಗುರುತುಪಡಿಸಿರುವ ಸ್ಥಳ ಮರಳುಗಾರಿಕೆಗೆ ಯೋಗ್ಯವಲ್ಲ ಈಗಾಗಲೇ ಕಿಂಡಿ ಅಣೆಕಟ್ಟು ಭಾಗದಲ್ಲಿ ಸಾಕಷ್ಟು ಕೃಷಿ ಕುಸಿದು ಹಾನಿಗೊಂಡಿರುವುದು ಶಾಸಕರಿಗೆ ಮನವರಿಕೆ ಮಾಡಿದ ಸ್ಥಳೀಯ ಗ್ರಾಮಸ್ಥರು ಮರಳುಗಾರಿಕೆಯ ಸ್ಟಾಕ್ ಯಾಡ್೯ಗೆ ಕೃಷಿ ಭೂಮಿ ಬಳಕೆ ಮಾಡಿರುವುದಕ್ಕೆ ಶಾಸಕರ ಸಮ್ಮುಖದಲ್ಲಿ ಆಕ್ಷೇಪ ವ್ಯಕ್ತಪಡಿಸಿದರಲ್ಲದೆ ಇಲ್ಲಿನ ರಸ್ತೆಗಳು ಅಗಲಕಿರಿದಾಗಿದ್ದ ಬಗ್ಗೆ ಶಾಸಕರ ಪರಿಗಣನೆಗೆ ತಂದರು, ಈ ರೀತಿ ಮರಳುಗಾರಿಕೆಯನ್ನು ಗ್ರಾಮಸ್ಥರು ಶಾಸಕರ ಸಮ್ಮುಖ ವಿರೋಧ ವ್ಯಕ್ತಪಡಿಸಿದರು. ಈ ಎಲ್ಲಾ ಮಾಹಿತಿಯನ್ನು ಪಡೆದ ಶಾಸಕರು ಸ್ಥಳದಲ್ಲೆ ದೂರವಾಣಿಯ ಮೂಲಕ ಸಂಬಂಧಪಟ್ಟ ಇಲಾಖಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಗ್ರಾಮಸ್ಥರ ವಿರೋಧದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ವಡ್ಡರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಬಾಲವನದ  ಉದ್ಘಾಟನಾ  ಸಮಾರಂಭ ಇತ್ತೀಚಿಗೆ ನಡೆಯಿತು. ಬಾಲವನವನ್ನು ಶಾಲೆಗೆ ಕೊಡುಗೆಯಾಗಿ ನೀಡಿದ ಓಎನ್‌ಜಿಸಿ ಕಂಪನಿ ಮುಂಬೈ ಇದರ ನಿವೃತ್ತ ಚೀಪ್ ಜನರಲ್ ಮ್ಯಾನೇಜರ್ ನಾರಾಯಣ ಆಚಾರ್ ಬನ್ನಾಡಿ ಉದ್ಘಾಟಿಸಿ ಮಾತನಾಡಿ, ಕ್ರೀಡೆಯ ಮೂಲಕ ಆರೋಗ್ಯವನ್ನು ರಕ್ಷಿಸಿಕೊಳ್ಳಿ ದೈಹಿಕ ಬೆಳವಣಿಗೆಗೆ ಬಾಲವನ ಸಹಕಾರಿಯಾಗಲಿದೆ ಎಂದು ಶಾಲಾ ಸ್ಥಾಪಕ ಮುಖ್ಯೋಪಾಧ್ಯಾಯ ದಿ. ಶಶಿಧರ ಶೆಟ್ಟಿ ಅವರನ್ನು ಸ್ಮರಿಸಿಕೊಂಡರು. ದಾನಿಗಳಾದ ನಾರಾಯಣ ಆಚಾರ್ ಬನ್ನಾಡಿ ಇವರನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ದಯಾನಂದ ಆಚಾರ್, ದಾನಿಗಳಾದ ಸೀತಾರಾಮ್ ಆಚಾರ್ ಬನ್ನಾಡಿ, ಬಾಲಕೃಷ್ಣ ಶೆಟ್ಟಿ ವಡ್ದರ್ಸೆ, ಚಂದ್ರಶೇಖರ್ ಶೆಟ್ಟಿ ಯಾಳಹಕ್ಲು, ಶುಭೋದಯ ಶೆಟ್ಟಿ ವಡ್ಡರ್ಸೆ, ಹೇಮಲತಾ ಶೆಟ್ಟಿ ವಡ್ದರ್ಸೆ, ಉದಯ್ ಕುಮಾರ್ ಶೆಟ್ಟಿ ಕೊತ್ತಾಡಿ, ವಿಜಯ್ ಕುಮಾರ್ ಶೆಟ್ಟಿ ಕೊತ್ತಾಡಿ, ಪುಷ್ಪಲತಾ ನಾಯಿರಿ, ಇನ್ನರ್ ವೀಲ್ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷೆ ಅಮಿತಾ ಶೆಟ್ಟಿ ವಡ್ಡರ್ಸೆ, ಹಳೆ ವಿದ್ಯಾರ್ಥಿ ಸಂಘದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಯುವಶಕ್ತಿ ಯುವಕ ಮಂಡಲ ಕಟ್ಕೆರೆ ಇವರ ಆಶ್ರಯದಲ್ಲಿ ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ 5 ದಿನಗಳ ಕಾಲ ನಡೆಯಲಿರುವ ಅರಿವು 2025 ಒಂದಿಷ್ಟು ಜ್ಞಾನದ ಹರಿವು ಮಕ್ಕಳ ಉಚಿತ ಬೇಸಿಗೆ ಶಿಬಿರದ ಉದ್ಘಾಟನೆ ಜರುಗಿತು. ಉದ್ಘಾಟನೆಯನ್ನು ರಾಜಶೇಖರ್ ಹೊಳ್ಳ ನಾಗಪಾತ್ರಿಗಳು ಕಟ್ಕೆರೆ ಅವರು ನೆರವೆರಿಸಿ ಶುಭ ಕೋರಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ದಯಾನಂದ ಶೆಟ್ಟಿ ಕಟ್ಕೆರೆ ಅವರು ವಹಿಸಿದ್ದರು. ಉದ್ಯಮಿಗಳಾದ ಸುಬೋದ್ ಹೆಗ್ಡೆ ಕಟ್ಕೆರೆ ಹಾಗೂ ಗೋಪಾಲ ಮಡಿವಾಳ ಪಾತ್ರಿಗಳು ಶ್ರೀ ಕಾಳಿಕಾಂಬಾ ದೇವಸ್ಥಾನ ಕಟ್ಕೆರೆ ಅವರುಗಳು ಶುಭ ಕೋರಿದರು. ಸಂಪನ್ಮೂಲ ವ್ಯಕ್ತಿಗಳಾದ ನರೇಂದ್ರ ಕುಮಾರ್ ಕೋಟ ಕಾರ್ಯಕ್ರಮದ ಯಶಸ್ಸಿಗೆ ಶುಭ ಕೋರಿದರು. ಗೌರವಧ್ಯಕ್ಷರಾದ ಗಣೇಶ್ ಶೆಟ್ಟಿ ಕಟ್ಕೆರೆ ಉಪಸ್ಥಿತರಿದ್ದರು. ಶಿಬಿರದ ಸಂಯೋಜಕರಾದ ವಿಖ್ಯಾತ್ ಕಂಡ್ಲೊರ್ ಕಾರ್ಯಕ್ರಮ ಸಿರೂಪಿಸಿದರು. 5 ದಿನಗಳ ಈ ಶಿಬಿರದಲ್ಲಿ  ಸ್ಥಳೀಯ 98 ವಿದ್ಯಾರ್ಥಿಗಳು ಭಾಗ ವಹಿಸಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯ ಸರಕಾರದ ಪಂಚಗ್ಯಾರಂಟಿ ಯೋಜನೆಯಡಿ ಮಾರ್ಚ್ ತಿಂಗಳಿನಲ್ಲಿ ತಾಲೂಕಿನ ಪೂರ್ಣ ಅನುದಾನ ಬಿಡುಗಡೆಗೊಂಡಿದ್ದು, ಗೃಹಲಕ್ಷ್ಮೀ ಯೋಜನೆಗೆ 15.61 ಕೋಟಿ, ಗೃಹಜ್ಯೋತಿ ಯೋಜನೆಗೆ 4.08 ಕೋಟಿ, ಅನ್ನಭಾಗ್ಯ ಯೋಜನೆಗೆ 4.19 ಕೋಟಿ, ಶಕ್ತಿ ಯೋಜನೆಗೆ 2.51 ಕೋಟಿ ಬಿಡುಗಡೆಯಾಗಿದೆ. ಯುವ ನಿಧಿ ಯೋಜನೆಗೆ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳನ್ನು ನೊಂದಾಯಿಸಿಕೊಳ್ಳಲಾಗುತ್ತಿದೆ ಎಂದು ಕುಂದಾಪುರ ತಾಲೂಕು ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಹೇಳಿದರು. ಅವರು ಬುಧವಾರ ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜರುಗಿದ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಕುಂದಾಪುರ ತಾಲೂಕಿಗೆ ಈತನಕ ಗ್ಯಾರೆಂಟಿ ಯೋಜನೆಯಡಿ 334 ಕೋಟಿ ಹಣ ಬಿಡುಗಡೆಯಾಗಿದೆ ಎಂದರು. ಕುಂಭಾಶಿಯ ಕೊರಗ ಕುಟುಂಬಗಳ ವಿದ್ಯುತ್ ಸಮಸ್ಯೆ, ನೂತನ ವಿದ್ಯುತ್ ಸಂಪರ್ಕಕ್ಕಾಗಿ ನಿರಾಪೇಕ್ಷಣ ಪತ್ರ ಪಡೆಯುವ ಬಗ್ಗೆ, ಓಡಾಟದಲ್ಲಿದ್ದ ಕೆಎಸ್ಆರ್ಟಿಸಿ ಬಸ್ಸುಗಳನ್ನು ಕೆಲವು ಭಾಗಗಳಲ್ಲಿ ನಿಲ್ಲಿಸಲಾಗಿರುವ ಬಗ್ಗೆ, ಪದವಿ ಪೂರ್ಣಗೊಳಿಸುವ ವಿದ್ಯಾರ್ಥಿಗಳನ್ನು ಯುವನಿಧಿ ಯೋಜನೆಯಡಿ ನೊಂದಾಯಿಸುವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಯುಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಬೈಂದೂರು ಕಾಲ್ತೋಡಿನ ಬೊಳ್ಳಂಬಳ್ಳಿ ಮೂಲದ, ತೆಲಂಗಾಣದಲ್ಲಿ ವಾಸವಾಗಿರುವ ಇಂದ್ರಾಚಿತ 739ನೇ ರ್ಯಾಂಕ್ ಪಡೆದು ಉತ್ತೀರ್ಣರಾಗಿದ್ದಾರೆ. ಎಳವೆಯಿಂದಲೇ ಐಎಎಸ್ ಆಗುವ ಕನಸು ಹೊತ್ತಿದ್ದ ಇಂದ್ರಾಚಿತ ಅವರ ಕನಸಿಗೆ ನೀರೆರೆದು ಪೋಷಿಸಿದ ಪೋಷಕರು ಮಗಳಿಗೆ ಉತ್ತಮ ಗುಣಮಟ್ಟದ ವಿದ್ಯಾಭ್ಯಾಸವನ್ನು ಕೊಡಿಸಿ, ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯ ಇರುವ ಕೋಚಿಂಗ್ ಕೊಡಿಸಿದ್ದಾರೆ. ದಿಲ್ಲಿಯಲ್ಲಿ ಕೋಚಿಂಗ್ ಹಾಗೂ ನೀತಿ ಆಯೋಗದೊಂದಿಗೆ ಇಂಟನ್ ೯ಶಿಪ್ ಮಾಡಿದ್ದಾರೆ. ಆರನೇ ಪಯತ್ನದಲ್ಲಿ ಯಶಸ್ಸು:ಆರಂಭದ ಮೂರು ಪ್ರಯತ್ನದಲ್ಲಿ ಪ್ರಾರಂಭಿಕ ಹಂತವನ್ನು (ಪ್ರಿಲಿಮ್ಸ್) ದಾಟಲು ವಿಫಲರಾದರೂ, ಛಲ ಬಿಡದೇ ನಾಲ್ಕನೇ ಬಾರಿ ಪರೀಕ್ಷೆ ಬರೆದು ಪ್ರಾರಂಭಿಕ ಹಂತವನ್ನು ದಾಟಿದ್ದು, ಮೈನ್ಸ್ ತೇರ್ಗಡೆಗೊಂಡಿರಲಿಲ್ಲ. ಐದನೇ ಬಾರಿ ಪ್ರಿಲಿಮ್ಸ್, ಮೈನ್ಸ್ ಉರ್ಕಿಣ್ರರಾಗಿ, ಸಂದರ್ಶನನೀಡಿದ್ದರು. ಆದರೆ ಅಂತಿಮ ಪಟ್ಟಿಯಲ್ಲಿ ಅವರ ಹೆಸರಿರಲಿಲ್ಲ. ಆರನೇ ಬಾರಿಗೆ ಎಲ್ಲಾ ಮಜಲುಗಳನ್ನು ದಾಟಿ ಅಂತಿಮವಾಗಿ ಆಯ್ಕೆಯಾಗಿದ್ದಾರೆ. ಇಂದ್ರಾಚಿತ ಅವರು ರಾಘವೇಂದ್ರ ರಾವ್ ಹಾಗೂ ಮಮತಾ ಆರ್. ಶೆಟ್ಟಿ ಅವರ ಪುತ್ರಿಯಾಗಿದ್ದು ವಿದ್ಯಾಭಾಸವನ್ನು ತೆಲಂಗಾಣದಲ್ಲಿ ಪೂರ್ಣಗೊಳಿಸಿದ್ದಾರೆ.…

Read More