ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಂಡು ಉತ್ತಮ ಚಿಂತನೆಗಳತ್ತ ಮುಖ ಮಾಡಬೇಕು. ಶಿಕ್ಷಣದ ಹಾದಿಯಲ್ಲಿ ಎದುರಾಗುವ ಸೋಲುಗಳನ್ನು ಮೆಟ್ಟಿ ನಿಂತು ಯಶಸ್ಸಿನತ್ತ ಸಾಗಬೇಕು. ಸಾಧಕ ವಿದ್ಯಾರ್ಥಿಗಳೇ ಸಮಾಜದ ಅಮೂಲ್ಯ ಆಸ್ತಿಯಾಗಬೇಕು ಎಂದು ಬಾಂಡ್ಯ ಎಜುಕೇಶನಲ್ ಟ್ರಸ್ಟ್ನ ಜಂಟಿ ಕಾರ್ಯನಿರ್ವಾಹಕರಾದ ಅನುಪಮಾ ಎಸ್. ಶೆಟ್ಟಿ ಹೇಳಿದರು. ಅವರು ಮಂಗಳವಾರ ಇಲ್ಲಿನ ವಕ್ವಾಡಿ ಗುರುಕುಲ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗಾಗಿ “ಮಧುರಂ ಸ್ಮರಣಂ” ಎಂಬ ವಿನೂತನ ಬೀಳ್ಕೊಡುಗೆ ಕಾರ್ಯಕ್ರಮವನ್ನು ಉದ್ಟಾಟಿಸಿ ಮಾತನಾಡಿದರು. ಪ್ರಾಂಶುಪಾಲರಾದ ಡಾ. ರೂಪಾ ಶೆಣೈ ಪ್ರಾಸ್ತಾವಿಕವಾಗಿ ಮಾತನಾಡಿ, ಜೀವನವೆಂಬುದು ದೀರ್ಘ ಪ್ರಯಾಣವಾಗಿದ್ದು, ಅದರಲ್ಲಿನ ಸಿಹಿ-ಕಹಿ ಅನುಭವಗಳು ಸಹಜ. ಕಲಿಕೆಯ ಹಾದಿಯಲ್ಲಿ ಪಡೆದ ಧನಾತ್ಮಕ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು. ಬೀಳ್ಕೊಡುಗೆ ಒಂದು ಸಿಹಿ ಕ್ಷಣವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ಸಮಾಜಕ್ಕೆ ಗೌರವ ತರುವಂತಾಗಲಿ ಎಂದು ಆಶಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಎರಡು ವರ್ಷದ ಶೈಕ್ಷಣಿಕ ಅನುಭವಗಳನ್ನು ಹಂಚಿಕೊಂಡರು. ಸಂಸ್ಥೆಗೆ ವಿದ್ಯಾರ್ಥಿಗಳಿಂದ ಸುಮಾರು 20 ಸಾವಿರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ (IMJISC) ಯೋಗ ಮತ್ತು ಆಧ್ಯಾತ್ಮ ಸಂಘವು ಭಾರತದ ರಾಷ್ಟ್ರಗೀತೆಯಾದ ವಂದೇ ಮಾತರಂನ ಹಿನ್ನೆಲೆ, ಸಾಂಸ್ಕೃತಿಕ ಮತ್ತು ದೇಶಭಕ್ತಿಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸಂಸ್ಥೆಯ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ, ತಮ್ಮ ಪ್ರಸ್ತುತಿಯಲ್ಲಿ, ಅವರು ವಂದೇ ಮಾತರಂ ಗೀತೆಯ ಮೂಲ, ಹಿನ್ನೆಲೆ, ರಚನೆ ಮತ್ತು ಸಾಹಿತ್ಯದ ಆಳವಾದ ಅರ್ಥವನ್ನು ವಿವರಿಸಿದರು. ಭಾರತದ ಸ್ವಾತಂತ್ರ್ಯ ಚಳುವಳಿಯ ಸಮಯದಲ್ಲಿ ಈ ಗೀತೆಯು ಹೇಗೆ ಪ್ರಬಲ ದೇಶಭಕ್ತಿಯ ಭಾವನೆಯೊಂದಿಗೆ ಸ್ವಾತಂತ್ರ್ಯ ಹೋರಾಟಗಾರರಿಗೆ ಪ್ರೇರಣೆ ನೀಡಿತು ಎಂಬುದನ್ನು ಅವರು ಎತ್ತಿ ತೋರಿಸಿದರು.ಅವರು ಈ ಗೀತೆಯಲ್ಲಿ ಪ್ರತಿಬಿಂಬಿತವಾಗಿರುವ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ವಿವರಿಸಿ, ಅದನ್ನು ಭಾರತದ ಸೌಂದರ್ಯ, ಶ್ರೀಮಂತಿಕೆ ಮತ್ತು ಏಕತೆಯ ಸಂಕೇತವೆಂದು ಬಣ್ಣಿಸಿದರು. ಕಾರ್ಯಕ್ರಮವನ್ನು ತೃತೀಯ ಬಿಸಿಎ ವಿದ್ಯಾರ್ಥಿನಿ ಅಪೂರ್ವ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮನೆ ಕಟ್ಟುವ ಉದ್ದೇಶದಿಂದ ಬ್ಯಾಂಕಿನಿಂದ ಸಾಲ ಸಿಗದಿದ್ದಕ್ಕೆ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಳ್ಳೂರಿನಲ್ಲಿ ಸಂಭವಿಸಿದೆ. ಬಳ್ಳೂರು ಗ್ರಾಮದ ಭರತ್ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ಭರತ್ ಅವರು ತಮ್ಮ 10 ಸೆಂಟ್ಸ್ ಜಾಗದಲ್ಲಿ ಮನೆ ಕಟ್ಟುವ ಉದ್ದೇಶದಿಂದ ಬ್ಯಾಂಕ್ ಗೆ ಸಾಲಕ್ಕಾಗ ಅರ್ಜಿ ಸಲ್ಲಿಸಿದ್ದರು. ಆದರೆ ಬ್ಯಾಂಕ್ ನವರು ಜಾಗದ ಮೇಲೆ ಸಾಲ ಕೊಡಲು ನಿರಾಕರಿಸಿದ್ದರು. ಇದರಿಂದ ಬೇಸರಗೊಂಡ ಭರತ್ ಮಾ.12 ರಂದು ಮಧ್ಯಾಹ್ನ ಮನೆಯಲ್ಲಿ ಕಳೆ ನಾಶಕ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದರು. ಇದರಿಂದ ಅಸ್ವಸ್ಥಗೊಂಡ ಅವರನ್ನು ಕೂಡಲೇ ಕುಂದಾಪುರದ ಸರಕಾರಿ ಆಸ್ಪತ್ರೆಗೆ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾ. 16 ರಂದು ಅಲ್ಲಿಂದ ಬಿಡುಗಡೆಗೊಂಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಪರೀಕ್ಷಿಸಿದ ವೈದ್ಯರು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಮಂಗಳವಾರ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜ್ಞಾನಸುಧಾ ಸಂಸ್ಥೆಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮತ್ತು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದಿನೇಶ್ ಎಂ. ಕೊಡವೂರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಜೀವನದಲ್ಲಿ ಕಷ್ಟ ಅಂಥ ಯಾವುದು ಇಲ್ಲ ಅದು ನಾವು ನೋಡುವ ದೃಷ್ಟಿಕೋನದಲ್ಲಿದೆ. ಜ್ಞಾನ ಸಂಪಾದನೆಗೆ ಶ್ರಮಿಸಿದಷ್ಟು ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ಉಜ್ವಲ ಭವಿಷ್ಯವನ್ನು ಹೊಂದಲು ನಾಂದಿಯಾಗುತ್ತದೆ ಎಂದರು. ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್ ನ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ತಂದೆ, ತಾಯಿ, ಗುರುಗಳಿಗೆ ಗೌರವ ನೀಡಿ ಸಮಾಜದಲ್ಲಿ ಸತ್ಪ್ರಜೆಯಾಗಿ ಯಶಸ್ವಿ ಬದುಕನ್ನು ಸಾಗಿಸಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್, ಶ್ರೀ ವೆಂಕಟರಮಣ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಆರೋಗ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕಭೀ ಕಾರ್ಯಕ್ರಮದಡಿಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಮಾರ್ಚ್ 18 ರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ Udupi.nic.in ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕಾಸರಗೋಡು: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ರಿ. ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ “ಕಾಸರಗೋಡು ಗೋ-ಕುಟೀರ”ದ ಕಾಮಗಾರಿಗೆ ಗೋ- ಭಕ್ತರು, ಗೋ -ಪೋಷಕರು, ದಾನಿಗಳಿಂದ ಆರ್ಥಿಕ ಸಹಾಯ, ಸಹಕಾರ ಪ್ರೋತ್ಸಾಹವನ್ನು ನೀಡುವಂತೆ ಮನವಿ ಮಾಡಲಾಗಿದೆ. ದೇಸಿ ಗೋವುಗಳನ್ನು ಉಳಿಸಿ ಬೆಳೆಸುವುದಕ್ಕಾಗಿ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಸರಗೋಡು ಗೋ – ಕುಟೀರವನ್ನು ಜಗಜ್ಜನನಿ ಗೋಮಾತೆಯ ಆಶೀರ್ವಾದವನ್ನು ಪಡೆಯುವ ಉದ್ದೇಶದಿಂದ ಒಂದು ಧಾರ್ಮಿಕ ಶ್ರದ್ಧಾ ಕೇಂದ್ರವನ್ನಾಗಿ ರೂಪುಗೊಳಿಸುವುದಕ್ಕಾಗಿ ದೈವಾರ್ಷಿಕ ಕಾರ್ಯ ಯೋಜನೆಯನ್ನು ಕೈಗೊಳ್ಳಲಾಗಿದೆ. ಪ್ರತಿಯೊಬ್ಬರೂ ಕುಟುಂಬ ಸಮೇತರಾಗಿ ಕಾಸರಗೋಡು ಕನ್ನಡ ಗ್ರಾಮಕ್ಕೆ ಆಗಮಿಸಿ ಕಾಸರಗೋಡು ಗೋ-ಕುಟೀರದಲ್ಲಿ ಗೋವುಗಳಿಗೆ ಗೋ-ಗ್ರಾಸ ನೀಡಿ, ಗೋ- ಆರತಿಯನ್ನು ಬೆಳಗಿಸಿ, ಗೋ-ಸಂಕೀರ್ತನೆಯನ್ನು ಹಾಡಿ, ಗೋ-ಕುಟೀರದಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿ ತಮ್ಮ ಇಷ್ಟಾರ್ಥವನ್ನು ಶ್ರದ್ಧಾ ಭಕ್ತಿಯಿಂದ ಪಡೆಯಲು ಅವಕಾಶ ಕಲ್ಪಿಸಲಾಗುವುದು. ತಮ್ಮ ಮನೆಗಳಲ್ಲಿ ನಡೆಯುವ ಶುಭ ಸಮಾರಂಭಗಳ ನಿಮಿತ್ತ ಕಾಸರಗೋಡು ಗೋ -ಕುಟೀರಕ್ಕೆ ಆಗಮಿಸಿ ಗೋ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಿರಿಧಾನ್ಯಗಳಲ್ಲಿ ನಾರಿನಾಂಶ, ಕಬ್ಬಿಣಾಂಶಗಳು ಹೆಚ್ಚಾಗಿರುವುದರಿಂದ ಇದು ಪೋಷಕಾಂಶಗಳ ಕಣಜವಿದ್ದಂತೆ. ದೈನಂದಿನ ಆಹಾರ ಪದ್ಧತಿಯಲ್ಲಿ ಪ್ರತಿಯೊಬ್ಬರೂ ಸಿರಿಧಾನ್ಯ ಬಳಸುವುದರಿಂದ ಆರೋಗ್ಯದಲ್ಲಿ ಸಮತೋಲನ ಕಾಪಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಉದಯ್ ಕುಮಾರ್ ಶೆಟ್ಟಿ ಹೇಳಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ- ಎಣ್ಣೆಕಾಳು ಯೋಜನೆ ಅಡಿ ಜಿಲ್ಲಾ ಮಟ್ಟದ ಕಾರ್ಯಾಗಾರ ಹಾಗೂ ರಾಷ್ಟ್ರೀಯ ಆಹಾರ ಭದ್ರತೆ ಮತ್ತು ಪೌಷ್ಠಿಕ ಅಭಿಯಾನ ಯೋಜನೆ ಅಡಿ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬವನ್ನು ಉದ್ಘಾಟಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಕೃಷಿ ಚಟುವಟಿಕೆಗೆ ಹೆಚ್ಚು ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೊಳಿಸುವುದರೊಂದಿಗೆ ಕೃಷಿ ಕ್ಷೇತ್ರಕ್ಕೆ ವಿಫುಲ ಅವಕಾಶ ಕಲ್ಪಿಸಿದೆ. ಕೃಷಿ ಪ್ರಧಾನವಾದ ದೇಶದಲ್ಲಿ ಶೇ. 60 ರಷ್ಟು ಜನರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದರೂ ಸಹ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಂಜೀವ ಪೂಜಾರಿ ಎಂಬ ಕಲಾ ಶಕ್ತಿ ಗ್ರಾಮೀಣ ಭಾಗದಲ್ಲಿ ಕಲಾಸಕ್ತಿಯ ಕೇಂದ್ರವಾಗಿಸಿ ಯುವ ಸಮೂಹಕ್ಕೆ ದಾರಿದೀಪವಾಗಿದೆ ಎಂದು ಕೋಟ ಅಮೃತೇಶ್ವರೀ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್ ಹೇಳಿದರು. ಅವರು ಸೋಮವಾರ ಕೋಟದ ಕದ್ರಿಕಟ್ಟು ಊರ ಹತ್ತು ಸಮಸ್ತರಿಂದ ವರ್ಷಂಪ್ರತಿ ನಡೆಸಲ್ಪಡುವ 35ನೇ ವರ್ಷದ ಶ್ರೀ ಕ್ಷೇತ್ರ ಅಮೃತೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯ ಯಕ್ಷಗಾನ, ಸತ್ಯನಾರಾಯಣ ಪೂಜಾ ಕಾರ್ಯಕ್ರಮ, ರಂಗಕರ್ಮಿ ಕಲಾವಿದ ಕದ್ರಿಕಟ್ಟು ಸಂಜೀವ ಪೂಜಾರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂಜೀವ ಕದ್ರಿಕಟ್ಟು ಅಪ್ರತಿಮಾ ಕಲಾವಿದನಾಗಿ ಕಲಾ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅನನ್ಯ ಎಂದರು. ಈ ವೇಳೆ ಅಮೃತೇಶ್ವರೀ ಮೇಳದ ಸ್ತ್ರೀ ವೇಷಧಾರಿ ಮಾಧವ ಜೋಗಿ ನಾಗೂರು ಅವರಿಗೆ ಕದ್ರಿಕಟ್ಟು ಸಂಜೀವ ಪೂಜಾರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಕಲಾವಿದ ಕೋಟ ಸುರೇಶ್ ಬಂಗೇರ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದದಲ್ಲಿ ಕೋಟ ಅಮೃತೇಶ್ವರೀ ದೇಗುಲದ ಟ್ರಸ್ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ನಮ್ಮ ದೇಶ ಸಾಂಸ್ಕೃತಿಕವಾಗಿ ಗಟ್ಟಿ ನೆಲೆಯಾಗಿ ಕಲಾವಿದರ ಸೃಷ್ಠಿಯ ತಾಣವಾಗಿದೆ ಎಂದು ವಿಶ್ವ ವಿಖ್ಯಾತ ಸಾಲಿಗ್ರಾಮ ಮಕ್ಕಳ ಮೇಳದ ನಿರ್ದೇಶಕ ಎಚ್. ಸುಜಯೀಂದ್ರ ಹಂದೆ ಹೇಳಿದರು. ಕೋಟತಟ್ಟು ಪಡುಕರೆ ಅರಮ ದೇಗುಲದ ಸಮೀಪ ಟೀಮ್ ಭವಾಬ್ಧಿ ಪಡುಕರೆ ಇವರ ಐದನೇ ವರ್ಷದ ವರ್ಷೋತ್ಸವ ಕಡಲೂರ ಸನ್ಮಾನ ಕಾರ್ಯಕ್ರಮದಲ್ಲಿ ಅಭಿನಂದನಾ ನುಡಿಗಳನ್ನಾಡಿ ಮಾತನಾಡಿದರು. ದೇಶದ ಯಾವುದೇ ವ್ಯವಸ್ಥೆಯನ್ನು ಹಾಳುಗೆಡವ ಬಹುದು ಆದರೆ ಇಲ್ಲಿನ ಸಂಸ್ಕ್ರತಿ ನಾಶಮಾಡಲು ಯಾರಿಂದಲೂ ಸಾಧ್ಯವಿಲ ಇದು ಶ್ರೀಮಂತ ಪರಂಪರೆಯ ದೇಶವಾಗಿದೆ,ಕರಾವಳಿ ಸಂಘ ಸಂಸ್ಥೆಗಳ ತವರೂರಾಗಿ ಸಾಕಷ್ಟು ಸಮಾಜಮುಖಿ ಕಾರ್ಯಗಳಿಗೆ ವೇದಿಕೆ ಕಲ್ಪಿಸಿದೆ, ಕಲಾವಿದರಿಗೆ ಗರ್ವವಿರಬಾರದು ಗರ್ವ ಇದ್ದವರು ಕಲಾವಿದರಾಗಿ ಉಳಿಯಲು ಸಾಧ್ಯವಿಲ್ಲಾ ಎಂದರು. ಈ ವೇಳೆ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಅವರು ಭಾಗವತ, ಭಜಕ ಪ್ರಶಾಂತ್ ಪಡುಕರೆ ಅವರಿಗೆ ಕಡಲೂರ ಸನ್ಮಾನ ನೀಡಿ ಗೌರವಿಸಿದರು. ಸಾಲಿಗ್ರಾಮದ ಹೊಸಬದುಕು ಆಶ್ರಮಕ್ಕೆ ವಾಟರ್ ಫಿಲ್ಟರ್ ನ್ನು ಗಣ್ಯರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು. ಸಭೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಡೂರಿನ ಶ್ರೀವಾಣಿ ಪ್ರೌಢ ಶಾಲೆಯಲ್ಲಿ ನಡೆಯುತ್ತಿರುವ ಶ್ರೀ ಕಾಳವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸಾತಕೋತರ ಅಧ್ಯಯನ ಕೇಂದ್ರ ಕುಂದಾಪುರ ಕೋಟೇಶ್ವರ ರಾಷ್ಟ್ರೀಯ ಸೇವಾ ಯೋಜನೆ ಇದರ 2025-26ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದಲ್ಲಿ ಕಾವಿ ಕಲೆಯ ಕುರಿತು ಪರಿಚಯ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು. ಕಲಾವಿದರಾದ ಜನಾರ್ದನ ಹಾವಂಜೆ ಅವರು ಈ ಕಲೆಯ ವಿಶಿಷ್ಟತೆ, ಇತಿಹಾಸ ಮತ್ತು ಸಮಕಾಲೀನ ಸಂದರ್ಭದಲ್ಲಿ ಅದರ ಸಂರಕ್ಷಣೆಯ ಕುರಿತು ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು. ಪಾರಂಪರಿಕವಾದ ಈ ಕಲೆಯ ಕುರಿತು ಅಧ್ಯಯನ ಮತ್ತು ಸಂಶೋಧನೆ ನಡೆಸಿರುವ ಜನಾರ್ದನ ಹಾವಂಜೆ ಅವರು ಚಿತ್ರಕಲೆಯ ವಿವಿಧ ಪ್ರಕಾರಗಳಲ್ಲಿ ಕಾವಿ ಕಲೆಯ ವೈಶಿಷ್ಟ್ಯ ಮತ್ತು ವಿಭಿನ್ನತೆಯ ಕುರಿತು ಮಾತನಾಡಿದರು. ಕಲೆಯ ಕುರಿತಾದ ಆಸಕ್ತಿಗಳನ್ನು ವಿದ್ಯಾರ್ಥಿಗಳಲ್ಲಿ ಧನಾತ್ಮಕ ಚಿಂತನೆ ಸೌಂದರ್ಯ ಪ್ರಜ್ಞೆ, ನಾಗರಿಕ ಪ್ರಜ್ಞೆಯನ್ನು ಮೂಡಿಸುವಲ್ಲಿ ಸಹಕಾರಿ ಆಗಬಲ್ಲದು ಎಂದರು. ಲಲಿತ ಕಲೆಗಳ ಕ್ಷೇತ್ರದಲ್ಲಿ ಲಭ್ಯವಿರುವ ಉದ್ಯೋಗಾವಕಾಶಗಳ ಸಾಧ್ಯತೆಯ ಕುರಿತು…
