Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪ್ರಸ್ತುತ ರಾಜ್ಯ ಕಾಂಗ್ರೆಸ್ ನೇತೃತ್ವದ ಸರಕಾರ ಹಿಂದಿನ ಬಿಜೆಪಿ ಆಡಳಿತ ಅವಧಿಯಲ್ಲಿದ್ದ ಜನಪ್ರಿಯ ಯೋಜನೆಗಳನ್ನು ಸಹಿಸದೆ ಅದಕ್ಕೆ ಮುಕ್ತಿಗಾಣಿಸಲು ಮುಂದಾಗಿದೆ ಇದು ನಾಚಿಕೆಗೆಡಿನ ವಿಚಾರವಾಗಿದೆ ಎಂದು ಬಿಜೆಪಿ ಮುಖಂಡ ಸುರೇಶ್ ಪೂಜಾರಿ ಪಾಂಡೇಶ್ವರ ಹೇಳಿದರು. ಅವರು ಮಂಗಳವಾರ ಪಾಂಡೇಶ್ವರ ಗ್ರಾಮಪಂಚಾಯತ್ ಮುಂಭಾಗ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಶಕ್ತಿ ಕೇಂದ್ರ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು. ಬಡವರ ಕಲ್ಯಾಣಕ್ಕಾಗಿ ಸಂಧ್ಯಾ ಸುರಕ್ಷಾ ಸೇರಿದಂತೆ ನಿರ್ಗತಿಕರ ಕಲ್ಯಾಣ ಯೋಜನೆಗಳಿಗೆ ಬ್ರೇಕ್ ಹಾಕಲು ಹೊರಟಿದೆ ಇದು ನಿಮ್ಮಿಂದ ಸಾಧ್ಯವಿಲ್ಲಾ. ಇದಕ್ಕೆ ಅವಕಾಶ ಬಿಜೆಪಿ ನೀಡುವುದಿಲ್ಲ. ಬದಲಾಗಿ ರಾಜ್ಯಾದ್ಯಂತ ಈಗಾಗಲೇ ದೊಡ್ಡ ಮಟ್ಟದ ಹೋರಾಟಕ್ಕಿಳಿದಿದೆ ಅಲ್ಲದೆ ಫಲಾನುಭವಿಗಳ ಕಣ್ಣಿರು ನಿಮ್ಮನ್ನು ಬೆಂಬಿಡದೆ ಕಾಡಲಿದೆ. ಸ್ಥಳೀಯಾಡಳಿತದ ಸೌಲಭ್ಯಗಳನ್ನು ಕಡಿತಗೊಳಿಸಿ ಜನಸಾಮಾನ್ಯರನ್ನು ಜಿಲ್ಲೆಯ ಮೂಲೆ ಮೂಲೆಗಳಿಗೆ ಅಲೆಯುವಂತೆ ಮಾಡಲಾಗುತ್ತಿದೆ. ಇದರ ಬಗ್ಗೆ ಜನ ಸುಮ್ಮನೆ ಕೂರದೆ ಬೀದಿಗಿಳಿಯಲಿದೆ ಎಂದು ಎಚ್ಚರಿಸಿದರಲ್ಲದೆ ರಾಜ್ಯ ಸರಕಾರ ನಿದ್ರಾಹೀನ ಸ್ಥಿತಿಯಲ್ಲಿ ಆಡಳಿತ ಮಾಡುತ್ತಿದೆ ಎಂದು ಛೇಡಿಸಿದರು. ಪ್ರತಿಭಟನಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಗಿಳಿಯಾರು ಯುವಕ ಮಂಡಲದ ಮಹಾಸಭೆ ಅಲ್ಸೇಕೆರೆ ಮಹಾಲಿಂಗೇಶ್ವರ ದೇವಸ್ಥಾನದ ಸನ್ನಿಧಾನದಲ್ಲಿ ಇತ್ತೀಚಿಗೆ ನಡೆಯಿತು. ಸಭೆಯಲ್ಲಿ ಮುಂದಿನ ಎರಡು ವರ್ಷದ ಅವಧಿಗೆ ನೂತನ ಆಡಳಿತ ಮಂಡಳಿಯನ್ನು ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ಸುಭಾಷ್ ಪೂಜಾರಿ, ಉಪಾಧ್ಯಕ್ಷರಾಗಿ ಆದರ್ಶ ಗಿಳಿಯಾರು, ಕಾರ್ಯದರ್ಶಿ ನಂದೀಶ್ ಹೇರ್ಳೆ, ಜೊತೆ ಕಾರ್ಯದರ್ಶಿ ನಯನ ಗಿಳಿಯಾರು, ಕೋಶಾಧಿಕಾರಿ ದಯಾನಂದ ಪೂಜಾರಿ, ಜೊತೆ ಕೋಶಾಧಿಕಾರಿ ಭಾರ್ಗವ ಆಯ್ಕೆಗೊಳಿಸಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಬ್ಯಾಂಕುಗಳ ಸಹಯೋಗದೊಂದಿಗೆ ಆರ್ಯವೈಶ್ಯ ಆಹಾರವಾಹಿನಿ/ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆ (ಸಿ.ಇ.ಟಿ ಹಾಗೂ ನೀಟ್ ಕೌನ್ಸಲಿಂಗ್ ಮುಗಿದ ನಂತರ ಅರ್ಜಿಗಳನ್ನು ಆಹ್ವಾನಿಸಲಾಗುವುದು) ಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ವೆಬ್‌ಸೈಟ್ https://kacdc.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: 9448451111 ಅಥವಾ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ಮಂಡಲ ಬಿಜೆಪಿ ವತಿಯಿಂದ ಕ್ಷೇತ್ರದ ಎಲ್ಲಾ ಗ್ರಾಮ ಪಂಚಾಯತ್‌ಗಳ ಮುಂಭಾಗದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು. ಕ್ಷೇತ್ರದ ಹಲವಾರು ಗ್ರಾಮ ಪಂಚಾಯತ್‌ಗಳ ಮುಂಭಾಗದಲ್ಲಿ ನಡೆದ ಈ ಧರಣಿ ಪ್ರತಿಭಟನೆಯಲ್ಲಿ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಭಾಗಿಯಾದರು. ಶಾಸಕರು ಪ್ರತಿಭಟನೆಯಲ್ಲಿ ಮಾತನಾಡಿ, ಕಾಂಗ್ರೆಸ್‌ ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲದಾಗಿದೆ. ಜನಸಾಮಾನ್ಯರ ಸಂಕಷ್ಟಗಳು ಈ ಭ್ರಷ್ಟ ಸರ್ಕಾರಕ್ಕೆ ಕಾಣುತ್ತಿಲ್ಲ. ದ್ವೇಷದ ರಾಜಕಾರಣಕ್ಕೆ ಜನರು ಬಲಿಯಾಗುತ್ತಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಆಯ್ಕೆಯಾಗಿದ್ದರೂ, ಕಾಂಗ್ರೆಸ್‌ ಅಭ್ಯರ್ಥಿಗೂ ಒಂದಷ್ಟು ಮತಗಳು ಬಿದ್ದಿವೆ. ಬಿಜೆಪಿ ಮೇಲಿನ ದ್ವೇಷದಿಂದ ಕ್ಷೇತ್ರದ ಮತದಾರರಿಗೆ ಈ ಸರ್ಕಾರ ಅನ್ಯಾಯ ಎಸಗುತ್ತಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಕಾರಣವಿಲ್ಲದೆ ಅಕ್ರಮ ಸಕ್ರಮ ಅರ್ಜಿಗಳನ್ನು ತಿರಸ್ಕರಿಸುತ್ತಿರುವುದು, ಭೂ ಪರಿವರ್ತಿತ ಜಮೀನುಗಳಲ್ಲಿ ಏಕ ವಿನ್ಯಾಸ ನೀಡುವ ಸಮಸ್ಯೆ, ಸಾಮಾಜಿಕ ಪಿಂಚಣಿಗಳನ್ನು ರದ್ದುಗೊಳಿಸಿರುವುದು, ಬೆಲೆ ಏರಿಕೆ, ವಸತಿ ಯೋಜನೆಗಳಲ್ಲಿ ಅಕ್ರಮ ಸೇರಿದಂತೆ ಸರ್ಕಾರದ ಜನವಿರೋಧಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರಿನ ಇತಿಹಾಸದಲ್ಲಿ ಪ್ರಥಮ ಭಾರಿಗೆ ಮೂರು ದಿನಗಳ ಹಲಸು ಮತ್ತು ಕೃಷಿ ಮೇಳ ಜೂನ್‌ 27ರ ಶುಕ್ರವಾರದಿಂದ 29ರ ಭಾನುವಾರದ ತನಕ ಇಲ್ಲಿನ ಯಡ್ತರೆ ಬಂಟರ ಭವನದಲ್ಲಿ ಜರುಗಲಿದೆ. ಬೈಂದೂರು ಉತ್ಸವ ಸಮಿತಿ ಹಾಗೂ ರೈತೋತ್ಥಾನ ಬಳಗ ನೇತೃತ್ವದಲ್ಲಿ, ಸಮಷ್ಟಿ ಪ್ರತಿಷ್ಠಾನ ರಿ. ಹಾಗೂ ರೋಟರಿ ಕ್ಲಬ್‌ ಬೈಂದೂರು ಸಹಯೋಗದೊಂದಿಗೆ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ತಳಿಯ ಹಲಸು ಮತ್ತು ಮಾವಿನ ಹಣ್ಣಿನ ಪ್ರದರ್ಶನ ಹಾಗೂ ಮಾರಾಟ, ರುಚಿಕರ ಹಲಸಿನ ಉಪ ಉತ್ಪನ್ನಗಳು ಸವಿ ಉಣಬಡಿಸುವ ಜೊತೆಗೆ ಸಾಧಕ ಕೃಷಿಕರಿಗೆ ಸನ್ಮಾನ ಮೊದಲಾದ ಕಾರ್ಯಕ್ರಮಗಳು ಜರುಗಲಿದೆ. ಕಾರ್ಯಕ್ರಮಕ್ಕೆ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಚಾಲನೆ ನೀಡಲಿದ್ದು, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಸೇರಿದಂತೆ ವಿವಿಧ ಅತಿಥಿ ಗಣ್ಯರು ಉಪಸ್ಥಿತರಿರಲಿದ್ದಾರೆ. ಈ ವೇಳೆ ಸ್ಥಳೀಯ ಸಾಧಕ ಕೃಷಿಕರಿಗೆ ಸನ್ಮಾನ ನಡೆಯಲಿದೆ. ಆಧುನಿಕ ಕೃಷಿ ಮಾಹಿತಿ ಕಾರ್ಯಾಗಾರಗಳು ನಡೆಯಲಿದೆ. ಮೂರು ದಿನಗಳು ಕೂಡ ವಿವಿಧ ತಳಿಯ ಹಲಸು ಮತ್ತು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ವಸತಿ ಇಲಾಖೆಯಲ್ಲಿ ಮನೆ ಪಡೆಯಬೇಕಾದರೆ ಹಣ ನೀಡಬೇಕು ಎನ್ನುವ ಆರೋಪವನ್ನು ಆಡಳಿತ ಪಕ್ಷವಾದ ಕಾಂಗ್ರೆಸ್‌ನ ಶಾಸಕರೇ ಮಾಡಿದ್ದಾರೆ. ಹೀಗಾಗಿ ಈ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಸಚಿವರು, ಅಧಿಕಾರಿಗಳ ವಿರುದ್ಧ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರು ಕ್ರಮಕೈಗೊಳ್ಳಬೇಕು. ಸಚಿವರಿಂದ ರಾಜೀನಾಮೆ ಪಡೆಯಬೇಕು. ಹಗರಣದಲ್ಲಿ ಭಾಗಿಯಾದವರಿಗೆ ಶಿಕ್ಷೆಯಾಗುವ ತನಕ ನಾವು ನಿರಂತರವಾಗಿ ಹೋರಾಟ ನಡೆಸಲಿದ್ದೇವೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು.  ಅವರು ಕೋಟ ಗ್ರಾ.ಪಂ. ಆವರಣದಲ್ಲಿ, ಬಿಜೆಪಿ ವತಿಯಿಂದ ಕಾಂಗ್ರೆಸ್ ಸರಕಾರದ ವೈಪಲ್ಯಗಳ ವಿರುದ್ಧ ಹಮ್ಮಿಕೊಳ್ಳಲಾದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು. ಸರಕಾರ ಎಕವಿನ್ಯಾಸ ನಕ್ಷೆ, 11-ಇ ನೀಡುವ ಅಧಿಕಾರವನ್ನು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿದೆ. ಉಡುಪಿ ಪ್ರಾಧಿಕಾರದಲ್ಲಿ ಯಾವುದೇ ಕೆಲಸವಾಗುತ್ತಿಲ್ಲ. ಇನ್ನಾದರೂ ಸರಕಾರ ನಗರಾಭಿವೃದ್ಧಿ ಪ್ರಾಧಿಕಾರದ ಹಕ್ಕನ್ನು ಮರಳಿ ಗ್ರಾಮ ಪಂಚಾಯತ್‌ಗೆ ನೀಡಬೇಕು ಎಂದರು. ಉಡುಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಮಾತನಾಡಿದರು. ಬಿಜೆಪಿ ಪ್ರಮುಖರಾದ ಶಂಕರ್ ಅಂಕದಕಟ್ಟೆ, ಕೋಟ ಗ್ರಾ.ಪಂ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಕ್ಕೆ ಸೇರಿದ ಪಿ.ಯು.ಸಿ, ಐ.ಟಿ.ಐ ಹಾಗೂ ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in/ ಅಥವಾ ಸಹಾಯವಾಣಿ ಸಂಖ್ಯೆ: 805077004 ಹಾಗೂ 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕೊಲ್ಲಿ ರಾಷ್ಟ್ರಗಳಲ್ಲೊಂದು ಪುಟ್ಟ ದೇಶ, ಅದರ ರಾಜಧಾನಿಯಲ್ಲೊಂದು  ಚಿಕ್ಕ ಜಾಗದಲ್ಲಿ ಒಳಾಂಗಣ ಮಳಿಗೆ. ಮಳಿಗೆಯ ಹೊರಗಿನ ಮಾರುಕಟ್ಟೆ ಪ್ರದೇಶದಲ್ಲಿ 36°C ತಾಪಮಾನ, ಮಳಿಗೆಯ ಒಳಗೆ ಹವಾನಿಯಂತ್ರಿತ ವಾತಾವರಣ, ವಿಶೇಷವಾಗಿ ಹಣ್ಣಿನ ರಾಜನಿಗೆ ಈ ಸಿದ್ಧತೆ. ಎರಡನೇ ಬಾರಿ ಆಯೋಜಿಸುತ್ತಿರುವ ಮಾವಿನ ಹಾಂಬಾ ಪ್ರದರ್ಶನ ಇದಾಗಿದೆ. 50ಕ್ಕೂ ಹೆಚ್ಚು ಅಂಗಡಿಗಳು, ಸುಮಾರು 25 ಮಾರಾಟಗಾರರು, ಎರಡು ವಾರದ ಸಂತೆ ಎಂದೇ ಹೇಳಬಹುದು. ಪ್ರತಿದಿನಕ್ಕೆ ಸಾವಿರಾರು ಜನರು ಬಂದು ಆನಂದಿಸಿ, ಸ್ವಾದಿಸಿ, ಹೋಗುತ್ತಿರುವರು. ಇದೇ ಕತಾರಿನ ದೋಹದಲ್ಲಿರುವ ಸೂಕ್ ವಾಕಿಫ್ ನಲ್ಲಿ ನಡೆದ ಮಾವಿನ ಮೇಳ. ರಾಜಪುರಿ, ತೂತಪುರಿ, ಬಾದಾಮಿ, ನಾಟಿ, ಸಿಂಧೂರ ಇನ್ನೂ ಅನೇಕ ತಳಿಗಳ ಮಾವಿನ ಹಣ್ಣುಗಳ ಸುವಾಸನೆ ತುಂಬಿದ ಈ ಒಳಾಂಗಣ ಪ್ರದೇಶದಲ್ಲಿ, ಮಾವಿನ ಹಣ್ಣಿನ ರಸ, ಮಾವಿನಕಾಯಿ ಜೊತೆಗೆ ಉಪ್ಪು ಖಾರ, ಮಾವಿನ ಉಪ್ಪಿನಕಾಯಿ, ಮಾವಿನ ಐಸ್ ಕ್ರೀಮ್, ಮಾವಿನ ಫಲೂದ, ಮಾವಿನ ಲಸ್ಸಿ ಹೀಗೆ ವೈವಿಧ್ಯಮಯ ರುಚಿಕರ ರಸಭರಿತ ಮಾವಿನ ತಿಂಡಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ಇನ್ನರ್‌ವೀಲ್‌ ಕ್ಲಬ್ ಇದರ 2025- 26ನೇ ಸಾಲಿನ ನೂತನ ಅಧ್ಯಕ್ಷರಾಗಿ ಕೆ. ಶಾರದಾ ನಾರಾಯಣ್ ಹಾಗೂ ಕಾರ್ಯದರ್ಶಿಯಾಗಿ ಚೈತ್ರ ಸತೀಶ್‌ ಯಡ್ತರೆ ಆಯ್ಕೆಯಾಗಿದ್ದಾರೆ. ಶಾರದಾ ಅವರು ನಿವೃತ್ತ ಶಿಕ್ಷಕಿಯಾಗಿದ್ದು, ವಿವಿಧ ಸಂಸ್ಥೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಜುಲೈ 9ರಂದು ಬೈಂದೂರು ರೋಟರಿ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು ಹಾಗೂ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಆಚರಿಸಲಾಯಿತು. ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಅವರು ಮಾತನಾಡಿ, ಯೋಗದ ಮಹತ್ವವನ್ನು ಸಾರುತ್ತ ಪ್ರತಿಯೊಬ್ಬರು ಯೋಗವನ್ನು ಕಲಿತು ಆರೋಗ್ಯಕರ ಜೀವನದ ಕಡೆಗೆ ಹೆಚ್ಚು ಹಾಕಬೇಕು ಎಂದರು. ಜನತಾ ಸಮೂಹ ಸಂಸ್ಥೆಯ ವಿದ್ಯಾರ್ಥಿಗಳು ಸಾಮೂಹಿಕ ಯೋಗ ಪ್ರಾತ್ಯಕ್ಷಿಕೆ ನಡೆಸಿದರು. ಕಾಲೇಜಿನ ರಾಷ್ಟ್ರಮಟ್ಟದ ಯೋಗಪಟು ನಿರೀಕ್ಷಾ ಹಾಗೂ ಸಾನಿಧ್ಯಾ ಎಸ್. ಮೊಗವೀರ  ಮತ್ತು ವಂಶಿತ್ (7ನೇ ತರಗತಿ) ಯೋಗ ನೃತ್ಯವನ್ನು ಪ್ರದರ್ಶಿಸಿದರು. ಡ್ರಾಮಾ ಜೂನಿಯರ್ ಖ್ಯಾತಿಯ ಸಿಂಚನ ಕೋಟೇಶ್ವರ (ಪ್ರಥಮ ಪಿಯುಸಿ) ಅವರಿಂದ ಡ್ರಾಮಾ ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ಜನತಾ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳು, ಬೋಧಕ/ಬೋಧಕೇತರ  ವೃಂದದವರು  ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಯೋಗ ಶಿಕ್ಷಕಿಯಾದ ಅನ್ವಿತಾ ನಿರೂಪಿಸಿ, ಸ್ವಾಗತಿಸಿ, ಸಮಾಜ ವಿಜ್ಞಾನ ಶಿಕ್ಷಕರಾದ ಸುಬ್ರಹ್ಮಣ್ಯ ಮರಾಟಿ ವಂದಿಸಿದರು.

Read More