ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಯಳಜಿತ್ ಗ್ರಾಮದ ಅರೆಹೊಳೆ ಎಣ್ಣೆಮಕ್ಕಿ ನಿವಾಸಿ ಸೀತಾರಾಮ (40) ಎಂಬ ವ್ಯಕ್ತಿಯು 2024ರ ಫೆಬ್ರವರಿ 18 ರಂದು ಮನೆಯಿಂದ ಕೆಲಸಕ್ಕೆಂದು ಹೋದವರು, ಕೆಲಸಕ್ಕೂ ಹೋಗದೇ ಮನೆಗೂ ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಮೊ.ನಂ: 9480805459, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434 ಹಾಗೂ ಕಂಟ್ರೋಲ್ ರೂಂ 100 (0820-2526444) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಏಳನೇ ಸುತ್ತಿನ ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮವನ್ನು ಏಪ್ರಿಲ್ 26 ರಿಂದ ಜೂನ್ 4 ರ ವರೆಗೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಪ್ರತಿಶತಃ ನೂರರಷ್ಟು ಗುರಿ ಸಾಧನೆಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಾನುವಾರು ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆ ಹಾಗೂ ಪಶು ಸಂಜೀವಿನಿ ವಾಹನಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಾನುವಾರುಗಳಲ್ಲಿ ಕಂಡು ಬರುವ ಕಾಲುಬಾಯಿ ರೋಗವು ವೈರಾಣುವಿನಿಂದ ಬರುವ ಅಂಟು ರೋಗವಾಗಿದ್ದು, ಗೊರಸು ಕಾಲುಗಳನ್ನು ಹೊಂದಿರುವ ಎಲ್ಲಾ ಪ್ರಾಣಿಗಳಲ್ಲಿ ಈ ರೋಗವು ಕಂಡುಬರುತ್ತದೆ. ರೈತರಿಗೆ ಆರ್ಥಿಕ ಸಂಕಷ್ಟ ಉಂಟುಮಾಡುವ ಈ ರೋಗವನ್ನು ನಿಯಂತ್ರಿಸಲು ಲಸಿಕೆ ನೀಡುವುದೊಂದೇ ಪರಿಹಾರವಾಗಿದ್ದು, ಪ್ರತೀ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಣ ಎಂದರೆ ಕೇವಲ ಅಕ್ಷರ ಅಭ್ಯಾಸ ಅಲ್ಲ. ಕ್ರೀಡೆ, ಕಲೆ ಮುಂತಾದ ಚಟುವಟಿಕೆಗಳು ಅದರ ಭಾಗವಾದರೆ ಮಾತ್ರ ಅವರೊಳಗಿನ ಪ್ರತಿಭೆಗಳು ಹೊರಹೊಮ್ಮಲು ಸಾಧ್ಯವಾಗುತ್ತದೆ. ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಇಂತಹ ಬೇಸಿಗೆ ಶಿಬಿರಗಳು ಹೆಚ್ಚು ಸಹಕಾರಿಯಾಗುತ್ತದೆ. ಮಕ್ಕಳು ರಜಾದಿನಗಳ ಸಮಯವನ್ನ ಸದುಪಯೋಗ ಪಡಿಸಿಕೊಂಡು ಇನ್ನಷ್ಟು ಕ್ರಿಯಾಶೀಲರಾಗಲು ಬೇಸಿಗೆ ಶಿಬಿರಗಳು ಉತ್ತಮ ಆಯ್ಕೆ ಆಗಿರುತ್ತದೆ ಎಂದು ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು. ಅವರು ಇಲ್ಲಿನ ಕೋಟೇಶ್ವರ ಯಡಾಡಿ -ಮತ್ಯಾಡಿ ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಆಯೋಜಿಸಿದ ಬೇಸಿಗೆ ಶಿಬಿರ ಮಂಥನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳಿಗೆ ಶಾಲಾ ಮಟ್ಟದಲ್ಲಿಯೇ ದುಶ್ಚಟಗಳಿಂದ, ಕೆಟ್ಟ ಹವ್ಯಾಸಗಳಿಂದ ದೂರವಿರಿಸುವ ಅರಿವು ಕಾರ್ಯಕ್ರಮಗಳನ್ನ ಆಯೋಜಿಸಿದಾಗ ಉತ್ತಮ ಸಮಾಜದ ನಿರ್ಮಾಣ ಸಾಧ್ಯವಾಗುತ್ತದೆ. ಇಂತಹ ಬೇಸಿಗೆ ಶಿಬಿರಗಳು ಮಕ್ಕಳು ಉತ್ತಮ ಪ್ರಜೆಯಾಗಿ ರೂಪುಗೊಳ್ಳಲು ಸಹಕಾರಿ ಎಂದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಖ್ಯಾತ ಚಲನಚಿತ್ರ ನಟಿ ಸಂಗೀತ ಶೃಂಗೇರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕರಿಗಾಗಿ ಭಾಷಾ ಕೌಶಲ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ನಾಲ್ಕು ದಿನಗಳ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಈ ಕಾರ್ಯಾಗಾರವು ಅನುಭವಿ ಶಿಕ್ಷಣ ತಜ್ಞೆ ಹಾಗೂ ಯೋಗ ಥೆರಪಿಸ್ಟ್ ಆಗಿರುವ ಜಯಶ್ರೀ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಾಗಾರದ ಮುಖ್ಯ ಉದ್ದೇಶವು ಶಿಕ್ಷಕರಲ್ಲಿ ಸಮರ್ಥ ಸಂವಹನ ಕೌಶಲ್ಯವನ್ನು ಬೆಳೆಸುವುದು ಹಾಗೂ ಒತ್ತಡ ರಹಿತ ದಿನಚರಿಯನ್ನು ಅನುಸರಿಸುತ್ತಾ, ಉತ್ತಮ ಶಿಕ್ಷಕರಾಗಿ ಹೊಮ್ಮಲು ಸಹಕರಿಸುವುದಾಗಿತ್ತು. ಶೈಕ್ಷಣಿಕ ವಾತಾವರಣದಲ್ಲಿ ಭಾಷೆಯ ಪ್ರಾಮುಖ್ಯತೆ ಹಾಗೂ ಶಿಕ್ಷಕರ ಪಾತ್ರ ಎಷ್ಟು ಮಹತ್ವಪೂರ್ಣ ಎಂಬುದನ್ನು ಸುಂದರವಾಗಿ ಇಲ್ಲಿ ವಿವರಿಸಲಾಯಿತು. ಜಯಶ್ರೀ ಅವರು ವ್ಯಕ್ತಿತ್ವ ವಿಕಸನ ಹಾಗೂ ಸಮರ್ಥ ಅಭಿವ್ಯಕ್ತಿಯ ತಂತ್ರಗಳ ಮೇಲೆ ಪ್ರಾಯೋಗಿಕ ತರಬೇತಿ ನೀಡಿದರು. ಚಟುವಟಿಕೆ ಆಧಾರಿತ ವಿಧಾನಗಳ ಮೂಲಕ ಈ ಕೌಶಲ್ಯವನ್ನು ಬಳಕೆ ಮಾಡುವ ಬಗ್ಗೆ ಸ್ಪಷ್ಟತೆ ನೀಡಲಾಯಿತು. ಶಿಕ್ಷಕರು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ನವೀಕರಿಸಿಕೊಂಡರು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಗೊಬ್ಬರಬೆಟ್ಟು ಓಂ ಸ್ಟಾರ್ ಫ್ರೆಂಡ್ಸ್ ಇದರ ರಜತ ಮಹೋತ್ಸವದ ಅಂಗವಾಗಿ ಸಾಧಕರಿಗೆ ಸನ್ಮಾನ, ಅಶಕ್ತರಿಗೆ ನೆರವು, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಇತ್ತೀಚಿಗೆ ಗೊಬ್ಬರಬೆಟ್ಟು ಪರಿಸರದಲ್ಲಿ ಜರಗಿತು. ಕಾರ್ಯಕ್ರಮವನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಉದ್ಘಾಟಿಸಿದರು. ಇದೇ ವೇಳೆ ಕೋಟ ಶಾಲೆಯ ಅಂಗನವಾಡಿ ಶಿಕ್ಷಕಿ ಕಮಲ ಟೀಚರ್, ನಿವೃತ್ತ ಶಿಕ್ಷಕ, ಸಾಹಿತಿ ವಿಠ್ಠಲ್ ವಿ. ಗಾವ್ಕಂರ್, ಹಿರಿಯ ಕೃಷಿಕ ವೈಕುಂಠ ಹಂದೆ ಅವರುಗಳಿಗೆ ನಮ್ಮೂರ ಸಾಧಕರಿಗೆ ನಮ್ಮೂರ ಹಿರಮೆ ಪುರಸ್ಕಾರ ನೀಡಿ ಗೌರವಿಸಲಾಯಿತು. ಶಾಸಕ ಕಿರಣ್ ಕುಮಾರ್ ಕೊಡ್ಗಿ ಸನ್ಮಾನ ಕಾರ್ಯಕ್ರಮ ನೆರವೆರಿಸಿದರು. ಸಭೆಯ ಅಧ್ಯಕ್ಷತೆಯನ್ನು ಓಂ ಸ್ಟಾರ್ ಫ್ರೆಂಡ್ಸ್ ಅಧ್ಯಕ್ಷ ನಾಗೇಶ್ ಪೂಜಾರಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಕೋಟತಟ್ಟು ಗ್ರಾ.ಪಂ ಅಧ್ಯಕ್ಷ ಸತೀಶ್ ಕುಂದರ್, ಸಾಲಿಗ್ರಾಮ ಪಟ್ಟಣಪಂಚಾಯತ್ ಅಧ್ಯಕ್ಷೆ ಸುಕನ್ಯಾ ಜಗದೀಶ್, ಕೋಟದ ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಶೆಣೈ, ಪಂಚವರ್ಣ ಸಂಘಟನೆಯ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಕೋಟ ನಾರಾಯಣಗುರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಬ್ರಹ್ಮಾವರದ ಸೈಂಟ್ ಮೇರಿಸ್ ಸಿರಿಯನ್ ಕಾಲೇಜು ಹಾಗೂ ಮಂಗಳೂರು ವಿವಿ ಜಂಟಿ ಆಶ್ರಯದಲ್ಲಿ ನಡೆದ ಮಂಗಳೂರು ವಿವಿ ಅಂತರ್ ಕಾಲೇಜು ಉಡುಪಿ ವಲಯ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಕ್ರಿಕೆಟ್ ತಂಡವು ಜಯಶಾಲಿಯಾಯಿತು. ಫೈನಲ್ ಪಂದ್ಯದಲ್ಲಿ ಕುಂದಾಪುರದ ಬಿಬಿ ಹೆಗ್ಡೆ ಕಾಲೇಜಿನ ತಂಡವನ್ನು 8 ವಿಕೆಟ್ಗಳ ಅಂತರದಿಂದ ಗೆದ್ದು, ಶಿರ್ವ ಲೆಸ್ಲಿ ಡಿಸೋಜಾ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಇದಕ್ಕೂ ಮುನ್ನ ಸೆಮಿಫೈನಲ್ ಪಂದ್ಯದಲ್ಲಿ ಬ್ರಹ್ಮಾವರದ ಎಸ್ಎಮ್ಎಸ್ ಕಾಲೇಜಿನ ತಂಡದ ವಿರುದ್ಧ 23 ರನ್ಗಳ ಅಂತರದಲ್ಲಿ ಗೆದ್ದು ಫೈನಲ್ ಪ್ರವೇಶಿಸಿತ್ತು. ಆಳ್ವಾಸ್ ಕಾಲೇಜಿನ ಜಿಷ್ಣು ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡರು. ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಯಳಜಿತ್ ಶ್ರೀ ರಾಮಕೃಷ್ಣ ಕುಟೀರದಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಬುಕ್ ನೀಡುವ ಕಾರ್ಯಕ್ರಮವನ್ನು ದಾನಿಗಳಾದ ಬೈಂದೂರಿನ ಉದ್ಯಮಿ ಜಯಾನಂದ ಹೋಬಳಿದಾರ್ ಅವರು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ನೋಟ್ ಬುಕ್ ನೀಡಿ, ಶುಭ ಹಾರೈಸಿದರು. ಈ ವೇಳೆ ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರು ಉಪಸ್ಥಿತರಿದ್ದರು. ಪ್ರತೀ ವರ್ಷವೂ ದಾನಿಗಳ ಸಹಕಾರದೊಂದಿಗೆ ಕುಟೀರದ ವತಿಯಿಂದ 400 ರಿಂದ 500 ಬಡ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಗಳನ್ನು ನೀಡಲಾಗುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಪಿ.ಯು.ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸಿ.ಇ.ಟಿ ಪರೀಕ್ಷೆಯನ್ನು ಏಪ್ರಿಲ್ 16 & 17 ರಂದು ನಡೆಸಿದ್ದು, ಶಿವಮೊಗ್ಗ ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯು ಕೈಗೆ ಕಟ್ಟಿಕೊಂಡಿದ್ದ ಕಾಶಿದಾರ ಮತ್ತು ಮೈಮೇಲೆ ಧರಿಸಿದ್ದ ಜನಿವಾರ, ವಿದ್ಯಾರ್ಥಿಗಳ ಕೊರಳಲ್ಲಿ ಇದ್ದ ಶಿವದಾರ ಹಾಗೂ ರುದ್ರಾಕ್ಷಿಸರವನ್ನು ಭದ್ರತಾ ಸಿಬ್ಬಂದಿ ತೆಗೆಸಿದ್ದಾರೆ ಎಂದು ಪೋಷಕರುಗಳು ಆರೋಪಿಸಿದ್ದಾರೆ ಇದನ್ನು ನಾನು ಖಂಡಿಸುತ್ತೇನೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಹೇಳಿದರು. ಹಿಂದೂಗಳ ಧಾರ್ಮಿಕ ಭಾವನೆಗೆ ತೀವ್ರತರವಾದ ಧಕ್ಕೆ ಉಂಟಾಗಿರುತ್ತದೆ. ಇದು ವಿದ್ಯಾರ್ಥಿಗಳ ಪರೀಕ್ಷೆಯ ಕಾರ್ಯಕ್ಷಮತೆಯ ಮೇಲೆ ತೀವ್ರತರವಾದ ಪರಿಣಾಮ ಬೀರಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ವಿವಿಧ ನೇಮಕಾತಿ ಪರೀಕ್ಷೆ, ಸ್ಪಧಾತ್ಮಕ ಪರೀಕ್ಷೆ ಹಾಗೂ ಪ್ರವೇಶ ಪರೀಕ್ಷೆಗೆ ವಸ್ತ್ರ ಸಂಹಿತೆ ಬಗ್ಗೆ ಸ್ಪಷ್ಟವಾದ ಸೂಚನೆಯನ್ನು ನೀಡಿದ್ದಾಗ್ಯೂ ಕೂಡ ಅದನ್ನು ಉಲ್ಲಂಘಸಿ ಸಿ.ಇ.ಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಧರಿಸಿದ್ದ ಶಿವದಾರ, ಜನಿವಾರ, ರುದ್ರಾಕ್ಷಿ ಸರಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇತಿಹಾಸ ಪ್ರಸಿದ್ಧ ಬೈಂದೂರು ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಬಿ. ದೊಟ್ಟಯ್ಯ ಪೂಜಾರಿ ಅವರು ನೇಮಕಗೊಂಡಿದ್ದಾರೆ. ವೃತ್ತಿಯಲ್ಲಿ ಛಾಯಾಗ್ರಾಹಕರಾಗಿರುವ ಬಿ. ದೊಟ್ಟಯ್ಯ ಪೂಜಾರಿ ಅವರು ಸೌತ್ ಕೆನರಾ ಪೋಟೋಗ್ರಾಫರ್ಸ ಅಸೋಸಿಯೇಶನ್ ಕುಂದಾಪುರ- ಬೈಂದೂರು ವಲಯದ ನಿಕಟಪೂರ್ವ ಅಧ್ಯಕ್ಷರಾಗಿದ್ದಾರೆ. ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ ಅಂತರ್-ಕಾಲೇಜು ಮಟ್ಟದ ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ಗಮನ ಸೆಳೆದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2023-24ನೇ ಸಾಲಿನ ವಾರ್ಷಿಕ ಸಂಚಿಕೆ ‘ಶಿಖರʼವನ್ನು ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕ ಶ್ರೀನಿವಾಸ ಸೋಮಯಾಜಿ ಅವರು ಅನಾವರಣಗೊಳಿಸಿ, ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕಿ ದೀಪಾ ಪೂಜಾರಿ ಅತಿಥಿಗಳನ್ನು ಪರಿಚಯಿಸಿದರು. ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಹರೀಶ್ ಕಾಂಚನ್ ನಿರೂಪಿಸಿದರು. ಇಂಗ್ಲೀಷ್ ವಿಭಾಗದ ಪ್ರಾಧ್ಯಾಪಕಿ ರವಿನಾ ಸಿ. ಪೂಜಾರಿ ಸ್ವಾಗತಿಸಿ, ಶಿಖರ ವಾರ್ಷಿಕ ಸಂಚಿಕೆಯ ನಿರ್ವಾಹಕ ಸಂಪಾದಕರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ವಂದಿಸಿದರು.
