ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ತೆರವಾಗಿರುವ ಸಾಮಾನ್ಯ ಕರ್ತವ್ಯದ ವೈದ್ಯಾಧಿಕಾರಿ ಹುದ್ದೆಗೆ ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದಲ್ಲಿ ರೋಸ್ಟರ್ ಕಂಮೆರಿಟ್ ಆಧಾರದಲ್ಲಿ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ತೆರವಾಗಿರುವ ಸಂಸ್ಥೆಗಳು: ಕುಂದಾಪುರ ಸಾರ್ವಜನಿಕ ಆಸ್ಪತ್ರೆ-1, ಕಾರ್ಕಳ ಸಾರ್ವಜನಿಕ ಆಸ್ಪತ್ರೆ-2, ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರ-1, ಬೈಂದೂರು ಸಮುದಾಯ ಆರೋಗ್ಯ ಕೇಂದ್ರ-1, ದುರ್ಗಾ ಪ್ರಾಥಮಿಕ ಆರೋಗ್ಯ ಕೇಂದ್ರ-1, ಸಂಚಾರಿ ಗಿರಿಜನ ಆರೋಗ್ಯ ಘಟಕ-1 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ದೂ.ಸಂ: 0820- 2525566/2536650 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಪ್ರಕಟಣೆ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಮಹಾಸತಿ ಪ್ರಾಥಮಿಕ ಮೀನುಗಾರರ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ 2024-25ನೇ ಸಾಲಿನ ಮಹಾಸಭೆ ಇಲ್ಲಿನ ಶ್ರೀ ವೀರೇಶ ಮಾಂಗಲ್ಯ ಮಂದಿರ ಸಭಾಂಗಣದಲ್ಲಿ ಇತ್ತೀಚಿಗೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷೆ ನೀಲಾವತಿ ಎಸ್. ಖಾರ್ವಿ ಮಾತನಾಡಿ, ವರದಿ ವರ್ಷದಲ್ಲಿ ಒಟ್ಟು 4619 ಎಲ್ಲಾ ವಿಧದ ಸದಸ್ಯರೊಂದಿಗೆ ರೂ. 22.98 ಲಕ್ಷ ಪಾಲು ಬಂಡವಾಳವನ್ನು ಹೊಂದಿದೆ. ವರ್ಷ ಅಂತ್ಯಕ್ಕೆ 20.43 ಕೋಟಿಗೂ ಮಿಕ್ಕಿ ಠೇವಣಿಯನ್ನು ಹೊಂದಿದ್ದು, 9.21 ಕೋಟಿ ರೂ.ಗಳನ್ನು ಇತರ ಸಂಘ/ಬ್ಯಾಂಕುಗಳಲ್ಲಿ ಹೂಡಿಕೆ ಮಾಡಲಾಗಿದೆ. ವರದಿ ವರ್ಷಾಂತ್ಯಕ್ಕೆ ಸಂಘವು 16.42 ಲಕ್ಷ ರೂ. ನಿವ್ವಳ ಲಾಭ ಗಳಿಸಿದ್ದು, ಶೇ.10 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು. 2024-25ನೇ ಸಾಲಿನ ಎಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಸಹಕಾರಿ ಸಂಘದ ಸದಸ್ಯರ ಒಟ್ಟು 26 ಜನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಸಂಘದ ಉಪಾಧ್ಯಕ್ಷೆ ಶೈಲಾ ಎಂ. ಖಾರ್ವಿ, ನಿರ್ದೇಶಕಿಯರಾದ ಸುಶೀಲಾ ಎ. ಖಾರ್ವಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಸೆ.22: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾನವರಾತ್ರಿ ಮಹೋತ್ಸವಕ್ಕೆ ಸೋಮವಾರ ಚಾಲನೆ ನೀಡಲಾಯಿತು. ದೇವಳದ ತಂತ್ರಿಗಳಾದ ನಿತ್ಯಾನಂದ ಅಡಿಗ ಅವರ ನೇತೃತ್ವದಲ್ಲಿ ಬೆಳಗ್ಗೆ ಗಣಪತಿ ಪೂಜೆಯೊಂದಿಗೆ ನವರಾತ್ರಿ ಪರ್ವಕ್ಕೆ ಚಾಲನೆ ನೀಡಿದ ಬಳಿಕ ಶ್ರೀದೇವಿಗೆ ವಿಶೇಷ ಪೂಜೆ, ಮಂಗಳಾರತಿ ನಡೆಯಿತು. ಬಳಿಕ ನವರಾತ್ರಿ ಮಹೋತ್ಸವದ ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಈ ವೇಳೆ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿಯ ರಾಷ್ಟ್ರೋತ್ಥಾನ ಪಿಯು ಕಾಲೇಜಿನಲ್ಲಿ ಜಿಲ್ಲಾಮಟ್ಟದ ಚದುರಂಗ (ಚೆಸ್) ಸ್ಪರ್ಧೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ವಿದ್ಯಾರ್ಥಿ ತೇಜಸ್ ಎಂ. ಶೆಣೈ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದು, ಮುಂಬರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಅವರು ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ಆಡಲಿದ್ದಾರೆ. ವಿದ್ಯಾರ್ಥಿಯ ಸಾಧನೆಯನ್ನು ಆಡಳಿತ ಮಂಡಳಿ, ಬೋಧಕ – ಬೋಧಕೇತರ ವೃಂದದವರು ಅಭಿನಂದಿಸಿ, ಶುಭಹಾರೈಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಆಶ್ರಯದಲ್ಲಿ “ವಿಶೇಷ ಉಪನ್ಯಾಸ ಮತ್ತು ಕವಿಯೊಂದಿಗೆ ಸಂವಾದ” ಕಾರ್ಯಕ್ರಮವು ಡಾ. ವಿ.ಎ. ಆಚಾರ್ಯ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಕನ್ನಡದ ಖ್ಯಾತ ಕವಿ ಹಾಗೂ ವಿಮರ್ಶಕರಾದ ಕೆ.ಆರ್. ಪುರಂ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ. ಟಿ. ಯಲ್ಲಪ್ಪ ಅವರು ಅತಿಥಿ ಉಪನ್ಯಾಸಕರಾಗಿ ಪಾಲ್ಗೊಂಡು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಅವರು ತಮ್ಮ ಬದುಕಿನ ಹಿನ್ನಲೆಯಲ್ಲಿ ಎದುರಿಸಿದ ಸಂಕಷ್ಟಗಳನ್ನು ಹಂಚಿಕೊಂಡರು. “ವಿದ್ಯಾಭ್ಯಾಸಕ್ಕೆ ಅನುಕೂಲವಿಲ್ಲದ ಮಲಹೋರುವ ಕುಟುಂಬದಲ್ಲಿ ಕಡುಬಡತನದಲ್ಲಿ ಜನಿಸಿದ್ದ ನಾನು, ಕನ್ನಡ ಸಾಹಿತ್ಯದ ಅಭ್ಯಾಸ ಮಾಡದೆ, ಭಾಷೆಯನ್ನು ಪ್ರೀತಿಸದೆ ಇದ್ದಿದ್ದರೆ ಇವತ್ತು ಸಹ ಅದೇ ಪರಿಸ್ಥಿತಿಯಲ್ಲಿ ಮುಂದುವರಿಯಬೇಕಾಗಿತ್ತು. ಆದರೆ ಬದುಕಿನ ಆಯ್ಕೆ ನನ್ನ ಕೈಯಲ್ಲಿತ್ತು. ಕಲಾ ವಿಭಾಗವನ್ನು ಆರಿಸಿಕೊಂಡು, ಬದುಕಿನ ಪಥ ಬದಲಿಸಿದೆ ಎಂದು ತಮ್ಮ ಬದುಕಿನ ಹೋರಾಟವನ್ನು ವಿವರಿಸಿದರು. ಡಾ. ಯಲ್ಲಪ್ಪ ಅವರು ವೈದ್ಯರಾಗಬೇಕೆಂಬ ಕನಸನ್ನು ಹೊತ್ತು ವಿಜ್ಞಾನ ವಿಭಾಗಕ್ಕೆ ಸೇರಿದ ನೆನಪು ಹಂಚಿಕೊಂಡರು. “ನನ್ನ ಸಹೋದರ ಸಾಲ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ವ್ಯವಸಾಯ ಸೇವಾ ಸಹಕಾರಿ ಸಂಘ ಸಂಘವು ಪ್ರಧಾನ ಕಚೇರಿ ಸೇರಿದಂತೆ 9 ಶಾಖೆಗಳ ಮೂಲಕ 7 ಗ್ರಾಮಗಳ ಜನತೆಗೆ ಆರ್ಥಿಕ ವ್ಯವಹಾರ ಕಲ್ಪಿಸಿ, ಪ್ರಸಕ್ತ ಸಾಲಿನಲ್ಲಿ ಸುಮಾರು 853.49 ಕೋಟಿಗೂ ಮೀರಿ ವ್ಯವಹಾರ ನಡೆಸಿ, ಸುಮಾರು 1.03 ಕೋಟಿ ರೂ. ನಿವ್ವಳ ಲಾಭಗಳಿಸಿದೆ. ಸದಸ್ಯರಿಗೆ ಶೇ.15 ಡಿವಿಡೆಂಟ್ ನೀಡಲಾಗುವುದು ಎಂದು ಸಂಘದ ಅಧ್ಯಕ್ಷ ಟಿ. ನಾರಾಯಣ ಹೆಗ್ಡೆ ಹೇಳಿದರು. ಅವರು ಯಡ್ತರೆ ಜೆ.ಎನ್.ಆರ್. ಸಭಾಭವನದಲ್ಲಿ ಸೋಮವಾರ ನಡೆದ ಸಂಘದ ವಾರ್ಷಿಕ ಸರ್ವಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಘದ ಠೇವಣಾತಿ ಅವಿರತವಾಗಿ ಏರುತ್ತಿದ್ದು, ವರದಿ ವರ್ಷದಲ್ಲಿ ಸುಮಾರು 6.29 ಕೋಟಿ ರೂ. ಏರಿಕೆಯಾಗಿದ್ದು, ಶೇ. 8.84ರಷ್ಟು ಹೆಚ್ಚಳವಾಗಿದೆ. ವರದಿ ವರ್ಷದ ಪ್ರಾರಂಭದಲ್ಲಿ ಸುಮಾರು 63.15ಕೋಟಿ ರೂ. ಹೊರಬಾಕಿ ಸಾಲವಿದ್ದು, ಪ್ರಸಕ್ತ ಸಾಲಿನಲ್ಲಿ 72.01ಕೋಟಿ ರೂ. ಸಾಲ ವಿತರಿಸಲಾಗಿದೆ. ವರ್ಷಾಂತ್ಯದಲ್ಲಿ ಸದಸ್ಯರಿಂದ ಬರಬೇಕಾದ ಸಾಲಗಳ ಪೈಕಿ ಕೃಷಿ ಪೂರಕ ಸಾಲ ಶೇ. 99.67, ಕೃಷಿಯೇತರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಪಟ್ಟಣ ಪಂಚಾಯತಿಯಿಂದ ಗ್ರಾಮೀಣ ಭಾಗಗಳನ್ನು ವಿರಹಿತಗೊಳಿಸುವಂತೆ ಬೈಂದೂರು ತಾಲೂಕು ರೈತ ಸಂಘದ ನೇತೃತ್ವದಲ್ಲಿ ಸೋಮವಾರದಿಂದ ಇಲ್ಲಿನ ಆಡಳಿತ ಸೌಧದ ಮುಂಭಾಗದಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ಆರಂಭಗೊಂಡಿದೆ. ಉದ್ಯಮಿ ನಿತಿನ್ ನಾರಾಯಣ ತಳಿರು ಕಟ್ಟುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಿ ಮಾತನಾಡಿ, ಬೈಂದೂರಿನ ಹಳ್ಳಿಗಳ ಪಾಲಿಗೆ ಪಟ್ಟಣ ಪಂಚಾಯತ್ ನಿರ್ಧಾರ ಸಮಸ್ಯೆಯ ಸುಳಿಯಲ್ಲಿ ಸಿಲುಕಿಸಿದೆ. ಅರಣ್ಯ ಪ್ರದೇಶಗಳನ್ನು ಸೇರಿಸಿ ಅವೈಜ್ಞಾನಿಕ ವಿಂಗಡನೆ ಮಾಡಿದ್ದು, ಜನಪ್ರತಿನಿಧಿಗಳು ಸ್ವಲ್ಪ ಪ್ರಾಮಾಣಿಕವಾಗಿ ಗಮನಹರಿಸಿದರೆ ಪರಿಹಾರ ಸಾಧ್ಯ ಎಂದರು. ಪ್ರತಿಭಟನೆಯ ನೇತೃತ್ವ ವಹಿಸಿರುವ ಬೈಂದೂರು ತಾಲೂಕು ರೈತಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ, ಈಗಾಗಲೆ ಬೈಂದೂರು ಮತ್ತು ಉಡುಪಿಯಲ್ಲಿ ನಮ್ಮ ಆಗ್ರಹ ಈಡೇರಿಸುವಂತೆ ಬೇಡಿಕೆ ಇಟ್ಟು ಪ್ರತಿಭಟನೆ ನಡೆಸಿ ಗಮನ ಸೆಳೆದಿದ್ದು, ಸರ್ಕಾರದ ಮಟ್ಟದಲ್ಲಿ ಸಂಚಲನ ಮೂಡಿಸಿದೆ. ನ್ಯಾಯ ಸಿಗುವ ವರಗೆ ಹೋರಾಟ ಮುಂದುವರಿಯಲಿದ್ದು, ಎಲ್ಲಾ ಭಾಗದ ರೈತ ಮುಖಂಡರು, ನಾಯಕರು, ಸಾರ್ವಜನಿಕರು ಬೆಂಬಲ ಸೂಚಿಸಿದ್ದಾರೆ. ಪ್ರತಿದಿನ ಒಂದೊಂದು. ಪ್ರದೇಶದದ ರೈತರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ನಿವೃತ್ತ ಶಿಕ್ಷಕರ ಬದುಕು ಹಾಗೂ ಅವರ ಶೈಕ್ಷಣಿಕ ಜೀವನ ತಳಹದಿ ಶ್ರೇಷ್ಠವಾದದ್ದು, ಆದರೆ ಅವರ ನಿವೃತ್ತಿಯ ನಂತರ ದಿನಗಳಲ್ಲಿ ಗುರುತಿಸುವ ಕಾಯಕ ಶೈಕ್ಷಣಿಕ ಬದುಕಿನ ಸಾರ್ಥಕತೆಯ ಕ್ಷಣಕ್ಕೆ ಸಾಕ್ಷಿಯಾಗಿದೆ ಎಂದು ಕೋಟದ ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ. ಜಗದೀಶ್ ನಾವಡ ಹೇಳಿದರು. ಅವರು ಭಾನುವಾರ ಡಾ. ಕೋಟ ಶಿವರಾಮ ಕಾರಂತ ಮಕ್ಕಳ ವೇದಿಕೆ, ಸಾಲಿಗ್ರಾಮ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಘಟಕ ಗೀತಾನಂದ ಫೌಂಡೇಶನ್, ಕೋಟ-ಮಣೂರು, ಕೋಟ ವಿದ್ಯಾ ಸಂಘ ಕೋಟ ಸಹಯೋಗದಲ್ಲಿ ನಿವೃತ್ತ ಶಿಕ್ಷಕರ ಸಾಹಿತ್ಯಕ ಸಮಾವೇಶ ಮತ್ತು ಗುರುವಂದನೆ ಕಾರ್ಯಕ್ರಮದಲ್ಲಿ ಅಭಿನಂದನಾ ನುಡಿಗಳನ್ನಾಡಿ ಮಾತನಾಡಿದರು. ಸಂಘಟನೆ ಮೂಲಕ ನಿವೃತ್ತಿಯ ಬದುಕಿಗೆ ನೆಮ್ಮದಿ ವಾತಾವರಣ ಕಲ್ಪಿಸಲಿದೆ ಹಾಗೂ ನಿವೃತ್ತಿ ಬದುಕಿನಲ್ಲಿ ಸಮಾನ ಮನಸ್ಕರೊಂದಿಗೆ ಸತ್ಚಿಂತನೆಯ ಜೊತೆಗೆ ವಿಚಾರ ವಿನಿಮಯಕ್ಕೆ ವೇದಿಕೆ ಅಗತ್ಯ, ಅದು ನಮ್ಮ ಆರೋಗ್ಯಕರ ಬದುಕಿಗೆ ಮುನ್ನುಡಿ ಬರೆಯಲಿದೆ ಎಂದರು. ಈ ಸಂದರ್ಭದಲ್ಲಿ ಇತ್ತೀಚಿಗೆ ನಿವೃತ್ತರಾದ ಮಂಜುನಾಥ್ ಉಪಾಧ್ಯಾಯ,ಜಗದೀಶ್ ಹೊಳ್ಳ,ರಮೇಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬಸ್ರೂರು ಗ್ರಾಮದ ಬಸ್ಟಾಂಡ್ ನಿಲ್ದಾಣದ ಸಮೀಪ ಬೃಹತ್ ಶಿಲಾಯುಗದ ನಿಲಿಸುಗಲ್ಲು ಪತ್ತೆಯಾಗಿದೆ ಎಂದು ಇತಿಹಾಸ ಸಂಶೋಧಕ ಪ್ರೋ. ಟಿ.ಮುರುಗೇಶ ಮಾಹಿತಿ ನೀಡಿದ್ದಾರೆ. ಸಾಮಾನ್ಯ ಶಕ ಪೂರ್ವ ವರ್ಷ (ಕ್ರಿ.ಪೂ)1 ಸಾಮಾನ್ಯ ಶಕ. ವರ್ಷ(ಕ್ರಿ.ಶ) ರಿಂದ. 1 ರ ಅಂದರೆ ಸರಿ ಸುಮಾರು ಎರಡು ಸಾವಿರ ವರ್ಷದ ಪ್ರಾಚೀನವಾದ ನಿಲಿಸು ಗಲ್ಲು ಪತ್ತೆಯಾಗಿದೆ. ಅಳತೆ: ಮಣ್ಣಿನ ಮೇಲ್ಭಾಗದ ಎತ್ತರ 4.51 ಅಡಿ ಅಂದರೆ 130cm, ಮೇಲ್ಭಾಗದ ದಪ್ಪ 20 cm ಹಾಗೂ ಮಧ್ಯಭಾಗದ ದಪ್ಪ 40 cm ಕಲ್ಲು ತ್ರಿಕೋನ ಶೈಲಿಯಲ್ಲಿ ಕಂಡು ಬಂದಿದೆ. ನಿಲಿಸುಗಲ್ಲು:ಇತಿಹಾಸದಲ್ಲಿ ಸಮಾಧಿಯ ಸ್ಥಳದಲ್ಲಿ ನೆನಪಿನ ಕಲ್ಲುಗಳನ್ನು ಹಾಕಲಾಗುತ್ತಿದ್ದರು. ಬೃಹತ್ ಶಿಲಾಯುಗದ ಸಮಾಧಿ ಸ್ಥಳದಲ್ಲಿ ಸಮಾಧಿಯ ಸಂಕೇತವಾಗಿ ಈ ರೀತಿಯ ಕಲ್ಲುಗಳನ್ನು ನಿಲ್ಲಿಸುತ್ತಿದ್ದರು. ಆ ಕಲ್ಲುಗಳಿಗೆ ನಿಲಿಸುಗಲ್ಲು ಅಧವಾ ಮೆನ್ಹಿರ್ ಎಂದು ಕರೆಯುತ್ತಾರೆ. ಡಾ. ಪಿ.ಗುರುರಾಜ್ ಭಟ್ ಅವರ ಸ್ಟಡಿ ಆಫ್ ತುಳುವ ಹಿಸ್ಟರಿಯಲ್ಲಿ ಬಸ್ರೂರು ಸರಕಾರಿ ಪ್ರೌಢ ಶಾಲೆಯ ಆಟದ ಮೈದಾನದಲ್ಲಿದ್ದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳ 8ನೇ ತರಗತಿಯಲ್ಲಿ ಓದುತ್ತಿರುವ 3,50,000 ರೂ.ವರೆಗೆ ಕೌಟುಂಬಿಕ ಆದಾಯ ಹೊಂದಿರುವ ವಿದ್ಯಾರ್ಥಿಗಳು ಸೆ.30 ರೊಳಗೆ ಎನ್.ಎಂ.ಎಂ.ಎಸ್ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಪರೀಕ್ಷೆಯು ನವೆಂಬರ್ ತಿಂಗಳಲ್ಲಿ ನಡೆಯಲಿದ್ದು ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ತಮ್ಮ ಶಾಲಾ ಮುಖ್ಯ ಶಿಕ್ಷಕಿಯನ್ನು ಭೇಟಿಯಾಗುವಂತೆ ಅಥವಾ ಡಯಟ್ ನ ಜಿಲ್ಲಾ ನೋಡಲ್ ಅಧಿಕಾರಿ ಚಂದ್ರನಾಯ್ಕ್ ಅವರನ್ನು ದೂ.ಸಂ 9449449602 ಮೂಲಕ ಸಂಪರ್ಕಿಸುವಂತೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
