Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಜ್ಯ ಸರಕಾರದಿಂದ ಮಾನ್ಯತೆ ಪಡೆದಿರುವ ಶ್ರೀ ಶಿವಕುಮಾರ ರಂಗಪ್ರಯೋಗಶಾಲೆಯ ಪ್ರಸಕ್ತ ಸಾಲಿನ ರಂಗಶಿಕ್ಷಣ (ಡಿಪ್ಲೋಮಾ ಇನ್ ಡ್ರಾಮಾ ಆರ್ಟ್ಸ್) ಪ್ರವೇಶಾತಿಗೆ ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ, ರಂಗಭೂಮಿಯಲ್ಲಿ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ www.theatreschoolsanehalli.org ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಹಾಗೂ ಭಾರತದ ರಂಗತಜ್ಞರಿಂದ ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ. ಗ್ರಂಥ ಭಂಡಾರ ಹಾಗೂ ದೃಶ್ಯ, ಶ್ರವ್ಯ ಪರಿಕರಗಳ ಅನುಕೂಲತೆ ಇದ್ದು, ರಂಗಶಾಲೆಯ ವಿದ್ಯಾರ್ಥಿಗಳಿಗೆ ಭಾರತೀಯ ರಂಗಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಆಹಾರ್ಯ, ಶಿಕ್ಷಣದಲ್ಲಿ ರಂಗಭೂಮಿ ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯುತ್ತವೆ. ಅರ್ಜಿ ಸಲ್ಲಿಸಲು ಜೂನ್ 25 ಕೊನೆಯ ದಿನ. ಸಂದರ್ಶನವನ್ನು ಜೂನ್ 27 ಮತ್ತು 28 ರಂದು ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಶ್ರೀ ಶಿವಕುಮಾರ, ರಂಗ ಪ್ರಯೋಗಶಾಲೆ, ಸಾಣೇಹಳ್ಳಿ, ಹೊಸದುರ್ಗ ತಾಲೂಕು, ಚಿತ್ರದುರ್ಗ ಮೊ.ನಂ:…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸ್ವಾತಂತ್ರ‍್ಯ ಹೋರಾಟಕ್ಕೆ ಮುನ್ನುಡಿ ಬರೆದ ರಾಣಿ ಅಬ್ಬಕ್ಕ ಕರಾವಳಿ ಕರ್ನಾಟಕದ ಧೀಮಂತ ಶಕ್ತಿ. ವಸಾಹತುಶಾಹಿ ಆಳ್ವಿಕೆಗೆ ಅಬ್ಬಕ್ಕ ನೀಡಿದ ಪ್ರತಿಕ್ರಿಯೆ ಸ್ತುತ್ಯಾರ್ಹ. ಅಂತವರ ವ್ಯಕ್ತಿತ್ವವನ್ನು ಇಂದಿನ ಯುವ ಜನತೆಗೆ ಪರಿಚಯಿಸುವುದು ಮುಖ್ಯ ಎಂದು ನಿವೃತ್ತ ಪ್ರಾಂಶುಪಾಲರಾದ ಡಾ| ವಿ.ಕೆ. ಯಾದವ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ, ಮಂಗಳೂರು ಇವರ ಸಹಯೋಗದೊಂದಿಗೆ ರಾಣಿ ಅಬ್ಬಕ್ಕ @ 500 ಸರಣಿ ಉಪನ್ಯಾಸ ಮಾಲಿಕೆಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಎಮ್.ಐ.ಟಿ., ಮಣಿಪಾಲದ ಗಣಿತಶಾಸ್ರ್ತದ ಪ್ರಾಧ್ಯಾಪಕರಾದ ಡಾ| ವಾದಿರಾಜ ಗೋಪಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರಾಣಿ ಅಬ್ಬಕ್ಕ @ 500 ಸರಣಿ ಉಪನ್ಯಾಸ ಮಾಲಿಕೆಯ ಸಂಯೋಜಕರಾದ ವೆಂಕಟೇಶ ನಾಯಕ್ ಮತ್ತು ಯಶವಂತ ಕುದ್ರೋಳಿ ಉಪಸ್ಥಿತರಿದ್ದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಸಾಹಿತ್ಯದ ಓದು ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲತೆಯನ್ನು, ಜೀವನೋತ್ಸಾಹವನ್ನು ಹೆಚ್ಚಿಸುತ್ತದೆ. ಸಂಗೀತ, ಸಾಹಿತ್ಯ, ಕಲೆಗಳಲ್ಲಿ ಆಸಕ್ತಿಯಿಲ್ಲದವನು ಬಾಲವಿಲ್ಲದ ಪಶುವಿನಂತೆ. ಬದುಕನ್ನು ಹೊಸ ಬಗೆಯಲ್ಲಿ ಕಟ್ಟಿಕೊಳ್ಳುವಲ್ಲಿ ಬರವಣಿಗೆ ಪೂರಕವಾದದ್ದು. ವಾರ್ಷಿಕ ಸಂಚಿಕೆ ಎಂಬುದು ಒಂದು ವಿದ್ಯಾ ಸಂಸ್ಥೆಯ ಮುಖವಾಣಿಯಿದ್ದಂತೆ. ವಿದ್ಯಾರ್ಥಿಗಳ ಪ್ರತಿಭಾ ಅನಾವರಣಕ್ಕೆ ಒಳ್ಳೆಯ ವೇದಿಕೆ ಎಂದುಲೇಖಕಿ, ಕವಯಿತ್ರಿ ಸಾಲಿಗ್ರಾಮ ಚಿತ್ರಪಾಡಿ ಸುಮನಾ ಆರ್. ಹೇರ್ಳೆ ಹೇಳಿದರು. ಅವರು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾಲೇಜಿನ ವಾರ್ಷಿಕ ಸಂಚಿಕೆ ‘ದೃಷ್ಟಿ’ ಅನಾವರಣಗೊಳಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಕವಿತಾ ಎಂ.ಸಿ ಅಧ್ಯಕ್ಷತೆ ವಹಿಸಿದ್ದರು. ಜಿ.ಎಸ್.ವಿ.ಎಸ್ ಅಸೋಸಿಯೇಷನ್ ಕಾರ್ಯದರ್ಶಿ ಎಚ್ ಗಣೇಶ್ ಕಾಮತ್, ಸರಸ್ವತಿ ವಿದ್ಯಾಲಯದ ಕಾರ್ಯದರ್ಶಿ ಎನ್ ಸದಾಶಿವ ನಾಯಕ್ ಮುಖ್ಯ ಅಭ್ಯಾಗತರಾಗಿ ಶುಭಾಶಂಸನೆಗೈದರು. ಕಾರ್ಯನಿರ್ವಾಹಕ ಸಂಪಾದಕ ಎಚ್. ಸುಜಯೀಂದ್ರ ಹಂದೆ ಪ್ರಾಸ್ಥಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿ  ಗೌತಮಿ ನಾಯಕ್ ಸ್ವಾಗತಿಸಿ, ಪ್ರಜ್ವಲ್ ದೇವಾಡಿಗ ವಂದಿಸಿದರು. ಆಂಗ್ಲ ಭಾಷಾ ಉಪನ್ಯಾಸಕಿ ಸುಪ್ರೀತಾ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಲಿಂಗತ್ವ ಅಲ್ಪಸಂಖ್ಯಾತರು ತಮ್ಮ ಕೆಲಸ ಕಾರ್ಯ ನಿಯಮಿತ ಸರಕಾರಿ ಕಚೇರಿಗಳಿಗೆ ಭೇಟಿ ಮಾಡಿದ ಸಂದರ್ಭದಲ್ಲಿ ಅವರೊಂದಿಗೆ ಸೌಹಾರ್ದತೆಯೊಂದಿಗೆ ಗೌರವಯುತವಾಗಿ ನಡೆದುಕೊಂಡು, ನಿಯಮಾನುಸಾರ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ತಿಳಿಸಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಕುರಿತು ಸಂವೇದನೆ ಮೂಡಿಸಲು ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಕಾನೂನಿನ ಮುಂದೆ ಎಲ್ಲರೂ ಸಮಾನರು. ಸಾಂವಿಧಾನಿಕವಾಗಿ ಯಾವುದೇ ಜಾತಿ, ಜನಾಂಗ, ಲಿಂಗ ಆಧಾರದ ಮೇಲೆ ಯಾವುದೇ ರೀತಿಯ ತಾರತಮ್ಯವನ್ನು ಮಾಡುವಂತಿಲ್ಲ. ಸಮಾಜದಲ್ಲಿ ಎಲ್ಲಾ ಜನರೂ ಒಂದೇ ಎಂಬ ಭಾವನೆಯಿಂದ ನೋಡಬೇಕು. ಲಿಂಗತ್ವ ಅಲ್ಪಸಂಖ್ಯಾತರು ಕಚೇರಿಗಳಿಗೆ ಬಂದಾಗ ಅವರನ್ನೂ ಸಹ ಇತರರೊಂದಿಗೆ ನಡೆದುಕೊಳ್ಳುವ ರೀತಿಯಲ್ಲಿಯೇ ನಡೆದುಕೊಂಡು ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು. ಅವರೊಂದಿಗೆ ಅಗೌರವವಾಗಿ ವರ್ತಿಸಿದ್ದಲ್ಲಿ ಅಂತಹ ಸರ್ಕಾರಿ ನೌಕರರ ಮೇಲೆ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಎಂದರು. ಸರಕಾರ ಲಿಂಗತ್ವ ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ಅನೇಕ ಯೋಜನೆಗಳು ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆನ್ನಾಬೈಲ್ ಜುಮಾ ಮಸೀದಿಯಲ್ಲಿ ಪ್ರವಾದಿ ಇಬ್ರಾಹಿಮರ ತ್ಯಾಗ ಬಲಿದಾನಗಳನ್ನು ಸಂಕೇತಿಸುವ ಮತ್ತು ಸ್ಮರಿಸುವ ಬಕ್ರೀದ್ ಪ್ರಾರ್ಥನೆ ಜರುಗಿತು. ಧರ್ಮಗುರು ಅಬ್ದುಲ್ ಹಫೀಜ್ ಪ್ರವಾದಿ ಇಬ್ರಾಹಿಂ ಅವರು ಮಾತನಾಡಿ, “ದೇವನಿಷ್ಠೆ ಮತ್ತು ಶ್ರದ್ದೆಯ ದೊಡ್ಡ ಸಂಕೇತವಾಗಿ ಲೋಕಕ್ಕೆ ಮೂಡಿಬಂದರು. ಅವರ ಮಾಡಿದ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸುವುದರಿಂದ ಮನುಷ್ಯನ ಮನಸ್ಸು ಸಂವೇದನಾಶೀಲವಾಗಿ ಸಾಮಾಜಿಕ ಸಂಬಂಧಗಳು ಸುಗಮವಾಗಲು ಕಾರಣವಾಗುತ್ತದೆ. ಇಬ್ರಾಹಿಮರು ತಮ್ಮ ಬದುಕಿನ ಕಾಲಾವಧಿಯಲ್ಲಿ ಬಡವ ಶ್ರೀಮಂತ ಕರಿಯ ಬಿಳಿಯ ಮುಂತಾದ ಸಾಮಾಜಿಕ ತಾರತಮ್ಯಗಳನ್ನು ತೊಡೆದು ಹಾಕಲು ತಮ್ಮ ಜೀವಮಾನವಿಡೀ ಶ್ರಮಿಸಿದರು. ಮನುಕುಲಕ್ಕೆ ಇಬ್ರಾಹಿಮರು ನೀಡಿದ ಕೊಡುಗೆಯನ್ನು ಸೀಮಿತ ಅವಧಿಯಲ್ಲಿ ಹೇಳಿ ಮುಗಿಸಲಾಗದು” ಎಂದರು. ಸಭೆಯಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ಸೈಯದ್ ರಫೀಕ್, ಉಪಾಧ್ಯಕ್ಷ ಸೈಯದ್ ಆಸೀಫ್, ಕಾರ್ಯದರ್ಶಿ ಮಹಮ್ಮದ್ ಇಕ್ಬಾಲ್, ಮಾಜಿ ಅಧ್ಯಕ್ಷ ಸಯ್ಯದ್ ಅಬ್ಬಾಸ್, ಹಸನ್ ಸಾಹೇಬ್, ಅಲಿಯಬ್ಬ, ನಜಿರ್ ಸಾಹೇಬ್, ಹಯಾತ್ ಭಾಷಾ ಸಾಹೇಬ್, ಯೂಸುಫ್ ಖಾದರ್, ಶಬ್ಬೀರ್ ಸಾಹೇಬ್, ಅಮಾನ್ ಜಮಾಲ್, ಆದಮ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಉಡುಪಿ: ಉಡುಪಿ ನಗರಸಭೆಯ 2022-23 ನೇ ಸಾಲಿನ ಎಸ್.ಎಫ್.ಸಿ. ಮುಕ್ತನಿಧಿಯ ಶೇ. 5 ರ ವಿಕಲಚೇತನರ ಕಲ್ಯಾಣ ಕಾರ್ಯಕ್ರಮದ ಅನುದಾನದಡಿ ಸಾಧನ ಸಲಕರಣೆಗಳನ್ನು ಪಡೆಯಲು ದೈಹಿಕ ವಿಕಲತೆಯ ಬಗ್ಗೆ ಜಿಲ್ಲಾ ಸರ್ಜನ್‌ರವರಿಂದ ಪಡೆದ ಪ್ರಮಾಣ ಪತ್ರ, ಆದಾಯ ದೃಢಪತ್ರ, ಪ್ರಸಕ್ತ ಸಾಲಿನ ಆಸ್ತಿತೆರಿಗೆ ಪಾವತಿ ರಶೀದಿ, ಪಡಿತರ ಚೀಟಿ ಪ್ರತಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಗಂಗೊಳ್ಳಿ: ಇಲ್ಲಿನ ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗದ ವತಿಯಿಂದ ಮೇಲ್ ಗಂಗೊಳ್ಳಿಯ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಪುಸ್ತಕ ಮತ್ತು ಕಲಿಕಾ ಉಪಕರಣಗಳನ್ನು ಹಾಗೆ ಶಾಲೆಗೆ ಅಡುಗೆ ಕುಕ್ಕರನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಸಹನಾ, ಅಡುಗೆ ಸಹಾಯಕಿ ಮೂಕಾಂಬು, ಪೋಷಕರಾದ ಶಾಂತ ಪೈ, ಎಸ್‌ಡಿಎಂಸಿ ಅಧ್ಯಕ್ಷೆ ಸವಿತಾ ಖಾರ್ವಿ, ಸದಸ್ಯರಾದ ಅನುಷಾ ಯು, ಸವಿತಾ ಖಾರ್ವಿ, ಜ್ಯೋತಿ ಆನಂದ,  ಜ್ಯೋತಿ ಎಂ, ಅಶ್ವಿನಿ ಖಾರ್ವಿ,  ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೇಲ್ ಗಂಗೊಳ್ಳಿಯ ಮುಖ್ಯ ಶಿಕ್ಷಕ ಗುರುರಾಜ್ ಆಚಾರ್ಯ,  ಸಹ ಶಿಕ್ಷಕ ಯೋಗೇಶ್,  ಬಸವೇಶ್ವರ ದೇವಸ್ಥಾನದ ಅರ್ಚಕ ಜಗದೀಶ್, ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗದ ಮುಖ್ಯಸ್ಥ ಈಶ್ವರ ಗಂಗೊಳ್ಳಿ ಮೊದಲಾದವರು ಉಪಸ್ಥಿತರಿದ್ದರು. ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಮಕ್ಕಳಿಗೆ ಪುಷ್ಪಗಳನ್ನು ನೀಡಿ ಸ್ವಾಗತಿಸಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಕಂದಾಯ ಉಪವಿಭಾಗಕ್ಕೆ ಒಂದರಂತೆ ವೃದ್ದಾಶ್ರಮವನ್ನು ಪ್ರಾರಂಭಿಸಲು ಅರ್ಹ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 16 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಕಛೇರಿ, ಸಿ ಬ್ಲಾಕ್, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಉಡುಪಿ ನಗರಸಭೆಯ ವತಿಯಿಂದ 2023-24 ನೇ ಸಾಲಿನ ಎಸ್.ಎಫ್.ಸಿ ಮುಕ್ತನಿಧಿಯ ಶೇ. 7.25 ರ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ಅರ್ಹ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 9 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಅಂತರ್ಜಲ ವೃದ್ಧಿಗೊಳಿಸಲು ಮಳೆನೀರು ಕೊಯ್ಲನ್ನು ಅಳವಡಿಸಿಕೊಳ್ಳುವುದು ಅವಶ್ಯ. ಸರಕಾರದ ಎಲ್ಲಾ ತೆರೆದ ಹಾಗೂ ಕೊಳವೆ ಬಾವಿಗಳಿಗೆ ಮಳೆ ನೀರು ಕೊಯ್ಲು ಕಡ್ಡಾಯವಾಗಿ ಅಳವಡಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಳೆ ನೀರು ಕೊಯ್ಲು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ವ್ಯಾಪಕ ಮಳೆಯಾದರೂ ಸಹ ಅಂತರ್ಜಲದ ಮಟ್ಟ ನಿರೀಕ್ಷಿತ ಮಟ್ಟಕ್ಕಿಂತ ಕೆಳಭಾಗದಲ್ಲಿದೆ. ಹೆಚ್ಚು ಮಳೆಯಾದರೂ ನೀರು ಸರಾಗವಾಗಿ ಪಶ್ಚಿಮಾಭಿಮುಖವಾಗಿ ಹರಿದು ಸಮುದ್ರವನ್ನು ಸೇರುತ್ತಿದೆ. ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಿಂದಾಗಿ ಮೇಲ್ಮಣ್ಣು ಕೊಚ್ಚಿಹೋಗಿ ಲ್ಯಾಟರೈಟ್ ಸಾಯ್ಲ್ ಆಗಿದೆ. ನೀರು ಇಂಗುವ ಪ್ರಮಾಣ ಕಡಿಮೆ. ಮಳೆ ನೀರು ಕೊಯ್ಲು ಅಳವಡಿಸುವುದರಿಂದ ಇಂಗು ವಿಕೆಯನ್ನು ಹೆಚ್ಚಿಸಲು ಸಾಧ್ಯ. ಇದರಿಂದ ಅಂತರ್ಜಲವೃದ್ಧಿಯಾಗುತ್ತದೆ. ಇದಕ್ಕೆ ಪ್ರತಿಯೊಬ್ಬರೂ ಒತ್ತು ನೀಡಬೇಕು ಎಂದರು. ಜಿಲ್ಲೆಯಲ್ಲಿ ರೈತರು ಹಾಗೂ ಖಾಸಗಿ ಯವರು ಹೆಚ್ಚು ಮಳೆ ನೀರು ಕೊಯ್ಲುಗಳನ್ನು ಅಳವಡಿಸಿದ್ದಾರೆ. …

Read More