Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೇಲ್ ಗಂಗೊಳ್ಳಿ ಮತ್ತು ಇಲ್ಲಿನ ಅಂಗನವಾಡಿ ಕೇಂದ್ರದ ವತಿಯಿಂದ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಗುರುರಾಜ ಆಚಾರ್ಯ ಮತ್ತು ಸಹ ಶಿಕ್ಷಕ ಯೋಗೇಶ್ ಮಕ್ಕಳಿಗೆ ಗಿಡಗಳನ್ನು ವಿತರಿಸಿ ಅವುಗಳ ಪ್ರಾಮುಖ್ಯತೆ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೋಷಕರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭದ್ರಾವತಿಯ ಆಭಯಾರಣ್ಯದಿಂದ 15 ದಿನಗಳ ಹಿಂದೆ ದಾರಿ ತಪ್ಪಿ ನಾಡಿಗೆ ಬಂದ ಕಾಡಾನೆಯೊಂದು ಮಂಗಳವಾರ ರಾತ್ರಿ ಬಾಳೆಬರೆ ಘಾಟಿಯ ಮೂಲಕ ಸಿದ್ದಾಪುರಕ್ಕೆ ಬಂದಿದೆ. ಬುಧವಾರ ಬೆಳಗಿನ ಜಾವ ಮತ್ತು ರಾತ್ರಿಯ ವೇಳೆ ಸಿದ್ದಾಪುರ ಪೇಟೆ ಹಾಗೂ ಪರಿಸರದಲ್ಲಿ ಸಂಚರಿಸಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಈ ಕಾಡಾನೆ ಬಾಳೆಬರೆ ಶ್ರೀ ಮಹಾಗಣಪತಿ ದೇವಸ್ಥಾನದ ಬಳಿ ಹೊಸಂಗಡಿ ಗ್ರಾಮಕ್ಕೆ ಪ್ರವೇಶಿಸಿ ಕೆರೆಬೈಲು, ಕೆಪಿಸಿ ಕಾಲನಿ, ಭದ್ರಾಪುರದ ಮೂಲಕ ಹೊಸಂಗಡಿ ಪೇಟೆಗೆ ಬಂದಿದೆ. ಹೆದ್ದಾರಿಯಲ್ಲಿ ಮುಂದೆ ಸಾಗಿ, ಬೆಳಗಿನ ಜಾವ 6 ಗಂಟೆ ವೇಳೆಗೆ ಸಿದ್ದಾಪುರ ಪೇಟೆಗೆ ಬಂದಿತ್ತು. ಅಲ್ಲಿಂದ ಗ್ರಾಮೀಣ ಭಾಗಕ್ಕೆ ತೆರಳಿದೆ. ಈ ವೇಳೆ ಅರಣ್ಯ ಇಲಾಖೆ ಸಿಬಂದಿ ಮತ್ತು ಪೊಲೀಸರು ಪಟಾಕಿ ಸಿಡಿಸಿ ಅದನ್ನು ಹಿಂದಕ್ಕೆ ಕಳುಹಿಸುವ ಪ್ರಯತ್ನ ನಡೆಸಿದರು. ಆರಂಭದಲ್ಲಿ ಇದಕ್ಕೆ ಅಂಜದ ಆನೆ ಬಳಿಕ ಹಿಂದೆ ಸರಿದು ಪ್ರೌಢಶಾಲೆಯ ಹಿಂಬದಿಯ ತೋಟಕ್ಕೆ ನುಗ್ಗಿ ಕಾಡಿಗೆ ತೆರಳಿತು. ಹಗಲು ವಿಶ್ರಾಂತಿ-ರಾತ್ರಿ ಸಂಚಾರ!ಬುಧವಾರ ಹಗಲಿಡೀ ಕಾಡಿನಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬಕ್ರೀದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಅನಧೀಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ಮಾಡುವುದನ್ನು ತಡೆಗಟ್ಟಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ಸಮಿತಿಗಳು ಸಕ್ರೀಯವಾಗಿ ಕಾರ್ಯನಿರ್ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಕ್ರೀದ್ ಹಬ್ಬ ಆಚರಣೆ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟಲು ನಡೆದ ಜಿಲ್ಲಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆ ಮಾಡುತ್ತಿರುವುದು ಕಂಡುಬಂದಲ್ಲಿ ಹತ್ತಿರದ ಪೋಲೀಸ್ ಠಾಣೆಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅಧಿಕೃತ ಜಾನುವಾರು ಸಾಗಾಣಿಕೆ ಮಾಡಬೇಕಾದ ಸಂದರ್ಭದಲ್ಲಿ ಪಶುಸಂಗೋಪನಾ ಇಲಾಖೆ ನಿಗಧಿಪಡಿಸಿದ ನಮೂನೆಯಲ್ಲಿ ಅನುಮತಿ ಹಾಗೂ ಸದ್ರಿ ವ್ಯಾಪ್ತಿಯ ಪೋಲಿಸ್ ಠಾಣೆಗಳ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದರು. ಬಕ್ರೀದ್ ಹಬ್ಬದ ಸಂದರ್ಭದಲ್ಲಿ ದನ, ಎಮ್ಮೆ,ಕರು ಹಾಗೂ ಒಂಟೆಗಳನ್ನು ಅಕ್ರಮವಾಗಿ ದಾಸ್ತಾನು ಸಾಗಾಣಿಕೆ ಹಾಗೂ ವಧೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸುಖ ಸಾಗರ ಗ್ರೂಪ್ ಆಪ್ ಹೋಟೆಲಿನ ಸಾಮ್ರಾಜ್ಯವನ್ನು ಕಟ್ಟಿ ತಮ್ಮ ದುಡಿಮೆಯ ಬಹುಪಾಲನ್ನು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಬದುಕನ್ನು ಸಮರ್ಪಿಸಿದ ಕೊಡುಗೈ ದಾನಿ ಸುರೇಶ್ ಎಸ್. ಪೂಜಾರಿ (87) ಅವರು ಇಂದು ಮುಂಬೈಯ ಸ್ವಗೃದಲ್ಲಿ ವಯೋಸಹಜವಾಗಿ ನಿಧನರಾಗಿದ್ದಾರೆ. ಅವರು ಕುಂದಾಪುರದ ಬಿಲ್ಲವ ಸಮಾಜ ಸೇವಾ ಸಂಘ ಗೌರವಾಧ್ಯಕ್ಷರಾಗಿ ಹಾಗೂ ಕುಂದಾಪುರದ ಶ್ರೀ ನಾರಾಯಣ ಗುರು ಏಜ್ಯುಕೇಶನಲ್ & ಕಲ್ಚರಲ್ ಟ್ರಸ್ಟ್ ಅಧ್ಯಕ್ಷರಾಗಿ ಕಳೆದ 35 ವರ್ಷಗಳಿಂದ ನಿರಂತರ ಸೇವೆ ಸಲ್ಲಿಸುತ್ತಿದ್ದರು. ಸಮಾಜದ ಅಶಕ್ತರು ಕೂಡ ಅತ್ಯುತ್ತಮವಾದ ಕಲ್ಯಾಣ ಮಂಟಪದಲ್ಲಿ ವಿವಾಹವನ್ನು ನಡೆಸಬೇಕು ಎಂದು 35 ವರ್ಷಗಳ ಹಿಂದೆಯೇ ಕುಂದಾಪುರದಲ್ಲಿ ಶ್ರೀ ನಾರಾಯಣಗುರು ಕಲ್ಯಾಣ ಮಂಟಪವನ್ನು ನಿರ್ಮಿಸಿ ಬಡವರ ಬೆಳಕಾಗಿದ್ದರು, ವಿಧ್ಯೆಗೆ ಬಹಳಷ್ಟು ಒತ್ತು ನೀಡಿದ್ದ ಅವರು ಬಿಲ್ಲವ ಸಂಘದ ಮೂಲಕ ವಿಧ್ಯಾರ್ಥಿ ವೇತನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಮೃತರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ತಾಲೂಕಿನ ಆಜ್ರಿ ಗ್ರಾಮದ ಕೂಲಿ ಕಾರ್ಮಿಕ ಚಂದ್ರ (48) ಅವರು ಇತ್ತೀಚಿಗೆ ಮನೆಯ ದನದ ಕೊಟ್ಟಿಗೆಯ ಹಿಂಬದಿಯ ಪೇರಳೆ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡು  ಮೃತಪಟ್ಟಿದ್ದಾರೆ. ಅವರ ಪತ್ನಿ ಎರಡು ವರ್ಷಗಳ ಹಿಂದೆ ಮೃತಪಟ್ಟಿದ್ದು ಅನಂತರ ಅವರು ಮೌನಕ್ಕೆ ಶರಣಾಗಿದ್ದರು. ಅಡಿಕೆ ಮರಕ್ಕೆ ಔಷಧ ಸಿಂಪರಣೆಗೆ ಚಂದ್ರ ಅವರು ಬರದೆ ಇದ್ದ ಕಾರಣ ಪಕ್ಕದ ಮನೆಯವರು ವಿಚಾರಿಸಲು ಅವರ ಮನೆಗೆ ಹೋಗಿದ್ದು, ಆಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ 2024 ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ. ಲೇಖಕರು, ಪ್ರಕಾಶಕರು ಹಾಗೂ ಸಾಹಿತ್ಯಾಸಕ್ತ ಸಾರ್ವಜನಿಕರು ಬಹುಮಾನಕ್ಕಾಗಿ ಪುಸ್ತಕದ ನಾಲ್ಕು ಪ್ರತಿಗಳನ್ನು ರಿಜಿಸ್ಟಾರ್‌, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು ವಿಳಾಸಕ್ಕೆ ರಿಜಿಸ್ಟರ್ಡ್ ಅಂಚೆ / ಕೊರಿಯರ್ ಮೂಲಕ ಅಥವಾ ಖುದ್ದಾಗಿ ಜುಲೈ 15 ರ ಒಳಗಾಗಿ ತಲುಪಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್ www.sahithyaacademy.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಾರ್ವಜನಿಕರು ಕೋವಿಡ್ ಸೋಂಕಿನ ಬಗ್ಗೆ ಭಯ ಬೀಳದೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಲ್ಲಿ ಇವುಗಳಿಂದ ದೂರವಿರಲು ಸಾಧ್ಯ. ಈ ಬಗ್ಗೆ ಪ್ರತಿಯೊಬ್ಬರೂ ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದಾದ್ಯಂತ ಕೋವಿಡ್ ಸೋಂಕಿನ ಪ್ರಕರಣಗಳು ಕಂಡುಬರುತ್ತಿವೆ. ಜಿಲ್ಲೆಯಲ್ಲೂ ಸಹ ಕೆಲವು ಪ್ರಕರಣಗಳು ಉಂಟಾಗಿವೆ. ಸಾರ್ವಜನಿಕರು ಸರ್ಕಾರ ಸೂಚಿಸಿರುವ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕು. ವಯೋವೃದ್ಧರು, ಮಕ್ಕಳು, ಗರ್ಭಿಣಿಯರು ಕೋವಿಡ್ ಸೋಂಕಿನ ಬಗ್ಗೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು. ಜ್ವರ, ಕೆಮ್ಮು, ನೆಗಡಿ, ಶೀತ, ಉಸಿರಾಟ ತೊಂದರೆ ಮುಂತಾದ ಗುಣಲಕ್ಷಣಗಳು ಕಂಡುಬಂದಲ್ಲಿ ಕೊರೋನಾ ಪರೀಕ್ಷೆಯನ್ನು ಸಮೀಪದ ಆರೋಗ್ಯ ಕೇಂದ್ರಗಳಲ್ಲಿ ಮಾಡಿಸಿಕೊಳ್ಳಬೇಕು. ಸೋಂಕು ಇದ್ದಲ್ಲಿ ಸೂಕ್ತ ಚಿಕಿತ್ಸೆ ಪಡೆಯುವುದರ ಜೊತೆಗೆ ಇತರರಿಗೆ ಹರಡದಂತೆ ನೋಡಿಕೊಳ್ಳಬೇಕು ಎಂದರು. ಪೂರ್ವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಅವರು ಪೊಲೀಸ್ ಇಲಾಖೆ ಕರ್ತವ್ಯದಲ್ಲಿ ಹಸ್ತಕ್ಷೇಪ ಮಾಡುವುದನ್ನು ಬಿಟ್ಟು ಅವರ ಕರ್ತವ್ಯವಾದ ಹೆದ್ದಾರಿ ಸಮಸ್ಯೆ, ಕಸ್ತೂರಿ ರಂಗನ್ ವರದಿ ಸಮಸ್ಯೆ, ಪರಿಸರ ಸೂಕ್ಷ್ಮ ವಲಯದ ಸಮಸ್ಯೆ, ರೈಲ್ವೆ ಸಮಸ್ಯೆ, ಕರಾವಳಿ ನಿಯಂತ್ರಣ ವಲಯದ ಸಮಸ್ಯೆ, ಯುವಕರ ನಿರುದ್ಯೋಗ ಸಮಸ್ಯೆ, ಬಂದರು ಸಮಸ್ಯೆ, ಪ್ರವಾಸೋದ್ಯಮಕ್ಕೆ ಇರುವ ಅಡೆತಡೆಗಳು ಇವುಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಿ. ಅದನ್ನು ಬಿಟ್ಟು ಇವರೇ ಅಂದರೆ ಶಾಸಕಾಂಗ ರಚನೆ ಮಾಡಿದ ಕಾನೂನುಗಳನ್ನು ಪೊಲೀಸ್ ಇಲಾಖೆ ಕರ್ತವ್ಯ ಪಾಲನೆ ಮಾಡುವಾಗ ಅದನ್ನು ವಿರೋಧಿಸುವುದು ಹಾಗೂ ಟೀಕಿಸುವುದು ಸಂವಿಧಾನ ವಿರೋಧಿ ಕ್ರಮವಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು. ಇವತ್ತು ಪೊಲೀಸ್ ಇಲಾಖೆ ಕಾನೂನಿನ ಅಡಿಯಲ್ಲಿ ಸಮಾಜ ಘಾತುಕ ಶಕ್ತಿಗಳ ಮೇಲೆ ಗಡಿಪಾರು, ಬಂಧನ ಇತ್ಯಾದಿ ಕ್ರಮವನ್ನು ಕಾನೂನಿನ ಅಡಿಯಲ್ಲೇ ಜಾರಿಗೆ ತರುತ್ತಿದೆ ಬಿಟ್ಟರೆ ಪೊಲೀಸ್ ಇಲಾಖೆ ಕಾನೂನು ಬಿಟ್ಟು ಯಾವುದನ್ನೂ ಮಾಡುತ್ತಿಲ್ಲಾ, ಅದಲ್ಲದೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಬಸ್ರೂರು ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕುಂದಾಪುರ ತಾಲೂಕು ಆರೋಗ್ಯ ಕೇಂದ್ರದ ಸಿಬ್ಬಂದಿ ಭ್ಯಾಗ್ಯಲಕ್ಷ್ಮೀ ಮಾತನಾಡಿ, ತಂಬಾಕು ಸೇವನೆಯಿಂದ ಕುಟುಂಬ ಸಮಾಜ ಮತ್ತು ಪರಿಸರದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮತ್ತು ತಂಬಾಕು ಸೇವನೆಯಿಂದ ಆಗುವ ಶ್ವಾಸಕೋಶ, ಧ್ವನಿ ಪೆಟ್ಟಿಗೆ, ಅನ್ನನಾಳ ಹೀಗೆ ಹಲವು ರೀತಿಯ ಕ್ಯಾನ್ಸರ್‌ಗಳಿಗೆ ಕಾರಣವಾಗಿದೆ. ಆದ್ದರಿಂದ ಯುವ ಜನತೆ ತಂಬಾಕು ಸೇವನೆಯಿಂದ ದೂರವಿರಬೇಕು. ಇದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಜೊತೆಗೆ ತಂಬಾಕು ಸೇವನೆಯ ತೀವ್ರತೆಯ ಬಗ್ಗೆ ತಿಳಿದುಕೊಳ್ಳಬೇಕಾದರೆ ಕ್ಯಾನ್ಸರ್ ಆಸ್ಪತ್ರೆ ಭೇಟಿ ನೀಡಿದರೆ ತಿಳಿಯುತ್ತದೆ ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. ಬಸ್ರೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯಾದ ಶ್ವೇತಾ ಕಾರ್ಯಕ್ರಮವನ್ನುದ್ದೇಶಿಸಿ ದುಶ್ಚಟ ಮತ್ತು ಮಾನಸಿಕ ಆರೋಗ್ಯದ ಬಗ್ಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಅಂಪಾರು ಸಂಜಯಗಾಂಧಿ ಆಂಗ್ಲ ಮಾಧ್ಯಮ ಶಾಲೆಯ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವು ವಿಶಿಷ್ಟ ಮತ್ತು ಸಾಂಪ್ರದಾಯಿಕ ರೀತಿಯಲ್ಲಿ ಆಚರಿಸಲಾಯಿತು. ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಸಂಜಯಗಾಂಧಿ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಬಲಾಡಿ ಅವರು ರಿಬ್ಬನ್ ಕತ್ತರಿಸುವುದರ ಮೂಲಕ ನೆರವೇರಿಸಿದರೆ,  ಖಜಾಂಚಿ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ  ಅವರು  ದೀಪ ಬೆಳಗಿಸಿ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡಿದರು. ಕಿಂಡರ್ಗಾರ್ಟನ್ ಮಕ್ಕಳನ್ನೊಳಗೊಂಡ ವಿದ್ಯಾರ್ಥಿಗಳ ತಂಡ ಜ್ಞಾನ, ದೈವಿಕತೆ, ಸಮೃದ್ಧಿಯ ಪ್ರತೀಕವಾಗಿರುವ ಮಂಗಳಕರ ಹಣತೆಯನ್ನು ಬೆಳಗುವ ಮೂಲಕ ಶುಭಾರಂಭ ಮಾಡಿದರು. ಶಾಲಾ ಆಡಳಿತಾಧಿಕಾರಿ ಚೈತ್ರ ಯಡಿಯಾಳ ಅವರು ಮಕ್ಕಳಿಗೆ ಆರತಿ ಬೆಳಗಿ ಹೂವು, ಅಕ್ಷತೆಯೊಂದಿಗೆ ಬರಮಾಡಿಕೊಂಡರು. ಮುಖ್ಯ ಶಿಕ್ಷಕಿ ವಿಲಾಸಿನಿ ಶೆಟ್ಟಿ ಸ್ವಾಗತಿಸಿದರೆ, ಸಂಯೋಜಕಿ ಸರೋಜ ಅವರು ವಂದಿಸಿದರು. ಸಂಸ್ಥೆಯ ಶಿಕ್ಷಕ – ಶಿಕ್ಷಕಿಯರು ವಿದ್ಯಾರ್ಥಿಗಳಿಗೆ ಸಿಹಿ ಹಂಚುವ ಮೂಲಕ ಶುಭ ಹಾರೈಸಿದರು.

Read More