Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕಣ್ಮರೆಯಾಗುತ್ತಿರುವ ದೇಸಿ ತಳಿಗಳನ್ನು ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ದೇಸಿ ತಳಿಗಳನ್ನು ಹಿಂದಿನಿಂದಲೂ ಸಂರಕ್ಷಿಸಿ ಕೃಷಿ ಮಾಡುತ್ತಿರುವ ರೈತರಿಗೆ ಉತ್ತೇಜನ ನೀಡಲು ಕೃಷಿ ಇಲಾಖೆಯು ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮ ಹಮ್ಮಿಕೊಂಡಿದೆ. ಸ್ಥಳೀಯ ತಳಿಗಳು ಅಥವಾ ಸಾಂಪ್ರದಾಯಿಕ ಕೃಷಿ ಪದ್ದತಿಯಿಂದ ಅಭಿವೃದ್ಧಿ ನಿರ್ವಹಿಸಲ್ಪಡುವ ತಳಿಗಳು ದೇಸಿ ತಳಿಗಳೆಂದು ಕರೆಯಲ್ಪಡುತ್ತವೆ. ಇವು ರೈತರ ಸಾಂಪ್ರದಾಯಿಕ, ಪರಂಪರೆ, ಜಾನಪದ ಪ್ರಭೇದಗಳಾಗಿರುತ್ತವೆ. ಈ ತಳಿಗಳಲ್ಲಿರುವ ವಿಶಿಷ್ಟ ಗುಣಲಕ್ಷಣಗಳು ಮತ್ತು ಭೌಗೋಳಿಕ ಮೂಲಗಳ ಕಾರಣದಿಂದ ವೈಜ್ಞಾನಿಕವಾಗಿ ಅಭಿವೃದ್ದಿಪಡಿಸಲಾದ ಅಧಿಸೂಚಿತ ಪ್ರಭೇದಗಳಿಗಿಂತ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ದವಾಗಿವೆ. ಆದರೆ ಕೆಲವೇ ರೈತರು ಮಾತ್ರವೇ ಇಂತಹ ದೇಸಿ ತಳಿ ಕೃಷಿ ಮಾಡುವುದನ್ನು ಮುಂದುವರೆಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಕೃಷಿ ಇಲಾಖಾ ವತಿಯಿಂದ ದೇಸಿ ತಳಿಗಳ ಸಂರಕ್ಷಣೆಗಾಗಿ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ. ಈ ಉತ್ತೇಜನ ಕಾರ್ಯಕ್ರಮದಡಿ ಕಣ್ಮರೆಯಾಗುತ್ತಿರುವ ತಳಿಗಳನ್ನೊಳಗೊಂಡಂತೆ ಆಯಾ ಸ್ಥಳೀಯ ಪ್ರದೇಶಕ್ಕೆ ಸೂಕ್ತವಾದ ದೇಸಿ ತಳಿಗಳ ಗುರುತಿಸುವಿಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಘಟಿಸುವ ಪ್ರತಿಯೊಂದು ಜನನ, ಮರಣ ಹಾಗೂ ನಿರ್ಜೀವ ಜನನಗಳನ್ನು 21 ದಿನಗಳ ಒಳಗಾಗಿ ಕಡ್ಡಾಯವಾಗಿ ಸೂಕ್ತ ಪ್ರಾಧಿಕಾರದ ಮುಂದೆ ಪ್ರತಿಯೊಬ್ಬರೂ ನೋಂದಾಯಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜನನ-ಮರಣ ಸಮನ್ವಯ ಸಮಿತಿಯ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಆಗುವ ಪ್ರತಿಶತಃ ನೂರರಷ್ಟು ಜನನ, ಮರಣ ಮತ್ತು ನಿರ್ಜೀವ ಜನನಗಳ ಘಟನೆಗಳನ್ನು ವಿಳಂಬವಿಲ್ಲದೇ ನೋಂದಣಿ ಮಾಡುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಜನನ ಮತ್ತು ಮರಣ ನೋಂದಣಿಯು ಭವಿಷ್ಯದ ಕೆಲಸ ಕಾರ್ಯಗಳಿಗೆ ಇವುಗಳ ಪ್ರಮಾಣಪತ್ರವು ಅವಶ್ಯವಿರುತ್ತದೆ. ಇದನ್ನು ಮನಗಂಡು ನೋಂದಣಿಯನ್ನು ಕಡ್ಡಾಯವಾಗಿ ಮಾಡಿಸಬೇಕು ಎಂದರು. ಗ್ರಾಮೀಣ ಪ್ರದೇಶದಲ್ಲಿ 30 ದಿನಗಳವರೆಗೆ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು, ನಗರ ವ್ಯಾಪ್ತಿಗಳಲ್ಲಿ ಪ್ರಾಥಮಿಕ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಸಂಬಂಧಪಟ್ಟ ವೈದ್ಯಾಧಿಕಾರಿಗಳು, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆರೋಗ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕುಂದಾಪುರ ತಾಲೂಕು ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ದಿ. ಪುಳಿಮಾರು ಎಂ. ಕೃಷ್ಣಶೆಟ್ಟಿ ಸ್ಮಾರಕ ದತ್ತಿ ಉಪನ್ಯಾಸ ಹಾಗೂ ಯಕ್ಷಪ್ರೇಮಿ ಶ್ರೀ ನಾರಾಯಣ ಸ್ಮರಣಾರ್ಥ ದತ್ತಿ ಪುರಸ್ಕಾರ ಕಾರ್ಯಕ್ರಮ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿ ಖ್ಯಾತ ಸಾಹಿತಿ, ಅಂಕಣ ಬರಹಗಾರ್ತಿ ವಸಂತಿ ಶೆಟ್ಟಿ ಬ್ರಹ್ಮಾವರ ಅವರು ಮಾತನಾಡಿ, ಯಕ್ಷಗಾನ ಕಲೆ ಕನ್ನಡದ ಸಂಸ್ಕಾರ, ಸಂಸ್ಕೃತಿಯನ್ನು ಬಿಂಬಿಸುತ್ತದೆ. ಕನ್ನಡ ಸ್ಪಷ್ಟವಾಗಿರುವುದು ಯಕ್ಷಗಾನದಲ್ಲಿ ಮಾತ್ರ. ಇಂದಿನ ಯುವಜನತೆಗೆ ಮೌಲ್ಯ ಶಿಕ್ಷಣ ವರ್ತಮಾನದ ತುರ್ತು ಎಂದರು. ಇದೇ ಸಂದರ್ಭ ವಿವಿಧ ದೃಷ್ಟಾಂತಗಳ ಮೂಲಕ ವಿದ್ಯಾರ್ಥಿಗಳಿಗೆ ನೈತಿಕ ಮೌಲ್ಯದ ಕುರಿತು ವಿವರಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅವರು ಮಾತನಾಡಿ, ಸಾಹಿತ್ಯ, ಕ್ರೀಡೆ, ಶಿಕ್ಷಣ, ಸಾಂಸ್ಕೃತಿಕ ಹಾಗೂ ಉದ್ಯೋಗ ಈ ಪಂಚಮುಖಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ವೈಷ್ಣವಿ ಇವೆಂಟ್ಸ್ ಗಂಗೊಳ್ಳಿ, ಸಂಜೀವ ಪಾರ್ವತಿ ಪ್ರಕಾಶನ ಗಂಗೊಳ್ಳಿ ಮತ್ತು ಬಿಲ್ಲವರ ಹಿತ ರಕ್ಷಣಾ ವೇದಿಕೆ ಗಂಗೊಳ್ಳಿಯ ವತಿಯಿಂದ 2024-25ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸುಶ್ಮಿತಾ ಎಸ್. ಗಾಣಿಗ ಅವರನ್ನು ಗಂಗೊಳ್ಳಿಯ ಶ್ರೀ ಸೀತಾಳಿ ನವದುರ್ಗೆ ದೇವಸ್ಥಾನದ ಆವರಣದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವೈಷ್ಣವಿ ಇವೆಂಟ್ಸ್ ಮಾಲೀಕರಾದ ಗೋಪಾಲ ಚಂದನ್, ಬಿಲ್ಲವರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಜಿ. ಗೋಪಾಲ ಪೂಜಾರಿ, ಸಂಜೀವ ಪಾರ್ವತಿ ಪ್ರಕಾಶನದ ನಿರ್ವಾಹಕ ನರೇಂದ್ರ ಎಸ್. ಗಂಗೊಳ್ಳಿ, ಶ್ರೀ ಸೀತಾಳಿ ನವದುರ್ಗೆ ದೇವಸ್ಥಾನದ ಪಾತ್ರಿ ರಘುನಾಥ ಪೂಜಾರಿ, ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಪಂಚಾಯತ್ ಸದಸ್ಯೆ ಮಮತಾ ಗಾಣಿಗ ಮತ್ತು ಬಿಲ್ಲವರ ಹಿತರಕ್ಷಣಾ ವೇದಿಕೆಯ ಸದಸ್ಯರುಗಳಾದ ಆನಂದ ಬಿಲ್ಲವ ಹಾಗೂ ರಾಮಚಂದ್ರ ಜಿ. ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಉದ್ದೇಶಿತ ಕೈಗಾರಿಕಾ ಭೇಟಿ ಕಾರ್ಯಕ್ರಮವನ್ನು ಕೋಟಾದ ಜನತಾ ಪಿಶ್ ಇಂಡಸ್ಟ್ರೀಸ್ ಇಲ್ಲಿ ನಡೆಸಲಾಯಿತು. ಇದರಿಂದ ವಿದ್ಯಾರ್ಥಿಗಳು ಜನತಾ ಪಿಶ್ ಇಂಡಸ್ಟ್ರೀಸ್ ಕಾರ್ಯ ನಿರ್ವಹಣೆ, ತಂತ್ರಜ್ಞಾನ, ಮಾನವ ಸಂಪನ್ಮೂಲ ನಿರ್ವಹಣೆ ಮತ್ತು ವ್ಯವಹಾರದ ಕುರಿತು ಅನೇಕ ವಿಷಯಗಳ ಬಗ್ಗೆ ಸಂಸ್ಥೆಯ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡರು. ಕಾರ್ಯಕ್ರದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ರವಿಚಂದ್ರ, ಉಪನ್ಯಾಸಕರುಗಳಾದ ಸಂದೀಪ ಕೆ., ದೀಪಕ್ ಕುಮಾರ್ ಶೆಟ್ಟಿ, ಸುಹಾಸ್‌ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ನಗರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ನಂಜಪ್ಪ ಎನ್‌. (59) ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ಮೃತಪಟ್ಟದ್ದಾರೆ. ಅವರು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ, ಎರಡು ದಿನಗಳ ಹಿಂದೆ ಉಡುಪಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. 2003ರಲ್ಲಿ ಉಪನಿರೀಕ್ಷಕರಾಗಿ ಸೇವೆಗೆ ನಿಯುಕ್ತಿಯಾಗಿದ್ದ ನಂಜಪ್ಪ, ಶಿವಮೊಗ್ಗ, ದಾವಣಗೆರೆ, ಹಾವೇರಿ ಮೊದಲಾದೆಡೆ ಕರ್ತವ್ಯ ನಿರ್ವಹಿಸಿದ್ದು ಬಳಿಕ ಪೊಲೀಸ್‌ ನಿರೀಕ್ಷಕರಾಗಿ ಆಗಿ ಬಡ್ತಿ ಹೊಂದಿ, ಕಡೂರು, ಭದ್ರಾವತಿ ಯಲ್ಲಿ ಹಾಗೂ ಪ್ರಸ್ತುತ ನಾಲ್ಕು ವರ್ಷಗಳಿಂದ ಗಂಗೊಳ್ಳಿ ಕರಾವಳಿ ಕಾವಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಆಗಸ್ಟ್ 27, 2024 ರಂದು ಕುಂದಾಪುರ ವೃತ್ತ ನಿರೀಕ್ಷಕರಾಗಿ ನಿಯುಕ್ತಿಗೊಂಡಿದ್ದ ನಂಜಪ್ಪ ಅವರು, ಕುಂದಾಪುರದಲ್ಲಿ 9 ತಿಂಗಳುಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.     ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ತಾಳೆ ಬೆಳೆ ಯೋಜನೆಯಡಿ ಖಾದ್ಯ ತೈಲ ಉತ್ಪಾದನೆಯಲ್ಲಿ ಸ್ವಾವಲಂಬನೆಯನ್ನು ಸಾಧಿಸುವ ನಿಟ್ಟಿನಲ್ಲಿ ತಾಳೆ ಬೆಳೆ ಬೇಸಾಯವನ್ನು ರೈತರು ಕೈಗೊಳ್ಳಲು ಇಲಾಖೆಯ ಹಸಿರು ತಂತ್ರಾಂಶದಲ್ಲಿ ಅರ್ಜಿ ನೋಂದಣಿ ಕಾರ್ಯವನ್ನು ಪ್ರಾರಂಭಿಸಿದ್ದು, ತಾಳೆ ಬೆಳೆಯನ್ನು ಬೆಳೆಯಲು ಇಚ್ಛಿಸುವ ರೈತರು ತೋಟಗಾರಿಕೆ ಇಲಾಖೆಗೆ ನೇರವಾಗಿ ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಉತ್ತಮ ಗುಣಮಟ್ಟದ 12 ರಿಂದ 18 ತಿಂಗಳಿನ ತಾಳೆ ಸಸಿಗಳನ್ನು 3ಎಫ್ ಕಂಪನಿಯಿಂದ ಅರ್ಹ ರೈತರಿಗೆ ಉಚಿತವಾಗಿ ಒದಗಿಸಲಾಗುತ್ತಿದ್ದು, ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಹೋಬಳಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳನ್ನು ಆಯಾ ತಾಲೂಕಿನ ಇಲಾಖೆಯ ಕಚೇರಿಗಳಲ್ಲಿ ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು 2025 ರ ಜೂನ್ 1 ರಿಂದ ಜುಲೈ 31 ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧವನ್ನು ಹೊರಡಿ ಆದೇಶವನ್ನು ಹೊರಡಿಸಿರುತ್ತದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯ ವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಹಾಗೂ ಸಾಂಪ್ರದಾಯಕ/ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ ಹಾಗೂ ಹವಾಮಾನದ ವೈರ‍್ಯತೆಯ ಮುನ್ಸೂಚನೆ ನೀಡಿದಲ್ಲಿ ಎಲ್ಲಾ ಮೀನುಗಾರರು ಕಡ್ಡಾಯವಾಗಿ ಪಾಲಿಸಬೇಕು. ಮೀನುಗಾರಿಕೆ ನಿಷೇಧ ಹಿನ್ನೆಲೆ, ಕಡ್ಡಾಯವಾಗಿ ಎಲ್ಲಾ ಬೋಟುಗಳು ಮೇ 31 ರ ಒಳಗಾಗಿ ಬಂದರು ಪ್ರವೇಶ ಮಾಡಬೇಕು. ತದನಂತರ ಬಂದರು ಪ್ರವೇಶ ಮಾಡುವ ದೋಣಿಗಳ ಮೇಲೆ ಕಾನೂನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಿಐಟಿಯು ಕುಂದಾಪುರ ತಾಲೂಕು ವತಿಯಿಂದ ಕಟ್ಟಡ ಕಾರ್ಮಿಕರ ಸೆಸ್ ಕಾಯ್ದೆ ಹಾಗೂ ನೂತನ ಕಾರ್ಮಿಕ ಸಂಹಿತೆ ವಿರೋಧಿಸಿ ಮಂಗಳವಾರ ಕುಂದಾಪುರ ಶಾಸ್ತ್ರೀ ವೃತ್ತದಲ್ಲಿ ಸಂಹಿತೆಗಳ ಪ್ರತಿಗಳನ್ನು ದಹಿಸಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ದೇಶದ ಹತ್ತು ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ದೇಶದ ಪರಿಸ್ಥಿತಿ ಗಮನಿಸಿ ಜುಲೈ 9ಕ್ಕೆ ಮುಂದೂಡಲಾಗಿದೆ. ದೇಶದ ಕಾರ್ಮಿಕ ವರ್ಗ ಕಷ್ಟಪಟ್ಟು ಗಳಿಸಿದ ಕಾರ್ಮಿಕರ ಕಾನೂನು ಬಂಡವಾಳಗಾರರ ಪಾದದಡಿಯಲ್ಲಿಟ್ಟು ನವಗುಲಾಮಗಿರಿಗೆ ತಳ್ಳುವ ಸಂಹಿತೆಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ನಾಲ್ಕು ಕೇಂದ್ರದ ಸಂಹಿತೆ ಪ್ರತಿಗಳನ್ನು ಕಾರ್ಮಿಕ ದಹಿಸುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಸಿಐಟಿಯು ತಾಲೂಕು ಸಂಚಾಲಕ ಚಂದ್ರಶೇಖರ ವಿ., ಸಂಘದ ಗೌರವ ಅಧ್ಯಕ್ಷ ಚಿಕ್ಕ ಮೊಗವೀರ ಗಂಗೊಳ್ಳಿ, ವಿಜೇಂದ್ರ ಕೋಣಿ, ಸುಧೀ‌ರ್ ಕುಮಾ‌ರ್, ಶಶಿಕಾಂತ್‌ ಎಸ್‌., ರಾಘವೇಂದ್ರ ಡಿ. ಮೊದಲಾದವರು ಉಪಸ್ಥಿತರಿದ್ದರು. ಕುಂದಾಪುರ ಹೆಂಚು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಂದಿನ ಕಾಲದಲ್ಲಿ ಮಕ್ಕಳು ಹೆಚ್ಚು ಮೊಬೈಲ್ ಬಳಸುತ್ತಿದ್ದು ಅದರ  ಗೀಳಿನಿಂದ ಹೊರಬರಲು ಬೇಸಿಗೆ ಶಿಬಿರಗಳ ಸಹಕಾರಿ ಎಂದು ಪಾಂಡೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಶೀಲಾ ಸದಾನಂದ ಪೂಜಾರಿ ನುಡಿದರು. ಅವರು ಬುಧವಾರ ಪಾಂಡೇಶ್ವರ ಗ್ರಾಮಪಂಚಾಯತ್ ಹಾಗೂ ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಇವರುಗಳ ಸಹಭಾಗಿತ್ವದಡಿ 15ರಿಂದ 21ರ ತನಕ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಎಷ್ಟೋ ಮಕ್ಕಳಲ್ಲಿ ಪ್ರತಿಭೆಗಳು ಮರಿಚಿಕೆಯಾಗಿ ಉಳಿಯುತ್ತದೆ. ಇದಕ್ಕೆ ಗ್ರಾಮೀಣ ಶಿಬಿರಗಳು ಅತ್ಯಂತ ಪರಿಣಾಮಕಾರಿಯಾಗಿದೆ. ಶಿಬಿರಗಳ ಜತೆ ಪರಿಸರ ಜಾಗೃತಿ ಹೊಂದಬೇಕು ಎಂದರು. ಮುಖ್ಯ ಅಭ್ಯಾಗತರಾಗಿ ಪಂಚಾಯತ್ ಉಪಾಧ್ಯಕ್ಷ ವೈ ಬಿ. ರಾಘವೇಂದ್ರ, ಅಭಿವೃದ್ಧಿ ಅಧಿಕಾರಿ ಲೋಲಾಕ್ಷಿ ಸದಸ್ಯರಾದ ಸುಜಾತ ವೆಂಕಟೇಶ್ ಪೂಜಾರಿ, ಸಂಜೀವಿನಿ ಒಕ್ಕೂಟದ ಎಂಬಿಕೆ ಉಷಾ ಗಣೇಶ್ ಪೂಜಾರಿ, ವಿಆರ್ ಡಬ್ಲ್ಯೂ ಶಾಂತಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ತಂಡಗಳಿಗೆ ಸ್ಪರ್ಧೆ ಏರ್ಪಡಿಸಿದ್ದು ಹೆಚ್ಚು ಅಂಕ ಪಡೆದ ತಂಡಗಳಿಗೆ ಗಿಡ…

Read More