Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗುಲ್ವಾಡಿ ಗ್ರಾಮದ ಮಾವಿನಕಟ್ಟೆಯ ಮೆಡಿಕಲ್ ಶಾಪ್‌ವೊಂದರಲ್ಲಿ ಖರೀದಿಸಿದ ವಸ್ತುಗಳಿಗೆ ಚಿಲ್ಲರೆ ಇಲ್ಲ, ಚಿಲ್ಲರೆ ಕೊಡಿ ಎಂದ ಕಾರಣಕ್ಕೆ ‌ಮಹಿಳೆಯೊಬ್ಬರು ಮೆಡಿಕಲ್ ಶಾಪಿನ ಯುವತಿ ಮೇಲೆ ಹಲ್ಲೆಗೈದ ಘಟನೆ ಸೋಮವಾರ ನಡೆದಿದೆ. ಯಾಸ್ಮಿನ್ ಹಲ್ಲೆಗೈದ ಆರೋಪಿ. ಮೆಡಿಕಲ್ ಶಾಪಿಗೆ ತೆರಳಿದ್ದ ಯಾಸ್ಮಿನ್ ಔಷಧಿ ಖರೀದಿಸಿ, 500 ರೂ. ಕೊಟ್ಟಿದ್ದರು. ಇದಕ್ಕೆ ಚಿಲ್ಲರೆ ಇಲ್ಲ, ಚಿಲ್ಲರೆ ಕೊಡಿ ಅಂದಿದ್ದಕ್ಕೆ ಯುವತಿ ಮೇಲೆ ಹಲ್ಲೆ ನಡೆಸಿ, ಅವಾಚ್ಯವಾಗಿ ಜಾತಿ ನಿಂದನೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹಲ್ಲೆಗೊಳಗಾದ ಯುವತಿಯನ್ನು ಕುಂದಾಪುರದ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಸ್ಪತ್ರೆಗೆ ಎಸ್ಪಿ ಭೇಟಿ: ಆಸ್ಪತ್ರೆಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಭೇಟಿ, ಚಿಕಿತ್ಸೆ ಪಡೆಯುತ್ತಿದ್ದ ಯುವತಿಯ ಆರೋಗ್ಯ ವಿಚಾರಿಸಿದರು. ಕುಂದಾಪುರ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಆರೋಪಿಯ ವಿರುದ್ಧ ಅಗತ್ಯ ಕಾನೂನು ರೀತಿಯ ಕ್ರಮಕೈಗೊಳ್ಳಾಗುವುದು ಎಂದು ಅವರು ಭೇಟಿಯ ವೇಳೆ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂನ್ 11 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 8105774936, 9901472710 ಹಾಗೂ 9945856670 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೆಶ್ವರ ದೇಗುಲದ ಪ್ರಧಾನ ಅರ್ಚಕರಾದ ಚಂದ್ರಶೇಖರ ಮಂಜ (78) ಅವರು ಇತ್ತೀಚಿಗೆ ನಿಧನ ಹೊಂದಿದರು. ಹಿರಿಯ ಅರ್ಚಕರಾಗಿ ಹಲವು ವರ್ಷ ಕಾಲ ಸೇವೆ ಸಲ್ಲಿಸಿದ್ದ ಅವರು ಕ್ಷೇತ್ರದ ಭಕ್ತರ ಗೌರವಕ್ಕೆ ಪಾತ್ರರಾಗಿದ್ದರು. ದೇಗುಲದ ಆನುವಂಶೀಯ ಮೊಕೇಸರ ಸಿ. ಸದಾಶಿವ ಶೆಟ್ಟಿ, ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಬಿ.ಎಂ. ಸುಕುಮಾರ ಶೆಟ್ಟಿ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ವಿವಾಹಿತ ಮಹಿಳೆಯೋರ್ವರು ನಾಪತ್ತೆಯಾದ ಬಗ್ಗೆ ಕುಂದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ. ಇಲ್ಲಿನ ವಿಠಲವಾಡಿ ಮೂಲದ ಹೀನಾ ಕೌಷರ್ (33) ನಾಪತ್ತೆಯಾದ ಮಹಿಳೆ. ಹೀನಾ ಪತಿ ವಿದೇಶದಲ್ಲಿದ್ದು ಎರಡು ಮಕ್ಕಳು ಹಾಗೂ ತಾಯಿಯೊಂದಿಗೆ ಕುಂದಾಪುರ ವಿಠಲವಾಡಿಯಲ್ಲಿ ವಾಸಿಸುತ್ತಿದ್ದರು. ಸೋಮವಾರ ಬೆಳಿಗ್ಗೆ 04-00 ಗಂಟೆ ಸುಮಾರಿಗೆ ಕುಂದಾಪುರ ಚರ್ಚ್ ರಸ್ತೆಯಿಂದ ಕೋಡಿಗೆ ಹೋಗುವ ಸೇತುವೆ ಬಳಿ ಮಹಿಳೆಯ ಸ್ಕೂಟರ್ ಹಾಗೂ ಚಪ್ಪಲಿ ಪತ್ತೆಯಾಗಿದೆ. ಪೊಲೀಸರು, ಅಗ್ನಿ ಶಾಮಕದಳ ಹಾಗೂ ಸ್ಥಳೀಯರು ಸೇರಿ ನದಿಯಲ್ಲಿ ಹುಡುಕಾಟ ನಡೆಸಿದ್ದು ಎಲ್ಲಿಯೂ ಪತ್ತೆ ಆಗಿರುವುದಿಲ್ಲ. ಮೊಬೈಲ್ ಸ್ವಿಚ್ ಆಫ್ ಆಗಿರುತ್ತದೆ. ಇದರಿಂದಾಗಿ ಆತ್ಮಹತ್ಯೆಯೋ ಅಥವಾ ನಾಪತ್ತೆಯೋ ಎನ್ನುವ ಅನುಮಾನ ವ್ಯಕ್ತವಾಗಿದೆ. ಕುಂದಾಪುರ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ಮೂಡಹಡು ಇವರ ನೇತೃತ್ವದಲ್ಲಿ ಕಲ್ಪತರು ಮಹಿಳಾ ಸ್ವ ಸಹಾಯ ಗುಂಪಿನ ಸದಸ್ಯರ  ಮಕ್ಕಳಿಗೆ 10ನೇ ವರ್ಷದ ಪ್ರತಿಭಾ ಪುರಸ್ಕಾರ ಹಾಗೂ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮವು ಪಾಂಡೇಶ್ವರ ಶಾಲೆಯಲ್ಲಿ ಜರುಗಿತು. ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಅನ್ನಪೂರ್ಣ ಹಾಗೂ ಪೂರ್ವಿ ಇವರನ್ನು ಸಂಘದ ಪರವಾಗಿ ಗೌರವಿಸಲಾಯಿತು. 205 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವ ವೇದಿಕೆಯ ಅಧ್ಯಕ್ಷ ರವಿಕಿರಣ್ ಪೂಜಾರಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘ ಸಾಸ್ತಾನ ಇದರ ಅಧ್ಯಕ್ಷ ಎಂ. ಸಿ. ಚಂದ್ರಶೇಖರ ಪೂಜಾರಿ, ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘ ಸಾಸ್ತಾನ ಇದರ ಪ್ರಧಾನ ಕಾರ್ಯದರ್ಶಿ ಐರೋಡಿ ವಿಠ್ಠಲ್ ಪೂಜಾರಿ, ಉದ್ಯಮಿಗಳಾದ ದಯಾನಂದ ಪೂಜಾರಿ ಮೂಡಹಡು ಹಾಗೂ ಗೋಪಾಲ ಪೂಜಾರಿ ಮಠತೋಟ, ಪಾಂಡೇಶ್ವರ ಗ್ರಾಮ ಪಂಚಾಯತ್ ಸದಸ್ಯರಾದ ಸುಜಾತಾ ವೆಂಕಟೇಶ್ ಪೂಜಾರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಒಂದು ಸಂಘಟನೆ ಹೇಗಿರಬೇಕೆಂಬುವದನ್ನು ಪಂಚವರ್ಣ ಸಂಘಟನೆ ರಾಜ್ಯಕ್ಕೆ ಮಾದರಿಯಾಗಿ ತೋರಿಸಿಕೊಟ್ಟಿದೆ ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೆ. ಕೃಷ್ಣ ಕಾಂಚನ್ ಅಭಿಪ್ರಾಯಪಟ್ಟರು. ಅವರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಡಾ. ಪುನೀತ್‌ ರಾಜ್ ಕುಮಾರ್ ವಿದ್ಯಾನಿಧಿ ಯೋಜನೆಯಡಿ ದತ್ತು ಸ್ವೀಕರಿಸಿದ ವಿದ್ಯಾರ್ಧಿಗಳಿಗೆ  6ನೇ ವರ್ಷದ ಪರಿಕರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂಘಟನೆಗಳು ವಾರ್ಷಿಕೋತ್ಸವ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನು ಕಾಣುತ್ತೇವೆ. ಆದರೆ ಪಂಚವರ್ಣ ಸಂಘಟನೆ ಅತ್ಯದ್ಭುತವಾಗಿ ಇಡೀ ರಾಜ್ಯಕ್ಕೆ ವಿಭಿನ್ನ ಕಾರ್ಯಕ್ರಮಗಳ ಮೂಲಕ ಮನೆ ಮಾತಾಗಿ ಬೆಳೆದು ನಿಂತಿದೆ. ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸುವುದು ಸುಲಭದ ಮಾತಲ್ಲ, ಬದಲಾಗಿ ಅದನ್ನು ನಿರಂತವಾಗಿ ಕೊಂಡ್ಯೋಯುವುದು ಸವಾಲಿನ ಕಾರ್ಯ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಇದರ ಸದ್ಭಳಕೆ ಮಾಡಿಕೊಂಡು ಸಮಾಜದ ಮುಖ್ಯವಾಹಿಯಲ್ಲಿ ನಿಲ್ಲಬೇಕು ಹಾಗೂ ಇನೊರ್ವರಿಗೂ ಸಹಾಯಹಸ್ತ ಚಾಚುವ ಮನಸ್ಥಿತಿ ಸೃಷ್ಠಿಸಿಕೊಳ್ಳಿ ಎಂದು ಕರೆ ನೀಡಿದರು. ಇದೇ ವೇಳೆ ಸುಮಾರು 60 ಸಾವಿರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸಿಟ್ಯೂಟ್ (ಈಅI) ಮೈಸೂರು ಹಾಗೂ ಇನ್ಸಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ (Iಊಒ) ಬೆಂಗಳೂರು ಇವರ ಮೂಲಕ ರಾಜ್ಯಾದ್ಯಂತ ಪರಿಶಿಷ್ಟ ಜಾತಿಗೆ ಸೇರಿದ 292 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಅನುಮೋದನೆ ನೀಡಲಾಗಿದೆ. ಅದರಂತೆ ತರಬೇತಿವಾರು ಉಳಿದಿರುವ ಗುರಿಯನ್ನು ಜಿಲ್ಲಾವಾರು ಹಂಚಿಕೆ ಮಾಡಲಾಗಿದ್ದು, ಸದರಿ ತರಬೇತಿಗಳು ಜೂನ್ 30 ರಿಂದ ಪ್ರಾರಂಭವಾಗಲಿದ್ದು, ತರಬೇತಿಗೆ ಸಂಬಂಧಿಸಿದಂತೆ ಈಗಾಗಲೇ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ ಇತರೆ ಹೋಟೆಲ್‌ಗಳಲ್ಲಿ ಕೆಲಸ ಖಾತರಿಯಾಗಿರುವುದು. ತರಬೇತಿ ಪಡೆಯುವ ವೇಳೆ ಮಾಸಿಕ 2,000 ರೂ. ಗಳ ಸ್ಟೈಫಂಡ್ ನೀಡಲಾಗುವುದು. ತರಬೇತಿಗೆ ಹಾಜರಾಗುವವರಿಗೆ ವಸತಿ, ಊಟೋಪಚಾರ ಹಾಗೂ ಯೂನಿಫಾರ್ಮ್ ನೀಡಲಾಗುವುದು. ತರಗತಿಯ ತರಬೇತಿ ಜೊತೆಗೆ ರಾಜ್ಯದ ವಿವಿಧ ಪಂಚತಾರಾ ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ‌ಸ್ಟೇಟ್‌ ಅಮೆಚೂರ್‌ ಯೋಗ ಸ್ಪೋರ್ಟ್ಸ್ ಅಸೋಸಿಯೇಶನ್‌ ವತಿಯಿಂದ ಸಾಗರದಲ್ಲಿ ನಡೆದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ತಾಲೂಕು ಸಂಚಾರ ಪೊಲೀಸ್ ಠಾಣಾ ಸಿಬ್ಬಂದಿ ಗುರುದಾಸ್‌ ಜಿ. ಅವರು ತೃತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಗಂಗೊಳ್ಳಿ: ಇಲ್ಲಿನ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚಿಗೆ ಹೊಸದಾಗಿ ಸೇರ್ಪಡೆಗೊಂಡ ಮಕ್ಕಳಿಗೆ ಜಿ. ಎಸ್.ವಿ.ಎಸ್ ಅಸೋಸಿಯೇಷನ್ ವತಿಯಿಂದ ಉಚಿತ ಸಮವಸ್ತ್ರ ಮತ್ತು ಬೆಲ್ಟ್ ಗಳನ್ನು ವಿತರಿಸಲಾಯಿತು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ದೀಕ್ಷಿತ್ ಮೇಸ್ತ, ಬೋಧಕ ಬಳಗದ ಲಕ್ಷ್ಮೀ ಖಾರ್ವಿ, ಮಾಲಾಶ್ರೀ ಖಾರ್ವಿ, ರೇಖಾ ಖಾರ್ವಿ, ರೇಣುಕಾ ನಾಯಕ್, ಭೂದೇವಿ, ಮಹಾಬಲ ಆಚಾರ್ಯ ಮತ್ತು ಮಮತಾ ಖಾರ್ವಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಶಿಕ್ಷಕ ವೃಂದದವರಿಗೆ ಶಿಕ್ಷಕರು ಬಳಸಬೇಕಾದ ವಿವಿಧ ಕೌಶಲ್ಯಗಳ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಾಗಾರದಲ್ಲಿ ಅಂಕುರಮ್ ಎಜುಕೇಶಲ್ ಟ್ರಸ್ಟ್ನ ಶೈಕ್ಷಣಿಕ ತಂತ್ರಜ್ಞರಾದ ಅಕ್ಷಯ ಕೆ. ಪಣಿಕರ್ ಅವರು ಮಾತನಾಡಿ, ಮಕ್ಕಳ ಮನಸ್ಸನ್ನು ಅರಿಯದೇ ಪಾಠದಲ್ಲಿ ತೊಡಗಿದರೆ ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾಗದು. ಆದ್ದರಿಂದ ಮಕ್ಕಳ ಮನಸ್ಸನ್ನು ನಮ್ಮೆಡೆಗೆ ಸೆಳೆದು ಪಾಠದಲ್ಲಿ ತೊಡಗಲು ಅಧ್ಯಾಪಕರು ಸದಾ ಪ್ರಯತ್ನಿಸಬೇಕು ಎಂದು ನೆನಪಿಸುತ್ತಾ ಮಕ್ಕಳ ಸ್ಥಿತಿಗತಿಗಳನ್ನು ಗಮನಿಸಿ ಅವರ ಸಮಸ್ಯೆಯನ್ನು ಅರಿಯುವ ಮಾರ್ಗಗಳನ್ನು ಶಿಕ್ಷಕರಿಗೆ ಪರಿಚಯಿಸಿದರು. ದೋಷಪೂರಿತ ಸ್ಥಿತಿಯಲ್ಲಿರುವಾಗ ಮಕ್ಕಳನ್ನು ಹೇಗೆ ನಿಯಂತ್ರಿಸಬೇಕೆಂಬ ವಿಚಾರಗಳಲ್ಲಿ ಮಾಹಿತಿಯನ್ನು ಹಂಚಿಕೊಂಡರು. ಬೇಸ್ ಸಂಸ್ಥೆಯು ನಿರ್ದೇಶಕರಾದ ರಾಮಪ್ರಸಾದ್ ಎಚ್. ಎಸ್. ಇಂಗ್ಲೀಷ್ ಭಾಷೆಯನ್ನು ತಪ್ಪಿಲ್ಲದೇ ಸಮರ್ಥವಾಗಿ ಬಳಸಿಕೊಂಡು ಮುಂದುವರಿಯಲು ಬೇಕಾದ ವೈಯಾಕರಣೀಯ ವಿಚಾರಗಳನ್ನು ತಿಳಿಸಿಕೊಟ್ಟರು. ಸುಮಾರು 60 ಜನ ಅಧ್ಯಾಪಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಉತ್ತಮ ಮಾರ್ಗದರ್ಶನವನ್ನು ಪಡೆದುಕೊಂಡರು. ಈ ಸಮಯದಲ್ಲಿ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು…

Read More