ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ತಾಲೂಕಿನ ಆಜ್ರಿ ಗ್ರಾಮದ ಕೂಲಿ ಕಾರ್ಮಿಕ ಚಂದ್ರ (48) ಅವರು ಇತ್ತೀಚಿಗೆ ಮನೆಯ ದನದ ಕೊಟ್ಟಿಗೆಯ ಹಿಂಬದಿಯ ಪೇರಳೆ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ. ಅವರ ಪತ್ನಿ ಎರಡು ವರ್ಷಗಳ ಹಿಂದೆ ಮೃತಪಟ್ಟಿದ್ದು ಅನಂತರ ಅವರು ಮೌನಕ್ಕೆ ಶರಣಾಗಿದ್ದರು. ಅಡಿಕೆ ಮರಕ್ಕೆ ಔಷಧ ಸಿಂಪರಣೆಗೆ ಚಂದ್ರ ಅವರು ಬರದೆ ಇದ್ದ ಕಾರಣ ಪಕ್ಕದ ಮನೆಯವರು ವಿಚಾರಿಸಲು ಅವರ ಮನೆಗೆ ಹೋಗಿದ್ದು, ಆಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿಚಾರ ಬೆಳಕಿಗೆ ಬಂದಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯ ವತಿಯಿಂದ 2024 ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಲಾಗಿದೆ. ಲೇಖಕರು, ಪ್ರಕಾಶಕರು ಹಾಗೂ ಸಾಹಿತ್ಯಾಸಕ್ತ ಸಾರ್ವಜನಿಕರು ಬಹುಮಾನಕ್ಕಾಗಿ ಪುಸ್ತಕದ ನಾಲ್ಕು ಪ್ರತಿಗಳನ್ನು ರಿಜಿಸ್ಟಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು ವಿಳಾಸಕ್ಕೆ ರಿಜಿಸ್ಟರ್ಡ್ ಅಂಚೆ / ಕೊರಿಯರ್ ಮೂಲಕ ಅಥವಾ ಖುದ್ದಾಗಿ ಜುಲೈ 15 ರ ಒಳಗಾಗಿ ತಲುಪಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್ಸೈಟ್ www.sahithyaacademy.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಾರ್ವಜನಿಕರು ಕೋವಿಡ್ ಸೋಂಕಿನ ಬಗ್ಗೆ ಭಯ ಬೀಳದೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಲ್ಲಿ ಇವುಗಳಿಂದ ದೂರವಿರಲು ಸಾಧ್ಯ. ಈ ಬಗ್ಗೆ ಪ್ರತಿಯೊಬ್ಬರೂ ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದಾದ್ಯಂತ ಕೋವಿಡ್ ಸೋಂಕಿನ ಪ್ರಕರಣಗಳು ಕಂಡುಬರುತ್ತಿವೆ. ಜಿಲ್ಲೆಯಲ್ಲೂ ಸಹ ಕೆಲವು ಪ್ರಕರಣಗಳು ಉಂಟಾಗಿವೆ. ಸಾರ್ವಜನಿಕರು ಸರ್ಕಾರ ಸೂಚಿಸಿರುವ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕು. ವಯೋವೃದ್ಧರು, ಮಕ್ಕಳು, ಗರ್ಭಿಣಿಯರು ಕೋವಿಡ್ ಸೋಂಕಿನ ಬಗ್ಗೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು. ಜ್ವರ, ಕೆಮ್ಮು, ನೆಗಡಿ, ಶೀತ, ಉಸಿರಾಟ ತೊಂದರೆ ಮುಂತಾದ ಗುಣಲಕ್ಷಣಗಳು ಕಂಡುಬಂದಲ್ಲಿ ಕೊರೋನಾ ಪರೀಕ್ಷೆಯನ್ನು ಸಮೀಪದ ಆರೋಗ್ಯ ಕೇಂದ್ರಗಳಲ್ಲಿ ಮಾಡಿಸಿಕೊಳ್ಳಬೇಕು. ಸೋಂಕು ಇದ್ದಲ್ಲಿ ಸೂಕ್ತ ಚಿಕಿತ್ಸೆ ಪಡೆಯುವುದರ ಜೊತೆಗೆ ಇತರರಿಗೆ ಹರಡದಂತೆ ನೋಡಿಕೊಳ್ಳಬೇಕು ಎಂದರು. ಪೂರ್ವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಅವರು ಪೊಲೀಸ್ ಇಲಾಖೆ ಕರ್ತವ್ಯದಲ್ಲಿ ಹಸ್ತಕ್ಷೇಪ ಮಾಡುವುದನ್ನು ಬಿಟ್ಟು ಅವರ ಕರ್ತವ್ಯವಾದ ಹೆದ್ದಾರಿ ಸಮಸ್ಯೆ, ಕಸ್ತೂರಿ ರಂಗನ್ ವರದಿ ಸಮಸ್ಯೆ, ಪರಿಸರ ಸೂಕ್ಷ್ಮ ವಲಯದ ಸಮಸ್ಯೆ, ರೈಲ್ವೆ ಸಮಸ್ಯೆ, ಕರಾವಳಿ ನಿಯಂತ್ರಣ ವಲಯದ ಸಮಸ್ಯೆ, ಯುವಕರ ನಿರುದ್ಯೋಗ ಸಮಸ್ಯೆ, ಬಂದರು ಸಮಸ್ಯೆ, ಪ್ರವಾಸೋದ್ಯಮಕ್ಕೆ ಇರುವ ಅಡೆತಡೆಗಳು ಇವುಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಿ. ಅದನ್ನು ಬಿಟ್ಟು ಇವರೇ ಅಂದರೆ ಶಾಸಕಾಂಗ ರಚನೆ ಮಾಡಿದ ಕಾನೂನುಗಳನ್ನು ಪೊಲೀಸ್ ಇಲಾಖೆ ಕರ್ತವ್ಯ ಪಾಲನೆ ಮಾಡುವಾಗ ಅದನ್ನು ವಿರೋಧಿಸುವುದು ಹಾಗೂ ಟೀಕಿಸುವುದು ಸಂವಿಧಾನ ವಿರೋಧಿ ಕ್ರಮವಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು. ಇವತ್ತು ಪೊಲೀಸ್ ಇಲಾಖೆ ಕಾನೂನಿನ ಅಡಿಯಲ್ಲಿ ಸಮಾಜ ಘಾತುಕ ಶಕ್ತಿಗಳ ಮೇಲೆ ಗಡಿಪಾರು, ಬಂಧನ ಇತ್ಯಾದಿ ಕ್ರಮವನ್ನು ಕಾನೂನಿನ ಅಡಿಯಲ್ಲೇ ಜಾರಿಗೆ ತರುತ್ತಿದೆ ಬಿಟ್ಟರೆ ಪೊಲೀಸ್ ಇಲಾಖೆ ಕಾನೂನು ಬಿಟ್ಟು ಯಾವುದನ್ನೂ ಮಾಡುತ್ತಿಲ್ಲಾ, ಅದಲ್ಲದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಬಸ್ರೂರು ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕುಂದಾಪುರ ತಾಲೂಕು ಆರೋಗ್ಯ ಕೇಂದ್ರದ ಸಿಬ್ಬಂದಿ ಭ್ಯಾಗ್ಯಲಕ್ಷ್ಮೀ ಮಾತನಾಡಿ, ತಂಬಾಕು ಸೇವನೆಯಿಂದ ಕುಟುಂಬ ಸಮಾಜ ಮತ್ತು ಪರಿಸರದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಮತ್ತು ತಂಬಾಕು ಸೇವನೆಯಿಂದ ಆಗುವ ಶ್ವಾಸಕೋಶ, ಧ್ವನಿ ಪೆಟ್ಟಿಗೆ, ಅನ್ನನಾಳ ಹೀಗೆ ಹಲವು ರೀತಿಯ ಕ್ಯಾನ್ಸರ್ಗಳಿಗೆ ಕಾರಣವಾಗಿದೆ. ಆದ್ದರಿಂದ ಯುವ ಜನತೆ ತಂಬಾಕು ಸೇವನೆಯಿಂದ ದೂರವಿರಬೇಕು. ಇದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಜೊತೆಗೆ ತಂಬಾಕು ಸೇವನೆಯ ತೀವ್ರತೆಯ ಬಗ್ಗೆ ತಿಳಿದುಕೊಳ್ಳಬೇಕಾದರೆ ಕ್ಯಾನ್ಸರ್ ಆಸ್ಪತ್ರೆ ಭೇಟಿ ನೀಡಿದರೆ ತಿಳಿಯುತ್ತದೆ ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. ಬಸ್ರೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯಾದ ಶ್ವೇತಾ ಕಾರ್ಯಕ್ರಮವನ್ನುದ್ದೇಶಿಸಿ ದುಶ್ಚಟ ಮತ್ತು ಮಾನಸಿಕ ಆರೋಗ್ಯದ ಬಗ್ಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಅಂಪಾರು ಸಂಜಯಗಾಂಧಿ ಆಂಗ್ಲ ಮಾಧ್ಯಮ ಶಾಲೆಯ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವು ವಿಶಿಷ್ಟ ಮತ್ತು ಸಾಂಪ್ರದಾಯಿಕ ರೀತಿಯಲ್ಲಿ ಆಚರಿಸಲಾಯಿತು. ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಸಂಜಯಗಾಂಧಿ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಬಲಾಡಿ ಅವರು ರಿಬ್ಬನ್ ಕತ್ತರಿಸುವುದರ ಮೂಲಕ ನೆರವೇರಿಸಿದರೆ, ಖಜಾಂಚಿ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ ಅವರು ದೀಪ ಬೆಳಗಿಸಿ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡಿದರು. ಕಿಂಡರ್ಗಾರ್ಟನ್ ಮಕ್ಕಳನ್ನೊಳಗೊಂಡ ವಿದ್ಯಾರ್ಥಿಗಳ ತಂಡ ಜ್ಞಾನ, ದೈವಿಕತೆ, ಸಮೃದ್ಧಿಯ ಪ್ರತೀಕವಾಗಿರುವ ಮಂಗಳಕರ ಹಣತೆಯನ್ನು ಬೆಳಗುವ ಮೂಲಕ ಶುಭಾರಂಭ ಮಾಡಿದರು. ಶಾಲಾ ಆಡಳಿತಾಧಿಕಾರಿ ಚೈತ್ರ ಯಡಿಯಾಳ ಅವರು ಮಕ್ಕಳಿಗೆ ಆರತಿ ಬೆಳಗಿ ಹೂವು, ಅಕ್ಷತೆಯೊಂದಿಗೆ ಬರಮಾಡಿಕೊಂಡರು. ಮುಖ್ಯ ಶಿಕ್ಷಕಿ ವಿಲಾಸಿನಿ ಶೆಟ್ಟಿ ಸ್ವಾಗತಿಸಿದರೆ, ಸಂಯೋಜಕಿ ಸರೋಜ ಅವರು ವಂದಿಸಿದರು. ಸಂಸ್ಥೆಯ ಶಿಕ್ಷಕ – ಶಿಕ್ಷಕಿಯರು ವಿದ್ಯಾರ್ಥಿಗಳಿಗೆ ಸಿಹಿ ಹಂಚುವ ಮೂಲಕ ಶುಭ ಹಾರೈಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೋಟಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕುಂದಾಪುರ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ ಲಭ್ಯವಿದ್ದು, ಆಸಕ್ತ ರೈತರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಸಾಲಿನ ವಿವಿಧ ಯೋಜನೆಗಳಡಿ ರೈತರಿಗೆ ಕಾಳುಮೆಣಸು, ಅನಾನಸ್ಸು, ಅಂಗಾಂಶಬಾಳೆ, ಅಪ್ರಧಾನ ಹಣ್ಣುಗಳಾದ ರಾಂಬೂಟಾನ್, ಮ್ಯಾಂಗೋಸ್ಟೀನ್ ಮತ್ತು ಡ್ರಾಯಗನ್ ಫ್ರೂಟ್ ತೋಟಗಳ ಸ್ಥಾಪನೆಗೆ ಶೇ. 40 ರ ಸಹಾಯಧನ, ನೀರು ಸಂಗ್ರಹಣ ಘಟಕ ನಿರ್ಮಾಣಕ್ಕೆ, ಗರಿಷ್ಠ 0.75 ಲಕ್ಷ ರೂ.ಗಳ ಸಹಾಯಧನ, ವಿವಿಧ ತೋಟಗಾರಿಕೆ ಬೆಳೆಗಳಿಗೆ ಹಾನಿಯುಂಟು ಮಾಡುವ ರೋಗ/ಕೀಟಗಳ ನಿಯಂತ್ರಣಕ್ಕಾಗಿ ಸಸ್ಯ ಸಂರಕ್ಷಣಾ ಔಷಧಿಗಳಿಗೆ ಪ್ರತಿ ಹೆಕ್ಟೇರಿಗೆ 1,500 ಹಾಗೂ ಅಡಿಕೆ ತೋಟ ಹೊಂದಿರುವ ರೈತರಿಗೆ ಅಡಿಕೆ ಸಂರಕ್ಷಣೆ/ ಒಣಗಿಸಲು ಸೋಲಾರ್ ಶೀಟ್ ಖರೀದಿಗೆ ಶೇ.40 ರ ಸಹಾಯಧನ ಲಭ್ಯವಿದೆ. ತೋಟಗಾರಿಕೆ ಬೆಳೆಗಳ ಪ್ರಾಥಮಿಕ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಶೇ.40 ರ ದರದಲ್ಲಿ (ಗರಿಷ್ಠ 12.25 ಲಕ್ಷಗಳವರೆಗೆ), ಪ್ಯಾಕ್ ಹೌಸ್ಗಳ ನಿರ್ಮಾಣಕ್ಕೆ ಗರಿಷ್ಠ 2.40 ಲಕ್ಷಗಳವರೆಗೆ ಶೇ.50 ರ ವರೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಪಿಯು ಶಿಕ್ಷಣವು ಉತ್ತಮವಾದ ತಳಹದಿಯನ್ನು ನೀಡುತ್ತದೆ ಹಾಗಾಗಿ ಸರಿಯಾದ ರೀತಿಯಲ್ಲಿ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಗಂಗೊಳ್ಳಿಯ ಜಿ.ಎಸ್. ವಿ.ಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಪೈ ಹೇಳಿದರು. ಅವರು ಇಲ್ಲಿನ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ತರಗತಿಗಳ ಆರಂಭೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್. ಸಿ. ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ನಿಸರ್ಗ, ಮನಾಲಿ, ಪ್ರಾರ್ಥನಾ, ಪೂರ್ವಿಕ, ಅದಿತಿ, ಸ್ಕಂದ, ಬಿಂದುಶ್ರೀ ಅವರನ್ನು ಅಭಿನಂದಿಸಲಾಯಿತು. ಕಾಲೇಜಿನ ಕಾರ್ಯದರ್ಶಿ ಸದಾಶಿವ ನಾಯಕ್ ಎನ್. ಶುಭ ಹಾರೈಸಿದರು. ಆಂಗ್ಲ ಭಾಷೆ ಉಪನ್ಯಾಸಕ ಥಾಮಸ್ ಪಿ.ಎ ಕಾಲೇಜಿನ ನೀತಿ ನಿಯಮಗಳ ಬಗ್ಗೆ ಮಾಹಿತಿ ನೀಡಿದರು. ಕಾಲೇಜು ಕಛೇರಿಯ ಮುಖ್ಯಸ್ಥೆ ಪ್ರಮೋದ ಪೈ. ಎಮ್. ಜಿ. ಕಛೇರಿ ಸೌಲಭ್ಯಗಳು ಮತ್ತು ವಿದ್ಯಾರ್ಥಿ ವೇತನದ ಮಾಹಿತಿ ನೀಡಿದರು. ಗಣಿತಶಾಸ್ತ್ರ ಉಪನ್ಯಾಸಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ದೇಶದ ಪ್ರತಿಷ್ಠಿತ ಐಐಟಿಗಳಲ್ಲಿ ಇಂಜಿನಿಯರಿಂಗ್ ಶಿಕ್ಷಣದ ಪ್ರವೇಶಕ್ಕಾಗಿ ನಡೆಯುವ ಅಖಿಲ ಭಾರತ ಮಟ್ಟದ ಜೆಇಇ ಅಡ್ವಾನ್ಸ್ ಪರೀಕ್ಷೆಯ ಫಲಿತಾಂಶದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ 8 ವಿದ್ಯಾರ್ಥಿಗಳು ಐದು ಸಾವಿರ ರ್ಯಾಂಕ್ನ ಒಳಗೆ ಹಾಗೂ 13 ಜನ ವಿದ್ಯಾರ್ಥಿಗಳು ಹತ್ತು ಸಾವಿರ ರ್ಯಾಂಕ್ನ ಒಳಗಡೆ ಸ್ಥಾನ ಪಡೆದಿದ್ದಾರೆ. ಕೆಟಗರಿ ವಿಭಾಗದಲ್ಲಿ ಆಕಾಶ ಪೂಜಾರ್ (924 ರ್ಯಾಂಕ್), ತನುಶ್ರೀ ಹೆಚ್ಟಿ (1295 ರ್ಯಾಂಕ್), ಪುನೀತ್ ಕುಮಾರ್ ಬಿಜಿ(2030 ರ್ಯಾಂಕ್), ತುಷಾರ್ ಘನಶ್ಯಾಮ್ (3027 ರ್ಯಾಂಕ್), ಸುಮಿತ್ (3359 ರ್ಯಾಂಕ್) ಮೋಹನ್ ಶಿವಶಂಕರ್ ಪೈ (3510 ರ್ಯಾಂಕ್), ಜೀವನ್ ಪಿ ವಿ (4164 ರ್ಯಾಂಕ್), ಪಾಡುರಂಗ ಜಿವಿ (4222 ರ್ಯಾಂಕ್), ರೋಶನ್ ಶೆಟ್ಟಿ (5857 ರ್ಯಾಂಕ್), ಗಣೇಶ್ (6073 ರ್ಯಾಂಕ್), ಭಾನು ಹರ್ಷ (6485 ರ್ಯಾಂಕ್), ಶೋಹೆಬ್ ರೆಹ್ಮಾನ್ (7184 ರ್ಯಾಂಕ್), ವಿಜೇತ್ ಜಿ. ಗೌಡ (8993 ರ್ಯಾಂಕ್) ಪಡೆದಿದ್ದಾರೆ. ಒಟ್ಟು ಸಂಸ್ಥೆಯ 20 ವಿದ್ಯಾರ್ಥಿಗಳು ಐಐಟಿ ಪ್ರವೇಶಕ್ಕೆ ಅರ್ಹತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಇಲ್ಲಿನ ಎಂ.ಬಿ.ಎ ವಿಭಾಗದ ವತಿಯಿಂದ ವಿಶ್ವ ತಂಬಾಕು ನಿಷೇಧ ದಿನವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಪ್ರಥಮ ಎಂ.ಬಿ.ಎ ವಿಭಾಗದ ವಿದ್ಯಾರ್ಥಿಗಳು ತಂಬಾಕಿ ನಿಂದಾಗುವ ದುಷ್ಟಪರಿಣಾಮಗಳನ್ನು ತೋರಿಸುವ ಒಂದು ಕಿರು ನಾಟಕವನ್ನು ಪ್ರದರ್ಶಿಸುವ ಮೂಲಕ ಜನಜಾಗೃತಿಯನ್ನು ಮೂಡಿಸಿದರು. ಕಾರ್ಯಕ್ರಮದಲ್ಲಿ ಎಂ.ಬಿ.ಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರಾ ಪೂಜಾರಿ ಅವರು ಉಪಸ್ಥಿತರಿದ್ದು ವಿದ್ಯಾರ್ಥಿಗಳ ಜನಜಾಗೃತಿ ಮೂಡಿಸುವ ಪ್ರಯತ್ನವನ್ನು ಹೊಗಳಿದರು. ವಿಭಾಗದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅಸಿಸ್ಟೆಂಟ್ ಪ್ರೊಫೆಸರ್ ಚೈತಾಲಿ ಕಾರ್ಯಕ್ರಮವನ್ನು ನಿರ್ವಹಿಸಿದರು.
