ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ನಗರಸಭೆಯ ಪ್ರಸಕ್ತ ಸಾಲಿನ ಎಸ್.ಎಫ್.ಸಿ ಮುಕ್ತ ನಿಧಿಯ ಶೇ. 7.25 ರ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ಸಣ್ಣ ಉದ್ದಿಮೆಗೆ ಸಹಾಯಧನ ಸೌಲಭ್ಯ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಪೂರಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಮಾರ್ಚ್ 23 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ಉಡುಪಿ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ:ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆAಟ್ ಆಫ್ ಇಂಡಿಯಾ ನಡೆಸುವ ಸಿ.ಎ. ಫೌಂಡೇಶನ್ ಹಾಗೂ ಇಂಟರ್ಮೀಡಿಯಟ್ ಗ್ರೂಪ್ I ರ ಜನವರಿ 2026ರಲ್ಲಿ ನಡೆದ ಪರೀಕ್ಷೆಯಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಬಾಲಕೃಷ್ಣ ಭಟ್, ಇಂಚರ, ವಿಕಾಸ್, ಶಶಾಂಕ ಆರ್. ಭಟ್, ಸಂಜನಾ, ಬಿಂದುಶ್ರೀ, ಆಕಾಶ್ ಎಮ್.ಎಮ್., ಸಿ.ಎ. ಫೌಂಡೇಶನ್ನಲ್ಲಿ ಹಾಗೂ ಪ್ರಜ್ವಲ್ ಎಸ್. ನಾಯಕ್ ಸಿ.ಎ. ಇಂಟರ್ಮೀಡಿಯಟ್ ಗ್ರೂಪ್ I ರಲ್ಲಿ ಉತ್ತೀರ್ಣವಾಗುವ ಮೂಲಕ ಉತ್ತಮ ಸಾಧನೆಗೈದಿದ್ದಾರೆ. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವಿ-ರೀಚ್ ಸಂಸ್ಥೆಯ ಪಠ್ಯ-ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆ ಹಾಗೂ ನುರಿತ ತರಬೇತುದಾರರಿಂದ ತರಬೇತಿ, ಸಲಹೆ ಮತ್ತು ಮಾರ್ಗದರ್ಶನ ಪಡೆದು ವಿದ್ಯಾರ್ಥಿಗಳು ಈ ಸಾಧನೆಗೈದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಬಜೆಟ್ 2026-27ರ ರೈಲ್ವೆ ಅನುದಾನ ಬೇಡಿಕೆಗಳ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಶಿವಮೊಗ್ಗದ ಸಂಸದ ಬಿ.ವೈ. ರಾಘವೇಂದ್ರ ಅವರು ಶಿವಮೊಗ್ಗ ಹಾಗೂ ಮಲೆನಾಡು ಭಾಗದ ದಶಕಗಳ ರೈಲ್ವೆ ಕನಸುಗಳನ್ನು ನನಸಾಗಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಮೂಲಕ ಮತ್ತೊಮ್ಮೆ ಕ್ಷೇತ್ರದ ಅಭಿವೃದ್ಧಿಗಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತವು ‘ವಿಳಂಬ ಗತಿಯಿಂದ, ಅತಿ ವೇಗದ ವಿತರಣೆಯ’ ಯುಗಕ್ಕೆ ಕಾಲಿಟ್ಟಿದೆ ಎಂದು ಶ್ಲಾಘಿಸಿದ ಸಂಸದರು, ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಈ ಬಾರಿ ದಾಖಲೆಯ 7,748 ಕೋಟಿ ರೂ. ಅನುದಾನ ನೀಡಿದ್ದಕ್ಕಾಗಿ ಮೋದಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ಹಿಂದಿನ ಯುಪಿಎ ಸರ್ಕಾರಕ್ಕೆ ಹೋಲಿಸಿದರೆ ಕರ್ನಾಟಕಕ್ಕೆ ಸಿಗುತ್ತಿರುವ ರೈಲ್ವೆ ಅನುದಾನದಲ್ಲಿ ಒಂಬತ್ತು ಪಟ್ಟು ಹೆಚ್ಚಳವಾಗಿದೆ ಎಂದು ಅವರು ಅಂಕಿ-ಅಂಶಗಳ ಸಮೇತ ವಿವರಿಸಿದರು. ಪ್ರಮುಖವಾಗಿ, ಶಿವಮೊಗ್ಗ-ತೀರ್ಥಹಳ್ಳಿ-ಶೃಂಗೇರಿ-ಮಂಗಳೂರು ಮಾರ್ಗದ ಶೀಘ್ರ ಅನುಷ್ಠಾನ ಹಾಗೂ ಬೈಂದೂರಿಗೆ ಸಂಬಂಧಪಟ್ಟಂತೆ ಪ್ರಯಾಣಿಕರ ಅನುಕೂಲತೆ ಹೆಚ್ಚಿಸುವ ಬದ್ಧತೆಯ ಭಾಗವಾಗಿ, ಸಂಸದರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ಕರಾವಳಿ ಪದ್ಮಶಾಲಿಗರ ಮೂಲ ಕ್ಷೇತ್ರ ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ವೀರೇಶ್ವರ ಸೇವಾ ಸಮಿತಿ, ಸಂಘಟನಾ ಸಮಿತಿ, ಸಮಾಜ ಸೇವಾ ಟ್ರಸ್ಟ್ ಆಶಯದಲ್ಲಿ ಮಾಗಣಿ ಗುರಿಕಾರರ ಸಮಾವೇಶವು ರವಿವಾರ ನಡೆಯಿತು. ದೇಗುಲದ ಆಡಳಿತ ಧರ್ಮದರ್ಶಿ ಬಾರ್ಕೂರು ರಂಗನಕೇರಿ ಶ್ರೀನಿವಾಸ ಶೆಟ್ಟಿಗಾರ್ ಅವರು ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿ, ದೇವಸ್ಥಾನದ ಅಭಿವೃದ್ಧಿ, ಉತ್ತಮ ನಿರ್ವಹಣೆ ಮತ್ತು ಭಕ್ತರಿಗೆ ಇನ್ನಷ್ಟು ಸೌಲಭ್ಯ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದೇನೆ, ಮುಂದಿನ ದಿನಗಳಲ್ಲಿ ಸಮಾಜದ ಹಿತಕ್ಕಾಗಿ ಇನ್ನಷ್ಟು ಬಲವಾದ ಸಂಘಟನಾ ಕಾರ್ಯಕ್ರಮ ಕೈಗೊಳ್ಳುವ ಸಂಕಲ್ಪ ಸಾಕಾರಗೊಳ್ಳಲು ಮಾಗಣಿ ಗುರಿಕಾರರ ಸಹಕಾರದೊಂದಿಗೆ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಹಿರಿಯ ಗುರಿಕಾರರಾದ ಬಸೂರು ರಾಜೇಂದ್ರ ಶೆಟ್ಟಿಗಾರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಗುರಿಕಾರರಿಗೆ ಮಾಹಿತಿ ನೀಡುತ್ತಾ, ಸಮಾಜದ ಆಚಾರ- ವಿಚಾರ ಸಂಪ್ರದಾಯದಲ್ಲಿ ಬದಲಾವಣೆಯಾದರೂ ರಾಜಿ ಮಾಡಿಕೊಳ್ಳಬಹುದು. ಆದರೆ ಶಾಸ್ತ್ರದಲ್ಲಿ ಯಾವುದೇ ರೀತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಹಂದಟ್ಟು ಮಹಿಳಾ ಬಳಗ ಕೋಟ, ಮಣೂರು ಫ್ರೆಂಡ್ಸ್, ಸಮುದ್ಯತಾ ಗ್ರೂಪ್ಸ್ ಕೋಟ ಇವರ ಸಹಯೋಗದೊಂದಿಗೆ ಕೋಟ ಗ್ರಾಮಪಂಚಾಯತ್, ಎಸ್ ಎಲ್ ಆರ್ ಎಂ ಘಟಕ ಕೋಟ ಇವರ ಸಂಯೋಜನೆಯೊಂದಿಗೆ 294ನೇ ಭಾನುವಾರದ ಸ್ವಚ್ಛತಾ ಕಾರ್ಯಕ್ರಮ ಮಣೂರು ಹಾಗೂ ಹರ್ತಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ತ್ಯಾಜ್ಯ ತೆರವು ಮಾಡುವ ಮೂಲಕ ಹಮ್ಮಿಕೊಂಡಿತು. ಅಭಿಯಾನಕ್ಕೆ ನಿವೃತ್ತ ಬಿಎಸ್ಎನ್ಎಲ್ ಅಧಿಕಾರಿ ಮಣೂರು ವಿಷ್ಣುಮೂರ್ತಿ ಮಯ್ಯ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹೆದ್ದಾರಿ ಒಂದುವರೆ ಕಿಲೋಮೀಟರ್ ಒಂದು ಭಾಗ ಬಾರಿ ಪ್ರಮಾಣದಲ್ಲಿ ತ್ಯಾಜ್ಯವನ್ನು ತೆರವುಗೊಳಿಸಲಾಯಿತು. ಇದೇ ವೇಳೆ ಮಾತನಾಡಿದ ವಿಷ್ಣುಮೂರ್ತಿ ಮಯ್ಯ ರಾಷ್ಟ್ರೀಯ ಹೆದ್ದಾರಿ ತ್ಯಾಜ್ಯ ಎಸೆಯುವವರಿಗೆ ಕಠಿಣ ಕ್ರಮವನ್ನು ಸ್ಥಳೀಯಾಡಳಿತಗಳು ಕೈಗೊಳ್ಳಬೇಕು,ಪ್ರ ತಿ ಬಾರಿ ಪಂಚವರ್ಣದಂತಹ ಸಂಘಟನೆಗಳು ಸ್ವಚ್ಛಗೊಳಿಸಿದರೂ ಪುನಃ ಮಲಿಗೊಳಿಸುವ ಕಾರ್ಯ ನಡೆಯುತ್ತಿದೆ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲು ಸಲಹೆ ನೀಡಿ ಸಂಬಂಧಿಸಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಘಟಿಕೋತ್ಸವವು ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಘಟಿಕೋತ್ಸವದ ಪ್ರಮಾಣ ಪತ್ರವನ್ನು ಬಿಡುಗಡೆಗೊಳಿಸಿದ ಮುಖ್ಯ ಅತಿಥಿ ಡಾ. ಚಿನ್ಮಯಿ ಪುತ್ರನ್ ಎಮ್.ಬಿ.ಬಿ.ಎಸ್ ಅವರು ಮಾತನಾಡಿ, ಹೆತ್ತವರು ತಮ್ಮ ಮಕ್ಕಳ ಸರ್ವಾಂಗೀಣ ಪ್ರಗತಿಗಾಗಿ ಶ್ರಮಿಸುವುದರಿಂದ ಮಕ್ಕಳ ಮುಂದಿನ ಭವಿಷ್ಯ ಉಜ್ವಲವಾಗಿರುತ್ತದೆ ಎಂದು ತಿಳಿ ಹೇಳಿದರು. ವೇದಿಕೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ ಗಾಣಿಗ, ಉಪಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ ಅವರು ಉಪಸ್ಥಿತರಿದ್ದರು. ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜ ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜ ಸ್ವಾಗತಿಸಿ, ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಆಡಿಗ ವಂದನಾರ್ಪಣೆ ಗೈದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ, ಮಾ.16: ಕಟಪಾಡಿ ಬಳಿ ಮಂಗಳೂರು ಉಡುಪಿ ಮಾರ್ಗದಲ್ಲಿ ಇಂದು ಹಿಂದುಸ್ಥಾನ್ ಪೆಟ್ರೋಲಿಯಂ ಕಂಪನಿಗೆ ಸೇರಿದ ಅನಿಲ ತುಂಬಿದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮಧ್ಯ ರಸ್ತೆಯಲ್ಲಿ ಬಿದ್ದಿದ್ದು ಪರಿಣಾಮವಾಗಿ ಟ್ಯಾಂಕರ್ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಹಿನ್ನೆಲೆ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಆದೇಶಿಸಿರುತ್ತಾರೆ. ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಇಂದು ರಾತ್ರಿ 8 ಗಂಟೆಯವರೆಗೆ ಈ ಕೆಳಕಂಡ ರಸ್ತೆಯಲ್ಲಿ ಸಂಚರಿಸುವಂತೆ ತಿಳಿಸಿದ್ದಾರೆ. ಮಂಗಳೂರಿನಿಂದ ಉಡುಪಿಗೆ ಹೋಗುವ ವಾಹನಗಳು ಕಾಪುವಿನಿಂದ ಶಿರ್ವಾ ಮೂಡುಬೆಳ್ಳೆ ಮಣಿಪುರ ಮಾರ್ಗವಾಗಿ ಮಣಿಪಾಲಕ್ಕೆ ತೆರಳಿ ಅಲ್ಲಿಂದ ಉಡುಪಿಗೆ ಹೋಗಬೇಕು ಅಥವಾ ಪಡುಬಿದ್ರೆ – ಬೆಳ್ಳಣ್ – ಶಿರ್ವಾ ಮಾರ್ಗವಾಗಿ ಮಣಿಪಾಲಕ್ಕೆ ತೆರಳಿ ಅಲ್ಲಿಂದ ಉಡುಪಿಗೆ ತಲುಪಬೇಕು. ಉಡುಪಿಯಿಂದ ಮಂಗಳೂರಿಗೆ ಹೋಗುವ ವಾಹನಗಳು ಮಣಿಪಾಲದಿಂದ ಮಣಿಪುರ – ಮೂಡುಬೆಳ್ಳೆ- ಶಿರ್ವಾ ಮಾರ್ಗವಾಗಿ ಕಾಪು ತಲುಪಿ ಅಲ್ಲಿಂದ ಮಂಗಳೂರು ಕಡೆಗೆ ತೆರಳಬೇಕು ಅಥವಾ ಮಣಿಪಾಲದಿಂದ ಶಿರ್ವಾ – ಬೆಳ್ಳಣ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ, ಮಾ.16: ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರೊಂದು ಪಲ್ಟಿಯಾಗಿ ಹೆದ್ದಾರಿಗೆ ಅಡ್ಡಲಾಗಿ ಮಗುಚಿಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ಸಮೀಪ ಸೋಮವಾರ ಸಂಭವಿಸಿದೆ. ಅಪಘಾತದ ಪರಿಣಾಮ ಟ್ಯಾಂಕರ್ನಿಂದ ಅನಿಲ ಸೋರಿಕೆ ಸಂಭವಿಸಬಹುದೆಂಬ ಭೀತಿಯಿಂದ ಸ್ಥಳೀಯರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆ ಹಿನ್ನೆಲೆಯಲ್ಲಿ ಕಟಪಾಡಿ ಜಂಕ್ಷನ್ ಬಳಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿ ಹೆದ್ದಾರಿಯಲ್ಲಿ ವಾಹನಗಳು ದೀರ್ಘ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡುಬಂದಿತು. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಕಾರ್ಯಾಚರಣೆ ನಡೆಸಿದರು. ಇದೇ ವೇಳೆ ಕಾಪು ಪೊಲೀಸ್ ಠಾಣೆಯ ಪಿಎಸ್ಐ ಹಾಗೂ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಭದ್ರತಾ ಕ್ರಮಗಳನ್ನು ಕೈಗೊಂಡು ವಾಹನ ಸಂಚಾರವನ್ನು ನಿಯಂತ್ರಿಸಿದರು. ಅಪಘಾತದ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಆಯೋಜಿಸಲಾದ ಐದನೇ ಆವೃತ್ತಿಯ ‘ವಿ-ಗ್ರೋ ಬ್ಯುಸಿನೆಸ್ ಡೇ’ ಕಾರ್ಯಕ್ರಮದ ಮೊದಲನೇ ಹಂತದ ವ್ಯವಹಾರ ಯೋಜನೆಗಳ ಪ್ರಸ್ತುತಿ ಕಾರ್ಯಕ್ರಮ ವಿದ್ಯಾರ್ಥಿಗಳಿಂದ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಭಟ್ಕಳದ ದಿ ನ್ಯೂ ಇಂಗ್ಲೀಷ್ ಪಿ.ಯು. ಕಾಲೇಜಿನ ಪ್ರಾಂಶುಪಾಲರಾದ ಡಾ. ವೀರೇಂದ್ರ ವಿ. ಶ್ಯಾನುಭೋಗ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಆಧುನಿಕ ವಿದ್ಯುನ್ಮಾನ ಯುಗದ ಕೃತಕ ಬುದ್ಧಿಮತ್ತೆಯ ಈ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಅವಕಾಶಗಳು ಕಡಿಮೆಯಾಗಿದೆ ಎಂದು ಕೈಚಲ್ಲಿ ಕುಳಿತುಕೊಳ್ಳಬೇಕಾದ ಅಗತ್ಯವಿಲ್ಲ. ವರ್ತಮಾನದ ಅವಸರಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಸೃಜನಾತ್ಮಕ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯ. ಹೊಸ ಆಲೋಚನೆಗಳು, ನಾವಿನ್ಯತೆ ಹಾಗೂ ಕೌಶಲಾಭಿವೃದ್ಧಿ ವಿದ್ಯಾರ್ಥಿಗಳ ಭವಿಷ್ಯದ ಬೆಳವಣಿಗೆಗೆ ಪೂರಕ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮಲ್ಲಿರುವ ವ್ಯವಹಾರ ಜ್ಞಾನವನ್ನು ಹೊಸ ಆಲೋಚನೆಗಳು ಮತ್ತು ಯೋಜನೆಗಳ ಮೂಲಕ ಪ್ರಸ್ತುತಪಡಿಸುವುದರಿಂದ ಅವರ ಕೌಶಲಾಭಿವೃದ್ಧಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಅಮಲು ಪದಾರ್ಥಗಳ ವ್ಯಸನವು ಸಾಮಾನ್ಯ ಸಾಮಾಜಿಕ ಪಿಡುಗಾಗಿದ್ದು, ಇದು ಕೇವಲ ದೈಹಿಕ ಸಮಸ್ಯೆಯಷ್ಟೇ ಅಲ್ಲದೆ ಮಾನಸಿಕ ಹಾಗೂ ಸಾಮಾಜಿಕ ಕಾಯಿಲೆಯೂ ಆಗಿದೆ ಎಂದು ಜಸ್ಟಿಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಮನೋವೈದ್ಯಕೀಯ ವಿಭಾಗದ ಪ್ರಾಧ್ಯಾಪಕರಾದ ಡಾ. ಸತೀಶ್ ರಾವ್ ಹೇಳಿದರು. ಅವರು ಆಳ್ವಾಸ್ ಪುನರ್ಜನ್ಮ ಸಮಗ್ರ ವೈದ್ಯಕೀಯ ಚಿಕಿತ್ಸೆಯ ದುಶ್ಚಟ ನಿವಾರಣಾ ಕೇಂದ್ರದ ಆರನೇ ವರ್ಷದ ವಾರ್ಷಿಕೋತ್ಸವ ಹಾಗೂ ಕುಟುಂಬ ಸಮ್ಮಿಲನ ಕಾರ್ಯಕ್ರಮವನ್ನು ಆಳ್ವಾಸ್ ಪುನರ್ಜನ್ಮ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. ಅಮಲು ಪದಾರ್ಥಗಳ ವ್ಯಸನದಿಂದ ವ್ಯಕ್ತಿಯ ಜೀವನದಲ್ಲಿ ಆರ್ಥಿಕ ಹಾಗೂ ಕೌಟುಂಬಿಕ ಸಂಕಷ್ಟಗಳು ಉಂಟಾಗುತ್ತವೆ. ಸಮಾಜ ಆರೋಗ್ಯಕರವಾಗಿರಬೇಕಾದರೆ ಇಂತಹ ದುಶ್ಚಟಗಳು ಇರಬಾರದು. ದುರದೃಷ್ಟವಶಾತ್ ಇಂದಿಗೂ ಸಮಾಜದಲ್ಲಿ ಈ ಸಮಸ್ಯೆ ಮುಂದುವರಿದಿರುವುದು ಆತಂಕಕಾರಿ ಸಂಗತಿ. ಸಾಮಾನ್ಯವಾಗಿ ಯುವಕರು ಸುಮಾರು ಇಪ್ಪತ್ತು ವರ್ಷದ ವಯಸ್ಸಿನಲ್ಲಿ ಕುತೂಹಲ, ಸ್ನೇಹಿತರ ಒತ್ತಡ (ಪೀರ್ ಪ್ರೆಷರ್) ಮುಂತಾದ ಕಾರಣಗಳಿಂದ ಅಮಲು ಪದಾರ್ಥಗಳತ್ತ ಆಕರ್ಷಿತರಾಗುತ್ತಾರೆ. ಆರಂಭದಲ್ಲಿ ನಾವು ಅದನ್ನು ಸೇವಿಸುತ್ತೇವೆ, ನಂತರ ಅದು ನಮ್ಮನ್ನೇ ಆಳುತ್ತದೆ ಮತ್ತು…
