Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಐಎಂಜೆ ಸಂಸ್ಥೆಗಳ ವತಿಯಿಂದ “ಭಾರತದ ವೈಜ್ಞಾನಿಕ ಪರಂಪರೆ” (Scientific Heritage of India) ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಐಐಟಿ ಕಾನ್ಪುರದಿಂದ ಪಿಎಚ್.ಡಿ. ಪದವಿ ಪಡೆದ ಹಿರಿಯ ಶಿಕ್ಷಣತಜ್ಞರು ಹಾಗೂ ಭಾರತೀಯ ಇತಿಹಾಸ, ತತ್ವಶಾಸ್ತ್ರ ಮತ್ತು ವೈಜ್ಞಾನಿಕ ಪರಂಪರೆಯ ಅಧ್ಯಯನಕಾರರಾಗಿದ್ದ ಡಾ. ಪಿ. ಸುಬ್ಬಣ್ಣ ಭಟ್ ಅವರು ಈ ವಿಷಯದ ಕುರಿತು ಅತ್ಯಂತ ಮನೋಜ್ಞ ಉಪನ್ಯಾಸ ನೀಡಿದರು. ತಮ್ಮ ಉಪನ್ಯಾಸದಲ್ಲಿ ಭಾರತವೇ ಜಗತ್ತಿಗೆ ಸಂಖ್ಯಾ ಪದ್ಧತಿಯನ್ನು ನೀಡಿದ ಏಕೈಕ ದೇಶ ಎಂಬ ಐತಿಹಾಸಿಕ ಸತ್ಯವನ್ನು ಅವರು ಒತ್ತಿ ಹೇಳಿದರು. ಪ್ರಾಚೀನ ಭಾರತೀಯ ಗಣಿತಜ್ಞರಾದ ಆರ್ಯಭಟ ಮತ್ತು ಭಾಸ್ಕರಾಚಾರ್ಯರು ಸಾವಿರಾರು ವರ್ಷಗಳ ಹಿಂದೆಯೇ ಸಂಕೀರ್ಣ ಗಣಿತ ಸಮಸ್ಯೆಗಳಿಗೆ ಅತ್ಯಂತ ನಿಖರವಾದ ಪರಿಹಾರಗಳನ್ನು ಕಂಡುಹಿಡಿದಿದ್ದರು ಎಂದು ವಿವರಿಸಿದರು.ಖಗೋಳ ವಿಜ್ಞಾನದ ಕ್ಷೇತ್ರದಲ್ಲಿಯೂ ಪ್ರಾಚೀನ ಭಾರತೀಯರ ಸಾಧನೆಗಳನ್ನು ಉದಾಹರಣೆಗಳೊಂದಿಗೆ ವಿವರಿಸಿದ ಅವರು, ಆಧುನಿಕ ವಿಜ್ಞಾನ ಉದಯಿಸುವುದಕ್ಕೂ ಮುನ್ನವೇ ಭಾರತೀಯರು ಗ್ರಹಗಳ ಚಲನೆ, ಗ್ರಹಣಗಳ ಲೆಕ್ಕಾಚಾರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಲಯನ್ಸ್ ಕ್ಲಬ್ ಬನ್ನಾಡಿ-ವಡ್ಡರ್ಸೆಯ ವತಿಯಿಂದ ವೈದ್ಯರ ದಿನಾಚರಣೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಎಮ್.ಜೆ.ಎಫ್ ಲಯನ್ ಬನ್ನಾಡಿ ಪ್ರಭಾಕರ ಶೆಟ್ಟಿ ಅವರ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಸ್ಥಾಪಕಾಧ್ಯಕ್ಷರಾದ ಲಯನ್ ಬನ್ನಾಡಿ ಸೋಮನಾಥ್ ಹೆಗ್ಡೆ ಅವರ ನಿವಾಸದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಕೋಟೇಶ್ವರದ “ಸ್ವಾತಿ” ಕ್ಲಿನಿಕ್ ನ ಖ್ಯಾತ ವೈದ್ಯರಾದ ಡಾ| ಕಾವಡಿ ಶ್ರೀಪಾದ್ ಹೆಗ್ಡೆ ಅವರನ್ನು ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಗೌರವವನ್ನು ಸ್ವೀಕರಿಸಿದ ಮಾತನಾಡಿದ ಅವರು ಲಯನ್ಸ್  ಕ್ಲಬ್ ಬನ್ನಾಡಿ-ವಡ್ಡರ್ಸೆಯ ಸದಸ್ಯರಿಗೆ ಕೃತಜ್ಞತೆಗಳನ್ನು ಅರ್ಪಿಸಿದರು. ಲಯನ್ಸ್  ಕ್ಲಬ್ ಬನ್ನಾಡಿ-ವಡ್ಡರ್ಸೆಯ ಸ್ಥಾಪಕ ಕಾರ್ಯದರ್ಶಿ ಲಯನ್ ಕಲ್ಕಟ್ಟೆ ಚಂದ್ರ ಶೇಖರ್ ಶೆಟ್ಟಿ ವೈದ್ಯರ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು. ಲಯನ್ಸ್  ಕ್ಲಬ್ ಬನ್ನಾಡಿ-ವಡ್ಡರ್ಸೆಯ ಮಾಜಿ ಅಧ್ಯಕ್ಷರಾದ ಲಯನ್ ಕೊತ್ತಾಡಿ ಉದಯ್ ಕುಮಾರ್ ಶೆಟ್ಟಿ ವೈದ್ಯರಾದ ಡಾ| ಕಾವಡಿ ಶ್ರೀಪಾದ್ ಹೆಗ್ಡೆ ಯವರ ಪರಿಚಯ ಮಾಡಿದರು. ಲಯನ್ಸ್ ಜಿಲ್ಲೆ-317 ಸಿ, ಪ್ರಾಂತ್ಯ…

Read More

ಕುಂದಾಪ್ರ ಡಾಟ್‌ ಕಾಂ ಸದ್ದಿ.ಕೋಟ: ಪ್ರತಿಯೊಂದು ವಿದ್ಯಾರ್ಥಿಯು ತನ್ನದೇ ಆದ ಗುಣವಿಶೇಷತೆಗಳನ್ನು ಹೊಂದಿರುತ್ತಾನೆ. ಅದನ್ನು ಆತ ಅರಿತು ತನ್ನಲ್ಲಿ ಅವಿರತ ಪ್ರಯತ್ನ, ಪರಿಶ್ರಮ, ಅಧ್ಯಯನ ಶೀಲತೆ ಮೈಗೂಡಿಸಿಕೊಂಡರೆ ಸಾಧಕನಾಗಬಹುದು. ಈ ಸಾಧನೆಗೆ ನಿಮ್ಮ ಸುತ್ತಮುತ್ತಲಿನ ಪರಿಸರದ ವ್ಯಕ್ತಿಗಳು, ಪೋಷಕರು, ಶಿಕ್ಷಕರು ಪ್ರೇರಣೆಯಾಗಬಹುದು. ಶೈಕ್ಷಣಿಕ ಸಂತ ಕೆ.ಎಲ್. ಕಾರಂತರ ಬದುಕು ನಮಗೆ ಆದರ್ಶವಾಗಲಿ ಎಂದು ಪೂರ್ಣಪ್ರಜ್ಞ ವಿದ್ಯಾಲಯದ ನಿವೃತ್ತ ಪ್ರಾಂಶುಪಾಲರಾದ ಡಾ| ಅನಂತ ಪದ್ಮನಾಭ ಭಟ್ ನುಡಿದರು. ಅವರು ಇತ್ತೀಚಿಗೆ ವಿವೇಕ ಆಂಗ್ಲಮಾಧ್ಯಮ ಪ್ರೌಢಶಾಲೆಯ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ಕೃಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾದ 89 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಕೋಟ ವಿದ್ಯಾಸಂಘದ ಅಧ್ಯಕ್ಷರಾದ ಪಿ. ಭಾಸ್ಕರ ಹಂದೆ ವಹಿಸಿದ್ದರು. ಕೋಟ ವಿದ್ಯಾಸಂಘದ ಕಾರ್ಯದರ್ಶಿ ಎಂ. ರಾಮದೇವ ಐತಾಳ್ ಶುಭಾಶಂಸನೆಗೈದರು. ಆಡಳಿತ ಮಂಡಳಿಯ ಸದಸ್ಯರಾದ ಶ್ರೀಪತಿ ಹೇರ್ಳೆ, ವಿವೇಕ ಹಿಂದಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಚೇಂಪಿ ರಮಾನಂದ ಭಟ್ ಹಿತನುಡಿಗೈದರು. ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದ ಚೈತನ್ಯಶ್ರೀ ಉಡುಪ, ನಾಲ್ಕನೆಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ,ಜು10: ಕುಂದಾಪುರದ ತಹಶೀಲ್ದಾರರಾಗಿ ವಸಂತ ಕುಮಾರ ಅವರು ಅಧಿಕಾರ ವಹಿಸಿಕೊಂಡರು. ಜಿಲ್ಲಾಧಿಕಾರಿಯವರ ಕಛೇರಿಯಲ್ಲಿ ಉಪ ತಹಶೀಲ್ದಾರರಾಗಿದ್ದು, ಗ್ರೇಡ್ -2 ತಹಶೀಲ್ದಾರರಾಗಿ ಪದೊನ್ನತಿ ಹೊಂದಿ ಕುಂದಾಪುರ ತಾಲೂಕು ಕಛೇರಿಯಲ್ಲಿ ಅವರು ತಹಶೀಲ್ದಾರರಾಗಿ ಅಧಿಕಾರ ವಹಿಸಿಕೊಂಡರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ,ಜುಲೈ10:  ಕುಂದಾಪುರ ಮಂಡಲ ಬಿಜೆಪಿ ವತಿಯಿಂದ ಕುಂದಾಪುರ ನಗರ ಸೆಂಟ್ರಲ್ ಶಕ್ತಿ ಕೇಂದ್ರಕ್ಕೆ ನೂತನ ಪದಾಧಿಕಾರಿಗಳನ್ನು ಗುರುವಾರ ಕುಂದಾಪುರ ನಗರದ ವಿಶ್ವಕರ್ಮ ಕನ್ವೆನ್ಷನ್ ಹಾಲ್‌ನಲ್ಲಿ ಆಯ್ಕೆ ಮಾಡಲಾಯಿತು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಮಾತನಾಡಿ, ನೂತನ ತಂಡವು ಜನರೊಂದಿಗೆ ನೇರ ಸಂಪರ್ಕ ಇಟ್ಟುಕೊಂಡು ಪಕ್ಷದ ಕಾರ್ಯವೈಖರಿಯ ಬಗ್ಗೆ ಮನೆ ಮನೆಗೆ ತಲುಪಿಸಬೇಕು ಎಂದು ತಿಳಿಸಿದರು. ಚುನಾವಣಾ ಗೆಲುವಿನ ಮೂಲ ಬೂತ್ ಮಟ್ಟದಲ್ಲಿದೆ ಶಕ್ತಿಕೇಂದ್ರವೇ ನಮ್ಮ ಯುದ್ಧ ತಂತ್ರದ ಕೇಂದ್ರಬಿಂದು ಎಂದರು. ಸಭೆಯ ಅಧ್ಯಕ್ಷತೆಯನ್ನು ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ವಹಿಸಿ ಮುಂಬರುವ ಸ್ಥಳೀಯ ಚುನಾವಣೆಯನ್ನು ಗಮನದಲ್ಲಿಟ್ಟು ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವುದೇ ನಮ್ಮ ಆದ್ಯತೆಯಾಗಿದೆ ಎಂದರು. ಇದೆ ವೇಳೆ ಬೂತ್ ಸಂಖ್ಯೆ 10, 11 ಮತ್ತು13ನೇ ಬೂತ್‌ಗಳಿಗೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಉದಯ ಹೊನ್ನನಕೇರಿ ಹಾಗೂ ಕಾರ್ಯದರ್ಶಿಯಾಗಿ ನವೀನ್ ಪೂಜಾರಿ ಇವರನ್ನು ಆಯ್ಕೆ ಮಾಡುವುದರ ಜೊತೆಗೆ 3 ಬೂತ್‌ಗಳ ಅಧ್ಯಕ್ಷ ಕಾರ್ಯದರ್ಶಿಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಕುಂಭಾಶಿಯ ಯು. ಸಂಗೀತಾ ಶೆಣೈಗೆ “ಡಾಕ್ಟರ್ ಆಫ್ ಫಿಲಾಸಫಿ” ಪದವಿ ಪ್ರದಾನ ಮಾಡಿದೆ. ಮಣಿಪಾಲ್ ಸ್ಕೂಲ್ ಆಫ್ ಲೈಫ್ ಸಾಯನ್ಸ್ ನಲ್ಲಿ ಅಧ್ಯಯನ ಮಾಡುತ್ತಿದ್ದ ಅವರು ಡಾ. ರಘು ರಾಧಾಕ್ರೃಷ್ಣನ್ ಹಾಗೂ ಡಾ. ಶ್ಯಾಮ ಪ್ರಸಾದ್ ಕೆ. ಅವರ ಮಾರ್ಗದರ್ಶನದಲ್ಲಿ “ಓರಲ್ ಕ್ಯಾನ್ಸರ್ ” ವಿಷಯದಲ್ಲಿ ಸಂಶೋಧನೆ ನಡೆಸುತ್ತಿದ್ದರು. ಈಕೆ ಕುಂದಪ್ರಭ ವಾರಪತ್ರಿಕೆ ಸಂಪಾದಕರಾದ ಯು.ಎಸ್. ಶೆಣೈ., ಸಾಧನಾ ಎಸ್. ಶೆಣೈ ಅವರು ದ್ವಿತೀಯ ಪುತ್ರಿ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಲ್ಲೂರು ಫ್ಯಾಮಿಲಿ ಟ್ರಸ್ಟ್ ನಡೆಸುತ್ತಿರುವ ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ 2026- 27ನೇ ಶೈಕ್ಷಣಿಕ ವರ್ಷದ  ಸಮವಸ್ತ್ರ ವಿತರಣಾ ಕಾರ್ಯಕ್ರಮ ಮತ್ತು ದ್ವಿತೀಯ ಪಾಲಕರ ಸಭೆ ಬುಧವಾರ ನಡೆಯಿತು. ಈ ಸಭೆಯಲ್ಲಿ ಮೊದಲು ವಿದ್ಯಾರ್ಥಿಗಳ ಪ್ರಗತಿಯ ಬಗ್ಗೆ ಪಾಲಕರೊಂದಿಗೆ ಚರ್ಚಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿರುವ ಮಣಿಪಾಲ ಹೌಸಿಂಗ್ ಫೈನಾನ್ಸ್ ಸಿಂಡಿಕೇಟ್ ಲಿಮಿಟೆಡ್ ಇದರ ನಿರ್ದೇಶಕರಾದ ರಾಜಾರಾಮ್ ಭಟ್ ಅವರು ನಮ್ಮ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ವಿತರಿಸಿ ಮಾತನಾಡಿ, ವಿಶೇಷ ಮಕ್ಕಳಿಗಾಗಿ ಸಂಸ್ಥೆಯ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಹಾಗೆಯೇ ಶಾಲಾ ಹಿತೈಷಿ ಹಾಗೂ ದಾನಿಗಳಾಗಿರುವ ಪ್ರಭು ಕೆನಡಿ ಪಿರೇರಾರವರು ಸಿಬ್ಬಂದಿ ವರ್ಗದವರ ಕಾರ್ಯವೈಖರಿಯನ್ನು ಶ್ಲಾಘಿಸುವುದರ ಜೊತೆಗೆ ಸಂಸ್ಥೆಯ ಕಾರ್ಯ ಚಟುವಟಿಕೆಗಳಿಗೆ ಸದಾ ಸಹಾಯ ಹಸ್ತ ನೀಡುವುದಾಗಿ ತಿಳಿಸಿದರು. ಸಭಾ ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರು ಹಾಗೂ ಇಂದಿನ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿರುವ ಶಾಂತಲಾ ಎನ್. ಹೆಗಡೆ ಅವರು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯಲ್ಲಿ ಪಾಲಕರ ಪಾತ್ರ ಬಹಳ ಮುಖ್ಯವಾದದ್ದು ಎಂದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ನೀಡಲಾಗುವ 2026ನೇ ವರ್ಷದ ವಿದ್ಯಾದೀವಿಗೆ’ ಯೋಜನೆಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳಿಗೆ ಸೂಚನೆಗಳು:1. ವಿದ್ಯಾರ್ಥಿಯು 2026ನೇ ವರ್ಷದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಅಥವಾ 10ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ 60% ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರಬೇಕು.2. ಸರ್ಕಾರಿ ಅಥವಾ ಸರ್ಕಾರಿ ಅನುದಾನಿತ ಶಿಕ್ಷಣ ಸಂಸ್ಥೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳಿಗೆ ಮಾತ್ರ ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶವಿದೆ.3. ಬಂಟ ಸಮುದಾಯವನ್ನು ಪ್ರತಿನಿಧಿಸುವ ಕುಂದಾಪುರ ತಾಲೂಕಿನ ನಿವಾಸಿಯಾಗಿರಬೇಕು. ಅವಿಭಜಿತ ಬೈಂದೂರು ತಾಲೂಕಿನ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು.4. ಹೆತ್ತವರ (ಕುಟುಂಬದ) ವಾರ್ಷಿಕ ಆದಾಯ ಮಿತಿ ಒಂದು ಲಕ್ಷ ರೂಪಾಯಿ ಆಗಿರುತ್ತದೆ.5. ಪ್ರಸ್ತುತ ಪ್ರಥಮ ವರ್ಷದ ಪದವಿಪೂರ್ವ ತರಗತಿಯಲ್ಲಿ ಅಥವಾ ಯಾವುದೇ ವೃತ್ತಿಪರ ಶಿಕ್ಷಣ/ ತರಬೇತಿಯ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರಬೇಕು ಅಥವಾ ಪ್ರವೇಶ ಪಡೆದಿರಬೇಕು. ಅರ್ಜಿ ಸಲ್ಲಿಸುವ ವಿಧಾನ:ವಿದ್ಯಾರ್ಥಿಯು ಈ ಅಧಿಸೂಚನೆಯೊಂದಿಗೆ ಲಗತ್ತಿಸಿರುವ ‘ನಮೂನೆ-ಸಿ’…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಡಿ ಗ್ರಾಮ ಪಂಚಾಯತ್, ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ ಹಾಗೂ ಸಮನ್ವಯ ಸಂಜೀವಿನಿ ಒಕ್ಕೂಟ ಕೋಡಿ ನೇತೃತ್ವದಲ್ಲಿ ಪಂಚವರ್ಣ ಸಂಘಟನೆ ಕೋಟ, ಗೀತಾನಂದ ಫೌಂಡೇಶನ್ ಮಣೂರು ಮಾರ್ಗದರ್ಶನದಲ್ಲಿ ಕೋಡಿ ಗ್ರಾಮದಲ್ಲಿ ಮೂರನೇ ವರ್ಷದ ಪಂಚವರ್ಣ ಹಸಿರು ಹೆಜ್ಜೆ ಮನೆಗೊಂದು ಗಿಡ ನೆಡುವ ಕಾರ್ಯಕ್ರಮ ಹೊಸಬೆಂಗ್ರೆಯಲ್ಲಿ ಜರಗಿತು. ಕೋಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಭಾಕರ್ ಮೆಂಡನ್ ಹಸಿರು ಹೆಜ್ಜೆಗೆ ಪಂಚಾಯತ್ ಮಾಜಿ ಅಧ್ಯಕ್ಷ ಲಕ್ಷ್ಮಣ್ ಸುವರ್ಣ ಮನೆಯಿಂದ ಚಾಲನೆ ನೀಡಿದರು. ಕಾರ್ಯಕ್ರಮ ಸಂಯೋಜಕರಾಗಿ ಮಾಜಿ ಅಧ್ಯಕ್ಷೆ ಗೀತಾಖಾರ್ವಿ, ಅಂಗನವಾಡಿ ಕಾರ್ಯಕರ್ತೆ ಯಮುನಾ ಲಕ್ಶ್ಮಣ ಕುಂದರ್ ಮನೆಗೊಂದು ಗಿಡ ನೆಟ್ಟು ಜಾಗೃತಿ ಮೂಡಿಸಿದರು. ಸಂಜೀವಿನಿ ಒಕ್ಕೂಟದ ನೂತನ ಅಧ್ಯಕ್ಷೆ ಶಾಂತ ಮೆಂಡನ್, ಹಾಲಿ ಅಧ್ಯಕ್ಷೆ ಪೂರ್ಣಿಮಾ, ಮಾಜಿ ಅಧ್ಯಕ್ಷೆ ದೀಪಾ ಆರ್ ಖಾರ್ವಿ ಮತ್ತು ಪೂರ್ಣಿಮಾ, ಸ್ತ್ರಿಶಕ್ತಿ ಸಂಘದ ಸದಸ್ಯರು ಸುಜಾತಾ ಖಾರ್ವಿ, ಜ್ಯೋತಿ, ಸವಿತಾ ಎಸ್, ಭಾರತಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಟ್ರಕ್‌ವೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಕೋಟೇಶ್ವರ ಕಿನಾರಾ ಜಂಕ್ಷನ್ ಸಮೀಪದ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಗುರುವಾರ ಮಧ್ಯಾಹ್ನದ ಸುಮಾರಿಗೆ ಸಂಭವಿಸಿದೆ. ಇಡೂರು-ಕುಂಜ್ಞಾಡಿ ಜನ್ನಾಲು ಸಮೀಪದ ಕೊಳ್ತ ನಿವಾಸಿ ಭರತ್ ಶೆಟ್ಟಿ (33) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೇರಳದಿಂದ ನಾಸಿಕ್ ಕಡೆಗೆ ಫ್ಲೈವುಡ್ ಸಾಗಿಸುತ್ತಿದ್ದ ಟ್ರಕ್ ಉಡುಪಿಯಿಂದ ಕುಂದಾಪುರದೆಡೆಗೆ ಸಾಗುವಾಗ ಅದೇ ಮಾರ್ಗವಾಗಿ ತೆರಳುತ್ತಿದ್ದ ಬೈಕ್‌ಗೆ ಢಿಕ್ಕಿಯಾಗಿದೆ. ಡಿಕ್ಕಿಯಾದ ಪರಿಣಾಮ ರಸ್ತೆಗೆ ಬಿದ್ದ ಭರತ್ ಅವರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಭರತ್ ಕೋಟೇಶ್ವರ ಸಮೀಪದಲ್ಲಿನ ಪೈಂಟ್ ಶೋರೂಂನಲ್ಲಿ ಕೆಲಸ ನಿರ್ವಹಿಸುತ್ತಿದ್ದು ಕಳೆದ ವರ್ಷವಷ್ಟೇ ವಿವಾಹವಾಗಿತ್ತು ಎನ್ನಲಾಗಿದೆ. ಮನೆಯಿಂದ ಕೆಲಸಕ್ಕೆ ಬಹುತೇಕ ಕಾರಿನಲ್ಲಿ ಬಂದುಹೋಗುತ್ತಿದ್ದ ಭರತ್ ಗುರುವಾರ ಬೈಕಿನಲ್ಲಿ ಬಂದಿದ್ದರು. ಟ್ರಕ್ ಚಾಲಕನ ಅಜಾಗರುಕತೆ ಹಾಗೂ ನಿರ್ಲಕ್ಷ್ಯತನದ ಚಾಲನೆ ಜೀವವೊಂದನ್ನು ಬಲಿಪಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕುಂದಾಪುರ ಸಂಚಾರ ಠಾಣೆ ಉಪನಿರೀಕ್ಷಕರಾದ ಅನೂಪ್…

Read More