Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಮೃದ್ಧ ಬೈಂದೂರು 300 ಟ್ರೀಸ್ ಉಪಕ್ರಮದ ಅಡಿಯಲ್ಲಿ ಕೆನರಾ ಬ್ಯಾಂಕ್ ಸಿದ್ದಾಪುರ, ಕಾಲಭೈರವೇಶ್ವರ ಎಂಟರ್ಪ್ರೈಸಸ್ ಬೆಂಗಳೂರು, ರೋಟರಿ ಕ್ಲಬ್ ಸಿದ್ದಾಪುರ ಹೊಸಂಗಡಿ, ಸ್ವಯಂ ಸ್ಫೂರ್ತಿ  ಫೌಂಡೇಶನ್ ಬೆಂಗಳೂರು ಇದರ ಸಹಕಾರದೊಂದಿಗೆ ಮಂಗಳವಾರದಂದು ಹಳ್ಳಿಹೊಳೆ ಗ್ರಾ. ಪಂ. ವ್ಯಾಪ್ತಿಯ ಎಲ್ಲಾ ಶಾಲಾ ಮಕ್ಕಳಿಗೆ ಕೊಡೆ ವಿತರಣೆ ಹಾಗೂ  ಕೆರಾಡಿ, ಆಜ್ರಿ, ಭಾಗದ ಆಯ್ದ ಶಾಲೆಗಳಿಗೆ ನೋಟ್ ಬುಕ್ ಮತ್ತು ಕಲಿಕಾ ಸಾಮಗ್ರಿ ವಿತರಣೆ ಮಾಡಲಾಯಿತು. ಕಾರ್ಯಕ್ರಮವನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟೆಹೊಳೆ ಅವರು ಉದ್ಘಾಟನೆ ಮಾಡಿದರು. ಕೆನರಾ ಬ್ಯಾಂಕ್ ನಿಂದ 2 ಲಕ್ಷ ಮೌಲ್ಯದ ಪಿಟೋಪಕರಣ, ಸಂಘ ಸಂಸ್ಥೆ ಗಳಿಂದ 15 ಶಾಲೆಗಳಿಗೆ ಹಾಗೂ ಅಂಗನವಾಡಿಗಳಿಗೆ ಕಲಿಕಾ ಸಾಮಗ್ರಿ ನೋಟ್ ಬುಕ್ ವಿತರಣಾ ಕಾರ್ಯಕ್ರಮ ನಡೆಯಿತು. ಹಳ್ಳಿಹೊಳೆ ಗ್ರಾಮ ಪಂಚಾಯತಿ ಅಧ್ಯಕ್ಷ ಮಂಜುನಾಥ್ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಯವರಾದ ನಾಗೇಶ್ ನಾಯ್ಕ, ಆಜ್ರಿ ಮಾನಂಜೆಯ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ರಾಘವೇಂದ್ರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇಗುಲಕ್ಕೆ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಆನಂದ್ ಸಿ. ಕುಂದರ್ ಶಾಲು ಹೋದಿಸಿ ಪ್ರಸಾದ ವಿತರಿಸಿ ಗೌರವಿಸಿದರು. ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸುಭಾಷ್ ಶೆಟ್ಟಿ, ಗಣೇಶ್ ನೆಲ್ಲಿಬೆಟ್ಟು, ಚಂದ್ರ ಆಚಾರ್, ದೇಗುಲ್ ವ್ಯವಸ್ಥಾಪಕ ಗಣೇಶ್ ಹೊಳ್ಳ, ಯುವ ಕಾಂಗ್ರೆಸ್ ಯುವ ಮುಖಂಡ ಅಜಿತ್ ಶೆಟ್ಟಿ ಯಾಳಹಕ್ಲು, ಕಾಂಗ್ರೆಸ್ ಸ್ಥಳೀಯ ಮುಖಂಡರಾದ ದೇವೇಂದ್ರ ಗಾಣಿಗ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್‌ನಲ್ಲಿ ಪೋಷಕರ ಸಭೆಯನ್ನು ಆಯೋಜಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಿಕ್ಷಣ ತಜ್ಞ, ನಿವೃತ್ತ, ಪ್ರಾಂಶುಪಾಲ ಡಾ. ಜಿ. ಹೆಚ್. ಪ್ರಭಾಕರ ಶೆಟ್ಟಿ ಅವರು ಮಾತನಾಡಿ, ಅಕ್ಷರಾಭ್ಯಾಸದ ಜೊತೆ ಸಂಸ್ಕಾರವನ್ನು ಕೊಟ್ಟು ಮಕ್ಕಳನ್ನು ಬೆಳೆಸಬೇಕು. ಪೋಷಕರು ಮಕ್ಕಳ ಆಸಕ್ತಿಯನ್ನು ತಿಳಿದು ಆ ವಿಷಯದಲ್ಲಿ ಶಿಕ್ಷಣವನ್ನು ನೀಡಬೇಕೆ ಹೊರತು ಮಾನಸಿಕ ಒತ್ತಡವನ್ನು ಹಾಕಬಾರದು ಎಂದು ತಿಳಿಸಿದರು. ಮಕ್ಕಳ ಮಾನಸಿಕ ಬೆಳವಣಿಗೆಯ ಜೊತೆಗೆ ಮಕ್ಕಳ ದೈಹಿಕ ಬೆಳವಣಿಗೆಗೆ ಪೂರಕವಾದ ಪೌಷ್ಠಿಕ ಆಹಾರದ ಬಗ್ಗೆ ಪೋಷಕರಿಗೆ ಅರಿವಿರಬೇಕು. ಮಾರುಕಟ್ಟೆಯಲ್ಲಿ ದೊರಯುವ ವಿವಿಧ ಪಾನೀಯಗಳು ಹಾಗೂ ವಿಷಯುಕ್ತ ಕಲಬೆರಕೆ ಆಹಾರದಿಂದ ಮಕ್ಕಳ ಆರೋಗ್ಯದ ಮೇಲಾಗುವ ಪರಿಣಾಮ ಹಾಗೂ ಕಾಯಿಲೆಗಳನ್ನು ನಿದರ್ಶಗಳೊಂದಿಗೆ ತಿಳಿಸಿ ಪೋಷಕರನ್ನು ಎಚ್ಚರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಅವರು ಮಾತನಾಡಿ, ಪೋಷಕರ ಸಹಕಾರಕ್ಕೆ ಕೃತಜ್ಷತೆಗಳನ್ನು ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಮಕ್ಕಳಿಗೆ ಇನ್ನಷ್ಟು ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗುವುದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ‘ಯುವ ಕಾಂಗ್ರೆಸ್ ಸಮಿತಿ ಬೈಂದೂರು ವಿಧಾನಸಭಾ ಕ್ಷೇತ್ರ’ ಇದರ  ವತಿಯಿಂದ ‘ಯುವ ಸಂಕಲ್ಪ’ ಎಂಬ ಶೀರ್ಷಿಕೆಯಡಿಯಲ್ಲಿ ಸಿದ್ದಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಐರ್‌ಬೈಲು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು. ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಉದ್ದೇಶಿಸಿ ಯುವ ಕಾಂಗ್ರೆಸ್ ಅಧ್ಯಕ್ಷ ಅಕ್ಷಯ್ ಶೆಟ್ಟಿ ಮಾತನಾಡಿದರು. ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೂರಜ್ ಜಿ. ಪೂಜಾರಿ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಪ್ರಮೋದ್ ಪೂಜಾರಿ, ಸಿದ್ದಾಪುರ ಗ್ರಾಮ ಪಂಚಾಯತ್ ಸದಸ್ಯರಾದ ಮಂಜುನಾಥ್ ಕುಲಾಲ್ ಜನ್ಸಾಲೆ, ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸವಿತಾ ಪೂಜಾರಿ, ಸಂಜೀವ್ ಪೂಜಾರಿ (ಗಾಂಧಿ ಪೂಜಾರಿ), ಕಿರಣ್ ಜನ್ಸಾಲೆ, ಆಕಾಶ್, ಕೃಷ್ಣ ಪೂಜಾರಿ, ಹರೀಶ್ ಪೂಜಾರಿ, ಸುರೇಶ್ ಪೂಜಾರಿ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಾಡಪ್ರಭು ಕೆಂಪೇಗೌಡ ಜನ್ಮ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯವರು ಆಯೋಜಿಸಿದ ತಾಲೂಕು ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿದ್ಯಾರ್ಥಿನಿ ಸಿಂಚನಾ ಪ್ರಥಮ ಸ್ಥಾನ ಹಾಗೂ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿ ತನ್ವಿತಾ ತೃತೀಯ ಸ್ಥಾನ ಪಡೆದಿರುತ್ತಾಳೆ. ಸಾಧಕ ವಿದ್ಯಾರ್ಥಿನಿಯರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನಾಡಪ್ರಭು ಕೆಂಪೇಗೌಡರ ಜನ್ಮದಿನಾಚರಣೆ ಪ್ರಯುಕ್ತ ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ, ಇದರ ಆಶ್ರಯದಲ್ಲಿ‌ ತಾಲೂಕು ಮಟ್ಟದ ಪ್ರಬಂಧ ಮತ್ತು ಭಾಷಣ ಸ್ಪರ್ಧೆಯನ್ನು ಇಲ್ಲಿನ ಆರ್.‌ಎನ್‌. ಶೆಟ್ಟಿ‌ ಪದವಿ ಪೂರ್ವ ಕಾಲೇಜಿನಲ್ಲಿ‌ ಆಯೋಜಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟಿ ಅವರು ಸ್ಪರ್ಧಾ ಕಾರ್ಯಕ್ರಮಗಳನ್ನು ದೀಪ‌ ಬೆಳಗಿಸಿ ಉದ್ಘಾಟಿಸಿ, ಕೆಂಪೇಗೌಡರ ದೂರದೃಷ್ಟಿಯ ಕೊಡುಗೆಗಳನ್ನು ಸ್ಮರಿಸಿ ಶ್ಲಾಘಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕೃಷ್ಣಮೂರ್ತಿ ಡಿ.ಬಿ. ಅವರು ಕಾರ್ಯಕ್ರಮ ನಿರ್ವಹಿಸಿದರು.  

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ರಾಜ್ಯ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಮಂಗಳವಾರ ಭೇಟಿ ನೀಡಿ, ಶ್ರೀ ದೇವಿಯ ದರ್ಶನ ಪಡೆದರು. ಅರ್ಚಕರಾದ ಡಾ. ಕೆ.ಎನ್‌ನರಸಿಂಹ ಅಡಿಗ ಹಾಗೂ ಸುಬ್ರಹ್ಮಣ್ಯ ಅಡಿಗ ಅವರ ನೇತೃತ್ವದಲ್ಲಿ ವಿಷೇಶ ಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಹಾಗೂ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್‌ ಕುಮಾರ್‌ ಶೆಟ್ಟಿ ಅವರ ನೇತೃತ್ವದಲ್ಲಿ ಸಚಿವರನ್ನು ಸನ್ಮಾನಿಸಲಾಯಿತು. ಈ ವೇಳೆ ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ, ಮಾಜಿ ಸಚಿವ ಅಭಯಚಂದ್ರ ಜೈನ್, ಬೈಂದೂರು ಮಾಜಿ ಶಾಸಕ ಕೆ. ಗೋಪಾಲ್ ಪೂಜಾರಿ, ಕಾಂಗ್ರೆಸ್‌ ಮುಖಂಡರಾದ ಪ್ರಸಾದರಾಜ್ ಕಾಂಚನ್, ಮುನಿಯಾಲು ಉದಯ್ ಕುಮಾರ್‌ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರದೀಪ್‌ ಕುಮಾ‌ರ್ ಶೆಟ್ಟಿ ಗುಡಿಬೆಟ್ಟು, ರಾಜು ಪೂಜಾರಿ ಹಾಗೂ ಆಡಳಿತ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕಳೆದ ವರ್ಷ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಎನ್.ಎಂ.ಎಂ.ಎಸ್ ಪರೀಕ್ಷೆಗೆ ಹಾಜರಾಗಿ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ಎನ್.ಎಸ್.ಪಿ ಪೋರ್ಟಲ್‌ನಲ್ಲಿ ತಮ್ಮ ವಿವರಗಳನ್ನು ನೋಂದಣಿ ಮಾಡುವುದರ ಮೂಲಕ ರೆಫರೆನ್ಸ್ ಸಂಖ್ಯೆ ಪಡೆದು ಫೇಸ್ ಅಥೇಂಟಿಕೇಶನ್ ಮಾಡಿಸಿ ಓಟಿಆರ್ ಸಂಖ್ಯೆ ಪಡೆದು ಹಾಗೂ 10ನೇ ತರಗತಿ ಮತ್ತು ಪಿ.ಯು.ಸಿ ಓದುತ್ತಿರುವ ವಿದ್ಯಾರ್ಥಿಗಳು ಹಿಂದಿನ ವರ್ಷದ ಓಟಿಆರ್ ಸಂಖ್ಯೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ಸರ್ಕಾರಿ ಅಥವಾ ಅನುದಾನಿತ ಶಿಕ್ಷಣ ಸಂಸ್ಥೆಯಲ್ಲಿ ಕಲಿಯುತ್ತಿರಬೇಕು. ಖಾಸಗಿ ಸಂಸ್ಥೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಅವಕಾಶ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕುಗಳ ಕ್ಷೇತ್ರಶಿಕ್ಷಣಾಧಿಕಾರಿಗಳ ಕಛೇರಿಯ ಎನ್.ಎಂ.ಎಂ.ಎಸ್ ನೋಡಲ್ ಅಧಿಕಾರಿ ಅಥವಾ ಜಿಲ್ಲಾ ನೋಡಲ್ ಅಧಿಕಾರಿ ಚಂದ್ರನಾಯ್ಕ ಮೊಬೈಲ್ ಸಂಖ್ಯೆ: 9449449602 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಸರಕಾರಿ ಶಾಲೆಗಳಿಗೆ ಒತ್ತು ನೀಡಿ, ಸಹಕಾರ ನೀಡಿದರೆ ಸರಕಾರಿ ಶಾಲೆಗಳು ಬೆಳೆಯುತ್ತದೆ. ಊರಿನ ಶಾಲೆಗಳು ಬೆಳೆದಾಗ ಗ್ರಾಮಗಳು ಅಭಿವೃದ್ಧಿಯಾಗುತ್ತದೆ. ನಮ್ಮೂರಿನ ಶಾಲೆ ಎನ್ನುವ ಹೆಮ್ಮೆಯಿಂದ ತಾವು ದುಡಿದ ಸಂಪಾದನೆಯ ಒಂದು ಭಾಗವನ್ನು ಸಮಾಜಸೇವೆಗೆ ಮೀಸಲಿಟ್ಟು ಈ ಸರಕಾರಿ ಶಾಲೆಗೆ ನಿರ್ಮಿಸಿಕೊಟ್ಟ ಬೃಹತ್ ರಂಗಮಂದಿರ ಕೊಡುಗೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ಅವರು ಕೋಟೇಶ್ವರ ಸೇವಾ ಟ್ರಸ್ಟ್‌ನ ನೂತನ ಕಚೇರಿ ಮತ್ತು ಸ್ವಚ್ಛ ಭಾರತ ಅಭಿಯಾನ ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮ ಹಾಗೂ ಗೋಪಾಡಿ ಶ್ರೀನಿವಾಸ ರುಕ್ಕಿಣಿ ಫೌಂಡೇಶನ್ ಮತ್ತು ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗ ಶತಮಾನೋತ್ಸವ ಸಮಿತಿ ನಿರ್ಮಿಸಿದ ಗೋಪಾಡಿ ರುಕ್ಕಿಣಿ ಶ್ರೀನಿವಾಸ ರಂಗಮಂಟಪವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು. ಶ್ರೀ ಸೋದೆ ವಾದಿರಾಜ ಮಠಾಧೀಶ ಶ್ರೀವಿಶ್ವವಲ್ಲಭತೀರ್ಥ ಶ್ರೀಪಾದರು ಆಶೀರ್ವಚನ ನೀಡಿ, “ಒಂದು ಗ್ರಾಮದಲ್ಲಿ ದೇವಾಲಯ ಮತ್ತು ವಿದ್ಯಾಲಯ ಚೆನ್ನಾಗಿ ಕಾರ್ಯನಿರ್ವಹಿಸಿ ಮುನ್ನಡೆದಾಗ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಐ.ಐ.ಟಿ, ಐ.ಐ.ಐ.ಟಿ, ಎನ್.ಐ.ಟಿ, ಐ.ಐ.ಎಮ್, ಐ.ಐ.ಎಸ್.ಇ.ಆರ್, ಎ.ಐ.ಐ.ಎಂ.ಎಸ್, ಎನ್.ಎಲ್.ಯು, ಐ.ಎನ್.ಐ ಮತ್ತು ಐ.ಯು.ಎಸ್.ಎಲ್.ಎ ಇತ್ಯಾದಿ ಸರ್ಕಾರದಿಂದ ಶಾಸನಬದ್ಧ ಅನುಮತಿ ಪಡೆದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಕೋರ್ಸ್ ಪೂರ್ಣ ಅವಧಿಯಲ್ಲಿ ಒಂದು ಬಾರಿಗೆ  ಪ್ರೋತ್ಸಾಹಧನವನ್ನು ಪಡೆಯಲು ಸೇವಾಸಿಂಧು ತಂತ್ರಾಂಶ https://sevasindhu.karnataka.gov.in/sevasindhu/DepartmentService ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More