ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಡಾ. ಬಿ. ಆರ್ ಅಂಬೇಡ್ಕರ್ ಯುವಕ ಮಂಡಲ ಇದರ 38ನೇ ವಾರ್ಷಿಕೋತ್ಸವ ಮತ್ತು ಅಮೃತ ಯುವತಿ ಮಂಡಲ ಹಾಗೂ ಅರ್ಚನಾ ಮಹಿಳಾ ಮಂಡಲ ಇವುಗಳ 32ನೇ ವಾರ್ಷಿಕೋತ್ಸವವನ್ನು ಇತ್ತೀಚೆಗೆ ಆಚರಿಸಲಾಯಿತು. ಮುಖ್ಯ ಅತಿಥಿ ಕುಂದಾಪುರ ಆದರ್ಶ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಡಾ. ಆದರ್ಶ ಹೆಬ್ಬಾರ್ ಅವರು ಮಾತನಾಡಿ, ಎಲ್ಲಾ ಅನುಕೂಲಗಳ ಜೊತೆ ಜೊತೆಗೆ ಸಾಧನೆಗೈಯುವುದಕ್ಕಿಂತ ಬಡತನವನ್ನು ಮೆಟ್ಟಿನಿಂತು ಕಷ್ಟಗಳನ್ನು ಎದುರಿಸಿ ಸಾಧಿಸಿ ತೋರಿಸುವುದೇ ನಿಜವಾದ ಗೆಲುವು. ಎಂದು ಹೇಳಿ ಸಂಘದ ಕಾರ್ಯಗಳ ಬಗ್ಗೆ ಮೆಚ್ಚುಗೆಯನ್ನು ಸೂಚಿಸಿದರು. ಉಡುಪಿ ನಗರ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ ಜಯಕರ್ ಐರೋಡಿ ಅಂಬೇಡ್ಕರ್ ಅವರ ಚಿಂತನೆಗಳ ಕುರಿತು ಮಾತನಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಕೆ. ವಿನಾಯಕ ಪೈ ಅವರು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ವಹಿಸಿದ್ದರು. ಈ ಸಂದರ್ಭದಲ್ಲಿ ಕರ್ನಾಟಕ ಅರಣ್ಯ ಇಲಾಖೆ ಅಧಿಕಾರಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಣ್ಣಿಗೆ ಸಂಸ್ಕಾರ ಕೊಟ್ಟರೆ ಮಡಕೆಯಾಗುತ್ತದೆ, ಚಿನ್ನಕ್ಕೆ ಸಂಸ್ಕಾರ ಕೊಟ್ಟರೆ ಒಡವೆಯಾಗುತ್ತದೆ, ಸಗಣಿಗೆ ಸಂಸ್ಕಾರ ಕೊಟ್ಟರೆ ವಿಭೂತಿಯಾಗುತ್ತದೆ, ಮಕ್ಕಳಿಗೆ ಸಂಸ್ಕಾರ ಕೊಟ್ಟರೆ ಮಹಾದೇವನಾಗುತ್ತಾನೆ ಎಂದು ಬ್ರಹ್ಮಾವರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಾಮಚಂದ್ರ ಐತಾಳ್ ಹೇಳಿದರು. ಅವರು ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಮತ್ತು ಕೋಟದ ಸಾಲಿಗ್ರಾಮ ಮಕ್ಕಳ ಮೇಳವು ಸುವರ್ಣ ಪರ್ವದ ಸರಣಿ ಕಾರ್ಯಕ್ರಮವಾಗಿ ಕೋಟ ಮೂರ್ಕೈಯ ಹಂದೆ ಮಹಾ ವಿಷ್ಣು ವಿನಾಯಕ ದೇವಸ್ಥಾನದಲ್ಲಿ ಆಯೋಜಿಸಿದ ಎರಡು ದಿವಸಗಳ ಆಹ್ವಾನಿತ ತಂಡಗಳ ’ಯಕ್ಷ ತ್ರಿವಳಿʼ ಯಕ್ಷೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಮಕ್ಕಳಿಗೆ ಬದುಕಿನ ಮೌಲ್ಯವನ್ನು ಕೊಡ ಬಲ್ಲ ಶಕ್ತಿ ಯಕ್ಷಗಾನಕ್ಕಿದೆ. ಮಗುವನ್ನು ತಾಯಿಯಂತೆ ಪೋಷಿಸಬಲ್ಲ ಶಕ್ತಿ ಯಕ್ಷಗಾನದ ನಿಜ ಸತ್ವವಾಗಿದೆ. ಸಾಲಿಗ್ರಾಮ ಮಕ್ಕಳ ಮೇಳದ ಹಂದೆ ಉಡುಪರು ಕಲೆಯ ಮೂಲಕ ಮಕ್ಕಳಲ್ಲಿ ಸಂಸ್ಕಾರದ ಬೀಜ ಬಿತ್ತುವಲ್ಲಿ ಯಶಸ್ವಿಯಾಗಿದ್ದಾರೆ ಅಲ್ಲದೆ ಯಕ್ಷಗಾನವನ್ನು ವಿಶ್ವಗಾನವಾಗಿಸಿದ ಕೀರ್ತಿ ಎಚ್. ಶ್ರೀಧರ ಹಂದೆಯವರಿಗೆ ಸಲ್ಲುತ್ತದೆ ಎಂದು ಅಭಿಪ್ರಾಯಪಟ್ಟರು ಯಕ್ಷಗಾನ ಅಕಾಡೆಮಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ ಎರಡನೇ ಹಂತದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ಮೂರನೇ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದಿದ್ದಾರೆ. ಗ್ರಾಮೀಣ ಭಾಗದಲ್ಲಿ ಆರಂಭಗೊಂಡು ಶೈಕ್ಷಣಿಕ ಸಂಚಲನ ಮೂಡಿಸಿರುವ ಜನತಾ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಜೆಇಇ ಮೈನ್ಸ್ 2025ರ ಎರಡನೇ ಹಂತದ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಾದ ಆಕಾಶ್ ಹೆಬ್ಬಾರ್ 99.390 ಪರ್ಸಂಟೈಲ್, ಗಿರೀಶ್ ಪೈ 99.045 ಪರ್ಸಂಟೈಲ್, ನಿಶ್ಚಿತ್ 98.929 ಪರ್ಸಂಟೈಲ್, ಧೀರಜ್ ಜಿ.ಡಿ. 97.787ಪರ್ಸಂಟೈಲ್, ಚಿರಂತನ್ 95.866 ಪರ್ಸಂಟೈಲ್, ಶಶಾಂಕ್ 93.722 ಪರ್ಸಂಟೈಲ್, ಪ್ರಸಾದ್ 93.701 ಪರ್ಸಂಟೈಲ್, ಶ್ರದ್ಧಾ 93.155,ಪರ್ಸಂಟೈಲ್, ಲಿಖಿತ್ 90.789 ಪರ್ಸಂಟೈಲ್, ರಿಯಾನ್ 90.563 ಪರ್ಸಂಟೈಲ್, ಅನಿರುದ್ದ್ 90.329 ಪರ್ಸಂಟೈಲ್ ಪಡೆದು ಜೆಇಇ ಅಡ್ವನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಜೆಇಇ ಫಲಿತಾಂಶ ಪ್ರಕಟವಾಗಿದ್ದು, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈ ಬಾರಿಯು ಅತ್ಯುತ್ತಮ ಸಾಧನೆ ಮೆರೆದಿದ್ದಾರೆ. 63 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ 99 ಪರ್ಸಂಟೈಲ್ಕ್ಕಿಂತ ಅಧಿಕ ಅಂಕ ಪಡೆದ ಶ್ರೇಯಕ್ಕೆ ಪಾತ್ರರಾಗಿದ್ದಾರೆ. ಬೌತಶಾಸ್ತçದಲ್ಲಿ 21, ರಸಾಯನಶಾಸ್ತ್ರದಲ್ಲಿ 30 ಹಾಗೂ ಗಣಿತದಲ್ಲಿ 12 ವಿದ್ಯಾರ್ಥಿಗಳು ಈ ಸಾಧನೆ ಮಾಡಿದ್ದಾರೆ. 99 ಪರ್ಸಂಟೈಲ್ಕ್ಕಿಂತ ಅಧಿಕ 4 ವಿದ್ಯಾರ್ಥಿಗಳು, 98 ಪರ್ಸಂಟೈಲ್ಕ್ಕಿಂತ ಅಧಿಕ 14 ವಿದ್ಯಾರ್ಥಿಗಳು, 97 ಪರ್ಸಂಟೈಲ್ಕ್ಕಿಂತ 45 ವಿದ್ಯಾರ್ಥಿಗಳು, 95 ಪರ್ಸಂಟೈಲ್ಕ್ಕಿಂತ 91 ವಿದ್ಯಾರ್ಥಿಗಳು, 90 ಪರ್ಸಂಟೈಲ್ಕ್ಕಿಂತ ಅಧಿಕ 192 ವಿದ್ಯಾರ್ಥಿಗಳು ಅಂಕವನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಾದ ಪುನೀತ ಕುಮಾರ್ ಬಿಜಿ (99.69), ಅಕ್ಷಯ ಎಂ. ಹೆಗ್ಡೆ (99.58), ತುಷಾರ್ ಘನಶ್ಯಾಮ್ ಪಾಟೀಲ್ (99.38), ರೋಶನ್ ಶೆಟ್ಟಿ (99.04), ಧನುಷ್ ಗೌಡ ಸಿಎಸ್(98.75), ಬಾಬು ಸಿದ್ದಲಿಂಗಪ್ಪ ಗೌರಿ (98.75), ಸಂಪದ ಜೆ (98.71), ಪಾಂಡುರAಗ ಜಿವಿ(98.62), ತನೀಷ್ ಎನ್ ರಾಜ್ (98.20), ಭಾನು ಹರ್ಷ ಎಎನ್(98.17), ಸಾಗರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆಯು ಇತ್ತೀಚಿಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸದಾನಂದ ಕಾಮತ್ ಮಾತನಾಡಿ, ಮಗುವಿನ ಸರ್ವತೋಮುಖ ಅಭಿವೃದ್ಧಿಯಲ್ಲಿ ಶಿಕ್ಷಕರ ಜವಾಬ್ದಾರಿ ಬಹಳವಿದೆ. ಅದಕ್ಕಾಗಿ ಕಾಲೇಜು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ ಕೇಂದ್ರ ಸರ್ಕಾರದ ಕೌಶಲ್ಯ ಅಭಿವೃದ್ಧಿ ಯೋಜನೆಯ ಕಾರ್ಯಕ್ರಮ ಪಿ.ಎಮ್.ಕೆ ವಿ.ವಾಯ್ ಭಂಡಾರ್ಕಾರ್ಸ್ ಕಾಲೇಜಿಗೆ ದೊರೆತಿರುವ ಕುರಿತು ಅಭಿನಂದಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಪ್ರಾಸ್ತಾವಿಕವಾಗಿ ಮಾತನಾಡಿ, ಕಾಲೇಜಿನ ಉದ್ಯೋಗ ಆಧಾರಿತ ಮತ್ತು ಅದಕ್ಕೆ ಪೂರಕ ಸೌಲಭ್ಯಗಳ ಕುರಿತು ವಿವರಿಸಿದರು. ಕಾಲೇಜಿನ ಅರಕ್ಷಕ ಶಿಕ್ಷಕ ಸಂಘದ ಕಾರ್ಯದರ್ಶಿ ಸಂಜೀವ ತೆಕ್ಕಟ್ಟೆ ಉಪಸ್ಥಿತರಿದ್ದರು. ಕಂಪ್ಯೂಟರ್ ವಿಭಾಗದ ಉಪನ್ಯಾಸಕ ಮುಕುಂದ ಭಟ್ ಕಾಲೇಜಿನ ತಂತ್ರಜ್ಞಾನ ಸೌಲಭ್ಯಗಳ ಬಗ್ಗೆ ತಿಳಿಸಿದರು. ಅನ್ವಯಿಕ ವಿಜ್ಞಾನ ವಿಭಾಗದ ವಿದ್ಯಾರಾಣಿ ಕಾರ್ಯಕ್ರಮ ನಿರೂಪಿಸಿ, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತ್ಯನಾರಾಯಣ ಸ್ವಾಗತಿಸಿ, ವಾಣಿಜ್ಯ ವಿಭಾಗದ ಉಪನ್ಯಾಸಕಿ ಸುಮಾ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನಡೆಸುವ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಜೆಇಇ ( ಮೈನ್ ) 2025 ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 202 ವಿದ್ಯಾರ್ಥಿಗಳು ತೇರ್ಗಡೆ ಪಡೆಯುವ ಮೂಲಕ ಮುಂಬರುವ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಾದ ಚೇತನ್ ಗೌಡ ಎನ್. ಎಸ್. 99.76 ಪರ್ಸೆಟೈಲ್ ಮೂಲಕ ಎಐಆರ್ (ಆಲ್ ಇಂಡಿಯಾ ರ್ಯಾಂಕ್) 733ನೇ ಕೆಟಗರಿ ಪರ್ಸೆಟೈಲ್, ಸಾನಿಕ ಕೆ. ಎನ್ 99.53 ಪರ್ಸೆಟೈಲ್, ಮೋಹಿತ್ ಎಂ. 99.49 ಪರ್ಸೆಟೈಲ್ ಮೂಲಕ 29ನೇ ಕೆಟಗರಿ ರ್ಯಾಂಕ್, ಸುಮಂತ ಗೌಡ ಎಸ್. ಡಿ 99.13 ಪರ್ಸೆಟೈಲ್, ಎಚ್. ಎ. ರಾಜೇಶ್ 99.10 ಪರ್ಸೆಟೈಲ್, ಎಂ. ಮಂಜುನಾಥ್ 99.01 ಪರ್ಸೆಟೈಲ್, ಟಿ. ಪ್ರದೀಪ್ 98.79 ಪರ್ಸೆಟೈಲ್ ಮೂಲಕ 103ನೇ ಕೆಟಗರಿ ರ್ಯಾಂಕ್, ಮೋನಿಕ ಕೆ. ಪಿ 98.54 ಪರ್ಸೆಟೈಲ್ ಮೂಲಕ 126ನೇ ಕೆಟಗರಿ ರ್ಯಾಂಕ್, ಸಾಚಿ ಶಿವಕುಮಾರ್ ಕಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಯಳಜಿತ್ ಗ್ರಾಮದ ಅರೆಹೊಳೆ ಎಣ್ಣೆಮಕ್ಕಿ ನಿವಾಸಿ ಸೀತಾರಾಮ (40) ಎಂಬ ವ್ಯಕ್ತಿಯು 2024ರ ಫೆಬ್ರವರಿ 18 ರಂದು ಮನೆಯಿಂದ ಕೆಲಸಕ್ಕೆಂದು ಹೋದವರು, ಕೆಲಸಕ್ಕೂ ಹೋಗದೇ ಮನೆಗೂ ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಮೊ.ನಂ: 9480805459, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434 ಹಾಗೂ ಕಂಟ್ರೋಲ್ ರೂಂ 100 (0820-2526444) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಏಳನೇ ಸುತ್ತಿನ ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮವನ್ನು ಏಪ್ರಿಲ್ 26 ರಿಂದ ಜೂನ್ 4 ರ ವರೆಗೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಪ್ರತಿಶತಃ ನೂರರಷ್ಟು ಗುರಿ ಸಾಧನೆಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಾನುವಾರು ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆ ಹಾಗೂ ಪಶು ಸಂಜೀವಿನಿ ವಾಹನಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಾನುವಾರುಗಳಲ್ಲಿ ಕಂಡು ಬರುವ ಕಾಲುಬಾಯಿ ರೋಗವು ವೈರಾಣುವಿನಿಂದ ಬರುವ ಅಂಟು ರೋಗವಾಗಿದ್ದು, ಗೊರಸು ಕಾಲುಗಳನ್ನು ಹೊಂದಿರುವ ಎಲ್ಲಾ ಪ್ರಾಣಿಗಳಲ್ಲಿ ಈ ರೋಗವು ಕಂಡುಬರುತ್ತದೆ. ರೈತರಿಗೆ ಆರ್ಥಿಕ ಸಂಕಷ್ಟ ಉಂಟುಮಾಡುವ ಈ ರೋಗವನ್ನು ನಿಯಂತ್ರಿಸಲು ಲಸಿಕೆ ನೀಡುವುದೊಂದೇ ಪರಿಹಾರವಾಗಿದ್ದು, ಪ್ರತೀ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಣ ಎಂದರೆ ಕೇವಲ ಅಕ್ಷರ ಅಭ್ಯಾಸ ಅಲ್ಲ. ಕ್ರೀಡೆ, ಕಲೆ ಮುಂತಾದ ಚಟುವಟಿಕೆಗಳು ಅದರ ಭಾಗವಾದರೆ ಮಾತ್ರ ಅವರೊಳಗಿನ ಪ್ರತಿಭೆಗಳು ಹೊರಹೊಮ್ಮಲು ಸಾಧ್ಯವಾಗುತ್ತದೆ. ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಇಂತಹ ಬೇಸಿಗೆ ಶಿಬಿರಗಳು ಹೆಚ್ಚು ಸಹಕಾರಿಯಾಗುತ್ತದೆ. ಮಕ್ಕಳು ರಜಾದಿನಗಳ ಸಮಯವನ್ನ ಸದುಪಯೋಗ ಪಡಿಸಿಕೊಂಡು ಇನ್ನಷ್ಟು ಕ್ರಿಯಾಶೀಲರಾಗಲು ಬೇಸಿಗೆ ಶಿಬಿರಗಳು ಉತ್ತಮ ಆಯ್ಕೆ ಆಗಿರುತ್ತದೆ ಎಂದು ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು. ಅವರು ಇಲ್ಲಿನ ಕೋಟೇಶ್ವರ ಯಡಾಡಿ -ಮತ್ಯಾಡಿ ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಆಯೋಜಿಸಿದ ಬೇಸಿಗೆ ಶಿಬಿರ ಮಂಥನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳಿಗೆ ಶಾಲಾ ಮಟ್ಟದಲ್ಲಿಯೇ ದುಶ್ಚಟಗಳಿಂದ, ಕೆಟ್ಟ ಹವ್ಯಾಸಗಳಿಂದ ದೂರವಿರಿಸುವ ಅರಿವು ಕಾರ್ಯಕ್ರಮಗಳನ್ನ ಆಯೋಜಿಸಿದಾಗ ಉತ್ತಮ ಸಮಾಜದ ನಿರ್ಮಾಣ ಸಾಧ್ಯವಾಗುತ್ತದೆ. ಇಂತಹ ಬೇಸಿಗೆ ಶಿಬಿರಗಳು ಮಕ್ಕಳು ಉತ್ತಮ ಪ್ರಜೆಯಾಗಿ ರೂಪುಗೊಳ್ಳಲು ಸಹಕಾರಿ ಎಂದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಖ್ಯಾತ ಚಲನಚಿತ್ರ ನಟಿ ಸಂಗೀತ ಶೃಂಗೇರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕರಿಗಾಗಿ ಭಾಷಾ ಕೌಶಲ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ನಾಲ್ಕು ದಿನಗಳ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಈ ಕಾರ್ಯಾಗಾರವು ಅನುಭವಿ ಶಿಕ್ಷಣ ತಜ್ಞೆ ಹಾಗೂ ಯೋಗ ಥೆರಪಿಸ್ಟ್ ಆಗಿರುವ ಜಯಶ್ರೀ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಾಗಾರದ ಮುಖ್ಯ ಉದ್ದೇಶವು ಶಿಕ್ಷಕರಲ್ಲಿ ಸಮರ್ಥ ಸಂವಹನ ಕೌಶಲ್ಯವನ್ನು ಬೆಳೆಸುವುದು ಹಾಗೂ ಒತ್ತಡ ರಹಿತ ದಿನಚರಿಯನ್ನು ಅನುಸರಿಸುತ್ತಾ, ಉತ್ತಮ ಶಿಕ್ಷಕರಾಗಿ ಹೊಮ್ಮಲು ಸಹಕರಿಸುವುದಾಗಿತ್ತು. ಶೈಕ್ಷಣಿಕ ವಾತಾವರಣದಲ್ಲಿ ಭಾಷೆಯ ಪ್ರಾಮುಖ್ಯತೆ ಹಾಗೂ ಶಿಕ್ಷಕರ ಪಾತ್ರ ಎಷ್ಟು ಮಹತ್ವಪೂರ್ಣ ಎಂಬುದನ್ನು ಸುಂದರವಾಗಿ ಇಲ್ಲಿ ವಿವರಿಸಲಾಯಿತು. ಜಯಶ್ರೀ ಅವರು ವ್ಯಕ್ತಿತ್ವ ವಿಕಸನ ಹಾಗೂ ಸಮರ್ಥ ಅಭಿವ್ಯಕ್ತಿಯ ತಂತ್ರಗಳ ಮೇಲೆ ಪ್ರಾಯೋಗಿಕ ತರಬೇತಿ ನೀಡಿದರು. ಚಟುವಟಿಕೆ ಆಧಾರಿತ ವಿಧಾನಗಳ ಮೂಲಕ ಈ ಕೌಶಲ್ಯವನ್ನು ಬಳಕೆ ಮಾಡುವ ಬಗ್ಗೆ ಸ್ಪಷ್ಟತೆ ನೀಡಲಾಯಿತು. ಶಿಕ್ಷಕರು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ನವೀಕರಿಸಿಕೊಂಡರು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ…
