Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: “ಜೀವನದ‌ ಆಧಾರಸ್ತಂಭ ಕಟ್ಟಲು ಮುಖ್ಯವಾಗುವ ಪಿ.ಯು.ಸಿ‌ ಹಂತ ವಿದ್ಯಾರ್ಥಿಗಳೆದರು ಹಲವು ಕ್ಷೇತ್ರಗಳನ್ನು ತೆರೆದಿಡುತ್ತದೆ. ಸಾಂಸ್ಕ್ರತಿಕ ಮತ್ತು ಆಟೋಟಗಳಲ್ಲಿ ಸಂಪೂರ್ಣ ತೊಡಗಿಸಿಕೊಂಡಿದ್ದರೂ, ಭವಿಷ್ಯದಲ್ಲಿ ಯಾವುದೇ ಉದ್ಯೋಗಕ್ಕೆ ಹೋದ ಮೇಲೆ ಶಿಕ್ಷಣದ ಹಿನ್ನೆಲೆ ಇದ್ದರೆ ಮಾತ್ರ ಯಶಸ್ಸು ಪಡೆಯಬಹುದು” ಎಂದು ಕಿರುತೆರೆ ನಟಿ, ರಿಯಾಲಿಟಿ ಶೋ ಮಜಾಭಾರತ, ರಾಜಾ ರಾಣಿ‌ ಖ್ಯಾತಿಯ ಪ್ರಿಯಾಂಕಾ ಕಾಮತ್ ಹೇಳಿದರು. ಅವರು ಕುಂದಾಪುರದ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ನವಸಂಕೇತ್- ಫ್ರೆಷರ್ಸ್ ಫಿಯೆಸ್ಟಾ ವನ್ನು ಉದ್ಘಾಟಿಸಿ ಮಾತನಾಡಿದರು.ಮುಖ್ಯ ಅತಿಥಿಯಾಗಿ ಆಗಮಿಸಿದ ಪ್ರಾಕ್ತನ ವಿದ್ಯಾರ್ಥಿ‌ ಅಮಿತ್ ನಾಯಕ್ ಅವರು ಆರ್. ಎನ್. ಎಸ್. ಕಾಲೇಜು ತನ್ನನ್ನು ರೂಪಿಸಿದ ಬಗೆಯನ್ನು ಸ್ಮರಿಸಿಕೊಂಡರು. ಇನ್ನೋರ್ವ ಮುಖ್ಯ ಅತಿಥಿ ಗಾಯಕಿ ರಂಜನಾ ರಾಘವೇಂದ್ರ ಪ್ರಭು ಅವರು ಎಳೆ ವಯಸ್ಸಿನ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದ ಪ್ರಭಾವಕ್ಕೆ ಒಳಗಾಗಿ ಸಮಾಜಘಾತುಕ ಕಾರ್ಯಗಳತ್ತ ಸೆಳೆಯಲ್ಪಡಬಾರದೆಂದು ಕರೆ ನೀಡಿದರು.ಸಮಾರಂಭದ ಅಧ್ಯಕ್ಷತೆ ವಹಿಸಿದ ಕುಂದಾಪುರ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿಯವರಾದ ‌ ಸೀತಾರಾಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯ ಸರ್ಕಾರದ ‘ಶಕ್ತಿ’ ಯೋಜನೆಯಡಿಯಲ್ಲಿ 500 ಕೋಟಿ ಉಚಿತ ಪ್ರಯಾಣ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಬೈಂದೂರಿನಲ್ಲಿಯೂ ಸಿಹಿ ಹಂಚುವುದರ ಮೂಲಕ ಆಚರಿಸಲಾಯಿತು. ಬೈಂದೂರು ತಹಶಿಲ್ದಾರರ ಕಛೇರಿ ಎದುರು ಜರುಗಿದ ಕಾರ್ಯಕ್ರಮದಲ್ಲಿ ಬೈಂದೂರು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಬಸ್‌ನ ಚಾಲಕ ಮತ್ತು ನಿರ್ವಾಹಕರನ್ನು ಗೌರವಿಸಲಾಯಿತು. ಬೈಂದೂರು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಮೋಹನ್ ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ಕಾರ್ಯದರ್ಶಿ ಜಗದೀಶ ದೇವಾಡಿಗ, ಕಾಂಗ್ರೆಸ್ ಮುಖಂಡರಾದ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಎಸ್. ರಾಜು ಪೂಜಾರಿ, ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯರಾದ ನಾಗರಾಜ್ ಗಾಣಿಗ ಬಂಕೇಶ್ವರ, ಸದಾಶಿವ ಪಡುವರಿ, ಬೈಂದೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೂರ್ಯಕಾಂತಿ ಪಡುವರಿ, ಯುವ ಕಾಂಗ್ರೆಸ್ ಅಧ್ಯಕ್ಷ ಭರತ್ ದೇವಾಡಿಗ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಬ್ಬೀರ್ ಬೈಂದೂರು, ರೈತ ಘಟಕ ವೀರಭದ್ರ ಗಾಣಿಗ, ಗ್ಯಾರಂಟಿ ಸಮಿತಿ ಸದಸ್ಯರು, ವಿವಿಧ ಘಟಕಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು  ವಿ ರೀಚ್ ಅಕಾಡೆಮಿ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಸರಸ್ವತಿ ವಿದ್ಯಾಲಯದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಕಂಪನಿ ಸೆಕ್ರೆಟರಿ ಮತ್ತು ಚಾಟಡ್ ಅಕೌಂಟೆಂಟ್ ಕೋರ್ಸ್ ಗಳ ಕುರಿತಾದ ಪರಿಚಯ  ಕಾರ್ಯಕ್ರಮವು ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಕಂಪನಿ ಸೆಕ್ರೆಟರಿ ಸಂತೋಷ್ ಪ್ರಭು ಅವರು ಕಂಪನಿ ಸೆಕ್ರೆಟರಿ ಕೋರ್ಸಿನ ಬಗ್ಗೆ ಮಾಹಿತಿಯನ್ನು ನೀಡುತ್ತಾ ಕಂಪನಿ ಸೆಕ್ರೆಟರಿ ಕೋರ್ಸ್ ಮಾಡುವುದರ ಮೂಲಕ ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದಾಗಿದೆ. ಇದು ಖಚಿತ ಉದ್ಯೋಗ ವನ್ನು ನೀಡುವುದು ಮಾತ್ರವಲ್ಲದೆ ವಾಣಿಜ್ಯ ವಿಭಾಗದಲ್ಲಿನ ಬದಲಾವಣೆಗಳಿಗೆ ಒಗ್ಗಿಕೊಳ್ಳಲು ನಮ್ಮನ್ನು ಸಜ್ಜುಗೊಳಿಸಿ ಉನ್ನತ ಸ್ಥಾನಮಾನವನ್ನು ಮತ್ತು ಗಳಿಕೆಯನ್ನು ಪಡೆಯುವಂತೆ ಮಾಡುತ್ತದೆ ಎಂದು ಹೇಳಿದರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ. ಸಿ ಅಧ್ಯಕ್ಷತೆ ವಹಿಸಿದ್ದರು. ಐಸಿಎಸ್ಐ ನ ಮಂಗಳೂರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ:  ಇಲ್ಲಿನ  ಕಾರ್ಕಳ ಕ್ರಿಯೇಟಿವ್ ಪಿ.ಯು ಕಾಲೇಜಿನಲ್ಲಿ 6/8ಕರ್ನಾಟಕ ಎನ್.ಸಿ.ಸಿ ಉಪನೌಕಾ ಘಟಕವನ್ನು ಉದ್ಘಾಟಿಸಲಾಯಿತು. ಉದ್ಘಾಟಕರಾಗಿ ಆಗಮಿಸಿದ 6 ಕರ್ನಾಟಕ ಎನ್‌.ಸಿ.ಸಿ ನೌಕಾ ಘಟಕ ಉಡುಪಿಯ ಕಮಾಂಡಿಂಗ್ ಆಫೀಸರ್ ಕಮಾಂಡರ್ ಅಶ್ವಿನ್ ಎಂ. ರಾವ್ ಅವರು ಮಾತನಾಡಿ, ಎನ್.ಸಿ.ಸಿ. ಯ ಶ್ರೇಷ್ಠತೆ, ಅದರಲ್ಲಿರುವ ಅವಕಾಶಗಳು, ಭಾರತೀಯ ರಕ್ಷಣಾ ಪಡೆಯೊಂದಿಗಿನ ನಂಟು, ಯುವಜನತೆಯ ಪಾತ್ರ ಮತ್ತು ದೇಶದ ಭವಿಷ್ಯ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಪ್ರೇರಣಾದಾಯಕ ಮಾತುಗಳನ್ನು ಹೇಳಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಅವರು ಎನ್‌.ಸಿ.ಸಿ ಯ ಶಿಸ್ತು, ಸಮಯ ಪಾಲನೆ, ನಾಯಕತ್ವ ಹಾಗೂ ದೇಶಪ್ರೇಮದ ಕುರಿತು ಉಲ್ಲೇಖಿಸಿ, “ಯುವಜನತೆ ರಾಷ್ಟ್ರದ ಭವಿಷ್ಯ, ಅವರು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದರೆ ದೇಶ ಪ್ರಗತಿಯ ಮಾರ್ಗದಲ್ಲಿ ಸಾಗುತ್ತದೆ” ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹಿತನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ಲೆಫ್ಟಿನೆಂಟ್ ಕಮಾಂಡರ್ ಎಂ.ಎ ಮುಲ್ತಾನಿ, ಪಿ.ಐ ಸ್ಟಾಫ್ ವರ್ಗದವರು, ಕಾಲೇಜು ಎನ್.ಸಿ.ಸಿ ನೌಕಾ ಘಟಕದ ಸಿ.ಟಿ.ಒ ಆಗಿರುವ ಆಂಗ್ಲ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ‘ಮುಂಗಾರು ಪರ್ವ’ವನ್ನು ಆಚರಿಸಲಾಯಿತು. ‘ಹಸಿರೇ ಉಸಿರು ಎಂಬ ಧೈಯ ವಾಕ್ಯದೊಂದಿಗೆ ಪೂರ್ವ ಪ್ರಾಥಮಿಕ ‌ ವಿದ್ಯಾರ್ಥಿಗಳು ಹಾಡು ನರ್ತನದೊಂದಿಗೆ ಪರಿಸರವನ್ನು ಹಸಿರಾಗಿರಿಸಿದರು. ಕಾಗದದ ದೋಣಿಯಾಟವನ್ನಾಡಿ ಖುಷಿಪಟ್ಟರು. ಈ ಸಂದರ್ಭದಲ್ಲಿ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಕೃಷ್ಣ ಆಡಿಗರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ರೇಷ್ಮಾ ಡಿ. ಸೋಜರವರು ವಿದ್ಯಾರ್ಥಿಗಳಿಗೆ ಮಳೆಗಾಲದ ಪ್ರಾಮುಖ್ಯತೆಯನ್ನು ವಿವರಿಸಿದರು. ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಪ್ರಮೀಳಾ ಡಿ’ಸೋಜಾ, ಸಹಶಿಕ್ಷಕಿಯರು ಹಾಗೂ ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರಾವಳಿ ಪದ್ಮಶಾಲಿಗರ ಮೂಲ ಕ್ಷೇತ್ರ ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಕೂಡುಕಟ್ಟಿಗೆ ಸೇರಿದ ವಕ್ವಾಡಿ ಮಾಗಣೆಯ ಸಭೆಯಲ್ಲಿ ದೇಗುಲದ ಆಡಳಿತ ಮೊಕ್ತೇಸರರಾದ ಬಾರ್ಕೂರು ರಂಗನಕೇರಿ ಶ್ರೀನಿವಾಸ ಶೆಟ್ಟಿಗಾರ ಅವರನ್ನು ಸನ್ಮಾನಿಸಲಾಯಿತು. ವಕ್ವಾಡಿ ಮಾಗಣೆಯ ವ್ಯಾಪ್ತಿಗೆ ಸೇರಿದ ಕುಂಭಾಶಿ, ಗೋಪಾಡಿ, ಹೂವಿನಕೆರೆ, ಅಸೋಡು, ಕೋಟೇಶ್ವರ, ಕಾಳಾವರ, ನೂಜಿ, ಹೆಸ್ಕುತ್ತೂರು, ಇದರ ಸಭೆಯು ಹೂವಿನಕೆರೆ ಭಾವಿಸಮೀರ ಗುರು ಸಾರ್ವಭೌಮ ವಾದಿರಾಜ ಮಠದ ಹತ್ತಿರ ವಾದೀಶ್ ಭಟ್ ಅವರ ಸಭಾಗ್ರಹದಲ್ಲಿ ಆಡಳಿತ ಮೊಕ್ತೇಸರ ಶ್ರೀನಿವಾಸ ಶೆಟ್ಟಿಗಾರ್ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ನಡೆಯಿತು. ಸಭೆಯಲ್ಲಿ ಮಾಗಣೆಯ ಕುಟುಂಬದವರಿಗೆ ಮೂಲ ಕ್ಷೇತ್ರದ ಪ್ರಸಾದ ವಿತರಿಸಲಾಯಿತು. ದೇವಸ್ಥಾನದಲ್ಲಿ ನಡೆಯಲಿರುವ ಶಾಶ್ವತ ಪೂಜೆ, ವಿವಿಧ ಪೂಜಾ ಕೈಂಕರ್ಯ, ಜಾತಿ ಗಣತಿ ಮತ್ತು ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಿ, ಮಾಹಿತಿ ನೀಡಲಾಯಿತು. ಸಭೆಯಲ್ಲಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಡಾ. ಜಯರಾಮ ಶೆಟ್ಟಿಗಾರ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಎಚ್.ಎ. ಗೋಪಾಲ್, ವೀರೇಶ್ವರ ಸಮಿತಿಯ ಅಧ್ಯಕ್ಷ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ 2025ರ ಶೈಕ್ಷಣಿಕ ಸಾಲಿನ ಸ್ಥಳೀಯ ವಿದ್ಯಾರ್ಥಿಗಳ ಶಿಕ್ಷಕ-ಪಾಲಕ-ವಿದ್ಯಾರ್ಥಿಗಳ ಪ್ರಥಮ ಸಭೆಯನ್ನು ವಿ.ಎಸ್. ಆಚಾರ್ಯ ವೇದಿಕೆಯಲ್ಲಿ ಆಯೋಜಿಸಲಾಗಿತ್ತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಾತನಾಡಿ, ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ. ಇದು ಅವರ ಮುಂದಿನ ಉನ್ನತ ಶಿಕ್ಷಣ ಹಾಗೂ ವೃತ್ತಿಜೀವನದ ದಿಕ್ಕನ್ನು ತೀರ್ಮಾನಿಸುತ್ತದೆ. ಈ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಆಸಕ್ತಿ ಕ್ಷೇತ್ರವನ್ನು ಗುರುತಿಸಿ, ಗುರಿ ಮುಟ್ಟುವೆಡೆಗೆ ಶ್ರಮಿಸಬೇಕು. ಈ ಪ್ರಯಾಣದಲ್ಲಿ ವಿದ್ಯಾರ್ಥಿಗಳೊಂದಿಗೆ ಪೋ?ಕರು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಪಾತ್ರವು ಬಹಳ ಮಹತ್ವದ್ದಾಗಿದೆ ಎಂದರು. ಅಲ್ಲದೆ, ಪ್ರತಿಯೊಬ್ಬ ವಿದ್ಯಾರ್ಥಿಯು ತನ್ನದೇ ಆದ ಆಸಕ್ತಿಯ ಕ್ಷೇತ್ರದಲ್ಲಿ ಬೆಳೆಯುತ್ತಾನೆ. ಹಾಗಾಗಿ ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ಅಳೆಯುವುದು ಸೂಕ್ತವಲ್ಲ ಎಂದರು. ಮನಸ್ಸಿನ ಸಮತೋಲನ ಅಗತ್ಯ:”ಬಾಲ್ಯಾವಸ್ಥೆಗಿಂತ ಪ್ರೌಢಾವಸ್ಥೆ ವಿಭಿನ್ನ ಮನೋಧರ್ಮದಿಂದ ಕೂಡಿರುತ್ತದೆ. ದೈಹಿಕವಾಗಿ ಶಕ್ತಿಶಾಲಿಯಾದರೂ, ಮನಸ್ಸು ಚಂಚಲವಾಗಿರುತ್ತದೆ. ಆದ್ದರಿಂದ ಸಮತೋಲನ ಕಾಯ್ದುಕೊಳ್ಳುವುದು ಮುಖ್ಯ. ಅಧ್ಯಯನ ಸಮಯವನ್ನು ಕಟ್ಟುನಿಟ್ಟಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪರಿಸರದಲ್ಲಿ ಆಕ್ಸಿಜನ್ ಪ್ರಮಾಣ ಹೆಚ್ಚಿಸಬೇಕು ಅದಕ್ಕಾಗಿ ಈಗಿಂದಿಗಲೇ ಗಿಡ ನಡುವ ಕಾಯಕಕ್ಕೆ ವೇಗ ನೀಡಿ ಎಂದು ಪಾಂಡೇಶ್ವರದ ಯೋಗ ಗುರುಕುಲದ ಮುಖ್ಯಸ್ಥ ಡಾ. ವಿದ್ವಾನ್ ವಿಜಯ ಮಂಜರ್ ಕರೆ ನೀಡಿದರು. ಅವರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಪಾಂಡೇಶ್ವರ ಇವರ ಸಂಯೋಜನೆಯಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ, ಗೀತಾನಂದ ಫೌಂಡೇಶನ್ ಮಣೂರು, ಅನ್ನಪೂರ್ಣ ನರ್ಸರಿ ಪೇತ್ರಿ, ಸಮುದ್ಯತಾ ಗ್ರೂಪ್ಸ್ ಕೋಟ, ಸುವರ್ಣ ಎಂಟರ್ಪ್ರೈಸ್ ಬ್ರಹ್ಮಾವರ ಇವರ ಸಹಭಾಗಿತ್ವದಡಿ 263ನೇ ಭಾನುವಾರ ಪರಿಸರಸ್ನೇಹಿ ಹಸಿರು ಜೀವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕೋವಿಡ್ ಸಂದರ್ಭದಲ್ಲಿ ಕೃತಕ ಆಕ್ಸಿಜನ್ ತೆಗೆದುಕೊಂಡ ದಿನಗಳನ್ನು ನೆನಪಿಸಿದ ಅವರು ಪಂಚವರ್ಣ ಸಂಘಟನೆಯವರು ಪ್ರಕೃತಿಗಾಗಿ ಪ್ರಜ್ವಲಿಸುವ ದೀಪದಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಇಂಥಹ ಸಂಘಟನೆಗಳಿಗೆ ನಮ್ಮದೊಂದು ಸೆಲ್ಯೂಟ್ ನೀಡಬೇಕಾಗಿದೆ. ಪರಿಸರಕ್ಕೆ ಪೂರಕವಾದ ಅಂಶಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಂಡರೆ ಪ್ರಕೃತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಯಲ್ಲಿ ಹಟ್ಟಿಅಂಗಡಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಗುರುಪೂರ್ಣಿಮೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ನಮ್ಮ ಶಾಲೆಯ ಸಂಸ್ಕೃತ ಶಿಕ್ಷಕರಾದ ರಾಮಕೃಷ್ಣ ಉಡುಪರವರು ಗುರುಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗುರುಪೂರ್ಣಿಮೆಯ ಹಿನ್ನೆಲೆ ಹಾಗೂ ಗುರುವಿನ ಮಹತ್ವದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು. ನಂತರ ಶಾಲಾ ಶಿಕ್ಷಕಿಯರು ಗುರುವಿಗೆ ಗೌರವ ಸಲ್ಲಿಸುವ ಹಾಡನ್ನು ಹಾಡಿದರು. ಶಂಕರಾಚಾರ್ಯ ವಿರಚಿತ ಗುರ್ವಷ್ಟಕವನ್ನು ವಿದ್ಯಾರ್ಥಿಗಳಿಗೆ ಕೇಳಿಸಲಾಯಿತು. ಶಾಲಾ ಮುಖ್ಯೋಪಾಧ್ಯಾನಿಯಾದ ಸುಜಾತಾ ಸದಾರಾಮ, ಶಿಕ್ಷಕ ವೃಂದದವರು ಹಾಗೂ ಇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಯಣ: ಗುರು ಎಂದರೆ ವ್ಯಕ್ತಿಯಲ್ಲ ಅದೊಂದು ಶಕ್ತಿ. ಗುರು ಶಿಷ್ಯರ ನಡುವೆ ಇರುವ ಪವಿತ್ರ ಬಾಂಧವ್ಯದ ಪ್ರತೀಕವಾದ ಗುರುಪೂರ್ಣಿಮೆ ದಿನವನ್ನು ಮದರ್ ತೆರೆಸಾ ಮೆಮೋರಿಯಲ್ ಶಾಲಾ ವಿಭಾಗದಲ್ಲಿ ಇತ್ತೀಚಿಗೆ ಆಚರಿಸಲಾಯಿತು . ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಗುರುವಿನ ಮೇಲೆ ಇರುವ ಭಕ್ತಿ ಹಾಗೂ ಗುರು ಶಿಷ್ಯರ ನಡುವಿನ ಬಾಂಧವ್ಯವನ್ನು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಾದ ಪ್ರಹಸನ , ಭಾಷಣ ನೃತ್ಯ ಹಾಗೂ ಸಂಗೀತದ ಮೂಲಕ ತಿಳಿಸಿದರು. ಗುರುಗಳ ಆಶೀರ್ವಾದವನ್ನು ಪಡೆದ ವಿದ್ಯಾರ್ಥಿಗಳಲ್ಲಿ ವಿದ್ಯೆಯ ಜೊತೆಗಿರುವ ಸಂಸ್ಕಾರವನ್ನು ಗುರುತಿಸಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯಿನಿ ಮಮತಾ ಪೂಜಾರಿ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಗುರುಪೂರ್ಣಿಮೆಯ ಮಹತ್ವವನ್ನು ತಿಳಿಸಿದರು. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಗುರುವಿನ ಮಹತ್ವವನ್ನು ಸಾರುವ ಮೂಲಕ ಗುರು ಪೂರ್ಣಿಮಾ ಕಾರ್ಯಕ್ರಮವು ಅರ್ಥ ಪೂರ್ಣ ವಾಗಿ ನೆರವೇರಿತು. ಈ ಸಂಭ್ರಮಾಚರಣೆಯಲ್ಲಿ ಆಡಳಿತ ಮಂಡಳಿಯವರು ಶಿಕ್ಷಕರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Read More