Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದ ‘ನ್ಯಾಷನಲ್ ಇ ಸ್ಕಾಲರ್‌ಶಿಪ್’ ಯೋಜನೆಯಡಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ವೆಬ್‌ಸೈಟ್: www.disabilityaffairs.gov.in ಅಥವಾ www.scholarships.gov.in ನಲ್ಲಿ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಿ-ಮೆಟ್ರಿಕ್ (9ನೇ ಮತ್ತು 10ನೇ ತರಗತಿ) ವಿದ್ಯಾರ್ಥಿಗಳು ಆಗಸ್ಟ್ 31, ಪೋಸ್ಟ್ ಮೆಟ್ರಿಕ್ (ಪ್ರಥಮ ಪಿ.ಯು.ಸಿ.ಯಿಂದ ಸ್ನಾತಕೋತ್ತರ ಪದವಿಯವರೆಗೆ) ಹಾಗೂ ಟಾಪ್ ಕ್ಲಾಸ್‌ಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ, ಸಲ್ಲಿಸಿದ ಅರ್ಜಿಯ ಒಂದು ಪ್ರತಿಯನ್ನು ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಉಡುಪಿ ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಸಂಪರ್ಕಿಸಬಹುದಾಗಿದೆ ಎಂದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಉಡುಪಿ ಜಿಲ್ಲೆ ಇವರ ವತಿಯಿಂದ ಸರ್ಕಾರದ ಯೋಜನೆಗಳನ್ನು ಪ್ರಚುರ ಪಡಿಸುವ ಉದ್ದೇಶಕ್ಕಾಗಿ ಬೀದಿನಾಟಕ ಮತ್ತು ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಅಧೀನ ಕಚೇರಿಗಳ ಮೂಲಕ ಪ್ರಸಕ್ತ ಸಾಲಿನಲ್ಲಿ ಬೀದಿನಾಟಕ ಮತ್ತು ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಅನುಕೂಲವಾಗುವಂತೆ ಜಿಲ್ಲೆಯ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾತಂಡಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಪ್ರತಿ ಬೀದಿನಾಟಕ ತಂಡದಲ್ಲಿ 8 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಠ ವರ್ಗಕ್ಕೆ ಸೇರಿದ ಕಲಾವಿದರನ್ನು ಒಳಗೊಂಡಿರಬೇಕು. ಪ್ರತಿ ಜಾನಪದ ಸಂಗೀತ ಕಲಾ ತಂಡದಲ್ಲಿ 3 ಜನ ಕಲಾವಿದರಿದ್ದು, ಅದರಲ್ಲಿ ಕಡ್ಡಾಯವಾಗಿ ಒಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಠ ವರ್ಗಕ್ಕೆ ಸೇರಿದ ಕಲಾವಿದರು ಇರುವುದು ಕಡ್ಡಾಯವಾಗಿದ್ದು, ಅರ್ಜಿಯ ಜೊತೆಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಕಲಾವಿದರುಗಳನ್ನು ಆಯ್ಕೆ ಮಾಡುವಾಗ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸವಿತಾ ಸಮಾಜದ ಸಾಮಾಜಿಕ ಕಾರ್ಯಗಳು ಜನಸಾಮಾನ್ಯರನ್ನು ಅತಿ ಹತ್ತಿರದಲ್ಲಿ ತಲುಪುತ್ತಿದೆ. ಇದೀಗ ಸಮಾಜ ಅನಾಥಾಶ್ರಮಗಳ ನೆರವಿಗೆ ಧಾವಿಸಿರುವುದು ಶ್ರೇಷ್ಠತೆಯನ್ನು ಪಡೆದುಕೊಂಡಿದೆ ಎಂದು ಉಡುಪಿ ಜಿಲ್ಲಾ ಸವಿತಾ ಸಮಾಜ ರಾಜ್ಯ ಪ್ರತಿನಿಧಿ ಗೋವಿಂದ ಭಂಡಾರಿ ಬನ್ನಂಜೆ ಹೇಳಿದರು. ಅವರು ಮಂಗಳವಾರ ಕೋಟ ವಲಯ ಸವಿತಾ ಸಮಾಜ ಕೋಟ ಇವರ ಸಾರಥ್ಯದಲ್ಲಿ ಹೊಸಬದುಕು ಆಶ್ರಮ ತೋಡ್ಕಟ್ಟು-ಸಾಲಿಗ್ರಾಮ ಇಲ್ಲಿನ ಆಶ್ರಮ ನಿವಾಸಿಗಳ ಸವಿತಾ ಸೇವಾ ಸಿಂಚನ -2025 ಸಂಘಟನೆಯ ಜೊತೆಗೆ ಬಾಂಧವ್ಯದ ಸಿಂಚನ ಎನ್ನುವ ಶೀರ್ಷಿಕೆಯಡಿ ನಡೆದ ಕ್ಷೌರ ಸೇವೆ ಕಾರ್ಯಕ್ರಮದಲ್ಲಿ ಮಾತನಾಡಿದರು. ತಮ್ಮ ವೃತ್ತಿ ಕಾಯಕದ ಮೂಲಕ ಸಮಾಜ ಸೇವೆಯನ್ನು ಮೈಗೂಡಿಸಿಕೊಂಡ ಕೋಟ ವಲಯ ಸವಿತ ಸಮಾಜದ ಕಾರ್ಯ ಅತ್ಯಂತ ಪ್ರಶಂಸನೀಯವಾದದ್ದು. ಇಂಥಹ ಒಗ್ಗಟ್ಟು ನಮ್ಮ ಸಮಾಜದ ಉನ್ನತ್ತಿಗೆ ಪ್ರೇರಕವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಸವಿತಾ ಸಮಾಜ ಅಧ್ಯಕ್ಷ ರಾಜು ಸಿ. ಭಂಡಾರಿ ಕಿನ್ನಿಮೂಲ್ಕಿ ಆಶ್ರಮದ ನಿವಾಸಿಗಳಿಗೆ ಕ್ಷೌರಿಕ ಕಾರ್ಯದ ಮೂಲಕ ಉದ್ಘಾಟಿಸಿ ಶುಭ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷೆಯಲ್ಲಿ ಆಳ್ವಾಸ್‌ನ 20 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಪರೀಕ್ಷೆಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಶೇಕಡಾ 13.22 ಫಲಿತಾಂಶ ಬಂದಿದ್ದರೆ, ಆಳ್ವಾಸ್ ಪದವಿ ಕಾಲೇಜು ಗ್ರೂಪ್ -01 ಮತ್ತು ಗ್ರೂಪ್-02 ಸೇರಿದಂತೆ ಒಟ್ಟು 20 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡಾ 50 ಫಲಿತಾಂಶ ದಾಖಲಿಸಿದ್ದಾರೆ. ಕಾಲೇಜಿನ ಬಿ.ಕಾಂ. ವಿದ್ಯಾರ್ಥಿಗಳಾದ ರ‍್ಯನ್ ಕಾರ್ಯಪ್ಪ (401), ಸ್ಮಿತಾ (397), ಆಕಾಶ್ ಚಂದ್ರಕಾAತ್ ಹೆಗ್ಡೆ (365) ಸುಮಂತ್ (345), ದರ್ಶನ್ ಪೂಜಾರಿ (340), ಶಿವಪ್ರಸಾದ್ (316), ಕನ್ಯಾ ಪ್ರಭು (313), ಶಾನ್ ಪಿಂಟೋ(311), ಮೋನಿಷಾ ಕುಂದರ್(310) ಅನ್ವೇಶ್ ಕುಂದರ್ (308), ಅಶ್ವಥ್ (305), ತರುಣ್ ಕೆ. (306), ಶ್ರೇಯಸ್ ಶೆಟ್ಟಿಗಾರ್ (306), ಪುನೀತ್ ಎಸ್. (305), ವೈಷ್ಣವಿ(300), ದೀಕ್ಷಾ(300) ಮತ್ತು ಪ್ರತೀಕ್ಷಾ(300) ಆಕಾಶ್ ಜೆ ಭಟ್ (300) ಆಶೆಲ್‌ಡಿ’ಸೋಜಾ (300), ಮತ್ತು ಜ್ಯೋತಿ(300) ಅಂಕ ಪಡೆದು ಉತ್ತೀರ್ಣರಾಗಿದ್ದಾರೆ. ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಎಲ್‌ಕೆಜಿ ವಿಭಾಗದಲ್ಲಿ ‘ಬೆಂಕಿ ಬಳಸದೆ ಅಡುಗೆ’ಚಟುವಟಿಕೆಯನ್ನು ನಡೆಸಲಾಯಿತು. ಎಲ್ಲಾ ಪುಟಾಣಿಗಳು ಈ ಚಟುವಟಿಕೆಯಲ್ಲಿ ಸಂತಸದಿಂದ ಭಾಗವಹಿಸುವುದರ ಜೊತೆಗೆ ಸುಲಭವಾಗಿ ಬೆಂಕಿ ಬಳಸದೆ ಅಡುಗೆ ತಯಾರಿಸುವುದರ ಕುರಿತು ಜ್ಞಾನವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿ ಸುಜಾತಾ ಸದಾರಾಮ ಹಾಗೂ ಕೆಜಿ ವಿಭಾಗದ ಶಿಕ್ಷಕಿಯರು ಉಪಸ್ಥಿತಿಯಲ್ಲಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ, ಬ್ರಹ್ಮಾವರ ಮತ್ತು ಕಾಪು ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ  ಹಾಗೂ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಸಂಬಂಧಪಟ್ಟ ಶಾಲಾ ಮುಖ್ಯೋಪಾಧ್ಯಾಯರುಗಳು ವಿದ್ಯಾರ್ಥಿಗಳ ದಾಖಲೆಗಳೊಂದಿಗೆ ನೇರವಾಗಿ ಇಲಾಖೆಯ ವೆಬ್‌ಸೈಟ್ http://ssp.postmatric.karnataka.gov.in ಅಥವಾ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ಪ್ರತಿ ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ವಿದ್ಯಾರ್ಥಿಯ ಆಧಾರ್ ಸಂಖ್ಯೆ ಎನ್.ಪಿ.ಸಿ.ಐ ಸೀಡಿಂಗ್ ಮಾಡುವುದು ಕಡ್ಡಾಯವಾಗಿರುತ್ತದೆ. ಪರಿಶಿಷ್ಟ ಪಂಗಡದ 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳು ಎನ್.ಎಸ್.ಪಿ ಓ.ಟಿ.ಆರ್ ರಿಜಿಸ್ಟ್ರೇಷನ್ ಮಾಡುವುದು ಕಡ್ಡಾಯವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2528884, ಮೊ.ನಂ: 9480843209 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಅತ್ಯುನ್ನತ ಸೌಕರ್ಯ ಒದಗಿಸಲಾಗುತ್ತಿದೆ ಹಾಗೂ ಉತ್ತಮ ಕಲಿಕಾ ವಾತಾವರಣ ನಿರ್ಮಿಸಲಾಗಿದೆ. ಇದರ ಹೊರತಾಗಿಯೂ ಕೆಲವು ವಿದ್ಯಾರ್ಥಿಗಳು ಅಶಿಸ್ತಿನಿಂದ ವರ್ತಿಸಿರುವ ಘಟನೆಗಳು ನಡೆದಿವೆ. ಇದರಿಂದ ಇತರ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಹಾಗೂ ಕಲಿಕಾ ವಾತಾವರಣದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ. ಹಾಗಾಗಿ ಇಂತಹ ಯಾವುದೇ ರೀತಿಯ ಅಶಿಸ್ತಿನ ನಡವಳಿಕೆಗೆ ವಾರ್ಡನ್ ಗಳು ಅವಕಾಶ ನೀಡಬಾರದು. ಅಶಿಸ್ತಿನ ವರ್ತನೆಯ ಘಟನೆಗಳು ಘಟಿಸಿದಾಗ ಅಥವಾ ಅಂತಹ ಸನ್ನಿವೇಶ ಘಟಿಸುವ ಸೂಚನೆ ಸಿಕ್ಕಿದ್ದಲ್ಲಿ ಕೂಡಲೇ ಸಮಿತಿಯ ಗಮನಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಶಾಸಕ ಗುರುರಾಜ್ ಗಂಟಿಹೊಳೆ ಸೂಚನೆ‌ ನೀಡಿದರು. ಅವರು ಬೈಂದೂರು ಹಾಗೂ ಕುಂದಾಪುರ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 2025-26 ನೇ ಸಾಲಿನಲ್ಲಿ ಹೊಸ ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಹಾಸ್ಟೆಲ್ ನಿರ್ವಹಣೆ ಮತ್ತು ಕುಂದು ಕೊರತೆಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದದರು. ಕಳೆದ ಎರಡು ವರ್ಷಗಳಿಂದ ಪೋಸ್ಟ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿಜಯ ಕರ್ನಾಟಕ ಚಿತ್ರಕಲಾ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಾರ್ಥನಾ ಜಿ. 10 A,  ಋತ್ವಿಕ್  ವಿ. ಪೂಜಾರಿ 10B ಹಾಗೂ ಶ್ರಾವಣಿ ಎಮ್. ನಾಯಕ್ (9A) ಜಿಲ್ಲಾ ಮಟ್ಟಕ್ಕೆ  ಆಯ್ಕೆಯಾಗಿದ್ದಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು 2025ರ ಮೇ ತಿಂಗಳಲ್ಲಿ ಏರ್ಪಡಿಸಿದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ, ಮಂಗಳೂರಿನ ’ಕಾಮತ್ ಎಂಡ್ ರಾವ್ ಚಾರ್ಟರ್ಡ್ ಅಕೌಂಟೆಂಟ್ಸ್’ ಸಂಸ್ಥೆಯಲ್ಲಿ ಆರ್ಟಿಕಲ್‌ಶಿಫ್ ನಡೆಸಿದ ಅರವಿಂದ ಶೆಣೈ ತೇರ್ಗಡೆ ಹೊಂದಿರುತ್ತಾರೆ. ಅವರು ಕೆನರಾ ಬ್ಯಾಂಕ್ ಉದ್ಯೋಗಿ ಅಶೋಕ ಶೆಣೈ ಮತ್ತು ದಿ| ಅನಿತಾ ಶೆಣೈ ದಂಪತಿಯ ಪುತ್ರರಾಗಿದ್ದು, ಈಗ ಮಂಗಳೂರಲ್ಲಿ ನೆಲೆಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಒಂದು ಅಂತಾರಾಷ್ಟ್ರೀಯ ಸೇವಾ ಸಂಸ್ಥೆಯಾಗಿದ್ದು, ವಿಶ್ವದಾದ್ಯಂತ ಸೇವೆ ಸಲ್ಲಿಸುತ್ತಿವೆ ಮತ್ತು ಸಮಾಜಕ್ಕೆ ಅಮೂಲ್ಯವಾದ ಕೊಡುಗೆಗಳನ್ನು ನೀಡುತ್ತಿವೆ. ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರುವುದು ಹಾಗೂ ಸ್ಥಳೀಯ ಅಗತ್ಯಗಳನ್ನು ಪೂರೈಸಲು ಸಹಾಯ ಮಾಡುವುದು ಮತ್ತು ಜೀವನವನ್ನು ಸುಧಾರಿಸುವುದು ರೋಟರಿ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದು ರೋಟರಿ ಜಿಲ್ಲೆ 3182 ವಲಯ-9ರ ಮಾಜಿ ಅಸಿಸ್ಟೆಂಟ್ ಗವರ್ನರ್ ನವೀನ್ ಅಮೀನ್ ಶಂಕರಪುರ ಹೇಳಿದರು. ಅವರು ಬಸ್ರೂರು ಆನಗಳ್ಳಿಯ ಆದಿತ್ಯ ಶೋರ್ ರೆಸಾರ್ಟ್‌ನಲ್ಲಿ ರೋಟರಿ ಕ್ಲಬ್ ಗಂಗೊಳ್ಳಿಯ 2025-26ನೇ ಸಾಲಿನ ಪದಾಧಿಕಾರಿಗಳ ಪದ ಪ್ರದಾನ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು. ರೋಟರಿ ಜಿಲ್ಲೆ 3182 ವಲಯ-1ರ ಅಸಿಸ್ಟೆಂಟ್ ಗವರ್ನರ್ ಐ. ನಾರಾಯಣ ಶುಭ ಹಾರೈಸಿದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ತಾಂಡೇಲ ಅವರು ನೂತನ ಅಧ್ಯಕ್ಷ ಕೃಷ್ಣ ಪೂಜಾರಿ ಅವರಿಗೆ ಹಾಗೂ ಕಾರ್ಯದರ್ಶಿ ಮಾಲಾಶ್ರೀ ಖಾರ್ವಿ ಅವರು ನೂತನ ಕಾರ್ಯದರ್ಶಿ ರಾಮನಾಥ ಚಿತ್ತಾಲ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ನೂತನ ಅಧ್ಯಕ್ಷ…

Read More