ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಅಂಕದಕಟ್ಟೆಯಲ್ಲಿ ತಡರಾತ್ರಿ ಚಿರತೆ ಓಡಾಟ ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿದ್ದು ಜನರು ಆತಂಕಕ್ಕೆ ಒಳಗಾಗಿದ್ದಾರೆ. ಅಂಕದಕಟ್ಟೆಯ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲೇ ಜನವಸತಿ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಇಲ್ಲಿನ ನಿವಾಸಿ ಡಾ| ಜಾನ್ಸನ್ ಅವರ ಮನೆ ಹಿಂಭಾಗದಲ್ಲಿ ಬುಧವಾರ ರಾತ್ರಿ 12.56ರ ವೇಳೆಗೆ ಚಿರತೆ ನಡೆದಾಡಿದೆ. ಚಿರತೆ ಓಡಾಟದ ದೃಶ್ಯ ಸ್ಥಳೀಯ ಸೈನ್ ಇನ್ ಸೆಕ್ಯೂರಿಟಿ ಸಂಸ್ಥೆಯ ಲೈವ್ ಮಾನಿಟರಿಂಗ್ ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗುತ್ತಿತ್ತು. ಇದನ್ನು ಗಮನಿಸಿದ ಸಂಸ್ಥೆಯ ಸಿಬಂದಿ ತತ್ಕ್ಷಣ ಮನೆಯವರಿಗೆ ಮನೆಯಿಂದ ಹೊರಗೆ ಬರದಂತೆ ಸೂಚಿಸಿದರು. ಬಳಿಕ ಚಿರತೆ ಮರೆಯಾಗಿದೆ. ಎಲ್ಲಿ ಹೋಗಿದೆ ಎನ್ನುವುದು ಗೊತ್ತಾಗಿಲ್ಲ. ಈವರೆಗೆ ಕುಂದಾಪುರದ ಗ್ರಾಮಾಂತರ ಭಾಗಗಳಾದ ತೆಕ್ಕಟ್ಟೆ, ಮೊಳಹಳ್ಳಿ, ಬಡಾಕೆರೆ, ಕೋಟೇಶ್ವರದ ಮಾರ್ಕೋಡು, ಹೊಂಬಾಡಿ ಮಂಡಾಡಿ, ಕಾಳಾವರ, ಹಾರ್ದಳ್ಳಿ ಮಂಡಳ್ಳಿ, ಅಮಾಸೆಬೈಲು, ಕೊರ್ಗಿ, ಜಪ್ತಿ, ಕೊಡ್ಲಾಡಿ, ಆಲೂರು, ಕನ್ನಡಕುದ್ರು ಮೊದಲಾದೆಡೆ ಚಿರತೆ ಕಾಣಿಸಿಕೊಂಡಿತ್ತು. ಎರಡು ಮೂರು ವರ್ಷಗಳಿಂದ ಚಿರತೆ ಓಡಾಟ ಸುದ್ದಿ ಹೆಚ್ಚಾಗುತ್ತಿದ್ದು ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾ.ವಾ) ಸಂಸ್ಥೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ವಿವಿಧ ವಿಷಯಗಳಲ್ಲಿ ಅತಿಥಿ ಉಪನ್ಯಾಸಕರು / ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 16 ಕೊನೆಯ ದಿನ. ಜೂನ್ 26 ರಂದು ಬೆಳಗ್ಗೆ 11 ಗಂಟೆಗೆ ಸಂಸ್ಥೆಯಲ್ಲಿ ಸಂದರ್ಶನ ನಡೆಯಲಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ www.mysore.nic.in ಮತ್ತು www.cavamysore.karnataka.gov.in ಅಥವಾ ದೂ.ಸಂಖ್ಯೆ: 0821-2438931 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ (ನಿ) ದ ವತಿಯಿಂದ ಅನುಷ್ಠಾನಗೊಳಿಸಲಾದ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪಜಾತಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು), ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ನವೀಕರಣ), ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರಸಾಲ ಯೋಜನೆ (ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ ಮತ್ತು ವಿದೇಶಿ ವ್ಯಾಸಾಂಗ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ ಮೂಲಕ ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾಕೇಂದ್ರಗಳಲ್ಲಿ ಹಾಗೂ ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಯಡಿ ವೆಬ್ಸೈಟ್ www.kaushalkar.com ನಲ್ಲಿ ಆನ್ಲೈನ್ ಮೂಲಕ ಜುಲೈ 2 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ (ಶೈಕ್ಷಣಿಕ ಸಾಲ ಯೋಜನೆಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬಾಲಕಾರ್ಮಿಕ ಪದ್ಧತಿಯು ಸಮಾಜದ ಅನಿಷ್ಠ ಪದ್ಧತಿಯಾಗಿದ್ದು, ಅದನ್ನು ತಳ ಮಟ್ಟದಲ್ಲಿ ನಿರ್ಮೂಲನೆ ಮಾಡಿ, ಉಡುಪಿಯನ್ನು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬ ನಾಗರಿಕರು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಬಾಲಕಾರ್ಮಿಕ ಪದ್ಧತಿ ಹಾಗೂ ಬಾಲ್ಯವಿವಾಹದಂತಹ ಅನಿಷ್ಠ ಪದ್ಧತಿಗಳು ಮಕ್ಕಳು ಬಾಲ್ಯಾವ್ಯವಸ್ಥೆಯನ್ನು ಸವಿಯುವುದನ್ನು ಮೊಟಕುಗೊಳಿಸುವುದರ ಜೊತೆಗೆ ಶಿಕ್ಷಣ ವಂಚಿತರಾಗುತ್ತಾರೆ. ಒತ್ತಾಯ ಪೂರ್ವಕವಾಗಿ ಮಕ್ಕಳು ದುಡಿಮೆಗಳಲ್ಲಿ ತೊಡಗಿಕೊಳ್ಳುವುದರಿಂದ ಅವರ ಮಾನಸಿಕ ಹಾಗೂ ದೈಹಿಕ ಬೆಳವಣಿಗೆ ಕುಂಠಿತವಾಗುವುದರ ಜೊತೆಗೆ ಮಗು ಅನೇಕ ಪರಿಣಾಮವನ್ನು ಎದುರಿಸಿ, ಮುಂದೆ ಸಮಾಜಘಾತುಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.12: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 13ರಂದು ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಅವರು ರಜೆ ಘೋಷಿಸಿ ಆದೇಶಿಸಿದ್ದಾರೆ. ಉಳಿದಂತೆ ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಆದರೆ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ ಮತ್ತು ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಟೋಲ್
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಭಯ ತಿಟ್ಟುಗಳ ಮೇರು ಕಲಾವಿದ, ಕಟೀಲು ಮೇಳದಲ್ಲಿ 2 ದಶಕಕ್ಕೂ ಹೆಚ್ಚು ಕಾಲ ತಿರುಗಾಟ ನಡೆಸಿದ್ದ ಕೋಡಿ ಕುಷ್ಟ ಗಾಣಿಗ (78) ಅಲ್ಪಕಾಲ ದ ಅಸೌಖ್ಯದಿಂದ ಜೂ.12ರ ಗುರುವಾರ ಮಧ್ಯಾಹ್ನ ನಿಧನರಾದರು. ಕಟೀಲು ಕ್ಷೇತ್ರ ಮಹಾತ್ಮಿಯ ನಂದಿನಿ ಪಾತ್ರದ ಮೂಲಕ ಜನ ಮನ್ನಣೆ ಪಡೆದ ಇವರು ಶ್ರೀ ದೇವಿ ಮಹಾತ್ಮೆಯ ದೇವಿ ಪಾತ್ರ ಇಂದಿಗೂ ಯಕ್ಷಪ್ರೇಮಿಗಳು ನೆನಪಿಸಿಕೊಳ್ಳುತ್ತಾರೆ. ದೇವಿ, ನಂದಿನಿ, ಸುಭದ್ರೆ, ಮಂಡೋದರಿ, ದ್ರೌಪದಿ, ಕಯಾದು, ಸೀತೆ, ಅಂಬೆ, ದಮಯಂತಿ, ಮಾಯಾ ಪೂತನಿ, ಮಾಯಾ ಶೂರ್ಪನಖಿ, ಚಂದ್ರಮತಿ ಹೀಗೆ ಸ್ತ್ರೀ ಪಾತ್ರದ ನವರಸಗಳಲ್ಲಿಯೂ ನಿಸ್ಸೀಮರಾಗಿದ್ದರು. ಪುರುಷ ವೇಷಗಳಾದ ಪರಶುರಾಮ, ವಿಷ್ಣು, ಕೃಷ್ಣ ಪಾತ್ರಗಳನ್ನು ಮಾಡುತ್ತಿದ್ದರು. ಅವರು ಅಮೃತೇಶ್ವರಿ, ಮಾರಣಕಟ್ಟೆ, ಕಲಾವಿಹಾರ ಮೇಳ, ರಾಜರಾಜೇಶ್ವರೀ ಮೇಳ ಹಾಗೂ ಸುದೀರ್ಘವಾಗಿ ಕಟೀಲು ಮೇಳದಲ್ಲಿ ಒಟ್ಟು ಸುಮಾರು ಮೂರುವರೆ ದಶಕಗಳ ಕಾಲ ತಿರುಗಾಟ ಮಾಡಿದ್ದಾರೆ. ಉಡುಪಿ ಕಲಾರಂಗ ಪ್ರಶಸ್ತಿ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಹಾರಾಡಿ ರಾಮ ಗಾಣಿಗ ಪ್ರಶಸ್ತಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಐರೋಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಮಾಬುಕಳದ ಸಮೀಪ ದೂಳಂಗಡಿ ಎಂಬಲ್ಲಿ ಹರಿಯುವ ನೀರಿಗೆ ತಡೆಯಾಗಿದ್ದ ಕಂಪೌಂಡ್ ತೆರವು ಕಾರ್ಯಚರಣೆ ನಡೆಸಲಾಯಿತು. ದೂಳಂಗಡಿಯ ಸಾವಿತ್ರಿ ಗಾಣಿಗರ ಮನೆಗೆ ಬಾರಿ ಮಳೆಗೆ ನೀರು ನುಗ್ಗಿದ ಪರಿಣಾಮ ಮನೆ ವಠಾರ ನೀರಿನಿಂದ ಆವೃತವಾಗಿದ್ದು ಮನೆಯಾಕೆ ಈ ಬಗ್ಗೆ ಬ್ರಹ್ಮಾವರದ ತಹಶೀಲ್ದಾರ್ ಶ್ರೀಕಾಂತ್ ಎಸ್. ಹೆಗ್ಡೆ ಅವರಿಗೆ ದೂರು ನೀಡಿದ ಹಿನ್ನಲ್ಲೆಯಲ್ಲಿ ಸ್ಥಳಕ್ಕೆ ಕೋಟ ಕಂದಾಯ ನಿರೀಕ್ಷಕ ಮಂಜು ಬಿಲ್ಲವ ಹಾಗೂ ಐರೋಡಿ ಗ್ರಾಮ ಲೆಕ್ಕಿಗ ಚಲುವರಾಜು ಬಾರಿ ಮಳೆಯ ನಡುವೆಯೂ ಪರಿಶೀಲಿಸಿದ್ದು ಸನಿಹದ ಒಂದೇರಡು ಮನೆಯವರು ಸರಾಗವಾಗಿ ಹರಿಯುವ ನೀರಿಗೆ ಕಂಪೌಂಡ್ ಕಟ್ಟಿ ತಡೆಯೊಡ್ಡಿದ್ದರು. ಈ ದಿಸೆಯಲ್ಲಿ ಅಧಿಕಾರಿಗಳ ಸಮ್ಮುಖದಲ್ಲಿ ತೆರವು ಗೊಳಿಸಿ ನೀರು ಸರಗವಾಗಿ ಹರಿದು ಹೋಗುಲು ಅನುವು ಮಾಡಿಕೊಡಲಾಯಿತು. ಈ ಬಗ್ಗೆ ಸ್ಥಳದಲ್ಲಿದ್ದ ಸುತ್ತಮುತ್ತಲಿನ ಮನೆಯವರು ನಿಟ್ಟುಸಿರು ಬೀಡುವಂತ್ತಾಗಿದೆ. ಅಧಿಕಾರಿ ದಿಢೀರ್ ಕಾರ್ಯಾಚರಣೆಗೆ ವ್ಯಾಪಕಪ್ರಶಂಸೆ ವ್ಯಕ್ತವಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಗ್ರಾಮದ ರಥಬೀದಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರವನ್ನು ಶಾಸಕ ಗುರುರಾಜ ಗಂಟಿಹೊಳೆ ಅವರು ಇತ್ತಿಚಿಗೆ ಉದ್ಘಾಟಿಸಿದರು. ಈ ಹಿಂದೆ ಅಂಗನವಾಡಿ ಕೇಂದ್ರ ಸ್ಥಾಪನೆ ಮಾಡಲು ಕಾರಣಿಕರ್ತರಾದ ದಿ. ಚಂದು ಗಾಣಿಗ ಅವರ ಪರವಾಗಿ ಮಗನಾದ ರಾಧಾಕೃಷ್ಣ ಗಾಣಿಗ ಅವರನ್ನು ಹಾಗೂ ಅಂಗನವಾಡಿಯ ಕುಂದು ಕೊರತೆಗಳಿಗೆ ಎಲ್ಲಾ ಕೆಲಸ ಕಾರ್ಯಗಳಿಗೆ ನಿರಂತರ ಶ್ರಮಿಸಿದ ಶ್ರೀ ದುರ್ಗಾ ಫ್ರೆಂಡ್ಸ್ ಸಂಸ್ಥೆಯ ಪರವಾಗಿ ಸಂಸ್ಥೆಯ ಅಧ್ಯಕ್ಷರಾದ ಮಂಜುನಾಥ ದೇವಾಡಿಗ ಹಾಗೂ ಅಂಗನವಾಡಿಯ ಕಾರ್ಯಕರ್ತೆ ಸುಗುಣ ಮತ್ತು ಸಹಾಯಕಿ ಭಾರತಿ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರಥಬೀದಿ ಶಾಲೆಯ ವಿದ್ಯಾರ್ಥಿಗಳಿಗೆ ಶ್ರೀ ದುರ್ಗಾ ಫ್ರೆಂಡ್ಸ್ ಸಂಸ್ಥೆ ಅವರು ನೀಡಿದ ಪುಸ್ತಕ ವನ್ನು ಮಾನ್ಯ ಶಾಸಕರು ಮಕ್ಕಳಿಗೆ ವಿತರಿಸಿದರು ಹಾಗೆ ಅಂಗನವಾಡಿಯ ಕಾರ್ಯಕ್ರಮ ಗಳಿಗೆ ಸಹಕಾರ ನೀಡಿದ ಮಹನೀಯರನ್ನು ಗುರುತಿಸಿ ಸ್ಮರಣಿಕೆ ನೀಡಲಾಯಿತು. ಪುಟಾಣಿಗಳಿಗೆ ಬಹುಮಾನ ನೀಡಲಾಯಿತು. ಈ ಸಂದರ್ಭದಲ್ಲಿ ಉಪ್ಪುಂದ ಗ್ರಾಮ ಪಂಚಾಯತ್ ಪಂಚಾಯತ್ ಅಧ್ಯಕ್ಷರಾದ ಮೋಹನಚಂದ್ರ, ಬೈಂದೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಸವಿತಾ ಸಮಾಜ ಮತ್ತು ಅದರ ಉಪಜಾತಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಹಾಗೂ ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯ ಸೌಲಭ್ಯ ಪಡೆಯಲು ವೆಬ್ಸೈಟ್ https://www.kaushalkar.com/ ನಲ್ಲಿ ಆನ್ಲೈನ್ ಮೂಲಕ ಜೂನ್ 30 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬೆಳಗಾವಿ ಹಾಗೂ ಮೈಸೂರು ಕಂದಾಯ ವಿಭಾಗಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ ವಸತಿಯುತ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿ.ಎಸ್.ಐ) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಸೇವಾಸಿಂಧು ಪೋರ್ಟಲ್ http://sevasindhu.karnataka.gov.in/sevasindhu/DepartmentServices ಅಥವಾ http://dom.karnataka.govt.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 15 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂ.ಸಂಖ್ಯೆ : 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.
