ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ಗೃಹರಕ್ಷಕದಳ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವ 19 ರಿಂದ 45 ವರ್ಷದ ಒಳಗಿನ, ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಜಿಲ್ಲಾ ವ್ಯಾಪ್ತಿಯ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 14 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಗ್ನಿಶಾಮಕ ಕಚೇರಿ ಆವರಣದಲ್ಲಿರುವ ಜಿಲ್ಲಾ ಗೃಹರಕ್ಷಕದಳ ಕಚೇರಿ ದೂರವಾಣಿ ಸಂಖ್ಯೆ 0820-2533650 ಅಥವಾ ತಾಲೂಕು ಘಟಕಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಗೃಹರಕ್ಷಕದಳದ ಜಿಲ್ಲಾ ಕಮಾಂಡೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಜ್ಯ ಎನ್.ಎಸ್. ಎಸ್ ಕೋಶ ಹಾಗೂ ಯೇನಪೋಯ ವಿಶ್ವ ವಿದ್ಯಾಲಯದ ಸಹಯೋಗದೊಂದಿಗೆ ಮಂಗಳೂರು ದೇರಳಕಟ್ಟೆಯ ಯೇನಪೋಯ ವಿಶ್ವವಿದ್ಯಾಲಯ ದೀಮ್ದ್ ಕ್ಯಾಂಪಸ್ ನಲ್ಲಿ ಜೂನ್ 4 ರಿಂದ 7 ರವರೆಗೆ ನಡೆಯುವ ಜಾಗತಿಕ ಯುವಶೃಂಗ ಸಭೆಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಧನ್ಯ ಯು ಆಯ್ಕೆಯಾಗಿದ್ದಾರೆ. ಈಕೆ ಗುಜ್ಜಾಡಿ ನಾಯಕವಾಡಿಯ ಉದಯ್ ಎಮ್. ಪೂಜಾರಿ ಮತ್ತು ಶಾರದಾ ಯು. ಪೂಜಾರಿ ದಂಪತಿ ಪುತ್ರಿ .
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಗಣಹೋಮ ಮತ್ತು ವಿದ್ಯಾ ಸರಸ್ವತಿ ಹೋಮದೊಂದಿಗೆ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವು ಅತ್ಯಂತ ವಿಜ್ರಂಭಣೆಯಿಂದ ನೆರವೇರಿತು. ಪುಟಾಣಿ ಮಕ್ಕಳನ್ನು ಭವ್ಯ ಮೆರವಣಿಗೆಯಿಂದ ಶಾಲೆಗೆ ಬರಮಾಡಿಕೊಳ್ಳಲಾಯಿತು. ಶಾಲಾ ಪ್ರಾರಂಭೋತ್ಸವವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿರುವ ಗಣೇಶ್ ಮೊಗವೀರ ಅವರು ಮಾತನಾಡಿ, ಶಿಕ್ಷಣ ಕೇವಲ ನಾಲ್ಕು ಗೋಡೆಯ ನಡುವಿನ ಪಾಠ ಪ್ರವಚನಕ್ಕೆ ಸೀಮಿತವಾಗಿರದೆ ಮಕ್ಕಳನ್ನು ಕ್ರೀಡೆ ಸಾಂಸ್ಕೃತಿಕ ರಂಗದಲ್ಲಿಯೂ ಸಜ್ಜುಗೊಳಿಸುವ ಪಣತೊಟ್ಟಿದ್ದೇವೆ, ವಿದ್ಯಾರ್ಥಿಗಳಿಗೆ ಬೇಕಾದ ಇಂಗ್ಲೀಷ್ ಸಂವಹನ ಕೌಶಲ್ಯವನ್ನು ಉತ್ತಮಗೊಳಿಸಲು ಬೇಕಾದ ತರಬೇತಿಯನ್ನು ನಮ್ಮ ಶಾಲೆಯಲ್ಲಿ ನೀಡಲಾಗುತ್ತಿದೆ ಎಂದರು. ಅತಿಥಿಯಾದ ವಿಷ್ಣುಮೂರ್ತಿ ಐತಾಳ್ ಅವರು “ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ” ಎಂದು ಹೇಳುವ ಮೂಲಕ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಸನ್ನಡತೆಯನ್ನು ಬೆಳೆಸಿಕೊಂಡು ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳಿ ಎಂದರು. ಮುಖ್ಯ ಶಿಕ್ಷಕಿಯಾಗಿರುವ ದೀಪಿಕಾ ಆಚಾರ್ಯ ಅವರು ಎಲ್ಲರನ್ನು ಸ್ವಾಗತಿಸುತ್ತಾ, ವಿದ್ಯಾರ್ಥಿಗಳು ಹಿಂದಿನ ವರ್ಷ ಸಾಧಿಸಲಾಗದ ವಿಷಯಗಳನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ದಾನಿಗಳು ಮಕ್ಕಳಿಗೆ ಪುಸ್ತಕ ಮೊದಲಾದ ಶೈಕ್ಷಣಿಕ ಪೂರಕ ವಸ್ತುಗಳನ್ನು ಉಚಿತವಾಗಿ ನೀಡುತ್ತಿದ್ದಾರೆ. ದಾನಿಗಳ ಉದ್ದೇಶ ಈಡೇರಬೇಕಾದರೆ ವಿದ್ಯಾರ್ಥಿಗಳು ಅದರ ಸದುಪಯೋಗ ಪಡೆದುಕೊಂಡು ಉತ್ತಮ ಶೈಕ್ಷಣಿಕ ಸಾಧನೆ ಮಾಡಬೇಕು. ಉಚಿತವಾಗಿ ನೀಡಿದ ಶೈಕ್ಷಣಿಕ ಸಾಮಾಗ್ರಿಗಳ ಬಗ್ಗೆ ತಾತ್ಸಾರ ಮನೋಭಾವ ಬೆಳೆಸಿಕೊಳ್ಳಬಾರದು ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಹೇಳಿದರು. ಅವರು ಗಂಗೊಳ್ಳಿ ಲೈಟ್ಹೌಸ್ನ ಶ್ರೀ ಜಟ್ಟಿಗೇಶ್ವರ ಯೂತ್ ಕ್ಲಬ್ ವತಿಯಿಂದ ಗಂಗೊಳ್ಳಿಯ ಶ್ರೀ ರಾಮ ಮಂದಿರದಲ್ಲಿ ನಡೆದ 22ನೇ ವರ್ಷದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಂಗಳೂರಿನ ಉದ್ಯಮಿ ಶರತ್ ಕುಮಾರ್ ರಾವ್ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿ ಶುಭ ಹಾರೈಸಿದರು. ಇದೇ ಸಂದರ್ಭ ಎಸ್ಎಸ್ಎಲ್ಎಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2ನೇ ರ್ಯಾಂಕ್ ಪಡೆದ ಸುಶ್ಮಿತಾ ಎಸ್. ಗಾಣಿಗ ಅವರನ್ನು ಸನ್ಮಾನಿಸಲಾಯಿತು. ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಯಕ್ಷಧ್ರುವ ಪಟ್ಲ ಫೌಂಡೇಶನ್ ರಿ. ಇದರ ದಶಮ ಸಂಭ್ರಮದ ಪ್ರಯುಕ್ತ ಮಂಗಳೂರಿನ ಅಡ್ಯಾರ್ ಗಾರ್ಡ್ನಲ್ಲಿ 15 ವರ್ಷದಿಂದ 25 ವರ್ಷದೊಳಗಿನ ಯುವ ಪ್ರತಿಭೆಗಳಿಗಾಗಿ ಏರ್ಪಡಿಸಿದ ಯಕ್ಷಗಾನ ಸ್ಪರ್ಧೆಯಲ್ಲಿ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದ ತಂಡವು ಪ್ರಥಮ ಬಹುಮಾನವನ್ನು ಪಡೆಯಿತು. ಬೊಟ್ಟಿಕೆರೆ ಪುರುಷೋತ್ತಮ ಪೂಂಜರು ವಿರಚಿಸಿದ, ಶೇಖರ ಶೆಟ್ಟಿಗಾರ್ ಮತ್ತು ಆದಿತ್ಯ ಅಂಬಲಪಾಡಿ ನಿರ್ದೇಶನದಲ್ಲಿ ’ಸತಿ ಉಲೂಪಿʼಪ್ರಸಂಗ ಪ್ರದರ್ಶನವನ್ನು ನೀಡಿ, ಒಂದು ಲಕ್ಷ ರೂಪಾಯಿ ಹಾಗೂ ಸ್ಮರಣಿಕೆಯನ್ನು ಒಳಗೊಂಡ ಪ್ರಥಮ ಬಹುಮಾನವನ್ನು ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರವು ಪಡೆಯಿತು. ಸಮಗ್ರ ವೈಯಕ್ತಿಕ ವಿಭಾಗದಲ್ಲಿ ಶಬರೀಶ್ ಆಚಾರ್ಯ, ಆಹಾರ್ಯ ವಿಭಾಗದಲ್ಲಿ ಮುಖೇಶ್ ದೇವಧರ್, ಲಿಖಿತ ವಿಭಾಗಲ್ಲಿ ಪ್ರಜ್ವಲ್ ಬಿ. ಶೆಟ್ಟಿ ಬಹುಮಾನಗಳನ್ನು ಪಡೆದರು. ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರವು ಕಳೆದ ಎರಡು ದಶಕಗಳಿಂದ ಯಕ್ಷಗಾನದ ವಿವಿಧ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ನಮ್ಮ ನಾಡಿನ ವಿವಿಧ ಯಕ್ಷಗಾನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಸಿಎ / ಸಿಎಸ್ ಮಾಹಿತಿ ಕಾರ್ಯಕ್ರಮವನ್ನು ಸೋಮವಾರದಂದು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳಿಗೆ ಚಾರ್ಟರ್ಡ್ ಅಕೌಂಟೆಂಟ್ ಎಂದರೇನು?, ಸಿಎ / ಸಿಎಸ್ ಪಠ್ಯ ಕ್ರಮ, ಶೈಕ್ಷಣಿಕ ಅರ್ಹತೆ, ವಿವಿಧ ಹಂತಗಳ ಬಗ್ಗೆ ಹಾಗೆಯೇ ಸಿಎ ಎನ್ನುವುದು ಕಠಿಣವಲ್ಲ, ಅದನ್ನು ಸವಾಲಾಗಿ ಸ್ವೀಕರಿಸಿದರೆ ಮೊದಲ ಪ್ರಯತ್ನದಲ್ಲಿಯೇ ಯಶಸ್ಸು ಸಾಧಿಸಬಹುದು ಎಂದು ಪ್ರೂಫ್ ಆಲ್ಬನ್ ಆಂಟನಿ ಪೆರೇರಾ ಸಂಪೂರ್ಣವಾಗಿ ಮಾಹಿತಿ ನೀಡಿದರು. ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಅರ್ಥ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಲತಾ ಪೈ ಉಪಸ್ಥಿತರಿದ್ದರು. ಸಂಖ್ಯಾ ಶಾಸ್ತ್ರ ಉಪನ್ಯಾಸಕಿ ವಿದ್ಯಾಶ್ರೀ ಅತಿಥಿಯನ್ನು ಪರಿಚಯಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ನಿಧಿ ನಿರೂಪಿಸಿ, ವಾಣಿಜ್ಯ ಶಾಸ್ತ್ರ ಉಪನ್ಯಾಸಕ ನಾಗೇಶ್ ಸ್ವಾಗತಿಸಿ, ಅರ್ಥಶಾಸ್ತ್ರ ಉಪನ್ಯಾಸಕಿ ಶಿವ ರಂಜನಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ನಗರಸಭೆಯ ನಗರೋತ್ಥಾನ 4ನೇ ಹಂತದ ಅನುದಾನದಡಿ ಶೇ. 24.10, ಶೇ.7.25 ಮತ್ತು ಶೇ.5 ಕ್ಕೆ ಮಂಜೂರಾದ ಮೊತ್ತದಲ್ಲಿ ಸರ್ಕಾರದ ಸುತ್ತೋಲೆಯಲ್ಲಿ ಸೂಚಿಸಿರುವಂತೆ ವ್ಯಕ್ತಿ ಸಂಬಂಧಿತ ಸೌಲಭ್ಯಗಳ ಅಡಿಯಲ್ಲಿ ಹೊಲಿಗೆ ಯಂತ್ರ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಾತಿ ಮತ್ತು ಆದಾಯ ದೃಢಪತ್ರ, ಪ್ರಸಕ್ತ ಸಾಲಿನ ಆಸ್ತಿತೆರಿಗೆ ಪಾವತಿ ರಶೀದಿ, ಪಡಿತರ ಚೀಟಿ ಪ್ರತಿ, ಆಧಾರ್ಕಾರ್ಡ್ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಲಿಗ್ರಾಮದ ಚಿತ್ರಪಾಡಿಯ ಕಾರ್ತಟ್ಟು ಶ್ರೀ ಅಘೋರೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಧಾರ್ಮಿಕ ಹಾಗೂ ಸಮಾಜ ಸೇವಕ, ಬೆಂಗಳೂರಿನ ಖ್ಯಾತ ಶೇಖರ್ ಆಸ್ಪತ್ರೆಯ ನಿರ್ದೇಶಕ ಡಾ. ಕಾರ್ತಟ್ಟು ಸುರೇಶ್ ಐತಾಳ್ ಆಯ್ಕೆಗೊಂಡರು. ಭಾನುವಾರ ಶ್ರೀ ದೇವಳದ ಸಭಾಂಗಣದಲ್ಲಿ ನಡೆದ ಪದಪ್ರಧಾನ ಸಮಾರಂಭದಲ್ಲಿ ನಿರ್ಗಮಿತ ಅಧ್ಯಕ್ಷ ಕೆ. ಚಂದ್ರಶೇಖರ್ ಕಾರಂತರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು. ಇದರ ಪೂರ್ವಭಾಗಿಯಾಗಿ ದೇವಳದಲ್ಲಿ ಲೋಕ ಕಲ್ಯಾಣಾರ್ಥವಾಗಿ ಸೀಯಾಳಾಭಿಷೇಕ, ಗಣಹೋಮ, ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ಅಧಿಕಾರ ಹಸ್ತಾಂತರ ಸಮಾರಂಭದಲ್ಲಿ ನಿರ್ಗಮಿತ ಅಧ್ಯಕ್ಷರು ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿ ಶುಭಕೋರಿದರು. ನೂತನ ಅಧ್ಯಕ್ಷರು ತಮ್ಮ ಅಧಿಕಾರ ಅವಧಿಯಲ್ಲಿ ಅನೇಕ ಹೊಸ ಯೋಜನೆಗಳ ಬಗ್ಗೆ ಪ್ರಸ್ತಾವಿಸಿ ಸ್ಥಳೀಯರ ಸಹಕಾರ ಯಾಚಿಸಿದರು. ಸಭೆಯಲ್ಲಿ ದೇವಳದ ಖಜಾಂಚಿ ಪ್ರಭಾಕರ ಮಧ್ಯಸ್ಥ, ಗಾಯತ್ರಿ ಚಂದ್ರಶೇಖರ್ ಕಾರಂತ, ಸುಮಾ ಸುರೇಶ್ ಐತಾಳ್, ಸದಸ್ಯರಾದ ನಿತ್ಯಾನಂದ ನಾಯರಿ, ಪ್ರಕಾಶ್ ಮಧ್ಯಸ್ಥ, ಸುಬ್ರಾಯ ಗಾಣಿಗ, ವಸಂತಿ ನಾಯರಿ, ನಾಗರಾಜ್ ಐತಾಳ್, ವೆಂಕಟೇಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕು ವ್ಯಾಪ್ತಿಯ ಗ್ರಾಮೀಣ ಭಾಗಗಳಿಗೆ ಕೆಎಸ್ಆರ್ಟಿಸಿ ಸಮರ್ಪಕ ಸಂಚಾರಕ್ಕಾಗಿ ಇಲ್ಲಿ ಕೆಎಸ್ಆರ್ಟಿಸಿ ಡಿಪೋ ನಿರ್ಮಾಣದ ಬೇಡಿಕೆಯಿದ್ದು, ಇಲ್ಲಿನ ನಿರ್ಮಾಣ ಹಂತದಲ್ಲಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಡಿಪೋ ಮಂಜೂರಾತಿಗಾಗಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ವತಿಯಿಂದ ಸಾರಿಗೆ ಸಚಿವರಿಗೆ ಮನವಿ ಮಾಡಲಾಗುವುದು ಎಂದು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಹೇಳಿದರು. ಅವರು ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಅನುಷ್ಠಾನ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೈಂದೂರಿನಲ್ಲಿ ನಿರ್ಮಾಣ ಹಂತದಲ್ಲಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಕಾಮಗಾರಿ ಪೂರ್ಣಗೊಂಡಿದೆ, ಆದರೆ ನಿಲ್ದಾಣದಲ್ಲಿ ನೀರಿನ ಸಮಸ್ಯೆಯಿಂದಾಗಿ ಉದ್ಘಾಟನಾ ಕಾರ್ಯ ವಿಳಂಬಗೊಳ್ಳುತ್ತಿದೆ, ಈ ಬಗ್ಗೆ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಭೆಯಲ್ಲಿಯೂ ಸಂಬಂದ ಅಧಿಕಾರಿಗಳ ಗಮನಕ್ಕೆ ತರಲಾಗಿದೆ, ಇಲ್ಲಿಗೆ ಪೈಪ್ಲೈನ್ ಮೂಲಕ ನೀರು ಸರಬರಾಜು ಮಾಡಲು ರಾಷ್ರೀಯ ಹೆದ್ದಾರಿ ಪ್ರಾದಿಕಾರದ ಅನುಮತಿ ಅಗತ್ಯವಿದೆ, ಈ ಬಗ್ಗೆ ಶೀಘ್ರ ಪ್ರಾದಿಕಾರದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸೈನಿಕರು ನಮ್ಮ ಜೀವನದ ಉಸಿರಿನಂತೆ. ನಮ್ಮ ಸುಂದರ ಬದುಕಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಡುವ ವೀರ ಯೋಧರನ್ನು ನಮ್ಮ ನಿತ್ಯ ಜೀವನದಲ್ಲಿ ಸದಾ ಸ್ಮರಿಸುತ್ತಿರಬೇಕು ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೇಲ್ ಗಂಗೊಳ್ಳಿ, ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗ ಗಂಗೊಳ್ಳಿ ಮತ್ತು ಸಂಜೀವ ಪಾರ್ವತಿ ಪ್ರಕಾಶನ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ನಡೆದ ಸೈನಿಕ ನಮನ ಮತ್ತು ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯ ರಾಜೇಂದ್ರ ಶೇರುಗಾರ್ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯ ಚಂದ್ರ ಖಾರ್ವಿ, ಎಸ್ ಡಿಎಂಸಿ ಅಧ್ಯಕ್ಷೆ ಸವಿತಾ, ಅರ್ಚನಾ ಮಹಿಳಾ ಮಂಡಲದ ಅಧ್ಯಕ್ಷೆ ಜ್ಯೋತಿ ಆನಂದ, ಶ್ರೀ ಬಸವೇಶ್ವರ ದೇವಸ್ಥಾನದ ಅರ್ಚಕ ಜಗದೀಶ್, ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ಮುಖ್ಯಸ್ಥ ಈಶ್ವರ ಗಂಗೊಳ್ಳಿ, ಅಂಗನವಾಡಿ ಕಾರ್ಯಕರ್ತೆ…
