ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸೇವೆ ಮತ್ತು ಸಂಸ್ಕೃತಿ ಅನಾವರಣಕ್ಕೆ ಸೇವಾ ಸಂಗಮ ಪೂರಕ ವಾತಾವರ ಕಲ್ಪಿಸಿದೆ ಎಂದು ಸಾಮಾಜಿಕ ಮುಖಂಡ ಚೇಂಪಿ ವೆಂಕಟೇಶ ಭಟ್ ಹೇಳಿದರು. ಅವರು ಶನಿವಾರ ಇಲ್ಲಿನ ಕೋಟದ ಸೇವಾ ಸಂಗಮ ಶಿಶು ಮಂದಿರದ ನೇತೃತ್ವದಲ್ಲಿ 4ನೇ ತರಗತಿಯಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗಾಗಿ “ದಸರಾ ಶಿಬಿರ 2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳಲ್ಲಿ ಕೌಶಲ್ಯ ಅಭಿವೃದ್ಧಿ ಶಿಬಿರಗಳು ಪರಿಣಾಮಕಾರಿ ಈ ನಿಟ್ಟಿನಲ್ಲಿ ಸೇವಾಸಂಗಮ ಅರ್ಥಪೂರ್ಣ ಶಿಬಿರಕ್ಕೆ ಮುನ್ನುಡಿ ಬರೆಯಲಿದೆ ಎಂದರು. ಈ ಸಂದರ್ಭದಲ್ಲಿ ಸೇವಾಸಂಗಮ ಶಿಶುಮಂದಿರದ ಮಾಜಿ ಅಧ್ಯಕ್ಷೆ ನಾಗಲಕ್ಷ್ಮೀ ಹೆಗ್ಡೆ, ಶಿಶುಮಂದಿರದ ಮಾತಾಜಿ ಸಹನಾ ಆಚಾರ್ಯ, ದೀಪ ಮಾತಾಜಿ, ಸಹಾಯಕಿ ಜ್ಯೋತಿ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಶು ಮಂದಿರದ ಕಾರ್ಯದರ್ಶಿ ಕಲಾವತಿ ಅಶೋಕ್ ನಿರೂಪಿಸಿ, ವಂದಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಚೇಂಪಿ ವೆಂಕಟೇಶ ಭಟ್ ಹಾಗೂ ಶಿಕ್ಷಕಿ ನಾಗರತ್ನ ಹೇರ್ಳೆ ಭಾಗವಹಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಕ್ಕಳ ಪ್ರಾಥಮಿಕ ಹಂತದಲ್ಲಿ ಸಾಹಿತ್ಯದ ಅಭಿರುಚಿ ಬೆಳೆಸುವ ಕಾರಂತ ಮಕ್ಕಳ ಸಾಹಿತ್ಯ ವೇದಿಕೆ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಪತ್ರಕರ್ತ ರವೀಂದ್ರ ಕೋಟ ಹೇಳಿದರು. ಅವರು ಶನಿವಾರ ಗುಂಡ್ಮಿ ವೇ.ಮೂ. ಸತ್ಯನಾರಾಯಣ ಉಪಾಧ್ಯಾಯ ಮನೆಯಂಗಳದಲ್ಲಿ ಸಾಲಿಗ್ರಾಮದ ಕೋಟ ಶಿವರಾಮ ಕಾರಂತ ಮಕ್ಕಳ ಸಾಹಿತ್ಯ ವೇದಿಕೆ, ಸಾಹಿತ್ಯ ಸಂಘ ವಿವೇಕ ಬಾಲಕಿಯರ ಪ್ರೌಢಶಾಲೆ ಕೋಟ ಇವರ ಆಶ್ರಯದಲ್ಲಿ ವರ್ಷ ಸಂಭ್ರಮ – ಕೃತಿ ಬಿಡುಗಡೆ ಮತ್ತು ಅಂಬಲಪಾಡಿ ಡಾ.ನಿ.ವಿಜಯ ಬಲ್ಲಾಳರು ತಮ್ಮ ತಂದೆಯ ನೆನಪಿನಲ್ಲಿ ಸಾಹಿತ್ಯ ಕೃಷಿಗಾಗಿ ಕೊಡಮಾಡುತ್ತಿರುವ 17ನೇ ವರ್ಷದ ಅಣ್ಣಾಜಿ ಬಲ್ಲಾಳ ಸ್ಮಾರಕ ಬಾಲ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನಿಸಿ ಮಾತನಾಡಿದರು. ಪ್ರಸ್ತುತ ಆಧುನಿಕ ಕಾಲಘಟ್ಟದಲ್ಲಿ ಮಕ್ಕಳನ್ನು ಕೇಂದ್ರಿಕರಿಸಿ ಹಲವು ರೀತಿಯ ಸಾಹಿತ್ಯಿಕ ಕಾರ್ಯಕ್ರಮ ಆಯೋಜಿಸಿ ಪರಿಸರದಲ್ಲಿ ಸಾಹಿತ್ಯಿಕ ಕಂಪು ಪಸರಿಸಲಾಗುತ್ತಿದೆ ಅಲ್ಲದೆ ಡಾ.ಅಣ್ಣಾಜೀ ಬಲ್ಲಾಳರ ಹೆಸರಿನಲ್ಲಿ ಕೊಡ ಮಾಡುವ ಸಾಹಿತ್ಯಿಕ ಪ್ರಶಸ್ತಿ ವಿದ್ಯಾರ್ಥಿಗಳಲ್ಲಿ ಸಾಹಿತ್ಯಿಕವಾಗಿ ಮುನ್ನುಡಿ ಬರೆಯಲಿದೆ ಎಂದರು. ಈ ಸಂದರ್ಭದಲ್ಲಿ ಅವನಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಸ್ವಚ್ಛತೆ ಎನ್ನುವುದು ಕೇವಲ ತ್ಯಾಜ್ಯ ಸಂಗ್ರಹಿಸುವ ಅಥವಾ ವಿಲೇವಾರಿ ಮಾಡುವ ಕಾರ್ಯವಾಗದೆ, ತ್ಯಾಜ್ಯ ಉತ್ಪತ್ತಿಯಾಗುವುದನ್ನೇ ಕಡಿಮೆ ಮಾಡುವ ಜೀವನಶೈಲಿಯಾಗಿ ರೂಪುಗೊಳ್ಳಬೇಕು. ಪ್ರತಿಯೊಂದು ಗ್ರಾಮದಲ್ಲಿಯೂ ಜನರನ್ನು ಜಾಗೃತಗೊಳಿಸಿ, ಸ್ಥಳೀಯ ಸಮಸ್ಯೆಗಳನ್ನು ಗುರುತಿಸಿ, ಶಾಶ್ವತ ಪರಿಹಾರ ಕಂಡುಕೊಳ್ಳುವ ಮೂಲಕ ಸ್ವಚ್ಛ ಗ್ರಾಮಗಳ ನಿರ್ಮಾಣ ಸಾಧ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ ಆಳ್ವ ಹೇಳಿದರು. ಅವರು ಆಳ್ವಾಸ್ನ ಕುವೆಂಪು ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಹಸಿರು ಸಂವಾದ–ಸ್ವಚ್ಛ ಗ್ರಾಮಕ್ಕಾಗಿ ಕಾರ್ಯಯೋಜನೆ’ ಅವಲೋಕನ ಹಾಗೂ ಮುಂದಿನ ಕಾರ್ಯಯೋಜನೆ ರೂಪಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಈಗಾಗಲೇ ಆಯ್ದ ಗ್ರಾಮಗಳಲ್ಲಿ ಹಸಿರು ಸಂವಾದದ ಚಟುವಟಿಕೆಗಳು ಆರಂಭವಾಗಿದ್ದು, ಮುಂದಿನ ಹಂತದಲ್ಲಿ ಇನ್ನಷ್ಟು ಗ್ರಾಮಗಳನ್ನು ಒಳಗೊಳ್ಳಲಾಗುವುದು. ತುಳುನಾಡಿನ ಗ್ರಾಮಗಳಿಗೆ ಹೊಂದುವಂತಹ ಸ್ಥಳೀಯ ಮಾದರಿಯೊಂದನ್ನು ರೂಪಿಸುವುದು ಹಸಿರು ಸಂವಾದದ ಉದ್ದೇಶವಾಗಿದೆ ಎಂದು ಹೇಳಿದರು. ಸ್ವಚ್ಛತೆಯ ಹೊಣೆಗಾರಿಕೆಯನ್ನು ಒಬ್ಬ ವ್ಯಕ್ತಿ ಅಥವಾ ಒಂದು ಸಂಸ್ಥೆಗೆ ಸೀಮಿತಗೊಳಿಸದೆ ಸಾಮೂಹಿಕ ಮತ್ತು ಸಾಂಸ್ಥಿಕ ವ್ಯವಸ್ಥೆಯಾಗಿ ಬೆಳೆಸಬೇಕು. ತಾತ್ಕಾಲಿಕ ಕ್ರಮಗಳಿಗಿಂತ ಶಾಶ್ವತ ಪರಿಹಾರಗಳಿಗೆ ಆದ್ಯತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ರಕ್ಷಕ – ಶಿಕ್ಷಕರ ಸಂಘದ ಸಭೆಯು ಶನಿವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರಾದ ಕೆ. ಶಾಂತಾರಾಮ್ ಪ್ರಭು ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಸೌಲಭ್ಯಗಳಿವೆ. ಈ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಉಪಯೋಗಿಸಿಕೊಂಡು ಅವರು ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳುವಂತಾಗಲಿ. ನಾವೆಲ್ಲರೂ ಸೇರಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯವನ್ನು ರೂಪಿಸೋಣ ಎಂದು ಹೇಳಿದರು. ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಯು.ಎಸ್.ಶೆಣೈ ಮಾತನಾಡಿ, ಕಾಲೇಜು ಮಂಗಳೂರು ವಿಶ್ವವಿದ್ಯಾನಿಲಯದಲ್ಲಯೇ ಅತ್ಯುತ್ತಮ ಸಂಸ್ಥೆಯಾಗಿದೆ. ಎಲ್ಲಾ ರೀತಿಯ ಪ್ರತಿಭೆಗಳನ್ನು ಬೆಳೆಸಿಕೊಳ್ಳಲು ಇಲ್ಲಿ ಅವಕಾಶವಿದೆ. ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವಲ್ಲಿ ಭಂಡಾರ್ಕಾರ್ಸ್ ಕಾಲೇಜು ಮುಂದಿರುತ್ತದೆ. ಅಲ್ಲದೇ ಮಕ್ಕಳ ಮನಸ್ಸನ್ನು ಅರ್ಥ ಮಾಡಿಕೊಳ್ಳಬೇಕು. ಅವರು ಒಳ್ಳೆಯ ಆಸಕ್ತಿದಾಯಕ ಕ್ಷೇತ್ರದಲ್ಲಿ ಅವರನ್ನು ಮುಂದುವರಿಯಲು ಅವು ಮಾಡಿಕೊಡಬೇಕು. ಅವರು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತಂದು ಅವರನ್ನು ಸಮಾಜದಲ್ಲಿ ಸತ್ಪ್ರಜೆಗಳನ್ನಾಗಿ ರೂಪಿಸುತ್ತಿರುವ ಸೇವಾ ಸಂಗಮ ಶಿಶು ಮಂದಿರಗಳು, ವಿವಿಧ ಶಿಬಿರಗಳನ್ನು ಆಯೋಜಿಸಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಸೇವೆ ಸಲ್ಲಿಸುತ್ತಿರುವುದು ಪ್ರಶಂಸನೀಯ. ದಸರಾ ಶಿಬಿರಗಳ ಮೂಲಕ ಮಕ್ಕಳ ಮಾನಸಿಕ, ಶಾರೀರಿಕ ಹಾಗೂ ಬೌದ್ಧಿಕ ಬೆಳವಣಿಗೆ ಸಾಧ್ಯವಿದ್ದು, ಮಕ್ಕಳು ಇಂತಹ ಶಿಬಿರಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಹೇಳಿದರು. ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ವತಿಯಿಂದ ಗಂಗೊಳ್ಳಿಯ ಸ. ವಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ದಸರಾ ಶಿಬಿರವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಶಿಶು ಮಂದಿರದ ಅಧ್ಯಕ್ಷ ಬಿ.ರಾಘವೇಂದ್ರ ಪೈ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ನಿಶ್ಮಿತಾ ಖಾರ್ವಿ, ನರ್ಮದಾ ಪ್ರಭು, ಶಿಶು ಮಂದಿರದ ಸದಸ್ಯರಾದ ವಿಜಯಶ್ರೀ ವಿ.ಆಚಾರ್ಯ, ಗಾಯತ್ರಿ ಕೊಡಂಚ, ಮಾತಾಜಿ ಪ್ರೇಮಾ, ಸಹಾಯಕಿ ರತ್ನ ಉಪಸ್ಥಿತರಿದ್ದರು. ಸಂಚಾಲಕ ಡಾ. ಕಾಶೀನಾಥ ಪೈ ಪ್ರಾಸ್ತಾವಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯಾವುದೇ ವ್ಯಕ್ತಿ, ಸಂಸ್ಥೆಯಾಗಿದ್ದರೂ ಬದ್ಧತೆ ಮತ್ತು ಪ್ರಾಮಾಣಿಕತೆ ಇದ್ದರೇ ಧೀರ್ಘಾವಧಿಯಲ್ಲಿ ಗಟ್ಟಿಯಾಗಿ ನಿಲ್ಲುತ್ತದೆ. ಸ್ವಾಭಿಮಾನ ಹಾಗೂ ಬದ್ಧತೆಯೊಂದಿಗೆ ಮುನ್ನಡೆಯುವುದು ಕಷ್ಟಸಾಧ್ಯವಾದರೂ, ಎದುರಿಸಿ ಸಾಗುವುದರಲ್ಲಿಯೇ ಬದುಕಿನ ಯಶಸ್ಸಿದೆ ಎಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಅವರು ರೋಟರಿ ಕ್ಲಬ್ ಬೈಂದೂರು, ಕುಂದಾಪ್ರ ಡಾಟ್ ಕಾಂ – ಅಂತರ್ಜಾಲ ಸುದ್ದಿತಾಣ ಹಾಗೂ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ. ಉಪ್ಪುಂದ ಇವರ ಆಯೋಜನೆಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಆಯೋಜಿಸಲಾದ ಶ್ರೀ ಕ್ಷೇತ್ರ ಹಟ್ಟಿಯಂಗಡಿ ಮೇಳದ ವಿಶೇಷ ಯಕ್ಷಗಾನ ಪ್ರದರ್ಶನವನ್ನು ಉದ್ದೇಶಿಸಿ ಮಾತನಾಡಿ, ಮಳೆಗಾದಲ್ಲಿ ಯಕ್ಷಗಾನ ಕಲಾವಿದರಿಗೆ ನೆರವಾಗು ಉದ್ದೇಶದಿಂದ ಕೆಲವು ವರ್ಷಗಳಿಂದ ಬೈಂದೂರು ಭಾಗದಲ್ಲಿ ಒಂದು ಪ್ರದರ್ಶನ ಆಯೋಜಿಸುತ್ತಿರುವುದು ಶ್ಲಾಘನಾರ್ಹ ಎಂದರು. ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಅವರು ಮಾತನಾಡಿ, ಬೈಂದೂರಿನಲ್ಲಿ ಕಲಾವಿದರು ಹಾಗೂ ಕಲಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕ್ಯಾಥೊಲಿಕ್ ಸಭಾ ಉಡುಪಿ ಪ್ರದೇಶ, ಬಸ್ರೂರು ಘಟಕ್ ಐಸಿವೈಎಂ (ICYM) ಮತ್ತು ವೈಸಿಎಸ್ (YCS) ಬಸ್ರೂರು ಹಾಗೂ ಪರಿಸರ ಆಯೋಗ್ ಇವರ ಆಶ್ರಯದಲ್ಲಿ ‘ಸ್ವಚ್ಛತಾ ಹೀ ಸೇವಾ 2026’ ಹಾಗೂ ಗಾಂಧಿ ಜಯಂತಿಯ ಅಂಗವಾಗಿ ಸ್ವಚ್ಛ ಹಾಗೂ ನಿರ್ಮಲ ಪರಿಸರ ಅಭಿಯಾನವು ಕುಂದಾಪುರ ರೈಲು ನಿಲ್ದಾಣದಲ್ಲಿ ಯಶಸ್ವಿಯಾಗಿ ನಡೆಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಬ್ರಹ್ಮಾವರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಐದನೆಯ ಸಾಹಿತ್ಯ ಸಮ್ಮೇಳನವು ಅಕ್ಟೋಬರ್ 4ರಂದು ಸಾಸ್ತಾನದ ಶಿವಕೃಪಾ ಸಭಾ ಭವನದಲ್ಲಿ ನಡೆಯಲಿದ್ದು ಅಕ್ಟೊಬರ್ 2ಭಾನುವಾರ ಸಮ್ಮೇಳನದ ಆಶಯ ಗೀತೆ ಬಿಡುಗಡೆ ಕಾರ್ಯಕ್ರಮ ಸಾಸ್ತಾನದ ಶಿವಕೃಪಾ ಸಭಾ ಭವನದಲ್ಲಿ ನಡೆಯಿತು. ಆಶಯ ಗೀತೆ ಬಿಡುಗಡೆ ಮಾಡಿದ ಸಮ್ಮೇಳನದ ಗೌರವಾಧ್ಯಕ್ಷ ಆನಂದ ಸಿ ಕುಂದರ್ ಮಾತನಾಡಿ ಸಮ್ಮೇಳನದ ಅಧ್ಯಕ್ಷರಾಗಿ ನರೇಂದ್ರ ಕುಮಾರ್ ಕೋಟ ಆಯ್ಕೆಯಾಗಿರುವುದು ಸಮ್ಮೇಳನಕ್ಕೆ ಮೆರಗು ತಂದಿದೆ. ನರೇಂದ್ರ ಕುಮಾರ್ ಸಾಹಿತ್ಯಕ್ಕೆ ಹೊಸ ಹೊಸ ಪ್ರತಿಭೆಗಳನ್ನು ವೇದಿಕೆ ತಂದು ಬೆಳೆಸಿದವರು ಖಂಡಿತ ಕಾರ್ಯಕ್ರಮ ಯಶಸ್ಸು ಕಾಣುತ್ತದೆ ಎಂದರು. ಧಾರ್ಮಿಕ ಚಿಂತಕರಾದ ಡಾ. ವಿಜಯ ಮಂಜರವರು ಮಾತನಾಡಿ, ಕಾರ್ಯಕ್ರಮ ಯಶಸ್ಸಿಗೆ ನಾವೆಲ್ಲಾ ಕೈ ಜೋಡಿಸುತ್ತೇವೆ. ನರೇಂದ್ರ ಕುಮಾರ್ ಸಮ್ಮೇಳನ ಅಧ್ಯಕ್ಷರಾಗಿರುವುದು ನನಗೆ ವೈಯಕ್ತಿಕವಾಗಿ ಸಂತೋಷವಾಗಿದೆ. ನಮ್ಮ ಭಾಗದ ಅನೇಕರಿಗೆ ನರೇಂದ್ರ ರವರು ಎಲ್ಲ ರೀತಿಯಲ್ಲೂ ಗುರುವಾಗಿ ಗುರಿ ತೋರಿದವರು ಎಂದರು. ಜಿಲ್ಲಾ ಕಾರ್ಯದರ್ಶಿ ಸುಬ್ರಮಣ್ಯ ಶೆಟ್ಟಿ ಮಾತನಾಡಿ, ನರೇಂದ್ರ ಕುಮಾರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಭಾಕಂಪನವಿಲ್ಲದೆ ಆತ್ಮವಿಶ್ವಾಸದೊಂದಿಗೆ ವೇದಿಕೆಯನ್ನು ಬಳಸಿಕೊಂಡು ನಿರೂಪಣೆ ಮಾಡುವ ಸಂದರ್ಭದಲ್ಲಿ ವಿಷಯ ಸಂಗ್ರಹಣೆ, ಸ್ಪಷ್ಟ ಉಚ್ಛಾರ ಮತ್ತು ನಿರರ್ಗಳತೆಯಿಂದ ಪ್ರೇಕ್ಷಕರನ್ನು ಸೆಳೆಯುವಂತಹ ಪದಬಳಕೆ ಮಾಡುವ ಮೂಲಕ ಉತ್ತಮ ನಿರೂಪಣೆ ಮಾಡಲು ಸಾಧ್ಯ ಎಂದು ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕಿ ರೇಷ್ಮಾ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಭಾಷಾ ಸಂಘ ಆಯೋಜಿಸಿದ ʼನಿರೂಪಣೆ ಕುರಿತಾದ ಕಾರ್ಯಾಗಾರʼದಲ್ಲಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಭಾಷಾ ಸಂಘದ ಸಂಯೋಜಕರಾದ ಸ್ವಾತಿ ಜಿ. ರಾವ್ ಸ್ವಾಗತಿಸಿ, ಪ್ರವೀಣಾ ಎಮ್. ಪೂಜಾರಿ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿ, ಸರೋಜಾ ವಂದಿಸಿ, ಮೇಘಾ ಎಸ್. ಭಟ್ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾಲೇಜಿನ ಪ್ರಾಚಾರ್ಯರಾದ ವಿದ್ವಾನ್ ಗಣಪತಿ ಭಟ್, ಅಶ್ವತ್ ಎಸ್.ಎಲ್., ಡಾ. ಗಣನಾಥ್ ಶೆಟ್ಟಿ ಬಿ., ಗಣಪತಿ ಭಟ್ ಕೆ. ಎಸ್. ಅವರು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರಾದ ವಿದ್ವಾನ್ ಗಣಪತಿ ಭಟ್ ಅವರು “ಗಾಂಧೀಜಿಯವರ ಸತ್ಯ, ಅಹಿಂಸೆ, ಸ್ವಚ್ಛತೆಯ ತತ್ವಗಳು ಇಂದಿಗೂ ಪ್ರಸ್ತುತ. ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯ ಚಳುವಳಿಗೆ ಹೊಸ ಅರ್ಥವನ್ನು ತಂದುಕೊಟ್ಟಿದ್ದರು. ಎಲ್ಲರೂ ಗೌರವಿಸುವ ಮತ್ತು ಪ್ರೀತಿಸುವ ಮಹಾಚೇತನ. ಲಾಲ್ ಬಹಾದ್ದೂರ್ ಶಾಸ್ತ್ರೀಯವರ ಸರಳತೆ ಮತ್ತು ಆಡಳಿತ ವೈಖರಿ ಎಲ್ಲ ಕಾಲಕ್ಕೂ ಅನುಕರಣೀಯ.” ಎಂದು ಹೇಳಿದರು ಕಾರ್ಯಕ್ರಮದಲ್ಲಿ ಅಧ್ಯಾಪಕರು, ಅಧ್ಯಾಪಕೇತರ ಸಿಬ್ಬಂದಿ, ಕಾಲೇಜಿನ ವಿದ್ಯಾರ್ಥಿಗಳು, ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ನ…
