Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿದ್ದು, ಜನಸಾಮಾನ್ಯರಲ್ಲಿ ರೋಗಗಳ ಹರಡುವುದು, ಅವುಗಳ ನಿಯಂತ್ರಣದ ಬಗ್ಗೆ ಮುಂಜಾಗ್ರತೆ ತೆಗೆದುಕೊಳ್ಳುವ ಬಗ್ಗೆ, ಆರೋಗ್ಯ ಶಿಕ್ಷಣವನ್ನು ನೀಡಿ ಎಚ್ಚರದಿಂದಿರಲು ಹೆಚ್ಚು ಹೆಚ್ಚು ಅರಿವು ಮೂಡಿಸುವ ಕಾರ್ಯಗಳನ್ನು ಮಾಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆ ನೀಡಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಡೆಂಗ್ಯೂ / ಮಲೇರಿಯಾ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಂಗಾರು ಮಳೆ ಈಗಾಗಲೇ ಜಿಲ್ಲೆಯಲ್ಲಿ ಪ್ರಾರಂಭಗೊಂಡಿದೆ. ಮಳೆಯ ನೀರು ಎಲ್ಲೆಂದರಲ್ಲಿ ನಿಂತು ಸೊಳ್ಳೆಗಳ ಸಂತಾನೋತ್ಪತಿ ವೃದ್ಧಿಗೊಂಡು, ಮಲೇರಿಯಾ, ಚಿಕನ್‌ಗೂನ್ಯಾ, ಡೆಂಗ್ಯೂ, ಫೈಲೇರಿಯಾ ಸೇರಿದಂತೆ ಮತ್ತಿತರ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳಿವೆ. ಸಾರ್ವನಿಕರಿಗೆ ಇವುಗಳ ತಡೆಗಟ್ಟುವ ಕುರಿತು ಆರೋಗ್ಯ ಶಿಕ್ಷಣದ ಬಗ್ಗೆ ಅರಿವು ಮೂಡಿಸಿ, ರೋಗಗಳು ಹರಡದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತಿಗಳು ಕಾರ್ಯಪ್ರವೃತ್ತರಾಗುವುದರೊಂದಿಗೆ ಸಮುದಾಯದ ಸಹಭಾಗಿತ್ವದಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪಂಚವರ್ಣ ಸಂಘಟನೆ ಇಡೀ ರಾಜ್ಯಕ್ಕೆ ಮಾದರಿ ಸಂಘಟನೆಯಾಗಿ ಮೂಡಿಬಂದಿದೆ. ಅದರಲ್ಲೂ ಬಹುಮುಖ್ಯವಾಗಿ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಬಡ ವಿದ್ಯಾರ್ಥಿ ದತ್ತು ಸ್ವೀಕಾರ ಶ್ಲಾಘನೀಯ ಕಾರ್ಯ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಅಭಿಪ್ರಾಯಪಟ್ಟರು. ಅವರು ಗುರುವಾರ ಕೋಟದ ಸಮುದ್ಯತಾ ಬ್ಯಾಂಕೇಟ್ ಹಾಲ್‌ನಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ಜಂಟಿ ಆಶ್ರಯದಲ್ಲಿ ನಟ ಪುನೀತ್ ರಾಜ್ ಕುಮಾರ್ ವಿದ್ಯಾನಿಧಿ ಯೋಜನೆಯಡಿ ಬಡ ವಿದ್ಯಾರ್ಥಿಗಳ ದತ್ತು ಸ್ವೀಕಾರದ ಪರಿಕರ ವಿತರಣಾ, ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ, ಸಮಾಜಸೇವೆಯೇ ಜೀವಾಳವಾಗಿರಿಸಿಕೊಂಡು ಬಡ ವಿದ್ಯಾರ್ಥಿಗಳ ಪಾಲಿಗೆ ಒಂದು ಸಂಘಟನೆ ಆಶ್ರಯದಾತರಾಗಿರುವುದು ಬಲು ಅಪರೂಪ ಇಂತಹ ಸಂಘಟನೆಗಳಿಗೆ ನಮ್ಮ ಫೌಂಡೇಶನ್ ಸದಾ ಬೆಂಬಲವಾಗಿ ನಿಲ್ಲಲಿದೆ ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರ ಹಸ್ತಾಂತರಿಸಿ ಮಾತನಾಡಿದ ಉದ್ಯಮಿ ಸಂಪತ್ ಕುಮಾರ್ ಶೆಟ್ಟಿ ಮಾತನಾಡಿ ಪಂಚವರ್ಣ ಸಂಘಟನೆ ಸಾಮಾಜಿಕ ಬದ್ಧತೆ…

Read More

​ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟೇಶ್ವರ: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಮೊಗವೀರ ಯುವ ಸಂಘಟನೆ ರಿ. ಉಡುಪಿ ಜಿಲ್ಲೆ, ಕೋಟೇಶ್ವರ ಘಟಕ ಹಾಗೂ ಮಹಿಳಾ ಸಂಘಟನೆ, ಮತ್ತು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ರಿ. ಅಂಬಲಪಾಡಿ ಉಡುಪಿ ಇವರ ಜಂಟಿ ನೇತೃತ್ವದಲ್ಲಿ, ಕೋಟೇಶ್ವರ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಹಳೆ ಅಳಿವೆ ಸಮುದ್ರ ತೀರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು. ​ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೊಗವೀರ ಯುವ ಸಂಘಟನೆಯ ಅಧ್ಯಕ್ಷರಾದ ರಾಘವೇಂದ್ರ ಹರಪ್ಪನಕರೆ ಅವರು ವಹಿಸಿದ್ದರು. ​ಕಾರ್ಯಕ್ರಮದಲ್ಲಿ ಸಂಘಟನೆಯ ಸ್ಥಾಪಕ ಅಧ್ಯಕ್ಷರಾದ ಸತೀಶ್ ಎಂ. ನಾಯಕ್, ಉಡುಪಿ ಜಿಲ್ಲಾ ಸಂಘಟನೆಯ ಅಶೋಕ ತೆಕ್ಕಟ್ಟೆ, ಗೌರವ ಅಧ್ಯಕ್ಷರಾದ ಆನಂದ್ ಕುಂದರ್, ನಿಕಟಪೂರ್ವ ಅಧ್ಯಕ್ಷರಾದ ನಾಗರಾಜ್ ಬಿಜಾಡಿ ಹಾಗೂ ಮಾಜಿ ಅಧ್ಯಕ್ಷರಾದ ಸುರೇಶ್ ಛಾತ್ರಬೆಟ್ಟು ಉಪಸ್ಥಿತರಿದ್ದರು. ​ಅಲ್ಲದೆ, ಸಂಘಟನೆಯ ಕಾರ್ಯದರ್ಶಿ ನಾಗರಾಜ್ ತೆಕ್ಕಟ್ಟೆ, ಕೋಟೇಶ್ವರ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಹರೀಶ್ ಶೆಟ್ಟಿ, ಗುರಿಕಾರರಾದ ರಾಮ ನಾಯಕ್ ಬೀಜಾಡಿ, ಗೋಪಾಲ್ ಮೆಂಡನ್ ಪಡೈನಮನೆ ಹಾಗೂ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಆಲೂರು ಗ್ರಾಮದ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯದಲ್ಲಿ ಮುಂದಿನ ಪೀಳಿಗೆಗೆ ಆಯುರ್ವೇದ ಪರಂಪರೆಯನ್ನು ದಾಟಿಸುವ ಉದಾತ್ತ ಉದ್ದೇಶದಿ೦ದ ನಿರ್ಮಿಸಲಾದ 250ಕ್ಕೂ ಹೆಚ್ಚು ಅಪರೂಪದ ಪ್ರಬೇಧದ ಗಿಡಮೂಲಿಕೆಗಳನ್ನೊಳಗೊಂಡ ಚಿತ್ರಕೂಟ ಔಷಧೀಯ ಸಸ್ಯಗಳ ಉದ್ಯಾನವನ (ಔಷಧಿ ವನ) ಮತ್ತು ವನಮಹೋತ್ಸವ ಕಾರ್ಯಕ್ರಮ ಶುಕ್ರವಾರ ಯಶಸ್ವಿಯಾಗಿ ನಡೆಯಿತು. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಔಷಧಿ ವನವನ್ನು ಉದ್ಘಾಟಿಸಿ, “ಸಾಮಾನ್ಯವಾಗಿ ಎರಡು ಮಾದರಿ ಇರುತ್ತದೆ. ಒ೦ದು, ಹಿಮಾಲಯ ನೋಡಲು ಅಲ್ಲಿಗೆ ಹೋಗುವುದು. ಇನ್ನೊಂದು, ಹಿಮಾಲಯವನ್ನೇ ತನ್ನ ಬಳಿಗೆ ಕರೆಸುವುದು. ಚಿತ್ರಕೂಟದ ಮುಖ್ಯಸ್ಥರಾದ ಡಾ. ರಾಜೇಶ್ ಬಾಯರಿ ಅವರು ಎರಡನೇ ಮಾದರಿಯನ್ನು ಆರಿಸಿಕೊಂಡಿದ್ದಾರೆ. ಸ್ವಂತ ಊರಿನಲ್ಲೇ ಉಳಿದು, ಸ್ಥಳೀಯ ಸಂಪನ್ಮೂಲ ಮತ್ತು ಪ್ರಕೃತಿಯನ್ನು ಬಳಸಿಕೊಂಡು ಗ್ರಾಮೀಣ ಭಾಗದಲ್ಲೂ ಜಾಗತಿಕ ಮಟ್ಟದ ಅದ್ಭುತ ಸಾಧನೆ ಮಾಡಬಹುದು ತೋರಿಸಿಕೊಟ್ಟಿದ್ದಾರೆ. ಅದಕ್ಕೆ ಚಿತ್ರಕೂಟ ಅಯುರ್ವೇದ ಸಂಸ್ಥೆಯೇ ಅತ್ಯುತ್ತಮ ಉದಾಹರಣೆ” ಎಂದು ಹೇಳಿದರು. “ವೈದ್ಯರು ಇಲ್ಲಿ ನಿರ್ಮಿಸಿರುವ ಚಿಕಿತ್ಸಾ ವ್ಯವಸ್ಥೆ ಮತ್ತು ದಿವ್ಯ ಪರಿಸರವನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು ಮತ್ತು ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಜೂನ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗವು ಎಂಎಸ್‌ಡಿಸಿ, ಮಣಿಪಾಲ ಸಹಯೋಗದಲ್ಲಿ ಆಯೋಜಿಸಿದ್ದ “ಪ್ರಾಜೆಕ್ಟ್ ಎಕ್ಸ್ಪೋ – ಸೃಜನಶೀಲತೆ ಮತ್ತು ತಂತ್ರಜ್ಞಾನದ ಸಂಗಮ” ಕಾರ್ಯಕ್ರಮದ ಸಮಾರೋಪ ಸಮಾರಂಭವು ಇತ್ತೀಚಿಗೆ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆ ಮತ್ತು ಸೃಜನಶೀಲತೆಯನ್ನು ಪ್ರೋತ್ಸಾಹಿಸುವಲ್ಲಿ ಇಂತಹ ಕಾರ್ಯಕ್ರಮಗಳು ಅಗತ್ಯ ಎಂದು ವಿವರಿಸಿದರು. ಮುಖ್ಯ ಅತಿಥಿಗಳಾಗಿ ಶ್ರೇಯಸ್ ಸುವರ್ಣ, ಸಾನ್ವಿ ಟೆಕ್ನಾಲಜೀಸ್, ಸಾಲಿಗ್ರಾಮ ಹಾಗೂ ರಾಜಲಕ್ಷ್ಮಿ ಆನಂದನ್, ಸೆಂಟರ್ ಹೆಡ್, ಸ್ಕೂಲ್ ಆಫ್ ಐಟಿ ಸ್ಕಿಲ್ಸ್, ಎಂಎಸ್‌ಡಿಸಿ, ಮಣಿಪಾಲ ಭಾಗವಹಿಸಿದ್ದರು. ಅತಿಥಿಗಳು ವಿದ್ಯಾರ್ಥಿಗಳ ನವೀನ ಯೋಜನೆಗಳನ್ನು ಶ್ಲಾಘಿಸಿ, ತಂತ್ರಜ್ಞಾನ ಕ್ಷೇತ್ರದಲ್ಲಿನ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು. ಸೃಜನಶೀಲತೆ, ನವೀನ ಚಿಂತನೆ, ತಾಂತ್ರಿಕ ಕೌಶಲ್ಯ ಹಾಗೂ ಪರಿಣಾಮಕಾರಿ ಸಂವಹನ ಕೌಶಲ್ಯಗಳು ವೃತ್ತಿಜೀವನದಲ್ಲಿ ಯಶಸ್ಸು ಸಾಧಿಸಲು ಅತ್ಯಗತ್ಯವೆಂದು ತಿಳಿಸಿದರು. ವಿದ್ಯಾರ್ಥಿಗಳು ನಿರಂತರ ಕಲಿಕೆಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಧ್ಯಾಪಕರ ಸಂಘದ ದಿನಾಚರಣೆ ಕಾರ್ಯಕ್ರಮವು ಗುರುವಾರ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಉಪನ್ಯಾಸಕರು ಉತ್ತಮ ರೀತಿಯಲ್ಲಿ ಸಾಧನೆ ಮಾಡಬೇಕು. ಹೆಚ್ಚು ಸಂಶೋಧನಾ ಕ್ಷೇತ್ರ ಮತ್ತು ಇತರೆ ಜ್ಞಾನಪೂರ್ಣ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಿ ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಾಗಿ ಆಗಮಿಸಿದ್ದ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರೋಜ ಎಮ್. ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಧ್ಯಾಪಕರ ಸಂಘದ ಅಧ್ಯಕ್ಷೆ ನಿಶಾ ಎಮ್. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಅಧ್ಯಾಪಕರ ಸಂಘದ ಉಪಾಧ್ಯಕ್ಷರಾದ ವಿದ್ಯಾಧರ ಪೂಜಾರಿ, ಕಾರ್ಯದರ್ಶಿ ಅರುಣ್ ಎ.ಎಸ್. ಜೊತೆ ಕಾರ್ಯದರ್ಶಿ ದುರ್ಗಾಪ್ರಸಾದ್ ಮಯ್ಯ, ಖಜಾಂಚಿ ಮನೋಹರ ಉಪಾಧ್ಯಾಯ ಉಪಸ್ಥಿತರಿದ್ದರು. ಡಾಕ್ಟರೇಟ್ ಪದವಿ ಪಡೆದ ಆಂಗ್ಲ ಭಾಷಾ ಉಪನ್ಯಾಸಕ ಡಾ. ಶರಣ್ ಎಸ್ .ಜೆ. ಮತ್ತು ಕನ್ನಡ ಭಾಷಾ ಉಪನ್ಯಾಸಕ ಡಾ. ಸುಖಾನಂದ ಶೆಟ್ಟಿ ಮತ್ತು ಕರ್ನಾಟಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಿವೃತ್ತ ಶಿಕ್ಷಕ, ಪತ್ರಕರ್ತ, ಪಂಚಾಯತ್ ರಾಜ್ ಸಂಪನ್ಮೂಲ ವ್ಯಕ್ತಿ, ಮರವಂತೆ ನಿವಾಸಿ ಎಸ್. ಜನಾರ್ದನ ಮರವಂತೆ (88 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಎಸ್. ಜನಾರ್ದನ ಮರವಂತೆ ಅವರು ರಾಜ್ಯಶಾಸ್ತ್ರ ಮತ್ತು ಆಂಗ್ಲ ಸಾಹಿತ್ಯದಲ್ಲಿ ಪ್ರತ್ಯೇಕ ಸ್ನಾತಕೋತ್ತರ ಪದವಿ, ಶಿಕ್ಷಣದಲ್ಲಿ ಸ್ನಾತಕ ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಆಂಗ್ಲ ಮತ್ತು ವಿದೇಶೀ ಭಾಷೆಗಳ ಅಧ್ಯಯನ ಸಂಸ್ಥೆಯಿಂದ ಆಂಗ್ಲಭಾಷಾ ಬೋಧನೆಯಲ್ಲಿ ಸ್ನಾತಕೋತ್ತರ ಡಿಪ್ಲೋಮಾ ಪಡೆದಿರುವ ಜನಾರ್ದನರು ಖಂಬದಕೋಣೆ, ಕುಂದಾಪುರ, ಬೈಂದೂರು, ಶಂಕರನಾರಾಯಣದಲ್ಲಿ ಪ್ರೌಢಶಾಲಾ ಶಿಕ್ಷಕರಾಗಿ, ಚಿಕ್ಕಮಗಳೂರಿನ ಸಖರಾಯಪಟ್ಟಣ ಮತ್ತು ನಾವುಂದದಲ್ಲಿ ಉಪನ್ಯಾಸಕರಾಗಿ ದುಡಿದು 1999ರಲ್ಲಿ ನಿವೃತ್ತರಾದರು. ಶಿಕ್ಷಕ, ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಬಳಿಕ ತಮ್ಮ ನಿವೃತ್ತಿಯ ಬದುಕನ್ನು ಜನಾರ್ದನ ಮರವಂತೆ ಅವರು ಸಕ್ರೀಯವಾಗಿ ಕಳೆದವರು. ರಾಜಕೀಯ, ಸಾಹಿತ್ಯ, ಸಂಘಟನೆಯಲ್ಲಿ ತೊಡಗಿಸಿಕೊಂಡು ಮಾದರಿ ಕಾರ್ಯಗಳ ಮೂಲಕ ಖ್ಯಾತಿ ಗಳಿಸಿದ್ದರು. ಮರವಂತೆ ಪಂಚಾಯತ್ ಸದಸ್ಯರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ರಾಷ್ಟ್ರಮಟ್ಟದಲ್ಲಿ ಮರವಂತೆ ಪಂಚಾಯತ್ ಗುರುತಿಸಿಕೊಳ್ಳಲು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕ್ರಿಯಾಶೀಲ ಹಸಿರು ಕ್ರಾಂತಿಯ ಪರಿಸರಸ್ನೇಹಿ ಸಂಘಟನೆಯಾದ ಕೋಟದ ಪಂಚವರ್ಣ ಸಂಘಟನೆಯ ಪ್ರತಿವರ್ಷದ ಜೂನ್ ನಿಂದ ಅಗಸ್ಟ್ ವರೆಗೆ ನಡೆಯುವ  ಹಸಿರು ಹೆಜ್ಜೆ ಶೀರ್ಷಿಕೆ ಕಾರ್ಯಕ್ರಮಕ್ಕೆ ಕೋಟದ ಸಹಕಾರಿ ವ್ಯವಸಾಯಕ ಸಂಘದ ವತಿಯಿಂದ 100ಕ್ಕೂ ಅಧಿಕ ಪಾರಿಜಾತ ಗಿಡವನ್ನು ಶುಕ್ರವಾರ ಹಸ್ತಾಂತರಿಸಿತು. ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೃಷ್ಣ ಕಾಂಚನ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ,ನಿರ್ದೇಶಕ ತಿಮ್ಮ ಪೂಜಾರಿ ಅವರು ಪಂಚವರ್ಣ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ಅವರಿಗೆ ಗಿಡವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪಂಚವರ್ಣ ಯುವಕ ಮಂಡಲದ ಉಪಾಧ್ಯಕ್ಷ ದಿನೇಶ್ ಆಚಾರ್, ಸದಸ್ಯರಾದ ಕೇಶವ ಆಚಾರ್, ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕೋಟ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕೋಟ ಸಹಕಾರಿ ಸಂಘದ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಂದ 6 ವಿಭಾಗಗಳಲ್ಲಿ ಮತ್ತು ಸಂಸ್ಥೆಗಳಿಂದ 9 ವಿಭಾಗಗಳಲ್ಲಿ ರಾಷ್ಟ್ರ  ಪ್ರಶಸ್ತಿಗಾಗಿ ವೆಬ್‌ಸೈಟ್ www.award.gov.in ನಲ್ಲಿ ಆನ್‌ಲೈನ್ ಮೂಲಕ ನಾಮ ನಿರ್ದೇಶನ / ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳ ಅಂತಸ್ತು, ಜಿಲ್ಲಾಧಿಕಾರಿ ಸಂಕೀರ್ಣ, ಮಣಿಪಾಲ ದೂ.ಸಂ: 0820-2574810 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More