ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಇತಿಹಾಸ ಪರಿಷತ್ತು 35ನೇ ವಾರ್ಷಿಕ ಮಹಾಅಧಿವೇಶನವು ಫೆಬ್ರವರಿ 21, 22 ಮತ್ತು 23ರಂದು ಭಂರ್ಡಾಕಾರ್ಸ್ ಕಾಲೇಜಿನ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಹೇಳಿದರು. ಅವರು ಬುಧವಾರ ಕಾಲೇಜಿನಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಭಂಡಾರ್ಕಾರ್ಸ್ ಆರ್ಟ್ಸ್ & ಸಾಯನ್ಸ್ ಕಾಲೇಜು, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಬೆಂಗಳೂರು ಹಾಗೂ ಧಾರವಾಡ ವಲಯ, ಮಂಗಳೂರು ವಿಶ್ವವಿದ್ಯಾನಿಲಯದ ಇತಿಹಾಸ ಅಧ್ಯಾಪಕರ ಸಂಘ ಇವರ ಸಹಯೋಗದೊಂದಿಗೆ ಕರ್ನಾಟಕ ಇತಿಹಾಸ ಪರಿಷತ್ತು 35ನೇ ವಾರ್ಷಿಕ ಮಹಾ ಅಧಿವೇಶನ 3 ದಿನಗಳ ಕಾಲ ನಡೆಯಲಿದೆ ಎಂದರು. ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಹಾಗೂ ಕರ್ನಾಟಕ ಇತಿಹಾಸ ಪರಿಷತ್ ಸ್ಥಳೀಯ ಕಾರ್ಯದರ್ಶಿ ಕೆ. ಗೋಪಾಲ ಮಾತನಾಡಿ, ಫೆ.21ರ ಪೂರ್ವಾಹ್ನ 10 ಗಂಟೆಗೆ ಮಹಾಅಧೀವೇಶನದ ಉದ್ಘಾಟನೆಗೊಳ್ಳಲಿದೆ. ಉದ್ಘಾಟನೆಯನ್ನು ಮಾಹೆ ಪ್ರೊ- ಛಾನ್ಸಲರ್ ಡಾ. ಎಚ್.ಎಸ್.ಬಲ್ಲಾಳ್ ಅವರು ನೆರವೆರಿಸಲಿದ್ದಾರೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಮಂಗಳೂರು ಹಾಗೂ ದೆಹಲಿ ವಿಶ್ವವಿದ್ಯಾನಿಲಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಹಾಗೂ ಅಭಿವೃದ್ಧಿ ಮರೆತ ಜವಾಬ್ದಾರಿಯುತ ಕುಂದಾಪುರ ಶಾಸಕರು ಬೇಜವಾಬ್ದಾರಿಯುತವಾಗಿ ಮಾತನಾಡಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಟೀಕಿಸಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ವಿಕಾಸ್ ಹೆಗ್ಡೆ, ಜವಾಬ್ದಾರಿಯುತ ಶಾಸಕರಿಂದ ಬೇಜವಾಬ್ದಾರಿಯುತ ಮಾತು.. ಶಾಸಕರ ಅಧ್ಯಕ್ಷತೆಯ ತಾಲ್ಲೂಕು ತ್ರೈಮಾಸಿಕ ಕೆಡಿಪಿ ಸಭೆಯನ್ನು ಪ್ರತಿ ಮೂರು ತಿಂಗಳಿಗೊಮ್ಮೆ ನಡೆಸುವುದು ಕೆಡಿಪಿ ಅಧ್ಯಕ್ಷರ ಜವಾಬ್ದಾರಿ. ಆದರೆ ಕಳೆದ ಆರೇಳು ತಿಂಗಳಿಂದ ಕೆಡಿಪಿ ಸಭೆ ಕರೆಯದೆ ಇದ್ದ ಬಗ್ಗೆ ಸಮಿತಿಯ ಸದಸ್ಯರು ಆಕ್ಷೇಪ ವ್ಯಕ್ತ ಪಡಿಸಿದಾಗ ಕುಂದಾಪುರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಅವರು ಅದನ್ನು ಮೇಲಿನವರು ಕಲಿಸಿದ್ದು, ಜಿಲ್ಲಾ ಕೆಡಿಪಿ ಸಭೆ ನಡೆಯದೇ ಹಲವು ತಿಂಗಳುಗಳೇ ಕಳೆದಿದೆ ಎನ್ನುವುದು ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ಶಾಸಕರ ಬೇಜವಾಬ್ದಾರಿಯುತ ಉತ್ತರವಾಗಿದೆ. ಬೇರೆಯವರು ಏನೆ ಮಾಡಲಿ ಜನ ಶಾಸಕರನ್ನು ಆಯ್ಕೆ ಮಾಡಿದ್ದು ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಹಾಗೂ ಅಭಿವೃದ್ಧಿಗೆ, ಇದಕ್ಕೆ ಸೂಕ್ತ ವೇದಿಕೆ ಎಂದರೆ ಅದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಸಾಲಿಗ್ರಾಮದ ಚೇಂಪಿಯಲ್ಲಿ ಸ್ಕೂಟಿಗೆ ಗೂಡ್ಸ್ ರಿಕ್ಷಾ ಢಿಕ್ಕಿಯಾಗಿ ಸ್ಕೂಟಿ ಸವಾರ ಸಾವನ್ನಪ್ಪಿದ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಸ್ಕೂಟಿ ಸವಾರ ಸ್ಥಳೀಯ ಗುಂಡ್ಮಿ ನಿವಾಸಿ ಅನಂತ ಹೆಗ್ಡೆ (45) ಮೃತರು. ಬ್ರಹ್ಮಾವರ ಕಡೆಯಿಂದ ಕುಂದಾಪುರ ಕಡಗೆ ಚಲಿಸುತ್ತಿದ್ದ ಗೂಡ್ಸ್ ರಿಕ್ಷಾಕ್ಕೆ ಸಾಲಿಗ್ರಾಮ ಚೇಂಪಿಯ ವಿಶ್ವಕರ್ಮ ಸಾಂಸ್ಕೃತಿಕ ಸಭಾಭವನದ ಬಳಿ ವಿರುದ್ಧ ದಿಕ್ಕಿನಿಂದ ಬಂದ ಸ್ಕೂಟಿ ಢಿಕ್ಕಿ ಹೊಡೆದಿದ್ದು, ಸವಾರ ಅನಂತ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಫಲಕಾರಿಯಾಗಿಲ್ಲ. ಮೃತರು ಅವಿವಾಹಿತರಾಗಿದ್ದು, ಅಡುಗೆ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಸ್ಕೂಟಿಯ ಸಹ ಸವಾರರಾಗಿದ್ದ ವಿಶ್ವನಾಥ ಅವರಿಗೂ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಅಪಘಾತ ತಪ್ಪಿಸಲು ರಿಕ್ಷಾವನ್ನು ಬಲಕ್ಕೆ ತಿರುಗಿಸಿದ್ದು ರಿಕ್ಷಾವು ಡಿವೈಡರ್ ಏರಿ ಪಲ್ಟಿಯಾಗಿದ್ದು, ರಿಕ್ಷಾ ಚಾಲಕನಿಗೆ ಸಣ್ಣ ಗಾಯಗಳಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿಪ್ರರು ಸಾದಾ ಲೋಕದ ಹಿತವನ್ನು ಬಯಸುವವರು, ಹುಟ್ಟಿನಿಂದಲ್ಲ ನಮ್ಮ ಒಳ್ಳೆಯ ತನದಿಂದ ನಾವು ಸಮಾಜಕ್ಕೆ ಅನುಕರಣಿಯವಾಗಬೇಕು ನಮ್ಮ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಸಿಗಬೇಕು, ಶಿಸ್ತು ಶಿಷ್ಟಾಚಾರ ನಮ್ಮ ಬದುಕಿನ ಪ್ರಧಾನ ಅಂಗವಾದಾಗ ಜೀವನ ಆದರ್ಶವಾಗಿರುತ್ತದೆ. ಧರ್ಮರಾಯನ ಧರ್ಮಪರಾಯಣತೇ, ಕರ್ಣನ ತ್ಯಾಗ, ಶ್ರೀರಾಮಚಂದ್ರನ ಆದರ್ಶ ಅಳವಡಿಸಿಕೊಂಡಾಗ ನಾವು ಸಮಾಜಕ್ಕೆ ಆದರ್ಶರಾಗುತ್ತೇವೆ ಎಂದು ನಿವೃತ್ತ ಸೈನಿಕ ಹಾಗೂ ಅಂಕಣಕಾರ ಬೈಂದೂರು ಚಂದ್ರಶೇಖರ ನಾವುಡ ಹೇಳಿದರು. ಅವರು ಕಿರಿಮಂಜೇಶ್ವರ ಶ್ರೀ ಗುರುನರಸಿಂಹ ಸಭಾ ಭವನದಲ್ಲಿ ನಡೆದ ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ಉಪ್ಪುಂದ ವಲಯ ಇದರ 30ನೇ ವಾರ್ಷಿಕ ಅಧಿವೇಶನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಉಪನ್ಯಾಸ ನೀಡಿದರು. ಗಣಹೋಮದೊಂದಿಗೆ ಕಾರ್ಯಕ್ರಮ ಆರಂಭಿಸಲಾಯಿತು, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಬೆಂಗಳೂರು ಇದರ ಉಪಾಧ್ಯಕ್ಷ ಕೃಷ್ಣಾನಂದ ಚಾತ್ರ ಜ್ಯೋತಿ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಆಧುನಿಕ ಯುಗದಲ್ಲಿ ಯುವಸಮುದಾಯ ಸಂಘಟನಾತ್ಮಕ ಚಟುವಟಿಕೆಯಲ್ಲಿ ಹೆಚ್ಚು ತೊಡಗಿಸಿಕೊಂಡು ನಮ್ಮ ಆಚಾರ ವಿಚಾರಗಳನ್ನು ಮುಂದಿನ ತಲೆಮಾರಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅಷ್ಟ- ಬಂಧ ಬ್ರಹ್ಮಕಲಕೋತ್ಸವ ಹಾಲುಹಬ್ಬ, ವಾರ್ಷಿಕ ಪೂಜೆ, ಗೆಂಡ ಸೇವೆ ಅಂಗವಾಗಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಪದ್ಮವಿಭೂಷಣ ರಾಜರ್ಷಿ ಡಾ. ವೀರೇಂದ್ರ ಹೆಗ್ಗಡೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಭಗವಂತನ ಸಾನಿಧ್ಯವನ್ನು ಉಳಿಸಿಕೊಂಡು ಧರ್ಮದ ಸೇವಾ ಕಾರ್ಯ ಮಾಡಿದರೆ ಪುಣ್ಯ ಸಂಪಾದನೆಯಾಗುತ್ತದೆ. ಸತ್ಕಾರ್ಯ ಮಾಡಿದಲ್ಲಿ ಶಾಶ್ವತವಾಗಿ ಉಳಿಯುತ್ತದೆ ಅಧರ್ಮ ಮಾಡಿದರೆ ಅದು ತಾತ್ಕಾಲಿಕ ಮಾತ್ರ. ಸಾವಿರಾರು ವರ್ಷಗಳಿಂದ ಈ ಸೀಮೆಯನ್ನು ರಾಜ ಮಹಾರಾಜರು ಆಳಿ ಎಲ್ಲಾ ದೇವಸ್ಥಾನಗಳು ಉಳಿಯಲು ಸಾಧ್ಯವಾಯಿತು ಎಂದು ಆಶೀರ್ವಚನದಲ್ಲಿ ಹೇಳಿದರು. ಕೋಟ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ ಸಿ. ಕುಂದರ್ ಮಾತನಾಡಿ ,ಉಡುಪಿಯಲ್ಲಿ ಬಾರ್ಕೂರು ದೇವರ ನಾಡು. ದೇವರು ಧರ್ಮದ ಬಗ್ಗೆ ಅರಿತುಕೊಂಡು ಒಡನಾಡಿಯಾಗಿ ಬಾಳಿ ಸದ್ಬುದ್ದಿ ಸಂಸ್ಕಾರ ಬೆಳಸಿದಾಗ ಸಮಾಜ ಉನ್ನತ ಮಟ್ಟದಲ್ಲಿ ಬೆಳೆಯಲು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಬೇಕು ಎಂದರು. ಅಭಿವೃದ್ಧಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲೆಯ ವತಿಯಿಂದ ಸಾಧಕರಿಗೆ ಸನ್ಮಾನ ಹಾಗೂ ಕರ್ನಾಟಕ ಸರಕಾರದಿಂದ ನಾಮನಿರ್ದೆಶನಗೊಂಡ ಒಕ್ಕೂಟದ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮವನ್ನು ಮಂಗಳವಾರ ಉಡುಪಿ ನೇಜಾರಿನ ವೈಟ್ ಕಾಟೇಜ್ ನಲ್ಲಿ ಆಯೋಜಿಸಲಾಯಿತು. ಜಿಲ್ಲಾ ಸಮಿತಿಯ ಮಾಸಿಕ ಸಭೆಯಲ್ಲಿ ಸಮುದಾಯದ ಸಾಧಕರಾದ ಸಾಹಿತಿ, ಬರಹಗಾರರಾದ ಇರ್ಷಾದ್ ಮೂಡಬಿದರೆ, 2024ರ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಮುಸ್ಥಾಕ್ ಹೆನ್ನಾಬೈಲ್, ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿ ಉಪಾಧ್ಯಕ್ಷ ಹಮ್ಜತ್ ಅಬ್ದುಲ್ ರಹಿಮಾನ್, ಸಮಿತಿ ಸದಸ್ಯರಾದ ಮನ್ಸೂರ್ ಇಬ್ರಾಹಿಂ ಮರವಂತೆ, ಹಮೀದ್ ಯುಸೂಫ್ ಮೂಳೂರ್, ತಾಲೂಕು ಮಟ್ಟದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಝಹೀರ್ ಅಹಮೆದ್ ನಾಖುದಾ, ಕುಂದಾಪುರದ ಮುಕ್ರಿ ಮೊಹಮ್ಮದ್ ಅಲ್ತಾಫ್, ಬೈಂದೂರಿನ ಉಸ್ತಾದ್ ಸಾದಿಕ್ ಹೂಡೆ, ಕುಂದಾಪುರ ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಮಿತಿ ಸದಸ್ಯ ಖಲೀಫೆ ಅಬ್ದುಲ್ ಮುನಾಫ್, ಕುಂದಾಪುರ ತಾಲೂಕು ನಗರ ಯೋಜನಾ ಪ್ರಾಧಿಕಾರದ ಸದಸ್ಯ ಮೊಹಮ್ಮದ್ ಅಲ್ಫಾಜ್, ಕಾಪು ತಾಲೂಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು ರಾಜ್ಯದ ಜನರ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸುವುದರೊಂದಿಗೆ ಅವರಿಗೆ ನೆಮ್ಮದಿ ನೀಡಿ, ಸಾಮಾಜಿಕ ಪರಿವರ್ತನೆ ಮಾಡಲಾಗಿದೆ. ಈ ಯೋಜನೆಗಳು ದೇಶಕ್ಕೆ ಮಾದರಿಯಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ. ರೇವಣ್ಣ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ಯಾರಂಟಿ ಯೋಜನೆಯ ಜಿಲ್ಲಾ ಮಟ್ಟದ ಕಚೇರಿಯು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಪ್ರಾರಂಭವಾಗಿದ್ದು, ಈಗಾಗಲೇ ಸಮಿತಿಯ ಸದಸ್ಯರುಗಳಿಗೆ ಗುರುತಿನ ಚೀಟಿಯನ್ನೂ ಸಹ ನೀಡಲಾಗಿದೆ. ಗ್ಯಾರಂಟಿ ಯೋಜನೆಯ ಸಮಿತಿ ಸದಸ್ಯರುಗಳು ತಾಲೂಕಿನ ಪ್ರತೀ ಮನೆಗೂ ಭೇಟಿ ನೀಡಿ, ಪಂಚ ಗ್ಯಾರಂಟಿಗಳು ದೊರಕಿರುವ ಬಗ್ಗೆ ಮಾಹಿತಿ ಕಲೆ ಹಾಕಬೇಕು. ಒಂದು ವೇಳೆ ಯೋಜನೆಗಳು ಫಲಾನುಭವಿಗಳನ್ನು ತಲುಪುವಲ್ಲಿ ಯಾವುದೇ ನ್ಯೂನ್ಯತೆಗಳು ಇದ್ದಲ್ಲಿ ಅದನ್ನು ಪರಿಹರಿಸಿ, ವ್ಯವಸ್ಥಿತವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮತ್ಸ್ಯಕ್ಷಾಮ ತಲೆದೋರಿರುವ ಇಂದಿನ ದಿನಗಳಲ್ಲಿ ಮತ್ಸ್ಯ ಸಂತತಿಯನ್ನು ಬೆಳೆಸುವ ಉಳಿಸುವ ಉದ್ದೇಶದಿಂದ ಸಮುದ್ರಕ್ಕೆ ಮೀನಿನ ಮರಿಗಳನ್ನು ಬಿಡುವ ಕಾರ್ಯಕ್ರಮ ಕಳೆದ ಮೂರ್ನಾಲ್ಕು ವರ್ಷಗಳಿಂದ ನಡೆಯುತ್ತಿದೆ. ಇದರಿಂದ ಉತ್ತಮ ಫಲಿತಾಂಶ ಬರುತ್ತಿದ್ದು, ಮೀನುಗಾರರಿಂದಲೂ ಉತ್ತಮ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಈ ಬಾರಿ ಸುಮಾರು 8 ಲಕ್ಷ ರೂ. ವೆಚ್ಚದಲ್ಲಿ ಗಂಗೊಳ್ಳಿ, ಕೊಡೇರಿ, ಪಡುವರಿ ಹಾಗೂ ಶಿರೂರು ಭಾಗಗಳಲ್ಲಿ ತಲಾ 5400 ಮೀನು ಮರಿಗಳನ್ನು ಸಮುದ್ರಕ್ಕೆ ಬಿಡಲಾಗುತ್ತಿದೆ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಗಂಗೊಳ್ಳಿ ಮೀನುಗಾರಿಕಾ ಬಂದರಿನ ಅಳಿವೆ ಪ್ರದೇಶದಲ್ಲಿ ’ಅಳಿವೆಯಲ್ಲಿ ಮೀನು ಮರಿ ಬಿತ್ತನೆ’ ಕಾರ್ಯಕ್ರಮದಡಿ ಸೀಬಾಸ್ ಮೀನು ಮರಿಗಳನ್ನು ಮಂಗಳವಾರ ಸಮುದ್ರಕ್ಕೆ ಬಿಟ್ಟು ಅವರು ಮಾತನಾಡಿದರು. ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ವಿವೇಕ ಆರ್., ಉಪನಿರ್ದೇಶಕಿ ಅಂಜನಾದೇವಿ, ಸಹಾಯಕ ನಿರ್ದೇಶಕಿ ಸುಮಲತಾ, ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ, ಗ್ರಾಪಂ ಸದಸ್ಯರಾದ ರಾಜೇಂದ್ರ ಶೇರುಗಾರ್, ಚಂದ್ರ ಖಾರ್ವಿ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ನಗರಸಭೆಯ ನಗರೋತ್ಥಾನ 4 ನೇ ಹಂತದ ಅನುದಾನದಡಿ ಶೇ.24.10, ಶೇ. 7.25 ಮತ್ತು ಶೇ. 5 ಕ್ಕೆ ಮಂಜೂರಾದ ಮೊತ್ತದಲ್ಲಿ ವ್ಯಕ್ತಿ ಸಂಬಂಧಿತ ಸೌಲಭ್ಯಗಳಲ್ಲಿ ಹೊಲಿಗೆ ಯಂತ್ರ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಾತಿ ಮತ್ತು ಆದಾಯ ದೃಢಪತ್ರ, ಪ್ರಸಕ್ತ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ, ಪಡಿತರ ಚೀಟಿ ಪ್ರತಿ, ಆಧಾರ್ಕಾರ್ಡ್, ಅರ್ಜಿದಾರರ ಭಾವಚಿತ್ರ, ಹೊಲಿಗೆ ತರಬೇತಿ ಪಡೆದ ಬಗ್ಗೆ ದೃಢಪತ್ರದ ಪ್ರತಿಯೊಂದಿಗೆ ಮಾರ್ಚ್ 10 ರ ಒಳಗಾಗಿ ಪೌರಾಯುಕ್ತರು, ನಗರಸಭೆ ಉಡುಪಿ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವಡ್ಡರ್ಸೆ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಕುಂದಾಪುರದ ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದಲ್ಲಿ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ “ಪರಿಸರ ನಮಗೊಂದಿಷ್ಟು ಉಳಿಸಿ” ಎಂಬ ಬೀದಿ ನಾಟಕವನ್ನು ಶಿಬಿರಾರ್ಥಿಗಳು ಪ್ರದರ್ಶಿಸಿದರು. ಎನ್.ಎಸ್.ಎಸ್. ಸ್ವಯಂಸೇವಕಿ ಪವಿತ್ರಾ ಪೈ ನಿರ್ದೇಶಿಸಿ, ಪ್ರಾಧ್ಯಾಪಕ ಪ್ರವೀಣ್ ಮೊಗವೀರ್ ಗಂಗೊಳ್ಳಿ ಸಂಯೋಜಿಸಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ, ಪ್ರತಿಮಾ ರವಿರಾಜ್ ಶೆಟ್ಟಿ ಬನ್ನಾಡಿ, ಶಿಬಿರಾಧಿಕಾರಿಗಳಾದ ಡಾ| ಚೇತನ್ ಶೆಟ್ಟಿ ಕೋವಾಡಿ, ದೀಪಾ ಪೂಜಾರಿ ಹಾಗೂ ಸಹ ಶಿಬಿರಾಧಿಕಾರಿಗಳು, ಶಿಬಿರಾರ್ಥಿಗಳು, ಸ್ಥಳೀಯ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ನಾಗರಿಕರು ಉಪಸ್ಥಿತರಿದ್ದರು.
