Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ರಿ. ಮೈಸೂರಿನ ನಲಿಕಲಿ ಶಿಕ್ಷಕರ ಸಮಿತಿ ವತಿಯಿಂದ ಹಮ್ಮಿಕೊಂಡ ಚಿತ್ರ ಕೊಂದು ಕಥೆ ರಾಜ್ಯಮಟ್ಟದ ಶಾರ್ಟ್ ವಿಡಿಯೋ ಕಥಾ ಸ್ಪರ್ಧೆಯಲ್ಲಿ ಆರಾಧ್ಯ ಎ. ಎಂ. ಅವಳು ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ಈಕೆ ತಗ್ಗರ್ಸೆ ಗ್ರಾಮದ ಹಳ್ಳಿ ಹೊಸೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ವಿಧಾನ ಸಭೆ ಸಚಿವಾಲಯದಿಂದ ಪ್ರಥಮ ಬಾರಿಗೆ ನಾಡಿನ ಜನತೆಗೆ ಅತೀ ಅಮೂಲ್ಯವಾದ ಪುಸ್ತಕಗಳನ್ನು ವೀಕ್ಷಿಸಲು ಮತ್ತು ಖರೀದಿಸಲು ಕರ್ನಾಟಕ ವಿಧಾನ ಸಭಾ ಸಚಿವಾಲಯದ ವತಿಯಿಂದ ಫೆಬ್ರವರಿ 27 ರಿಂದ ಮಾರ್ಚ್ 3 ರ ವರೆಗೆ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಈ ಪುಸ್ತಕ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ನಾಡಿನ ಪ್ರಕಾಶಕರು / ಮಾರಾಟಗರಾರು ನಿಗದಿತ ಅರ್ಜಿ ನಮೂನೆಯನ್ನು ಮುಖ್ಯ ಗ್ರಂಥಪಾಲಕರು, ಕರ್ನಾಟಕ ವಿಧಾನಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು, ಇವರಿಂದ ಅಥವಾ ವಿಧಾನಸಭೆ ಸಚಿವಾಲಯದ ವೆಬ್‌ಸೈಟ್ www.kla.kar.nic.in ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಮೇಳದಲ್ಲಿ ಭಾಗವಹಿಸುವ ಪ್ರಕಾಶಕರು/ಮಾರಾಟಗಾರರು ಮಳಿಗೆಯೊಂದಕ್ಕೆ 1,000 ರೂ.ಗಳ ಭದ್ರತಾ ಠೇವಣಿ ಡಿ.ಡಿ ಯನ್ನು ಕಾರ್ಯದರ್ಶಿಗಳು, ಕರ್ನಾಟಕ ವಿಧಾನಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಇವರ ಹೆಸರಿನಲ್ಲಿ ಸಲ್ಲಿಸುವುದು. ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ 2025 ನೇ ಫೆಬ್ರವರಿ 12 ರಂದು ಸಂಜೆ 5.00 ಗಂಟೆಯೊಳಗೆ ಕಾರ್ಯದರ್ಶಿಗಳು, ಕರ್ನಾಟಕ ವಿಧಾನಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಚಿಂತನೆಗಳಿಲ್ಲದ ಮನುಷ್ಯ, ಮನಸ್ಸಿಲ್ಲದ ದೇಹ ಯಾವಾಗಲೂ ನಿರ್ಜಿವ ಸ್ಥಿತಿಯಲ್ಲಿರುತ್ತದೆ. ಹಣದ ವ್ಯಾಮೋಹದಿಂದ ದೂರವಾದಾಗ ಸಾಹಿತ್ಯ, ನೃತ್ಯ, ಸಂಗೀತಗಳು ಮೌಲ್ಯವಾಗಿ ಕೊರೆಯುತ್ತಿರುತ್ತದೆ. ಶ್ರೀಮಂತಿಕೆಯ ಉದ್ದೇಶಕ್ಕಿಂತ ಧೀಮಂತ ಮನುಷ್ಯರಾಗುವ ಕನಸು ಕಾಣುವಂತಾಗಬೇಕು ಎಂದು ಮೂಡಬಿದ್ರೆ ಆಳ್ವಾಸ ಶಿಕ್ಷಣ ಪ್ರತಿಷ್ಠಾನ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಜೀವನರಾಂ ಸುಳ್ಯ ಹೇಳಿದರು. ಲಾವಣ್ಯ ಬಂದೂರು ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಬಂದೂರು ತಾಲೂಕು ಘಟಕ ಹಾಗೂ ಅಶೋಕ ಜ್ಯುವೆಲ್ಲರ್ಸ್‌ ಉಪ್ಪುಂದ ಇವರ ಸಂಯುಕ್ತ ಆಶ್ರಯದಲ್ಲಿ ಜೆಎನ್‌ಆರ್ ಕಲಾಮಂದಿರದ ಹೊರಾಂಗಣದಲ್ಲಿ ಮೂಡಬಿದ್ರೆ ಆಳ್ವಾಸ ಶಿಕ್ಷಣ ಪ್ರತಿಷ್ಠಾನ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳ ನಾಟಕ ಪ್ರದರ್ಶನದ ಪೂರ್ವದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದರು. ರಂಗಭೂಮಿ ಶ್ರಮಜೀವಿಗಳ ಲೋಕ. ವೇದನೆಯನ್ನು ಹಾಡಾಗಿಸಿ, ಸಮುದಾಯವನ್ನು ತಲುಪುವ ಪ್ರಕ್ರಿಯೆಯಲ್ಲಿ ಅದು ನಿರತವಾಗಿದೆ. ಸುಖ:-ದುಖ:ವನ್ನು ಚಂದವಾಗಿ ಅಭಿವ್ಯಕ್ತಿಗೊಳಿಸಲು ರಂಗಭೂಮಿಯಿಂದ ಮಾತ್ರ ಸಾಧ್ಯ ಎಂದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅಧ್ಯಕ್ಷತೆ ವಹಿಸಿದ್ದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಇದರ ವತಿಯಿಂದ ಗುಜ್ಜಾಡಿಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಅಕ್ಷರ ದಾಸೋಹ ಯೋಜನೆಗೆ ಅನುಕೂಲ ಆಗುವಂತೆ ಮಕ್ಕಳಿಗೆ ಊಟ ಬಡಿಸಲು ಸ್ಟೀಲಿನ ಟ್ರಾಲಿ ಮತ್ತು ಪಾತ್ರೆಯನ್ನು ಕೊಡುಗೆಯಾಗಿ ಮಂಗಳವಾರ ನೀಡಲಾಯಿತು. ಗಂಗೊಳ್ಳಿ ರೋಟರಿ ಕ್ಲಬ್‌ನ ಅಧ್ಯಕ್ಷೆ ಚಂದ್ರಕಲಾ ಎಸ್. ತಾಂಡೇಲ ಅವರು ಸ್ಟೀಲಿನ ಟ್ರಾಲಿ ಮತ್ತು ಪಾತ್ರೆಯನ್ನು ಶಾಲೆಯ ಮುಖ್ಯ ಶಿಕ್ಷಕ ಗಂಗಾಧರ ಬಂಟ ಮತ್ತು ಎಸ್‌ಡಿಎಂಸಿ ಅಧ್ಯಕ್ಷ ನಾರಾಯಣ ಕೆ. ಅವರಿಗೆ ಹಸ್ತಾಂತರಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮನಾಥ್ ಚಿತ್ತಾಲ್, ಶಾಲೆಯ ಶತಮಾನೋತ್ಸವ ಸಮಿತಿ ಅಧ್ಯಕ್ಷ ಉಮೇಶ ಎಲ್. ಮೇಸ್ತ, ಗಂಗೊಳ್ಳಿ ರೋಟರಿ ಕ್ಲಬ್ ಸದಸ್ಯರು ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗವು ನಡೆಸಿದ ‘ಶೂಟಿಂಗ್ ಸ್ಟಾರ್ಸ್ 2025’ ರಾಷ್ಟ್ರೀಯ ಮಟ್ಟದ ಚಲನಚಿತ್ರ ನಿರ್ಮಾಣ ಮತ್ತು ಸಾಕ್ಷ್ಯಚಿತ್ರ ಸ್ಪರ್ಧೆಯಲ್ಲಿ ಆಳ್ವಾಸ್ (ಸ್ವಾಯತ್ತ) ಕಾಲೇಜು ಪದವಿ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಚಾಂಪಿಯನ್ ಆದರು.  ಶೂಟಿಂಗ್ ಸ್ಟಾರ್ಸ್ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ಗೆದ್ದ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಗೆ ಭಾಜನರಾದರು. ಫೋಟೊಗ್ರಪಿ: ಸ್ಪೂರ್ತಿ – (ಪ್ರಥಮ), ಟ್ರೈಲರ್ ಮೇಕಿಂಗ್: ಸ್ಪೂರ್ತಿ ಮತ್ತು ತಂಡ (ದ್ವಿತೀಯ), ಆರ್.ಜೆ ಹಂಟ್ – ದಿಶಾ (ದ್ವಿತೀಯ), ನ್ಯೂಸ್ ಆ್ಯಂಕರಿಂಗ್ – ರಿಶಾಂತ್ (ಪ್ರಥಮ), ಸ್ವಾತಿ (ದ್ವಿತೀಯ) ಸ್ಥಾನ ಪಡೆದರು.ವಿಜೇತ ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಟ್ರಸ್ಟಿ ವಿವೇಕ ಆಳ್ವ, ಪ್ರಾಚರ್ಯ ಕುರಿಯನ್ ಅಭಿನಂದಿಸಿದ್ದಾರೆ.  

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನ ಖಾರ್ವಿಕೇರಿ ಗಂಗೊಳ್ಳಿಯಲ್ಲಿ ಮಾರಿ ಜಾತ್ರಾ ಮಹೋತ್ಸವವು ಫೆಬ್ರವರಿ 4 ರಿಂದ 6ರ ವರೆಗೆ ನಡೆಯಲಿದೆ. ಫೆ. 5 ರಂದು ಊರಿನ ಹಾಗೂ ಪರವೂರಿನ ಭಕ್ತಾದಿಗಳು ದೇವಿಗೆ ಹರಕೆ, ಪೂಜೆಗಳನ್ನು ನೆರೆವೇರಿಸಲು ಆಗಮಿಸಲಿದ್ದು, ಈ ಸಂದರ್ಭದಲ್ಲಿ ಬಾರ್ ಮತ್ತು ವೈನ್‌ಶಾಪ್‌ಗಳು ತೆರೆದಿದ್ದಲ್ಲಿ ಮ್ಯಪಾನಾಸಕ್ತರು ಮದ್ಯಪಾನ ಮಾಡಿ ಗಲಭೆ ಮಾಡುವ ಸಾಧ್ಯತೆ ಇರುವ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶೀಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ. ಗಂಗೊಳ್ಳಿ ಪೊಲೀಸ್ ಠಾಣಾ ಸರಹದ್ದಿನ ಹಾಗೂ ಗುಜ್ಜಾಡಿ ಗ್ರಾಮಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳ ಮದ್ಯಮಾರಾಟವನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಖಾರ್ವಿಕೇರಿ ಗಂಗೊಳ್ಳಿ ಮತ್ತು ಶಾಲೆಯ ಅಮೃತ ಮಹೋತ್ಸವ ಸಮಿತಿ ವತಿಯಿಂದ ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ಕಾರ್ಯಾಗಾರ ಇತ್ತೀಚಿಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿದ್ದ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯ ಪಿಎಸ್‌ಐ ಮುಕ್ತ ಅವರು ಮಕ್ಕಳ ಹಕ್ಕುಗಳು ಹಾಗೂ ಅದರ ರಕ್ಷಣೆ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರವಿಶಂಕರ್ ಖಾರ್ವಿ ವಹಿಸಿದ್ದರು. ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ದಿವಾಕರ ಖಾರ್ವಿ, ಸ್ಥಳ ದಾನಿ ಅಶೋಕ್ ಕಾನೋಜಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಲಕ್ಷ್ಮಣ್ ಖಾರ್ವಿ, ಪ್ರಭಾರ ಮುಖ್ಯ ಶಿಕ್ಷಕಿ ಯಶೋಧ ಉಪಸ್ಥಿತರಿದ್ದರು. ಸಹಶಿಕ್ಷಕಿಯರಾದ ಉಷಾ ಸ್ವಾಗತಿಸಿದರು. ಅನುಷಾ ಸಿ. ಬಂಗೇರಾ ಕಾರ್ಯಕ್ರಮ ನಿರ್ವಹಿಸಿದರು. ಆಶಾಲತಾ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮೃದು ಕೌಶಲ್ಯ ತರಬೇತಿ ಕಾರ್ಯಕ್ರಮವನ್ನು ನಾಂದಿ ಫೌಂಡೇಶನ್ ಮತ್ತು ಜಿಟಿಟಿ (GTT) ಫೌಂಡೇಶನ್ ಸಹಯೋಗದಲ್ಲಿ ಉದ್ಘಾಟಿಸಲಾಯಿತು. 8 ದಿನಗಳ ಈ ತರಬೇತಿ ಕಾರ್ಯಕ್ರಮವು ವಿದ್ಯಾರ್ಥಿಗಳ ಉದ್ಯೋಗಾರ್ಹತೆ ಕೌಶಲ್ಯಗಳನ್ನು ಉತ್ತೇಜಿಸುವ ಹಾಗೂ ಸ್ಪರ್ಧಾತ್ಮಕ ಉದ್ಯೋಗ ಮಾರುಕಟ್ಟೆಗೆ ತಯಾರಿಸಲು ಉದ್ದೇಶಿಸಿದೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಮಾತನಾಡಿ, ಉದ್ಯೋಗ ಪಡೆಯಲು ಅಗತ್ಯವಿರುವ ಕೌಶಲ್ಯಗಳ ಮಹತ್ವವನ್ನು ವಿವರಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕರ್ನಾಟಕ ಬ್ಯಾಂಕ್, ಕುಂದಾಪುರ ಶಾಖೆಯ ಅಧಿಕಾರಿಯಾದ ಉದಯ ಹೆಗ್ಡೆ ಮಾತನಾಡಿ, ಈ ಕಾಲದ ಸ್ಪರ್ಧಾತ್ಮಕ ಉದ್ಯೋಗ ಕ್ಷೇತ್ರದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಅಗತ್ಯವಾದ ಜಾಗೃತಿಯ ಬಗ್ಗೆ ಉಪನ್ಯಾಸ ನೀಡಿದರು. ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದ ಅಧಿಕಾರಿಯಾದ ತಿಮ್ಮಪ್ಪ ಡಿ. ಎಸ್. ಸ್ವಾಗತಿಸಿದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಹಾಗೂ ಸಹ ಪ್ರಾಧ್ಯಾಪಕರಾದ ಮಹೇಶ್ ಕುಮಾರ್ ಅವರು ಉದ್ಯೋಗ ತರಬೇತಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಆಜ್ರಿ ಮಾನಂಜೆ, ಕಮಲಶಿಲೆ ಅಲ್ಲಿ ನೆರವೇರಿತು. ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕರಾದ ಶ್ರೀಧರ ಅಡಿಗ ಅವರು ಶಿಬಿರವನ್ನು ಉದ್ಘಾಟಿಸಿ ಶಿಬಿರದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಶಿಬಿರಕ್ಕೆ ಶುಭಹಾರೈಸಿದರು. ತದನಂತರ  ಹಂದಿಮನೆ ರಾಜೀವ ಶೆಟ್ಟಿ ಅವರು ವಾರ್ಷಿಕ ವಿಶೇಷ ಶಿಬಿರದ ಲೋಗೋ ವನ್ನು ಅನಾವರಣ ಗೊಳಿಸಿ ಭೌತಿಕ, ದೈಹಿಕ ಶ್ರಮದ ಮಹತ್ವವನ್ನು ತಿಳಿಸಿ ಶಿಬಿರ ಯಶಸ್ವಿಯಾಗಲೆಂದು ಹಾರೈಸಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಅವರು ಏನ್. ಎಸ್. ಎಸ್. ಶಿಬಿರದ ಧ್ಯೇಯೋದ್ದೇಶಗಳನ್ನು ತಿಳಿಸಿ ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಹೇಳಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಸತ್ಯನಾರಾಯಣ ಹತ್ವಾರ್, ಕಾಲೇಜಿನ ಕಛೇರಿ ಪ್ರಬಂಧಕರಾದ ಗೋಪಾಲ ನಾಯ್ಕ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಗೌರಿ ಬಾಯಿ, ಏನ್.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವಕ್ವಾಡಿ ಗ್ರಾಮದ ಗುಡಾರ್‌ಮಕ್ಕಿ ನಿವಾಸಿ ಬೇಬಿ ಶೆಡ್ತಿ (65) ಅವರು ಮನೆಯ ಹತ್ತಿರದ ಕೊಟ್ಟಿಗೆಯ ಮಾಡಿನ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲವು ದಿನಗಳಿಂದ ಅಧಿಕ ರಕ್ತದೊತ್ತಡ, ಕಾಲು ಗಂಟುನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಖಿನ್ನಿತರಾಗಿ ಮನೆಯ ಹತ್ತಿರದ ಕೊಟ್ಟಿಗೆಯ ಮಾಡಿನ ಪಕ್ಕಾಸಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೃತರ ಸಹೋದರ ವಿ. ನಾರಾಯಣ ಶೆಟ್ಟಿ ನೀಡಿದ ದೂರಿನಂತೆ ಕುಂದಾಪುರ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More