Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಮೊವಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ದಾನಿ ಸುರೇಶ ಮೊಗವೀರ ತ್ರಾಸಿ ಇವರು ಜಿನ್‌ಟೆಕ್ಸ್ ಕಂಪೆನಿಯ ಸಹಯೋಗದೊಂದಿಗೆ ಉಚಿತವಾಗಿ ನೀಡಿದ ಸಮವಸ್ತ್ರಗಳ ವಿತರಣಾ ಕಾರ್ಯಕ್ರಮವು ಶಾಲೆಯ ಸಭಾಂಗಣದಲ್ಲಿ ನಡೆಯಿತು. ಸಮವಸ್ತ್ರವನ್ನು ವಿತರಿಸಿ ಮಾತನಾಡಿದ ಸುರೇಶ ಮೊಗವೀರ, ಸರಕಾರಿ ಶಾಲೆಗಳ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ದೃಷ್ಟಿಯಿಂದ ಕಾರ್ಯಕ್ರಮ ರೂಪಿಸಲಾಗಿದೆ. ಶಾಲೆಯ ಅಭಿವೃದ್ಧಿಯಲ್ಲಿ ಕೈಜೋಡಿಸಲಾಗುವುದು ಎಂದರು. ಇದೇ ಸಂದರ್ಭ ದಾನಿ ಸುರೇಶ ಮೊಗವೀರ ಅವರನ್ನು ಸನ್ಮಾನಿಸಲಾಯಿತು. ತಾಲೂಕು ಪಂಚಾಯತ್ ಸಾಮಾಜಿಕ ಪರಿಷತ್ತಿನ ಕಾರ್ಯಕ್ರಮ ವ್ಯವಸ್ಥಾಪಕ ಸುರೇಂದ್ರ, ಎಸ್‌ಡಿಎಂಸಿ ಅಧ್ಯಕ್ಷೆ ಸಂಧ್ಯಾ ಕಾರಂತ್, ತ್ರಾಸಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಹೇಮಾ, ಎಸ್‌ಡಿಎಂಸಿ ಸದಸ್ಯರು, ಹಳೆ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ ಖಾರ್ವಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲೆಯ ಮುಖ್ಯ ಶಿಕ್ಷಕಿ ಶರಾವತಿ ಸ್ವಾಗತಿಸಿದರು. ರಜನಿ ದಾನಿಗಳನ್ನು ಪರಿಚಯಿಸಿದರು. ಭಾಗೀರಥಿ ಕಾರ್ಯಕ್ರಮ ನಿರ್ವಹಿಸಿದರು. ವತ್ಸಲಾ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ಸಾಂಪ್ರದಾಯಿಕ ದಿನ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗುರುಕುಲ ವಿದ್ಯಾಸಂಸ್ಥೆಯ ಜಂಟಿ ಕಾರ್ಯ ನಿರ್ವಾಹಕರಾದ ಅನುಪಮಾ ಎಸ್. ಶೆಟ್ಟಿ ಮಾತನಾಡಿ, ಮಕ್ಕಳಿಗೆ ನಮ್ಮ ಸನಾತನ ಧರ್ಮದ ತತ್ವಗಳನ್ನು ತಿಳಿಸುವುದರ ಜೊತೆಗೆ ಎಲ್ಲರೂ ತಮ್ಮಲ್ಲಿ ಅವುಗಳನ್ನು ಅಳವಡಿಸಿ ಕೊಳ್ಳುವ ಮೂಲಕ ನಮ್ಮ ಸಂಸ್ಕೃತಿ, ಸಂಪ್ರದಾಯವನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿ, ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ, ಉಳಿದ ಮಕ್ಕಳು ಅವರನ್ನು ಸ್ಪೂರ್ತಿಯಾಗಿ ತೆಗೆದುಕೊಂಡು ತಮ್ಮ ಗುರಿ ಸಾಧನೆಯನ್ನು ಸಾಕಾರ ಗೊಳಿಸಿಕೊಳ್ಳಿ ಎಂದು ಶುಭ ಹಾರೈಸಿದರು. ವಿದ್ಯಾರ್ಥಿಗಳಿಗೆ ಸಾಂಪ್ರದಾಯಿಕ ದಿನದ ಪ್ರಯುಕ್ತ ಸಿಹಿ ತಿಂಡಿ ವಿತರಿಸಲಾಯಿತು. ಪೋಷಕರಿಗಾಗಿ ಸಾಂಪ್ರದಾಯಿಕ ವಸ್ತು ಪ್ರದರ್ಶನವನ್ನು ಕೂಡ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ವಿಶೇಷವಾಗಿ 2024ರ ಕಾರಂತ ಬಾಲ ಪುರಸ್ಕಾರ ಪ್ರಶಸ್ತಿ ಪಡೆದ ವಿದ್ಯಾರ್ಥಿನಿ ಸಾನಿಧ್ಯಳನ್ನು ಗೌರವಪೂರ್ವಕವಾಗಿ ಪೋಷಕರ ಎದುರಿನಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ “ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಾಯ್ದೆಗಳ ಅನುಷ್ಠಾನದ ಕುರಿತು ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರವು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೀಶ್ ಪಿ. ಆರ್ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ರಾಮದಾಸ್, ಜಿಲ್ಲೆಯ ವಿವಿಧ ತಾಲೂಕುಗಳ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕೊಪ್ಪಳ ಜಿಲ್ಲೆಯ ಮಕ್ಕಳ ರಕ್ಷಣಾ ಯೋಜನೆ ಯೂನಿಸೆಫ್‌ನ ಪ್ರಾದೇಶಿಕ ಸಂಯೋಜಕ ಡಾ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯವಿರುವ ಜಲ್ಲಿ ಹಾಗೂ ಮರಳು ಸರಳವಾಗಿ ನಿಗಧಿತ ಬೆಲೆಗೆ ಜನಸಾಮಾನ್ಯರಿಗೆ ದೊರಕುವಂತೆ ಗಣಿ ಇಲಾಖೆ ಕ್ರಿಯಾಶೀಲವಾಗಿ ಕಾರ್ಯವನ್ನು ನೂತನ ಕಟ್ಟಡದಲ್ಲಿ ನಿರ್ವಹಿಸಲಿ ಎಂದು ಶಾಸಕ ಯಶ್‌ಪಾಲ್ ಎ. ಸುವರ್ಣ ಹೇಳಿದರು.  ಅವರು ಅಂದು ನಗರದ ದೊಡ್ಡಣಗುಡ್ಡೆಯಲ್ಲಿ ಹಿರಿಯ ಭೂ ವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಖನಿಜ ಭವನ-ನೂತನ ಕಚೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಉಡುಪಿ ಜಿಲ್ಲೆಯು ವಿಶ್ವದಲ್ಲಿಯೇ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಜಿಲ್ಲೆಯಾಗಿದೆ. ಅಭಿವೃದ್ಧಿ ಹೊಂದಲು ಹೊಸ ಹೊಸ ಬೃಹತ್ ಕಟ್ಟಡಗಳು, ರಸ್ತೆ, ಸೇತುವೆ ನಿರ್ಮಾಣವಾಗುವುದರೊಂದಿಗೆ ಜಿಲ್ಲೆಯ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗುತ್ತದೆ. ಇವುಗಳ ನಿರ್ಮಾಣಕ್ಕೆ ಅಗತ್ಯವಿರುವ ಹೊÊಯ್ಗೆ ಹಾಗೂ ಜಲ್ಲಿ ನಿರ್ಮಾಣಕ್ಕೆ ತಕ್ಕಂತೆ ಪೂರೈಸುವ ಕಾರ್ಯ ಗಣಿ ಇಲಾಖೆಯ ಸಹಕಾರದೊಂದಿಗೆ ಆಗಬೇಕು ಎಂದರು. ಜಿಲ್ಲೆಯ ಜನರಿಗೆ ಗಣಿ ಇಲಾಖೆ ತಮ್ಮ ಸೇವೆಯನ್ನು ಮಾಡಲು ನೂತನವಾಗಿ 2 ಕೋಟಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ,ಉಡುಪಿ: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ.ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಎಂಟರ್‌ಪ್ರಿನೋರ್‌ಶಿಪ್ ವಿಷಯದ ಬಗ್ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಗರಿಷ್ಟ 5 ಲಕ್ಷ ರೂ. ಗಳ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಸದರಿ ತರಬೇತಿ ಹಾಗೂ ಸಹಾಯಧನಕ್ಕಾಗಿ ಜಿಲ್ಲೆಯ ಪ.ಜಾತಿಗೆ ಸೇರಿದ 04 ಅಭ್ಯರ್ಥಿಗಳಿಗೆ ಹಾಗೂ ಪ.ಪಂಗಡಕ್ಕೆ ಸೇರಿದ 03 ಅಭ್ಯರ್ಥಿಗಳ ಗುರಿಯನ್ನು ನಿಗಧಿಪಡಿಸಲಾಗಿರುತ್ತದೆ. ಸದರಿ ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಜಾರಿಗೊಳಿಸಲು ಉದ್ದೇಶಿಸಲಾಗಿರುತ್ತದೆ. ಜಿಲ್ಲೆಯಲ್ಲಿ ಸದರಿ ತರಬೇತಿ ಪಡೆಯಲು ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ 20 ರಿಂದ 45 ವರ್ಷದ ವಯೋಮಿತಿಯೊಳಗಿನ ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಫೆಬ್ರವರಿ 5…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸಂತ ಜೊಸೆಫರ ಶಾಲೆಯಲ್ಲಿ ಉತ್ತರ ಕರ್ನಾಟಕದ ಬೇರೆ ಬೇರೆ ಭಾಗಗಳಿಂದ ಶಿಕ್ಷಣದ ಬೆಳಕನ್ನು ಹುಡುಕಿಕೊಂಡು ಬಂದ ವಿದ್ಯಾರ್ಥಿನಿಯರಿದ್ದಾರೆ. ಆ ಎಲ್ಲ ಮಕ್ಕಳು, ಸುತ್ತಮುತ್ತಲಿನ ಅನೇಕ ನಾಗರೀಕರು ಮತ್ತು ಕಾನ್ವೆಂಟಿನ ಸಿಸ್ಟರ್‌ ಗಳು ನಮ್ಮೊಂದಿಗೆ ಅಮವಾಸ್ಯೆ ರಾತ್ರಿಯ ಆಕಾಶವನ್ನು ಕಣ್ತುಂಬಿಕೊಳ್ಳಲು ಒಟ್ಟಿಗೆ ಸೇರಿದ್ದರು. ಭಾರತ ಜ್ಞಾನ ವಿಜ್ಞಾನ ಸಮಿತಿಯ ಕುಂದಾಪುರ ಘಟಕ ಹಮ್ಮಿಕೊಂಡ ʻನಕ್ಷತ್ರʼ ಆಕಾಶ ವೀಕ್ಷಣೆಯ ಈ ಕಾಯಕ್ರಮ ಆರಂಭವಾದದ್ದು ರವಿ ಕಟ್ಕೆರೆ ಮತ್ತು ಸಂಧ್ಯಾ ನಾಯಕರವರ ಹಾಡಿನೊಂದಿಗೆ. ಇವರಿಬ್ಬರ ದನಿಗೆ ಮಕ್ಕಳು ದನಿಗೂಡಿಸುತ್ತಾ ಸಚಿನ್‌ ಅಂಕೋಲಾರವರ ಬಾರೆ ಗೆಳತಿ ಬಾರೆ ಹಾಡಿನ ಸಾಲುಗಳನ್ನು ಹಾಡಿದ್ದು ಕಾರ್ಯಕ್ರಮಕ್ಕೆ ಉತ್ತಮ ಪ್ರವೇಶವನ್ನು ಒದಗಿಸಿತು. ಬಿ.ಜಿ.ವಿ.ಎಸ್‌. ಕುಂದಾಪುರ ಘಟಕದ ಅಧ್ಯಕ್ಷರಾದ ಆಶಾ ಕರ್ವಾಲೋ ಮತ್ತು ಶಾಲೆಯ ಸಂಚಾಲಕರ ಸಿಸ್ಟರ್‌ ಸುಪ್ರಿಯಾ ಅವರ ಶುಭಹಾರೈಕೆಗಳ ನಂತರ ಶಿಕ್ಷಕ ಉದಯ ಗಾಂವಕಾರ ಆಕಾಶ ವೀಕ್ಷಣೆಗೆ ಮಕ್ಕಳನ್ನು ಸಜ್ಜುಗೊಳಿಸುವ ತರಗತಿ ನಡೆಸಿದರು. ನಂತರ ಅವರು ಮಕ್ಕಳನ್ನು ಹೊರಗೆ ಕರೆದು ಆಕಾಶದ ಬೆರಗನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಶಂಕರನಾರಾಯಣ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಉಮೇಶ್ ಶೆಟ್ಟಿ ಕಲ್ಗದ್ದೆ, ಉಪಾಧ್ಯಕ್ಷರಾಗಿ ಕೃಷ್ಣಮೂರ್ತಿ ಡಿ. ಶೇಟ್ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ನಿರ್ದೇಶಕರಾದ ಸಚ್ಚಿದಾನಂದ ವೈದ್ಯ, ಮಂಜುನಾಥ್ ಕುಲಾಲ್, ವಿಜಯ್ ಮಡಿವಾಳ, ರವಿ ಕುಲಾಲ್, ಮಮತಾ ಆರ್ ಶೆಟ್ಟಿ, ಲತಾ ಡಿ ಎಸ್, ಗಿರಿಜಾ, ರಾಜೀವ ಶೆಟ್ಟಿ, ರಾಮಚಂದ್ರ ದೇವಾಡಿಗ, ಸದಾಶಿವ ಶೆಟ್ಟಿ, ಕೃಷ್ಣ ನಾಯಕ್ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಹಾಗೂಉಪಧ್ಯಕ್ಷ ಹುದ್ದಗಳಿಗೆ ಶನಿವಾರ ಚುನಾವಣೆ ನಡೆಯಿತು. ಚುನಾವಣಾಧಿಕಾರಿ ಸುಮಿತ್ರಾ ಕುಮಾರಿ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಹಕರಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಪ್ರತಿಯೊಬ್ಬ ಮನಷ್ಯನಿಗೂ ನಮ್ಮ ಸಂಸ್ಕೃತಿ ಹೊರೆಸಿರುವ ದೈವ ಋಣ, ಪಿತೃ ಋಣ, ಆಚಾರ್ಯ ಋಣ, ಸಮಾಜದ ಋಣ ಎಂಬ ನಾಲ್ಕು ಋಣಗಳನ್ನು ತೀರಿಸುವ ಹೊಣೆ ಇದೆ. ಇವು ಕೇಳಲು ಸರಳ ಎನಿಸಿದರೂ ತೀರಿಸಲು ಒಂದು ಜನ್ಮ ಸಾಲದು. ಋಣಮುಕ್ತರಾಗುವಲ್ಲಿಯೇ ಬದುಕಿನ ಸಾರ್ಥಕ್ಯವಿದೆ ಎಂದು ವೈದ್ಯ, ಸಾಹಿತಿ ಡಾ. ನಾ. ಸೋಮೇಶ್ವರ್‌ ಹೇಳಿದರು. ಅವರು ಇಲ್ಲಿನ ಶಾರದಾ ವೇದಿಕೆಯಲ್ಲಿ ಗುರುವಾರ ಸುರಭಿ ರಿ. ಬೈಂದೂರು ಸಂಸ್ಥೆಯ ಸುರಭಿ ಜೈಸಿರಿ ಹಾಗೂ ಬೆಳಿಹಬ್ಬದ ಸಂಭ್ರಮಾಚರಣೆಯಲ್ಲಿ ಸುರಭಿಯ 11ನೇ ಬಿಂದುಶ್ರೀ ಪ್ರಶಸ್ತಿ ಸ್ವೀಕರಿಸಿ ಮಾತನಾಡಿ ಕೆಲವು ಸೇವೆಯನ್ನು ಹಣದಿಂದ ಅಳೆಯಲು ಸಾಧ್ಯವಿಲ್ಲ. ಭವ್ಯ ಭಾರತದ ಭವಿಷ್ಯವನ್ನು ರೂಪಿಸುವ ಅದ್ಯುತ ಶಿಲ್ಪಿಗಳು ಅಧ್ಯಾಪಕರು. ಅವರ ಋಣವನ್ನು ನಾವು ಉತ್ತಮ ವಿಚಾರವನ್ನು ಹಂಚುವ ಮೂಲಕ ತೀರಿಸಬೇಕಾದ ಹೊಣೆ ನಮ್ಮದಾಗಿದೆ. ಚಂದನ ವಾಹಿಯ ನಿರೂಪಕನಾಗಿ ಆ ಕಾರ್ಯವನ್ನು ಆತ್ಮತೃಪ್ತಿಯೊಂದಿಗೆ ಮಾಡುತ್ತಿದ್ದೇನೆ ಎಂದರು. ಪ್ರಶಸ್ತಿ ಸ್ವೀಕರಿಸುವ ವೇಳೆ ಭಾವುಕರಾಗಿದ್ದ ಅವರು ಮುಂದುವರಿದು ಮಾತನಾಡಿ, ಮಕ್ಕಳಿಗೆ ಸಂಸ್ಕಾರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಎಂ.ಬಿ.ಎ. ಪದವಿ ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿಯು ಸಲುವಾಗಿ ಡಿಜಿಟಲ್  ಮಾರ್ಕೆಟಿಂಗ್ ವಿಷಯದ ಕುರಿತಾಗಿ ವಿಶೇಷ ತರಬೇತಿಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಡಾ. ನಿಧೀಶ್ ರಾವ್ ಪ್ರೊಫೆಸರ್ ನಿಟ್ಟೆ ಅವರು ಡಿಜಿಟಲ್ ಮಾರ್ಕೆಟಿಂಗ್ ಕುರಿತಾಗಿ ಮಾರ್ಗದರ್ಶನ ನೀಡಿದರು. ಡಿಜಿಟಲ್ ಮಾರ್ಕೆಟಿಂಗ್ ಮಹತ್ವ, ಎಸ್ಇಒ ತಂತ್ರಗಳು, ಸೋಶಿಯಲ್ ಮೀಡಿಯಾ ಮಾರ್ಕೆಟಿಂಗ್, ಪೇ ಪರ್ ಕ್ಲಿಕ್ ಜಾಹೀರಾತುಗಳು ಕಂಟೆಂಟ್ ಮಾರ್ಕೆಟಿಂಗ್ ಮತ್ತು ಬ್ರಾಂಡ್ ಬಿಲ್ಡಿಂಗ್, ಪ್ರಾಯೋಗಿಕ ಉದಾಹರಣೆಗಳೂಂದಿಗೆ‌ ವಿದ್ಯಾರ್ಥಿಗಳೂಂದಿಗೆ ಚರ್ಚಿಸಿದರು . ಕಾರ್ಯಕ್ರಮದಲ್ಲಿ ಎಂ.ಬಿ.ಎ. ವಿಭಾಗದ ಮುಖ್ಯಸ್ತೆ ಡಾ. ಸುಚಿತ್ರಾ ಪೂಜಾರಿ ಮತ್ತು ಉಪನ್ಯಾಸಕರು ಉಪಸ್ಥಿತಿಯಲ್ಲಿದ್ದರು. ಕಾರ್ಯಕ್ರಮದಲ್ಲಿ ದ್ವಿತೀಯ ವಿಭಾಗದ ವಿದ್ಯಾರ್ಥಿನಿಯಾದ ರಶ್ಮಿತಾ ನಿರೂಪಿಸಿ, ಸ್ವಾಗತಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ವೇತನ ಪತ್ರ/ಬ್ಯಾಂಕ್ ಸ್ಟೇಟ್‌ಮೆಂಟ್ ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು. ತಹಸೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು. ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲ್ಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ, ಆರು…

Read More