Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: 12 ನೇ ಶತಮಾನವು ವಚನ ಸಾಹಿತ್ಯದಲ್ಲಿ ಬಹು ಮುಖ್ಯವಾದ ಕಾಲಘಟ್ಟವಾಗಿದ್ದು, ವಚನಕಾರರು ತಮ್ಮ ವಚನಗಳ ಮೂಲಕ ಸಮಾಜದಲ್ಲಿದ್ದ ತಾರತಮ್ಯವನ್ನು ಹೋಗಲಾಡಿಸಿ, ಸಮಾನತೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಅಜ್ಜರಕಾಡುವಿನ ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪಿ.ಜಿ.ಎ.ವಿ. ಹಾಲ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ, ಶ್ರೀ ಮಹಾಯೋಗಿ ವೇಮನ ಮತ್ತು ಶ್ರೀಅಂಬಿಗರ ಚೌಡಯ್ಯರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಹನೀಯರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ವಚನಕಾರರು ಜನರಲ್ಲಿ ವೈಚಾರಿಕ ಪ್ರಜ್ಞೆ ಮೂಡಿಸುವುದರೊಂದಿಗೆ ಸಮಾಜದಲ್ಲಿನ ಮೌಢ್ಯ, ಮೇಲು-ಕೀಳು, ಶ್ರೀಮಂತ-ಬಡವ, ಕಂದಾಚಾರದ ವಿರುದ್ಧ ಹೋರಾಡಿದ್ದಾರೆ. ಇಂತಹ ವಚನಕಾರರ ಜಯಂತಿಗಳನ್ನು ಆಚರಿಸುವ ಮೂಲಕ ಅವರುಗಳ ಚಿಂತನೆಗಳನ್ನು, ತತ್ವ ಆದರ್ಶಗಳನ್ನು ಜೀವನದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅವಿಭಕ್ತ ಕುಟುಂಬ ವ್ಯವಸ್ಥೆಯು ನಮ್ಮ ದೇಶದ ಶ್ರೀಮಂತ ಸಂಸ್ಕೃತಿಯ ಭಾಗವಾಗಿದೆ. ಈ ವ್ಯವಸ್ಥೆಯಲ್ಲಿ ಕುಟುಂಬದ ಸದಸ್ಯರಲ್ಲಿ ನಾವು ನಮ್ಮವರು ಎಂಬ ಭಾವನೆ ಮೂಡಿ ಒಬ್ಬರಿಗೊಬ್ಬರು ಹೊಂದಾಣಿಕೆಯಿಂದ ಸಹಕಾರ ಮನೋಭಾವದಿಂದ ಜೀವನ ಸಾಗಿಸುತ್ತಾರೆ. ಇದು ಉತ್ತಮ ಸಮಾಜ ಮುನ್ನಡೆಗೆ ಸಹಾಯವಾಗುತ್ತದೆ. ಇಲ್ಲಿ ಯಾರಿಗಾದರೂ ಸಮಸ್ಯೆ ಎದುರಾದರೇ ಆಡಳಿತ ಮಂಡಳಿ ಮತ್ತು ಎಲ್ಲರೂ ಜೊತೆಗೆ ನಿಂತು ಸಹಕರಿಸುತ್ತಾರೆ ಎಂದು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ರಿ. ಇದರ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಹೇಳಿದರು.  ಅವರು ಹೃದಯ ಸಂಬಂಧಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿನಿ ತ್ರಿಷಿಕಾಳ ಹೃದಯ ಶಸ್ತ್ರ ಚಿಕಿತ್ಸೆಗೆ ಶಾಲಾ ಆಡಳಿತ ಮಂಡಳಿ, ಪೋಷಕರು, ಶಿಕ್ಷಕ – ಶಿಕ್ಷಕೇತರ ವೃಂದದವರು ನೀಡಿದ  ದೇಣಿಗೆ ಸಹಾಯಧನ ಒಟ್ಟು 3,01,465 ರೂಪಾಯಿಗಳನ್ನು ಬಾಲಕಿಯ ತಾಯಿಗೆ ಹಸ್ತಾಂತರಿಸಿ ಮಾತನಾಡಿದರು. ಶಾಲೆಯೂ ಕೂಡ ಒಂದು ತುಂಬು ಕುಟುಂಬಕ್ಕೆ ಉದಾಹರಣೆಯಾಗಿದ್ದು, ಇಲ್ಲಿ ಮಕ್ಕಳು, ಪೋಷಕರು, …

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಈಗಿನ ಔದ್ಯೋಗಿಕ ಪ್ರಪಂಚದಲ್ಲಿ ವಿದ್ಯಾರ್ಥಿಗಳು ಪ್ರೌಢ ಶಿಕ್ಷಣದಿಂದಲೇ ವೃತ್ತಿಯ ಬಗ್ಗೆ ಮಾರ್ಗದರ್ಶನ ಪಡೆದು ನಿಖರ ಗುರಿಯೆಡೆ ತಲುಪುವಲ್ಲಿ ಈ ಕಾರ್ಯಕ್ರಮ ಸಹಕರಿಯಾಗಲಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕುಂದಾಪುರದ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಎಸ್. ಶೆಟ್ಟಿ ಹೇಳಿದರು. ಅವರು ಕರ್ನಾಟಕ ಸರಕಾರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಭಿವೃದ್ಧಿ ನಿಗಮ, ಸಮಗ್ರ ಶಿಕ್ಷಣ ಕರ್ನಾಟಕ ಮತ್ತು ಅನಹತ ಯುನೈಟೆಡ್ ಎಫರ್ಟ್ಸ್ ಬೆಂಗಳೂರು ಇವರ ಸಹಯೋಗದಲ್ಲಿ ರಾಜ್ಯದ 150 ಶಾಲೆಗಳಲ್ಲಿ ಅನುಷ್ಠಾನಗೊಂಡಿರುವ “ನನ್ನ ವೃತ್ತಿ ನನ್ನ ಆಯ್ಕೆ” ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿ.ಜಿ., ಪ್ರಭಾರ ಉಪ ಪ್ರಾಂಶುಪಾಲರಾದ ವಿನುತಾ ಗಾಂವಕರ್, ಜಿಲ್ಲಾ ನೋಡಲ್ ಪ್ರಸನ್ನ ಕುಮಾರ್, ನನ್ನ ವೃತ್ತಿ ನನ್ನ ಆಯ್ಕೆ ಮಾರ್ಗದರ್ಶಕ ಶಿಕ್ಷಕರಾದ ಅರುಣ್ ಶೆಟ್ಟಿ ಉಳ್ತೂರು, ಸ್ಪೂರ್ತಿ ಆಚಾರ್ಯ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಇಂದಿರಾಗಾಂಧಿ, ಡಾ. ಬಿ. ಆರ್ ಅಂಬೇಡ್ಕರ್ ಹಾಗೂ ನಾರಾಯಣ ಗುರು ವಸತಿ ಶಾಲೆಗಳಲ್ಲಿ 2025-26ನೇ ಸಾಲಿಗೆ 6 ನೇ ತರಗತಿ ದಾಖಲಾತಿಗಾಗಿ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಪ್ರವೇಶಾತಿಗಾಗಿ ಹತ್ತಿರದ ವಸತಿ ಶಾಲೆಗಳಲ್ಲಿ ಜನವರಿ 25 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಪ್ರವೇಶ ಪರೀಕ್ಷೆಯು ಫೆಬ್ರವರಿ 15 ರಂದು ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರುಗಳಾದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರೂರು ಮೊ.ನಂ: 9482625925, ಕಳತ್ತೂರು ಮೊ.ನಂ: 9535225409, ಪಟ್ಲ ಹಿರೇಬೆಟ್ಟು ಮೊ.ನಂ; 8970292710, ಹೆರಂಜಾಲು ಮೊ.ನಂ: 8073860074, ಮಿಯ್ಯಾರು ಮೊ.ನಂ: 9686898326 ಹಾಗೂ ಯಡ್ಯಾಡಿ-ಮತ್ಯಾಡಿ ಮೊ.ನಂ: 9901519126, ಶಂಕರನಾರಾಯಣ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ ಮೊ.ನಂ: 6363120177, ಸಿದ್ದಾಪುರದ ಇಂದಿರಾಗಾAಧಿ ವಸತಿ ಶಾಲೆ ಮೊ.ನಂ: 9482487266 ಮತ್ತು ವಡ್ಡರ್ಸೆ ನಾರಾಯಣ ಗುರು ವಸತಿ ಶಾಲೆ ಮೊ.ನಂ:…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸುರಭಿ ರಿ. ಬೈಂದೂರು ಸಂಸ್ಥೆಯ ಮೂಲಕ ಕಳೆದ 10 ವರ್ಷಗಳಿಂದ ನಾಡಿನ ಸಾಂಸ್ಕೃತಿಕ ಕ್ಷೇತ್ರದ ಖ್ಯಾತನಾಮರಿಗೆ ನೀಡಲಾಗುತ್ತಿರುವ ಬಿಂದುಶ್ರೀ ಪ್ರಶಸ್ತಿಯನ್ನು ಈ ಭಾರಿ ನಾಡಿನ ಖ್ಯಾತ ಸಾಹಿತಿ, ವೈದ್ಯ, ನಿರೂಪಕ ಡಾ. ನಾ. ಸೋಮೇಶ್ವರ ಅವರಿಗೆ ನೀಡಲಾಗುತ್ತಿದೆ. ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಸುರಭಿ, ಜನವರಿ 29ರಿಂದ 5 ದಿನಗಳ ಕಾಲ ಸುರಭಿ ಜೈಸಿರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಜನವರಿ 30ರಂದು ಡಾ. ನಾ. ಸೋಮೇಶ್ವರ ಅವರಿಗೆ 11ನೇ ಬಿಂದುಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.  ಡಾ. ನಾ. ಸೋಮೇಶ್ವರ:ಡಾ. ನಾ. ಸೋಮೇಶ್ವರ ಅವರು ವಿದ್ಯುನ್ಮಾನ ಮಾಧ್ಯಮ ಮತ್ತು ಬರವಣಿಗೆಗಳ ಮೂಲಕ ಜನರ ಹೃದಯ ತಟ್ಟಿದವರು. ಚಂದನ ವಾಹಿನಿಯಲ್ಲಿ ಥಟ್ ಅಂತ ಹೇಳಿ ಎನ್ನುವ ಕನ್ನಡ ಕ್ವಿಜ್ ಕಾರ್ಯಕ್ರಮದ ರೂವಾರಿಯಾಗಿ ಪ್ರಸಿದ್ಧರಾದವರು. ಅವರು ಕಳೆದ 22 ವರ್ಷಗಳಿಂದ ನಡೆಸುತ್ತಿರುವ ಈ ಕಾರ್ಯಕ್ರಮ 4,800ಕ್ಕೂ ಹೆಚ್ಚು ಸಂಚಿಕೆಗಳನ್ನು ಪೂರೈಸಿದೆ. ಸೋಮೇಶ್ವರ ಅವರು ಬಿ.ಎಸ್.ಸಿ ಪದವಿಯ ಬಳಿಕ, ಎಮ್.ಬಿ.ಬಿ.ಎಸ್ ಪದವಿಯನ್ನು ಗಳಿಸಿದರು. ವೃತ್ತಿಯಿಂದ ವೈದ್ಯರಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಾಲಿಗ್ರಾಮ ಸಮೀಪದ ಕೋಡಿ ಕನ್ಯಾಣ ಸಮುದ್ರ ಕಿನಾರೆಯಲ್ಲಿ  ಸುಮಾರು 35-45 ವರ್ಷದ ಅಪರಿಚಿತ ಮಹಿಳೆಯ ಶವವು ಕೊಳೆತೆ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಪರಿಚಿತ ಮಹಿಳೆಯ ಶವವು ಕೊಳೆತ ರೀತಿಯಲ್ಲಿ ತೇಲುತ್ತಿರುವುದನ್ನು ನೋಡಿ ಸ್ಥಳೀಯರು, ಕೂಡಲೇ ಕೋಟ ಪೊಲೀಸ್ ಠಾಣೆಗೆ ಕರೆ ಮಾಡಿ ತಿಳಿಸಿರುತ್ತಾರೆ. ಪೊಲೀಸ್ ಉಪನಿರೀಕ್ಷಕರಾದ ರಾಘವೇಂದ್ರ ಸಿ. ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಮೃತದೇಹವು ಬೇರೆ ಕಡೆಯ ನೀರಿನಲ್ಲಿ ಅಥವಾ ಸಮುದ್ರದಲ್ಲಿ ಬಿದ್ದು ಮೃತಪಟ್ಟು ತೇಲಿ ಬಂದಿರುವ ಬಗ್ಗೆ ಸಂಶಯಿಸಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ ಮತ್ತು ವಾರ್ತಾಭಾರತಿ ಡಿಜಿಟಲ್ ಚಾನಲ್ ಇವರ ಸಹಯೋಗದೊಂದಿಗೆ ಗಣರಾಜ್ಯೋತ್ಸವದ ಪ್ರಯುಕ್ತ ನಡೆಸುವ ’ನಮ್ಮ ಸಂವಿಧಾನ – ನಮ್ಮ ಹೆಮ್ಮೆ’ ವಿಶೇಷ ಸಂವಾದ ಕಾರ್ಯಕ್ರಮ ಮತ್ತು ಚಿತ್ರೀಕರಣ ಸೋಮವಾರದಂದು ಕ್ರಿಯೇಟಿವ್ ’ಚಿಂತಕರ ಚಾವಡಿ’ ಸಪ್ತಗಿರಿ ಕ್ಯಾಂಪಸ್‌ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂವಾದಕರಾಗಿ ನಿವೃತ್ತ ಪ್ರಾಧ್ಯಾಪಕರು ಹಾಗೂ ಖ್ಯಾತ ವಾಗ್ಮಿಗಳು ಸುರೇಂದ್ರ ಶೆಟ್ಟಿ ಕೊಕ್ಕರ್ಣೆ ಭಾಗವಹಿಸಿ, ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸಿದರು. “ಸಂವಿಧಾನ ಎನ್ನುವುದು ಭಾರತ ದೇಶದ ಪ್ರತಿಯೊಬ್ಬ ನಾಗರಿಕನ ಧರ್ಮಗ್ರಂಥ. ಅದನ್ನು ಪ್ರತಿಯೊಬ್ಬರೂ ಓದಲೇಬೇಕು. ಸಂವಿಧಾನದಲ್ಲಿರುವ ಕಾಯ್ದೆ ಕಾನೂನುಗಳ ಬಗ್ಗೆ ತಿಳಿದುಕೊಂಡು ಅದರಂತೆ ನಡೆದುಕೊಳ್ಳುವುದು ಪ್ರತಿಯೊಬ್ಬ ಭಾರತೀಯ ನಾಗರಿಕನ ಆದ್ಯ ಕರ್ತವ್ಯ. ಸಂವಿಧಾನ ರಚನೆಯಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ತನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಸಂವಿಧಾನವನ್ನು ನಮಗೆ ನೀಡಿರುವುದು ಪ್ರತಿಯೊಬ್ಬ ಭಾರತೀಯ ನಾಗರಿಕನು ನೆಮ್ಮದಿಯಿಂದ ಜೀವಿಸಲಿ ಎಂದು. ಸಂವಿಧಾನದಲ್ಲಿ ನೀಡಿರುವ ಹಕ್ಕುಗಳ ಬಗ್ಗೆ ಮಾತ್ರ ನಾವು ಮಾತನಾಡುತ್ತೇವೆ ಆದರೆ ಅದರಲ್ಲಿ ಅಡಕವಾಗಿರುವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಜಿಲ್ಲಾಡಳಿತ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟ-2025 ರ ಸಮಾರೋಪ ಸಮಾರಂಭವು ಜನವರಿ 23 ರಂದು ಸಂಜೆ 5 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಸದರಿ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಘನವೆತ್ತ ರಾಜ್ಯಪಾಲರಾದ ಗೌರವಾನ್ವಿತ ಥಾವರ್ ಚಂದ್ ಗೆಹೋಟ್, ರಾಜ್ಯದ ಗೃಹ ಸಚಿವರಾದ ಡಾ.ಜಿ ಪರಮೇಶ್ವರ ಹಾಗೂ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಆಳ್ವಾಸ್ ಮೂಡಬಿದಿರೆ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜಾನಪದ ಕ್ಷೇತ್ರಕ್ಕೆ ಉಪ್ಪಿನಕುದ್ರು ಗೊಂಬೆಯಾಟ ತಂಡದ ಕೊಡುಗೆ ಅಪಾರ. ಇಂದು 7 ನೇ ತಲಾಂತರದಲ್ಲಿ ನಡೆಯುತ್ತಿರುವ ಈ ಕಲೆಯನ್ನು ನಾವೆಲ್ಲರೂ ಸೇರಿ ಉಳಿಸಬೇಕು ಎಂದು ಡಾ. ಹರಿಕೃಷ್ಣ ಪುನರೂರು ಅವರು ಹೇಳಿದರು. ಅವರು ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ನಡೆದ ಗೊಂಬೆಯಾಟ ಅಕಾಡೆಮಿಯ 10ನೇ ವಾರ್ಷಿಕೋತ್ಸವ ಹಾಗೂ ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ -2024ರ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಎಂ. ಎಲ್. ಸಾಮಗರು ಅವರು ಸಮಾರಂಭವನ್ನು ಉದ್ಘಾಟಿಸಿ, ಯಕ್ಷಗಾನದ ಇತಿಹಾಸಕ್ಕಿಂತ ಗೊಂಬೆಯಾಟ ಕಲೆಯೇ ಪುರಾತನವಾದದ್ದು ಎಂದು ಅಭಿಪ್ರಾಯಪಟ್ಟರು. ಗಂಗೊಳ್ಳಿ ಹಾಲ್ಮಕ್ಕಿ ಶ್ರೀ ಜಟ್ಟಿಗೇಶ್ವರ ಭಜನಾ ಮಂಡಳಿಯಿಂದ ವಿಷ್ಣು ಸಹಸ್ರನಾಮದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಗಂಗೊಳ್ಳಿಯ ಡಾ. ಕಾಶೀನಾಥ್ ಪೈ ಅವರು ಪ್ರಾರ್ಥಿಸಿದರು. ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್‌ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಮುಖ್ಯ ಅತಿಥಿಗಳಾಗಿ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನ ಕುಂದಾಪುರದ ಮೊಕ್ತೇಸರರಾದ ರಾಧಾಕೃಷ್ಣ ಶೆಣೈ, ಶ್ರೀ ಮಹಾಲಿಂಗೇಶ್ವರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ತರಬೇತಿ ಮತ್ತು ನೇಮಕಾತಿ ವಿಭಾಗವು ಯಕ್ಷಿ ಟೆಕ್‌ ಸೊಲ್ಯೂಶನಸ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಜೊತೆಗಿನ ಸಹಯೋಗದಲ್ಲಿ 2025ರ ಕಾಲೇಜು ಆವರಣದಲ್ಲಿ ಯಶಸ್ವಿಯಾಗಿ ಇಂಟರ್ನ್‍ಶಿಪ್ ಡ್ರೈವ್‍ನ್ನು ಆಯೋಜಿಸಿತು. ಕಾರ್ಯಕ್ರಮವನ್ನು ಕಂಪ್ಯೂಟರ್ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕ ಹಾಗೂ ವಿಭಾಗ ಮುಖ್ಯಸ್ಥ ಮಹೇಶ್ ಕುಮಾರ್ ಅವರು ವಿದ್ಯಾರ್ಥಿಗಳಿಗೆ ಸ್ವಾಗತ ನೀಡಿ, ಇಂಟರ್ನ್‍ಶಿಪ್ ಮೂಲಕ ತರಬೇತಿ ಪಡೆಯುವ ಮಹತ್ವವನ್ನು ವಿವರಿಸುವ ಮೂಲಕ ಪ್ರಾರಂಭಿಸಿದರು. ಯಕ್ಷಿ ಟೆಕ್ ಸೊಲ್ಯೂಶನಸ್ ಸಂಸ್ಥೆಯ ಪ್ರತಿನಿಧಿ ಪವನ್ ಅವರು ಸಂಸ್ಥೆಯ ಹಿನ್ನೆಲೆ ಮತ್ತು ಉದ್ಯೋಗಾವಕಾಶಗಳ ಬಗ್ಗೆ ವಿವರಿಸಿದರು. ಅಂತಿಮ ವರ್ಷದ ಬಿಎಸ್ಸಿ ಮತ್ತು ಬಿಸಿಎ ವಿದ್ಯಾರ್ಥಿಗಳು ಡ್ರೈವ್‍ನಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ್ ಶೆಟ್ಟಿ ಮತ್ತು ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅವರು ಅಂತಿಮ ಸುತ್ತಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು. ಈ ಕಾರ್ಯಕ್ರಮವು ವಿದ್ಯಾಸಂಸ್ಥೆ ಮತ್ತು ಕೈಗಾರಿಕೆ ನಡುವೆ ಸಹಕಾರವನ್ನು…

Read More