ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂಡುಬಿದಿರೆ ವಿದ್ಯಾಗಿರಿಯಲ್ಲಿ ನ.10ರಂದು ನಡೆಯಲಿರುವ ಗದ್ದಿಗೆ ಕರಾವಳಿ ಮರಾಟಿ ಸಮಾವೇಶ-2024ನ್ನು ಬೈಂದೂರು – ಕುಂದಾಪುರ ಮರಾಟಿ ಸಂಘ ಬಹಿಷ್ಕರಿಸಿ ಸಮಾವೇಶದಲ್ಲಿ ಪಾಲ್ಗೊಳ್ಳದಿರುವ ನಿರ್ಣಯ ಕೈಗೊಂಡಿದೆ. ಗದ್ದಿಗೆ ಕರಾವಳಿ ಮರಾಟಿ ಸಮಾವೇಶ ಆಯೋಜಿಸುವವರು ಮರಾಠಿ ಸಮುದಾಯದ ಆರಾಧ್ಯ ದೇವಿ ತುಲಾಜಾ ಭವಾನಿಯ ಭಾವಚಿತ್ರ, ಸಮುದಾಯದ ಆದರ್ಶ ಪುರುಷ ಶಿವಾಜಿ ಮಹಾರಾಜರ ಕಡೆಗಣನೆ ಮರಾಠಿ ಸಮುದಾಯದ ಆಚಾರ ವಿಚಾರ ಸಂಸ್ಕೃತಿ ಸಂಸ್ಕಾರಗ ಗಾಳಿಗೆ ತೂರಿ ಸರ್ವಾಧಿಕಾರದ ಧೋರಣೆಯಿಂದ ಕಾರ್ಯಕ್ರಮ ಮಾಡುತ್ತಿರುವುದು ನಮಗೆ ನೋವು ತಂದಿದೆ. ಇದು ನೇತೃತ್ವ ವಹಿಸಿರುವ ಕೆಲವೇ ಕೆಲವು ಮುಖಂಡರು ತಮ್ಮ ಉದ್ದೇಶ ಈಡೇರಿಸಿಕೊಳ್ಳುವ ನಿಟ್ಟಿನಲ್ಲಿ ಸಮಾವೇಶ ಆಯೋಜಿಸಿದಂತೆ ಕಾಣುತ್ತಿದೆ. ಅವಿಭಜಿತ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಮರಾಟಿಗರನ್ನು ಒಗ್ಗಟ್ಟಾಗಿಸಿಕೊಂಡು ಕಾರ್ಯಕ್ರಮವನ್ನು ಮಾಡಿಲ್ಲ. ಇದು ಮರಾಟಿಗರ ಏಳಿಗೆಗೆ ಪೂರಕವಾಗಿ ಇಲ್ಲದೆ ಇರುವುದರಿಂದ ಗದ್ದಿಗೆ ಕರಾವಳಿ ಮರಾಟಿ ಸಮಾವೇಶ-2024 ಈ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ಬೈಂದೂರು ಮರಾಟಿ ಸಂಘದ ಅಧ್ಯಕ್ಷ ಭೋಜ ನಾಯ್ಕ್ ಹಾಗೂ ಕಾರ್ಯಕಾರಿ ಸಮಿತಿ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಉಡುಪಿ ಹಾಗೂ ವಿದ್ಯಾ ಸಮುದ್ರತೀರ್ಥ ಪ್ರೌಢ ಶಾಲೆ ಕಿದಿಯೂರು ಉಡುಪಿ ಇವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಮಾನ್ಯ ಜಾವಲಿನ್ ಎಸೆತದಲ್ಲಿ ಪ್ರಥಮ, 200ಮೀ ಓಟದಲ್ಲಿ ದ್ವಿತೀಯ ಹಾಗೂ 100ಮೀ ಓಟದಲ್ಲಿ ತೃತೀಯ ಸ್ಥಾನ ಪಡೆಯುದರೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೇಳುವ ಕಿವಿ, ನೋಡುವ ಕಣ್ಣುಗಳಿಲ್ಲದಿದ್ದರೆ ಕಲಾವಿದ ಏನು ಮಾಡಿದರೂ ಪ್ರಯೋಜನವಾಗದು. ಇಂದಿನ ಯುವಜನರು ಯಕ್ಷಗಾನ ಕಲೆಗೆ ಒಲವು ತೋರಿಸದ ಹಿನ್ನೆಲೆಯಲ್ಲಿ ಯಕ್ಷಗಾನಕ್ಕೆ ಪ್ರೇಕ್ಷಕರ ಒಗ್ಗೂಡಿಸುವಿಕೆ ಕಷ್ಟಸಾಧ್ಯವಾಗಿದೆ. ಫಿಲ್ಮಿಡಾನ್ಸ್ ಸುದ್ದಿ ತಿಳಿದಾಕ್ಷಣ ಅಸಂಖ್ಯಾತ ಪ್ರೇಕ್ಷಕರು ಜಮಾಯಿಸುವ ಹಾಗೆ ಕರಾವಳಿಯ ಗಂಡುಕಲೆ ಯಕ್ಷಗಾನಕ್ಕೂ ನೋಡುಗರ ಸಂಖ್ಯೆ ಹೆಚ್ಚಾಗಬೇಕು ಎಂದು ಉಪ್ಪುಂದ ಗ್ರಾಪಂ ಅಧ್ಯಕ್ಷ ಮೋಹನಚಂದ್ರ ಹೇಳಿದರು. ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಇಲ್ಲಿನ ವೃತ್ತಿಪರ ಕಲಾವಿದರ ಶ್ರೀ ದುರ್ಗಾಪರಮೇಶ್ವರೀ ಯಕ್ಷಕಲಾ ಟ್ರಸ್ಟ್ನ 8ನೇ ವರ್ಷದ ವಾರ್ಷಿಕ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಆಧುನಿಕ ಮಾಧ್ಯಮಗಳಿಂದ ನೈಜ ಯಕ್ಷಗಾನ ಕಲಾವಿದರ ಬದುಕು ಹೈರಾಣಾಗಿಸಿದೆ. ಕೆಲವು ದೇವಸ್ಥಾನಗಳು ನಡೆಸುತ್ತಿರುವ ಹರಕೆ ಬಯಲಾಟದ ಕಲಾವಿದರಿಗೆ ಉತ್ತಮ ಸೌಲಭ್ಯವಿದ್ದು, ಇತರೇ ಬಯಲಾಟ ಕಲಾವಿದರಿಗೆ ಜೀವನ ನಡೆಸುವುದು ಕಷ್ಟಕರ ಸ್ಥಿತಿಯಿದೆ. ಈ ನಿಟ್ಟಿನಲ್ಲಿ ಸರ್ಕಾರ ಬಡ ಕಲಾವಿದರ ನೆರವಿಗೆ ಧಾವಿಸುವ ಮೂಲಕ ಅವರ ಜೀವನಾಧಾರಕ್ಕಾಗಿ ಹೆಚ್ಚಿನ ಸವಲತ್ತುಗಳನ್ನು ನೀಡುವಂತಾಬೇಕು ಎಂದರು. ಉದ್ಯಮಿ ಯು. ಎ. ಮಂಜು ದೇವಾಡಿಗ ಅಧ್ಯಕ್ಷತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸುವುದರೊಂದಿಗೆ ಅದನ್ನು ಹೊರತರಲು ಇಂತಹ ಕಾರ್ಯಕ್ರಮಗಳು ಸೂಕ್ತ ವೇದಿಕೆ ಕಲ್ಪಿಸಿಕೊಡುತ್ತವೆ. ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಅವಕಾಶದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ರಾಜ್ಯ ಬಾಲಭನವ ಸೊಸೈಟಿ ಬೆಂಗಳೂರು, ಜಿಲ್ಲಾ ಬಾಲಭವನ ಸಮಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರಸಕ್ತ ಸಾಲಿನ ಮಕ್ಕಳ ದಿನಾಚರಣೆ ಹಾಗೂ ಮಕ್ಕಳಿಗೆ ನಡೆದ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು. ಪ್ರಕೃತಿಯ ಅಸಮತೋಲನಕ್ಕೆ ಮುಖ್ಯ ಕಾರಣ ಮನುಷ್ಯ. ಆತನ ಅಭಿವೃದ್ಧಿಯ ವೇಗದಿಂದಾಗಿ ಪ್ರಕೃತಿ ನಲುಗಿಹೋಗುತ್ತಿದೆ. ಪರಿಸರ ಸ್ವಚ್ಛವಾಗಿಡುವುದು ಪ್ರತಿಯೊಬ್ಬ ನಾಗರಿಕರರ ಜವಾಬ್ದಾರಿಯಾಗಿದ್ದು, ಪರಿಸರ ಉಳಿಸುವುದರೊಂದಿಗೆ ಸಕಲ ಜೀವಿಗಳ ಉಳಿವಿಗೆ ಕಾರಣರಾಗಿ ಎಂದ ಅವರು, ಮಕ್ಕಳು ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಬೇಕು. ಮಕ್ಕಳು…
ಕುಂದಾಪ್ರ ಡಾಟ್ ಕಾಂ ಸುದ್ದಿ:ಗಂಗೊಳ್ಳಿ: ಕರ್ನಾಟಕ ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಬಾಲ ಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಬ್ರಹ್ಮಗಿರಿಯ ಜಿಲ್ಲಾ ಬಾಲ ಭವನದಲ್ಲಿ ನ.7ರಂದು ನಡೆದ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಅಂಗವಾಗಿ ನಡೆದ ವಾದ್ಯ ಸಂಗೀತ (ಕೊಳಲು) ಸ್ಪರ್ಧೆಯಲ್ಲಿ ಗಂಗೊಳ್ಳಿ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ಯಾಮ್ ಜಿ.ಎನ್. ಪೂಜಾರಿ ಪ್ರಥಮ ಸ್ಥಾನ ಪಡೆದು, ಸತತ ಎರಡನೇ ಬಾರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈತ ಗಂಗೊಳ್ಳಿಯ ಖ್ಯಾತ ಛಾಯಾಗ್ರಾಹಕ ಗಣೇಶ್ ಪೂಜಾರಿ ಮತ್ತು ಉಪನ್ಯಾಸಕಿ ಮಾಲತಿ ಗಣೇಶ ಅವರ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ. ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಸಿ.ಸಿ ಘಟಕದ ವತಿಯಿಂದ ಪರಿಸರ ಮತ್ತು ಮಣ್ಣಿನ ಸಂರಕ್ಷಣೆ ಹಾಗೂ ಗಿಡಗಳನ್ನು ನೆಡುವ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಆಯೋಜಿಸಲಾದ ‘ಗ್ರೋ ಗ್ರೀನ್’ ಕಾರ್ಯಕ್ರಮ ಕುಂದಾಪುರದ ಆರ್. ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟಿ ಅವರು ಸಸ್ಯಸಂಕುಲವನ್ನು ಉಳಿಸಿ ಬೆಳೆಸಿ ಆರೋಗ್ಯಕರ ವಾತಾವರಣ ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕರೆ ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎನ್.ಸಿ.ಸಿ ಘಟಕದ ವಿದ್ಯಾರ್ಥಿ ಸುಪ್ರಜ್ ಪ್ರಸ್ತಾವಿಕ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೀತೇಶ್ ಶೆಟ್ಟಿ, ಉಪನ್ಯಾಸಕರಾದ ಸುಷ್ಮಾ ಶೆಣೈ, ದೀಪಾ ಶೆಟ್ಟಿ, ನಾಗರತ್ನಾ, ಜ್ಯೋತಿ, ರೂಪಾ, ಅಕ್ಷತಾ ಕೆ.ಎನ್, ಅರುಣಾ ಹೊಳ್ಳ,ರೇಖಾಪುತ್ರನ್, ಈಶ್ವರ್, ನಿತ್ಯಾನಂದ ದೇವಾಡಿಗ ಹಾಗೂ ಬೋಧಕೇತರ ಸಿಬ್ಬಂಧಿಯವರು ಉಪಸ್ಥಿತರಿದ್ದರು. ಎನ್.ಸಿ.ಸಿ ಲೆ| ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಹ ಪತ್ರಿಕೋಧ್ಯಮ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಉಡುಪಿ ಜಿಲ್ಲಾ ಕಚೇರಿಗೆ 2024-25 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್ಗೆ ತರಬೇತಿ ಅವಧಿಯಲ್ಲಿ ತಿಂಗಳಿಗೆ 15 ಸಾವಿರ ರೂ.ಗಳ ಸ್ಟೈಪಂಡ್ ನೀಡಲಾಗುವುದು. ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ. ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅಭ್ಯರ್ಥಿಗಳ ವಯಸ್ಸು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು 35 ವರ್ಷದೊಳಗಿರಬೇಕು. ಅರ್ಜಿ ಸಲ್ಲಿಸಲು ನವೆಂಬರ್ 12 ಕೊನೆಯ ದಿನ. ಆಸಕ್ತರು ಅರ್ಜಿ ನಮೂನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ “ವಿವಿಧತೆಯಲ್ಲಿ ಏಕತೆ”ಯ ಪರಿಕಲ್ಪನೆಯ ಆವಿರ್ಭವ – 2024 ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಖ್ಯಾತವಾಗ್ಮಿ, ನಿರೂಪಕರಾದ ಎನ್. ಆರ್. ದಾಮೋದರ ಶರ್ಮ ಬಾರ್ಕೂರು ಮಾತನಾಡಿ, ಶಿಕ್ಷಣದ ಉದ್ದೇಶ ಸಂಸ್ಕಾರವನ್ನು ಗಳಿಸುವುದು ಮಾತಾ ಪಿತೃಗಳು ಹಾಗೂ ಕಲಿಸಿದ ಗುರುಗಳ ಮೇಲೆ, ವಿದ್ಯೆ ಕಲಿತ ಸಂಸ್ಥೆಯ ಮೇಲೆ ಸದಾ ಗೌರವ ಇರಿಸಿಕೊಳ್ಳಬೇಕು. ವಿದ್ಯಾರ್ಥಿಗಳೆಲ್ಲರೂ ಭವ್ಯ ಭಾರತದ ಸತ್ಪ್ರಜೆಗಳಾಗಿ ಬಾಳಬೇಕು. ಕಷ್ಟಪಟ್ಟು ಕಲಿತಾಗ ಅದಕ್ಕೆ ತಕ್ಕ ಫಲ ಸಿಗುತ್ತದೆ. ಆದ್ದರಿಂದ ಎಲ್ಲರೂ ವಿದ್ಯಾ ವಿನಯ ಸಂಪನ್ನ ರಾಗಬೇಕೆಂದು ಕರೆ ನೀಡಿದರು. ಇನ್ನೋರ್ವ ಮುಖ್ಯ ಅತಿಥಿ ಮಿಲಾಗ್ರೀಸ್ ಚರ್ಚ್ನ ಧರ್ಮಗುರುಗಳಾದ ಫಾದರ್ ಫರ್ಡಿನಾಂಡ್ ಗೋನ್ಸಾಲ್ವೀಸ್ ಅವರು ಮಾತನಾಡುತ್ತಾ ಕಲಿಕೆಗೆ ಪೂರಕವಾದ ವಾತಾವರಣವಿರುವಾಗ ನಾವು ಅದರ ಸದುಪಯೋಗ ಪಡಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಅತಿ ಮುಖ್ಯವಾದದ್ದು ಆದ್ದರಿಂದ ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ತಾಳ್ಮೆ ಶಿಸ್ತಿನಿಂದ ಯಶಸ್ಸು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಡಾ. ವೆಂಕಟರಾಮ್ ಭಟ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಈ ಮೊದಲು ಕೋಟೇಶ್ವರ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ವಾಣಿಜ್ಯ ಶಾಸ್ತ್ರದಲ್ಲಿ ಪಿಎಚ್.ಡಿ ಪದವಿ, ಪಿಜಿಡಿಎಚ್ಆರ್ಎಂ ಮತ್ತು ಪಿಜಿಡಿಎಸ್ಬಿಎಸ್ಎ ಪದವಿಗಳಳನ್ನು ಪಡೆದಿದ್ದಾರೆ. ಅವರು ಉತ್ತಮ ಆಡಳಿತಗಾರರಾಗಿ, ವಿದ್ಯಾರ್ಥಿಗಳಿಗೆ ಪ್ರೇರಕ ಶಕ್ತಿಯಾಗಿ ಮತ್ತು ತರಬೇತುದಾರರಾಗಿಯೂ ಹೆಸರುವಾಸಿಯಾಗಿದ್ದಾರೆ. ನೂತನ ಪ್ರಾಂಶುಪಾಲರನ್ನು ಸಹೋದ್ಯೋಗಿಗಳಾದ ಗಂಗಾರಾಜು, ಶೇಖರ್ ಬಿ., ಶ್ರೀಕಾಂತ್, ರಾಜೇಂದ್ರ, ಸಂದೇಶ್ ಶೆಟ್ಟಿ, ಶೈಲಜಾ, ವಿನಯ್ ಅವರುಗಳು ಗೌರವಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನ ವ್ಯವಹಾರ ಅಧ್ಯಯನ ವಿಭಾಗದ ಆಶ್ರಯದಲ್ಲಿ ಶೈಕ್ಷಣಿಕ ವರ್ಷ 2024-25ನೇ ಸಾಲಿನ ಚಟುವಟಿಕೆ “ಎಮಿನೆನ್ಸ್ 24” ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದರಾದ ಡಾ.ಶುಭಕರಾಚಾರಿ ಅವರು ನೆರವೇರಿಸಿದರು. ಮಂಗಳೂರಿನ ವಿಸ್ಡಮ್ ಸಂಸ್ಥೆಯ ಅಭಿಲಾಷ್ ಕ್ಷತ್ರೀಯ ಉಪನ್ಯಾಸ ನೀಡಿದರು. “ಕೆರಿಯರ್ ಅಡ್ವಾನ್ಸ್ಮೆಂಟ್ ಇನ್ ಬಿಬಿಎ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸತ್ಯನಾರಾಯಣ ಹಾಗೂ ವ್ಯವಹಾರ ಅಧ್ಯಯನ ವಿಭಾಗದ ಮುಖ್ಯಸ್ಥರಾದ ವಿಭಾಗದ ಅರ್ಚನಾ ಅರವಿಂದ ಉಪಸ್ಥಿತರಿದ್ದರು.
