ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ಪುಟಾಣಿಗಳಿಗೆ ’ನ್ಯೂಟ್ರಿಶಿಯನ್ ಡೇ’ ಆಚರಿಸಲಾಯಿತು. ಸಣ್ಣ ಮಕ್ಕಳಲ್ಲಿ ಆರೋಗ್ಯಕರ ಆಹಾರದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ವಿವಿಧ ಬಗೆಯ ಹಣ್ಣುಗಳ ಹಾಗೂ ತರಕಾರಿಗಳ ಸಲಾಡ್ಗಳನ್ನು ತಯಾರಿಸಿ ಹಂಚಲಾಯಿತು. ಪೌಷ್ಟಿಕ ಆಹಾರದ ಬಗ್ಗೆ ತಿಳಿ ಹೇಳಲಾಯಿತು. ಈ ಸಂದರ್ಭದಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜ ಹಾಗೂ ಸಹಶಿಕ್ಷಕಿಯರು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಅ.01: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ನೇಮಿಸಿ ರಾಜ್ಯ ಸರಕಾರ ಹೊರಡಿಸಿದ್ದ ಆದೇಶಕ್ಕೆ ಸೋಮವಾರದ(ಸೆ.30) ತನಕ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದ್ದ ಹೈಕೋರ್ಟ್, ನಿನ್ನೆಯ ಕಲಾಪದಲ್ಲಿ ಅರ್ಜಿದಾರರು ಸಲ್ಲಿಸಿದ ವಿಷಯಗಳಿಗೆ ತಡೆ ನೀಡಲು ಸಾಧ್ಯವಿಲ್ಲ ಎಂದಿದೆ. ಈ ಮೂಲಕ ನೂತನ ವ್ಯವಸ್ಥಾಪನಾ ಸಮಿತಿ ಸಭೆ ಹಾಗೂ ಅಧ್ಯಕ್ಷರ ಆಯ್ಕೆಗಿದ್ದ ಆತಂಕ ನಿವಾರಣೆಯಾಗಿದೆ. ಹೈಕೋರ್ಟ್ ತಡೆ ನಿವಾರಣೆಯಾದ ಹಿನ್ನೆಲೆಯಲ್ಲಿ ಅಕ್ಟೋಬರ್ 04ರ ಬೆಳಿಗ್ಗೆ ದೇಗುಲದಲ್ಲಿ ಬೆಳಿಗ್ಗೆ ಸಭೆ ಕರೆಯಲಾಗಿದ್ದು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಆಯ್ಕೆ ನಡೆಯಲಿದೆ. ಸೆ.20ರಂದು ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಾರ್ಯದರ್ಶಿ ಹಾಗೂ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಆಯುಕ್ತರು 9 ಮಂದಿ ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ನೇಮಿಸಿ ಆದೇಶ ಹೊರಡಿಸಿದ್ದರು. ಆದರೆ ಸೆ.19ರಿಂದ ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಇದು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಅಲ್ಲದೇ ಓರ್ವ ಸದಸ್ಯರ ವಿರುದ್ದ ಅಪರಾಧ ಪ್ರಕರಣ ದಾಖಲಾಗಿದೆ.…
ಕುಂದಾಪ್ರ ಡಾಟ ಕಾಂ ಸುದ್ದಿ.ಮೂಡುಬಿದಿರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಮಂಗಳೂರು, ಉಡುಪಿ, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ನಡೆದ ಮೈಸೂರು ವಿಭಾಗ ಮಟ್ಟ ದಸರಾ ಕ್ರೀಡಾಕೂಟದಲ್ಲಿ ಆಳ್ವಾಸ್ ತಂಡವು ಅಥ್ಲೆಟಿಕ್ಸ್ ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ 11 ಚಿನ್ನ, 11 ಬೆಳ್ಳಿ, 07 ಕಂಚಿನ ಪದಕಗಳೊಂದಿಗೆ ಒಟ್ಟು 29 ಪದಕ ಪಡೆಯಿತು. ಕುಸ್ತಿ ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ 12 ಚಿನ್ನ, 07 ಬೆಳ್ಳಿ, 02 ಕಂಚಿನ ಪದಕಗಳೊಂದಿಗೆ ಒಟ್ಟು 21 ಪದಕ, ಯೋಗ ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ 01 ಚಿನ್ನ, 02 ಬೆಳ್ಳಿ, 02 ಕಂಚಿನ ಪದಕಗಳೊಂದಿಗೆ ಒಟ್ಟು 05 ಪದಕ ಪಡೆಯಿತು. ಕಬಡ್ಡಿ ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ ಪ್ರಥಮ, ಬಾಲ್ ಬ್ಯಾಡ್ಮಿಂಟನ್ ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ ಪ್ರಥಮ, ಖೋ-ಖೋ ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ ದ್ವಿತೀಯ, ವೇಯ್ಟ್ ಲಿಫ್ಟಿಂಗ್ ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ 11 ಚಿನ್ನ, 05 ಬೆಳ್ಳಿ, 02…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮಹಿಳೆಯರು ಮತ್ತು ಗರ್ಭಿಣಿಯರಲ್ಲಿ ಪೌಷ್ಠಿಕ ಆಹಾರ ಸೇವನೆ ಬಗ್ಗೆ ಮಾಹಿತಿ ನೀಡಬೇಕಾಗಿದೆ. ತರಕಾರಿ, ಧಾನ್ಯಗಳು, ಸೊಪ್ಪು ಮತ್ತಿತರ ಪೌಷ್ಠಿಕಾಂಶಯುಕ್ತ ಆಹಾರವನ್ನು ಹೆಚ್ಚೆಚ್ಚು ಬಳಸಬೇಕು. ಮಹಿಳೆಯರು ತನ್ನ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕಿದೆ. ಮಹಿಳೆ ತನ್ನ ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ ಪೌಷ್ಠಿಕ ಆಹಾರ ಸೇವೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಮೇಶ ಕೋಟ್ಯಾನ್ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಗ್ರಾಮ ಪಂಚಾಯತ್ ಗಂಗೊಳ್ಳಿ, ಗ್ರಾಮ ಪಂಚಾಯತ್ ಹೊಸಾಡು, ಗ್ರಾಮ ಪಂಚಾಯತ್ ಗುಜ್ಜಾಡಿ, ರೋಟರಿ ಕ್ಲಬ್ ಗಂಗೊಳ್ಳಿ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ, ಮಾರಿಕಾಂಬಾ ಮಹಿಳಾ ಸಹಕಾರ ಸಂಘ ಕೊಡಪಾಡಿ – ಗುಜ್ಜಾಡಿ ಮತ್ತು ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಸೀತಾರಾಮಚಂದ್ರ ಸಭಾ ಭವನದಲ್ಲಿ ಸೋಮವಾರ ಜರಗಿದ ಪೌಷ್ಠಿಕ ಮಾಸಾಚರಣೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೆಪ್ಟೆಂಬರ್ 28 ರಂದು ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪ್ರತೀಕ್ ಕುಂದರ್, ಸ್ಕಂದ, ಕೆ. ಶ್ರೀನಿತಾ ಎಸ್. ಕಾಮತ್, ವನಿಷಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಶುಭ ಹಾರೈಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಹಲವು ಮಕ್ಕಳ ತಾಯಿ ಅಮೃತೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಉದ್ಯಮಿ ಆನಂದ ಸಿ. ಕುಂದರ್ ಅವರು ಸೋಮವಾರ ಜರಗಿದ ವ್ಯವಸ್ಥಾಪನ ಸಮಿತಿ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರು ಈ ಹಿಂದೆಯೂ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿದ್ದರು. ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ಅಭಿವೃದ್ಧಿಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಸಮಿತಿ ಸದಸ್ಯರಾದ ಗಣೇಶ್ ಕೆ. ನೆಲ್ಲಿಬೆಟ್ಟು, ಜ್ಯೋತಿ ದೇವದಾಸ್ ಕಾಂಚನ್, ಸುಧಾ ಎ. ಪೂಜಾರಿ, ರತನ್ ಐತಾಳ, ಸುಭಾಷ್ ಶೆಟ್ಟಿ ಗಿಳಿಯಾರು, ಶಿವ ಪೂಜಾರಿ ಮಣೂರು, ಕೆ. ಚಂದ್ರಶೇಖರ್ ಆಚಾರ್ಯ ಕೋಟ ಮತ್ತು ಅರ್ಚಕ ಪ್ರತಿನಿಧಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿಯ ಉದ್ಘಾಟನೆಯನ್ನು ಎನ್ಡಿಎ ಪರೀಕ್ಷಾ ತರಬೇತುದಾರರು, ಸಂಪನ್ಮೂಲ ವ್ಯಕ್ತಿಗಳು ಆಗಿರುವ ಅಶ್ವಿನ್ ವಿಗಾಸ್ ಅವರು ನೆರವೇರಿಸಿ, ಸ್ಪರ್ಧಾತ್ಮಕ ಪರೀಕ್ಷೆಯ ಕುರಿತಾಗಿ ಮಾಹಿತಿಯನ್ನು ನೀಡಿದರು. ಸಮಾರಂಭದಲ್ಲಿ ಕಾಲೇಜಿನ ಗಣಿತ ವಿಭಾಗದ ಮುಖ್ಯಸ್ಥರಾದ ರಾಘವೇಂದ್ರ ನಾಯ್ಕ, ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥರಾದ ಜ್ಞಾನಶೇಖರನ್, ಗಣಕಯಂತ್ರ ವಿಭಾಗದ ಮುಖ್ಯಸ್ಥರಾದ ಸುಜಯ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು, ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ಉಪನ್ಯಾಸಕ ಉದಯ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಡಿಯಲ್ಲಿ ರಚನೆಗೊಂಡ ಕಾನೂನು ನೆರವು ಅಭಿರಕ್ಷಕರ ಕಛೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಖಾಲಿ ಇರುವ 2 ಉಪ ಕಾನೂನು ನೆರವು ಅಭಿರಕ್ಷಕರು, 5 ಸಹಾಯಕ ಕಾನೂನು ನೆರವು ಅಭಿರಕ್ಷಕರ ಹುದ್ದೆಗಳಿಗೆ ನ್ಯಾಯವಾದಿಗಳಿಂದ ಹಾಗೂ ಆಫೀಸ್ ಅಸಿಸ್ಟೆಂಟ್ 2 ಮತ್ತು ಕಚೇರಿ ಜವಾನ 2 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಅಭ್ಯರ್ಥಿಗಳು ಅಕ್ಟೋಬರ್ 03, 2024ರ ಒಳಗಾಗಿ ಭರ್ತಿಮಾಡಿದ ಅರ್ಜಿಗಳನ್ನು ಉಡುಪಿ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಗಳ ಕಛೇರಿಯನ್ನು ಸಂಪರ್ಕಿಸಬಹುದು ಅಥವಾ https://Udupi.dcourts.gov.in ವೀಕ್ಷಿಸ ಬಹುದಾಗಿದೆ ಎಂದು ಉಡುಪಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶನಿವಾರ ತಡರಾತ್ರಿ ನಡೆದ ಬೈಕ್ ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದರೇ, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಪುನೀತ್ (25) ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ತಡರಾತ್ರಿ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ಹಂಗಳೂರು ನಗು ಪ್ಯಾಲೇಸ್ ಎದುರಿನ ಸರ್ವೀಸ್ ರಸ್ತೆಯಲ್ಲಿ ನಡೆದ ಎರಡು ಬೈಕುಗಳ ಮುಖಾಮುಖಿ ಢಿಕ್ಕಿಯಲ್ಲಿ ಒಂದು ಬೈಕಿನಲ್ಲಿದ್ದ ಸವಾರ ಮೃತಪಟ್ಟು ಇನ್ನೊಂದು ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಮಗ ಮತ್ತು ತಾಯಿ ಗಂಭೀರ ಸ್ಥಿತಿಯಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಭಾನುವಾರ ತಡರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಬುಲೆಟ್ ಸವಾರ ಪುನೀತ್ ಮೃತಪಟ್ಟಿದ್ದಾರೆ. ಅವರ ತಾಯಿ ಪದ್ಮ ಅವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಇನ್ನೊರ್ವ ಬೈಕ್ ಸವಾರ ಶಶಾಂಕ್ ಮೊಗವೀರ ಶನಿವಾರ ರಾತ್ರಿ ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದರು. ಇದನ್ನೂ ಓದಿ ► ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಯುವಕ ಸಾವು – https://kundapraa.com/?p=77350 .…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು,ಸೆ.30: ಕಸ್ತೂರಿ ರಂಗನ್ ವರದಿ ವಿರೋಧಿಸಿ ಜಡ್ಕಲ್ ಗ್ರಾಮ ಪಂಚಾಯತಿಯ ಎಲ್ಲಾ 18 ಸದಸ್ಯರು ಅಕ್ಟೋಬರ್ 21ರಂದು ನಡೆಯಲಿರುವ ವಿಧಾನ ಪರಿಷತ್ ಉಪಚುನಾವಣೆಯನ್ನು ಬಹಿಷ್ಕರಿಸುವ ನಿರ್ಣಯ ಕೈಗೊಂಡಿದ್ದಾರೆ. ಮತದಾನ ಬಹಿಷ್ಕರಿಸುವ ನಿರ್ಧಾರ ಮಾಡಿರುವ ಬೈಂದೂರು ತಾಲೂಕು ವ್ಯಾಪ್ತಿಯ ಜಡ್ಕಲ್ ಪಂಚಾಯತಿಯ ಸದಸ್ಯರು, ಮತದಾನಕ್ಕೆ ವಿವಿಧ ಬೇಡಿಕೆಗಳನ್ನು ಮುಂದಿರಿಸಿದ್ದಾರೆ. ಪರಿಸರ ಸೂಕ್ಷ್ಮ ಪ್ರದೇಶ, ಬಫರ್ ಝನ್ ಶೂನ್ಯಕ್ಕೆ ಇಳಿಸುವುದು, ಈಗಾಗಲೇ ಪರಿಸರ ಸೂಕ್ಷ್ಮ ಪ್ರದೇಶದ ಬಗ್ಗೆ ಹೊರಡಿಸಿರುವ ಸುತ್ತೋಲೆಯನ್ನು ಮೂಕಾಂಬಿಕಾ ಅಭಯಾರಣ್ಯದ ಸೂಕ್ಷ್ಮ ಪ್ರದೇಶ ಎಂಬ ನೆಪದಿಂದ ಸಕ್ಷಮ ಪ್ರಾಧಿಕಾರದಿಂದ ವಾಣಿಜ್ಯ ಭೂ-ಪರಿವರ್ತನೆಗೆ ಪೂರ್ವಾನುಮತಿಯನ್ನು (ಯೋಜನಾ ಪ್ರಾಧಿಕಾರ ಉಡುಪಿ) ಪಡೆಯುವ ಸೂಚನೆ ರದ್ದುಗೊಳಿಸುವಂತೆ ಬೇಡಿಕೆಯನ್ನು ಸರಕಾರದ ಮುಂದಿರಿಸಿದ್ದಾರೆ. ಜಡ್ಕಲ್ ಗ್ರಾಮ ಪಂಚಾಯತ್ ಸದಸ್ಯರಾದ ಪಾರ್ವತಿ, ಭಾರತಿ ಜಿ. ಶೆಟ್ಟಿ, ವನಜಾಕ್ಷಿ ಎಸ್.ಶೆಟ್ಟಿ, ಲಕ್ಷ್ಮಣ ಶೆಟ್ಟಿ, ಕೆ.ವಿದ್ಯಾವತಿ ಕನ್ನಂತ, ನಾರಾಯಣ ಶೆಟ್ಟಿ, ವಿ.ಜೆ ದೇವದಾಸ್, ಲಕ್ಷ್ಮೀ ಎಸ್.ಚಂದನ್, ಶ್ರೀಮತಿ, ಚಂದ್ರಮೋಹನ್, ಸೂಲ್ಯ ಬೋವಿ, ಸುಂದರನಾರಾಯಣ, ಸುನೀತಾ, ಮಂಜು, ಶ್ರೀನಿವಾಸ, ಸವಿತಾ,…
