ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಗುಡುಗು ಮತ್ತು ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು/ ಸನ್ನದ್ಧತೆಗಾಗಿ, ಸಾರ್ವಜನಿಕ ಮತ್ತು ಜಾನುವಾರು ಹಾನಿಗಳನ್ನು ತಪ್ಪಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಈ ಕೆಳಕಂಡಂತೆ ಸಲಹೆ ಸೂಚನೆಗಳನ್ನು ನೀಡಿದೆ. ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ ಮುನ್ನಚ್ಚರಿಕೆಗಳನ್ನು ಕಾಮನ್ ಅಲರ್ಟಿಂಗ್ ಪ್ರೋಟೋಕಾಲ್ ಮುಖಾಂತರ ಬರುವ ಮೆಸೇಜ್ಗಳನ್ನು ಗಮನಿಸಿಸಬೇಕು. ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗುವುದನ್ನು ತಪ್ಪಿಸಬೇಕು. ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಲ್ಲಿ ಅಶ್ರಯ ಪಡೆಯಬೇಕು. ಬೆಟ್ಟ, ಗುಡ್ಡಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಆಶ್ರಯ ಪಡೆಯಬೇಕು. ನೀರಿನ ಮೂಲಗಳಾದ ಕೆರೆ, ತೋಡು ಮತ್ತು ನದಿಗಳಿಂದ ದೂರವಿರಬೇಕು. ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು : ದೇವಸ್ಥಾನಗಳ ಜೀರ್ಣೋದ್ದಾರ ಮಾಡಿದರೆ ಇಡೀ ಮಾನವ ಕುಲವೇ ಅಭಿವೃದ್ಧಿಯಾದಂತೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಅವರು ತಾಲೂಕಿನ ಹೇರಂಜಾಲು ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ಗುರುವಾರ ನಡೆದ ನೂತನ ರಾಜಗೋಪುರ ಸಮರ್ಪಣೆ ಹಾಗೂ ಅತಿರುದ್ರ ಮಹಾಯಾಗದ ಪುಣ್ಯ ಮುಹೂರ್ತದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ದೇವಸ್ಥಾನ ಎಂಬ ಶ್ರದ್ಧಾ ಕೇಂದ್ರಗಳನ್ನು ಅಭಿವೃದ್ಧಿ ಮಾಡಿದರೆ ಇಡೀ ಸಮಾಜಕ್ಕೆ ಶಾಂತಿಯ ಸಂದೇಶ ರವಾನೆಯಾಗುತ್ತದೆ ಎಂದರು. ಮನುಷ್ಯನಿಗೆ ನೆಮ್ಮದ್ದಿ ಕೊಡುವ ಸ್ಥಳಗಳೆಂದರೆ ಒಂದು ಅಮ್ಮನ ಮಡಿಲು, ಮತ್ತೊಂದು ದೇವಸ್ಥಾನಗಳು, ನಮ್ಮಲ್ಲಿರುವ ಕಷ್ಟಗಳನ್ನು ದೇವರ ಬಳಿ ಕೇಳುತ್ತೇವೆ. ದೇವರ ಬಳಿ ನಾವು ಯಾವುದೇ ಮುಚ್ಚುಮರೆ ಮಾಡದೆ ಎಲ್ಲವನ್ನೂ ಹೇಳಿಕೊಳ್ಳುತ್ತೇವೆ. ಇದೇ ದೇವರ ಮಹಿಮೆ ಎಂದು ಸಚಿವರು ಅಭಿಪ್ರಾಯಪಟ್ಟರು. ಮಹಾಲಿಂಗೇಶ್ವರ ದೇವರ, ಗುರು ಹಿರಿಯರ ಹಾಗೂ ತಂದೆ ತಾಯಂದಿರ ಆಶೀರ್ವಾದಿಂದ ನಾನು ಇಷ್ಟರ ಮಟ್ಟಿಗೆ ಬೆಳೆದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಿತ್ರ ಮಂಡಳಿ ಕೋಟ ನೀಡುತ್ತಿರುವ ಸಾಹಿತ್ಯ ಸಾಧಕರಿಗೆ ಈ ವರ್ಷದ ಹುಟ್ಟೂರ ಸಾಹಿತ್ಯ ಸಾಧಕ ಪುರಸ್ಕಾರಕ್ಕೆ ಕೋಟದ ವಿವೇಕ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕರಾಗಿರುವ ನರೇಂದ್ರ ಕುಮಾರ್ ಕೋಟ ಆಯ್ಕೆಯಾಗಿದ್ದಾರೆ. ಉಸಿರು ಎಂಬ ಸಂಸ್ಥೆಯನ್ನು ಹುಟ್ಟು ಹಾಕಿ ಕಳೆದ 25 ವರ್ಷಗಳಿಂದ ವಿದ್ಯಾರ್ಥಿಗಳಿಗಾಗಿ ಬೇಸಿಗೆ ಶಿಬಿರಗಳನ್ನು ನಿರಂತರವಾಗಿ ಆಯೋಜಿಸಿ ಎಳೆಯ ಮಕ್ಕಳಲ್ಲಿ ಕನ್ನಡದ ಪ್ರೀತಿ ಮತ್ತು ಸಾಹಿತ್ಯ ರಚನೆಯ ಅಭಿರುಚಿಯನ್ನು ಮೂಡಿಸುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದಲ್ಲದೆ ಅವರು ಬರೆದಿರುವ ಅನೇಕ ಕೃತಿಗಳನ್ನು ತಮ್ಮ ಸಂಸ್ಥೆಯ ಮೂಲಕ ಪ್ರಕಟಿಸಿದ್ದಾರೆ. ಅತ್ಯುತ್ತಮ ಸಂಘಟಕರಾಗಿರುವ ಇವರು ಜಿಲ್ಲಾ ಹಾಗೂ ರಾಜ್ಯಮಟ್ಟದ ಅನೇಕ ಸಾಹಿತ್ಯ ಕಾರ್ಯಕ್ರಮಗಳನ್ನು ಸಂಘಟಿಸಿದ್ದಲ್ಲದೆ ಐದು ಕುಂದಾಪ್ರ ಕನ್ನಡ ಸಮ್ಮೇಳನಗಳನ್ನು ಯಶಸ್ವಿಯಾಗಿ ಆಯೋಜಿಸಿದ ಹೆಗ್ಗಳಿಕೆ ಇವರದ್ದಾಗಿದೆ. ಹಲವಾರು ಕಾರ್ಯಕ್ರಮಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಯುವ ಮನಸ್ಸುಗಳಿಗೆ ಸ್ಪೂರ್ತಿಯಾಗಿದ್ದಾರೆ. ಬಹುಮುಖ ಪ್ರತಿಭಾವಂತರಾಗಿ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪಡೆದ ಇವರ ನಿಷ್ಠೆಯ ಕನ್ನಡ ಪರಿಚಾರಿಕೆಗಾಗಿ ಅರ್ಹರಾಗಿದ್ದಾರೆ. ಇದೇ ಎಪ್ರಿಲ್ 4 ರಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಉಡುಪಿ ಜಿಲ್ಲೆಯಲ್ಲಿ ನಮೂನೆ 50,53 ಹಾಗೂ 57 ರಡಿ ಸಲ್ಲಿಸಿರುವ ಅರ್ಜಿಗಳು ಉಪ ವಿಭಾಗಾಧಿಕಾರಿ ಅಥವಾ ಜಿಲ್ಲಾಧಿಕಾರಿಗಳ ನ್ಯಾಯಾಲಯಗಳಲ್ಲಿ ಇತ್ಯರ್ಥವಾಗಿರುವ 88 ಬಗರ್ ಹುಕುಂ ಅರ್ಜಿಗಳು ತಂತ್ರಾoಶದಲ್ಲಿ ಅಳವಡಿಕೆ ಬಗ್ಗೆ ಕೈಗೊಂಡ ಕ್ರಮದ ಬಗ್ಗೆ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆಅವರು ಪ್ರಶ್ನೆ ಕೇಳಿದ್ದಾರೆ. ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಕಂದಾಯ ಸಚಿವರಾದ ಕೃಷ್ಣ ಬೈರೇ ಗೌಡ ಅವರು ಉಡುಪಿ ಜಿಲ್ಲೆಯಲ್ಲಿ ನಮೂನೆ 50,53,ಹಾಗೂ 57 ರಡಿ ಸಲ್ಲಿಸಿರುವ ಅರ್ಜಿಗಳು ಉಪ ವಿಭಾಗಾಧಿಕಾರಿಗಳು / ಜಿಲ್ಲಾಧಿಕಾರಿಗಳ ನ್ಯಾಯಾಲಯಗಳಲ್ಲಿ ಇತ್ಯರ್ಥವಾಗಿ ಬಗರ್ ಹುಕುಂ ತಂತ್ರಾoಶದಲ್ಲಿ ಅಳವಡಿಕೆ ಆಗದೇ ಇದ್ದ 88 ಪ್ರಕರಣಗಳಲ್ಲಿ 10 ಪ್ರಕರಣಗಳು ತಂತ್ರಾoಶದಲ್ಲಿ ಅಳವಡಿಸಲು ಬಾಕಿ ಇರುತ್ತದೆ ಎಂದು ಉತ್ತರಿಸಿದ್ದಾರೆ. ತಂತ್ರಾoಶದಲ್ಲಿ ಸೇರಿಸಲು ಬಾಕಿ ಇರುವ 471 ಅರ್ಹ ಅರ್ಜಿಗಳನ್ನು ಸೇರಿಸಲು ಒತ್ತಾಯ:ನಮೂನೆ 50,53 ಹಾಗೂ 57 ರಲ್ಲಿ ಅರ್ಹ ಅಕ್ರಮ ಸಕ್ರಮ ಅರ್ಜಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಆಯೋಜಿಸುವ ಪ್ರತಿಷ್ಠಿತ Inspire Award – MANAK ಯೋಜನೆಗೆ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಅಮಿತ್ ಆರ್. ನಾಯ್ಕ್ ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯ ಸರಕಾರದ ಗ್ಯಾರೆಂಟಿ ಯೋಜನೆ ಪ್ರತಿಯೋಬ್ಬ ಅರ್ಹ ಫಲಾನುಭವಿಗೂ ತಲುಪಿಸಬೇಕಾಗಿದ್ದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಇದಕ್ಕೆ ಅಧಿಕಾರಿಗಳ ಸಹಕಾರ ಅಗತ್ಯ. ಸರಕಾರದ ಯೋಜನೆಯಿಂದ ಯಾರೋಬ್ಬರು ವಂಚಿತರಾಗದಂತೆ ಶ್ರಮವಹಿಸಬೇಕಿದೆ ಎಂದು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಮೋಹನ್ ಪೂಜಾರಿ ಹೇಳಿದರು. ಅವರು ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಗ್ಯಾರಂಟಿ ಅನುಷ್ಠಾನ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೈಂದೂರು ತಾಲೂಕಿನ ಯಡ್ತರೆಯಲ್ಲಿ ಸುಸಜ್ಜಿತವಾದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಆಗಿದ್ದರೂ ಸರ್ವಿಸ್ ರಸ್ತೆ ಆಗದ ಕಾರಣ ಉಡುಪಿ ಭಾಗದ ಬಸ್ಸುಗಳನ್ನು ನಿಲ್ದಾಣಕ್ಕೆ ಬರದೇ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ಇದಕ್ಕೆ ಸೂಕ್ತ ಕ್ರಮವಹಿಸಲು ಈಗಾಗಲೇ ಕೆ.ಎಸ್.ಆರ್.ಟಿ.ಸಿ ಡಿಸಿ ಅವರ ಗಮನಕ್ಕೆ ತರಲಾಗಿದೆ. ಜಿಲ್ಲಾಧಿಕಾರಿಗಳಿಗೂ ಮನವಿ ಮಾಡಲಾಗಿದೆ. ಎಲ್ಲಾ ಬಸ್ಸುಗಳು ನಿಲ್ದಾಣಕ್ಕೆ ಬರುವಂತೆ ಹೆಚ್ಚಿನ ಕ್ರಮವಹಿಸಲು ಅವರು ಸೂಚಿಸಿದರು. ಪರ್ಮಿಟ್ ಹೊಂದಿದ್ದರೂ ಕೆಎಸ್ಆರ್ಟಿಸಿ ಬಸ್ ಸೇವೆಯನ್ನು ಸ್ಥಗೀತಗೊಳಿಸಿ ತಾಲೂಕು ವ್ಯಾಪ್ತಿಯ ಗ್ರಾಮೀಣ ಭಾಗಗಳ ಸಾರ್ವಜನಿಕರು ತೊಂದರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಮುಂಬರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕುಂದಾಪುರದ ಕೋಟೇಶ್ವರ ಸಮೀಪದ ಯುವ ಮೆರಿಡಿಯನ್ ಹೆಲಿಪ್ಯಾಡ್ ಬಳಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರದಲ್ಲಿರುವ ಪಕ್ಷದ ಕಡೆಗೆ ಮತದಾರರ ಒಲವಿರುತ್ತದೆ. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಮನೆ ಮನೆಗೆ ತಲುಪಿವೆ. ಅಭಿವೃದ್ಧಿಯ ಜೊತೆಗೆ ಜನರ ಆದಾಯ ಕೂಡ ಜಾಸ್ತಿ ಆಗಿದೆ. ಅದರಲ್ಲೂ ಮಹಿಳಾ ಮತದಾರರು ಸಂತೋಷದಲ್ಲಿದ್ದಾರೆ ಎಂದರು. ಎರಡು ಕ್ಷೇತ್ರಗಳಲ್ಲೂ ಗೆದ್ದೇ ಗೆಲ್ಲುತ್ತೇವೆ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಟಿಕೆಟ್ ಕೇಳುವ ಹಕ್ಕಿದೆ. ಗೆಲುವೊಂದೇ ನಮಗೆ ಮಾನದಂಡ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಅವರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಲಾಗಿದೆ. ಇದು ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ…
ಕುಂದಾಪ್ರ ಡಾಟ್ ಕಾಂ ಸುದದಿ.ಕುಂದಾಪುರ: ಕೃತಕ ಬುದ್ಧಿಮತ್ತೆ ಚಾಲ್ತಿಯಲ್ಲಿರುವ ಇಂದಿನ ಕಾಲಘಟ್ಟದಲ್ಲಿ, ವಿದ್ಯಾರ್ಥಿಗಳಲ್ಲಿ ಸಂವೇದನಾ ಶೀಲತೆಯನ್ನು ಬೆಳೆಸಬೇಕಾಗಿರುವುದು ಅತ್ಯಂತ ಅಗತ್ಯ. ವಿದ್ಯಾರ್ಥಿಗಳನ್ನು ಆಂತರಿಕವಾಗಿ ಮತ್ತು ಭಾವನಾತ್ಮಕವಾಗಿ ಗಟ್ಟಿಗೊಳಿಸಲು ಸಾಹಿತ್ಯದ ಓದು ಮತ್ತು ಬರವಣಿಗೆ ಉಪಯೋಗಕಾರಿ. ಸಾಹಿತ್ಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ನಿರಂತರವಾಗಿ ತೊಡಗಿಕೊಂಡರೆ ಭವಿಷ್ಯದಲ್ಲಿ ಮೌಲ್ಯಯುತ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷ ಹಾಗೂ ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಉಮೇಶ್ ಪುತ್ರನ್ ಹೇಳಿದರು. ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಡಾ| ಶಿವರಾಮ ಕಾರಂತ ಪ್ರತಿಷ್ಠಾನ ಕಾರಂತ ಥೀಮ್ ಪಾರ್ಕ್, ಕೋಟ ಇವರ ಸಹಯೋಗದೊಂದಿಗೆ ಸಾಹಿತ್ಯಾಸಕ್ತ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಬರವಣಿಗೆ ಕೌಶಲ’ ಎನ್ನುವ ವಿಷಯದ ಕುರಿತ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ತಾಲೂಕು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಬೆಳ್ವೆ ಗ್ರಾಮದ ನಿವಾಸಿ ಶ್ರೀಧರ ಆಚಾರ್ಯ (53) ಅವರು ರಕ್ತಸಿಕ್ತ ವಾಂತಿ ಮಾಡಿ ಮೃತಪಟ್ಟ ಘಟನೆ ನಡೆದಿದೆ. ಮಂಗಳವಾರ ಮಧ್ಯಾಹ್ನ ಊಟ ಮಾಡಿ ಮನೆಯ ಕೋಣೆಯಲ್ಲಿ ಮಲಗಿದ್ದ ಅವರು ರಕ್ತಸಿಕ್ತ ವಾಂತಿ ಮಾಡಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಕೂಡಲೇ ಅವರನ್ನು ಬೆಳ್ವೆ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಸ್ತಾನ ಟೋಲ್ನಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಗೆ ಹಲ್ಲೆ ನಡೆಸಿ, ಕಬ್ಬಿಣದ ರಾಡ್ನಿಂದ ಕೊಲೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಸ್ತಾನ ಟೋಲ್ ಅಸಿಸ್ಟಂಟ್ ಮ್ಯಾನೇ ಜರ್ ಆಗಿ ಕೆಲಸ ಮಾಡುತ್ತಿರುವ ಯೋಗೀಶ್ ಕುಮಾರ್ (42) ಅವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಂಗಳವಾರ ಸಂಜೆ ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಬಸ್ಸೊಂದು ಟೋಲ್ ಪಾವತಿಸುತ್ತಿದ್ದ ಸಂದರ್ಭ ಅದರ ಹಿಂದೆ ಕಾರಿನಲ್ಲಿ ಇದ್ದ ವ್ಯಕ್ತಿಗಳು ದಾಂಧಲೆ ನಡೆಸಿದ್ದಾರೆ. ಕಾರಿನಲ್ಲಿದ್ದ ವೆಂಕಟೇಶ ಪ್ರಸಾದ್ ಎಂಬಾತ ಕೂಗಾಡುತ್ತಾ ಟೋಲ್ ಬ್ಯಾರಿಯರ್ಗೆ ಕಾಲಿನಿಂದ ಒದ್ದಿದ್ದಾನೆ. ಅಲ್ಲದೆ ಅಲ್ಲಿದ್ದ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೈಯಿಂದ ದೂಡಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಜಗಳ ವಿಕೋಪಕ್ಕೆ ಹೋದಾಗ ಕಾರಿನಲ್ಲಿದ್ದ ವಿನಾಯಕ್ ಎಂಬಾತ ಕಬ್ಬಿಣದ ರಾಡ್ ಹಿಡಿದು ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಸಿಬ್ಬಂದಿ ಸಮಯಪ್ರಜ್ಞೆ ಮೆರೆದು ಪಕ್ಕಕ್ಕೆ ಸರಿದ ಕಾರಣ…
