Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಎಆರ್‌ಎಸ್‌ಐ ಅವರು ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್ ಕ್ರೀಡಾಕೂಟದಲ್ಲಿ 45 ವರ್ಷ ಮೇಲ್ಪಟ್ಟ ವರ್ಗದಲ್ಲಿ 100ಮೀ ಓಟದಲ್ಲಿ ಶಂಕರ್ ಪೂಜಾರಿ ಅವರು ದ್ವಿತೀಯ ಸ್ಥಾನ ಹಾಗೂ 200ಮೀ ಓಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಮೂಲತಃ ಬೈಂದೂರು ತಾಲೂಕು ಬಿಜೂರಿನವರಾದ ಶಂಕರ ಪೂಜಾರಿ ಅವರು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರಿದ್ದು, ಓಟ, ರಿಲೇ ಮೊದಲಾದ ವಿಭಾಗದಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ತನಕವೂ ಭಾಗವಹಿಸಿದ್ದಾರೆ. 2014ರಲ್ಲಿ ನಡೆದ 26ನೇ ಮಲೇಷಿಯಾ ಅಥ್ಲೆಟಿಕ್ ಚಾಂಪಿಯನ್’ಶಿಪ್’ನಲ್ಲಿ 2 ಚಿನ್ನ ಹಾಗೂ ಎರಡು ಬೆಳ್ಳಿಯ ಪದಕ ಗೆದ್ದಿದ್ದರು ಹಾಗೂ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಮಾಸ್ಟ್ ಸ್ಪೋರ್ಟ್ಸ್ 2021 ಕ್ರೀಡಾಕೂಟ 100 ಹಾಗೂ 200 ಮೀಟರ್ ಓಟದ ಸ್ವರ್ಧೆಯಲ್ಲಿ ಅವರು ಬೆಳ್ಳಿಯ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದರು. ಶಂಕರ ಪೂಜಾರಿ ಅವರು ಪ್ರಸ್ತುತ ಅವರು ಯಡ್ತಾಡಿ ಸೈಬ್ರಕಟ್ಟೆಯಲ್ಲಿ ನೆಲೆಸಿದ್ದಾರೆ. ಅವರಿಗೆ ಮಾನ್ಯ ಡಿಎಸ್‌ಪಿ ಹಾಗೂ ಉಡುಪಿ ಜಿಲ್ಲೆಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ರಾಜ್ಯದಲ್ಲಿ ಕರ್ನಾಟಕ ದಲಿತ ಸಂಘದ ಸಮಿತಿ ಕಳೆದ ಹಲವರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿವೆ. ಸಮಾಜದಲ್ಲಿ ಸಂಕಷ್ಠಕ್ಕೆ ಒಳಗಾಗಿರುವ ಸಮುದಾಯಗಳಿಗೆ ಹೋರಾಟ, ಪ್ರತಿಭಟನೆಯ ಮೂಲಕ ನ್ಯಾಯ ಒದಗಿಸಲಾಗುತ್ತಿದೆ. ರಾಜ್ಯದ ಎಲ್ಲ ಜಿಲ್ಲಾ ಕೇಂದ್ರ ಹಾಗೂ ತಾಲೂಕು ಕೇಂದ್ರಗಳಲ್ಲಿ ಶಾಖೆಗಳ ಮೂಲಕ ಸಂಘಟನೆಗೆ ಆದ್ಯತೆ ನೀಡಲಾಗಿದೆ ಎಂದು ಕರ್ನಾಟಕ ದಲಿತ ಸಂಘದ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಹೇಳಿದರು. ಅವರು ರೋಟರಿ ಸಮುದಾಯ ಭವನದಲ್ಲಿ ನಡೆದ ಕರ್ನಾಟಕ ದಲಿತ ಸಂಘದ ಸಮಿತಿ, ಅಂಬೇಡ್ಕರ್‌ವಾದ ಜಿಲ್ಲಾ ಸಮಿತಿ, ಬೈಂದೂರು ತಾಲೂಕು ಸಮಿತಿ ವತಿಯಿಂದ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಭೀಮ ಶಕ್ತಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಾಮೂಹಿಕ ಪುಷ್ಪನಮನ ಸಲ್ಲಿಸಲಾಯಿತು. ಸಮುದಾಯದ ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಜಿಲ್ಲಾ ಪ್ರಧಾನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2024-25 ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಕೋರ್ಸುಗಳಿಗೆ ಶುಲ್ಕ ಮರುಪಾವತಿ ಕಾರ್ಯಕ್ರಮಕ್ಕೆ ವೆಬ್‌ಸೈಟ್ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 10 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 8050770005, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಸಂಖ್ಯೆ: 1902, ಇ-ಮೇಲ್ postmetrichelp@karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಿಐಎಸ್‌ಸಿಇ ನಡೆಸುತ್ತಿರುವ ಗೇಮ್ಸ್ ಮತ್ತು ಸ್ಪೋರ್ಟ್ಸ್ 2025-26ರ ಸ್ಪರ್ಧೆಗಳ ಅಂಗವಾಗಿ ಸೋಮವಾರ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಖೋ ಖೋ ಸ್ಪರ್ಧೆಗಳನ್ನು ನಡೆಸಲಾಯಿತು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡೆಯಲ್ಲಿ ಸ್ಪರ್ಧೆ ಇರಬೇಕು. ಸೋಲು ಕೂಡ ಗೆಲುವಿನ ಮೂಲವಾದ್ದರಿಂದ ಸೋತಿದ್ದೇವೆಂದು ನೊಂದುಕೊಳ್ಳಬಾರದು. ಪ್ರಾಮಾಣಿಕವಾಗಿ ಆಟಗಳನ್ನು ಆಡಬೇಕು ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. 14 ವರ್ಷದೊಳಗಿನ ವಯೋಮಿತಿಯ ಹುಡುಗರ ವಲಯ ಮಟ್ಟದ ಖೋ ಖೋ ಸ್ಪರ್ಧೆಯಲ್ಲಿ ಟ್ರಿನಿಟಿ ಸೆಂಟ್ರಲ್ ಸ್ಕೂಲ್ ಪಾರಂಪಳ್ಳಿ, ಉಡುಪಿ ಪ್ರಥಮ ಸ್ಥಾನವನ್ನು, ಸೈಂಟ್ ಫಿಲಿಪ್ಸ್ ಸೆಂಟ್ರಲ್ ಸ್ಕೂಲ್, ಬಸ್ರೂರು ದ್ವಿತೀಯ ಸ್ಥಾನವನ್ನು, ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ತೃತೀಯ ಸ್ಥಾನವನ್ನು ಪಡೆದುಕೊಂಡಿತು. 14 ವರ್ಷದೊಳಗಿನ ವಯೋಮಿತಿಯ ಹುಡುಗಿಯರ ವಲಯ ಮಟ್ಟದ ಖೋ ಖೋ ಸ್ಪರ್ಧೆಯಲ್ಲಿ ಟ್ರಿನಿಟಿ ಸೆಂಟ್ರಲ್ ಸ್ಕೂಲ್ ಪಾರಂಪಳ್ಳಿ, ಉಡುಪಿ ಪ್ರಥಮ ಸ್ಥಾನವನ್ನು, ಸೈಂಟ್ ಫಿಲಿಪ್ಸ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ವಡೇರಹೋಬಳಿ ಗ್ರಾಮದ ಬಿ.ಸಿ ರಸ್ತೆ ಕಾಂತರಬೆಟ್ಟು ನಿವಾಸಿ ಜಯೇಂದ್ರ (26) ಎಂಬ ಯುವಕನು ಜೂನ್ 23 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಕೋಲು ಮುಖ, ಸದೃಢ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ ಹೊಂದಿರುತ್ತಾರೆ. ಸದ್ರಿ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಪೊಲೀಸ್ ಠಾಣೆ ದೂ.ಸಂಖ್ಯೆ: 08254-230338, ಡಿ.ವೈ.ಎಸ್.ಪಿ ಕುಂದಾಪುರ ಮೊ.ನಂ: 9480805422, ಪಿ.ಐ ಕುಂದಾಪುರ ಠಾಣೆ ಮೊ.ನಂ: 9480805455, ಪಿ.ಎಸ್.ಐ ಕುಂದಾಪುರ ಠಾಣೆ ಮೊ.ನಂ: 8277988957 ಹಾಗೂ 8277988959 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ‌ ಹಾಗೂ ಪ್ರೌಢಶಾಲೆ ಇಲ್ಲಿನ ವಿದ್ಯಾದಾಯಿನಿ ಸಭಾಭವನದಲ್ಲಿ ಈ ದಿನ ವಿಜ್ಞಾನ ಪ್ರಯೋಗಾಲಯಕ್ಕೆ ಅಗತ್ಯವಿರುವ ಉಪಕರಣಗಳನ್ನು ಮತ್ತು ತರಗತಿಗಳಿಗೆ ಗ್ರೀನ್ ಬೋರ್ಡ್ ಗಳನ್ನು ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಇವರ ವತಿಯಿಂದ ನೀಡಲಾಯಿತು. ರೋಟರಿ ಕುಂದಾಪುರ ಮಿಡ್ ಟೌನ್ ಇದರ ಅಧ್ಯಕ್ಷರಾದ ರೊಟೇರಿಯನ್ ಶೇಖರ್. ಎನ್. ಶೆಟ್ಟಿ aವರು ತಮ್ಮ ಅಧ್ಯಕ್ಷೀಯ ಅವಧಿಯ ಕೊನೆಯ ದಿನದ ಕೊನೆಯ ಕಾರ್ಯಕ್ರಮವನ್ನು ತಮ್ಮ ಊರಿನ ಶಾಲೆಗೆ ದೇಣಿಗೆ ನೀಡಿ, ಮಕ್ಕಳಿಗೆ ಉತ್ತಮ ಕಿವಿಮಾತು ಹೇಳುವ ಮೂಲಕ ನಡೆಸಿಕೊಟ್ಟರು ಮತ್ತು ಇದರೊಂದಿಗೆ ತಮ್ಮ ಅಧ್ಯಕ್ಷೀಯ ಅವಧಿಯಲ್ಲಿ ಮಾಡಿದ ಅನೇಕಾನೇಕ ಸಮಾಜ ಸೇವೆಗಳಿಂದ ಸಾರ್ಥಕತೆ ಕಂಡು ಕೊಂಡಿರುವುದಾಗಿ ತಿಳಿಸಿದರು. ಗ್ರಾಮೀಣ ಭಾಗದ ಶಾಲೆಯಲ್ಲಿ ವಿಜ್ಞಾನ ಪ್ರಯೋಗಾಲಯದ ಕನಸು ನನಸಾಗಿಸುವಲ್ಲಿ ರೊಟೇರಿಯನ್ ಶೇಖರ್. ಎನ್. ಶೆಟ್ಟಿ ಅವರ ದೇಣಿಗೆ ಬೃಹತ್ ಕೊಡುಗೆಯಾಗಿದೆ ಎಂದು ಸಂಜಯಗಾಂಧಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮರವಂತೆಯ ಶ್ರೀ ರಾಮ ಮಂದಿರ ಮೀನುಗಾರರ ಸೇವಾ ಸಮಿತಿ ವತಿಯಿಂದ ಮರವಂತೆ ಬ್ರೇಕ್ ವಾಟರ್ ಸಮೀಪದ ಕಡಲ ತೀರದಲ್ಲಿ ಸಮುದ್ರ ಪೂಜೆ ಸೋಮವಾರ ನಡೆಯಿತು. ಇಂದು ಬೆಳಿಗ್ಗೆ ಮರವಂತೆಯ ಶ್ರೀ ರಾಮ ಮಂದಿರದ, ಶ್ರೀ ಗಂಗಾಧರೇಶ್ವರ ದೇವಸ್ಥಾನ ಹಾಗೂ ವರಾಹ ಸ್ವಾಮಿ ದೇವಸ್ಥಾನದ ದೇವರ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಮೀನುಗಾರರು ವಿಶೇಷ ಪೂಜೆ ಸಲ್ಲಿಸಿದರು. ಕರಾವಳಿ ಮಹಾ ಬೊಬ್ಬರ್ಯ ದೇವಸ್ಥಾನದಲ್ಲಿ ಗಣಹೋಮ ಸೇವೆ ಸಲ್ಲಿಸಿದ ಬಳಿಕ ಮರವಂತೆ ಬ್ರೇಕ್‌ವಾಟರ್‌ನ ಕಡಲ ತೀರದಲ್ಲಿ ಸಮುದ್ರ ರಾಜನಿಗೆ ಹಾಲು, ಅಣಬೆ, ಹಣ್ಣು, ಹಳದಿ ಕುಂಕುಮದೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು. ಅರ್ಚಕ ಮಹಾಬಲೇಶ್ವರ ಭಟ್ ನೇತೃತ್ವದಲ್ಲಿ ಸಮುದ್ರ ಪೂಜೆಯ ಧಾರ್ಮಿಕ ವಿಧಿವಿಧಾನಗಳು ಸಂಪನ್ನಗೊಂಡಿತು. ಮುಂದಿನ ಮೀನುಗಾರಿಕಾ ಋತುವಿನಲ್ಲಿ ಸಮೃದ್ಧ ಮತ್ಸ್ಯ ಸಂಪತ್ತು ದೊರೆಯುವಂತಾಗಲಿ, ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಯಾವುದೇ ಅಪಾಯ ಎದುರಾಗದಿರಲಿ, ಪ್ರಕೃತಿ ವಿಕೋಪಗಳು ಬಾರದಿರಲಿ, ಎಲ್ಲಾ ಮೀನುಗಾರರ ಬಾಳಿನಲ್ಲಿ ಸುಖ ಶಾಂತಿ ನೆಮ್ಮದಿ ಇರುವಂತಾಗಲಿ, ಸಮಸ್ತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮಕ್ಕಳಿಗೆ ಪರಿಸರ ಜಾಗೃತಿ ಮೂಡಿಸಿದರೆ ಮುಂದಿನ ದಿನಗಳು ಹಸಿರು ಕ್ರಾಂತಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಕೆ.ಎಂ.ಎಫ್ ನಿರ್ದೇಶಕ ಕೆ. ಶಿವಮೂರ್ತಿ ಉಪಾಧ್ಯಾಯ ಹೇಳಿದರು. ಅವರು ಕೋಟತಟ್ಟು ಪಡುಕರೆ ಡೈರಿಯಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ, ಜೆಸಿಐ ಸಿನಿಯರ್ ಲಿಜನ್ ಕೋಟ ಇವರ ಸಹಯೋಗದೊಂದಿಗೆ ಹಾಲು ಉತ್ಪಾದಕರ ಸಹಕಾರಿ ಸಂಘ ಕೋಟತಟ್ಟು ಪಡುಕರೆ ಇವರ ಸಂಯೋಜನೆಯೊಂದಿಗೆ ಗೀತಾನಂದ ಫೌಂಡೇಶನ್ ಮಣೂರು, ಸಮುದ್ಯತಾ ಗ್ರೂಪ್ಸ್ ಕೋಟ, ಅನ್ನಪೂರ್ಣ ನರ್ಸರಿ ಪೇತ್ರಿ, ಸುವರ್ಣ ಎಂಟರ್ಪ್ರೈಸ್ ಬ್ರಹ್ಮಾವರ ಇವರು ಕೊಡ ಮಾಡಿದ ಗಿಡಗಳನ್ನು ನಡುವ 261ನೇ ಭಾನುವಾರದ ಪರಿಸರಸ್ನೇಹಿ ಹಸಿರು ಜೀವ ಅಭಿಯಾನ ಕಾರ್ಯಕ್ರಮದಲ್ಲಿ ಗಿಡ ವಿತರಿಸಿ ಮಾತನಾಡಿದರು. ಪ್ರಕೃತಿಗಾಗಿ ಪಂಚವರ್ಣ ಸಂಘಟನೆ ತನ್ನನ್ನು ತಾನು ಅರ್ಪಿಸಿಕೊಂಡಿದೆ ಇದು ಶಬ್ದಗಳಲ್ಲಿ ಬಣ್ಣಿಸಲು ಸಾಧ್ಯವಿಲ ಪ್ರಸ್ತುತ ಮನುಕುಲದಲ್ಲಿ ಈ ರೀತಿಯ ಸಾಮಾಜಿಕ ಸೇವೆ ಅಮೋಘವಾದದ್ದು ಎಂದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಕರಾವಳಿ ಕಾವಲು ಪೋಲಿಸ್ ಠಾಣೆಯಿಂದ ವರ್ಗಾವಣೆಗೊಂಡ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಸಮಾರಂಭವು ಗಂಗೊಳ್ಳಿಯ ಕರಾವಳಿ ಕಾವಲು ಪೋಲಿಸ್ ಠಾಣೆಯಲ್ಲಿ ನಡೆಯಿತು. ಗಂಗೊಳ್ಳಿ ಕರಾವಳಿ ಕಾವಲು ಪೋಲಿಸ್ ಠಾಣೆಯಿಂದ ವರ್ಗಾವಣೆಗೊಂಡ ಎಎಸ್ಸೈ ಭಾಸ್ಕರ, ಸಿಬ್ಬಂದಿಗಳಾದ ಸುರೇಂದ್ರ ಡಿ., ಉದಯ ಗೌಡ ಹಾಗೂ ಯಶೋಧ ಅವರನ್ನು ಠಾಣೆಯ ಪರವಾಗಿ ಇನ್ಸಪೆಕ್ಟರ್ ವಸಂತ ರಾಮ ಆಚಾರ್ ಸನ್ಮಾನಿಸಿ ಬೀಳ್ಕೊಟ್ಟರು. ಉಪನಿರೀಕ್ಷಕರಾದ ಸುಬ್ರಹ್ಮಣ್ಯ ಎಚ್. ಮತ್ತು ಮುಕ್ತಾ ಬಾಯಿ, ಸಹಾಯಕ ಉಪನಿರೀಕ್ಷಕರಾದ ಬಾಬು ಪೂಜಾರಿ ಮತ್ತು ಮಂಜುನಾಥ ಗಾಣಿಗ, ಸ್ಥಳೀಯ ಮುಖಂಡ ಹರೀಶ್ ಕೊಡಪಾಡಿ, ಠಾಣೆಯ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು. ನಾಗರಾಜ ಖಾರ್ವಿ ಕಾರ್ಯಕ್ರಮ ನಿರ್ವಹಿಸಿದರು. ಸಿಬ್ಬಂದಿಗಳಾದ ರಾಘವೇಂದ್ರ ದೇವಾಡಿಗ ಸ್ವಾಗತಿಸಿ, ದಿನೇಶ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಂದು ಓದುವ ವಿಧಾನ ಬದಲಾಗಿ ವಿದ್ಯಾರ್ಥಿಗಳಿಗೆ ಓದಿದ ವಿಷಯಗಳು ಮರೆತು ಹೋಗುತ್ತಿದೆ. ಕೇವಲ ಪರೀಕ್ಷೆಗೋಸ್ಕರ ಓದದೆ ಜ್ಞಾನಕೋಸ್ಕರ ಓದುವಂತವರಾಗಬೇಕು. ಆಗ ಮಾತ್ರ ಸಾರ್ಥಕತೆಯನ್ನು ಕಂಡುಕೊಳ್ಳಲು ಸಾಧ್ಯ ಎಂದು ರಾಷ್ಟ್ರೀಯ ಮಟ್ಟದ ಜೆಸಿಐ ತರಬೇತುದಾರರು ಹಾಗೂ ಖ್ಯಾತ ವಾಗ್ಮಿಗಳಾದ ಕೆ. ರಾಜೇಂದ್ರ ಭಟ್ ತಿಳಿಸಿದರು. ಅವರು ಕಾರ್ಕಳದ ಕ್ರಿಯೇಟಿವ್ ಕಾಲೇಜು ಹೊಸ ಪರಿಕಲ್ಪನೆಯಿಂದ ಹುಟ್ಟಿಕೊಂಡಿರುವ ಕ್ರಿಯೇಟಿವ್ ಸ್ಪೂರ್ತಿ ಮಾತು ಸರಣಿ ಕಾರ್ಯಕ್ರಮದ 9ನೇ ಆವೃತ್ತಿಯ ಕಾರ್ಯಕ್ರಮವು ಕಲಿಯುವುದು ಒಂದು ಹಬ್ಬ- ಸಂಭ್ರಮಿಸೋಣ ಎಂಬ ಶೀರ್ಷಿಕೆಯಲ್ಲಿ ಮಾತನಾಡಿದರು. ಶರೀರದ ಒಳಗಿನಿಂದ ಎನರ್ಜಿ ಸೃಷ್ಟಿಸಿಕೊಂಡಾಗ ದೊರೆಯುವುದೇ ಸ್ಫೂರ್ತಿ, ವಿದ್ಯಾರ್ಥಿಗಳು ಪ್ರಯೋಗ ಮಾಡಬಹುದಾದ 10 ಸ್ಪೂರ್ತಿಗಳ ಬಗ್ಗೆ ಉದಾಹರಣೆಗಳನ್ನು ನೀಡಿದರು. ಎಲ್ಲ ಮಕ್ಕಳು ಅದ್ಭುತವನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಓದುವಿಕೆಯಲ್ಲಿ ಮೌನ ಓದುವಿನಿಂದಾಗುವ ಅನೇಕ ಲಾಭಗಳನ್ನು ತಿಳಿಸುತ್ತಾ, ಸ್ಮಾರ್ಟ್ ವರ್ಕ್ ಮಾಡಿದರೆ ಯಾವುದೇ ವಿಷಯಗಳು ಕಠಿಣವೆನಿಸುವುದಿಲ್ಲ. ಕಡಿಮೆ ಪರಿಶ್ರಮ ಹಾಕಿ, ಆಸಕ್ತಿಯಿಂದ ಕೆಲಸ ಮಾಡುವುದೇ ಸ್ಮಾರ್ಟ್ ವರ್ಕ್ ಎಂದು ತಿಳಿಸುತ್ತಾ ಸುದೀರ್ಘವಾಗಿ…

Read More