Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಟದ ಜನತಾ ಸಂಸ್ಥೆಯ ಅವರಣದಲ್ಲಿ ಸಂಸ್ಥೆಯ ಸಿಬ್ಬಂದಿಗಳಿಗಾಗಿ ಉದ್ಯೋಗಿ ಸುರಕ್ಷತಾ ಉಪಕರಣಗಳ ವಿತರಣಾ ಸಂಸ್ಥೆಯಿಂದ ಸುರಕ್ಷತಾ ಪರಿಕರಗಳ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರವನ್ನು ಇತ್ತೀಚಿಗೆ ಆಯೋಜಿಸಿತು. ಕಾರ್ಯಕ್ರಮವನ್ನು ಸಂಸ್ಥೆಯ ಮುಖ್ಯಸ್ಥರಾದ ಆನಂದ ಸಿ. ಕುಂದರ್ ಉದ್ಘಾಟಿಸಿ ಮಾತನಾಡಿ, ಕಾರ್ಖಾನೆಗಳ ಸುರಕ್ಷಿತ ವಾತಾವರಣವೆ ಕಾರ್ಮಿಕನಿಗೆ ಶ್ರೀರಕ್ಷೆ ಹಾಗಾಗಿ ಎಲ್ಲರು ಒಂದಾಗಿ ಸುರಕ್ಷಿತ ವಾತಾವರಣವನ್ನು ಕಾರ್ಖಾನೆಯ ಒಳಗೆ ನಿರ್ಮಿಸಲು ಪಣ ತೋಡೋಣ ಎಂದರು. ಕಾರ್ಯಕ್ರಮದಲ್ಲಿ ಕಾರ್ಖಾನೆಯ ನಿರ್ದೇಶಕರಾದ ರಕ್ಷಿತ್ ಕುಂದರ್, ಎ.ಜಿ.ಎಮ್ ಶ್ರೀನಿವಾಸ್ ಕುಂದರ್, ವ್ಯವಸ್ಥಾಪಕ ಮಿಥುನ್ ಕುಮಾರ್, ಸುರಕ್ಷಾತಧಿಕಾರಿ ಕಾರ್ತಿಕ ಆಚಾರ್ಯ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ಎರಡು ದಿನ ನಡೆದ ರಾಜ್ಯಮಟ್ಟದ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆ ‘ಪ್ರಜ್ಞಾ 2025’ ರಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಮೊದಲನೇ ದಿನ ಶೈಕ್ಷಣಿಕ ಸ್ಪರ್ಧೆಯಲ್ಲಿ 15 ಬಹುಮಾನ, ಎರಡನೇ ದಿನ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಆಯೋಜಿಸಿದ ಎಲ್ಲಾ ಸ್ಪರ್ಧೆಗಳಲ್ಲಿ ಪ್ರಥಮ ಬಹುಮಾನ ಪಡೆದು, ಒಟ್ಟು 24 ಬಹುಮಾನ ಪಡೆಯುವ ಮೂಲಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಎರಡೂ ವಿಭಾಗಗಳಲ್ಲಿ ಸಮಗ್ರ ಪುರಸ್ಕಾರದೊಂದಿಗೆ ಚಾಂಪಿಯನ್ನಾಗಿ ಮೂಡಿಬಂದಿದ್ದಾರೆ. ಇದೇ ಸಂದರ್ಭ ಪ್ರಾಧ್ಯಾಪಕರಿಗೆ ಆಯೋಜಿಸಿದ ಸಂಗೀತ ಸ್ಪರ್ಧೆಯಲ್ಲಿ ಕಾಲೇಜಿನ ಐಕ್ಯೂಎಸಿ ಸಂಯೋಜಕಿ ದೀಪಿಕಾ ಜಿ. ಪ್ರಥಮ ಸ್ಥಾನ ಪಡೆದಿದ್ದಾರೆ. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ, ಐಕ್ಯೂಎಸಿ ಸಂಯೋಜಕಿ ಹಾಗೂ ಸಾಂಸ್ಕೃತಿಕ ತಂಡದ ಸಂಯೋಜಿಕಿ ದೀಪಿಕಾ ಜಿ.,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದಿಂದ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಅಧ್ಯಯನ ಮಾಡಲು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಲಾಗಿದ್ದು, 2024-25 ನೇ ಸಾಲಿನಲ್ಲಿ 5 ನೇ ತರಗತಿಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ 6 ನೇ ತರಗತಿಗೆ ಸೇರ್ಪಡೆಗೆ ಅರ್ಜಿ ಆಹ್ವಾನಿಸಲಾಗಿದೆ. 5 ನೇ ತರಗತಿಯಲ್ಲಿ ಶೇ. 60 ಅಂಕ ಪಡೆದು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುವ, ಪೋಷಕರ ವಾರ್ಷಿಕ ವರಮಾನ 2 ಲಕ್ಷ ರೂ. ಒಳಗಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಮೇ 3 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಠಡಿ ಸಂಖ್ಯೆ: 310, ಬಿ ಬ್ಲಾಕ್, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574814 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಭಾರತ ದೇಶ ಮಾತ್ರವಲ್ಲದೇ ಇಡೀ ಜಗತ್ತಿಗೆ ಡ್ರಗ್ಸ್ ಅತ್ಯಂತ ಅಪಾಯಕಾರಿ ವ್ಯವಸ್ಥೆಯಾಗಿ ಮಾರ್ಪಟ್ಟಿದೆ. ಇಂದಿನ ಯುವಕರು, ವಿದ್ಯಾರ್ಥಿಗಳು ನಶೆಗಾಗಿ ಸೇವನೆ ಮಾಡುವುದರಿಂದ ತಮ್ಮ ಜೀವನವನ್ನು ತಾವೇ ಹಾಳು ಮಾಡುಕೊಳ್ಳುತ್ತಿದ್ದಾರೆ. ಭಾರತದ ಶಕ್ತಿಯೇ ಯುವಕರು. ದೇಶದ ಯುವಶಕ್ತಿಯನ್ನು ಡ್ರಗ್ಸ್ ಮುಕ್ತರನ್ನಾಗಿಸಲು ಎಲ್ಲರೂ ಕೈ ಜೋಡಿಸಿಬೇಕು  ಎಂದು ಕರ್ನಾಟಕ ಸರ್ಕಾರದ ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದರು. ಅವರು ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಸಮಾಜಕಾರ್ಯ ವಿಭಾಗದ ’ರಜತ ಮಹೋತ್ಸವʼದ ಅಂಗವಾಗಿ ಸುಂದರಿ ಆನಂದ ಆಳ್ವ ಕ್ಯಾಂಪಸ್‌ನಿಂದ ಮೂಡುಬಿದಿರೆ ತಾಲೂಕು ಕಚೇರಿಯವರೆಗೆ ನಡೆದ “ಮಾದಕ- ದ್ರವ್ಯ ವಿರೋಧಿ ಜಾಗೃತಿ ಜಾಥಾ” ದಲ್ಲಿ ಪಾಲ್ಗೊಂಡು ಮಾತನಾಡಿದರು.  ಮೂಡುಬಿದಿರೆಯ ವಿವಿಧ ಕಾಲೇಜು ಮತ್ತು ಆಳ್ವಾಸ್ ಕಾಲೇಜು ವಿದ್ಯಾರ್ಥಿಗಳು ಡ್ರಗ್ಸ್ ಮುಕ್ತ ಜಾಥಾ ನಿರ್ಮಿಸಲು ನಡೆಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಜಾಥಾದಲ್ಲಿ ಕಾಲ್ನಡಿಗೆಯ ಮೂಲಕ ಪಾಲ್ಗೊಂಡಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದರು. ಡ್ರಗ್ಸ್‌ನಿಂದ ವಿದ್ಯಾರ್ಥಿಗಳು ಸಂಪೂರ್ಣವಾಗಿ ದೂರವಿದ್ದು ಡ್ರಗ್ಸ್ ಸೇವನೆ ಮಾಡುವವರನ್ನು ವಿರೋಧಿಸಬೇಕು ಎಂದು ತಿಳಿಸಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕಾಶ್ಮೀರದ ಶ್ರೀನಗರದಲ್ಲಿ ನಡೆದ ಇಂಟರ್ ಯೂನಿವರ್ಸಿಟಿ ಆಲ್ ಇಂಡಿಯಾ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ 2024-25ರ ಸ್ಪರ್ಧೆಯಲ್ಲಿ ಜಿಲ್ಲೆಯ ಗುಂಡ್ಮಿ ಗ್ರಾಮದ ಸುಮಂತ್ ಪೂಜಾರಿ ಅವರು ತೃತೀಯ ಸ್ಥಾನದಲ್ಲಿ ಗೆದ್ದು ಕಂಚಿನ ಪದಕವನ್ನು ಪಡೆದು ಕರ್ನಾಟಕ ಹಾಗೂ ಉಡುಪಿ ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ. ಈತ ಮಿಲಾಗ್ರಿಸ್ ಕಾಲೇಜ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2 (ಎ), 3 (ಎ) ಹಾಗೂ (3ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮೊದಲನೇ ತಂಡದ ಆಯ್ಕೆಯ ಪೂರ್ವಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ (ಬಾಲಕರಿಗೆ ಮಾತ್ರ) ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 30 ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ https://bcwd.karnataka.gov.in ಅಥವಾ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ: 304, ಬಿ. ಬ್ಲಾಕ್, ಎರಡನೇ ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574881 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಹೊಳೆ ಪಾತ್ರಗಳಲ್ಲಿ ತುಂಬಿರುವ ಹೂಳು ಎತ್ತುವ ಸಂಬಂಧ 9 ತಿಂಗಳ ಹಿಂದೆ ನಡೆಸಿದ ಸಭೆಯ ನಿರ್ಣಯಗಳು ಕಾರ್ಯರೂಪಕ್ಕೆ ಬಂದಿಲ್ಲ. ಇನ್ನಿರುವ ಬೇಸಿಗೆಯ ಒಂದೂವರೆ ತಿಂಗಳಲ್ಲಿ ಹೇಗೆ ಕೆಲಸ ಮಾಡುವುದು. ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಿ ಕ್ರಿಯಾಯೋಜನೆ ತಯಾರಿಸುವಂತಹ ಕೆಲಸವನ್ನೂ ಮಾಡುವುದಿಲ್ಲ, ಸಭೆಯ ನಿರ್ಣಯವನ್ನು ಅನುಷ್ಠಾನ ಮಾಡುವುದಿಲ್ಲ ಎಂದರೆ ಹೇಗೆ? ಈಗ ಹಾಗೆ ಹೀಗೆ ಎಂದು ಕಾರಣಗಳನ್ನು ಹೇಳುತ್ತಿದ್ದೀರಿ. ಮೊದಲೇ ಹೇಳಿದ್ದರೆ ಪರಿಹಾರ ಕಂಡುಕೊಳ್ಳಬಹುದಿತ್ತು. ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿ ಎಂದು ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಇಲ್ಲಿನ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪದ ಮುಂಜಾಗ್ರತೆ, ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಪಂಚಾಯಿತಿ ಅಧಿಕಾರಿಗಳು, ಪ್ರತಿನಿಧಿ ಗಳು ಹಾಗೂ ನಾನಾ ಇಲಾಖಾಧಿಕಾರಿ ಗಳೊಂದಿಗೆ ನಡೆಸಿದ ಸಭೆಯಲ್ಲಿ ಸರಕಾರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಅಸಮಾಧಾನ ಹೊರಹಾಕಿದರು. ಮಳೆಗಾಲದಲ್ಲಿ ನೆರೆ ಸಮಸ್ಯೆಯಿದ್ದು, ಪರಿಹಾರಕ್ಕಾಗಿ ಹೊಳೆಸಾಲುಗಳಲ್ಲಿ ಹೂಳೆತ್ತಲು ಅನುವಾಗುವಂತೆ 9 ತಿಂಗಳ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೈಂದೂರು ಮಂಡಲ ವತಿಯಿಂದ ಕಾಶ್ಮೀರದ ಪಹಲ್ಯಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಧರ್ಮಧಾರಿತ ನರಮೇಧವನ್ನು ಖಂಡಿಸಿ ಬಿಜೆಪಿ ಯುವಮೋರ್ಚಾ ಬೈಂದೂರು ಮಂಡಲ ಅಧ್ಯಕ್ಷರಾದ ಗಜೇಂದ್ರ ಎಸ್. ಬೇಲೆಮನೆ ಅವರ ನೇತೃತ್ವದಲ್ಲಿ ಉಪ್ಪುಂದ ದ ಕಾರ್ಯಕರ್ತ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಯಿತು. ಈ ವಿದ್ವಂಸಕ  ಘಟನೆಯನ್ನು ಉದ್ದೇಶಿಸಿ ಬೈಂದೂರಿನ ಶಾಸಕದಾದ ಗುರುರಾಜ ಗಂಟಿಹೊಳೆ ಅವರು ಮಾತನಾಡಿ, ಮತಾಂಧ ಇಸ್ಲಾಮಿಕ್ ಭಯೋತ್ಪಾದಕರಿಗೆ ಖಂಡಿಸಿದರು. ಈ ಸಂದರ್ಭದಲ್ಲಿ , ಒಬಿಸಿ ಮೋರ್ಚಾ ಅಧ್ಯಕ್ಷರಾದ ಶಿವರಾಜ್ ಪೂಜಾರಿ, ಎಸ್‌ಸಿ ಮೋರ್ಚಾ ಅಧ್ಯಕ್ಷರಾದ ಅಶೋಕ್ ಎನ್‌ಡಿ, ಬಿಜೆಪಿ ಜಿಲ್ಲಾ ಯುವ ಮೋರ್ಚ ಕಾರ್ಯದರ್ಶಿ ಸುಧಾಕರ್ ಶೆಟ್ಟಿ ನೆಲ್ಯಾಡಿ, ಶಾಂತಿ ಖಾರ್ವಿ ಗಂಗೊಳ್ಳಿ, ಅಶೋಕ್ ದೇವಾಡಿಗ ಕಂಚಿಕಾನ್, ಕೃಷ್ಣ ಖಾರ್ವಿ ಕೊಡಿರಿ,  ಅಶೋಕ್ ನಾಡ, ರವಿಚಂದ್ರ ವಿ. ಕೆ., ಗೋಪಾಲ್ ಪೂಜಾರಿ ವಸ್ರೆ, ದಿವಾಕರ್ ಶೆಟ್ಟಿ, ಪ್ರದೀಪ್ ಉಪ್ಪುಂದ, ಜಗದೀಶ್ ಆಲಂದೂರ್, ಅನುರ ಮೆಂಡನ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಅಮಾಯಕ ಮುಗ್ಧ 27 ಜನರು ಬಲಿಯಾಗಿದ್ದು ತೀವ್ರ ದುಃಖದ ವಿಚಾರವಾಗಿದೆ. ಇಂತಹ ನೀಚ ಕೃತ್ಯದ ಹಿಂದೆ ಇರುವವರ ವಿರುದ್ದ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಬೈಂದೂರು ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಬ್ಭೀರ್ ಬೈಂದೂರು ಅವರು ಹೇಳಿದರು. ಈ ವಿಷಯದಲ್ಲಿ ಜಾತಿ, ಧರ್ಮ ಮತ್ತು ಪಕ್ಷ ನೋಡದೆ ಎಲ್ಲರೂ ಒಂದಾಗಿ ಸರಕಾರಕ್ಕೆ ಬೆಂಬಲ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಇಂತಹ ನೀಚ ಉಗ್ರವಾದವನ್ನು ಯಾವುದೇ ಧರ್ಮ ಒಪ್ಪಿಕೊಳ್ಳುವುದಿಲ್ಲ ಇದೊಂದು ಅಧರ್ಮದ ಕೆಲಸವಾಗಿದೆ. ದೇಶದ ಸಾಮರಸ್ಯವನ್ನು ಹತ್ತಿಕ್ಕುವ ಉಗ್ರ ಕಿಡಿಗೇಡಿಗಳ ಹೇಡಿತನದ ವಿರುದ್ಧ ಕೇಂದ್ರ ಸರಕಾರ ಕೂಡಲೇ ಕ್ರಮಗೊಳ್ಳಬೇಕು. ಈ ರೀತಿಯ ಭದ್ರತಾ ವೈಪಲ್ಯದಿಂದಾಗಿ ಮತ್ತೆ ಉಗ್ರರರ ಅಟ್ಟಹಾಸ ಮರುಕಳಿಸಿದಂತೆ ನೋಡಿಕೊಳ್ಳುವ ಜವಾಬ್ದಾರಿ ಸರಕಾರದ ಮೇಲಿದೆ. ಈ ಕೂಡಲೇ ಪ್ರವಾಸಿಗರು ಮತ್ತು ನಾಗರೀಕರ ರಕ್ಷಣೆಗೆ ಸರಕಾರ ಮುಂದೆ ಬರಬೇಕು ಹಾಗಾಗಿ ಕೇಂದ್ರ ಸರಕಾರ ಭಯೋತ್ಪಾದನೆ ನಿರ್ಮೂಲನೆ ಮಾಡುತ್ತೇವೆ ಸುಳ್ಳು ಹೇಳುವ ಬದಲು ಕೂಡಲೇ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆದೂರು ವ್ಯಾಪ್ತಿಯಿಂದ ಕೋಟ ಗ್ರಾ.ಪಂ, ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸೂಲ್ಪಡು ಮಡಿವಾಳಸಾಲು ಹೊಳೆ ಹೂಳು ಸಮಸ್ಯೆಗೆ ಶೀಘ್ರದಲ್ಲಿ ಟೆಂಡರ್ ಪ್ರಕ್ರೀಯೆ ಪೂರ್ಣಗೊಳಿಸಿ ಈ ವರ್ಷದ ಮಳೆಗಾಲದ ಆರಂಭಕ್ಕೂ ಮೊದಲು ಹೂಳೆ ಹೂಳು ತೆಗೆಯಬೇಕೆಂದು ರೈತಧ್ವನಿ ಸಂಘದ ಪ್ರಮುಖರಾದ ಟಿ. ಮಂಜುನಾಥ್ ಗಿಳಿಯಾರ್ ಆಗ್ರಹಿಸಿದರು. ಅವರು ಕೋಟದ ಅಮೃತೇಶ್ವರಿ ದೇಗುಲದಲ್ಲಿ ಕೋಟದ ರೈತಧ್ವನಿ ಸಂಘಟನೆ ಸಭೆಯಲ್ಲಿ ಮಾತನಾಡಿದರು. ಕಳೆದ ಹಲವಾರು ವರ್ಷಗಳಿಂದ ತೆಕ್ಕಟ್ಟೆ ಉಳ್ಳೂರು, ಬೇಳೂರು, ಗಿಳಿಯಾರು, ಕಾರ್ತಟ್ಟು, ಚಿತ್ರಪಾಡಿ, ಬನ್ನಾಡಿ, ಉಪ್ಪಾಡಿ, ಸಾಲಿಗ್ರಾಮ ವ್ಯಾಪ್ತಿಯ ರೈತರು ಕೃತಕ ನೆರೆ ಹಾವಳಿಗೆ ತುತ್ತಾಗುತ್ತಿರುವ ಹಿನ್ನಲ್ಲೆಯಲ್ಲಿ ಕಳೆದ ಸಾಕಷ್ಟು ವರ್ಷಗಳಿಂದ ರೈತಧ್ವನಿ ಹೋರಾಟ ನಡೆಸಿದ್ದು ಪ್ರಸ್ತುತ ರಾಜ್ಯ ಸರಕಾರ ವಾರಾಹಿ ಯೋಜನೆಯಡಿ ಹೊಳೆ ಹೂಳೆ ತೆಗೆಯುವ ಸಂಬಂಧಿಸಿದ ಈಗಾಗಲೇ 4.5ವರೆ ಕೋಟಿ ಮಿಸಲಿರಿಸಿ ಟೆಂಡರ್ ಪ್ರಕೀಯೆ ಬಾಕಿ ಇರಿಸಿದೆ ಈ ಬಗ್ಗೆ ರೈತರು ಈ ವರ್ಷದ ಮಳೆಗಾಲದೊಳಗೆ ಹೊಳೆ ಹೂಳಿನಿಂದ…

Read More