ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ ಸನ್ನಿಧಿಯಲ್ಲಿ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಅವರ ಮಾರ್ಗದರ್ಶನದಂತೆ ನಡೆಯುತ್ತಿರುವ ’ಅಖಂಡ ಭಜನಾ ಸಪ್ತಾಹ’ ಮಹೋತ್ಸವ ಮಂಗಳವಾರ ಬೆಳಿಗ್ಗೆ ದೀಪ ವಿಸರ್ಜನೆಯೊಂದಿಗೆ ಸಮಾಪನಗೊಂಡಿತು. ಮಧ್ಯಾಹ್ನ ದೇವರಿಗೆ ವಿಶೇಷ ಪೂಜೆ, ಸಂತರ್ಪಣೆ, ಸಂಜೆ ಭಜನೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ದೇವಳದ ಪ್ರಧಾನ ಅರ್ಚಕ ಎಸ್. ವೆಂಕಟರಮಣ ಆಚಾರ್ಯ ಮತ್ತು ಪುರೋಹಿತರಾದ ಜಿ. ವಿಠಲದಾಸ ಭಟ್ ನೇತೃತ್ವದಲ್ಲಿ ಜರಗಿತು. ಅಖಂಡ ಭಜನಾ ಸಪ್ತಾಹ ಮಹೋತ್ಸವದ ಅಂಗವಾಗಿ ಸೋಮವಾರ ಸಂಜೆ ನಗರ ಭಜನೆ, ರಾತ್ರಿ ವಿಶೇಷ ಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ದೇವಳದ ಆಡಳಿತ ಮೊಕ್ತೇಸರ ಎನ್.ಸದಾಶಿವ ನಾಯಕ್, ಆಡಳಿತ ಮಂಡಳಿ ಸದಸ್ಯ ಜಿ.ವೆಂಕಟೇಶ ನಾಯಕ್, ದೇವಳದ ಆಡಳಿತ ಮಂಡಳಿ ಸದಸ್ಯರು, ಜಿ.ಎಸ್.ಬಿ ಮಹಿಳಾ ಮಂಡಳಿ ಸದಸ್ಯರು, ಜಿಎಸ್ಬಿ ಸಮಾಜಬಾಂಧವರು, ಊರಿನ ಹತ್ತು ಸಮಸ್ತರು. ಮತ್ತಿತರರು ಉಪಸ್ಥಿತರಿದ್ದರು. ಅಖಂಡ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮ್ಯಾನೇಜ್ಮೆಂಟ್ನಲ್ಲಿ ಡಾಕ್ಟರ್ ಆಫ್ ಫಿಲಾಸಫಿ (ಪಿಎಚ್ಡಿ) ಪದವಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಚೇತನಾ ಬಾಲಕೃಷ್ಣ ಮದ್ದೋಡಿ ಅವರಿಗೆ TAPMI, MAHE, ಮಣಿಪಾಲದಿಂದ ಡಾಕ್ಟರೇಟ್ ಪದವಿ ಪ್ರದಾನವಾಗಿದೆ. “ಬ್ರಾಂಡೆಡ್ ಅಪ್ಲಿಕೇಶನ್ಗಳಲ್ಲಿ ಅಪ್ಲಿಕೇಶನ್ನಲ್ಲಿ ಜಾಹೀರಾತು ಒಳನುಗ್ಗುವಿಕೆ: ವರ್ತನೆಯ ಪರಿಣಾಮಗಳ ಮೇಲೆ ಭಾವನಾತ್ಮಕ ಮತ್ತು ವರ್ತನೆಯ ಪ್ರತಿಕ್ರಿಯೆಗಳ ಪರಿಣಾಮ” ಎಂಬ ಶೀರ್ಷಿಕೆಯ ಅವರ ಡಾಕ್ಟರೇಟ್ ಸಂಶೋಧನೆಯನ್ನು ಮಣಿಪಾಲದ MAHE, T.A. ಪೈ ಮ್ಯಾನೇಜ್ಮೆಂಟ್ ಇನ್ಸ್ಟಿಟ್ಯೂಟ್ನ ಮಾಹಿತಿ ವ್ಯವಸ್ಥೆಗಳು ಮತ್ತು ವಿಶ್ಲೇಷಣಾ ಪ್ರದೇಶದ ಅಸೋಸಿಯೇಟ್ ಪ್ರೊಫೆಸರ್ ಡಾ. ಪಲ್ಲವಿ ಉಪಾಧ್ಯಾಯ ಅವರ ತಜ್ಞ ಮಾರ್ಗದರ್ಶನದಲ್ಲಿ ನಡೆಸಲಾಯಿತು. ಈ ಗಮನಾರ್ಹ ಸಾಧನೆಯು ಡಾ. ಚೇತನಾ ಅವರ ಸಮರ್ಪಣೆ, ಪರಿಶ್ರಮ, ಬೌದ್ಧಿಕ ಕುತೂಹಲ ಮತ್ತು ವಿದ್ವತ್ಪೂರ್ಣ ಶ್ರೇಷ್ಠತೆಗೆ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾರು ಡಿಕ್ಕಿ ಹೊಡೆದು ಪಾದಚಾರಿಯೋರ್ವ ಸಾವನ್ನಪ್ಪಿದ ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಗೊಬ್ಬರಬೆಟ್ಟುವಿನ ಬೊಬ್ಬರ್ಯ ಕಟ್ಟೆ ಸಮೀಪ ಸಂಭವಿಸಿದೆ. ಮೃತಪಟ್ಟ ಪಾದಚಾರಿ ಗಿಳಿಯಾರು ಮಂಜು ಪೂಜಾರಿ (67) ಎಂದು ಗುರುತಿಸಲಾಗಿದೆ. ಮಂಜು ಅವರು ಕೋಟದಿಂದ ಗಿಳಿಯಾರಿಗೆ ಹೋಗಲು ಹೆದ್ದಾರಿ ದಾಟಲೆಂದು ರಸ್ತೆ ಬದಿಯಲ್ಲಿ ನಿಂತಿದ್ದ ವೇಳೆ ಉಡುಪಿಯಿಂದ ಕುಂದಾಪುರ ಕಡೆ ಹೋಗುತ್ತಿದ್ದ ಕಾರೊಂದು ಚಾಲಕ ಅತೀ ವೇಗ ಹಾಗೂ ಅಜಾಗರೂಕತೆ ಚಲಾಯಿಸಿಕೊಂಡು ಬಂದು ರಸ್ತೆ ಬದಿಯಲ್ಲಿ ನಿಂತಿದ್ದ ಮಂಜು ಪೂಜಾರಿ ಅವರಿಗೆ ನೇರ ಡಿಕ್ಕಿ ಹೊಡೆದಿರುತ್ತಾರೆ. ಡಿಕ್ಕಿಯ ರಭಸಕ್ಕೆ ಮಂಜು ಪೂಜಾರಿ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಹಾಗೂ ಕಾಲಿಗೆ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಜೀವನ್ ಮಿತ್ರ ನಾಗರಾಜ್ ಪುತ್ರನ್ ಹಾಗೂ ಸ್ಥಳೀಯರ ಸಹಕಾರದೊಂದಿಗೆ ಟೋಲ್ ಆಂಬುಲೆನ್ಸ್ ನಲ್ಲಿ ಬ್ರಹ್ಮಾವರ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅಲ್ಲಿ ಗಾಯಾಳುವನ್ನು ಪರೀಕ್ಷಿಸಿದ ವೈಧ್ಯರು ಮಂಜು ಪೂಜಾರಿ ಅವರು ಮೃತ ಪಟ್ಟಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಕೋಟ ಪೊಲೀಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ನೂತನವಾಗಿ ಸೇರ್ಪಡೆಯಾದ ಎನ್ಸಿಸಿ ಕೆಡೆಟ್ಗಳಿಗಾಗಿ ಎನ್ಸಿಸಿ ಪರಿಚಯ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ವಹಿಸಿದ್ದರು. 6 ಕರ್ನಾಟಕ ನೌಕಾದಳ ಎನ್ಸಿಸಿ ಘಟಕ, ಉಡುಪಿಯ ಕಮಾಂಡಿಂಗ್ ಆಫೀಸರ್ ಕಮಾಂಡರ್ ಅಶ್ವಿನ್ ಎಂ. ರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅತಿಥಿಗಳನ್ನು ಅಸೋಸಿಯೇಟ್ ಎನ್ಸಿಸಿ ಅಧಿಕಾರಿ ಸಬ್ ಲೆಫ್ಟಿನೆಂಟ್ ಮಹೇಶ್ ಆರ್. ಶೆಣೈ ಕೆ. ವೇದಿಕೆಗೆ ಬರಮಾಡಿಕೊಂಡರು. ಕಾರ್ಯಕ್ರಮದಲ್ಲಿ ಪಿಐ ಸ್ಟಾಫ್ ನೃಪತ್ರಾಜ್ ಸಿಂಗ್ ಉಪಸ್ಥಿತರಿದ್ದರು. ಪ್ರಾರ್ಥನೆ ಹಾಗೂ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಮುಖ್ಯ ಅತಿಥಿಗಳು ಎನ್ಸಿಸಿಯ ಉದ್ದೇಶ, ಶಿಸ್ತು, ನಾಯಕತ್ವ, ದೇಶಭಕ್ತಿ ಹಾಗೂ ಎನ್ಸಿಸಿ ಮೂಲಕ ದೊರೆಯುವ ವಿವಿಧ ತರಬೇತಿ ಮತ್ತು ವೃತ್ತಿ ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಅಧ್ಯಕ್ಷೀಯ ಭಾಷಣದಲ್ಲಿ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಅವರು ವಿದ್ಯಾರ್ಥಿಗಳು ಎನ್ಸಿಸಿಯ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಂಡು ರಾಷ್ಟ್ರಸೇವೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗೋಕರ್ಣ: ಔಷಧಿಯ ಅಂಗಡಿಯಲ್ಲಿ ಎಲ್ಲಾ ಔಷಧಗಳನ್ನೂ ಎಲ್ಲರಿಗೂ ಕೊಡುವುದಿಲ್ಲ. ಕೆಲವು ಔಷಧಗಳನ್ನು ವೈದ್ಯರಿಂದ ಸೂಕ್ತ ಚೀಟಿಯನ್ನು ಹೊಂದಿದವರಿಗಷ್ಟೇ ನೀಡಲಾಗುತ್ತದೆ. ಹಾಗೆಯೇ ಕೆಲವು ಔಷಧಗಳಿಗೆ ಅದನ್ನು ಮಕ್ಕಳಿಗೆ ನೀಡುವಂತಿಲ್ಲ ಎಂಬ ನಿಯಮಗಳಿರುತ್ತದೆ. ಹಾಗೆಯೇ ಎಲ್ಲಾ ಯೋಗ – ಪ್ರಾಣಾಯಾಮಗಳನ್ನು ಎಲ್ಲರೂ ಮಾಡಬಾರದು. ಪ್ರತಿಯೊಂದಕ್ಕೂ ಅದರದ್ದೇ ಆದ ನಿಯಮಗಳಿವೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಸೋಮವಾರದಂದು ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಅಮೃತಾಹಾರವೆಂಬ ಯೋಗ ಸೂಕ್ಷ್ಮದ ಕುರಿತಾಗಿ ಪ್ರವಚನವನ್ನು ಅನುಗ್ರಹಿಸುತ್ತಾ, ಯೋಗ ಸೂಕ್ಷ್ಮವಾದ ಅಮೃತಪಾನವನ್ನು ಸಿದ್ಧಿಸಿಕೊಂಡವನಿಗೆ ತಕ್ಷಕ ಸರ್ಪದ ಮಹಾವಿಷದಿಂದಲೂ ಕೂಡ ಏನೂ ಆಗದು. ಒಮ್ಮೆ ಈ ಅಮೃತವನ್ನು ಆಸ್ವಾದಿಸಲು ಕಲಿತ ಯೋಗಿಯು ಮತ್ತೆ ಮತ್ತೆ ಅದನ್ನು ಬಯಸುತ್ತಾನೆ. ಈ ಅಮೃತದ ಆಸ್ವಾದನೆಗೆ ಸಮಾನವಾದದ್ದು ಯಾವುದೂ ಇಲ್ಲ ಎಂದ ಶ್ರೀಗಳು, ಜಾಲಂಧರ ಬಂಧ, ಮೂಲಬಂಧ, ಖೇಚರಿ, ವಿಪರೀತ ಕರಣಿ ಮುಂತಾದವುಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ತಮ್ಮ ಕೌಶಲ್ಯ ಮತ್ತು ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಮತ್ತು ಭರವಸೆ ಕೋಶ , ವೃತ್ತಿ ಮಾರ್ಗದರ್ಶನ ಮತ್ತು ಪ್ಲೇಸ್ ಮೆಂಟ್ ಕೋಶ ಮತ್ತು ಬೆಂಗಳೂರಿನ ಮ್ಯಾಜಿಕ್ ಬಸ್ ಇವರ ಸಹಯೋಗದಲ್ಲಿ ನಡೆದ 4ದಿನಗಳ ಸಾಫ್ಟ್ ಸ್ಕಿಲ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಈ ಸ್ಪರ್ಧಾತ್ಮಕ ಯುಗದಲ್ಲಿ ವಿವಿಧ ಕೌಶಲಗಳಲ್ಲಿ ತರಬೇತಿ ಪಡೆದಾಗ ಉದ್ಯೋಗ ಪಡೆಯುವಲ್ಲಿ ಹೆಚ್ಚಿನ ಅವಕಾಶಗಳು ನಿಮಗಾಗಿ ಸೃಷ್ಟಿಯಾಗುತ್ತದೆ. ಇಂತಹ ತರಬೇತಿ ಕಾರ್ಯಕ್ರಮಗಳು ನಿಮ್ಮ ಕೌಶಲ್ಯ ಹೆಚ್ಚಿಸಲು ಅನುಕೂಲವಾಗುತ್ತವೆ ಎಂದು ಹೇಳಿದರು. ಮ್ಯಾಜಿಕ್ ಬಸ್ ಇದರ ಮಾಹಿತಿ ತಂತ್ರಜ್ಞಾನ ತರಬೇತುದಾರರಾದ ಶಕ್ತಿ ಅವರು ಮಾತನಾಡಿ ಮೊದಲು ನಿಮ್ಮಲ್ಲಿ ಇರುವಂತಹ ವೈಶಿಷ್ಟ್ಯಪೂರ್ಣ ಕೌಶಲ್ಯ ಮತ್ತು ಪ್ರತಿಭೆ ಅರಿತು ಅದಕ್ಕೆ ಪೂರಕವಾಗಿ ತರಬೇತಿ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಮ್ಯಾಜಿಕ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜೆಸಿಐ ಸಂಸ್ಥೆ ವತಿಯಿಂದ ಸಮಾಜಮುಖಿ ಹಾಗೂ ಸಾಧನಾ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ನೀಡಲಾಗುವ ಪ್ರತಿಷ್ಠಿತ ‘ಸಾಧನಾಶ್ರೀ’ ಪ್ರಶಸ್ತಿಗೆ ಜೇಸಿಐ ಬೈಂದೂರು ಸಿಟಿ ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ಜೆಸಿ ರಾಜು ಮೊಗವೀರ ಭಾಜನರಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಮಡಂತ್ಯಾರಿನಲ್ಲಿ ಅದ್ದೂರಿಯಾಗಿ ಜರುಗಿತು. ಕಾರ್ಯಕ್ರಮದಲ್ಲಿ ಜೆಸಿಐ ಭಾರತ ವಲಯ 15ರ ವಲಯಾಧ್ಯಕ್ಷರಾದ ಜೆಎಪ್ಎಸ್. ಸಂತೋಷ್ ಶೆಟ್ಟಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದಲ್ಲಿ ವಲಯ ಉಪಾಧ್ಯಕ್ಷರಾದ ಜೆಎಪ್ಎಂ. ಪ್ರದೀಪ್ ಶೆಟ್ಟಿ ಇನ್ನಾ, ಪಿಆರ್ ಮತ್ತು ಮಾರ್ಕೆಟಿಂಗ್ ವಿಭಾಗದ ನಿರ್ದೇಶಕರಾದ ಜೆಸಿ ಸ್ವರಾಜ್ ಶೆಟ್ಟಿ, ವ್ಯವಹಾರ ವಿಭಾಗದ ನಿರ್ದೇಶಕರಾದ ಜೆಸಿ ವಿಕೇಶ್ ಮಾನ್ಯ, ಬೈಂದೂರು ಸಿಟಿ ಜೆಸಿಐ ಅಧ್ಯಕ್ಷರಾದ ಜೆಸಿ ಚೈತ್ರ ಸತೀಶ್, ಸೇರಿದಂತೆ ಪ್ರಮುಖ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು. ಇವರ ಸಾಮಾಜಿಕ ಸೇವೆ, ರಕ್ತದಾನ ಸೇವೆ ಹಾಗೂ ಅವರ ಸಾಧನೆಯನ್ನು ಗುರುತಿಸಿ. ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಉಡುಪಿ ಜಿಲ್ಲೆಯಲ್ಲಿ ನಡೆದ ವಿಶ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಇಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಇದರ ಮೊದಲಿದ್ದ (16.06.26ಕ್ಕೆ ಮೊದಲು) ಒಟ್ಟು 10,63,876 ಮತದಾರರ ಪೈಕಿ 10,00,545 ಮಂದಿ ಸ್ಥಾನ ಉಳಿಸಿಕೊ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ. ಅವರು ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ವಿವಿಧ ಕಾರಣಗಳಿಗಾಗಿ ಗೈರು, ಸ್ಥಳಾಂತರ, ಮೃತರು, ನಕಲಿ, ಇತರ (ಎಎಸ್ಡಿಡಿಒ) – ಪಟ್ಟಿಯಲ್ಲಿದ್ದ ಒಟ್ಟು 63,331 ಮಂದಿ ಹೆಸರು ಇದರಲ್ಲಿ ಸೇರ್ಪಡೆಗೊಂಡಿಲ್ಲ ಎಂದು ಅವರು ವಿವರಿಸಿದರು. ಕರಡು ಮತದಾರರ ಪಟ್ಟಿಯಲ್ಲಿ ಸ್ಥಾನ ಪಡೆದಿರುವವರ ಪೈಕಿ ಒಟ್ಟು 97,706 ಮಂದಿಗೆ ನೋಟೀಸುಗಳನ್ನು ನೀಡಲಾಗುತ್ತಿದೆ. ಇವರಲ್ಲಿ ಹಿಂದಿನ ಮತದಾರರ ಪಟ್ಟಿಯೊಂದಿಗೆ ಲಿಂಕೇಜ್ ಆಗದಿರುವ – ನೋ ಮ್ಯಾಪಿಂಗ್- 31,903 ಮಂದಿ ಹಾಗೂ ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ (ತಾರ್ಕಿಕ ವ್ಯತ್ಯಾಸ) ಅಡಿಯಲ್ಲಿ ಗುರುತಿಸಲಾದ 65,803 ಮಂದಿ ಸೇರಿದ್ದಾರೆ ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ ನಡೆದ ಅಂತರ್ ತರಗತಿ ಐಟಿ ಫೆಸ್ಟ್ “ಟೆಕ್ ಮಂಥನ್ 6.0” ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ತಂತ್ರಜ್ಞಾನಕ್ಕೆ ಸಂಬಂಧಪಟ್ಟ ನಡೆದ 13 ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಣಿಪಾಲ ಬ್ಲಾಕ್ ಪ್ರಾಗ್ ನ ಉಪಾಧ್ಯಕ್ಷರಾದ ಅಭಿಜಿತ್ ಅಡಿಗ ಅವರು ಮಾತನಾಡಿ, ಎಐ ಟೆಕ್ನಾಲಜಿಯು ನಮ್ಮ ಜ್ಞಾನಕ್ಕೆ ಶಕ್ತಿ ಮದ್ದಿನಂತೆ ಕೆಲಸಮಾಡುತ್ತಿದ್ದು ನಾವೆಲ್ಲರೂ ಅದನ್ನು ಸದುಪಯೋಗಪಡಿಸಿಕೊಂಡು ಜ್ಞಾನವನ್ನು ವೃದ್ಧಿಸಿಕೊಂಡು ಕಾರ್ಯ ನಿರ್ವಹಿಸಿದರೆ ಮಾತ್ರ ಈ ಸ್ಪರ್ಧಾತ್ಮಕ ಯುಗದಲ್ಲಿ ಬದುಕಲು ಸಾಧ್ಯ ಎಂದರು. ಇನ್ನೋರ್ವ ಮುಖ್ಯ ಅತಿಥಿ ಉಡುಪಿಯ ಜ್ಞಾನಸುಧಾ ಪದವಿ-ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಶ್ರೀನಿಧಿ ಭಾಗವತ್ ರವರು ಮಾತನಾಡಿ, ವರ್ತಮಾನ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ತಂತ್ರಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕಾದ ಅನಿವಾರ್ಯತೆ ಹೆಚ್ಚಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಇಂದಿನ ಸ್ಪರ್ಧಾತ್ಮಕ ಮತ್ತು ಬದಲಾಗುತ್ತಿರುವ ಯುಗದಲ್ಲಿ ಉದ್ಯೋಗವನ್ನು ಪಡೆಯಲು ನಮ್ಮ ಜ್ಞಾನವನ್ನು ಸರಿಯಾದ ರೀತಿಯಲ್ಲಿ ಹೊಸ ರೀತಿಯ ಕೌಶಲ್ಯದೊಂದಿಗೆ ಬಳಸಿಕೊಳ್ಳುವ ಕಲೆಯನ್ನು ನಾವು ಸಿದ್ದಿಸಿಕೊಳ್ಳಬೇಕು. ಆಗ ಮಾತ್ರ ಯಶಸ್ಸನ್ನು ಕಂಡುಕೊಳ್ಳಲು ಸಾಧ್ಯ ಎಂದು ಮಂಗಳೂರಿನ ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಅಸಿಸ್ಟೆಂಟ್ ಪ್ರೊಫೆಸರ್ ಅರ್ಚನಾ ದೇವಾಡಿಗ ಅಭಿಪ್ರಾಯಪಟ್ಟರು. ಅವರು ಇತ್ತೀಚಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಆರಂಭಗೊಂಡ ಸೈನ್ಸ್ ಕ್ಲಬ್ನ್ನು ಉದ್ಘಾಟಿಸಿ ಮಾತನಾಡಿದರು. ಪ್ರಾಂಶುಪಾಲೆ ಕವಿತಾ ಎಂಸಿ ಅಧ್ಯಕ್ಷತೆ ವಹಿಸಿದ್ದರು. ಜಿ.ಎಸ್.ವಿ.ಎಸ್ ಅಸೋಸಿಯನ್ ಅಧ್ಯಕ್ಷ ಡಾ. ಕಾಶಿನಾಥ ಪಿ. ಪೈ ಶುಭ ಹಾರೈಸಿದರು. ಪೂರ್ವಿಕ ಎಂ. ಜಿ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕಿ ಪವಿತ್ರಾ ಮತ್ತು ವಿದ್ಯಾರ್ಥಿ ಪ್ರತಿನಿಧಿ ಚೇತನ್ ಉಪಸ್ಥಿತರಿದ್ದರು. ಶರಣ್ಯ ತನಿಷಾ ಮತ್ತು ಅಂಕಿತ ಪ್ರಾರ್ಥಿಸಿದರು. ತ್ರಿಷಾ ಅತಿಥಿಗಳನ್ನು ಪರಿಚಯಿಸಿದರು. ಅಂಕುಶ್ ಸ್ವಾಗತಿಸಿದರು. ಮನಿಷಾ ನಿರೂಪಿಸಿದರು. ದೀಪಿಕಾ ಧನ್ಯವಾದ ಅರ್ಪಿಸಿದರು.
