Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ಸಂಸ್ಕೃತ ಸಂಘದ ಆಶ್ರಯದಲ್ಲಿ ಶ್ರೀ ಸುರಸರಸ್ವತಿ ಸಭಾ ಶೃಂಗೇರಿ ಅವರು ಕಳೆದ ಶೈಕ್ಷಣಿಕ ವರ್ಷದಲ್ಲಿ ನಡೆಸಿದ ಪ್ರಥಮ, ದ್ವಿತೀಯ, ತೃತೀಯ, ತುರೀಯಾ ಹಾಗೂ ಪ್ರವೇಶ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಕ್ತನ ಸಂಸ್ಕೃತ ವಿದ್ಯಾರ್ಥಿನಿಯಾದ ಯು. ಸಂಗೀತ ಶೆಣೈ ಅವರು ಮಾತನಾಡಿ, “ನನಗೆ ಸಂಸ್ಕೃತ ವಿಭಾಗವೆಂದರೆ ತವರುಮನೆ ಇದ್ದ ಹಾಗೆ. ಸಂಸ್ಕೃತ ಉಪನ್ಯಾಸಕಿಯರು ನನ್ನನ್ನು ಎಲ್ಲಾ ವಿಷಯಗಳಲ್ಲೂ ಪ್ರೋತ್ಸಾಹಿಸುತ್ತಿದ್ದರು ಹಾಗೂ ಸಂಸ್ಕೃತ ತರಗತಿಗಳಲ್ಲಿ ಅನೇಕ ಪಠ್ಯ ಹಾಗೂ ಪಠ್ಯೇತರ ವಿಷಯಗಳನ್ನು ಚರ್ಚಿಸುತ್ತಿದ್ದೆವು” ಎಂದು ಕಾಲೇಜಿನ ಕುರಿತು ವಿಶೇಷವಾಗಿ ಸಂಸ್ಕೃತ ವಿಭಾಗದ ಕುರಿತು ತಮ್ಮ ಹಳೆಯ ನೆನಪುಗಳನ್ನು ಹಂಚಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಅವರು ಮಾತನಾಡಿ, “ಸಂಸ್ಕೃತ ದೇಶದ ಭಾಷೆಯಾಗಿದೆ, ಎಲ್ಲಾ ಭಾಷೆಗಳ ಮೂಲ ಸಂಸ್ಕೃತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಡೆಂಗ್ಯೂ ಕೇವಲ ಜ್ವರ ಅಲ್ಲ. ಅದು ಸೋಂಕು ಹೊಂದಿದ ಈಡೀಸ್ ಸೊಳ್ಳೆಯ ಮೂಲಕ ಹರಡುವ ವೈರಸ್ ಜ್ವರ. ನಿಂತ ನೀರಿನಲ್ಲಿ ಈ ಸೊಳ್ಳೆಗಳ ಸಂತಾನೋತ್ಪತ್ತಿಯಾಗುತ್ತವೆ. ಇವುಗಳನ್ನು ನಾಶಪಡಿಸಲು ಹಾಗೂ ಡೆಂಗ್ಯೂ ರೋಗ ಹರಡದಂತೆ ತೆಗೆದುಕೊಳ್ಳಬಹುದಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣದ ಬಗ್ಗೆ ವ್ಯಾಪಕ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಅಲೆವೂರು ಪ್ರಗತಿನಗರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಛೇರಿ ಹಾಗೂ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಗತಿನಗರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯ ಪ್ರಯುಕ್ತ ಮಾನವ ಸರಪಳಿ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯ ಧ್ಯೇಯ ವಾಕ್ಯವಾದ “ಪರಿಶೀಲಿಸಿ, ಸ್ವಚ್ಛಗೊಳಿಸಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ ಹಾಗೂ ಇತರೆ ಜನಾಂಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 16 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004, 8050770005 ಅಥವಾ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಮುದಾಯ ಸಾಂಸ್ಕೃತಿಕ ಸಂಘಟನೆ ಹಲವಾರು ವರ್ಷಗಳಿಂದ ಸರಕಾರಿ ಶಾಲೆ ಮತ್ತು ವಲಸೆ ಕಾರ್ಮಿಕರ ಮಕ್ಕಳಿಗೆ ಉಚಿತವಾಗಿ ರಂಗ ರಂಗು ರಜಾ ಮೇಳವನ್ನು ಹಮ್ಮಿಕೊಂಡು ಬರುತ್ತಿದೆ. ಆ ಮೂಲಕ ತನ್ನ ಸಾಮಾಜಿಕ ಬದ್ಧತೆಯನ್ನು ಪಾಲಿಸುತ್ತಿದೆ. ಇಂತಹ ರಂಗ ಶಿಬಿರದಲ್ಲಿ ವಿದ್ಯಾರ್ಥಿಗಳ ಕಲಿಕೆ ಸಹಜವಾಗಿ ಅರಳುತ್ತದೆ ಅಲ್ಲದೆ ಸದಾ ನೆನಪಿನಲ್ಲಿ ಉಳಿಯುತ್ತದೆ. ಇದು ವಿದ್ಯಾರ್ಥಿಗಳಲ್ಲಿ ಸ್ವಯಂ ಕಲಿಕೆ, ಸ್ವಯಂಶಿಸ್ತು ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಿ  ಮಕ್ಕಳ ಮುಂದಿನ ಸಾಧನೆಗೆ ದಾರಿ ಮಾಡಿಕೊಡುತ್ತದೆ ಎಂದು ಕುಂದಾಪುರದ ಪ್ರಥಮ ದರ್ಜೆ ವಿದ್ಯುತ್ ಗುತ್ತಿಗೆದಾರರಾದ ಕೆ. ಆರ್. ನಾಯಕ್ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಸಮುದಾಯ ಸಾಂಸ್ಕೃತಿಕ ಸಂಘಟನೆ ಕುಂದಾಪುರ ಅವರು ಹಮ್ಮಿಕೊಂಡಿದ್ದ ಉಚಿತ ರಂಗ ರಂಗು ರಜಾ ಮೇಳ ಉದ್ಘಾಟಿಸಿ ಮಾತನಾಡಿದರು. ರಜಾ ಮೇಳದಲ್ಲಿ ಉಪಸ್ಥಿತರಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಹಿರಿಯ ಮೇಲ್ವಿಚಾರಕಿ ಸುಜಯಾ ಅವರು ರಂಗ ರಂಗು ರಜಾ ಮೇಳಕ್ಕೆ ಶುಭ ಹಾರೈಸಿದರು. …

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಗ್ರಾಮ ಪಂಚಾಯತಿ ವ್ಯಾಪ್ತಿ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಹೊಳೆ ಹೂಳು ಕಾಮಗಾರಿ ವೀಕ್ಷಣೆಗೆ ಆಗಮಿಸಿದ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಭೇಟಿ ನೀಡಿ, ರೈತರ ಪರವಾಗಿ ನಿರಂತರ ಸ್ಪಂದಿಸುವುದಾಗಿ ತಿಳಿಸಿದ್ದರು. ನೆರೆ ಹಾವಳಿಯಿಂದಾಗಿ ಸಾವಿರಾರು ಎಕರೆ ಕೃಷಿ ಭೂಮಿಗೆ ತೊಂದರೆಯಾಗುತ್ತಿದ್ದು ಮುಂದಿನ ದಿನದಲ್ಲಿ ಇದಕ್ಕೆ ಶಾಶ್ವತ ಪರಿಹಾರದ ಬಗ್ಗೆ ಸರ್ಕಾರದಿಂದ ಅನುದಾನ ತರುವಲ್ಲಿ ಪ್ರಯತ್ನ ಚಾಲ್ತಿಯಲ್ಲಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕೋಟ ಗ್ರಾಮ ಪಂಚಾಯಿತಿ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತಿನ ಅಭಿವೃದ್ಧಿ ಅಧಿಕಾರಿಗಳು, ಕೋಟ ಗ್ರಾಮ ಪಂಚಾಯಿತಿನ ಸದಸ್ಯರು, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಪ್ರಗತಿಪರ ಕೃಷಿಕರು ಗ್ರಾಮಸ್ಥರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸತತ 3 ವರ್ಷ ಪದಕ ಪಡೆಯಲಾಗಲಿಲ್ಲ. ಕಳೆದ ಬಾರಿ ಜಮ್ಮುವಿನಲ್ಲಿ ಕಂಚಿನ ಪದಕ ಬಂದಿತ್ತು. ಈ ಬಾರಿ ಚಿನ್ನ ಬಂದಿದೆ. ಪರಿಶ್ರಮ ಮುಖ್ಯ. ದೇವರ ಮೇಲೆ ಭಾರ ಹಾಕಿದರೆ ಸಾಲದು, ಶ್ರಮವೂ ಮುಖ್ಯ ಆಗುತ್ತದೆ ಎಂದು ಪವರ್ ಲಿಪ್ಟರ್ ನಾಗಶ್ರೀ ಗಣೇಶ ಶೇರುಗಾರ್ ಹೇಳಿದರು. ಅವರು ಗುರುವಾರದಂದು ಇಲ್ಲಿನ ಶ್ರೀರಾಮ ಮಂದಿರದಲ್ಲಿ ಉತ್ತರಖಂಡದಲ್ಲಿ ನಡೆದ ಏಷ್ಯನ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್‌ ನಲ್ಲಿ ಭಾರತವನ್ನು ಪ್ರತಿನಿಧಿಸಿ 3 ಚಿನ್ನ ಒಂದು ರಜತ ಪದಕ ಪಡೆದು ಏಷ್ಯನ್ ಯೂನಿವರ್ಸಿಟಿ ಚಾಂಪಿಯನ್ ಆದ ಪ್ರಯುಕ್ತ ನಡೆದ ಸಮ್ಮಾನ, ಪುರಮೆರವಣಿಗೆ ಸಂದರ್ಭದಲ್ಲಿ ಮಾತನಾಡಿದರು. ರಾಮ ಕ್ಷತ್ರಿಯ ಸಂಘದ ಅಧ್ಯಕ್ಷ ಲಕ್ಷ್ಮೀಶ ಹವಾಲ್ದಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜದ ಸಾಧಕರಿಗೆ ಪ್ರೋತ್ಸಾಹ ಕೊಡುವುದು ಎಲ್ಲರ ಆದ್ಯ ಕರ್ತವ್ಯ ಎಂದರು. ಕಾರ್ಯದರ್ಶಿ ನಾಗರಾಜ ನಾಯ್ಕ್‌, ರಕ್ಷಾ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಬೆಟ್ಟಿನ್, ರಾಮ ಕ್ಷತ್ರಿಯ ಯುವಕ ಮಂಡಳಿ ಅಧ್ಯಕ್ಷ ರಾಜೇಶ್ ರಾವ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇನ್ಸಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರಿಸ್ ಇನ್ ಇಂಡಿಯಾದವರು ನಡೆಸಿದ ಸಿಎಸ್ಇಇಟಿ (ಕಂಪೆನಿ ಸಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್) ಪ್ರವೇಶ ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ. ಸಂಸ್ಥೆಯ ಭರವಸೆಯ ವಿದ್ಯಾರ್ಥಿಗಳಾದ ಸನ್ವಿತಾ, ವಂಶಿ, ಕೆ.ವಿ.ಶರಣ್ಯ, ಪ್ರೇಕ್ಷಾ ಪೂಜಾರಿ, ನಾಗೇಂದ್ರ ಅವರು ಉತ್ತಮ ಅಂಕ ಪಡೆದು ತೇರ್ಗಡೆಯಾಗುವ ಮೂಲಕ ಮುಂದಿನ ಹಂತಕ್ಕೆ ಅರ್ಹತೆಯನ್ನು ಪಡೆದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರಾವಳಿ ಭಾಗದ ಪ್ರಖ್ಯಾತ ಸರ್ಜಿಕಲ್ಸ್ ಸಂಸ್ಥೆಯಾದ ಗಿರಿಜಾ ಸರ್ಜಿಕಲ್ಸ್ ಮತ್ತು ಸೀನಿಯರ್ ಜೇಸಿ ಟೆಂಪಲ್ ಸಿಟಿ ಉಡುಪಿ ಲಿಜಿನ್ ಇವರ ವತಿಯಿಂದ ಉಡುಪಿಯ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ  ನಿಸ್ವಾರ್ಥ  ಸೇವೆಯನ್ನು ಸಲ್ಲಿಸುತಿರುವ ದಾದಿಯರನ್ನು ಗುರುತಿಸಿ ಗೌರವಿಸು ನೆಲೆಯಲ್ಲಿ ದಾದಿಯರ (ನರ್ಸಸ್) ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯ 5 ಜನ ದಾದಿಯರನ್ನು ಸನ್ಮಾನಿಸಿ ಉಳಿದ ಎಲ್ಲಾ ದಾದಿಯರನ್ನು ಅವರ ಸೇವೆಯನ್ನು ಗುರುತಿಸಿ ಗೌರವಿಸಲಾಯುತು. ಈ ಸಂದರ್ಭದಲ್ಲಿ ಡಿಸ್ಟ್ರಿಕ್ಟ್ ಸರ್ಜಿನ್ ಆಗರುವ ಡಾ. ಅಶೋಕ್ ಅವರು, ಆಸ್ಪತ್ರೆಯ ಆರ್‌ಎಮ್‌ಒ ಆಗಿರುವ ಡಾ. ವಾಸುದೇವ, ಸೀನಿಯರ್ ಜೇಸಿಯ ಅಧ್ಯಕ್ಷ ಶಿವಾನಂದ್ ಶೆಟ್ಟಿಗಾರ್ ಮತ್ತು ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ನ ಮೆನೆಜಿಂಗ್ ಡೈರೆಕ್ಟರ್ ಆಗಿರುವ ರವೀಂದ್ರ ಶೆಟ್ಟಿ ಕಡೆಕಾರ್, ಆಸ್ಪತ್ರೆಯ ನರ್ಸಿಂಗ್ ಸುಪಾರಿಟೆಂಡೆಂಟ್ ರತ್ನವತಿ, ಸೀನಿಯರ್ ಜೇಸಿಯ ಸದಸ್ಯರು ಮತ್ತು ಗಿರಿಜಾ ಸರ್ಜಿಕಲ್ಸ್ ನ ಸಹೋದ್ಯೋಗಿ ಗಳು ಉಪಸ್ಥಿತರಿದ್ದರು. ಇದೇ ರೀತಿ ಸಂಸ್ಥೆಯ ವತಿಯಿಂದ ಕುಂದಾಪುರ ಮತ್ತು ಮಂಗಳೂರಿನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸೌಕೂರು ಗ್ರಾಮದ ಸುಮಾವತಿ ಅವರ ಮನೆಯಲ್ಲಿ ಕೆಲಸಕ್ಕಿದ್ದ ವ್ಯಕ್ತಿ ಕಳ್ಳತನ ಮಾಡಿದ್ದಾಗಿ ದೂರಲಾಗಿದೆ. ಕೃಷಿ ಭೂಮಿ, ಮನೆ ಕೆಲಸಕ್ಕೆಂದು ಹಾವೇರಿ ಜಿಲ್ಲೆಯ ಸೋಮಾಪುರದ ಮಂಜುನಾಥ ಕೋಡಿಹಳ್ಳಿಯನ್ನು ಕೆಲಸಕ್ಕೆ ಇಟ್ಟುಕೊಂಡಿದ್ದು, ಮದುವೆಗೆಂದು ಮನೆಗೆ ಬೀಗ ಹಾಕಿ ಬೀಗ ಅಡಗಿಸಿಟ್ಟು ಹೋಗಿದ್ದರು. ಆಗ ಮಂಜುನಾಥ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದು ಮರಳಿ ಮನೆಗೆ ಬಂದಾಗೆ ಕೆಲಸದವನೂ ಇರಲಿಲ್ಲ. ಕಪಾಟಿನಲ್ಲಿದ್ದ 60,000 ರೂ. ಇರಲಿಲ್ಲ. ಈ ಬಗ್ಗೆ ಗ್ರಾಮಾಂತರ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೇರಳದಿಂದ- ಕೊಲ್ಲೂರು ದೇವಸ್ಥಾನಕ್ಕೆ ಪ್ರವಾಸ ಹೊರಟ್ಟಿದ್ದ ಟಿ.ಟಿ. ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿದ ಘಟನೆ ಕೋಟ ಹೈಸ್ಕೂಲು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದೆ. ವಾಹನವು ಬ್ಯಾರಿಕೇಡ್‌ ಡಿಕ್ಕಿಯಾಗಿ ಅನಂತರ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿದೆ. ವಾಹನದಲ್ಲಿ 13 ಪ್ರಯಾಣಿಸುತ್ತಿದ್ದರು ಚಾಲಕನಿಗೆ ಹೆಚ್ಚಿನ ಗಾಯವಾಗಿದೆ. ಮಿಕ್ಕುಳಿದವರು ಸಣ್ಣ-ಪುಟ್ಟ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಟೋ‌ಲ್‌ನ ಆ್ಯಂಬುಲೆನ್ಸ್ ಹಾಗೂ ಸಿಬಂದಿ ಮತ್ತು ಸ್ಥಳೀಯರು ಗಾಯಾನುಗಳನ್ನು ಆಸ್ಪತ್ರೆಗೆ ಸಾಗಿಸಿದರು. ಕೋಟ ಪೋಲೀಸ್‌ ಠಾಣೆ ಉಪಸಿರೀಕ್ಷಕ ರಾಘವೇಂದ್ರ ಸಿ,. ಕ್ರೈಂ ವಿಭಾಗದ ಪಿ.ಎಸ್‌.ಐ. ಸುಧಾ ಪ್ರಭು ಸಿಬಂದಿ ಸ್ಥಳಕ್ಕಾಗಮಿಸಿ ಪರಿಶೀಲಿಸಿದರು. .

Read More