Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿಎ ಫೌಂಡೇಶನ್ ಫಲಿತಾಂಶದಲ್ಲಿ ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಪೂರ್ಣ ಭಟ್ ಕೆ.ಎಲ್ (264), ಸೃಜನ್ ಎಸ್. ಭಟ್ (249), ಅಫ್ಸರ್ ಫಾಹಿಮ್ (238), ಬಸವ ಪ್ರಸಾದ್ ಕಾಜಿ (238), ಪ್ರಭವ್ ಗೋಪಾಲ್ ಶೆಟ್ಟಿ (233), ಸೌರವ್ ರವಿ ಶೇಟ್ (225), ಆರ್ಯ ಬಿ.ವಿ. (212), ಹೆಗ್ಡೆ ಪ್ರತ್ವಿಕ್ (212), ಶ್ರದ್ಧಾ ಪ್ರಕಾಶ್ ಅಂಗಡಿ (210), ರೇಷ್ಮ ಜಿ.ಕೆ. (204), ಶ್ರೀಕಾರ್ ದುಬೀರ (202) ಅಂಕಗಳನ್ನು ಗಳಿಸುವುದರ ಮೂಲಕ ಅರ್ಹತೆಯನ್ನು ಗಳಿಸಿಕೊಂಡಿರುತ್ತಾರೆ. ಪರೀಕ್ಷೆ ಬರೆದಿರುವ 20 ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು ಮೊದಲ ಪ್ರಯತ್ನದಲ್ಲೇ ಅರ್ಹತೆಯನ್ನು ಗಳಿಸಿರುತ್ತಾರೆ. ರಾಷ್ಟ್ರೀಯ ಮಟ್ಟದ ಒಟ್ಟು ಫಲಿತಾಂಶದಲ್ಲಿ 15% ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಅದರಲ್ಲಿ ಕ್ರಿಯೇಟಿವ್ ವಿದ್ಯಾ ಸಂಸ್ಥೆಯಲ್ಲಿ ಪರೀಕ್ಷೆ ತೆಗೆದುಕೊಂಡ ಒಟ್ಟು ವಿದ್ಯಾರ್ಥಿಗಳಲ್ಲಿ 55% ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುವುದು ಗಮನಾರ್ಹವಾಗಿದೆ. ವಿದ್ಯಾರ್ಥಿಗಳ ಸಾಧನೆಯನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸಲಾದ ವಕೀಲ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ಸೌಲಭ್ಯ ಪಡೆಯಲು ಪರಿಶಿಷ್ಟ ಜಾತಿಯ ಕಾನೂನು ಪದವೀಧರರು ಇಲಾಖಾ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂಬAಧಿಸಿದ ಸೂಕ್ತ ದಾಖಲೆಗಳನ್ನು ಒಂದು ವಾರದ ಒಳಗೆ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸರಕಾರ ರೂಪಿಸುವ ಎಲ್ಲಾ ಕಾರ್ಯಕ್ರಮಗಳು ಜನಸಾಮಾನ್ಯರ ಬಾಳಿಗೆ ಬೆಳಕ ಚಲ್ಲುವ ಯೋಜನೆಗಳಾಗಿ ರೂಪುಗೊಂಡಿವೆ. ಇದಕ್ಕೆ ಪುಷ್ಠಿ ನೀಡುವಂತೆ ನಮ್ಮ ಕ್ಲಿನಿಕ್ ಜನರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡುವ ಕಾರ್ಯಕ್ರಮಗಳಾಗಿದೆ ಎಂದು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಆಶ್ರಯದಲ್ಲಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾರಂಪಳ್ಳಿ ಪಡುಕರೆಯಲ್ಲಿ ನಿರ್ಮಾಣಗೊಂಡ ನಮ್ಮ ಕ್ಲಿನಿಕ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸ್ಥಳೀಯ ವ್ಯಾಪ್ತಿಗಳಿಗೆ ಬೇಕಾದ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಜನಸಾಮಾನ್ಯರ ಸಹಕಾರ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಾಲಿಗ್ರಾಮದ ಪಾರಂಪಳ್ಳಿ ಪರಿಸರಕ್ಕೆ ಈ ಯೋಜನೆ ಸಮರ್ಪವಾಗಿ ಅನುಷ್ಠಾನಗೊಳ್ಳಲಿ ಎಂದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ ದೀಪ ಬೆಳಗಿಸಿ ಶುಭಹಾರೈಸಿದರು. ಸಭೆಯ ಅಧ್ಯಕ್ಷತೆಯನ್ನು ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಕನ್ಯಾ ಶೆಟ್ಟಿ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಜಿಲ್ಲಾಆರೋಗ್ಯ ಅಧಿಕಾರಿ ಡಾ. ಬಸವರಾಜ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಹೋಟೆಲ್ ಕಾರ್ಮಿಕ ಸಂಘ ಬೆಂಗಳೂರು ಹೋಟೆಲ್ ಕಾರ್ಮಿಕರ ರಾಜ್ಯ ಸಂಘಟನೆ ಪ್ರತಿಭಾ ಪುರಸ್ಕಾರ ಹಾಗೂ ಸರ್ಕಾರದ ಅಂಬೇಡ್ಕರ್ ಸಹಾಯ ಯೋಜನೆಯ ನೋಂದಣಿ ಮತ್ತು ವಿತರಣಾ ಕಾರ್ಯಕ್ರಮ ಜುಲೈ 17ರಂದು ಕೊಲ್ಯಮಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ಶಿವಯೋಗಿ ದುರ್ಗಾ ನಂದ ಸ್ವಾಮೀಜಿ ಅವರು ಶಿವಗಿರಿ ಮಠ ಕೊಂಡಣ ಅಮೃತ ಹಸ್ತದಿಂದ ಬಿಡುಗಡೆ ಮಾಡಿ ಕಾರ್ಯಕ್ರಮವನ್ನು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಈ ವೇಳೆ ಚಂದ್ರಶೇಖರ್ ಉಚ್ಚಿಲ ಆಡಳಿತ ಮುಖ್ಯಸ್ಥರು ಗೆಜ್ಜೆ ಗಿರಿ ತಾರಾನಾಥ ಆಳ್ವ, ಸಾಮಾಜಿಕ ಕಾರ್ಯಕರ್ತರು ಮೋಹನ್ ಟಿ. ಹೆಚ್., ಕರ್ನಾಟಕ ಹೋಟೆಲ್ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಜಯನಂದ್ ಭಂಡಾರಿ, ಚೆನ್ನಯ್ಯ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗಂಗಾಧರ್ ಶೆಟ್ಟಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮತ್ತು ಶೈಲೇಶ್ ಜಿಲ್ಲಾ ನಿರ್ದೇಶಕರು ಹಾಗೂ ಜಿಲ್ಲಾ ಪದಾಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಹೋಟೆಲ್ ಕಾರ್ಮಿಕರು ಭಾಗವಹಿಸಿ ಇದರ ಸದುಪಯೋಗ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಅಂಪಾರು ಸಂಜಯಗಾಂಧಿ ಆಂಗ್ಲ ಮಾಧ್ಯಮ ಶಾಲೆ‌ಯಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದ ಮೊದಲ ಪೋಷಕರ ಸಭೆ ಇತ್ತೀಚಿಗೆ ಜರುಗಿತು. ಈ‌ ಸಂದರ್ಭದಲ್ಲಿ ಶಾಲಾ ಆಡಳಿತ ಚುಕ್ಕಾಣಿ ಹಿಡಿದ ಸಂಜಯಗಾಂಧಿ ಚಾರಿಟೇಬಲ್ ಟ್ರಸ್ಟ್ ನ ಅವಿರತ ಶ್ರಮಕ್ಕೆ ನೈತಿಕ ಹಾಗೂ ಆರ್ಥಿಕ ನೆರವನ್ನು ನೀಡಿ ಪ್ರೋತ್ಸಾಹಿಸಿದ, ಶಾಲಾ ವಾಹನವನ್ನು ಪಡೆಯಲು ಸಹಕರಿಸಿದ ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡ್ಗಿ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಿ, ಸಂಜಯಗಾಂಧಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗೌರವ ಸಮರ್ಪಣೆ‌ ಸ್ವೀಕರಿಸಿ ಮಾತನಾಡಿ, ತಮ್ಮ ಊರಿನ ಸಮೀಪದ ಶಾಲೆಗೆ ನೆರವು ನೀಡಿರುವುದು ತಮಗೆ ಸಂತೋಷದ ವಿಷಯ ಎಂದು ತಿಳಿಸಿ, ಸಂಜಯಗಾಂಧಿ ಚಾರಿಟೇಬಲ್ ಟ್ರಸ್ಟ್ ನ ಕಾರ್ಯವನ್ನು ಶ್ಲಾಘಿಸಿದರು ಮತ್ತು ಪೋಷಕರು, ಗ್ರಾಮಸ್ಥರು ಶಾಲಾ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಬೇಕು ಎಂದು ಕರೆ ನೀಡಿದರು.‌ ಸಂಜಯಗಾಂಧಿ ಪ್ರೌಢಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ದಾಮೋದರ ಶಾಸ್ತ್ರೀ ಅವರು ಈ ಗೌರವ ಸಮರ್ಪಣೆ ಕಾರ್ಯಕ್ರಮ ನೆರವೇರಿಸಿ, ಶಾಲೆಗೆ ನೆರವು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಗ್ಗರ್ಸೆ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ 36ನೇ ರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಸುಧಾಕರ್ ತಗ್ಗರ್ಸೆ ಮೊಗವೀರ ಹಾಗೂ ಕಾರ್ಯದರ್ಶಿಯಾಗಿ ಸುಧೀರ್ ಶೆಟ್ಟಿ ತಗ್ಗರ್ಸೆ ಆಯ್ಕೆಯಾಗಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ 2025ರ ಮೇನಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಶಿರೂರಿನ ನಾಗೇಂದ್ರ ಕಾಮತ್ ಉತ್ತೀರ್ಣರಾಗಿರುತ್ತಾರೆ. ಉಡುಪಿಯ ತ್ರಿಷಾ ವಿದ್ಯಾ ಕಾಲೇಜಿನಲ್ಲಿ ಬಿ.ಕಾಂ. ಪದವಿಯನ್ನು ಪಡೆದಿರುವ ಇವರು, ಕುಂದಾಪುರದ ವಿಶ್ವಾಸ್ ಕಾಮತ್ ಎಂಡ್ ಕೋ ಅವರಲ್ಲಿ ಆರ್ಟಿಕಲ್‌ಶಿಪ್ ಪಡೆದಿರುತ್ತಾರೆ. ಇವರು ಶಿರೂರಿನ ಅಶ್ವಿನಿ ಹಾಗೂ ಅಶೋಕ ಕಾಮತ್ ರವರ ಪುತ್ರರಾಗಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕುಂದಾಪ್ರ ಕನ್ನಡವೆಂಬುದು ಕನ್ನಡದ ವಿಶಿಷ್ಟ ಭಾಷಾ ಪ್ರಕಾರವಾಗಿದೆ. ಭಾಷೆಯ ಅಭಿಮಾನ ಎಲ್ಲಾ ಭಾವನೆಗಳನ್ನು ಮೀರಿ ಒಂದುಗೂಡಿಸುವಂತಿದ್ದರೆ ಅದು ವಿಶಿಷ್ಟವಾದ ಅನುಭೂತಿಯೇ ಸರಿ. ಕುಂದಾಪ್ರ ಕನ್ನಡ ಭಾಷೆ ಆಡುಭಾಷೆಯಾಗಿರುವುದರ ಜೊತೆಗೆ ದಾಖಲಿಕರಣ ಕಾರ್ಯವೂ ಹೆಚ್ಚೆಚ್ಚು ನಡೆಯಲಿ ಎಂದು ಹಿರಿಯ ಸಾಹಿತಿ ಉಪ್ಪುಂದ ಚಂದ್ರಶೇಖರ ಹೊಳ್ಳ ಹೇಳಿದರು.   ಅವರು ಉಪ್ಪುಂದ ಶಂಕರ ಕಲಾಮಂದಿರದಲ್ಲಿ ಶನಿವಾರ ಜರುಗಿದ ಕಾರ್ಯಕ್ರಮದಲ್ಲಿ ಗಮ್ಮತ್ತ್‌ ಕಾರ್ಯಕ್ರಮದ ಪೋಸ್ಟರ್ ಅನಾವರಣಗೊಳಿಸಿ ಮಾತನಾಡಿದರು. ಕರಾವಳಿಯ ಜನರಿಗೆ ವಿಶ್ವದಾದ್ಯಂತ ಮಾನ್ಯತೆ ಇದೆ. ಎಲ್ಲರೊಂದಿಗೂ ಹೊಂದಿಕೊಂಡು ಬದುಕುವ ಹಾಗೂ ವಿಶೇಷವಾದುದನ್ನು ಸಾಧಿಸುವ ಗುಣ ಕರಾವಳಿಗರಿಗೆ ಮೈಗೂಡಿದೆ ಎಂದರು. ಬೈಂದೂರಿನ ಕುಂದಾಪ್ರ ಕನ್ನಡ ಸಂಸ್ಕೃತಿ ಪ್ರತಿಷ್ಠಾನದ ಅಧ್ಯಕ್ಷ ಶರತ್‌ ಶೆಟ್ಟಿ ಉಪ್ಪುಂದ ಪ್ರಾಸ್ತಾವಿಕ ಮಾತನಾಡಿ, ಕಳೆದ ಭಾರಿಯಂತೆ ಈ ಭಾರಿಯೂ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಗಮ್ಮತ್ತ್‌ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಅಗಸ್ಟ್‌ 03ರ ಭಾನುವಾರ ಬೆಳಿಗ್ಗೆಯಿಂದ ಸಂಜೆಯ ತನಕ ಯಡ್ತರೆ ನೆಲ್ಯಾಡಿ ಬೈಲ್‌ ಹಾಗೂ ಜೆ.ಎನ್.ಆರ್‌ ಹಾಲ್‌ನಲ್ಲಿ ದಿನವಿಡಿ ಕಾರ್ಯಕ್ರಮಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಕೋಟ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶನಿವಾರ ಕೋಟತಟ್ಟು ಗ್ರಾಮ ಪಂಚಾಯತ್ ಎದುರು ಬಿಜೆಪಿಯವರ ಸುಳ್ಳಿನ ಪ್ರತಿಭಟನೆಯ ವಿರುದ್ಧ ಕಾಂಗ್ರೆಸ್ ಪಕ್ಷದ ಸತ್ಯದರ್ಶನ ಪ್ರತಿಭಟನೆಯನ್ನು ನಡೆಸಿತು. ಈ ಸಂದರ್ಭದಲ್ಲಿ ಮಾಜಿ ಸಂಸದರಾದ ಜಯಪ್ರಕಾಶ್ ಹೆಗಡೆ ಅವರು ಭಾಗವಹಿಸಿ ಬಿಜೆಪಿಯವರು ಸುಳ್ಳಿನ ರಾಜಕಾರಣ ಮಾಡುತ್ತಿದ್ದಾರೆ. ಜನರ ದಿಕ್ಕು ತಪ್ಪಿಸುವ ಪ್ರತಿಭಟನೆಗಳು ಬಿಜೆಪಿಯಿಂದಾಗುತ್ತಿದೆ ಎಂದು ಬಿಜೆಪಿ ಇತ್ತೀಚಿಗೆ ನಡೆಸಿದ ಪ್ರತಿಭಟನೆಯ ಬಗ್ಗೆ ವಿವರಣೆ ನೀಡಿ, ಸಾರ್ವಜನಿಕರಿಗೆ ಸತ್ಯ ವಿಚಾರವನ್ನು ತೆರೆದಿರಲ್ಲದೆ ಗ್ಯಾರಂಟಿ ಯೋಜನೆಗಳು ಮತ್ತು ಕಾಂಗ್ರೆಸ್ ಸರ್ಕಾರದ ಅವಧಿಗಳಲ್ಲಿ ಜಾರಿಗೆ ತಂದಂತ ಎಲ್ಲಾ ಯೋಜನೆಗಳನ್ನು ಜನರಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಂಕರ್ ಎ. ಕುಂದರ್, ಕೋಟ ವ್ಯವಸಾಯಕ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ತಿಮ್ಮ ಪೂಜಾರಿ, ಗ್ರಾಮೀಣ ಸಮಿತಿ ಅಧ್ಯಕ್ಷ ಸುರೇಶ್ ಪೂಜಾರಿ, ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಸಾಯಿರಬಾನು, ರೋಬರ್ಟ್ ಡಿಸೋಜ, ಮುಖಂಡರಾದ ರವಿ ಪೂಜಾರಿ, ರತ್ನಾಕರ ಶ್ರೀಯನ್ ವಿವಿಧ ಘಟಕದ ಅಧ್ಯಕ್ಷರುಗಳು ಭಾಗವಹಿಸಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ  ಫ್ರೆಶರ್ಸ್ ಡೇ ಹಾಗೂ ವಿದ್ಯಾರ್ಥಿ ಸಂಸತ್ ನ್ನು ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಲಾಯಿತು.  ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರತ್ತು ಬಾಯಿ ಜನತಾ ಪ್ರೌಢಶಾಲೆ ಬೈಂದೂರು ಇಲ್ಲಿನ ಮುಖ್ಯೋಪಾಧ್ಯಾಯರಾದ ಆನಂದ ಮದ್ದೋಡಿ ಅವರು  ಜೀವನದಲ್ಲಿ ಶಿಸ್ತು, ಸಂಯಮ, ಸಮರ್ಪಣಾ ಮನೋಭಾವವನ್ನು ತಮ್ಮಲ್ಲಿ ಅಳವಡಿಸಿಕೊಂಡು ಭಾವನಾತ್ಮಕ, ಪ್ರಜ್ಞಾವಂತ ನಾಗರಿಕರಾಗಿ ಬದುಕನ್ನು ಸಾಗಿಸುವಂತಾಗಲಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.   ಕಾರ್ಯಕ್ರಮದ  ಅಧ್ಯಕ್ಷತೆಯನ್ನು ವಹಿಸಿದ ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ ಅಂಡ್ ಕಲ್ಚರಲ್ ಟ್ರಸ್ಟ್  ಇದರ ಕಾರ್ಯದರ್ಶಿಯವರಾದ . ಕೆ. ರಾಧಾಕೃಷ್ಣ ಶೆಣೈ ವಿದ್ಯಾರ್ಥಿಗಳಿಗೆ ಶುಭ  ಹಾರೈಸಿದರು.  ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಹಿರಿಯ ರಸಾಯನ ಶಾಸ್ತ್ರ ಉಪನ್ಯಾಸಕರಾದ ರಮಾಕಾಂತ ರೇವಣ್ಣಕರ್ ಉಪಸ್ಥಿತರಿದ್ದರು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ವಿವಿಧ ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಕೋಳಿ ನೃತ್ಯ ಖ್ಯಾತಿಯ …

Read More