Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪ್ರಕೃತಿಯನ್ನು ಪ್ರೀತಿಸುವ ಮನೋಭಾವನೆ ಎಳೆ ವಯಸ್ಸಿನಲ್ಲೇ ಮೂಡಬೇಕು ಆಗ ಪರಿಸರ ಉಳಿಯಲು ಸಾಧ್ಯ ಎಂದು ಪರಿಸರವಾದಿ ಪ್ರಸಾದ್ ಬೈಂದೂರು ಅಭಿಪ್ರಾಯಪಟ್ಟರು. ಅವರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ಆಶ್ರಯದಲ್ಲಿ ಗೆಳೆಯರ ಬಳಗ ಕಾರ್ಕಡ, ನಿಸರ್ಗ ಇಕೋ ಕ್ಲಬ್ ಕೋಟೇಶ್ವರ ಇವರ ಸಹಯೋಗದೊಂದಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸ ಬಡಾಕೆರೆ ಹಳವಳ್ಳಿ ಕುಂಬ್ರಿ ಇಲ್ಲಿನ ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ ಕಾರ್ಯಾಗಾರ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಪ್ಲಾಸ್ಟಿಕ್ ಮುಕ್ತ ಹಸಿರು ಪರಿಸರ ಸೃಷ್ಠಿಸುವ ವಿವಿಧ ರೀತಿಯ ಮಾಹಿತಿಯನ್ನು ವಿಧ್ಯಾರ್ಥಿಗಳಿಗೆ ನೀಡಿದರಲ್ಲದೆ ಪ್ರಕೃತಿಯಲ್ಲಿನ ಹಕ್ಕಿಗಳಿಗೆ ನೀರಿಡುವ ಕಾಯಕ,ವಿದ್ಯಾರ್ಥಿಗಳ ಆರೋಗ್ಯದಲ್ಲಿ ಉಪಯೋಗಿಸಬೇಕಾದ ಆಹಾರ ಸೇವನೆಗಳ ಬಗ್ಗೆ ಸ ವಿವರವಾಗಿ ಮಾಹಿತಿ ನೀಡಿದರು. ಕಾರ್ಯಕ್ರಮವನ್ನು ಕುಂದಾಪುರ ಸೇವಾ ಸಂಗಮ ಶಿಶು ಮಂದಿರ ಇದರ ವಿಶ್ವಸ್ಥ ಮಂಡಳಿಯ ಪ್ರಮುಖರಾದ ಚಂದ್ರಿಕಾ ಚಂದ್ರಮೋಹನ್ ಧನ್ಯ ಉದ್ಘಾಟಿಸಿ ಪಂಚವರ್ಣದ ಪರಿಸರ ಕಾಳಜಿ ಕಾರ್ಯಕ್ರಮಗಳನ್ನು ಪ್ರಶಂಸಿದರಲ್ಲದೆ ಪ್ರಸ್ತುತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಐ.ಐ.ಟಿ, ಐ.ಐ.ಐ.ಟಿ, ಎನ್.ಐ.ಟಿ, ಐ.ಐ.ಎಮ್, ಐ.ಐ.ಎಸ್.ಇ.ಆರ್, ಎ.ಐ.ಐ.ಎಂ.ಎಸ್, ಎನ್.ಎಲ್.ಯು, ಐ.ಎನ್.ಐ ಮತ್ತು ಐ.ಯು.ಎಸ್.ಎಲ್.ಎ ಇತ್ಯಾದಿ ಸರ್ಕಾರದಿಂದ ಶಾಸನಬದ್ಧ ಅನುಮತಿ ಪಡೆದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಕೋರ್ಸ್ ಪೂರ್ಣ ಅವಧಿಯಲ್ಲಿ ಒಂದು ಬಾರಿಗೆ  ಪ್ರೋತ್ಸಾಹಧನವನ್ನು ಪಡೆಯಲು ಸೇವಾಸಿಂಧು ತಂತ್ರಾಂಶ https://sevasindhu.karnataka.gov.in/sevasindhu/DepartmentService ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಐ.ಎ.ಎಸ್, ಕೆ.ಎ.ಎಸ್ ಗೆಜೆಟೆಡ್ ಪ್ರೋಬೇಷನರ್ ಮತ್ತು ಗ್ರೂಪ್ ಸಿ ಆರ್.ಆರ್.ಬಿ & ಎಸ್.ಎಸ್.ಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು, ಸದರಿ ತರಬೇತಿ ಪಡೆಯಲಿಚ್ಛಿಸುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಸೇವಾಸಿಂಧು ತಂತ್ರಾಂಶ https://sevasindhu.karnataka.gov.in ಮತ್ತು https://dom.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 2 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಮೇಲ್‌ ಗಂಗೊಳ್ಳಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ 2025-26ನೇ ಸಾಲಿನ ವಿದ್ಯಾರ್ಥಿ ಸಂಸತ್ ಪದಗ್ರಹಣ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು. ಶಾಲೆಯ ಮುಖ್ಯ ಶಿಕ್ಷಕ ಗುರುರಾಜ್ ಆಚಾರ್ಯ ಅವರು ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿ ಶುಭ ಹಾರೈಸಿದರು. ವಿದ್ಯಾರ್ಥಿ ನಾಯಕಿ ರಶ್ಮಿತಾ ಅನಿಸಿಕೆ ಹಂಚಿಕೊಂಡರು. ಈ ಸಂದರ್ಭದಲ್ಲಿ ಸಹ ಶಿಕ್ಷಕ ಯೋಗೀಶ್, ಎಸ್‌ಡಿಎಂಸಿ ಅಧ್ಯಕ್ಷೆ ಸವಿತಾ ಖಾರ್ವಿ, ಅಡುಗೆ ಸಹಾಯಕಿ ಶಕುಂತಲಾ ಖಾರ್ವಿ, ಜ್ಯೋತಿ ಆನಂದ ಇನ್ನಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಣ ಮಂತ್ರಿ ಸಾನ್ವಿ ನಿರೂಪಿಸಿ, ಉಪ ಮುಖ್ಯಮಂತ್ರಿ ಇರ್ಷಾದ್ ಸ್ವಾಗತಿಸಿ, ಸಾಂಸ್ಕೃತಿಕ ಮಂತ್ರಿ ಅನ್ವಿತಾ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಸ್ಸಿ ನರ್ಸಿಂಗ್ ಮತ್ತು ಜಿ.ಎನ್.ಎಂ ನರ್ಸಿಂಗ್ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಸೌಲಭ್ಯ ಪಡೆಯಲು ಸೇವಾಸಿಂಧು ತಂತ್ರಾಂಶ https://sevasindhu.karnataka.gov.in/sevasindhu/departmentservice ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ದೂ.ಸಂಖ್ಯೆ: 0820-2574596 ಅಥವಾ ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ 1 ರಿಂದ 8 ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ವಿದ್ಯಾರ್ಥಿವೇತನದ ಪೋರ್ಟಲ್ ಎಸ್.ಎಸ್.ಪಿ ತಂತ್ರಾಂಶ https://ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ದೂ.ಸಂಖ್ಯೆ: 0820-2574596 ಅಥವಾ ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಲಯನ್ಸ್ ಕ್ಲಬ್ ಇವರ ಸಹಯೋಗದೊಂದಿಗೆ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪರಿವರ್ತನ- ವ್ಯಕ್ತಿತ್ವ ವಿಕಸನ ಕಾರ್ಯಕ್ರಮವು ಇತ್ತೀಚಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಧಾನವಾಗಿ ವ್ಯಕ್ತಿತ್ವವಿಕಸನದ ತರಬೇತುದಾರರಾದ ವಿ. ವಾಮನ ಕುಮಾರ್ ಕೇರಳ ಅವರು ಮಕ್ಕಳಿಗೆ ಮಾಹಿತಿಯನ್ನು ನೀಡುತ್ತಾ, ಶಿಸ್ತಿನ ವಿದ್ಯಾರ್ಥಿಗಳಾದ ನಿಮಗೆ ಮಾರ್ಗದರ್ಶನ ಮಾಡಲು ನಮಗೆ ಹೆಮ್ಮೆಯಾಗುತ್ತಿದೆ. ಮಾರ್ಗದರ್ಶನ, ಭರವಸೆ, ಸಾಮರ್ಥ್ಯಗಳೇ ನಿಮ್ಮ ಯಶಸ್ಸಿನ ಮೂಲಸೂತ್ರಗಳು. ಗುರಿಯ ಆಯ್ಕೆಯಲ್ಲಿ ಯಾವತ್ತೂ ತಪ್ಪಬಾರದು. ಎಂತಹ ಕಠಿಣ ಪರಿಸ್ಥಿತಿಯಲ್ಲೂ ತೆಗೆದುಕೊಂಡ ನಿರ್ಧಾರವನ್ನು ತ್ಯಜಿಸಬಾರದು. ಸ್ಪರ್ಧಾತ್ಮಕವಾದ ಜಗತ್ತಿನಲ್ಲಿ ಆಳಾಗಿ ಬದುಕುವುದಕ್ಕಿಂತ ಅರಸನಾಗಲು ಪ್ರಯತ್ನಿಸಬೇಕು. ಧೀರುಬಾಯಿ ಅಂಬಾನಿ ನಮಗೆ ಇಂದು ಸ್ಫೂರ್ತಿಯ ಚಿಲುಮೆಯಾಗಿದ್ದಾರೆ. ನಮ್ಮ ಕೌಶಲವನ್ನು ಸದಾ ನಾವೀನ್ಯತೆಯಿಂದ ಕೂಡಿರುವಂತೆ ನೋಡಿಕೊಳ್ಳಬೇಕು. ಎಂದು ತಮ್ಮ ಕೆಲವು ವೀಡಿಯೋ ಚಿತ್ರಗಳ ತುಣುಕುಗಳ ಮೂಲಕ ಮಕ್ಕಳ ಹೃದಯ ಕಮಲವನ್ನು ಅರಳಿಸುತ್ತಾ ಬೋಧಿಸಿದರು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲಾ ಪ್ರಾಂಶುಪಾಲರಾದ ಶರಣ ಕುಮಾರರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಕುಂದಾಪುರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ವಿ.ವಿ.ವಿ.ಮಂಡಳಿ ರಿ. ಆಡಳಿತ ಮಂಡಳಿಗೆ ಒಳಪಟ್ಟಿರುವ ಜನತಾ ಪ್ರೌಢಶಾಲೆ ಹೆಮ್ಮಾಡಿಯ ಹೆಮ್ಮೆಯ ಶಿಕ್ಷಣ ಸಂಸ್ಥೆ. ಗ್ರಾಮೀಣ ಭಾಗಗಳಿಂದ ನೂರಾರು ವಿದ್ಯಾರ್ಥಿಗಳು ಈ ಶಿಕ್ಷಣ ಸಂಸ್ಥೆಯಲ್ಲಿ ದಾಖಲಾತಿ ಪಡೆದುಕೊಂಡು ಶಿಕ್ಷಣ ಪಡೆಯುತ್ತಿರುವ ಸಂದರ್ಭದಲ್ಲಿ ಶಾಲಾ ಅಗತ್ಯ ಸೌಲಭ್ಯಗಳಲ್ಲಿ ಒಂದಾಗಿರುವ ಶಾಲಾ ವಾಹನ ಸೌಲಭ್ಯವನ್ನು ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಶಾಲಾ ವಾಹನವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರು,ಶಾಲೆ ಹಾಗೂ ಪದವಿಪೂರ್ವ ಕಾಲೇಜಿನ‌ ಬೋಧಕ/ಬೋಧಕೇತರ ವೃಂದದವರು,ಶಾಲಾ ಹಳೆ ವಿದ್ಯಾರ್ಥಿ ಶ್ರೀಧರ್ ರಾವ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕರಾವಳಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಂಘ ಗಂಗೊಳ್ಳಿ ಇದರ ವತಿಯಿಂದ ಗಂಗೊಳ್ಳಿ ಕಡಲ ತೀರದಲ್ಲಿ ಸಮುದ್ರ ಪೂಜೆ ಶುಕ್ರವಾರ ನಡೆಯಿತು. ಅರ್ಚಕ ರವೀಶ್ ಭಟ್ ನೇತೃತ್ವದಲ್ಲಿ ಸಮುದ್ರ ಪೂಜೆಯ ಧಾರ್ಮಿಕ ವಿಧಿವಿಧಾನಗಳು ಸಂಪನ್ನಗೊಂಡಿತು. ಮುಂದಿನ ಮೀನುಗಾರಿಕಾ ಋತುವಿನಲ್ಲಿ ಸಮೃದ್ಧ ಮತ್ಸ್ಯ ಸಂಪತ್ತು ದೊರೆಯುವಂತಾಗಲಿ, ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಯಾವುದೇ ಅಪಾಯ ಎದುರಾಗದಿರಲಿ, ಪ್ರಕೃತಿ ವಿಕೋಪಗಳು ಬಾರದಿರಲಿ, ಎಲ್ಲಾ ಮೀನುಗಾರರ ಬಾಳಿನಲ್ಲಿ ಸುಖ ಶಾಂತಿ ನೆಮ್ಮದಿ ಇರುವಂತಾಗಲಿ, ಸಮಸ್ತ ಮೀನುಗಾರರಿಗೆ ಒಳ್ಳೆಯದಾಗಲಿ ಎಂದು ಸಮುದ್ರರಾಜ ಹಾಗೂ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು. ಗಂಗೊಳ್ಳಿ ಕರಾವಳಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಯಶವಂತ ಖಾರ್ವಿ, ಸಂಘದ ಪದಾಧಿಕಾರಿಗಳು, ಮೀನುಗಾರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದಿಂದ ಸಿಎ ದಿನಾಚರಣೆಯ ಸಂದರ್ಭ ಒತ್ತಡ ನಿರ್ವಹಣೆಯ ಕುರಿತಾಗಿ ವಿಭಿನ್ನ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು. ಉಡುಪಿಯ ಆರ್ಟ್ ಆಫ್ ಲಿವಿಂಗ್‌ನ ಯೋಗ ಮತ್ತು ಪ್ರಾಣಾಯಾಮ ತರಬೇತುದಾರರಾದ ಶೈಲಜಾ ಕೃಷ್ಣಾನಂದ, ಒತ್ತಡ ನಿರ್ವಹಣೆ ಹಾಗೂ ಏಕಾಗೃತೆಯ ಸಾಧನೆಯನ್ನು ಆಸನ ಹಾಗೂ ಪ್ರಾಣಾಯಾಮದ ಮೂಲಕ ಹೇಗೆ ಸಿದ್ಧಿಸಿಕೊಳ್ಳುವುದು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಉಡುಪಿಯ ವೀ-ರೀಚ್ ಅಕಾಡೆಮಿಯ ಸ್ಥಾಪಕರಾದ ಸಿಎಸ್ ಸಂತೋಷ್ ಪ್ರಭು ಅವರು ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿ, ಸಿಎ ದಿನಾಚರಣೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ಇದೇ ಸಂದರ್ಭ ಸಿಎ/ಸಿಎಸ್ ಮತ್ತು ಸಿಎಮ್‌ಎ ಕೋರ್ಸ್ಗಳನ್ನು ಆಯ್ಕೆ ಮಾಡಿರುವ ವಿದ್ಯಾರ್ಥಿಗಳಿಗೆ ಅಧ್ಯಯನ ಕುರಿತು ಪ್ರೇರಣೆ ನೀಡಿದರು. ಕಾರ್ಯಕ್ರಮದಲ್ಲಿ ಪ್ರೊಫೆಷನಲ್ ವಿದ್ಯಾರ್ಥಿಗಳ ಪೋಷಕರು ಸಹ ಭಾಗವಹಿಸಿದ್ದು ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು, ಪ್ರೊಫೆಷನಲ್ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾದ ಜೀವನ ಪದ್ಧತಿ ಇರಬೇಕು. ವಿದ್ಯಾರ್ಥಿಗಳ ಕುರಿತು ಪ್ರಾಣಾಯಾಮ, ಆಸನ…

Read More