ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರತಿಯೊಂದು ಮಗುವು ಪ್ರತಿಭೆಯ ಕಣಜದಂತೆ. ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲಿಯೇ ಗುರುತಿಸಿ ಪ್ರೋತ್ಸಾಹಿಸಿದರೆ ಆ ಪ್ರತಿಭೆ ಬೆಳಕನ್ನು ಕಂಡು ಸಾಧನೆಯನ್ನು ಮಾಡಲು ಸಾಧ್ಯವಾಗುತ್ತದೆ ಎಂದು ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಹೇಳಿದರು. ಅವರು ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ವತಿಯಿಂದ ಯಡಾಡಿ ಮತ್ಯಾಡಿಯ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ್ ಪಿ. ಯು. ಕಾಲೇಜಿನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆದ ಮಂಥನ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಕ್ಕಳು ಪಠ್ಯದ ಜೊತೆಗೆ ಪಠ್ಯೇತರ ವಿಷಯಗಳಲ್ಲಿ ಆಸಕ್ತಿಯನ್ನು ಹೊಂದಿದ್ದರೆ ಸರ್ವತೋಮುಖ ಪ್ರಗತಿ ಸಾಧ್ಯವಾಗುತ್ತದೆ. ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮ ಆಸಕ್ತಿಯ ವಿಷಯವನ್ನು ಆಯ್ಕೆ ಮಾಡಿಕೊಂಡು ನಿರಂತರ ಅಭ್ಯಾಸ ಮತ್ತು ಪರಿಶ್ರಮದಿಂದ ಸಾಧನೆಯನ್ನು ಮಾಡಲು ಸಾಧ್ಯವಾಗುತ್ತದೆ. ಇಂದು ಯಕ್ಷಗಾನ ಮುಂತಾದ ಕಲೆಯಲ್ಲಿ ಆಸಕ್ತಿಯನ್ನು ಹೊಂದಿರುವವರು ಸಾಕಷ್ಟು ಸಾಧನೆ ಮಾಡಿ ಯಶಸ್ಸನ್ನು ಆರ್ಥಿಕ ಸದೃಢತೆಯನ್ನು ಹೊಂದುತ್ತಿದ್ದಾರೆ. ಹಾಗಾಗಿ ಕಲಾ ಪ್ರಕಾರಗಳು ಕೂಡ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಲೆನಾಡಿನ ಸಮಸ್ತ ಜೈನ ಬಾಂಧವರ ಸಹಯೋಗದೊಂದಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವವನ್ನು ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ ಆದಿತ್ಯವಾರ ಹಮ್ಮಿಕೊಳ್ಳಲಾಯಿತು. ಸಂಜೆ 4ಕ್ಕೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಮೊದಲಿಗೆ ಆಳ್ವಾಸ್ ವಿದ್ಯಾರ್ಥಿಗಳಿಂದ ಜಿನಭಜನೆ ನಡೆಯಿತು. ಕೊಂಬು ವಾದ್ಯ, ನಾದಸ್ವರ, ಪೂರ್ಣಕುಂಭದೊಂದಿಗೆ ಮಹಾವೀರ ಸ್ವಾಮಿ ಜಿನಬಿಂಬದ ಮೆರವಣಿಗೆ, ತೋರಣ ಮುಹೂರ್ತ, ದ್ರವ್ಯಾಭಿಷೇಕ, ಅಷ್ಟವಿಧಾರ್ಚನೆ ಪೂಜೆ, ಮಹಾಮಂಗಳಾರತಿ ಹಮ್ಮಿಕೊಳ್ಳಲಾಯಿತು. ಹೊರನಾಡಿನ ಜಯಶ್ರೀ ಧರಣೇಂದ್ರ ಜೈನ್ ಮತ್ತು ಬಳಗದವರಿಂದ ಜಿನಭಕ್ತಿ ಗಾಯನ ನಡೆಯಿತು. ನಂತರ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ಗೈದ ಮೂಡುಬಿದಿರೆ ಜೈನ ಮಠದ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ, ಕರಾವಳಿಯ ಜೈನರನ್ನು ಆಹ್ವಾನಿಸಿ ಅಭೂತಪೂರ್ವ ಮಹೋತ್ಸವ ಹಮ್ಮಿಕೊಂಡ ಡಾ. ಎಂ. ಮೋಹನ್ ಆಳ್ವ ಓರ್ವ ಧರ್ಮಸಹಿಷ್ಣುತೆ ಹೊಂದಿರುವ ವ್ಯಕ್ತಿ ಎಂದು ಸಂತಸ ವ್ಯಕ್ತ ಪಡಿಸಿದರು. ಸ್ವಾಭಾವಿಕ ವಿಚಾರಗಳನ್ನು ಮಾತ್ರವೇ ಮಹಾವೀರ ಸ್ವಾಮಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮೃದ್ಧ ಬೈಂದೂರು ಪರಿಕಲ್ಪನೆಯ ಸೇವಾ ಸೇತು ಯೋಜನೆಯಡಿಯಲ್ಲಿ ಸೇವಾ ಭಾರತಿ ರಿ. ಕನ್ಯಾಡಿ ಇವರ ಸಹಯೋಗದೊಂದಿಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನೂತನ ಪುನಶ್ಚೇತನ ಕೇಂದ್ರ ಸೇವಾಧಾಮ ಇದರ ಭೂಮಿ ಪೂಜೆ ಕಾರ್ಯಕ್ರಮವು ಇಲ್ಲಿನ ಪಡುವರಿ ಗ್ರಾಮದ ಹೇನಬೇರ್ ನಲ್ಲಿ ಜರುಗಿತು. ಬೈಂದೂರಿನ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಭೂಮಿ ಪೂಜೆಯನ್ನು ನೆರವೇರಿಸಿದರು. ಸೇವಾ ಭಾರತಿ ರಿ. ಕನ್ಯಾಡಿ ಇದರ ಸಂಸ್ಥಾಪಕರಾದ ವಿನಾಯಕ ರಾವ್ ಕನ್ಯಾಡಿ ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ಬೈಂದೂರಿನಲ್ಲಿ ಆರಂಭಗೊಳ್ಳಲಿರುವ ಸೇವಾಧಾಮ ಬೆನ್ನುಹುರಿ ಅಪಘಾತಕ್ಕೆ ಒಳಗಾದ ದಿವ್ಯಾಂಗರ ಪಾಲಿಗೆ ಆಶಾಕಿರಣವಾಗಲಿದೆ ಎಂದು ಅಭಿಪ್ರಾಯಪಟ್ಟರು. ಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಂಡ ಬೈಂದೂರಿನ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಉಡುಪಿ ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ಬೈಂದೂರಿನಲ್ಲಿ ಬೆನ್ನುಹುರಿ ಅಪಘಾತಕ್ಕೆ ಒಳಗಾದ ದಿವ್ಯಾಂಗರಿಗೆ ನೂತನ ಪುನಶ್ಚೇತನ ಕೇಂದ್ರ ಕಾರ್ಯ ಆರಂಭಗೊಳ್ಳಲಿದ್ದು, ಸಹೃದಯಿ ದಾನಿಗಳ ನೆರವಿನಿಂದ ಆದಷ್ಟು ಶೀಘ್ರ ಉದ್ಘಾಟನೆಯಾಗುವಂತೆ ಆಶಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಮೃದ್ಧ ಜನಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಿ.ಎಸ್.…
ಕುಂದಾಪುರ: ಉಡುಪಿ ರಾಜಾಂಗಣದಲ್ಲಿ ಜರುಗಲಿರುವ ಉಡುಪಿ ಜಿಲ್ಲಾ ಹದಿನೇಳನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಂಘ ಸಂಸ್ಥೆ ವಿಭಾಗದ ಗೌರವಕ್ಕೆ ಜಿಲ್ಲೆಯ ಅಗ್ರಮಾನ್ಯ ಸುದ್ದಿಸಂಸ್ಥೆ ‘ಕುಂದಾಪ್ರ ಡಾಟ್ ಕಾಂ’ ಪಾತ್ರವಾಗಿದೆ. 2012ರಲ್ಲಿ ಕುಂದಾಪುರ ತಾಲೂಕಿನ ಮೊದಲ ಪೂರ್ಣಪ್ರಮಾಣದ ಪೋರ್ಟೆಲ್ ಆಗಿ ಆರಂಭಗೊಂಡ ಕುಂದಾಪ್ರ ಡಾಟ್ ಕಾಂ, ಕಳೆದ ಹದಿಮೂರು ವರ್ಷಗಳಿಂದ ಸ್ಥಳೀಯ ಸುದ್ದಿ-ಮಾಹಿತಿ, ವಿಚಾರ ವೈಶಿಷ್ಟತೆಗಳನ್ನು ನಿರಂತರವಾಗಿ ಪ್ರಕಟಿಸುತ್ತಾ, ಕುಂದಾಪುರ – ಬೈಂದೂರು ತಾಲೂಕು ಹಾಗೂ ಜಿಲ್ಲೆಯಲ್ಲಿ ವಿವಿಧ ಕಾರ್ಯಗಳ ಮೂಲಕ ಗಮನ ಸೆಳೆದಿದೆ. ಗ್ರಾಮೀಣ ಭಾಗದ ಸಮಸ್ಯೆಗಳು, ಪ್ರಾದೇಶಿಕ ವೈಶಿಷ್ಟ್ಯತೆಗಳನ್ನು ನಿರಂತವಾಗಿ ಪಸರಿಸುವ ಜೊತೆಗೆ ಕುಂದಾಪ್ರ ಕನ್ನಡ ಲೇಖನ, ಅಂಕಣ ಬರಹಗಳು ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಜನಮಾಸನದಲ್ಲಿ ನೆಲೆಗೊಂಡಿದೆ. ಈ ನಿರಂತರ ಸೇವೆಯನ್ನು ಗುರುತಿಸಿ ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಮೇ.01ರಂದು ನಡೆಯುವ ಉಡುಪಿ ಜಿಲ್ಲಾ ಹದಿನೇಳನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಕುಂದಾಪ್ರ ಡಾಟ್ ಕಾಂ ಸಂಸ್ಥೆಯನ್ನು ಗೌರವಿಸಲಾಗುತ್ತದೆ. ಸಂಸ್ಥೆಯ ಪರವಾಗಿ ಸಂಪಾದಕ ಸುನಿಲ್ ಬೈಂದೂರು ಅವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷಾ ಕಾರ್ಯವನ್ನು ಗಣತಿದಾರರು ವೈಜ್ಞಾನಿಕ ಹಾಗೂ ಸಮರ್ಪಕವಾಗಿ ನಿರ್ವಹಿಸುವುದರೊಂದಿಗೆ ಯಾರೊಬ್ಬರೂ ಕೂಡ ಸಮೀಕ್ಷೆಯಿಂದ ಬಿಟ್ಟುಹೋಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ಇವರ ಸಹಯೋಗದಲ್ಲಿ ಪರಿಶಿಷ್ಟ ಜಾತಿ/ಉಪಜಾತಿ ಸಮಗ್ರ ಸಮೀಕ್ಷೆಗೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಮಾಸ್ಟರ್ ಟ್ರೈನರ್ಗಳಿಗೆ ಆಯೋಜಿಸಲಾದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ, ಮಾತನಾಡಿದರು. ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತಂತೆ ನ್ಯಾಯಮೂರ್ತಿ ಹೆಚ್.ಎನ್, ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಮೀಕ್ಷೆ ನಡೆಸುವ ಸಂಬಂಧ ಮೊಬೈಲ್ ಆಪ್ ಮೂಲಕ ಜಿಲ್ಲೆಯಲ್ಲಿ ಮೂರು ಹಂತಗಳಲ್ಲಿ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು, ಇದಕ್ಕಾಗಿ ತಾಲೂಕು ಮಟ್ಟದ ಮಾಸ್ಟರ್ ಟ್ರೈನರ್ಗಳಾದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರುಗಳಿಗೆ ತರಬೇತಿ ಹಮ್ಮಿಕೊಳ್ಳಲಾಗಿದೆ. ತರಬೇತಿ ಪಡೆದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಸ್ಥಳೀಯ ಸಾರ್ವಜನಿಕರಿಗೆ ಅರ್ಹತಾ ಆಧಾರದ ಮೇಲೆ ಉದ್ಯೋಗಗಳನ್ನು ಕಲ್ಪಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಿರುವ ಕುರಿತು ಕೈಗಾರಿಕೋದ್ಯಮಿಗಳೊಂದಿಗೆ ನಡೆದ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಡಾ. ಸರೋಜಿನಿ ಮಹಷಿ ವರದಿಯಂತೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೈಗಾರಿಗಳಲ್ಲಿ ಎ.ಬಿ ಮತ್ತು ಸಿ ವರ್ಗದ ಹುದ್ದೆಗಳಿಗೆ ಅರ್ಹತೆಯನ್ನು ಆಧರಿಸಿ, ಜಿಲ್ಲೆಯ ಸ್ಥಳೀಯ ಜನರಿಗೆ ಪ್ರಥಮ ಆದ್ಯತೆಯ ಮೇಲೆ ಶೇ. 65 ಕ್ಕಿಂತ ಹೆಚ್ಚು ಹುದ್ದೆಗಳನ್ನು ಕಲ್ಪಿಸಬೇಕು ಎಂದರು. ಕೈಗಾರಿಕೆಗಳಲ್ಲಿ ಡಾ. ಸರೋಜಿನಿ ಮಹಷಿ ವರದಿ ಅನ್ವಯ ಡಿ ಗ್ರೂಪ್ ಹುದ್ದೆಗಳಿಗೆ ಶೇ. 100 ರಷ್ಟು ಸ್ಥಳೀಯರಿಗೆ ಉದ್ಯೋಗ ಅವಕಾಶ ಕಲ್ಪಿಸಬೇಕು. ಕೆಲವು ಕೈಗಾರಿಕೆಗಳಲ್ಲಿ ಹೊರರಾಜ್ಯದ ಕಾರ್ಮಿಕರುಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹುದ್ದೆಗಳಿಗೆ ಸ್ಥಳೀಯರು ಸೇರಲು ಮುಂದೆ ಬರುತ್ತಿಲ್ಲ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿ ಹಾಗೇ ಅದೇ ರೀತಿ ಪ್ರಸ್ತುತ ವ್ಯವಸ್ಥೆಯಲ್ಲಿ ಮಕ್ಕಳ ಜೀವನ ಕ್ರಮಗಳ ಬಗ್ಗೆ ಪೋಷಕರು ಆಗಾಗ ಕಾಳಜಿ ವಹಿಸುವ ಅಗತ್ಯತೆ ಇದೆ ಎಂದು ಕುಂದಾಪುರ ಯಡಾಡಿ ಮತ್ಯಾಡಿಯ ಸುಜ್ಞಾನ ಎಜುಕೇಶನ್ ಟ್ರಸ್ಟ್ ಮುಖ್ಯಸ್ಥ ರಮೇಶ್ ಶೆಟ್ಟಿ ನುಡಿದರು. ಅವರು ಸೋಮವಾರ ಕೋಟ ಗ್ರಾ.ಪಂ ಸಭಾಂಗಣದಲ್ಲಿ ಇಂಡಿಕಾ ಕಲಾ ಬಳಗ ಪಡುಕರೆ, ಪಂಚವರ್ಣ ಸಂಘಟನೆ ಕೋಟ, ಕೋಟ ಗ್ರಾಮಪಂಚಾಯತ್, ಡಿಜಿಟಲ್ ಗ್ರಂಥಾಲಯ ಕೋಟ, ಗೀತಾನಂದ ಫೌಂಡೇಶನ್ ಮಣೂರು ಇವರುಗಳ ಆಶ್ರಯದಲ್ಲಿ ಬೇಸಿಗೆ ಶಿಬಿರ ಚಿತ್ತಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರಸ್ತುತ ಮಕ್ಕಳಲ್ಲಿ ಮೊಬೈಲ್ ವ್ಯಾಮೂಹ ಅತಿಯಾಗಿ ವಿಜೃಂಭಿಸುತ್ತಿದೆ ಇದರ ಗೀಳಿನಿಂದ ಹೊರತರಬೇಕಾದ ಪೋಷಕರ ಪಾತ್ರ ಮಹತ್ವವಾದದ್ದು ಅಲ್ಲದೆ ಇತ್ತೀಚಿಗೆ ರಜಾ ದಿನಗಳಲ್ಲಿ ಶಿಬಿರಗಳ ಆಯೋಜನೆಯಿಂದ ಮೊಬೈಲ್ ವ್ಯಾಮೂಹವನ್ನು ತೊಡೆದುಹಾಕಬಹುದಾಗಿದೆ ಎಂದರಲ್ಲದೆ ಸಂಘಸಂಸ್ಥೆಗಳು ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸುವುದು ಕ್ಲಿಷ್ಟಕರ ಈ ದಿಸೆಯಲ್ಲಿ ಇಂಡಿಕಾ, ಪಂಚವರ್ಣ ಸಂಘಟನೆಗಳು ಕ್ರೀಯಾಶೀಲವಾಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೃಷಿ ಪದ್ದತಿಯಲ್ಲಿ ಸಮಗ್ರ ಕೃಷಿ ನೀತಿಯನ್ನು ಅನುಸರಿಸಿ ಎಂದು ಕೋಟದ ರೈತಧ್ವನಿ ಸಂಘದ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ ಹೇಳಿದರು. ಅವರು ಕೋಟ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್, ಗೆಳೆಯರ ಬಳಗ ಕಾರ್ಕಳ, ರೈತಧ್ವನಿ ಸಂಘ ಕೋಟ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇವರುಗಳ ಸಹಯೋಗದೊಂದಿಗೆ ರೈತ ರೆಡೆಗೆ ನಮ್ಮ ನಡಿಗೆ 45ನೇ ಮಾಲಿಕೆ ಕೋಟತಟ್ಟು ಪಡುಕರೆ ಅನುಸೂಯ ಹಂದೆ ಅವರನ್ನು ರೈತ ಪುರಸ್ಕಾರ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದರು. ರೈತರು ಒಂದೇ ಬಗೆಯ ಬೆಳೆ ಬೆಳೆಯದೆ ಕಾಲಕ್ಕನುಗುಣವಾಗಿ ಮಣ್ಣಿಗೆ ಯೋಗ್ಯವಾದ ಬೆಳೆಗಳನ್ನು ಬೆಳೆಯಬೇಕು ಆಗ ಲಾಭದಾಯ ಬೆಳೆಯಾಗಿಸಲು ಸಾಧ್ಯವಿದೆ ಎಂದರಲ್ಲದೆ ಪ್ರಸುತ ರೈತ ಸಮುದಾಯಕ್ಕೆ ಅನುಕೂಲಕರ ಯೋಜನೆಗಳು ಶೂನ್ಯವಾಗಿದೆ, ಸರಕಾರ ಕೃಷಿಕರಿಗೆ ಹೆಚ್ಚಿನ ಉತ್ತೇಜನ ನೀಡಿದರೆ ಕೃಷಿ ಪರಂಪರೆ ಉಳಿಯಲು ಸಾಧ್ಯವಿದೆ, ಪಂಚವರ್ಣ ಸಂಘಟನೆ ರೈತರನ್ನು ಗುರುತಿಸುವ ಕಾಯಕ ಶ್ರೇಷ್ಠವಾದದ್ದು ಎಂದರು. ಈ ವೇಳೆ ಕೃಷಿ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರಿನ ಕೆಜಿಎಸ್ ಕ್ಲಬ್ನಲ್ಲಿ ನಡೆದ ರಾಜ್ಯ ಮಟ್ಟದ ಕ್ಲಾಸಿಕ್ ಪವರ್ ಲಿಫ್ಟಿಂಗ್ ಸಬ್ ಜೂನಿಯರ್ ಸ್ಪರ್ಧೆಯ M-1 ವಿಭಾಗದ 66 ಕೆಜಿ ಯಲ್ಲಿ 445 ಕೆಜಿ ಭಾರವನ್ನು ಎತ್ತಿ ಚಿನ್ನದ ಪದಕ ಪಡೆದ ಸತೀಶ್ ಖಾರ್ವಿ. ಅವರು ಕುಂದಾಪುರದ ಹರ್ಕ್ಯುಲಸ್ ಜಿಮ್ಮಿನ ವ್ಯವಸ್ಥಾಪಕರಾಗಿರು ಹಾಗೂ ತುಳುನಾಡು ರಕ್ಷಣಾ ವೇದಿಕೆಯ ಕುಂದಾಪುರ ಘಟಕದ ಅಧ್ಯಕ್ಷರಾಗಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಭೆ ಮತ್ತು ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಇತ್ತೀಚಿಗೆ ಜರುಗಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾಲೇಜಿನ ವಿಶ್ವಸ್ಥ ಮಂಡಳಿಯ ಸದಸ್ಯರಾದ ಅನುಪಮ ಎಸ್. ಶೆಟ್ಟಿ ಕಾಯಕ್ರಮನುದ್ದೇಶಿಸಿ ಮಾತನಾಡಿ, ಬದುಕಿನ ತತ್ವ, ನಿಷ್ಠೆಗಳನ್ನು ಮೈಗೂಡಿಸಿಕೊಂಡು ಗೆಲುವಿನ ಹಾದಿಯಲ್ಲಿ ಸಾಗುವ ಛಲ ವಿದ್ಯಾರ್ಥಿಗಳಿಗಿದ್ದರೆ ಯಶಸ್ಸನ್ನು ಸಾಧಿಸಬಹುದು. ಹೆತ್ತವರು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಕಾರಣರಾಗಿ ಅವರನ್ನು ಯೋಗ್ಯ ವ್ಯಕ್ತಿಗಳನ್ನಾಗಿಸಬೇಕು. ಜೊತೆಗೆ ಹೆತ್ತವರು ಮಕ್ಕಳಲ್ಲಿ ಹುದುಗಿರುವ ಪ್ರತಿಭೆ, ಸಾಮರ್ಥ್ಯಗಳನ್ನು ಬೆಳೆಸಬೇಕೆ ಹೊರತು ಅವರ ಮೇಲೆ ಒತ್ತಡ ಹೇರಬಾರದು ಮತ್ತು ಮಕ್ಕಳಲ್ಲಿ ಸಕಾರಾತ್ಮಕ ಮಾತುಗಳನ್ನು ಆಡುವಂತೆ ಹಾಗೂ ಸಹಕಾರ ಮನೋಭಾವವನ್ನು ಮಕ್ಕಳಲ್ಲಿ ಬೆಳೆಸಿ ಹೃದಯವಂತರನ್ನಾಗಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ವಹಿಸಿದ್ದದರು. ಕಾರ್ಯಕ್ರಮದಲ್ಲಿ ಸಂಯೋಜಕರಾದ ಸೂರಜ್ ಕುಮಾರ್ ಶೆಟ್ಟಿ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಹರೀಶ್ ಕಾಂಚನ್ ಉಪಸ್ಥಿತರಿದ್ದರು. ಕನ್ನಡ…
