Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಪ್ರತಿ ಸಂಘನೆಗಳ ಆರಂಭ ಮಾಡುವುದರಿಂದ ಕಾರ್ಯ ಪೂರ್ಣವಾಗದು, ಆದರೆ ಸಂಘಟನೆಗಳು ಬಲಿಷ್ಠವಾದಾಗ ಮಾತ್ರ ಅದರ ಉದ್ದೇಶ ಪೂರ್ಣಗೊಳ್ಳಬಹುದು ಹಾಗೂ ಎಲ್ಲರನ್ನು ಒಳಗೊಂಡಾಗ ಮಾತ್ರ ಸಂಘಟನೆಯ ಪರಿಪೂರ್ಣತೆ ಹೊಂದುತ್ತದೆ ಎಂದು ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಅಡಳಿತ ಧರ್ಮದರ್ಶಿ ವೇದಮೂರ್ತಿ ಹೆಚ್. ಬಾಲಚಂದ್ರ ಭಟ್ ಹೇಳಿದರು. ಅವರು ಉಪ್ಪುಂದ ಪಠೇಲರ ಮನೆಯಲ್ಲಿ ನಡೆಸಿದ ಕುಂದಾಪುರ ತಾಲೂಕು ಹವ್ಯಕ ಸಭಾದ ವಾರ್ಷಿಕೋತ್ಸವ ಹಾಗೂ ಸನ್ಮಾನ ಸಮಾರಂಭದಲ್ಲಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಮಂಗಳೂರು ಮಂಡಲದ ಉಪಾಧ್ಯಕ್ಷ ಕಾಕುಂಜೆ ರಾಜಶೇಖರ ಭಟ್ ಮಾತನಾಡಿ, ಸಂಘಟನೆಗಳು ಕಾಲಚಕ್ರದಂತೆ ಏರಿಳಿತಗಳು ಸಾಮಾನ್ಯವಾಗಿರುತ್ತದೆ. ಅದರ ಉದ್ದೇಶ ಕಾರ್ಯ ತತ್ಪರತೆ ಬಹಳ ಮುಖ್ಯವಾಗಿದ್ದು ದೃಢ ಸಂಕಲ್ಪವಿದ್ದರೆ ಎಲ್ಲಾ ಸಂಘಟನೆಗಳು ಯಶಸ್ಸು ಪಡೆಯಲು ಸಾದ್ಯ ಎಂದು ಹೇಳಿದರು. ಹವ್ಯಕ ಸಭಾ ಅಧ್ಯಕ್ಷ ಮಕ್ಕಿ ದೇವಸ್ಥಾನ ನಾಗರಾಜ ಭಟ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಉಪ್ಪುಂದ ಶ್ರೀ ದುರ್ಗಪರಮೇಶ್ವರೀ ದೇವಸ್ಥಾನ ಉಪಾದಿವಂತ ಅರ್ಚಕ ಯು. ಶಂಕರನಾರಾಯಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಅಂಬೇಡ್ಕರ್ ಅವರ ಬದುಕು ಹೋರಾಟ ಮತ್ತು ಸಾಧನೆ ಜಗತ್ತಿನ ಪ್ರತಿಯೊಬ್ಬರಿಗೂ ಪ್ರೇರಣೆ ನೀಡುವಂತದ್ದು ಈ ನಿಟ್ಟಿನಲ್ಲಿ ಅವರ ಬದುಕನ್ನು ಪ್ರತಿಯೊಬ್ಬರು ಅಧ್ಯಯನ ಮಾಡುವ ಅಗತ್ಯವಿದೆ ಎಂದು  ಲೇಖಕ ಮತ್ತು ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಅಭಿಪ್ರಾಯ ಪಟ್ಟರು.  ಅವರು ಭಾರತ ಸರ್ಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ಮೈ ಭಾರತ್ ನೆಹರು ಯುವ ಕೇಂದ್ರ ಉಡುಪಿ, ಡಾ. ಬಿ. ಆರ್ ಅಂಬೇಡ್ಕರ್ ಯುವಕ ಮಂಡಲ, ಅಮೃತ ಯುವತಿ ಮಂಡಲ ಮತ್ತು  ಅರ್ಚನಾ ಮಹಿಳಾ ಮಂಡಲಗಳ ಸಂಯುಕ್ತ ಆಶ್ರಯದಲ್ಲಿ ಮೇಲ್ ಗಂಗೊಳ್ಳಿಯಲ್ಲಿ ನಡೆದ ಡಾ. ಬಿ.ಆರ್ ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.  ಸಂವಿಧಾನ ನಿರ್ಮಾಣ ಮತ್ತು ದಲಿತೋದ್ಧಾರದ ಆಚೆಗೂ ಅಂಬೇಡ್ಕರ್ ಜೀವನದ ಸಾಧನೆಗಳು ಬಹಳಷ್ಟು ಇವೆ. ಅವರ ರಾಷ್ಟ್ರೀಯ ಚಿಂತನೆಗಳು ಮಾನವತಾವಾದ, ಸಾಮಾಜಿಕ ಮತ್ತು ಆರ್ಥಿಕ ಚಿಂತನೆಗಳನ್ನು, ಬಹುಮುಖಿ ಕೆಲಸಗಳನ್ನು ವಿವರವಾಗಿ ಪರಿಚಯಿಸುವ ಕೆಲಸ ಹೆಚ್ಚು ಆಗಬೇಕಿದೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ ಮತ್ತು ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಅಂಬೇಡ್ಕರ್ aವರ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡುವುದರ ಮೂಲಕ ಮಹಾ ನಾಯಕನಿಗೆ ನಮನವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಉಪನ್ಯಾಸಕರಾದ ವಿನಾಯಕ ಜೋಗ್‌ ಅವರು ಅಂಬೇಡ್ಕರ್ ಅವರ ಹೋರಾಟ, ಸಾಧನೆ ಮತ್ತು ಸಂವಿಧಾನ ರಚನೆಯಲ್ಲಿ ಅವರ ಪಾತ್ರದ ಕುರಿತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತುಗಳನ್ನಾಡಿದರು. ಈ ಸಂದರ್ಭದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕರಾದ ಸಂತೋಷ್ ನಿರೂಪಿಸಿ, ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್‌ ರಿಪೇರಿ & ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಏಪ್ರಿಲ್‌ 17 ರಿಂದ ಪ್ರಾರಂಭವಾಗಲಿದ್ದು, ರಾಜ್ಯದ ವಿವಿಧ ಜಿಲ್ಲೆಗಳ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: “ಪ್ರಪಂಚದ ಬೇರೆ ಬೇರೆ ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ, ಅಲ್ಲಿಯ ಒಳ್ಳೆಯ ಅಂಶಗಳನ್ನು ಭಾರತದ ಸಂವಿಧಾನದಲ್ಲಿ ಅಳವಡಿಸಿದ ಡಾ. ಬಿ. ಆರ್. ಅಂಬೇಡ್ಕರ್ ಅವರದ್ದು ಮಹಾನ್ ವ್ಯಕ್ತಿತ್ವ. ಸಮಾಜದಲ್ಲಿ ವರ್ಗಸಮತೋಲನ ಸಾಧಿಸುವ ಸಲುವಾಗಿ ಅವರು ಜಾರಿಗೆ ತಂದ ಮೀಸಲಾತಿ ಸೌಲಭ್ಯವನ್ನು ಇನ್ನೂ ಅರ್ಥಪೂರ್ಣವಾಗಿ ಅನುಷ್ಠಾನಗೊಳಿಸುವ ಅಗತ್ಯವಿದೆ ” ಎಂದು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟಿ ಹೇಳಿದರು. ಅವರು ಕಾಲೇಜಿನಲ್ಲಿ ಹಮ್ಮಿಕೊಂಡ ಅಂಬೇಡ್ಕರ್ ಜಯಂತಿ ಆಚರಣೆಯ ಅಂಗವಾಗಿ ಮಾತನಾಡಿದರು . ಕಾರ್ಯಕ್ರಮವನ್ನು ನಿರ್ವಹಿಸಿದ ಕನ್ನಡ ವಿಭಾಗದ ಮುಖ್ಯಸ್ಥರಾದ ಕೃಷ್ಣಮೂರ್ತಿ ಡಿ.ಬಿ ಅವರು ಅಂಬೇಡ್ಕರ್ ಅವರ ಬದುಕಿನಲ್ಲಿದ್ದ ಕಠಿಣ ಸವಾಲುಗಳು ಮತ್ತು ಅವುಗಳನ್ನು ಅವರು ಸಮರ್ಥವಾಗಿ ನಿಭಾಯಿಸಿ ಯಶಸ್ವಿ ಮೈಲಿಗಲ್ಲುಗಳನ್ನು ಸಾಧಿಸಿದ ಬಗ್ಗೆ ವಿವರಿಸಿದರು. ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ‌  ಸಂದರ್ಭದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಛಾಯಾಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. 

Read More

 ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗ ಹಾಗೂ ಐಟಿ ಎಸೋಸಿಯೇಷನ್ ನ ಜಂಟಿ ಆಶ್ರಯದಲ್ಲಿ ಸೈಬರ್ ಸೆಕ್ಯೂರಿಟಿಯಲ್ಲಿ ಎಐ ಬಳಕೆ ಕುರಿತು ಕಾಲೇಜಿನ ಮೂಕಾಂಬಿಕ ಸಭಾಂಗಣದಲ್ಲಿ ಬಿಸಿಎ ವಿಭಾಗದ ವಿದ್ಯಾರ್ಥಿಗಳಿಗೆ ಕಾರ್ಯಾಗಾರ ಆಯೋಜಿಸಲಾಯಿತು.  ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಮಣಿಪಾಲ ಎಂಐಟಿಯ ಎಲೆಕ್ಟ್ರಾನಿಕ್ ಹಾಗೂ ಕಮ್ಯುನಿಕೇಷನ್ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಯಶವಂತ್ ಎನ್. ಅವರು ಮಾತನಾಡಿ, ವರ್ತಮಾನ ಕಾಲಘಟ್ಟದಲ್ಲಿ ಸಮಾಜದಲ್ಲಿ ನಡೆಯುವ ಅದೆಷ್ಟೋ ವಂಚನೆಗಳನ್ನು ಭವಿಷ್ಯದಲ್ಲಿ ಎಐ ಮೂಲಕ ಸಮರ್ಥವಾಗಿ ಕಂಡುಹಿಡಿದು ಸಾಮಾಜಿಕ ಭದ್ರತೆ ಕಾಪಾಡಬಹುದು ಎಂದರು.  ಕಾಲೇಜಿನ ಉಪ ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸ್ತುತ ಕಾಲಮಾನಕ್ಕೆ ತಕ್ಕಂತೆ ಕಾಲೇಜಿನ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಸೈನ್ಸ್ ಜೊತೆ ಸೈಬರ್ ಸೆಕ್ಯೂರಿಟಿ ಮತ್ತು ಎಐ ಬೋಧಿಸಲಾಗುತ್ತಿದೆ. ಜೊತೆಗೆ ನಿರಂತರವಾಗಿ ಇಂತಹ ವಿಶೇಷ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು. ಗಣಕವಿಜ್ಞಾನ ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಪ್ರಾಸ್ತಾವಿಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕಾಲೇಜುಗಳ ಸ್ವಾಯತ್ತ ಸ್ಥಾನಮಾನವು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿದ್ದು, ಆಳ್ವಾಸ್ (ಸ್ವಾಯತ್ತ) ಕಾಲೇಜು ವಿಶಿಷ್ಟವಾಗಿ ತನ್ನ ಶೈಕ್ಷಣಿಕ ಕಾರ್ಯಕ್ರಮಗಳನ್ನು  ಪಠ್ಯಕ್ರಮ, ಉದ್ಯಮ ಹಾಗೂ ಕೌಶಲ ಆಧಾರಿತವಾಗಿ ವಿದ್ಯಾರ್ಥಿ ಹಾಗೂ ಸಮುದಾಯಿಕ ಅವಶ್ಯಕತೆಗೆ ತಕ್ಕಂತೆ   ಅನು?ನಗೊಳಿಸುತ್ತಿದೆ ಎಂದು ಆಳ್ವಾಸ್ (ಸ್ವಾಯತ್ತ) ಕಾಲೇಜು ಪ್ರಾಂಶುಪಾಲ ಡಾ.ಕುರಿಯನ್ ಹೇಳಿದರು. ಕಾಲೇಜಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಹುಶಿಸ್ತೀಯ ಅಧ್ಯಯನ ಹೊಂದಿದ ಕಾಲೇಜುಗಳಿಗೆ ಸರ್ಕಾರ ಸ್ವಾಯತ್ತ ಸ್ಥಾನಮಾನ ನೀಡುತ್ತಿದೆ. ’ಸ್ವಾಯತ್ತ’ ಎಂದರೆ ಕೇವಲ ಆಡಳಿತ ವ್ಯವಸ್ಥೆಯಲ್ಲಿ ಮಾತ್ರ ಬದಲಾವಣೆ ಅಲ್ಲ, ಅದು ಪಠ್ಯಕ್ರಮ ಸೇರಿದಂತೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಎಂದರು. ಪ್ರಸ್ತುತ ಕಾಲಮಾನಕ್ಕೆ ತಕ್ಕಂತೆ ಶೈಕ್ಷಣಿಕ ಪಠ್ಯಕ್ರಮ ಆಧರಿತ ವ್ಯವಸ್ಥೆಯನ್ನು ರೂಪಿಸಲಾಗಿದೆ. ಪದವಿ ಜೊತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ನೇರವಾಗಿ ಸಿದ್ಧರಾಗುತ್ತಾರೆ. ವಿದ್ಯಾರ್ಥಿಗಳ ಸೈದ್ಧಾಂತಿಕ (ಥಿಯರಿ) ಕಲಿಕೆ ಜೊತೆ ಪ್ರಾಯೋಗಿಕ ಕಲಿಕೆ ಹೆಚ್ಚಾಗಿದೆ. ಅಂತರಶಿಸ್ತೀಯ ಅಧ್ಯಯನದ ಮೂಲಕ ಆನ್ವಯಿಕವಾಗಿ ಕಲಿಯುವ ಕಾರಣ ಮಾರುಕಟ್ಟೆಯಲ್ಲಿ ಔದ್ಯಮಿಕ ಹಾಗೂ ಔದ್ಯೋಗಿಕ ಅವಕಾಶ ಹೆಚ್ಚಲಿದೆ ಎಂದರು. ಶೈಕ್ಷಣಿಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಕಾಳಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಕ್ವಾಡಿ ಗ್ರಾಮದ ತೆಂಕಬೆಟ್ಟುವಿನಲ್ಲಿ ವಾರಾಹಿ ನಾಲೆಯಿಂದ ಹೊಳೆಗೆ ಹರಿದು ಬರುತ್ತಿರುವ ನೀರಿಗೆ ಏತ ನೀರಾವರಿ ಮೂಲಕ ಇಂಗು ಗುಂಡಿಗೆ ಮತ್ತು ಪೈಪ್ ಲೈನ್ ಮೂಲಕ ಮನೆ ಮನೆಗೆ ಕುಡಿಯುವ ನೀರು, ಬಾವಿಗಳಿಗೆ ನೀರು ಹರಿಸುವ ಎರಡನೇ ಹಂತದ ಖಾಸಗಿ ಯೋಜನೆಗೆ ರವಿವಾರ ಚಾಲನೆ ನೀಡಲಾಯಿತು. ಕುಂಭಾಸಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇಗುಲದ ವ್ಯವಸ್ಥಾಪಕರಾದ ರಾಜಶೇಖರ್ ಹೆಗ್ಡೆ ಚಾಲನೆ ನೀಡಿ, ಅವರು ಮಾತನಾಡಿ, ಸಹಬಾಳ್ವೆ ಒಗ್ಗಟ್ಟಿನಿಂದ ಹೋರಾಟ ಮಾಡಿದರೆ ಏನನ್ನು ಬೇಕಾದರೂ ಸಾಧಿಸಬಹುದು. ಆ ನಿಟ್ಟಿನಲ್ಲಿ ವಕ್ವಾಡಿ ತೆಂಕಬೆಟ್ಟು ಪರಿಸರದವರು ವಾರಾಹಿ ನೀರನ್ನು ಸದ್ಬಳಕೆ ಮಾಡಿಕೊಂಡು ಪ್ರತಿ ಮನೆ ಮನೆಯ ಬಾವಿಗೆ ನೀರು ಹರಿಸುವ ಮಹತ್ವಪೂರ್ಣವಾದ ಯೋಜನೆ ಇದಾಗಿದ್ದು, ಇದು ಕೇವಲ ಮನುಷ್ಯರಿಗೆ ಮಾತ್ರವಲ್ಲದೆ ಪ್ರಾಣಿ, ಪಕ್ಷಿ, ಗಿಡಮರಗಳಿಗೂ ಪ್ರಯೋಜನಕಾರಿಯಾಗಿದ್ದು, ಇದೊಂದು ಮಹಾನ್ ಪುಣ್ಯದ ಕೆಲಸ ಎಂದು ಶುಭ ಹಾರೈಸಿದರು. ಚಂದ್ರಶೇಖರ್ ಶೆಟ್ಟಿ, ಗಣೇಶ್ ಶೆಟ್ಟಿ, ಶಂಕರ್ ಶೆಟ್ಟಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪ್ಲಾಸ್ಟಿಕ್ ಯಾವತ್ತು ಈ ಭೂಮಿಯ ಮೇಲೆ ಹುಟ್ಟಿಕೊಂಡಿತು ಆ ದಿನಗಳಿಂದ ಇಲ್ಲಿಯವರೆಗೆ ಭೂ ಭಾಗಕ್ಕೆ ಕಂಠಕವಾಗಿ ಪರಿಣಮಿಸಿದೆ. ಇದು ಮನುಕುಲದ ನಿದ್ದೆಗೆಡಿಸುತ್ತಿದೆ. ಮನುಷ್ಯನಿಂದಲೇ ಸೃಷ್ಠಿ ಮನುಕುಲಕ್ಕೆ ಆಪತ್ತು ಸೃಷ್ಠಿಸುವ ಪ್ಲಾಸ್ಟಿಕ್ ಇಂದು ಜಲಮಾತೆಯನ್ನು ಬೆಂಬಿಡದ ಭೂತದಂತೆ ನದಿ ಸಮುದ್ರ ಜಲಚರ ಜೀವಿಗಳಿಗೆ ಸಂಕಷ್ಟವನ್ನು ತಂದದೊಡ್ಡಿದೆ ಇದರ ಬಗ್ಗೆ ಜಾಗೃತರಾಗದಿದ್ದರೆ ಭವಿಷ್ಯದಲ್ಲಿ ಕ್ಲಿಷ್ಟಕರ ದಿನಗಳನ್ನುಎದುರು ನೋಡುವಂತ್ತಾಗಿದೆ ಎಂದು ಅರಣ್ಯ ಇಲಾಖೆ ಉಡುಪಿ ವಲಯ ಇದರ ಅಧಿಕಾರಿ ಮಲ್ತೇಶ್ ಅಳಲಗಿರಿ ಕಿವಿಮಾತು ಹೇಳಿದರು. ಅವರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಪಂಚವರ್ಣ ಹಂದಟ್ಟು ಮಹಿಳಾ ಬಳಗ, ಮಣೂರು ಫ್ರೆಂಡ್ಸ್, ಜೆಸಿಐ ಸಿನಿಯರ್ ಕೋಟ ಲಿಜನ್, ಕೋಟತಟ್ಟು ಗ್ರಾ.ಪಂ ಸಹಭಾಗಿತ್ವದಲ್ಲಿ ಅರಣ್ಯ ಇಲಾಖೆ ಉಡುಪಿ ವಲಯ ಸಂಯೋಜನೆಯೊಂದಿಗೆ ಕೋಟತಟ್ಟು ಪಡುಕರೆ ಬೀಚ್‌ನಲ್ಲಿ 250ನೇ ಭಾನುವಾರದ ಸ್ವಚ್ಛತಾ ಅಭಿಯಾನದಲ್ಲಿ ಸ್ವಚ್ಛತಾ ಸಂದೇಶ ನೀಡಿ ಮಾತನಾಡಿದರು. ಪಂಚವರ್ಣದಂತ ಸಂಸ್ಥೆಗಳು ಈ ವ್ಯವಸ್ಥೆಯಲ್ಲಿ ಗಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದ್ವಿತೀಯ ಪಿಯುಸಿ ಹಾಗೂ ಎಲ್ಲಾ ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯುನ್ನತ ಫಲಿತಾಂಶಗಳ ಮೂಲಕ ರಾಜ್ಯದ ಗಮನ ಸೆಳೆದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸಮಾಜದ ಎಲ್ಲಾ ಸ್ತರದ ವಿದ್ಯಾರ್ಥಿಗಳಿಗೂ ಉನ್ನತ ವ್ಯವಸ್ಥೆಯಡಿಯಲ್ಲಿ ಹೈಟೆಕ್ ಸೌಲಭ್ಯದೊಂದಿಗೆ ಪಿ. ಯು. ಶಿಕ್ಷಣ ಹಾಗೂ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ದೊರಕಿಸಿಕೊಡಬೇಕೆಂಬ ಮಹಾದಾಸೆಯಿಂದ ‘ಕ್ರಿಯೇಟಿವ್ ಹೊಂಗಿರಣ’ ಯೋಜನೆಯನ್ನು ರೂಪಿಸುತ್ತಿದೆ. ಈ ಯೋಜನೆಯಡಿಯಲ್ಲಿ 100 ಅರ್ಹ ವಿದ್ಯಾರ್ಥಿಗಳು ಕ್ರಿಯೇಟಿವ್ ಸಂಸ್ಥೆಯ ಉಡುಪಿ ಶಾಖೆಯಲ್ಲಿ ಸಂಪೂರ್ಣ ಉಚಿತ ಶಿಕ್ಷಣ ಅಥವಾ ಪ್ರೋತ್ಸಾಹ ಧನದೊಂದಿಗೆ ಪಿ. ಯು ಶಿಕ್ಷಣ ಪಡೆಯುವ ಅವಕಾಶವಿರುತ್ತದೆ. ಈ ಯೋಜನೆಗೆ ವಿಜ್ಞಾನ ವಿಭಾಗ ಸೇರಲಿಚ್ಛಿಸುವ ಯಾವುದೇ ವಿದ್ಯಾರ್ಥಿ www.creativeedu.in ಮುಖಾಂತರ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳ ಸಾಧಿಸುವ ಛಲಕ್ಕೆ ಬೆನ್ನೆಲುಬಾಗಿ ನಿಂತಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಸಾಧನೆ ಮಾಡುವ ಹಂಬಲ ಇರುವ ವಿದ್ಯಾರ್ಥಿಗಳಿಗೆ ಸದಾ ಮಾರ್ಗದರ್ಶನ ನೀಡುತ್ತಿದೆ. ಪೋಷಕರ ಹಾಗೂ ಪಾಲಕರ ಭರವಸೆಯನ್ನು ಈಡೇರಿಸುವಲ್ಲಿ ನಿರಂತರ ಶ್ರಮಿಸುತ್ತಿರುವ ವಿದ್ಯಾ ಸಂಸ್ಥೆಯಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: +919606474298

Read More