Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಲೇಖನ.ಬೆಳಗ್ಗೆ ಹೊಟ್ಟೆ ತುಂಬಾ ತಿಂದ್ರೂ ಕೆಲವೊಬ್ಬರಿಗೆ ಕಾಲೇಜು, ಆಫೀಸಿಗೆ ಹೋದ ನಂತರ ಮತ್ತೆ ಹಸಿವಾಗುತ್ತೆ. ಆದ್ರೆ ಸಮಯದ ಅಭಾವದಿಂದ ಆಗ ತಿನ್ನಲಾಗದೆ ಹಸಿವಿನಿಂದಲೇ ಇರಬೇಕಾಗಬಹುದು. ಇಂಥಹ ಸಂದರ್ಭದಿಂದ ತಪ್ಪಿಸಿಕೊಳ್ಳಲು ಈ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ಅತಿಯಾದ ಹಸಿವನ್ನು ನಿಯಂತ್ರಿಸಬಹುದು ಎನ್ನುತ್ತಾರೆ ಆಹಾರ ತಜ್ಞರು. ಅವುಗಳೆಂದರೆ… ಶುಂಠಿ: ಶುಂಠಿ ಹಸಿವನ್ನು ನಿಯಂತ್ರಿಸುತ್ತದೆ ಹಾಗೂ ಜಂಕ್‌ಫುಡ್ ತಿನ್ನಬೇಕೆಂಬ ಕಡುಬಯಕೆಗಳನ್ನು ಕಡಿಮೆ ಮಾಡಲು ನಮ್ಮ ಹಸಿವನ್ನು ಪೂರೈಸಲು ಸಹಾಯ ಮಾಡುತ್ತದೆ. ಶುಂಠಿ ಹೆಚ್ಚಿನ ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನು ಹೊಂದಿ ಕೊಲೆಸ್ಟ್ರಾಲ್ ಮತ್ತು ಗ್ಯಾಸ್ಟ್ರಿಕ್ ಸ್ರವಿಸುವಿಕೆಯನ್ನು ಕಡಿಮೆ ಮಾಡುತ್ತದೆ. ಓಟ್ಸ್‌: ಓಟ್ಸ್‌ ಒಂದು ವಿಶಿಷ್ಟ ರೀತಿಯ ಕರಗುವ ಫೈಬರ್, ಬೀಟಾ-ಗ್ಲುಕಾನ್ಸ್ ಅನ್ನು ಹೊಂದಿರುತ್ತದೆ. ಓಟ್ಸ್‌ ಹೊಟ್ಟು ಕಡಿಮೆ ಕ್ಯಾಲೋರಿಗಳನ್ನು ಹೊಂದಿದೆ ಮತ್ತು ನಾರಿನಂಶವನ್ನು ಹೊಂದಿರುತ್ತದೆ. ಇದು ನೀರನ್ನು ಹೀರಿಕೊಳ್ಳುತ್ತದೆ ಮತ್ತು ಜೀರ್ಣಕ್ರಿಯೆಯ ಸಮಯದಲ್ಲಿ ಪರಿಮಾಣವನ್ನು ಹೆಚ್ಚಿಸುತ್ತದೆ, ಹೀಗಾಗಿ ನಿಮಗೆ ಪೂರ್ಣತೆಯ ಭಾವನೆಯನ್ನು ನೀಡುತ್ತದೆ. ಇದು ಕರುಳಿನಿಂದ ಕ್ಯಾಲೊರಿಗಳನ್ನು ಹೀರಿಕೊಳ್ಳುವುದನ್ನು ಕಡಿಮೆ ಮಾಡುತ್ತದೆ, ಇದು ರಕ್ತದಲ್ಲಿನ …

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ,ಎ.05: ತಾಲೂಕಿನ ಮುಳ್ಳಿಕಟ್ಟೆ ಜಂಕ್ಷನ್‌ನಲ್ಲಿ ರಿಕ್ಷಾ – ಕಾರು ಢಿಕ್ಕಿಯಾಗಿ ರಿಕ್ಷಾ ಪಲ್ಟಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ರಿಕ್ಷಾ ಚಾಲಕ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಇಂದು ಬೆಳಿಗ್ಗೆ ನಡೆದಿದೆ. ರಿಕ್ಷಾ ಚಾಲಕ ಗೋಪಾಲ ಅವರ ತಲೆ, ಮುಖ, ಎದೆ ಹಾಗೂ ಕಾಲಿಗೆ ಬಲವಾದ ಏಟು ಬಿದ್ದಿದ್ದು, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬೆಳಿಗ್ಗೆ ಮೃತಪಟ್ಟಿರುವುದಾಗಿ ಮೂಲಗಳು ತಿಳಿಸಿವೆ. ಮುಳ್ಳಿಕಟ್ಟೆ ಜಂಕ್ಷನ್‌ನಲ್ಲಿ ಗುರುವಾರ ಸಂಜೆ 7 ಗಂಟೆಯ ಸುಮಾರಿಗೆ ನಡೆದಿದ್ದು, ರಿಕ್ಷಾ ಚಾಲಕ ಗೋಪಾಲ ಹಾಗೂ ಕಾರಿನಲ್ಲಿದ್ದ ಚಂದ್ರ ಎಂಬ ಇಬ್ಬರು ಗಾಯಗೊಂಡಿದ್ದರು. ಗೋಪಾಲ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು,  ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಬಗ್ಗೆ ಗಂಗೊಳ್ಳಿ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕ್ರೀಡೆಯಲ್ಲಿ ಸಕ್ರಿಯರಾಗುವ ಮೂಲಕ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ಹೇಳಿದರು. ಅವರು ನಗರದ ಸ್ವರಾಜ್ ಮೈದಾನದಲ್ಲಿ ಶುಕ್ರವಾರ ನಡೆದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಂಸ್ಥೆಗಳ ’ಕ್ರೀಡಾ ದಿನಾಚರಣೆʼಯಲ್ಲಿ ಮಾತನಾಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರು ಸಂಘಟಿಸುವ ಕಾರ್ಯಕ್ರಮ ಶಿಸ್ತು ಮತ್ತು ಅನನ್ಯತೆಗೆ ಸಾಕ್ಷಿಯಾಗಿರುತ್ತದೆ ಎಂದರು. ಇದು ಜೀವನದಲ್ಲಿ ನಾನು ಕಂಡ ಅನನ್ಯ ಕಾರ್ಯಕ್ರಮ ಎಂದು ಶ್ಲಾಘಿಸಿದರು. ರಾಷ್ಟ್ರ ಮಟ್ಟದ ಕ್ರೀಡೆಯಲ್ಲಿ ಸಾಧನೆ ಮಾಡಿದ ಪ್ರತಿಷ್ಠಾನದ ಎಂಟು ವಿದ್ಯಾರ್ಥಿಗಳು ಕ್ರೀಡಾ ಜ್ಯೋತಿಯನ್ನು ತಂದು, ಏಕಲವ್ಯ ಪ್ರಶಸ್ತಿ ಪುರಸ್ಕೃತ, ಅಂತರರಾಷ್ಟ್ರೀಯ ಕ್ರೀಡಾಪಟು, ಕಾಲೇಜಿನ ಹಿರಿಯ ವಿದ್ಯಾರ್ಥಿ ಪೊಲೀಸ್ ಉಪ ನಿರೀಕ್ಷಕ ಅಭಿಷೇಕ ಎನ್. ಶೆಟ್ಟಿ ಅವರಿಗೆ ಹಸ್ತಾಂತರಿಸಿ, ಕ್ರೀಡಾ ಜ್ಯೋತಿ ಬೆಳಗಲಾಯಿತು. ವಿದ್ಯಾರ್ಥಿನಿ ವೀಕ್ಷಿತಾ ರಾಮಕೃಷ್ಣ ಗೌಡ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು. ಆಳ್ವಾಸ್ ಶಿಕ್ಷಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಟ್ಟಿನಮಕ್ಕಿ ಶ್ರೀ ಮಹಾಲಿಂಗೇಶ್ವರ ಕಲಾ ಸಂಘದ 7ನೇ ವಾರ್ಷಿಕೋತ್ಸವದ ಪ್ರಯುಕ್ತ ಕ್ರೀಡಾಕೂಟವು ಇತ್ತೀಚಿಗೆ ನಡೆಯಿತು. ಉದ್ಯಮಿ ಚಿತ್ತರಂಜನ್ ಹೆಗ್ಡೆ ಹರ್ಕೂರು ಕ್ರೀಡಾಕೂಟ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಟ್ಟಿನಮಕ್ಕಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಶ್ರೀಧರ್ ಪುರಾಣಿಕ್, ಆಲೂರು ಗ್ರಾಮ ಪಂಚಾಯತ್ ಸದಸ್ಯರಾದ ಪ್ರಮೋದಾ ಕುಶಲ ಶೆಟ್ಟಿ, ರಾಜೇಂದ್ರ ದೇವಾಡಿಗ, ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಗೀತಾ ರವೀಂದ್ರ ದೇವಾಡಿಗ, ಕಲಾ ಸಂಘದ ಅಧ್ಯಕ್ಷ ರಾಘವೇಂದ್ರ ಆಚಾರ್ಯ ಕಟ್ಟಿನಮಕ್ಕಿ ಉಪಸ್ಥಿತರಿದ್ದರು. ತೀರ್ಪುಗಾರರಾಗಿ ನಿವೃತ್ತ ಶಿಕ್ಷಕ ನಾಗೇಶ ಶಾನುಭಾಗ್, ಶಿಕ್ಷಕರಾದ ಗಿರಿಜ, ಉದಯ ಆಚಾರ್ ಸಹಕರಿಸಿದ್ದರು. ಕಾರ್ಯಕ್ರಮವನ್ನು ಶಿಕ್ಷಕ ಆದರ್ಶ ಕಟ್ಟಿನಮಕ್ಕಿ ನಿರ್ವಹಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜಿಲ್ಲೆಯ ಅರ್ಧ ಭಾಗಕ್ಕಿಂತ ಹೆಚ್ಚು ಭಾಗದ ಜನರು ಮಾತನಾಡುವ ಕುಂದಾಪ್ರ ಕನ್ನಡ ಭಾಷೆಗೆ ಸುದೀರ್ಘವಾದ ಇತಿಹಾಸವಿದೆ. ಈ ಭಾಷೆಗೆ ಸೊಗಡಿದೆ, ಸಂಸ್ಕೃತಿ ಇದೆ. ನಮ್ಮ ಅಬ್ಬಿ ( ತಾಯಿ ) ಭಾಷಿಯ ಹಿರಿತನ ಹಾಗೂ ಪರಂಪರೆಯನ್ನು ಉಳಿಸಿ-ಬೆಳೆಸುವ ಕೆಲಸ, ಕುಂದಾಪ್ರ ಕನ್ನಡ ಮಾತನಾಡುವ ಪ್ರತಿಯೊಬ್ಬರಿಂದಲೂ ಆಗಬೇಕು ಎಂದು ಮಂಗಳೂರು ವಿ.ವಿಯ ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಸಲಹಾ ಸಮಿತಿಯ ಸದಸ್ಯ, ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು. ಅವರು ಹೋಟೇಲ್ ಯುವಮನೀಶ್ ಸಭಾಂಗಣದಲ್ಲಿ ಗುರುವಾರ ಸಂಜೆ ಮಂಗಳೂರು ವಿ.ವಿ ಯ ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಆಶ್ರಯದಲ್ಲಿ ಆಯ್ದ ಸಂಘಟನೆಗಳ ಪ್ರತಿನಿಧಿಗಳ ಕುಂದಾಪ್ರ ಭಾಷಿಕರೊಂದಿಗೆ ನಡೆದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾಷಾ ಅಧ್ಯಯನ ಜೊತೆಯಲ್ಲಿ ಸಂಸ್ಕೃತಿ ಹಾಗೂ ಪರಂಪರೆಯ ಅಧ್ಯಯನಗಳು ನಡೆಯಬೇಕು. ಅಧ್ಯಯನ ಪೀಠಗಳು ಕೇವಲ ವಿಶ್ವ ವಿದ್ಯಾಲಯದ ಆವರಣಕ್ಕೆ ಸೀಮಿತವಾಗದೆ, ಭಾಷೆಯನ್ನು ಮಾತನಾಡುವ ಭಾಷಿಕರೊಂದಿಗೆ ಮುಕ್ತವಾಗಿ ಅಭಿಪ್ರಾಯ ವಿನಿಮಯ ಮಾಡಿಕೊಂಡಾಗ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಬೈಂದೂರು ಇದರ ಪ್ರಧಾನ ಕಛೇರಿಯಲ್ಲಿ ಆರಂಭಿಸಲಾದ ಇ –ಸ್ಟಾಂಪ್‌ ಪೇಪರ್ ಸೌಲಭ್ಯವನ್ನು ಶುಕ್ರವಾರ ಸಂಸ್ಥೆಯ ಅಧ್ಯಕ್ಷರು‌ ಹಾಗೂ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಅವರು ಉದ್ಘಾಟಿಸಿದರು. ವೇಳೆ ನಿರ್ದೇಶಕರಾದ ಎಸ್. ರಾಜು ಪೂಜಾರಿ, ಕೆ. ಶಂಕರ ಪೂಜಾರಿ, ಚಿಕ್ಕು ಪೂಜಾರಿ, ಯು. ಕೇಶವ ಪೂಜಾರಿ, ಕಲ್ಪನಾ ಭಾಸ್ಕರ್, ಉದಯ ಜಿ. ಪೂಜಾರಿ, ಶೇಖರ ಪೂಜಾರಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣೇಶ್ ಬಿ. ಪೂಜಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಟ್ಟಿನಮಕ್ಕಿ ಶ್ರೀ ಮಹಾಲಿಂಗೇಶ್ವರ ಕಲಾ ಸಂಘದ 7ನೇ ವಾರ್ಷಿಕೋತ್ಸವವು ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಇತ್ತೀಚಿಗೆ ಜರುಗಿತು. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಕಾರ್ಯಕ್ರಮ ಉದ್ಘಾಟಿಸಿ, ಕಟ್ಟಿನಮಕ್ಕಿ ಈ ಭಾಗದ ಪ್ರಮುಖ ಸಮಸ್ಯೆಯ ಬಗ್ಗೆ ಅರಿವಿದ್ದು ವಿವಿಧ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಪರಿಹಾರೋಪಾಯದ ಮಾರ್ಗದ ಕುರಿತು ಚಿಂತಿಸುವುದಾಗಿ ತಿಳಿಸಿ, ಕಲಾ ಸಂಘದ ಪ್ರಯತ್ನಗಳನ್ನು ಮತ್ತು ಕಾರ್ಯಕ್ರಮಗಳನ್ನು ಶ್ಲಾಘಿಸಿದರು. ಆಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ್ ಎನ್. ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿದ್ದ ಉದ್ಯಮಿ ಚಿತ್ತರಂಜನ್ ಹೆಗ್ಡೆ ಹರ್ಕೂರು, ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಯ್ಯ ಆಚಾರ್ ಕಳಿ, ಆಲೂರು ಹರ್ಕೂರು ವ್ಯ.ಸೇ.ಸ.ಬ್ಯಾಂಕ್ ಅಧ್ಯಕ್ಷ ಎಚ್. ಮಂಜಯ್ಯ ಶೆಟ್ಟಿ ಹರ್ಕೂರು, ಆಲೂರು ಗ್ರಾಮ ಪಂಚಾಯತ್ ಸದಸ್ಯರಾದ ಪ್ರಮೋದ ಕುಶಲ ಶೆಟ್ಟಿ, ಕಲಾ ಸಂಘದ ಅಧ್ಯಕ್ಷ ರಾಘವೇಂದ್ರ ಆಚಾರ್ಯ ಉಪಸ್ಥಿತರಿದ್ದರು. ರಾಜೇಂದ್ರ ದೇವಾಡಿಗ ಅವರು ಶುಭ ಹಾರೈಸಿದರು. ಪ್ರತಿಭಾನ್ವಿತ ವಿದ್ಯಾರ್ಥಿಗಳಾದ ವಿಖ್ಯಾತ ದೇವಾಡಿಗ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬಸ್ರೂರು ಶ್ರಿ ಶಾರದಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವು ಉಳ್ಳೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರದಂದು ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬ್ರಾಹ್ಮೀ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಮಲಶಿಲೆ ಇದರ ಧರ್ಮದರ್ಶಿಗಳಾದ ಎಸ್. ಸಚ್ಚಿದಾನಂದ ಚಾತ್ರ ಅವರು ಸ್ಪೂರ್ತಿದಾಯಕ ಭಾಷಣ ಮಾಡಿ, ಸಾಮಾಜಿಕ ಆರ್ಥಿಕ ಸವಾಲುಗಳನ್ನು ಎದುರಿಸುವಲ್ಲಿ ಎನ್.ಎಸ್.ಎಸ್.ನ ಮಹತ್ವವನ್ನು ಒತ್ತಿ ಹೇಳಿದರು. ಜೊತೆಗೆ ಸಮಾಜದ ಕಲ್ಯಾಣಕ್ಕೆ ಕೊಡುಗೆ ನೀಡುವಂತೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು. ಉಳ್ಳೂರು ಶ್ರೀ ಬನಶಂಕರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸಂಪಿಗೇಡಿ ಸಂಜೀವ ಶೆಟ್ಟಿ ಮಾತನಾಡಿ, ಎನ್.ಎಸ್.ಎಸ್. ಘಟಕ ಸ್ವಚ್ಚತೆ, ನೈರ್ಮಲ್ಯ ಸಮಯಪಾಲನೆ, ವ್ಯಕ್ತಿತ್ವ ವಿಕಸನಕ್ಕೆ ಬೇಕಾಗುವ ಕೌಶಲ್ಯಗಳ ಬಗ್ಗೆ ತಿಳಿಸುತ್ತಾ ತಮ್ಮ ಕಾಲೇಜು ಜೀವನದ ಬಗ್ಗೆ ಮೆಲುಕು ಹಾಕಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಅವರು ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಕೆ. ರಾಧಾಕೃಷ್ಣ ಶೆಟ್ಟಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶುಭದಾ ಆಂಗ್ಲ ಮಾಧ್ಯಮ ಶಾಲೆಯನ್ನು ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ ಎಂದು ಪುನರ್ ನಾಮಕರಣ ಮಾಡಲಾಗಿದೆ. ಶುಭದಾ ಎಜುಕೇಶನಲ್ ಟ್ರಸ್ಟ್ ನಡೆಸುತ್ತಿರುವ ಶುಭದಾ ಆಂಗ್ಲ ಮಾಧ್ಯಮ ಶಾಲೆಯು 2024-25ನೇ ಶೈಕ್ಷಣಿಕ ವರ್ಷದಿಂದ ನೂತನ‌ ಆಡಳಿತ ಮಂಡಳಿ ಅವರು ಈ ಸಂಸ್ಥೆಯನ್ನು ‌ಮುನ್ನಡೆಸುತ್ತಿರುವುದರಿಂದ ಶಾಲಾ ಹೆಸರು ಜನತಾ ನ್ಯೂ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ ಎಂದು ಬದಲಾಯಿಸಲಾಗಿದೆ ಎಂದು ಶಾಲಾ ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅಂತರ್ – ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಎನ್.ಎಸ್.ಎಸ್. ಉತ್ಸವ ಕ್ಷಿತಿಜದಲ್ಲಿ ಡಾ. ಬಿ.ಬಿ. ಹೆಗ್ಡೆಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಸ್ವಯಂಸೇವಕರು ಸಮಗ್ರ ಪ್ರಶಸ್ತಿ ಪಡೆದರು.  ಸಮೂಹ ಗಾನ, ವೆರೈಟಿ ಡಾನ್ಸ್, ಪೇಸ್ ಪೇಂಟಿಂಗ್ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ಬೀದಿ ನಾಟಕ, ಬೆಸ್ಟ್ ಔಟ್ ಆಫ್ ವೇಸ್ಟ್ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಸಮಗ್ರ ಪ್ರಶಸ್ತಿ ಪಡೆಯಿತು. ಎನ್.ಎಸ್. ಎಸ್. ಸ್ವಯಂಸೇವಕರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ಬಿ.ಎಂ. ಸುಕುಮಾರ ಶೆಟ್ಟಿ, ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ, ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿಗಳಾದ ಡಾ. ಚೇತನ್ ಶೆಟ್ಟಿ ಕೋವಾಡಿ, ದೀಪಾ ಪೂಜಾರಿ, ಬೋಧಕ- ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

Read More