ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಪ್ರಭಾವಿ ಸಂವಹನವೇ ಇಂದಿನ ಸವಾಲು ಮತ್ತು ಅವಶ್ಯಕತೆ. ಭಾರತವು ಅತಿ ವೇಗದಲ್ಲಿ ಬೆಳೆಯುತ್ತಿರುವ ಆರ್ಥಿಕತೆಯಾಗಿದ್ದು, ನಿಮ್ಮ ಕಲಿಕೆಯೇ ಅದರ ವೇಗವರ್ಧಕವಾಗಿದೆ. ಪರೀಕ್ಷೆಯೇ ಕಲಿಕೆಯ ಅಂತ್ಯವಲ್ಲ. ಬದುಕಿನಲ್ಲಿ ಪ್ರತಿನಿತ್ಯ ಕಲಿಕೆ ಅನಿವಾರ್ಯ ಎಂದು ಮಂಗಳೂರಿನ ಇನ್ಫೋಸಿಸ್ ಅಭಿವೃದ್ಧಿ ಕೇಂದ್ರದ ಮುಖ್ಯಸ್ಥ ವಾಸುದೇವ ಕಾಮತ್ ಹೇಳಿದರು. ಅವರು ಇಲ್ಲಿನ ಸುಂದರಿ ಆನಂದ ಆಳ್ವ ಆವರಣದಲ್ಲಿನ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿ ಸಿರಿ) ವೇದಿಕೆಯಲ್ಲಿ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ವಾರ್ಷಿಕೋತ್ಸವವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು. ಕೃತಕಬುದ್ಧಿಮತ್ತೆ (ಎಐ) ಎಂಬುದು ಮಿಥ್ಯೆ ಅಲ್ಲ. ಔದ್ಯೋಗಿಕ ಬದುಕಿನ ಅನಿವಾರ್ಯತೆ. ನೀವು ಉದ್ಯಮಶೀಲತೆಯನ್ನು ಮೈಗೂಡಿಸಿಕೊಂಡು ಯಶಸ್ವಿ ಆಗಬಹುದು. ಕೋಟ್ಯಧಿಪತಿಗಳಾದ ಕರಾವಳಿ ಸಾಧಕರು ಇದ್ದಾರೆ. ನಿಮ್ಮ ಅಂತರಂಗವನ್ನು ಆಲಿಸಿ. ಹೃದಯದ ಮಾತು ಕೇಳಿ, ನಿಮಗೆ ಅತ್ಯುತ್ತಮ ಅವಕಾಶವನ್ನು ’ಆಳ್ವಾಸ್’ನೀಡಿದೆ. ನೀವು ಇತರರಿಗೂ ತಿಳಿಸಿ, ಇತರರ ಏಳ್ಗೆಗೆ ನೆರವಾಗಿ. ಮರಕಲ್ಲಿನ ಬೆಟ್ಟವನ್ನು ಮನಸ್ಸು ಕಟ್ಟುವ ಶೈಕ್ಷಣಿಕ ನೆಲೆಯಾಗಿ ಪರಿವರ್ತಿಸಿದ ಡಾ| ಮೋಹನ ಆಳ್ವ ಅವರ ಸಾಧನೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಪೇಜಾವರ ಅಧೋಕ್ಷಜ ಮಠ ಉಡುಪಿ, ಅಖಿಲ ಭಾರತ ಮಾದ್ವ ಮಹಾಮಂಡಲ, ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನ ಬೆಂಗಳೂರು ಹಾಗೂ ಅನೇಕ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಪೆರಣಂಕಿಲ ಶ್ರೀ ಮಹಾಲಿಂಗೇಶ್ವರ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಲಿರುವ ಶ್ರೀ ರಾಮೋತ್ಸವ ಪ್ರಯುಕ್ತ ದಶಕೋಟಿ ರಾಮತಾರಕ ಮಂತ್ರ ಜಪಯಜ್ಞ, ಶ್ರೀ ರಾಮತಾರಕ ಮಂತ್ರ ಜಪಾನುಷ್ಠಾನ ಪರ್ವ ಕಾರ್ಯಕ್ರಮ ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದಲ್ಲಿ ಇತ್ತೀಚಿಗೆ ನಡೆಯಿತು. ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಪ್ರಧಾನ ಅರ್ಚಕ ಎಸ್. ವೆಂಕಟರಮಣ ಆಚಾರ್ಯ ಧಾರ್ಮಿಕ ವಿಧಿವಿಧಾನ ನೆರವೇರಿಸಿ ಆಶೀರ್ವದಿಸಿದರು. ಎನ್. ಪ್ರಕಾಶ್ ನಾಯಕ್ ಗಂಗೊಳ್ಳಿ, ಕೃಷ್ಣಮೂರ್ತಿ ಕಿಣಿ ಬೆಂಗಳೂರು, ಶಿಶು ಮಂದಿರದ ಅಧ್ಯಕ್ಷ ಬಿ. ರಾಘವೇಂದ್ರ ಪೈ, ಸಂಚಾಲಕ ಡಾ. ಕಾಶೀನಾಥ ಪೈ, ಕಾರ್ಯದರ್ಶಿ ಅಶ್ವಿತಾ ಜಿ. ಪೈ, ಮಾಜಿ ಅಧ್ಯಕ್ಷರಾದ ಸವಿತಾ ಎನ್. ದೇವಾಡಿಗ, ಬಿ. ಲಕ್ಷ್ಮೀಕಾಂತ ಮಡಿವಾಳ, ಶಿಶು ಮಂದಿರದ ಸದಸ್ಯರಾದ ವಿಜಯಶ್ರೀ ವಿ. ಆಚಾರ್ಯ, ವಸಂತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರತಿಭೆ ನಿಮ್ಮದು ವೇದಿಕೆ ನಮ್ಮದು 2025ರ ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸತತ 105ನೇ ತಿಂಗಳ ಕಾರ್ಯಕ್ರಮ ಇತ್ತೀಚೆಗೆ ವಿಷ್ಣು ಸಹಸ್ರನಾಮದೊಂದಿಗೆ ಆರಂಭವಾಯಿತು. ವೇದಿಕೆಯಲ್ಲಿ ಡಾ. ರಮಾಕಾಂತ್ ಶೆಣೈ, ಪುಷ್ಪರಾಜ್, ವಸಂತಿ ಆರ್. ಪಂಡಿತ್, ಗಿರೀಶ್ ಪೈ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಅವರು ಉಪಸ್ಥಿತರಿದ್ದರು. ಮೈಸೂರಿನ ಡಾ. ರಮಾಕಾಂತ್ ಶೆಣೈ ಹಾಗೂ ಕುಂದಾಪುರದ ದೀಕ್ಷಾ ಪೈ, ಪ್ರೇಕ್ಷಾ ಪೈ ಸಹೋದರಿಯರನ್ನು ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು. ನಂತರ ಡಾ. ರಮಾಕಾಂತ್ ಶೆಣೈ ಅವರು ವಿಷ್ಣು ಸಹಸ್ರನಾಮದ ಬಗ್ಗೆ ಪ್ರವಚನ ನೀಡಿ ಅದರ ಮಹತ್ವ ವಿವರಿಸಿದರು. ದೀಕ್ಷಾ ಪೈ ಹಾಗೂ ಪ್ರೇಕ್ಷಾ ಪೈ ಸಹೋದರಿಯರು ಭಕ್ತಿ ಸಂಗೀತ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ನೆರವೇರಿಸಿದರು. ವಸಂತಿ ಆರ್. ಪಂಡಿತ್ ಪ್ರಾರ್ಥಿಸಿದರು. ರಶ್ಮಿರಾಜ್ ಕುಂದಾಪುರ ಕಾರ್ಯಕ್ರಮವನ್ನು ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಲ್ಪ ಮಾನವತ್ವವನ್ನು ವಿಶ್ವ ಮಾನವತೆಯ ಕಡೆಗೆ ಬಿತ್ತರಿಸಬೇಕು ಎಂಬ ಆಶಯದೊಂದಿಗೆ ಕಟ್ಟಿಕೊಂಡ ಶೈಕ್ಷಣಿಕ ವ್ಯವಸ್ಥೆ ನಮ್ಮದು. ಶಿಕ್ಷಣ ಸಂಸ್ಥೆಗಳು ಒಳ್ಳೆಯ ಸಂಸ್ಕಾರ ಮತ್ತು ಉತ್ತಮ ಜ್ಞಾನವನ್ನು ನಿಮಗೆ ನೀಡಿ ಬದುಕನ್ನು ಕಟ್ಟಿಕೊಳ್ಳಲು ಅನುವು ಮಾಡಿಕೊಡುತ್ತದೆ. ಹಕ್ಕಿ ಆಹಾರಕ್ಕಾಗಿ ಭೂಮಿಗೆ ಬರುವಂತೆ, ನಾವು ಎಷ್ಟೇ ಉನ್ನತ ಹುದ್ದೆಯಲ್ಲಿದ್ದರೂ ಜನ್ಮಜಾತ ಊರಿಗೆ ಹಾಗೂ ಕಲಿತ ಶಾಲೆಗೆ ಮರಳಿ ಬರಲೇಬೇಕು ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪ್ರಾಕ್ತನ ವಿದ್ಯಾರ್ಥಿಗಳ ಸಂಘದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹೆತ್ತ ತಾಯಿಗೆ ನಮನ, ಹೊತ್ತ ಇಳೆಗೆ ನಮನ, ತುತ್ತಿಟ್ಟ ಬಂಧು ಬಳಗಕ್ಕೆ ನಮನ, ಶಾಲೆಗೆ ನಮನ, ತಿದ್ದಿ ತೀಡಿದ ಗುರುಗಳಿಗೆ ನಮನ ಎಂದು ಹೇಳುತ್ತಾ ನಮ್ಮ ಬದುಕನ್ನು ಕಟ್ಟಿಕೊಳ್ಳಬೇಕು ಎಂದರು. ಇಂದು ನೀತಿ ಇಲ್ಲದ ವ್ಯಾಪಾರ, ಶೀಲವಿಲ್ಲದ ಶಿಕ್ಷಣ, ತತ್ವರಹಿತ ರಾಜಕಾರಣ, ಮಾನವತೆ ಇಲ್ಲದ ವಿಜ್ಞಾನ ಒಂದು ರೀತಿಯಲ್ಲಿ ಎಲ್ಲವೂ ಸರಕಾಗಿಬಿಟ್ಟಿದೆ. ಮನಸು ಮಾರುಕಟ್ಟೆಯಾಗಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯನ್ನು ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲೆಯ ಪ್ರತಿಯೊಬ್ಬ ನಾಗರಿಕರೂ ಸಹಕರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ. ಆರ್ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ವಿಶ್ವ ಕ್ಷಯ ರೋಗ ದಿನಾಚರಣೆ ಹಾಗೂ ಕ್ಷಯ ಮುಕ್ತ ಗ್ರಾಮ ಪಂಚಾಯತ್-ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರ 2030 ರ ಒಳಗೆ ಕ್ಷಯ ಮುಕ್ತ ಭಾರತವನ್ನಾಗಿಸುವ ಆಂದೋಲನವನ್ನು ಹಮ್ಮಿಕೊಂಡಿದೆ. ಜಿಲ್ಲೆಯನ್ನೂ ಸಹ ಕ್ಷಯ ಮುಕ್ತವನ್ನಾಗಿಸಬೇಕು. ಕ್ಷಯರೋಗಿಗಳನ್ನು ಮುಂಚಿತವಾಗಿ ಪತ್ತೆ ಹಚ್ಚುವುದು, ಸಂಪೂರ್ಣ ಚಿಕಿತ್ಸೆಯನ್ನು ನೀಡುವುದು ಹಾಗೂ ರೋಗವು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ್ ಅವರು ಸೋಮವಾರ ಕೊಲ್ಲೂರು ದೇಗಲುಕ್ಕೆ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಗೆ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಕೊಲ್ಲೂರು ದೇವಿಯ ಪರಮ ಭಕ್ತರಾದ ಇಳಯರಾಜ್ ಅವರು ಸಾಮಾನ್ಯವಾಗಿ ಪ್ರತಿವರ್ಷವೂ ಕೊಲ್ಲೂರಿಗೆ ಭೇಟಿ ನೀಡುತ್ತಲೇ ಇರುತ್ತಾರೆ. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ, ಸದಸ್ಯರಾದ ರಘುರಾಮ ದೇವಾಡಿಗ, ಇಓ ಪ್ರಶಾಂತ್ ಶೆಟ್ಟಿ ಇಳಯರಾಜ್ ಅವರನ್ನು ಗೌರವಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮನೆಯಲ್ಲಿ ವೃದ್ಧೆ ಮಾತ್ರ ಇರುವ ವೇಳೆ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳನೋರ್ವ ಅವರೊಂದಿಗೆ ಮನೆಯವರಂತೆ ಮಾತನಾಡಿ ಆಕೆಯ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯ ಮಣೂರಿನಲ್ಲಿ ಮಾ.20ರಂದು ನಡೆದಿದೆ. ರುದ್ರಮ್ಮ(92) ಚಿನ್ನ ಕಳೆದುಕೊಂಡಿರುವ ವೃದ್ಧೆ. ಮಾ.20ರಂದು ಮನೆಯವರೆಲ್ಲರೂ ಸ್ಥಳೀಯ ಕೊಟ್ಟೂರು ದೇಗುಲದ ಜಾತ್ರೆಗೆಂದು ತೆರಳಿದ್ದರು. ಈ ವೇಳೆ ಮನೆಯಲ್ಲಿ ರುದ್ರಮ್ಮ ಒಬ್ಬರೇ ಇದ್ದರು. ದಿನನಿತ್ಯದಂತೆ ಅವರು ಮಲಗುವಾಗ ತಾನು ಧರಿಸಿದ್ದ ಚಿನ್ನದ ಸರವನ್ನು ಮಂಚದ ಮೇಲೆ ಕಳಚಿಟ್ಟಿದ್ದರು. ಜಾತ್ರೆಗೆ ತೆರಳಿದ್ದ ಅವರ ಅಳಿಯ ಶ್ರೀಧರ್ ಅವರು ದಿಢೀರನೇ ಮನೆಗೆ ಬಂದಿದ್ದು, ಈ ವೇಳೆ ಮನೆಯ ಬಾಗಿಲು ಒಡೆದಿರುವುದು ಕಂಡುಬಂದಿದೆ. ಈ ಬಗ್ಗೆ ರುದ್ರಮ್ಮರನ್ನು ಶ್ರೀಧರ್ ಅವರು ವಿಚಾರಿಸಿದಾಗ “ಯಾರೋ ಹುಡುಗ ಬಂದಿದ್ದ. ನನಗೆ ದೃಷ್ಟಿ ದೋಷವಿರುವುದರಿಂದ ಯಾರೆಂದು ತಿಳಿಯಲಿಲ್ಲ. ನಾನು ನೀವೇ ಬಂದಿರಬಹುದು ಎಂದು ಜಾತ್ರೆ ಮುಗಿಯಿತಾ? ಹೇಗಾಯಿತು ಎಂದು ಆತನಲ್ಲಿ ಕೇಳಿದ್ದೆ. ಆತನೂ ಮನೆಯವರಂತೆಯೇ ಮಾತನಾಡಿದ್ದ” ಎಂದು ತಿಳಿಸಿದ್ದರು. ಆಗ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಳ್ಳಾಡು ಗ್ರಾಮದ ನಿವಾಸಿ ಸುರೇಶ್ (43) ಅವರು ಹಳದಿ ಕಾಯಿಲೆಗೊಳಗಾಗಿ ಇತ್ತೀಚಿಗೆ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 26 ವರ್ಷಗಳಿಂದ ಕ್ಯಾಟರಿಂಗ್ ಮಾಡಿತ್ತಿದ್ದ ಸುರೇಶ್ ಅವರು ಆರೋಗ್ಯ ಸಮಸ್ಯೆಯಿಂದ ಊರಿಗೆ ಬಂದಿದ್ದರು. ಮಾ.22ರ ಸಂಜೆ ತಲೆ ತಿರುಗಿ ಬಿದ್ದಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು, ರಾತ್ರಿ ಸಾವನ್ನಪ್ಪಿದ್ದಾರೆ. ಅವರು ಅವಿವಾಗಿತರಾಗಿದ್ದರು. ತಂದೆ ಮಹಾಬಲ ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತವು ಅಭಿವೃದ್ಧಿಯ ಕನಸನ್ನು ಸಾಕಾರಗೊಳಿಸುವತ್ತ ಸಾಗುತ್ತಿದೆ. ಈ ದಿಸೆಯಲ್ಲಿ ನಮ್ಮ ಪ್ರಯತ್ನವಿದೆ. ಈಗ ಉದ್ಯೋಗ ಪಡೆಯಲು 21ನೇ ಶತಮಾನ ಬಯಸುವ ಶಿಕ್ಷಣ ಅಂದರೆ ಕೌಶಲ್ಯ ಆಧಾರಿತ ಶಿಕ್ಷಣದ ಅಗತ್ಯವಿದೆ ಎಂದು ಬೆಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ಎಮ್.ಎಸ್. ಜಯಕರ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ದಿನಗಳ ಕಾಲ ನಡೆಯುತ್ತಿರುವ ಕಾಲೇಜು ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ನಮ್ಮ ದೇಶದಲ್ಲಿ ಕೌಶಲ್ಯ ಆಧಾರಿತ ಶಿಕ್ಷಣದ ಬೆಳವಣಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಕಷ್ಟು ಸಹಾಯ ನೀಡುತ್ತಿದೆ. ಉದ್ಯೋಗ ಮತ್ತು ಬದುಕಲ್ಲಿ ಯಶಸ್ಸು ಪಡೆಯಬೇಕಾದರೆ ಉತ್ತಮ ಸಂವಹನ ಕಲೆ , ವಿವಿಧ ಭಾಷಾ ಜ್ಞಾನ, ಕಂಪ್ಯೂಟರ್ ಜ್ಞಾನ, ಸಮಸ್ಯೆ ಪರಿಹಾರ, ಸಹಯೋಗದ ಭಾಗವಹಿಸುವಿಕೆ ಮುಖ್ಯವಾಗಿದೆ. ಭಾರತೀಯ ಶಿಕ್ಷಣ ವ್ಯವಸ್ಥೆಯ ಉನ್ನತ ಶಿಕ್ಷಣವನ್ನು ವಿಶ್ವದ ವಿವಿಧ ದೇಶಗಳು ಅಳವಡಿಸಿಕೊಳ್ಳುತ್ತಿದ್ದು ಮಾದರಿ ವ್ಯವಸ್ಥೆಯಾಗಿ ರೂಪುಗೊಂಡಿದೆ. ಮಣಿಪಾಲ ಶಿಕ್ಷಣ ಸಂಸ್ಥೆಗಳು ವಿಶ್ವದ ಎಲ್ಲಾ ರಾಷ್ಟ್ರಗಳ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಎಜುಕೇಶನ್ ಡೆಸ್ಕಟಾಪ್-ಆಸ್-ಎ-ಸರ್ವೀಸ್ ಮೂಲಕ ಸಂಸ್ಥೆಯಲ್ಲಿನ ದತ್ತಾಂಶಗಳ ವ್ಯವಸ್ಥಿತ ನಿರ್ವಹಣೆಗಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮಾಹಿತಿ ತಂತ್ರಜ್ಞಾನದ ಮೂಲಸೌಕರ್ಯಗಳನ್ನು ಒದಗಿಸುವ ಕಾಂಪ್ ಕ್ಲೌಡ್ ಐಟಿ ಸರ್ವಿಸಸ್‌ನ ಜೊತೆಗೆ ಮುಂದಿನ 5 ವರ್ಷಗಳಿಗೆ ಒಡಂಬಡಿಕೆ ಮಾಡಿಕೊಂಡಿದೆ. ಈ ವ್ಯವಸ್ಥೆಯ ನೆರವಿನಿಂದ ಆಳ್ವಾಸ್ ಶಿಕ್ಷಣ ಪ್ರತಿ?ನವು ತನ್ನ ಸಂಸ್ಥೆಗಳಲ್ಲಿ ವರ್ಚುವಲ್ ಡೆಸ್ಕ್ ಟಾಪ್ ಸೌಕರ್ಯವನ್ನು ಪ್ರತಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಪ್ರತ್ಯೇಕವಾಗಿ ಒದಗಿಸಿದ್ದು, ಈ ಮೂಲಕ ಸಾಫ್ಟ್‌ವೇರ್ ಡಿಫೈನ್ಡ್ ನೆಟ್‌ವರ್ಕ್ ಜತೆಗೆ ಕೇಂದ್ರೀಕೃತ ಗಣಕ ನಿರ್ವಹಣಾ ವ್ಯವಸ್ಥೆಯನ್ನು ಮಾಡಲಾಗಿದೆ. ಸಾಂಪ್ರದಾಯಿಕ ಡೆಸ್ಕಟಾಪ್ಗಳಿಗೆ ಹೋಲಿಸಿದರೆ, ಎಜುಕೇಶನ್ ಡೆಸ್ಕಟಾಪ್-ಆಸ್-ಎ-ಸರ್ವೀಸ್ ವ್ಯವಸ್ಥೆಯ ಮೂಲಕ 80% ವಿದ್ಯುತ್ ಉಳಿತಾಯವಾಗಲಿದೆ. ಸ್ಕಾಟ್ಲೆಂಡ್‌ನಲ್ಲಿ ನೆಲೆಸಿರುವ ಕಾಂಪ್ ಕ್ಲೌಡ್ ಐಟಿ ಸರ್ವಿಸಸ್‌ನ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಪೈ, ಆ ದೇಶದಲ್ಲಿನ ಶಿಕ್ಷಣ ಕ್ಷೇತ್ರದಲ್ಲಿನ ಅತ್ಯಾಧುನಿಕ ಗುಣಮಟ್ಟದ ಮಾಹಿತಿ ತಂತ್ರಜ್ಞಾನದ ಸೇವೆಯನ್ನು ಈ ವ್ಯವಸ್ಥೆಯ ಮೂಲಕ ನೀಡಲಿದ್ದಾರೆ. ಒಡಂಬಡಿಕೆಯ ಕುರಿತು ಮಾತನಾಡಿದ ಸಂಸ್ಥೆಯ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ,…
