ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾ.ಪಂ. ಉಸಿರು ಕೋಟ, ಬ್ರಹ್ಮಾವರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಗೀತಾನಂದ ಫೌಂಡೇಶನ್ ಮಣೂರು ಪಡುಕೆರೆ, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಕೋಟತಟ್ಟು ಆಶ್ರಯದಲ್ಲಿ ಮೇ. 04 ರಂದು ಬೆಳಗ್ಗೆ 9 ರಿಂದ ಕೋಟದ ಕಾರಂತ ಥೀಮ್ ಪಾರ್ಕಿನಲ್ಲಿ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ – ಕಾಂಬ 2025 ಜರಗಲಿದೆ. ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ಸಾಹಿತಿ ಡಾ. ಅಣ್ಣಯ್ಯ ಕುಲಾಲ್ ಉಳ್ತೂರು ವಹಿಸಲಿದ್ದಾರೆ. ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸಭಾಧ್ಯಕ್ಷತೆಯನ್ನು ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ಸತೀಶ್ ಬಾರಿಕೆರೆ ವಹಿಸಲಿದ್ದಾರೆ. ಡಾ. ವಿಜಯ ಬಲ್ಲಾಳ್ ಮೊದಲಾದವರು ಉಪಸ್ಥಿತರಿರುವರು. ಸಮ್ಮೇಳನದ ಪ್ರಯುಕ್ತ ಬೆಳಗ್ಗೆ 11.30ರಿಂದ ಕವಿಗೋಷ್ಠಿ, ಕುಂದಕನ್ನಡದ ಹರಟೆ, ಅಧ್ಯಕ್ಷರೊಂದಿಗೆ ಮಾತುಕತೆ, ಕೆ.ಸಿ.ಕುಂದರ್ ದತ್ತಿನಿಧಿ ಪ್ರದಾನ ನಡೆಯಲಿದೆ. ಕುಂದಾಪ್ರ ಕನ್ನಡಕ್ಕಾಗಿ ಸಾಕಷ್ಟು ಸೇವೆ ಸಲ್ಲಿಸಿದ ಪಂಜು ಗಂಗೊಳ್ಳಿ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ : 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಶೇ.98.27 ಫಲಿತಾಂಶ ದಾಖಲಿಸಿದ್ದಾರೆ. ವಿದ್ಯಾರ್ಥಿಗಳಾದ ಸುಶ್ಮಿತಾ ಎಸ್. ಗಾಣಿಗ (624), ಮನಾಲಿ (619), ವೈಷ್ಣವಿ (611), ಅಭಿಜ್ಞಾ ಖಾರ್ವಿ (610), ಧನ್ಯ ಮೇಸ್ತ (610), ಸೃಜನಾ (603), ವಿಕ್ರಮ್ ವಿ. ದೇವಾಡಿಗ (600), ಪ್ರಾರ್ಥನಾ ಪೈ (596), ಶ್ರೀಯಾ ಖಾರ್ವಿ (595), ಅಶ್ವಿತಾ ಎಸ್.ಮೊಗವೀರ (588), ಸಹನಾ ಆರ್.ಮೇಸ್ತ (580), ಬಿ. ಅಪೂರ್ವ ನಾಯಕ್ (580) ಉತ್ತಮ ಸಾಧನೆ ಮಾಡಿದ್ದಾರೆ. ಪರೀಕ್ಷೆಗೆ ಹಾಜರಾದ 58 ವಿದ್ಯಾರ್ಥಿಗಳ ಪೈಕಿ 57 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, 30 ವಿದ್ಯಾರ್ಥಿಗಳು ವಿಶಿಷ್ಠ ದರ್ಜೆಯಲ್ಲಿ, 24 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 624 ಅಂಕಗಳನ್ನು ಪಡೆದಿರುವ ಸುಶ್ಮಿತಾ ಎಸ್. ಗಾಣಿಗ ಶಾಲೆಗೆ ಪ್ರಥಮ ಸ್ಥಾನ ಮತ್ತು ರಾಜ್ಯದಲ್ಲಿ 2ನೇ ರ್ಯಾಂಕ್ ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗಾಗಿ ಇಲಾಖೆಯ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ 02, ಪುರಸಭೆ ಮತ್ತು ಪಟ್ಟಣ ಪಂಚಾಯತ್ಗಳಲ್ಲಿ ತಲಾ 01 ರಂತೆ ಮಾಸಿಕ ರೂ. 9000 ಗೌರವಧನದ ನೆಲೆಯಲ್ಲಿ “ನಗರ ಪುನರ್ವಸತಿ ಕಾರ್ಯಕರ್ತರ” (ಯು.ಆರ್.ಡಬ್ಲೂಯ) ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 01 ರಂತೆ ಮಾಸಿಕ 9,000 ಗೌರವಧನದ ನೆಲೆಯಲ್ಲಿ “ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ” (ವಿ.ಆರ್.ಡಬ್ಲೂಯ) ನೇಮಕಾತಿ ಮಾಡಿಕೊಳ್ಳಲು ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿ.ಆರ್.ಡಬ್ಲೂಯ ನೇಮಕಾತಿಗಾಗಿ ಬಾಕಿ ಇರುವ ಗ್ರಾಮ ಪಂಚಾಯತ್ಗಳ ವಿವರ: ಉಡುಪಿ ತಾಲೂಕಿನ ಕಡೆಕಾರು ಹಾಗೂ ಮಣಿಪುರ, ಬ್ರಹ್ಮಾವರ ತಾಲೂಕಿನ 38 ಕಳತ್ತೂರು ಹಾಗೂ ಹೆಗ್ಗುಂಜೆ, ಹೆಬ್ರಿ ತಾಲೂಕಿನ ಹೆಬ್ರಿ, ಶಿವಪುರ ಹಾಗೂ ಬೆಳ್ವೆ, ಕಾಪು ತಾಲೂಕಿನ ಬೆಳಪು, ಮಜೂರು ಹಾಗೂ ಹೆಜಮಾಡಿ, ಕುಂದಾಪುರ ತಾಲೂಕಿನ ಕೆರಾಡಿ ಮತ್ತು ಕಾರ್ಕಳ ತಾಲೂಕಿನ ಕಲ್ಯಾ. ಯು.ಆರ್.ಡಬ್ಲೂಯ ನೇಮಕಾತಿಗಾಗಿ ಖಾಲಿ ಇರುವ ಸ್ಥಳೀಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: 2024-25ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ಪದವಿ ಪೂರ್ವ ಕಾಲೇಜಿನ ಕನ್ನಡ ಮಾಧ್ಯಮ ಪ್ರೌಢಶಾಲೆ ಶೇ.95.83 ಫಲಿತಾಂಶ ದಾಖಲಿಸಿದ್ದಾರೆ. ವಿದ್ಯಾರ್ಥಿಗಳಾದ ನಿಸರ್ಗ 597 ಅಂಕಗಳನ್ನು ಪಡೆದು ಶಾಲೆಗೆ ಅಗ್ರಸ್ಥಾನಿಯಾಗಿ ಮೂಡಿ ಬಂದಿದ್ದಾಳೆ. ಮನೀಷಾ (588), ಸನ್ವಿತಾ (580) ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. ಪರೀಕ್ಷೆಗೆ ಹಾಜರಾದ 48 ವಿದ್ಯಾರ್ಥಿಗಳಲ್ಲಿ 46 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, 9 ಮಂದಿ ವಿದ್ಯಾರ್ಥಿಗಳು ವಿಶಿಷ್ಠ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಿದ್ದು, ಆಳ್ವಾಸ್ ಶಾಲೆಯ 81 ವಿದ್ಯಾರ್ಥಿಗಳು 625ರಲ್ಲಿ 600ಕ್ಕೂ ಹೆಚ್ಚು ಅಂಕ ಪಡೆಯುವ ಮೂಲಕ ವಿಶಿಷ್ಟ ಸಾಧನೆ ಮೆರೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು. ಅವರು ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ಮಾನ್ಯ (622), ಕ್ಷೀರಜಾ (621), ಹರೀಶ್ ಬಡಿಗೇರ್ (621), ಪವನ್ ಶರಣಬಸಪ್ಪ ಮೇಗೂರ್ (621), ರಿಯಾ ವಿದ್ಯಾಧರ ಕಮಟೆ (621), ಪ್ರಜ್ಞಾ ಶೀತಲ್ ಪಾಟೀಲ್ (620), ಸಮೀಕ್ಷಾ ಸಂದೀಪ್ ಸಮಾಜನ್ನವರ್ (620), ಸಿಂಧೂ ಶೀತಲ್ ಚೌಗಲೆ (620), ಸುಪ್ರೀತಾ ಲಕ್ಷ್ಮಣ ನಾಯ್ಕ್ (620), ಆದಿತ್ಯ (620), ಚಿನ್ಮಯ್ (620) ಅಂಕಗಳನ್ನು ಪಡೆಯುವುದರ ಮೂಲಕ ವಿಶಿಷ್ಠ ಸಾಧನೆ ಮಾಡಿದ್ದಾರೆ. 91 ವಿದ್ಯಾರ್ಥಿಗಳು ಶೇ.95ಕ್ಕೂ ಅಧಿಕ, 161 ವಿದ್ಯಾರ್ಥಿಗಳು ಶೇ. 90ಕ್ಕೂ ಅಧಿಕ, 211 ವಿದ್ಯಾರ್ಥಿಗಳು ಶೇ.85ಕ್ಕೂ ಅಧಿಕ ಅಂಕ ಪಡೆದಿದ್ದಾರೆ ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ 2024-25ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 229 ವಿದ್ಯಾರ್ಥಿಗಳು ಹಾಜರಾಗಿದ್ದು ಎಲ್ಲರೂ ತೆರ್ಗಡೆ ಹೊಂದಿ ಶೇಕಡಾ100 ಫಲಿತಾಂಶ ದಾಖಲಿಸಿರುತ್ತಾರೆ. ಹರಿಪ್ರಸಾದ್ ಎಮ್.ಎಸ್., ಸಾಯಿ ಕೀರ್ತನಾ 622 ಅಂಕ ಪಡೆದು ಶಾಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಹಾಗೂ ರಾಜ್ಯ ಮಟ್ಟದಲ್ಲಿ 4ನೇ ಸ್ಥಾನ ಗಳಿಸಿರುತ್ತಾರೆ. ಆಕಾಂಕ್ಷ ಎಸ್. ಪೈ, ಅಮೂಲ್ಯ ಶೇಟ್, ಶರ್ವಾಣಿ ಉಳವಿ, ಶ್ರೇಯಾ 621 ಅಂಕಗಳಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ ಹಾಗೂ ರಾಜ್ಯಮಟ್ಟದಲ್ಲಿ 5ನೇ ಸ್ಥಾನ ಗಳಿಸಿರುತ್ತಾರೆ ಮತ್ತು ಆಸ್ತಿಕ್ ಕೆ., ಮಂಜುಶ್ರೀ ಕೆ.ಪಿ., ನೇಹಾ ಆರ್., ಸಮೃದ್ಧಿ ನಾಯಕ್ ಕ್ರಮವಾಗಿ 620 ಅಂಕಗಳಿಸಿ ತೃತೀಯ ಸ್ಥಾನ ಮತ್ತು ರಾಜ್ಯ ಮಟ್ಟದಲ್ಲಿ ಆರನೇ ಸ್ಥಾನ ಗಳಿಸಿರುತ್ತಾರೆ. 229 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 59 ವಿದ್ಯಾರ್ಥಿಗಳು 600 ಕ್ಕಿಂತ ಅಧಿಕ ಅಂಕ ಗಳಿಸಿರುತ್ತಾರೆ. 115 ವಿದ್ಯಾರ್ಥಿಗಳು A+ ಶ್ರೇಣಿಯಲ್ಲಿ , 66 ವಿದ್ಯಾರ್ಥಿಗಳು A ಶ್ರೇಣಿಯಲ್ಲಿ, 30 ವಿದ್ಯಾರ್ಥಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ವಿದ್ಯಾರ್ಥಿ ಜೀವನದಲ್ಲಿ ಸಂಸ್ಕಾರಯುತ ಸ್ನೇಹಮಯಿ ವಾತಾವರಣ ರೂಪಿಸಿಕೊಳ್ಳಬೇಕು ಈ ಮೂಲಕ ದ್ವೇಷ ಅಸೂಯೆ ಇದರಿಂದ ಮುಕ್ತರಾಗಬೇಕು ಎಂದು ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಅಭಿಪ್ರಾಯಪಟ್ಟರು. ಅವರು ಕೋಟ ಪಡುಕರೆ ಲಕ್ಷ್ಮೀ ಸೋಮಬಂಗೇರ ಸರಕಾರಿ ಪ್ರಥಮದರ್ಜೆ ಕಾಲೇಜು ಇಲ್ಲಿ ವಿಶ್ವ ವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಆರೋಹ -2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರು ಮಾನವೀಯ ಮೌಲ್ಯಗಳನ್ನು ಕಲೆಯ ಮೂಲಕ ಹೊರಹೊಮ್ಮಿಸಬೇಕು, ಸಮಾಜದ ಸ್ವಾಸ್ಥ ಸದಾ ಕಾಪಾಡಬೇಕು,ಇದು ವಿದ್ಯಾರ್ಥಿಗಳ ಧ್ಯೇಯವಾಗಬೇಕು ಎಂದರಲ್ಲದೆ ಕಾಲೇಜು ದಿನಗಳಲ್ಲಿ ಕಲಾಸಕ್ತಿ ಉನ್ನತ ಮಟ್ಟಕ್ಕೆ ಏರಬೇಕು, ಮುಂದಿನ ಜೀವನದ ಬಗ್ಗೆ ಯೋಚಿಸಿ ಯೋಜನೆಗಳನ್ನು ರೂಪಿಸಿಕೊಳ್ಳಬೇಕು ಎಂದು ಕಾಲೇಜು ನಡೆದು ಬಂದ ಆರಂಭಿಕ ದಿನಗಳನ್ನು ಮೆಲುಕು ಹಾಕಿದರು. ಸಭೆಯ ಅಧ್ಯಕ್ಷತೆಯನ್ನು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ವಹಿಸಿದ್ದರು. ಇದೇ ವೇಳೆ ತೀಪುಗಾರರಾಗಿ ನಮಿತಾ, ಗಣೇಶ್ ರಾವ್, ನಿಖಿಲ್ ಶೆಟ್ಟಿ ಅವರುಗಳಿಗೆ ತೀರ್ಪಿನ ಪ್ರತಿ ಹಸ್ತಾಂತರಿಸಲಾಯಿತು. ಮುಖ್ಯ ಅಭ್ಯಾಗತರಾಗಿ ಗೀತಾನಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಗುಜ್ಜಾಡಿಯ ಎಂ. ಭಾಸ್ಕರ ಪೈ ಸರಕಾರಿ ಪ್ರೌಢಶಾಲೆ ಶೇ. 89.47 ಫಲಿತಾಂಶ ದಾಖಲಿಸಿದ್ದಾರೆ. ವಿದ್ಯಾರ್ಥಿಗಳಾದ ಸಮೀಕ್ಷಾ 586 ಅಂಕಗಳನ್ನು ಪಡೆದು ಶಾಲೆಗೆ ಅಗ್ರಸ್ಥಾನಿಯಾಗಿ ಮೂಡಿ ಬಂದಿದ್ದಾಳೆ. ಆರ್. ರಂಜಿತಾ 576 ಅಂಕ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ. ಪರೀಕ್ಷೆಗೆ ಹಾಜರಾದ 38 ವಿದ್ಯಾರ್ಥಿಗಳ ಪೈಕಿ 34 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, 7 ವಿದ್ಯಾರ್ಥಿಗಳು ವಿಶಿಷ್ಠ ದರ್ಜೆಯಲ್ಲಿ, 18 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು 9 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ರಾಜ್ಯ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ 2025ರಲ್ಲಿ ತಾಲೂಕಿನ ಯಡಾಡಿ-ಮತ್ಯಾಡಿಯ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ 10ರೊಳಗಿನ 6 ರ್ಯಾಂಕ್ ಪಡೆದು ಅಮೋಘ ಸಾಧನೆಯನ್ನು ಗೈದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿನಿ ಪ್ರಾವ್ಯ ಪಿ. ಶೆಟ್ಟಿ 625ಕ್ಕೆ 623 ಅಂಕಗಳಿಸುವುದರ ಮೂಲಕ ರಾಜ್ಯಕ್ಕೆ 3ನೇ ರ್ಯಾಂಕ್ ಪಡೆದಿದ್ದಾಳೆ. ಸಂಸ್ಥೆಯ ವಿದ್ಯಾರ್ಥಿ ಆಯುಷ್ ಯು ಶೆಟ್ಟಿ 625ಕ್ಕೆ 622 ಅಂಕ ಗಳಿಸುವುದರ ಮೂಲಕ ರಾಜ್ಯಕ್ಕೆ 4ನೇ ರ್ಯಾಂಕ್ ಪಡೆದಿದ್ದಾನೆ.ಸಂಸ್ಥೆಯ ವಿದ್ಯಾರ್ಥಿನಿ ಅನುಶ್ರೀ 625ಕ್ಕೆ 620 ಅಂಕ ಗಳಿಸುವುದರ ಮೂಲಕ ರಾಜ್ಯಕ್ಕೆ 6ನೇ ರ್ಯಾಂಕ್ ಪಡೆದಿದ್ದಾಳೆ. ಅಪೇಕ್ಷಾ ಶೆಟ್ಟಿ 625ಕ್ಕೆ 619 ಅಂಕಗಳಿಸುವುದರ ಮೂಲಕ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದಿದ್ದಾಳೆ. ಸುಖಿ ಎಸ್. ಶೆಟ್ಟಿ 625 ಕ್ಕೆ 618 ಅಂಕಗಳಿಸುವುದರ ಮೂಲಕ ರಾಜ್ಯಕ್ಕೆ 8ನೇ ರ್ಯಾಂಕ್ ಪಡೆದಿದ್ದಾಳೆ. ದರ್ಶನ್ ಕೆ.ಯು. 625 ಕ್ಕೆ 616 ಅಂಕ ಪಡೆಯುವುದರ ಮೂಲಕ ರಾಜ್ಯಕ್ಕೆ 10ನೇ ರ್ಯಾಂಕ್ ಪಡೆದಿದ್ದಾನೆ. ವಿದ್ಯಾರ್ಥಿಗಳಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶ್ರೀ ಸೇನೇಶ್ವರ ದೇವರ ವಾರ್ಷಿಕ ಜಾತ್ರೆ ಹಾಗೂ ಶ್ರೀ ಮನ್ಮಹಾರಥೋತ್ಸವವು ವೈಶಾಖ ಶುದ್ಧ ಪಂಚಮಿ ದಿನವಾದ ಶುಕ್ರವಾರ ಅದ್ದೂರಿಯಾಗಿ ಜರುಗಿತು. ಐತಿಹ್ಯವುಳ್ಳ ಬೈಂದೂರು ರಥೋತ್ಸವದಲ್ಲಿ ಊರ ಪರವೂರ ಭಕ್ತಸಮೂಹ ಪಾಲ್ಗೊಂಡು ಪುನೀತರಾದರು. ದೇವಳದ ತಂತ್ರಿ ಕೃಷ್ಣ ಸೋಮಯಾಜಿ ಆಚಾರ್ಯತ್ವದಲ್ಲಿ ಎ.26ರಂದು ಧ್ವಜಾರೋಹಣದೊಂದಿಗೆ ಆರಂಭಗೊಂಡು ಧಾರ್ಮಿಕ ಕೈಕಂರ್ಯಗಳು ಹಾಗೂ ವಿವಿಧ ಕಟ್ಟೆ ಉತ್ಸವಗಳು ನಡೆಯಿತು. ಶುಕ್ರವಾರ ಬೆಳಿಗ್ಗೆಯಿಂದಲೇ ವೈದಿಕರಿಂದ ಧಾರ್ಮಿಕ ವಿಧಿವಿಧಾನಗಳು ನಡೆದವು. ಉತ್ಸವ ಮೂರ್ತಿಯನ್ನು ಸರ್ವಾಲಂಕಾರಗೊಳಿಸಿ, ಮಂಗಳವಾದ್ಯ, ಕೊಂಬು ಕಹಳೆ ಹಾಗೂ ಚಂಡೆ ನಾದದೊಂದಿಗೆ ಮಧ್ಯಾಹ್ನ ರಥಾರೋಹಣಗೈಯಲಾಯಿತು. ಮಧ್ಯಾಹ್ನ ಮಹಾಅನ್ನಸಂತರ್ಪಣೆ ನಡೆಯಿತು. ಸಂಜೆ ಮಂಗಳ ಮುಹೂರ್ತದಲ್ಲಿ ಸಾವಿರಾರು ಭಕ್ತರು ಶ್ರದ್ಧಾಭಕ್ತಿಯಿಂದ ರಥವನ್ನು ಎಳೆದು ಕೃತಾರ್ಥರಾದರು. ಅನಂತರ ಅಷ್ಟಾವಧಾನ ಸೇವೆ ಸೇರಿದಂತೆ ವಿವಿಧ ಸೇವೆಗಳು ಶ್ರೀ ಸೇನೇಶ್ವರನಿಗೆ ಸಮರ್ಪಿಸಲಾಯಿತು. ಶನಿವಾರದಂದು ಅವಭೃಥೋತ್ಸವ ಹಾಗೂ ಭಾನುವಾರದಂದು ನಗರೋತ್ಸವ ಜರುಗಲಿದೆ. ರಥೋತ್ಸವದ ಚಾಲನೆ ನೀಡುವ ಪೂರ್ವದಲ್ಲಿ ಮಸೀದಿಗೆ ತೆರಳಿ ಮುಸ್ಲಿಂ ಬಾಂಧವರನ್ನು ಮತ್ತು ಸ್ಥಳೀಯ ಪೊಲೀಸ್ ಠಾಣಾಧಿಕಾರಿಯನ್ನು ದೇವಸ್ಥಾನಕ್ಕೆ…
