Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಉಡುಪಿ: ನಗರಸಭಾ ನಿಧಿಯ ಶೇ. 5 ರ ವಿಕಲಚೇತನರ ಕಲ್ಯಾಣ ಕಾರ್ಯಕ್ರಮ ಯೋಜನೆಯಡಿ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಕ್ರೀಡೆ, ಕಲೆ, ಸಾಂಸ್ಕೃತಿಕ ಹಾಗೂ ಇತರೆ ವ್ಯಾಸಂಗೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ವಸತಿ, ಶಿಕ್ಷಣ, ಸರ್ಕಾರಿ ಕಛೇರಿಗಳು, ಸಮುದಾಯ ಭವನ ಕಟ್ಟಡಗಳಿಗೆ ಜಾರುಹಾದಿ ಹಾಗೂ ವಿಕಲಚೇತನ ಸ್ನೇಹಿ ಶೌಚಾಲಯಗಳನ್ನು ನಿರ್ಮಿಸಲು ಇಚ್ಚಿಸುವ ಆಸಕ್ತರು/ಸಂಸ್ಥೆಗಳು ನಿಗದಿತ ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಪ್ರಸಕ್ತ ಸಾಲಿನ ತೆರಿಗೆ ಪಾವತಿ ಚಲನ್ ಪ್ರತಿ, ಆಧಾರ್ ಕಾರ್ಡ್ ಪ್ರತಿ, ಪಡಿತರ ಚೀಟಿ ಪ್ರತಿ, ಅಂಗವಿಕಲತೆಯ ಬಗ್ಗೆ ಜಿಲ್ಲಾ ಸರ್ಜನ್‌ರಿಂದ ಪಡೆದುಕೊಂಡ ಪ್ರಮಾಣ ಪತ್ರ ಮತ್ತು ಕ್ರೀಡೆ, ಕಲೆ, ಸಾಂಸ್ಕೃತಿಕ ಹಾಗೂ ಇತರೆ ವ್ಯಾಸಂಗೇತರ ಚಟುವಟಿಕೆಗಳ ಪ್ರಮಾಣ ಪತ್ರ ಇತ್ಯಾದಿ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಪೌರಾಯುಕ್ತರು, ನಗರಸಭೆ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ದಲಿತ ಸಂಘಟನೆ ಇಂದು ನಿನ್ನೆಯ ಇತಿಹಾಸವಲ್ಲ ತನ್ನ ಚಳುವಳಿಯ ಮೂಲಕ ಸಮುದಾಯದ ಏಳುಬೀಳಿಗೆ ಸದಾ ಶ್ರಮಿಸಿ ಮುಂಚೂಣಿಗೆ ತಂದಿರಿಸಿದೆ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಹೇಳಿದರು. ಅವರು ಭಾನುವಾರ ಕೋಟ ಸಿಎ ಬ್ಯಾಂಕ್ ಬಿ.ಸಿ ಹೊಳ್ಳ ಸಭಾಂಗಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಕೋಟ ಹೋಬಳಿ ಆಶ್ರಯದಲ್ಲಿ 26ನೇ ವರ್ಷದ ಉಚಿತ ನೋಟ್ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಅಕ್ಷರದಕ್ಕರೆ -2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ದಲಿತ ಸಮುದಾಯ ಯಾವುದೇ ಕ್ಷೇತ್ರದಲ್ಲೂ ಹಿಂದೆ ಬಿದ್ದಿಲ, ಸಾಕಷ್ಟು ಹೋರಾಟದ ಮೂಲಕ ಸಮುದಾಯ ಜನರಿಗೆ ನ್ಯಾಯ ಒದಗಿಸಿದೆ, ಶಿಕ್ಷಣದಿಂದ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳವ ಯೋಜನೆ ಕರಾರುವಾಕ್ಕಾಗಿ ದಲಿತ ಸಮುದಾಯ ಆದ್ಯತೆ ನೀಡಿ, ಶೈಕ್ಷಣಿಕ ಕ್ರಾಂತಿ ಪಸರಿಸಿ ಇಂದು ಬಹು ಕ್ಷೇತ್ರದಲ್ಲಿ ಸಮುದಾಯ ಬಾಂದವರು ಗುರುತಿಸಿಕೊಂಡಿದ್ದಾರೆ. ಇದು ಸಮುದಾಯ ಅಭಿವೃದ್ಧಿಯ ಸಂಕೇತ ಎಂದು ಬಣ್ಣಿಸಿದರು. ಸಭೆಯ ಅಧ್ಯಕ್ಷತೆಯನ್ನು ದಸಂಸ ಕೋಟ ಹೋಬಳಿ ಸಂಚಾಲಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತ್ರಾಸಿ-ಮರವಂತೆ ಬೀಚ್‌‌ನಲ್ಲಿ ಶನಿವಾರ ಸಂಜೆ ಅಲೆಗಳ ಸೆಳೆತಕ್ಕೆ ಸಿಕ್ಕಿ ಸಮುದ್ರ ಪಾಲಾಗುತ್ತಿದ್ದ ಬೆಂಗಳೂರು ಮೂಲದ ನಾಲ್ವರು ಹಾಗೂ ಇನ್ನೊಂದು ಪ್ರಕರಣದಲ್ಲಿ ಗೋವಾ ಮೂಲದ ಓರ್ವ ಮಹಿಳೆ ಸೇರಿದಂತೆ ಐವರನ್ನು ರಕ್ಷಿಸಲಾಗಿದೆ. ಲೈಫ್ ಗಾರ್ಡ್ ಸಿಬ್ಬಂದಿ ಪೃಥ್ವಿರಾಜ್ ಉಪ್ಪುಂದ ಹಾಗೂ ಪ್ರಮೋದ್ ರಾಜ್ ಉಪ್ಪುಂದ ಹಾಗೂ ಬೀಚ್ ಉಸ್ತುವಾರಿ ಸಿಬ್ಬಂದಿ ಸುರೇಶ್ ಕೊಡೇರಿ, 24*7 ಅಂಬುಲೆನ್ಸ್ ಇಬ್ರಾಹಿಂ ಗಂಗೊಳ್ಳಿ ನೇತೃತ್ವದಲ್ಲಿ ರಕ್ಷಣೆ ಮಾಡಲಾಗಿದೆ. ನಂತರ ಸ್ಥಳಕ್ಕೆ ಆಗಮಿಸಿದ ಗಂಗೊಳ್ಳಿ ಪೊಲೀಸ್‌ ನಿರೀಕ್ಷಕ ಹಾಗೂ ಸಿಬ್ಬಂದಿಗಳು ಒನ್ ಟು ಸಿಬ್ಬಂದಿ, ಹೈವೇ ಪೆಟ್ರೋಲ್‌ ಸಿಬ್ಬಂದಿ ಸೈರನ್ ಮೊಳಗಿಸಿ ಸುರಕ್ಷತೆ ದೃಷ್ಟಿಯಿಂದ ಪ್ರವಾಸಿಗರನ್ನು ಎಚ್ಚರಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ಉತ್ತಮ ಅಭ್ಯಾಸಗಳನ್ನು ರೂಡಿಸಿಕೊಳ್ಳಬೇಕು. ಆಗ ಮಾತ್ರ ಸಾಧನೆ ಮಾಡಲು ಸಾಧ್ಯ. ಪೋಷಕರು ಶಿಕ್ಷಕರು ಎಷ್ಟೇ ಸಹಕರಿಸಿದರೂ ವಿದ್ಯಾರ್ಥಿಗಳು ತಮ್ಮ ಮನೋಭಾವ ಬದಲಾಯಿಸಿಕೊಳ್ಳುವುದು ಅಷ್ಟೇ ಮುಖ್ಯ. ಆ ಮೂಲಕ ವಿದ್ಯಾರ್ಥಿಗಳು ತಮಗೆ ಶಾಲೆಗಳು, ಶಿಕ್ಷಕರು ಮತ್ತು ದಾನಿಗಳು ನೀಡಿದ  ಕೊಡುಗೆಗಳಿಗೆ  ಕೃತಜ್ಞತೆ ಸಲ್ಲಿಸಬಹುದು ಎಂದು ಗೀತಾ ಎಚ್ಎಸ್ಎನ್ ಫೌಂಡೇಶನ್‌ನ ಅಧ್ಯಕ್ಷರಾದ ಶಂಕರ ಐತಾಳ್ ಅಭಿಪ್ರಾಯ ಪಟ್ಟರು. ಅವರು ಬೀಜಾಡಿ ಸೀತಾಲಕ್ಷ್ಮಿ ಮತ್ತು ಬಿಎಂ ರಾಮಕೃಷ್ಣ ಹತ್ವಾರ್ ಸರಕಾರಿ ಪ್ರೌಢಶಾಲೆಯಲ್ಲಿ ಗೀತಾನಂದ ಫೌಂಡೇಶನ್ ಮಣೂರು  ಕೋಟ ಇವರು ಕೊಡ ಮಾಡುವ ಉಚಿತ ನೋಟ್ ಪುಸ್ತಕಗಳ ವಿತರಣಾ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್‌ ಬುಕ್‌ ವಿತರಿಸಿ ಮಾತನಾಡಿದರು. ಎಸ್‌ಡಿಎಂಸಿ ಅಧ್ಯಕ್ಷರಾದ ಲಕ್ಷ್ಮಣ್ ಟಿ ನಾಯ್ಕ್  ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಂಕರ ಐತಾಳ್ ಮತ್ತು  ಅವರ ಪತ್ನಿ ಪ್ರಭಾವತಿ ಐತಾಳ್, ಕಟ್ಟಡ ರಚನಾ ಸಮಿತಿಯ ಅಧ್ಯಕ್ಷರಾದ  ಶೇಖರ ಚಾತ್ರಬೆಟ್ಟು, ಕೋಶಾಧಿಕಾರಿ ಬಾಬಣ್ಣ ಪೂಜಾರಿ, ಎಸ್ ಡಿಎಂಸಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕುಂದಾಪುರ ತಾಲೂಕಿನ ಬೇಳೂರಿನ ಪ್ರಜ್ವಲ್ ಕೊಠಾರಿ ಎಂಬ ಯುವಕ ಕ್ಯಾನ್ಸರ್ ರೋಗಕ್ಕೆ ತುತ್ತಾಗಿದ್ದು ಇವರ ಚಿಕಿತ್ಸೆಗೆ ಸುಮಾರು 40ಲಕ್ಷ ರೂ ವೆಚ್ಚಗೊಳ್ಳುವ ಹಿನ್ನಲ್ಲೆಯಲ್ಲಿ ಕೋಟದ ದೇವಿಕಿರಣ್ ಮಿತ್ರ ಬಳಗ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇವರ ನೇತೃತ್ವದಲ್ಲಿ ಇದೇ ಬರುವ ಜೂನ್ 25ರಂದು ಕೋಟದ ಸಿಎ ಬ್ಯಾಂಕ್ ಬಿ.ಸಿ ಹೊಳ್ಳ ಸಭಾಂಗಣದಲ್ಲಿ ಅತಿಥಿ ಕಲಾವಿದರ ಸಮ್ಮುಖದಲ್ಲಿ ಯಕ್ಷಗಾನ ಕಾರ್ಯಕ್ರಮ ಆಯೋಜಿಸಿದೆ. ಇದರ ಪೋಸ್ಟರನ್ನು ಕೋಟದ ಅಮೃತೇಶ್ವರೀ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್ ಅವರು ಶುಕ್ರವಾರ ಶ್ರೀ ದೇಗುಲದಲ್ಲಿ ಬಿಡುಗಡೆಗೊಳಿಸಿ ಮಾತನಾಡಿ, ಒರ್ವ ಅನಾರೋಗ್ಯಕ್ಕೆ ತುತ್ತಾದ ಮಗುವಿನ ನೆರವಿಗೆ ಯಕ್ಷಗಾನ ಆಯೋಜಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಕಾರ್ಯ. ಇಂಥಹ ಸಮಾನಮನ್ಕರ ಒಗ್ಗೂಡಿಕೆಯ ಸಮಾಜಮುಖಿ ಕಾರ್ಯಕ್ಕೆ ಪ್ರತಿಯೊರ್ವ ಕೈ ಜೋಡಿಸಲು ಕರೆ ನೀಡಿದರು. ಈ ಸಂದರ್ಭದಲ್ಲಿ ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೆ.ಕೃಷ್ಣ ಕಾಂಚನ್, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಜ್ಯ ಸರಕಾರದಿಂದ ಮಾನ್ಯತೆ ಪಡೆದಿರುವ ಶ್ರೀ ಶಿವಕುಮಾರ ರಂಗಪ್ರಯೋಗಶಾಲೆಯ ಪ್ರಸಕ್ತ ಸಾಲಿನ ರಂಗಶಿಕ್ಷಣ (ಡಿಪ್ಲೋಮಾ ಇನ್ ಡ್ರಾಮಾ ಆರ್ಟ್ಸ್) ಪ್ರವೇಶಾತಿಗೆ ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ, ರಂಗಭೂಮಿಯಲ್ಲಿ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ www.theatreschoolsanehalli.org ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಹಾಗೂ ಭಾರತದ ರಂಗತಜ್ಞರಿಂದ ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ. ಗ್ರಂಥ ಭಂಡಾರ ಹಾಗೂ ದೃಶ್ಯ, ಶ್ರವ್ಯ ಪರಿಕರಗಳ ಅನುಕೂಲತೆ ಇದ್ದು, ರಂಗಶಾಲೆಯ ವಿದ್ಯಾರ್ಥಿಗಳಿಗೆ ಭಾರತೀಯ ರಂಗಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಆಹಾರ್ಯ, ಶಿಕ್ಷಣದಲ್ಲಿ ರಂಗಭೂಮಿ ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯುತ್ತವೆ. ಅರ್ಜಿ ಸಲ್ಲಿಸಲು ಜೂನ್ 25 ಕೊನೆಯ ದಿನ. ಸಂದರ್ಶನವನ್ನು ಜೂನ್ 27 ಮತ್ತು 28 ರಂದು ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಶ್ರೀ ಶಿವಕುಮಾರ, ರಂಗ ಪ್ರಯೋಗಶಾಲೆ, ಸಾಣೇಹಳ್ಳಿ, ಹೊಸದುರ್ಗ ತಾಲೂಕು, ಚಿತ್ರದುರ್ಗ ಮೊ.ನಂ:…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸ್ವಾತಂತ್ರ‍್ಯ ಹೋರಾಟಕ್ಕೆ ಮುನ್ನುಡಿ ಬರೆದ ರಾಣಿ ಅಬ್ಬಕ್ಕ ಕರಾವಳಿ ಕರ್ನಾಟಕದ ಧೀಮಂತ ಶಕ್ತಿ. ವಸಾಹತುಶಾಹಿ ಆಳ್ವಿಕೆಗೆ ಅಬ್ಬಕ್ಕ ನೀಡಿದ ಪ್ರತಿಕ್ರಿಯೆ ಸ್ತುತ್ಯಾರ್ಹ. ಅಂತವರ ವ್ಯಕ್ತಿತ್ವವನ್ನು ಇಂದಿನ ಯುವ ಜನತೆಗೆ ಪರಿಚಯಿಸುವುದು ಮುಖ್ಯ ಎಂದು ನಿವೃತ್ತ ಪ್ರಾಂಶುಪಾಲರಾದ ಡಾ| ವಿ.ಕೆ. ಯಾದವ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ, ಮಂಗಳೂರು ಇವರ ಸಹಯೋಗದೊಂದಿಗೆ ರಾಣಿ ಅಬ್ಬಕ್ಕ @ 500 ಸರಣಿ ಉಪನ್ಯಾಸ ಮಾಲಿಕೆಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಎಮ್.ಐ.ಟಿ., ಮಣಿಪಾಲದ ಗಣಿತಶಾಸ್ರ್ತದ ಪ್ರಾಧ್ಯಾಪಕರಾದ ಡಾ| ವಾದಿರಾಜ ಗೋಪಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರಾಣಿ ಅಬ್ಬಕ್ಕ @ 500 ಸರಣಿ ಉಪನ್ಯಾಸ ಮಾಲಿಕೆಯ ಸಂಯೋಜಕರಾದ ವೆಂಕಟೇಶ ನಾಯಕ್ ಮತ್ತು ಯಶವಂತ ಕುದ್ರೋಳಿ ಉಪಸ್ಥಿತರಿದ್ದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಸಾಹಿತ್ಯದ ಓದು ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲತೆಯನ್ನು, ಜೀವನೋತ್ಸಾಹವನ್ನು ಹೆಚ್ಚಿಸುತ್ತದೆ. ಸಂಗೀತ, ಸಾಹಿತ್ಯ, ಕಲೆಗಳಲ್ಲಿ ಆಸಕ್ತಿಯಿಲ್ಲದವನು ಬಾಲವಿಲ್ಲದ ಪಶುವಿನಂತೆ. ಬದುಕನ್ನು ಹೊಸ ಬಗೆಯಲ್ಲಿ ಕಟ್ಟಿಕೊಳ್ಳುವಲ್ಲಿ ಬರವಣಿಗೆ ಪೂರಕವಾದದ್ದು. ವಾರ್ಷಿಕ ಸಂಚಿಕೆ ಎಂಬುದು ಒಂದು ವಿದ್ಯಾ ಸಂಸ್ಥೆಯ ಮುಖವಾಣಿಯಿದ್ದಂತೆ. ವಿದ್ಯಾರ್ಥಿಗಳ ಪ್ರತಿಭಾ ಅನಾವರಣಕ್ಕೆ ಒಳ್ಳೆಯ ವೇದಿಕೆ ಎಂದುಲೇಖಕಿ, ಕವಯಿತ್ರಿ ಸಾಲಿಗ್ರಾಮ ಚಿತ್ರಪಾಡಿ ಸುಮನಾ ಆರ್. ಹೇರ್ಳೆ ಹೇಳಿದರು. ಅವರು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾಲೇಜಿನ ವಾರ್ಷಿಕ ಸಂಚಿಕೆ ‘ದೃಷ್ಟಿ’ ಅನಾವರಣಗೊಳಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಕವಿತಾ ಎಂ.ಸಿ ಅಧ್ಯಕ್ಷತೆ ವಹಿಸಿದ್ದರು. ಜಿ.ಎಸ್.ವಿ.ಎಸ್ ಅಸೋಸಿಯೇಷನ್ ಕಾರ್ಯದರ್ಶಿ ಎಚ್ ಗಣೇಶ್ ಕಾಮತ್, ಸರಸ್ವತಿ ವಿದ್ಯಾಲಯದ ಕಾರ್ಯದರ್ಶಿ ಎನ್ ಸದಾಶಿವ ನಾಯಕ್ ಮುಖ್ಯ ಅಭ್ಯಾಗತರಾಗಿ ಶುಭಾಶಂಸನೆಗೈದರು. ಕಾರ್ಯನಿರ್ವಾಹಕ ಸಂಪಾದಕ ಎಚ್. ಸುಜಯೀಂದ್ರ ಹಂದೆ ಪ್ರಾಸ್ಥಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿ  ಗೌತಮಿ ನಾಯಕ್ ಸ್ವಾಗತಿಸಿ, ಪ್ರಜ್ವಲ್ ದೇವಾಡಿಗ ವಂದಿಸಿದರು. ಆಂಗ್ಲ ಭಾಷಾ ಉಪನ್ಯಾಸಕಿ ಸುಪ್ರೀತಾ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಲಿಂಗತ್ವ ಅಲ್ಪಸಂಖ್ಯಾತರು ತಮ್ಮ ಕೆಲಸ ಕಾರ್ಯ ನಿಯಮಿತ ಸರಕಾರಿ ಕಚೇರಿಗಳಿಗೆ ಭೇಟಿ ಮಾಡಿದ ಸಂದರ್ಭದಲ್ಲಿ ಅವರೊಂದಿಗೆ ಸೌಹಾರ್ದತೆಯೊಂದಿಗೆ ಗೌರವಯುತವಾಗಿ ನಡೆದುಕೊಂಡು, ನಿಯಮಾನುಸಾರ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ತಿಳಿಸಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಕುರಿತು ಸಂವೇದನೆ ಮೂಡಿಸಲು ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಕಾನೂನಿನ ಮುಂದೆ ಎಲ್ಲರೂ ಸಮಾನರು. ಸಾಂವಿಧಾನಿಕವಾಗಿ ಯಾವುದೇ ಜಾತಿ, ಜನಾಂಗ, ಲಿಂಗ ಆಧಾರದ ಮೇಲೆ ಯಾವುದೇ ರೀತಿಯ ತಾರತಮ್ಯವನ್ನು ಮಾಡುವಂತಿಲ್ಲ. ಸಮಾಜದಲ್ಲಿ ಎಲ್ಲಾ ಜನರೂ ಒಂದೇ ಎಂಬ ಭಾವನೆಯಿಂದ ನೋಡಬೇಕು. ಲಿಂಗತ್ವ ಅಲ್ಪಸಂಖ್ಯಾತರು ಕಚೇರಿಗಳಿಗೆ ಬಂದಾಗ ಅವರನ್ನೂ ಸಹ ಇತರರೊಂದಿಗೆ ನಡೆದುಕೊಳ್ಳುವ ರೀತಿಯಲ್ಲಿಯೇ ನಡೆದುಕೊಂಡು ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು. ಅವರೊಂದಿಗೆ ಅಗೌರವವಾಗಿ ವರ್ತಿಸಿದ್ದಲ್ಲಿ ಅಂತಹ ಸರ್ಕಾರಿ ನೌಕರರ ಮೇಲೆ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಎಂದರು. ಸರಕಾರ ಲಿಂಗತ್ವ ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ಅನೇಕ ಯೋಜನೆಗಳು ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆನ್ನಾಬೈಲ್ ಜುಮಾ ಮಸೀದಿಯಲ್ಲಿ ಪ್ರವಾದಿ ಇಬ್ರಾಹಿಮರ ತ್ಯಾಗ ಬಲಿದಾನಗಳನ್ನು ಸಂಕೇತಿಸುವ ಮತ್ತು ಸ್ಮರಿಸುವ ಬಕ್ರೀದ್ ಪ್ರಾರ್ಥನೆ ಜರುಗಿತು. ಧರ್ಮಗುರು ಅಬ್ದುಲ್ ಹಫೀಜ್ ಪ್ರವಾದಿ ಇಬ್ರಾಹಿಂ ಅವರು ಮಾತನಾಡಿ, “ದೇವನಿಷ್ಠೆ ಮತ್ತು ಶ್ರದ್ದೆಯ ದೊಡ್ಡ ಸಂಕೇತವಾಗಿ ಲೋಕಕ್ಕೆ ಮೂಡಿಬಂದರು. ಅವರ ಮಾಡಿದ ತ್ಯಾಗ ಮತ್ತು ಬಲಿದಾನಗಳನ್ನು ಸ್ಮರಿಸುವುದರಿಂದ ಮನುಷ್ಯನ ಮನಸ್ಸು ಸಂವೇದನಾಶೀಲವಾಗಿ ಸಾಮಾಜಿಕ ಸಂಬಂಧಗಳು ಸುಗಮವಾಗಲು ಕಾರಣವಾಗುತ್ತದೆ. ಇಬ್ರಾಹಿಮರು ತಮ್ಮ ಬದುಕಿನ ಕಾಲಾವಧಿಯಲ್ಲಿ ಬಡವ ಶ್ರೀಮಂತ ಕರಿಯ ಬಿಳಿಯ ಮುಂತಾದ ಸಾಮಾಜಿಕ ತಾರತಮ್ಯಗಳನ್ನು ತೊಡೆದು ಹಾಕಲು ತಮ್ಮ ಜೀವಮಾನವಿಡೀ ಶ್ರಮಿಸಿದರು. ಮನುಕುಲಕ್ಕೆ ಇಬ್ರಾಹಿಮರು ನೀಡಿದ ಕೊಡುಗೆಯನ್ನು ಸೀಮಿತ ಅವಧಿಯಲ್ಲಿ ಹೇಳಿ ಮುಗಿಸಲಾಗದು” ಎಂದರು. ಸಭೆಯಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ಸೈಯದ್ ರಫೀಕ್, ಉಪಾಧ್ಯಕ್ಷ ಸೈಯದ್ ಆಸೀಫ್, ಕಾರ್ಯದರ್ಶಿ ಮಹಮ್ಮದ್ ಇಕ್ಬಾಲ್, ಮಾಜಿ ಅಧ್ಯಕ್ಷ ಸಯ್ಯದ್ ಅಬ್ಬಾಸ್, ಹಸನ್ ಸಾಹೇಬ್, ಅಲಿಯಬ್ಬ, ನಜಿರ್ ಸಾಹೇಬ್, ಹಯಾತ್ ಭಾಷಾ ಸಾಹೇಬ್, ಯೂಸುಫ್ ಖಾದರ್, ಶಬ್ಬೀರ್ ಸಾಹೇಬ್, ಅಮಾನ್ ಜಮಾಲ್, ಆದಮ್…

Read More