Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಕೋಟೇಶ್ವರ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಮಹಿಳಾ ವೇದಿಕೆಯ ಜಂಟಿ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಸೆಂಟ್ ಮೇರಿಸ್ ಕಾಲೇಜು ಶಿರ್ವ ಇಲ್ಲಿಯ ಸಹಾಯಕ ಪ್ರಾಧ್ಯಾಪಕರಾದ ಡಾ. ಗುಲಾಬಿ ಪೂಜಾರಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಮಹಿಳಾ ದಿನಾಚರಣೆಯ ಮಹತ್ವವನ್ನು ತಿಳಿಸಿ, ಇಂದಿಗೂ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತಾಗಿ ಮಾತನಾಡಿದರು. ಜೊತೆಗೆ ವಿದ್ಯಾರ್ಥಿನಿಯರು ಆಧುನಿಕ ತಂತ್ರಜ್ಞಾನದ ಈ ಕಾಲದಲ್ಲಿ ಎಚ್ಚರಿಕೆಯಿಂದ ನಡೆದುಕೊಳ್ಳುವಂತೆ ಕಿವಿಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಚಾಲಕರಾದ ನಾಗರಾಜ ಯು., ಮಹಿಳಾ ವೇದಿಕೆಯ ಸಂಚಾಲಕರಾದ ರೋಹಿಣಿ, ಕಾಲೇಜಿನ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮಣೂರು ಹೇರಂಬ ಮಹಾಗಣಪತಿ ಹಾಗೂ ಮಹಾಲಿಂಗೇಶ್ವರ ಸಾನಿಧ್ಯ ಕಾರಣಿಕ ಕ್ಷೇತ್ರವಾಗಿದ್ದು ಇಲ್ಲಿನ ವಾರ್ಷಿಕ ರಥೋತ್ಸವ ಅರ್ಥಪೂರ್ಣವಾಗಿಸಲು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರ ಭಾಗವಹಿಸುವಿಕೆ ಬಹುಮುಖ್ಯವಾಗಿದೆ ಎಂದು ಮಣೂರು ಮಹಾಲಿಂಗೇಶ್ವರ ದೇಗುಲದ ಅಧ್ಯಕ್ಷ ಸತೀಶ್ ಹೆಚ್. ಕುಂದರ್ ಹೇಳಿದರು. ಅವರು ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ 295ನೇ ವಾರದ ಪರಿಸರಸ್ನೇಹಿ ಕಾರ್ಯಕ್ರಮದ ಸಲುವಾಗಿ ಮಣೂರು ದೇಗುಲ ಜಾತ್ರೆಯ ಪ್ರಯುಕ್ತ ಮಣೂರು ಫ್ರೆಂಡ್ಸ್ ಮಣೂರು ಇವರ ಸಂಯೋಜನೆಯೊಂದಿಗೆ ದೇಗುಲ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ದೇಗುಲ ಸ್ವಚ್ಛತೆಯಿಂದ ಮನಸ್ಸು ಭಕ್ತಿಭಾವಕ್ಕೆ ಸಾಕ್ಷಿಯಾಗಿದೆ. ಇದಕ್ಕೆ ಇಲ್ಲಿನ ಈ ಸಂಘಟನೆಗಳ ದೇಗುಲ ಸ್ವಚ್ಛತಾ ಕಾರ್ಯಕ್ರಮ ನಿರ್ದಶನವಾಗಿದೆ ಎಂದು ಎಪ್ರಿಲ್ 2 ರಂದು ನಡೆಯುವ ಜಾತ್ರೆಯನ್ನು ಯಶಸ್ವಿಗೊಳಿಸಲು ಕರೆ ನೀಡಿದರು. ಈ ಸಂದರ್ಭದಲ್ಲಿ ಪಂಚವರ್ಣದ ಅಧ್ಯಕ್ಷ ಮನೋಹರ್ ಪೂಜಾರಿ, ಮಣೂರು ಫ್ರೆಂಡ್ಸ್ ಅಧ್ಯಕ್ಷ ರಾಘವೇಂದ್ರ ಪೂಜಾರಿ, ಪಂಚವರ್ಣ ಮಹಿಳಾ ಅಧ್ಯಕ್ಷೆ ಲಲಿತಾ ಪೂಜಾರಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ತಾಲೂಕಿನ ಜಡ್ಕಲ್ ಗ್ರಾಮದ ಹಯ್ಯಂಗಾರು ಕಾನ್ಕಿ ಕನ್ಯಾಸ್ತಿ ಹೊಳೆಗೆ ಈಜಲು ಹೋದ ಗೋಳಿಹೊಳೆ ಗ್ರಾಮದ ಅರೆಶಿರೂರು ನಿವಾಸಿ ರಿಕ್ಷಾ ಚಾಲಕ ಸಂದೀಪ್ ನಾಯ್ಕ (32) ರವಿವಾರ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಗೋಳಿಹೊಳೆಯ ಹೊಟೇಲ್ ಉದ್ಯಮಿ ಬಾಬಣ್ಣ ಅವರ ಪುತ್ರರಾಗಿರುವ ಸಂದೀಪ್ ಸ್ನೇಹಿತರೊಂದಿಗೆ ತೆರಳಿದ್ದರು ಎನ್ನಲಾಗಿದೆ. ಮೃತರು ಅವಿವಾಹಿತರಾಗಿದ್ದು ಬಾಬಣ್ಣ ಅವರ ಮೂವರು ಗಂಡುಮಕ್ಕಳಲ್ಲಿ ಒಬ್ಬರಾಗಿದ್ದಾರೆ. ಸುದ್ದಿ ತಿಳಿದೊಡನೆ ಕೊಲ್ಲೂರು ಎಸ್.ಐ. ವಿನಯ ಅವರ ನೇತೃತ್ವದಲ್ಲಿ ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶೈಲೇಶ ಅವರು ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ಅನಂತರ ವಾರಸುದಾರರಿಗೆ ಮೃತ ದೇಹ ಹಸ್ತಾಂತರಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 2025–26ನೇ ಸಾಲಿನ 10ನೇ ತರಗತಿಯ ವಸತಿ ನಿಲಯದ ವಿದ್ಯಾರ್ಥಿನಿಯರು ಶಿಕ್ಷಣ ಸಂಸ್ಥೆಯ ಮೇಲಿನ ತಮ್ಮ ಬದ್ಧತೆಯನ್ನು ತೋರಿಸುವಂತೆ ಮನಸೂರೆಗೊಳ್ಳುವ ಕಾರ್ಯವನ್ನು ನೆರವೇರಿಸಿದ್ದಾರೆ. ಪ್ರೊಜೆಕ್ಟರ್ ಮೊದಲಾದ ಆಧುನಿಕ ಉಪಕರಣಗಳ ಮೂಲಕ ಶಾಲೆಯಲ್ಲಿ ಬಹಳಷ್ಟು ಬೋಧನೆಗಳನ್ನು ನಡೆಸುತ್ತಾ ಬಂದಿದ್ದು, ಬಹಳಷ್ಟು ಪರಿಣಾಮಕಾರಿಯಾಗಿದ್ದು, ವಿದ್ಯಾರ್ಥಿಗಳ ಕಲಿಕೆಯ ಅನುಭವವನ್ನು ಸಮೃದ್ಧಗೊಳಿಸುತ್ತಿದ್ದವು. ಸಾಮಾನ್ಯ ಯಂತ್ರೋಪಕರಣಗಳಂತೆ ಇವುಗಳಲ್ಲಿ ವರ್ಷಕ್ಕೆ ಒಂದೆರಡು ಯಂತ್ರಗಳು ಹಾಳಾಗುತ್ತಿದ್ದವು. ಇದನ್ನು ನೋಡಿ ಅರಿತ ವಿದ್ಯಾರ್ಥಿನಿಯರ ತಂಡ ತಮ್ಮ ಮುಂದಿನ ವಿದ್ಯಾರ್ಥಿಗಳಿಗೆ ಸಹಾಯವಾಗಲಿ ಎಂಬ ಆಶಯದಂತೆ ಹಿರಿಯರ ಮನವೊಲಿಸಿ, ₹34,000 ಹಣವನ್ನು ಸಂಗ್ರಹಿಸಿ, ಶಾಲೆಗೆ ಪ್ರೊಜೆಕ್ಟರ್ ಖರೀದಿಸಲು ದೇಣಿಗೆಯಾಗಿ ನೀಡಿದ್ದಾರೆ. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳೂ, ಶಾಲಾ ಪ್ರಾಂಶುಪಾಲರಾದ ಶರಣ ಕುಮಾರರು ಇದನ್ನು ಸ್ವೀಕರಿಸಿ ಮಾತನಾಡಿ, “ಈ ಕೊಡುಗೆ ಕೇವಲ ಹಣಕಾಸಿನ ಸಹಾಯವಲ್ಲ; ಇದು ವಿದ್ಯಾರ್ಥಿನಿಯರ ಏಕತೆ, ಜವಾಬ್ದಾರಿ ಹಾಗೂ ಶಿಕ್ಷಣಸಂಸ್ಥೆಯ ಮೇಲಿನ ಗೌರವವನ್ನು ಪ್ರತಿಬಿಂಬಿಸುತ್ತಿದೆ. ಭವಿಷ್ಯದ ವಿದ್ಯಾರ್ಥಿಗಳಿಗೆ ಪ್ರಯೋಜನವಾಗುವಂತಹ ಈ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಸಮಸ್ಯೆ ಕಟ್ಟಿಟ್ಟ ಬುತ್ತಿ ಅದರ ಬಗ್ಗೆ ಕಾಳಜಿ ಅತ್ಯಗತ್ಯ ಎಂದು ಉಡುಪಿ ಪ್ರಸಿದ್ಧ ವೈದ್ಯ ನರೇಂದ್ರ ಕುಮಾರ್ ಎಚ್. ಎಸ್. ಹೇಳಿದರು. ಅವರು ಭಾನುವಾರ ಕೋಡಿ ಕನ್ಯಾಣದ ಸೇತುವೆ ಬಳಿ ಕೆನರಾ ಬ್ಯಾಂಕ್ ಮಣಿಪಾಲ ವೃತ್ತ ಪ್ರಾಯೋಜಕತ್ವದಲ್ಲಿ ಸೀಎಂಸಿ2 ಮಂಗಳೂರು, ಉಡುಪಿ ಕಿನಾರ ಮೀನುಗಾರ ಉತ್ಪಾದಕ ಕಂಪನಿ, ಅಯೋಧ್ಯಾ ಫ್ರೆಂಡ್ಸ್ ಕೋಡಿ ಕನ್ಯಾಣ ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು. ಗ್ರಾಮೀಣ ಕರಾವಳಿ ಭಾಗದಲ್ಲಿ ಮೀನುಗಾರ ವೃತ್ತಿ ನಿರಂತರ ಹೆಚ್ಚಿದ್ದು ಅವರ ಆರೋಗ್ಯದ ಬಗ್ಗೆ ಹೆಚ್ಚು ಆಸಕ್ತಿ ವಹಿಸಬೇಕು. ಮೂಳೆ ಸವೆತ ಸೇರಿದಂತೆ ಅನೇಕ ರೋಗಗಳನ್ನು ಅವರು ಎದುರಿಸುತ್ತಾರೆ. ಅಂತಹ ಸಂದರ್ಭದಲ್ಲಿ ಇಂತಹ ಆರೋಗ್ಯ ಶಿಬಿರಗಳು ಸಹಕಾರಿಯಾಗಿ ಕಾರ್ಯನಿರ್ವಹಿಸುತ್ತವೆ ಎಂದರು. ಕಾರ್ಯಕ್ರಮವನ್ನು ಕೆನರಾ ಬ್ಯಾಂಕ್ ಮಣಿಪಾಲ ಇದರ ಹಿರಿಯ ಪ್ರಭಂಧಕಿ ಅನಿತಾ ಶೆಟ್ಟಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೀಎಂಸಿ2 ಮಂಗಳೂರು ಇದರ ಅಧ್ಯಕ್ಷ ರಮೇಶ್ ಎಂ.ಆರ್. ವಹಿಸಿದ್ದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ಯುವ ರೆಡ್ ಕ್ರಾಸ್ ಸಂಘದ ವಿದ್ಯಾರ್ಥಿಗಳು ಶೈಕ್ಷಣಿಕ ಮುನ್ನುಡಿಯ ಭಾಗವಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರಕ್ತ ಬ್ಯಾಂಕ್‌ಗೆ ಭೇಟಿ ನೀಡಿದರು. ಅವರು ರಕ್ತ ಸಂಗ್ರಹಣೆ, ಸುರಕ್ಷತಾ ಕ್ರಮಗಳು ಮತ್ತು ಕೆಂಪು ರಕ್ತ ಕಣಗಳು, ಪ್ಲಾಸ್ಮಾ ಮತ್ತು ಪ್ಲೇಟ್‌ಲೆಟ್‌ಳಂತಹ ಘಟಕಗಳ ಪ್ರತ್ಯೇಕತೆಯ ಬಗ್ಗೆ ತಿಳಿದುಕೊಂಡರು. ಅಧಿವೇಶನವನ್ನು ಹಿರಿಯ ತಾಂತ್ರಿಕ ಶಿಕ್ಷಣ ಮೇಲ್ವಿಚಾರಕರಾದ ಸುಜಯಾ ಮತ್ತು ವೀರೇಂದ್ರ ಅವರ ಮಾರ್ಗದರ್ಶನದಲ್ಲಿ ನಡೆಯಿತು. ಭಾರತಿ ಗಾಣಿಗ ಅವರ ಸಂಯೋಜನೆಯಲ್ಲಿ ನಡೆದ ಈ ಭೇಟಿಯು ರಕ್ತದಾನದ ಮಹತ್ವ ಮತ್ತು ಜೀವಗಳನ್ನು ಉಳಿಸುವಲ್ಲಿ ರಕ್ತ ಬ್ಯಾಂಕುಗಳ ಪಾತ್ರವನ್ನು ಅರ್ಥಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಸಹಾಯ ಮಾಡಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ (DST) ಮತ್ತು ನ್ಯಾಷನಲ್ ಇನ್ನೋವೇಶನ್ ಫೌಂಡೇಶನ್ (NIF) ಜಂಟಿಯಾಗಿ ಆಯೋಜಿಸುವ  ಇನ್‌ಸ್ಪಾಯರ್‌ ಅವಾರ್ಡ್ ಸ್ಪರ್ಧೆಗೆ ನಾವುಂದದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸುಜನ್ ಪೂಜಾರಿ ಮತ್ತು ಸಂದೇಶ ಪೂಜಾರಿ ಆಯ್ಕೆ ಆಗಿರುತ್ತಾರೆ. ಅವರಿಗೆ ಗಣಿತಶಾಸ್ತ್ರ ಉಪನ್ಯಾಸಕಿ ಸಾವಿತ್ರಿ ಎಸ್. ಅವರು ಮಾರ್ಗದರ್ಶನ ಮಾಡಿದ್ದರು.ವಿದ್ಯಾರ್ಥಿಗಳ ಈ ಸಾಧನೆಯನ್ನು ಕಾಲೇಜಿನ ಪ್ರಾಂಶುಪಾಲರು ಬೋಧಕ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಯಕ್ಷಮಿತ್ರರು ನೀಡಿದ ಸನ್ಮಾನ ಅರ್ಥಪೂರ್ಣ ಎಂದು ಪಾಂಡೇಶ್ವರ ರಕ್ತೇಶ್ವರಿ ದೇಗುಲದ ಧರ್ಮದರ್ಶಿ ಕೆ.ವಿ. ರಮೇಶ್ ರಾವ್ ಹೇಳಿದರು. ಅವರು ಶನಿವಾರ ಸಾಸ್ತಾನದ ಪಾಂಡೇಶ್ವರ ಯಡಬೆಟ್ಟು ಯಕ್ಷಮಿತ್ರರು ಆಯೋಜಿಸಿದ ಪಂಚಮ ವರ್ಷದ ಯಕ್ಷಗಾನ ಕಾರ್ಯಕ್ರಮದಲ್ಲಿ ಪದ್ಮಶ್ರೀ ಹರೇಕಳ ಹಾಜಬ್ಬರನ್ನು ಗೌರವಿಸಿ ಮಾತನಾಡಿದರು. ಅಕ್ಷರ ದೇಗುಲವನ್ನು ಕಟ್ಟಿ ಸಮಾಜಕ್ಕೆ ತನ್ನನ್ನು ಸಮರ್ಪಿಸಿಕೊಂಡ ಹಾಜಬ್ಬ ಎನ್ನುವ ನಿಸ್ವಾರ್ಥ ಸೇವಾರ್ಥಿ ತನ್ನ ಸರ್ವಸ್ವವನ್ನೂ ಈ ಸಮಾಜಕ್ಕೆ ಧಾರೆ ಎರೆದಿದ್ದಾರೆ ಇದು ಯಕ್ಷ ಮಿತ್ರರ ಹೆಸರನ್ನು ಇಮ್ಮಡಿಗೊಳಿಸಿದೆ ಎಂದರು. ಈ ಸಂದರ್ಭದಲ್ಲಿ ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಯಕ್ಷಮಿತ್ರ ಗೌರವ ಸನ್ಮಾನ ನೀಡಲಾಯಿತು. ಸಭೆಯಲ್ಲಿ ಪಾಂಡೇಶ್ವರ ಕಳಿಬೈಲು ಶ್ರೀ ಕ್ಷೇತ್ರದ ಧರ್ಮದರ್ಶಿ ಅಭಿಜಿತ್ ಪಾಂಡೇಶ್ವರ, ಸಾಸ್ತಾನ ಗೋಳಿಗರಡಿ ದೈವಸ್ಥಾನದ ಪಾತ್ರಿ ಶಂಕರ್ ಪೂಜಾರಿ, ಯಕ್ಷ ಮಿತ್ರರ ಬಳಗದ ಕರಿಯ ದೇವಾಡಿಗ, ಅಣ್ಣಯ್ಯ ದೇವಾಡಿಗ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೂ ಮೊದಲು ಸಾಸ್ತಾನ ಗೋಳಿಗರಡಿ ದೈವಸ್ಥಾನದಿಂದ ಅದ್ಧೂರಿಯ ಚಂಡೆ, ಕೀಲು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟ ಗ್ರಾಮಪಂಚಾಯತ್‌ನ ಘನ ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೇಶ್ ಹಾಗೂ ಘಟಕದ ಮುಖ್ಯಸ್ಥೆ ಭವ್ಯ ಇವರೊಂದಿಗೆ ಕಸ ವಿಲೇವಾರಿ ಹಾಗೂ ವಿಂಗಡನಾ ಕ್ರಮಗಳ ಕುರಿತು ಚರ್ಚಿಸಿ ಅಲ್ಲಿನ ಸಿಬ್ಬಂದಿಗಳ ಕಾರ್ಯವೈಕರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಪಂಚಾಯತ್ ಆಡಳಿತಾಧಿಕಾರಿ ಪ್ರತಾಪಚಂದ್ರ ಶೆಟ್ಟಿ, ಮಾಜಿ ಸದಸ್ಯರು, ಸಂಸದರ ಆಪ್ತ ಕಾರ್ಯದರ್ಶಿ ಹರೀಷ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಹರ್ತಟ್ಟು ಯುವಕ ಮಂಡಲ ಕೋಟ 6ನೇ ವರ್ಷದ ಕಾರ್ಯಕ್ರಮದ ಅಂಗವಾಗಿ ಕೋಟ ಸಿ.ಎ. ಬ್ಯಾಂಕ್ ಹಿಂಭಾಗ ಪ್ರದೇಶದಲ್ಲಿ ಬುಧವಾರ ವೇ.ಮೂ ಜನಾರ್ದನ ಅಡಿಗ ಸಾಲಿಗ್ರಾಮ ಮತ್ತು ಮಿಥುನ್ ಅಡಿಗ ಅವರ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಶ್ರೀ ಲಕ್ಷ್ಮೀ ನಾರಾಯಣ ಹೃದಯ ಹೋಮ ಸತ್ಯನಾರಾಯಣ ಕಥಾಶ್ರವಣ ಸಂಪನ್ನಗೊಂಡಿತು. ಈ ಹಿನ್ನಲ್ಲೆಯಲ್ಲಿ ಸಾವಿರಾರು ಜನ ಅನ್ನಸಂತರ್ಪಣೆಯಲ್ಲಿ ಭಾಗಿಯಾದರಲ್ಲದೆ ರಾತ್ರಿ ನಡೆದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರ ಗಾನ ಸಾರಥ್ಯದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ಶ್ರೀ ಕ್ಷೇತ್ರ ಪಾವಂಜೆ ಮೇಳದವರಿಂದ ಅದ್ಧೂರಿಯ ಯಕ್ಷಗಾನ ಬಪ್ಪನಾಡು ಕ್ಷೇತ್ರ ಮಹಾತ್ಮ ಯಕ್ಷಗಾನ ಪ್ರದರ್ಶನವನ್ನು ಕಣ್ತುಂಬಿಕೊಂಡರು. ಅಪರಾಹ್ನ  ರಾಮಾಮೃತ ಭಗವತ್ ಭಜನಾ ಮಂಡಳಿ ಕೋಟ ರಾಮ ಸಂಕೀರ್ತನೆ, ರಾತ್ರಿ ಪಟ್ಲ ಫೌಂಡೇಶನ್ ಪ್ರವರ್ತಕ ಪಟ್ಲ ಸತೀಶ್ ಶೆಟ್ಟಿ ಅವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಮಹೇಂದ್ರ ಪೂಜಾರಿ, ಪ್ರಮುಖರಾದ ಕೀರ್ತಿಶ ಪೂಜಾರಿ, ತಿಮ್ಮ…

Read More