ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬ್ರಹ್ಮಾವರ ತಾಲೂಕು ಘಟಕದ ಸಾಹಿತ್ಯ ಪ್ರೇರಣೆ ಕಾರ್ಯಕ್ರಮವು ಇತ್ತೀಚಿಗೆ ಲಕ್ಷ್ಮಿ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕರೆ ಅಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರೊಫೆಸರ್ ರಮೇಶ್ ಆಚಾರ್ ವಹಿಸಿ ವಿದ್ಯಾರ್ಥಿಗಳಿಗೆ ಸಾಹಿತ್ಯದ ಮಹತ್ವವನ್ನ ವಿವರಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಪರೀಕ್ಷೆಗೆ ಸ್ಪರ್ಧೆಗೆ ಸಿದ್ಧಪಡಿಸುವುದಲ್ಲ ಮಾಹಿತಿ ಹೊತ್ತ ಹೃದಯವಂತರನ್ನು ಸೃಷ್ಟಿಸುವ ಕಾರ್ಯಕ್ರಮ ಇದು ಎಂದು ಸಾಹಿತಿಗಳ ಬರವಣಿಗೆಯ ಬಗ್ಗೆ ವಿವರಿಸಿದರು. ಕಸಾಪ ಗೌರವ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಇವರು ಕಥೆಗಳ ಮೂಲಕ ಸಾಹಿತ್ಯ ಆಸಕ್ತಿಯನ್ನು ಬೆಳೆಸಿದರು. ಸುಪ್ರೀತಾ ಪುರಾಣಿಕ್ ಇವರು ಯಕ್ಷಗಾನ ಮತ್ತು ಜಾನಪದ ಗೀತೆಯ ಮಹತ್ವವನ್ನು ತಿಳಿಸಿದರು. ಕಸಾಪ ತಾಲೂಕು ಅಧ್ತಯಕ್ಷ ಗುಂಡ್ಮಿ ರಾಮಚಂದ್ರ ಐತಾಳ್ ಇವರು ಭಾವಾಭಿನಯ ಪ್ರದರ್ಶಿಸಿ ಅಭಿನಯದ ಬಗ್ಗೆ ಆಸಕ್ತಿ ಮೂಡಿಸಿದರು. ಅಚ್ಚುತ ಪೂಜಾರಿ ಯವರು ಕನ್ನಡ ಗೀತೆಯನ್ನು ಹಾಡಿ ರಂಜಿಸಿದರು. ಕಾಲೇಜಿನ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರಿಗಾಗಿ ಇಲಾಖೆಯ ಸೌಲಭ್ಯಗಳನ್ನು ತಲುಪಿಸಲು ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ 02, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ 1 ರಂತೆ “ನಗರ ಪುನರ್ವಸತಿ ಕಾರ್ಯಕರ್ತರ” (ಯು.ಆರ್. ಡಬ್ಲ್ಯೂ) ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 1 ರಂತೆ “ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ” (ವಿ.ಆರ್. ಡಬ್ಲ್ಯೂ) ನೇಮಕಾತಿಗಾಗಿ, ಮಾಸಿಕ 10,000 ರೂ. ಗಳಂತೆ ಗೌರವಧನ ಆಧಾರದಲ್ಲಿ ಸೇವೆ ಸಲ್ಲಿಸಬಯಸುವ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿ.ಆರ್. ಡಬ್ಲ್ಯೂ ನೇಮಕಾತಿಗಾಗಿ ಬಾಕಿ ಇರುವ ಗ್ರಾ.ಪಂ. ವಿವರ: ಉಡುಪಿ ತಾಲೂಕಿನ ಕೆಮ್ಮಣ್ಣು, ಕಡೆಕಾರು ಹಾಗೂ ಮಣಿಪುರ, ಬ್ರಹ್ಮಾವರ ತಾಲೂಕಿನ ಹಾರಾಡಿ, ಕೋಡಿ, ಹೆಗ್ಗುಂಜೆ ಹಾಗೂ ಪಾಂಡೇಶ್ವರ, ಹೆಬ್ರಿ ತಾಲೂಕಿನ ಶಿವಪುರ, ಕಾಪು ತಾಲೂಕಿನ ಬೆಳಪು, ಮಜೂರು ಹಾಗೂ ಹೆಜಮಾಡಿ, ಕುಂದಾಪುರ ತಾಲೂಕಿನ ವಂಡ್ಸೆ ಮತ್ತು ಕೆರಾಡಿ, ಕಾರ್ಕಳ ತಾಲೂಕಿನ ನಿಟ್ಟೆ ಹಾಗೂ ಪಳ್ಳಿ. ಯು.ಆರ್. ಡಬ್ಲ್ಯೂ ನೇಮಕಾತಿಗಾಗಿ ಕುಂದಾಪುರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಅವರುಗಳೊಂದಿಗೆ ಸರಣಿ ಸಭೆ ಗಳನ್ನು ನಡೆಸಿ ಬೈಂದೂರು ಪಟ್ಟಣ ಪಂಚಾಯತ್ ಗೆ ಸಂಬಂಧಿಸಿದಂತೆ ಗ್ರಾಮೀಣ ರೈತರಿಗೆ ಪಟ್ಟಣ ಪಂಚಾಯತ್ ನ ನಿಯಮಗಳಿಂದ ಆಗುತ್ತಿರುವ ಸಂಕಷ್ಟಗಳ ಕುರಿತು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರನ್ನು ಹಾಗೂ ಮಾನ್ಯ ಪೌರಾಡಳಿತ ಸಚಿವರಾದ ರಹೀಮ್ ಖಾನ್ ಅವರನ್ನು ಮತ್ತು ಪೌರಾಡಳಿತ ಇಲಾಖೆಯ ಕಾರ್ಯದರ್ಶಿಗಳಾದ ದೀಪ ಎಂ. ಚೋಳನ್ ಅವರನ್ನು ಭೇಟಿ ಮಾಡಿದರು. ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರಮುಖರೊಂದಿಗೆ ಬೆಂಗಳೂರಿಗೆ ತೆರಳಿದ ಶಾಸಕರು ಸಚಿವರಿಗೆ ಮನವರಿಕೆ ಮಾಡಿದರು. ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಪ್ರಸ್ತುತ ಇರುವ ಬೈಂದೂರು ಪಟ್ಟಣ ಪಂಚಾಯತ್‌ನ ಗ್ರಾಮೀಣ ಭಾಗವನ್ನು ಕೈ ಬಿಟ್ಟು ಹೊಸದಾಗಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯನ್ನು ಮರುವಿಂಗಡಣೆ ಮಾಡಿ, ಬಫರ್ ಜೋನ್ ಮಿತಿಯನ್ನು ಕೈಬಿಟ್ಟು, ಆ ಪ್ರದೇಶದಲ್ಲಿ ಗ್ರಾಮ ಪಂಚಾಯತ್ ಗಳಿಗೆ ಅನ್ವಯಿಸುವ ನಿಯಮಗಳನ್ನು ಅಳವಡಿಸುವ ಮೂಲಕ ಅಕ್ರಮ ಸಕ್ರಮ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಸೂರ್ಯಪ್ರಕಾಶ್ ಬುಧವಾರ ನಡೆದ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ – 2025ರ ಗುಂಡು ಎಸೆತ ಸ್ಪರ್ಧೆಯ 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿ ಚಿನ್ನದ ಪದಕ ಗಳಿಸಿದ್ದಾನೆ. ಈ ಗೆಲುವಿನೊಂದಿಗೆ, ಹಾಸನದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ. ವಿಜೇತ ವಿದ್ಯಾರ್ಥಿಯು ಕಾಳವಾರ ಭಾಸ್ಕರ ರಾಮ ಗಾಣಿಗ ಮತ್ತು ವಿಜಯಲಕ್ಷ್ಮಿ ದಂಪತಿಯ ಪುತ್ರ. ಜಿಲ್ಲಾ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜನತಾ ಪ್ರೌಢ ಶಾಲೆ ಹೆಮ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಕ್ರೀಡಾಕೂಟ ನಡೆಯಿತು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯ ಪ್ರದೀಪ್. ಕೆ ಅವರು ವಿಜೇತ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ವಿದ್ಯಾರ್ಥಿಗೆ ಮಾರ್ಗದರ್ಶನ ನೀಡಿದ್ದರು. ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಮರವಂತೆಯ ಹೆದ್ದಾರಿಯಲ್ಲಿ ಪಾದಾಚಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ರಾಜು ಮೊಗವೀರ (46) ಎಂದು ಗುರುತಿಸಲಾಗಿದೆ. ಮರವಂತೆ ಗ್ರಾಮದ ನಿರೋಣಿ ಐಸ್ ಪ್ಲಾಂಟ್ ಎದುರು ತನ್ನ ಹೆಂಡತಿಗಾಗಿ ಕಾಯುತ್ತಿರುವಾಗ ಸಂಜೆ ಹೊತ್ತಿಗೆ ಕುಂದಾಪುರ ಬೈಂದೂರು ಕಡೆಗೆ ತಮ್ಮ ಮನೆಗೆ ನಡೆದುಕೊಂಡು ಹೋಗಲು ರಸ್ತೆಯ ಅಂಚಿನಲ್ಲಿ ಬರುತ್ತಿರುವಾಗ ಅವರ ಎದುರುಗಡೆ ಮೋಟಾರ್ ಸೈಕಲ್ ಸವಾರ ಅಕ್ಷಯ್ ಅತಿವೇಗ ಹಾಗೂ ಅಜಾಗುರೂಕತೆಯಿಂದ ಚಲಾಯಿಸಿಕೊಂಡು ಬಂದು ರಾಜು ಮೊಗವೀರರವರಿಗೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದು ಮುಖಕ್ಕೆ ರಕ್ತಗಾಯವಾಗಿದ್ದು, ಕೂಡಲೇ ಕುಂದಾಪುರ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಪರೀಕ್ಷಿಸಿದ ವೈದ್ಯರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಮತ್ತು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್, ಕಿರಿಮಂಜೇಶ್ವರ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ 14 ಮತ್ತು 17ರ ವಯೋಮಾನದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಅತ್ಯಂತ ಅದ್ದೂರಿಯಾಗಿ ಇಲ್ಲಿನ ಹೆಮ್ಮಾಡಿಯ ಜನತಾ ಕ್ರೀಡಾoಗಣದಲ್ಲಿ ನಡೆಯಿತು. ಅದ್ದೂರಿಯ ಪುರ ಮೆರವಣಿಗೆ:ಕ್ರೀಡಾಕೂಟದ ಅಂಗವಾಗಿ ಹೆಮ್ಮಾಡಿಯ ಶ್ರೀ ಲಕ್ಷ್ಮೀ ನಾರಾಯಣ ದೇವಸ್ಥಾನದಿಂದ 2 ಕಿ.ಮೀ ಅಂತರದ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನವರೆಗೆ ಪುರಮೆರವಣಿಗೆಯನ್ನು ನಡೆಸಲಾಯಿತು. ಯಕ್ಷಗಾನ, ಹುಲಿವೇಷ, ಟ್ಯಾಬ್ಲೋ ಗಳು, ಕಳಶಧಾರಿಗಳು, ಚಂಡೆ ಮತ್ತು ವಿವಿಧವಾದ್ಯವೃಂದಗಳು ಜನಮನ ಸೂರೆಗೊಂಡವು. ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶೇಖರ ಖಾರ್ವಿ ಧ್ವಜರೋಹಣಗೈದರು. ಇದೇ ಸಂದರ್ಭದಲ್ಲಿ ಬೈಂದೂರು, ಕಾರ್ಕಳ, ಬ್ರಹ್ಮಾವರ, ಕುಂದಾಪುರ ಮತ್ತು ಉಡುಪಿ ತಾಲ್ಲೂಕಿನ ಕ್ರೀಡಾಪಟುಗಳ ಪಥ ಸಂಚಲನ ಆಕರ್ಷಕವಾಗಿದ್ದು, ಉದ್ಯಮಿಗಳಾದ ಸುರೇಶ ಕಾಂಚನ್ ಕ್ರೀಡಾಪಟುಗಳಿಂದ ಗೌರವ ರಕ್ಷೆ ಸ್ವೀಕರಿಸಿದರು. ಉಡುಪಿ ಜಿಲ್ಲಾ ಪಂಚಾಯತ್ ನ ಮಾಜಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಡ್ಯ ಜಿಲ್ಲೆಯ ಶ್ರಿ ಆದಿಚುಂಚನಗಿರಿ ವಿದ್ಯಾಸಂಸ್ಥೆಯಲ್ಲಿ ನಡೆದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯ ಸಾಂಪ್ರದಾಯಿಕ ವಿಭಾಗದಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಲಾಸ್ಯ ಮಧ್ಯಸ್ಥ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ವಿಜೇತ ವಿದ್ಯಾರ್ಥಿನಿಯು ಅರುಣ ಮಧ್ಯಸ್ಥ ಮತ್ತು ಲತಾ ಮಧ್ಯಸ್ಥ ಅವರ ಪುತ್ರಿ. ಸ್ಕೂಲ್ ಗೇಮ್ಸ್ ಆಫ್ ಇಂಡಿಯಾ (SGFI) ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಆದಿಚುಂಚನಗಿರಿಯಲ್ಲಿ ಇತ್ತೀಚೆಗೆ ಈ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯರಾದ ಪ್ರದೀಪ್ ಕೆ. ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ವಿದ್ಯಾರ್ಥಿನಿಗೆ ಮಾರ್ಗದರ್ಶನ ನೀಡಿದ್ದರು. ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಕೊಡಲ್ಪಡುವ 2025-26ನೇ ಸಾಲಿನ ಸಂಗೀತ ಕ್ಷೇತ್ರದಲ್ಲಿನ ಅಸಾಧಾರಣ ಸಾಧನೆಗಾಗಿ ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಗಂಗೊಳ್ಳಿ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಶಾಮ್ ಜಿ. ಎನ್. ಪೂಜಾರಿಗೆ ನೀಡಿ ಗೌರವಿಸಲಾಯಿತು. ಅವರು ಗಂಗೊಳ್ಳಿಯ ಛಾಯಾಗ್ರಾಹಕ ಗಣೇಶ್ ಪೂಜಾರಿ ಮತ್ತು ಪ್ರಾಧ್ಯಾಪಕಿ ಮಾಲತಿ ಅವರ ಪುತ್ರ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರಿನಿಂದ ಕುಂದಾಪುರಕ್ಕೆ ಬಸ್ಸಿನಲ್ಲಿ ಬರುತ್ತಿದ್ದ ವೇಳೆ ಪ್ರಯಾಣಿಕೆ 15 ಲಕ್ಷ ರೂ.ಗಳ ಬೆಳ್ಳಿ ಗಟ್ಟಿ ಹಾಗೂ 3 ಲಕ್ಷ ರೂ. ನಗದು ಕಳವಾದ ಬಗ್ಗೆ ವರದಿಯಾಗಿದೆ. ಹಂಗಳೂರು ಸಂಜಯಗಾಂಧಿ ರಸ್ತೆ ನಿವಾಸಿ ಎನ್. ಕೃಷ್ಣಮೂರ್ತಿ ಶೇಟ್ ಅವರು ಹಾಗೂ ಪತ್ನಿ ಬೆಂಗಳೂರಿನ ಜ್ಯುವೆಲರಿಯಲ್ಲಿ ತಲಾ 10 ಕೆಜಿಯ ಎರಡು ಬೆಳ್ಳಿಯ ಗಟ್ಟಿ ಖರೀದಿಸಿ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಕೆಎಸ್ಸಾರ್ಟಿಸಿ ವೊಲ್ಲೊ ಬಸ್‌ನಲ್ಲಿ ಕುಂದಾಪುರಕ್ಕೆ ಹೊರಟಿದ್ದರು. 10 ಕೆಜಿ ಬೆಳ್ಳಿಯ ಗಟ್ಟಿಯ ಒಂದು ಪ್ಯಾಕೆಟನ್ನು ಕಾಲಿನ ಬಳಿ, ಇನ್ನೊಂದು 10 ಕೆಜಿ ಬೆಳ್ಳಿಯ ಗಟ್ಟಿಯ ಪ್ಯಾಕೆಟ್ ಹಾಗೂ 3 ಲಕ್ಷ ರೂ. ನಗದನ್ನು ಬ್ಯಾಗ್ನಲ್ಲಿ ಹಾಕಿ ಕೋಟ್ನ ಮೇಲ್ಬಾಗದ ಲಗೇಜ್ ಕಂಪಾರ್ಟ್ ಮೆಂಟ್ನಲ್ಲಿ ಇಟ್ಟಿದ್ದರು. ಬೆಳಗ್ಗೆ ಲಗೇಜ್ ಬ್ಯಾಗನ್ನು ನೋಡಿದಾಗ ಜಿಪ್ ತೆರೆದಿದ್ದು 10 ಕೆಜಿ ಬೆಳ್ಳಿಯ ಗಟ್ಟಿ ಹಾಗೂ 3 ಲಕ್ಷ ನಗದು ಹಣ ಕಳವಾಗಿತ್ತು. 10 ಕೆಜಿ ಬೆಳ್ಳಿಯ ಗಟ್ಟಿ ಅಂದಾಜು ಮೌಲ್ಯ 15,39,655…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೊಡೇರಿ ಮೀನುಗಾರಿಕಾ ಬಂದರು ಪ್ರದೇಶಕ್ಕೆ ಮಂಗಳವಾರ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಲ್ಲಿನ ಬಂದರಿಗೆ ಮೂಲಸೌಕರ್ಯ ಕಲ್ಪಿಸುವಂತೆ ವಿಜಯ ಕರ್ನಾಟಕ ನ.2ರಂದು ವಿಶೇಷ ವರದಿ ಪ್ರಕಟಿಸಿತ್ತು. ಕರಾವಳಿಯ ಮೂರು ಜಿಲ್ಲೆಯ ವ್ಯಾಪ್ತಿಯ ಅತಿ ಹೆಚ್ಚು ನಾಡದೋಣಿಗಳನ್ನು ಹೊಂದಿರುವ ಈ ಬಂದರು ಮೂಲ ಸೌಕರ್ಯದ ಕೊರತೆಯಿಂದಾಗಿ ಮೀನುಗಾರರಿಗೆ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ. ಮೀನುಗಾರ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಚರ್ಚಿಸಿ, ಕೊಡೇರಿ ಮತ್ತು ಉಪ್ಪುಂದ ಭಾಗದ ಮೀನುಗಾರರು ಸಂಘಟಿತರಾಗಿ ಸಮನ್ವಯ ಸಾಧಿಸಿಕೊಂಡಾಗ ಬಂದರು ಪ್ರದೇಶದಲ್ಲಿ ಎಲ್ಲಾ ಮೂಲಸೌಕರ್ಯ ಕಲ್ಪಿಸಲು ಸಾಧ್ಯವಾಗುತ್ತದೆ. ಈ ಬಗ್ಗೆ ಎರಡು ಭಾಗದ ಮೀನುಗಾರರ ಮುಖಂಡರೊಂದಿಗೆ ಸಭೆ ನಡೆಸಿ ಇಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಉಪ್ಪುಂದ ರಾಣಿ ಬಲೆ ಮೀನುಗಾರರ ಒಕ್ಕೂಟದ ಅಧ್ಯಕ್ಷ ವೆಂಕಟರಮಣ ಖಾರ್ವಿ ಮಾತನಾಡಿ, ಬಂದರಿನ ಅಭಿವೃದ್ಧಿಗೆ ಈಗಾಗಲೇ 70 ಕೋಟಿ ರೂ. ಗೂ ಹೆಚ್ಚು ವೆಚ್ಚ ಮಾಡಲಾಗಿದ್ದರೂ ಮೀನುಗಾರಿಕೆಗೆ ಅನುಕೂಲವಾಗಿಲ್ಲ.…
